Tag: nagaland

  • ನಾಗಾಲ್ಯಾಂಡ್ ಗವರ್ನರ್ ಲಾ ಗಣೇಶನ್ ನಿಧನ – ಮೋದಿ ಸಂತಾಪ

    ನಾಗಾಲ್ಯಾಂಡ್ ಗವರ್ನರ್ ಲಾ ಗಣೇಶನ್ ನಿಧನ – ಮೋದಿ ಸಂತಾಪ

    ಕೊಹಿಮಾ: ನಾಗಾಲ್ಯಾಂಡ್ ಗವರ್ನರ್ ಲಾ ಗಣೇಶನ್ (80) (Nagaland Governor La Ganesan) ಚೆನ್ನೈನ (Chennai) ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    ಆ.8 ರಂದು, ಲಾ ಗಣೇಶನ್ ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಕುಸಿದು ಬಿದ್ದಿದ್ದರು. ಈ ವೇಳೆ ಅವರ ತಲೆಗೆ ಗಾಯವಾಗಿತ್ತು. ಅವರಿಗೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಶುಕ್ರವಾರ ಅವರು ನಿಧನರಾದರು ಎಂದು ಕೊಹಿಮಾ ರಾಜಭವನದ ಪಿಆರ್‌ಒ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ವಿಧಿವಶ

    ಲಾ ಗಣೇಶನ್ ಅವರನ್ನು 2023ರ ಫೆ.12 ರಂದು ನಾಗಾಲ್ಯಾಂಡ್‌ನ (Nagaland) 21ನೇ ಗವರ್ನರ್ ಆಗಿ ನೇಮಿಸಲಾಗಿತ್ತು. ಫೆ.20 ರಂದು ಅವರು ಅಧಿಕಾರ ವಹಿಸಿಕೊಂಡಿದ್ದರು.

    ಲಾ ಗಣೇಶನ್ ನಿಧನಕ್ಕೆ ಪ್ರಧಾನಿ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ, ಒಬ್ಬ ಧರ್ಮನಿಷ್ಠ ರಾಷ್ಟ್ರೀಯವಾದಿ ಎಂದು ಗಣೇಶನ್‌ ಅವರನ್ನು ಸ್ಮರಿಸಲಾಗುತ್ತದೆ. ಅವರು ತಮ್ಮ ಜೀವನವನ್ನು ಸೇವೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟಿದ್ದರು. ಅವರು ತಮಿಳುನಾಡಿನಾದ್ಯಂತ ಬಿಜೆಪಿಯನ್ನು (BJP) ವಿಸ್ತರಿಸಲು ಶ್ರಮಿಸಿದರು. ಅವರು ತಮಿಳು ಸಂಸ್ಕೃತಿಯ ಬಗ್ಗೆಯೂ ತೀವ್ರ ಒಲವು ಹೊಂದಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂದು ಬಿಜೆಪಿಯಿಂದ ʻಧರ್ಮಸ್ಥಳ ಚಲೋʼ – 500 ಕಾರುಗಳಲ್ಲಿ ಬೃಹತ್‌ ಯಾತ್ರೆ

  • ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ

    ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ

    ದಿಮಾಪುರ: ನಾಗಾಲ್ಯಾಂಡ್‌ನಲ್ಲಿ (Nagaland) ಭಾರೀ ಮಳೆಗೆ (Rain) ಚುಮೌಕೆಡಿಮಾ (Chumoukedima) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-29ರ ಒಂದು ಭಾಗ ಸಂಪೂರ್ಣ ಕುಸಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.

