Tag: nagabhushana

  • ಏಪ್ರಿಲ್ 10ರಂದು ತೆರೆಗಾಣಲು ಸಜ್ಜಾದ ‘ವಿದ್ಯಾಪತಿ’!

    ಏಪ್ರಿಲ್ 10ರಂದು ತೆರೆಗಾಣಲು ಸಜ್ಜಾದ ‘ವಿದ್ಯಾಪತಿ’!

    ಡಾಲಿ ಧನಂಜಯ (Daali Dhananjay) ನಿರ್ಮಾಣ ಮಾಡಿರುವ ಬಹುನಿರೀಕ್ಷಿತ ಚಿತ್ರ ‘ವಿದ್ಯಾಪತಿ’ ನಾಳೆ ಅಂದರೆ, ಏಪ್ರಿಲ್ 10ರಂದು ರಾಜ್ಯಾದ್ಯಂತ ರಿಲೀಸ್‌ ಆಗಲಿದೆ. ನಾನಾ ಪಾತ್ರಗಳನ್ನು ಮಾಡುತ್ತಾ, ಇತ್ತೀಚಿನ ದಿನಗಳಲ್ಲಿ ನಟನಾಗಿ ನೆಲೆ ಕಂಡುಕೊಳ್ಳುತ್ತಿರುವ ನಾಗಭೂಷಣ್ (Nagabhushana) ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಈ ಸಿನಿಮಾದ ಕಥೆ ಯಾವ ಥರದ್ದಿರಬಹುದೆಂಬ ಕುತೂಹಲ ಇತ್ತೀಚೆಗೆ ಬಿಡುಗಡೆಯಾದ ಟ್ರೈಲರ್ ಮೂಲಕ ತಣಿದಿದೆ. ಆ ಮೂಲಕ ಜಾಹೀರಾಗಿದ್ದ ದೃಶ್ಯಗಳಲ್ಲಿನ ಕ್ವಾಲಿಟಿ, ವಿಭಿನ್ನ ಕಥಾನಕದ ಸುಳಿವುಗಳೇ ‘ವಿದ್ಯಾಪತಿ’ಯ ಸುತ್ತ ಗಾಢ ಕೌತುಕ ಮೂಡಿಕೊಳ್ಳುವಂತೆ ಮಾಡಿದೆ. ಹೇಳಿ ಕೇಳಿ ಇದು ಬೇಸಿಗೆ ರಜೆಯ ಕಾಲಮಾನ. ಈ ಘಳಿಗೆಯಲ್ಲಿ ಕುಟುಂಬ ಸಮೇತರಾಗಿ ಕೂತು ನೋಡುವಂಥ ಚಿತ್ರವಾಗಿಯೂ ‘ವಿದ್ಯಾಪತಿ’ ಗಮನ ಸೆಳೆದಿದೆ. ಇದನ್ನೂ ಓದಿ:ಭರತನಾಟ್ಯ ಪ್ರವೀಣೆ ಚರಿತ್ರಾಗೀಗ ಇಂಟರ್ವಲ್‌ನದ್ದೇ ಧ್ಯಾನ!