    ಕೊಹಿಮಾದಾ (Kohima) ನ್ಯೂ ಚುಮೌಕೆಡಿಮಾ ಮತ್ತು ಫೆರಿಮಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿದ್ದ ಆರು ಮೃತದೇಹಗಳನ್ನು ರಾಜ್ಯ ವಿಪತ್ತು ಪಡೆ ಹೊರತೆಗೆದಿದೆ. ಇನ್ನು ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಭೂ ಕುಸಿತದಿಂದ ಅನೇಕರು ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನ್ಯಾಯಾಲಯದ ತೀರ್ಪು ಬರುವ ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಎಸ್‌ವೈ

    ಎಸ್‌ಡಿಆರ್‌ಎಫ್ ತಂಡದಿಂದ ಶೋಧಕಾರ್ಯ ಮುಂದುವರೆದಿದ್ದು, ಸ್ಥಳೀಯರು ಕೂಡ ಇವರೊಂದಿಗೆ ಕೈಜೋಡಿಸಿದ್ದಾರೆ. ರಾತ್ರೋರಾತ್ರಿ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದ್ದು, ದಿಮಾಪುರ ಮತ್ತು ನಾಗಾಲ್ಯಾಂಡ್ ರಾಜಧಾನಿ ಕೊಹಿಮಾ ನಡುವೆ ಸಂಪರ್ಕ ಕಡಿತಗೊಂಡಿದೆ. ಹೆದ್ದಾರಿ ಕುಸಿತದಿಂದ ರಾಜಧಾನಿಗೆ ಅಗತ್ಯ ವಸ್ತುಗಳ ಪೂರೈಕೆ ಸ್ಥಗಿತಗೊಂಡಿದೆ. ಈ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ತರಕಾರಿ ಮತ್ತು ದಿನಸಿ ಅಂಗಡಿಗಳ ಎದುರು ದೊಡ್ಡ ಸಾಲು ಏರ್ಪಟ್ಟಿದೆ. ಅಲ್ಲದೇ ಪೆಟ್ರೋಲ್ ಬಂಕ್‌ಗಳ ಬಳಿಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಇದನ್ನೂ ಓದಿ: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ

    ಇನ್ನು ಘಟನೆಯ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೋ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರೀ ಮಳೆಗೆ ಎನ್‌ಹೆಚ್-29ರ ಒಂದು ಭಾಗ ಕುಸಿದಿರುವುದರಿಂದ ನಾನು ಕಳವಳಗೊಂಡಿದ್ದೇನೆ. ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ. ಕುಸಿದಿರುವ ಹೆದ್ದಾರಿ ಪುನರ್ ನಿರ್ಮಾಣ ಮಾಡುವ ಮೂಲಕ ಆದಷ್ಟು ಬೇಗ ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

  • ನಾಗಾಲ್ಯಾಂಡ್‍ನಲ್ಲಿ 20 ವರ್ಷಗಳ ಬಳಿಕ ಗೆಲುವು ಸಾಧಿಸಿ ಇತಿಹಾಸ ಬರೆದ ಕಾಂಗ್ರೆಸ್

    ನಾಗಾಲ್ಯಾಂಡ್‍ನಲ್ಲಿ 20 ವರ್ಷಗಳ ಬಳಿಕ ಗೆಲುವು ಸಾಧಿಸಿ ಇತಿಹಾಸ ಬರೆದ ಕಾಂಗ್ರೆಸ್

    ಕೊಹಿಮಾ: 20 ವರ್ಷಗಳ ನಂತರ ನಾಗಾಲ್ಯಾಂಡ್‍ನ (Nagaland) ಏಕೈಕ ಲೋಕಸಭಾ ಸ್ಥಾನವನ್ನು ಕಾಂಗ್ರೆಸ್ (Congress) ಗೆದ್ದು ಇತಿಹಾಸ ನಿರ್ಮಿಸಿದೆ.

    ಕಾಂಗ್ರೆಸ್ ಅಭ್ಯರ್ಥಿ ಎಸ್ ಸುಪೊಂಗ್‌ಮೆರೆನ್ ಜಮೀರ್ ಅವರು ಪ್ರತಿಸ್ಪರ್ಧಿ ಎನ್‍ಡಿಪಿಪಿಯ ಚುಂಬೆನ್ ಮುರ್ರಿ ಅವರನ್ನು 50,984 ಮತಗಳ ಅಂತರದಿಂದ ಸೋಲಿಸಿದ್ದಾರೆ. ಜಮೀರ್ 4,01,951 ಮತಗಳನ್ನು ಪಡೆದರೆ, ಮರ್ರಿ 3,50,967 ಮತಗಳನ್ನು ಮತ್ತು ಸ್ವತಂತ್ರ ಅಭ್ಯರ್ಥಿ ಹಯಿತುಂಗ್ ತುಂಗೋ ಲೋಥಾ 6,232 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