    ವಿದ್ಯಾಪತಿ ಚಿತ್ರವನ್ನು ಇಶಾಂ ಹಾಗೂ ಹಸೀನ್ ಸೇರಿ ನಿರ್ದೇಶನ ಮಾಡಿದ್ದಾರೆ. ನಾಗಭೂಷಣ್ ನಾಯಕರಾಗಿದ್ದಾರೆ ಅಂದಮೇಲೆ ಅಲ್ಲಿ ಹಾಸ್ಯದ ಇರುವಿಕೆ ಇರುತ್ತದೆಂದೇ ಅರ್ಥ. ‘ವಿದ್ಯಾಪತಿ’ ಚಿತ್ರದಲ್ಲಿ ಎಲ್ಲಿಯೂ ಮುಜುಗರ ತಂದೊಡ್ಡದ ಎಚ್ಚರಿಕೆಯಿಂದಲೇ ಭರಪೂರ ಮನರಂಜನೆ ನೀಡುವ ಫಾರ್ಮುಲಾವನ್ನು ಪ್ರಯೋಗಿಸಲಾಗಿದೆ. ಅದರ ಸ್ಪಷ್ಟ ಸೂಚನೆ ಟ್ರೈಲರ್‌ನಲ್ಲಿ ಕಾಣಿಸಿದೆ. ‘ಹಿಟ್ಲರ್ ಸೀರಿಯಲ್’ ಮೂಲಕ ಪ್ರಸಿದ್ಧಿ ಪಡೆದುಕೊಂಡು, ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಮಲೈಕಾ ವಸುಪಾಲ್ (Malaika Vasupal) ಈ ಸಿನಿಮಾದಲ್ಲಿ ಸ್ಟಾರ್ ನಟಿಯಾಗಿ, ನಾನಾ ಚಹರೆಗಳನ್ನು ಒಳಗೊಂಡಿರುವ ಪಾತ್ರಕ್ಕೆ ಜೀವ ತುಂಬಿದ್ದಾರೆ. ನಾಗಭೂಷಣ್‌ಗೂ ಕೂಡ ಅವರೇ ಹೇಳಿಕೊಂಡಂತೆ ಬೋನಸ್ ನಂಥಾ ಚೆಂದದ ಪಾತ್ರವೇ ಸಿಕ್ಕಿದೆ. ಇದನ್ನೂ ಓದಿ:ಇಂಟರ್ವಲ್ ಬಗ್ಗೆ ಸೃಷ್ಟಿಕರ್ತ ಸುಕಿ ತೆರೆದಿಟ್ಟ ಬೆರಗಿನ ಸಂಗತಿ!

    ಸಾಮಾನ್ಯವಾಗಿ, ಬೇಸಿಗೆ ರಜೆ ಬರುತ್ತಲೇ ಕುಟುಂಬ ಸಮೇತರಾಗಿ ಚಿತ್ರಮಂದಿರಗಳಿಗೆ ತೆರಳುವ ಕ್ರೇಜ್ ಮೂಡಿಕೊಳ್ಳುತ್ತದೆ. ಈ ಬಾರಿ ಆ ಕ್ರೇಜ್ ಅನ್ನು ‘ವಿದ್ಯಾಪತಿ’ ಚಿತ್ರ ನೂರ್ಮಡಿಗೊಳಿಸಲಿದೆ. ಇಶಾಂ ಹಾಗೂ ಹಸೀಮ್ ನಿರ್ದೇಶನದೊಂದಿಗೆ ಸಂಕಲನದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ ಮತ್ತು ಮುರಳಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ನಾಗಭೂಷಣ್, ಮಲೈಕಾ ವಸುಪಾಲ್, ರಂಗಾಯಣ ರಘು, ಕಾರ್ತಿಕ್ ರಾವ್ ತಾರಾಗಣವಿದೆ. ಡಾಲಿ ಧನಂಜಯ (Daali Dhananjay) ಆಸೆಯಿಂದ ನಿರ್ಮಾಣ ಮಾಡಿರುವ ಈ ಸಿನಿಮಾ ಏ.10ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ.