    2014 ರಿಂದ ರಾಜ್ಯ ವಿಧಾನಸಭೆಯಲ್ಲಿ ಯಾವುದೇ ಶಾಸಕರನ್ನು ಹೊಂದಿರದ ಕಾಂಗ್ರೆಸ್‍ಗೆ ಇದು ಮೊದಲ ಪ್ರಮುಖ ಗೆಲುವಾಗಿದೆ. ಪಕ್ಷವು ಕೊನೆಯ ಬಾರಿಗೆ 1999 ರಲ್ಲಿ ಲೋಕಸಭೆ ಸ್ಥಾನವನ್ನು ಗೆದ್ದಿತ್ತು.

    2019ರ ಚುನಾವಣೆಯಲ್ಲಿ ಆಡಳಿತಾರೂಢ ಎನ್‍ಡಿಪಿಪಿ ಅಭ್ಯರ್ಥಿ ತೊಹೆಖೋ ಯೆಪ್ಟೋಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ ಎಲ್ ಚಿಶಿ ವಿರುದ್ಧ 13,000 ಮತಗಳಿಂದ ಗೆದ್ದಿದ್ದರು.

  • ಪ್ರಪಾತಕ್ಕೆ ಉರುಳಿದ ಕಾರು, ಲಾರಿ- ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದ ಮೂವರು ಸೇರಿ 8 ಮಂದಿ ದುರ್ಮರಣ

    ಪ್ರಪಾತಕ್ಕೆ ಉರುಳಿದ ಕಾರು, ಲಾರಿ- ಸರ್ಕಾರಿ ಹುದ್ದೆಗೆ ಆಯ್ಕೆಯಾಗಿದ್ದ ಮೂವರು ಸೇರಿ 8 ಮಂದಿ ದುರ್ಮರಣ

    ಕೊಹಿಮಾ: ಕಾರು (Car) ಹಾಗೂ ಲಾರಿ ನಡುವಿನ ಭೀಕರ ಅಪಘಾತದಿಂದಾಗಿ (Accident) ಎಂಟು ಮಂದಿ ಸಾವನ್ನಪ್ಪಿದ ಘಟನೆ ನಾಗಾಲ್ಯಾಂಡ್‍ನ (Nagaland) ತ್ಸೆಮಿನ್ಯುನಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಇತ್ತೀಚೆಗೆ ನಾಗಾಲ್ಯಾಂಡ್ ಸ್ಟಾಫ್ ಸೆಲೆಕ್ಷನ್ ಬೋರ್ಡ್ (ಎನ್‍ಎಸ್‍ಎಸ್‍ಬಿ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಇವರು ಸರ್ಕಾರಿ ಸೇವೆಗೆ ಸೇರಲು ನೇಮಕಾತಿ ಪತ್ರಗಳನ್ನು ಸಹ ಪಡೆದಿದ್ದರು ಎಂದು ತಿಳಿದು ಬಂದಿದೆ.

    ಅಪಘಾತದ ಪರಿಣಾಮ ಟ್ರಕ್ ಹಾಗೂ ಕಾರು ಎರಡೂ ಪ್ರಪಾತಕ್ಕೆ ಉರುಳಿವೆ. ಇದರಿಂದಾಗಿ ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗದ ನಡುವೆ ಮೃತಪಟ್ಟಿದ್ದಾನೆ. ಮೃತರಲ್ಲಿ ಚಾಲಕ ಸೇರಿದಂತೆ ಆರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಜರ್‌ಬೈಜಾನ್, ಅರ್ಮೇನಿಯನ್ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧ ಅಂತ್ಯ