  • ಮೇಡ್ ಇನ್ ಚೈನಾ ಅಂತಿದ್ದಾರೆ ನಾಗಭೂಷಣ್

    ಮೇಡ್ ಇನ್ ಚೈನಾ ಅಂತಿದ್ದಾರೆ ನಾಗಭೂಷಣ್

    ಕೊರೋನಾ ವೈರಸ್ ಮಾಡಿದ ಆವಾಂತರ ನೂರಾರು. ಸಾವಿರಾರು ಜನ ಪ್ರಾಣ ಕಳೆದುಕೊಂಡರೆ, ಸಾಕಷ್ಟು ಜನರ ಬದುಕನ್ನೇ ಈ ಕೋವಿಡ್ ಕಸಿದುಕೊಂಡಿತು. ಕೊರೋನಾ ವೈರಸ್ ಕಾಣಿಸಿಕೊಳ್ಳುತ್ತಿದ್ದಂತೆಯೇ ಇಡೀ ಜಗತ್ತೇ ತಲ್ಲಣಗೊಂಡಿತು. ಒಂದು ರೀತಿಯಲ್ಲೇ ಜಗತ್ತಿಗೇ ಬೀಗ ಹಾಕಿದ ರೀತಿಯಲ್ಲಿ ಲಾಕ್ ಡೌನ್ ಘೋಷಣೆಯಾಯಿತು. ಈ ಸಂದರ್ಭದಲ್ಲಿ ಹುಟ್ಟಿದ ಕಥೆಯನ್ನೇ ಕನ್ನಡದಲ್ಲಿ ಸಿನಿಮಾ ಮಾಡಿದ್ದಾರೆ. ಈ ಚಿತ್ರಕ್ಕೆ ‘ಮೇಡ್ ಇನ್ ಚೈನಾ’ ಎಂದು ಹೆಸರಿಟ್ಟಿದ್ದಾರೆ. ಇದನ್ನೂ ಓದಿ: ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್

    ಕನ್ನಡದ ಮೊದಲ ವರ್ಚುವಲ್ ಸಿನಿಮಾ ಇದಾಗಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಪತಿಯು ವಿದೇಶದಲ್ಲಿ ಲಾಕ್ ಆಗುತ್ತಾನೆ. ಹೆಂಡತಿ ಭಾರತದಲ್ಲಿರುತ್ತಾಳೆ. ಇವರ ನಡುವೆ ನಡೆಯುವ ಕಥೆಯೇ ‘ಮೇಡ್ ಇನ್ ಚೈನಾ’. ಇಕ್ಕಟ್ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಸಖತ್ ಮನರಂಜನೆ ನೀಡಿರುವ ನಾಗಭೂಷಣ್ ಈ ಸಿನಿಮಾದ ನಾಯಕ. ಇದನ್ನೂ ಓದಿ : ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮಂ ಫೆಸ್ಟಿವಲ್‍ನಲ್ಲಿ ಗಮನ ಸೆಳೆಯಲಿದೆ ಸೈಕಲಾಜಿಕಲ್ ಥ್ರಿಲ್ಲರ್ ‘ರುಗ್ನ’

    “ಲಾಕ್ ಡೌನ್ ಟೈಮ್ ನಲ್ಲಿ ವಿದೇಶದಲ್ಲಿ ಲಾಕ್ ಆಗುವ ಪತಿ. ಸ್ವದೇಶಿ ನೆಲದಲ್ಲಿ ಪತ್ನಿ. ಈ ಗಂಡ ಹೆಂಡ್ತಿ‌ ನಡುವಿನ ಪ್ರೀತಿ-ಗೀತಿ-ಇತ್ಯಾದಿ ನಡುವೆ ಒಂದಷ್ಟು ಜಗಳ ಓವರ್ ಆಲ್ ಆಗಿ‌ ಮೇಡ್ ಇನ್ ಚೈನಾ ಫ್ಯಾಮಿಲಿ ಡ್ರಾಮಾ” ಎಂದಿದೆ ಚಿತ್ರತಂಡ. ಇದನ್ನೂ ಓದಿ :ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು

    ಅಯೋಗ್ಯ, ರತ್ನಮಂಜರಿ ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿದ್ದ ಪ್ರೀತಮ್ ತೆಗ್ಗಿನಮನೆ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವುದ ಜೊತೆಗೆ ಗ್ರಾಫಿಕ್, ಎಡಿಟಿಂಗ್ ಹಾಗೂ ಸಿನಿಮಾಟೋಗ್ರಾಫಿ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ನಾಗಭೂಷಣ್ ಗೆ ಜೋಡಿಯಾಗಿ ಪ್ರಿಯಾಂಕಾ ತಿಮ್ಮೇಶ್ ನಟಿಸಿದ್ದಾರೆ. ಗೌರವ್ ಶೆಟ್ಟಿ, ಅಶ್ವಿನಿ ರಾವ್ ಪಲ್ಲಕ್ಕಿ, ಅರುಣ ಬಾಲರಾಜ್, ರವಿ ಭಟ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.