    ಕಾರು ಕೊಹಿಮಾದಿಂದ ಮೊಕೊಕ್‍ಚುಂಗ್ ಕಡೆಗೆ ತೆರಳುತ್ತಿತ್ತು. ಈ ವೇಳೆ ಮರಳು ತುಂಬಿದ ಲಾರಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಈ ಅಪಘಾತ ಸಂಭವಿಸಿದೆ. ರಾಜ್ಯದ ರಾಜಧಾನಿ ಕೊಹಿಮಾದಿಂದ ಸುಮಾರು 65 ಕಿಮೀ ದೂರದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಟ್ರಕ್ ಚಾಲಕ ಸೇರಿದಂತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಗಳ ಅಪಹರಣ ಕೇಸನ್ನು ಹಿಂಪಡೆಯುವಂತೆ ಹಲ್ಲೆಗೈದು ಮಹಿಳೆಗೆ ಒತ್ತಡ ಹೇರಿದ ಪೊಲೀಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಹಿಂಸಾಚಾರ ಹತೋಟಿಗೆ ತರಲು ಇಬ್ಬರು ಉನ್ನತ ಅಧಿಕಾರಿಗಳ ನಿಯೋಜನೆ

    ಮಣಿಪುರ ಹಿಂಸಾಚಾರ ಹತೋಟಿಗೆ ತರಲು ಇಬ್ಬರು ಉನ್ನತ ಅಧಿಕಾರಿಗಳ ನಿಯೋಜನೆ

    ಇಂಫಾಲ: ಕಳೆದ ಎರಡು ತಿಂಗಳಿಂದ ಹಿಂಸಾಚಾರದಿಂದ ನಲುಗುತ್ತಿರುವ ಮಣಿಪುರವನ್ನು (Manipur) ಹತೋಟಿಗೆ ತರಲು ಇಬ್ಬರು ಡಿಐಜಿ (DIG) ರ‍್ಯಾಂಕ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಧಿಕಾರಿಗಳು 5,000 ಸಿಆರ್‌ಪಿಎಫ್ (CRPF) ಯೋಧರಿಗೆ ಮಾರ್ಗದರ್ಶನ ನೀಡಲಿದ್ದಾರೆ.

    ಮಹಿಳೆಯರ ಬೆತ್ತಲೆ ಮೆರವಣಿಗೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ವ್ಯಾಪಕವಾಗಿ ಹರಡುವುದನ್ನು ತಡೆಯಲು ಗೃಹ ಸಚಿವಾಲಯ ಈ ನಿರ್ಧಾರ ಕೈಗೊಂಡಿದೆ. ಈ ಮೊದಲು ಕೇವಲ ಆರು ಸಿಆರ್‌ಪಿಎಫ್ ಯೋಧರ ಕೇಂದ್ರವನ್ನು ತೆರೆಯಲಾಗಿತ್ತು. ಬಳಿಕ ಅದನ್ನು 57ಕ್ಕೆ ಹೆಚ್ಚಿಸಲಾಗಿದೆ. ಯೋಧರು ಕನಿಷ್ಠ ಆರು ತಿಂಗಳ ಕಾಲ ಅಲ್ಲಿಯೇ ಇರಲಿದ್ದಾರೆ. ಹೀಗಾಗಿ ಅವರಿಗೆ ಕಾರ್ಯಾಚರಣೆಯ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲು ಹಾಗೂ ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ

    ನಾಗಾಲ್ಯಾಂಡ್‍ನ (Nagaland) ಕೊಹಿಮಾ ಮತ್ತು ಅಸ್ಸಾಂನ (Assam) ಸಿಲ್ಚಾರ್‌ನಿಂದ ಮಣಿಪುರಕ್ಕೆ ಇಬ್ಬರು ಡಿಐಜಿ ಶ್ರೇಣಿಯ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಮಣಿಪುರದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗೃಹ ಸಚಿವಾಲಯದೊಂದಿಗೆ ಚರ್ಚಿಸಿದ ನಂತರ ಇಬ್ಬರು ಹಿರಿಯ ಅಧಿಕಾರಿಗಳನ್ನು ನಿಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಹಿಳೆಯರ ಬೆತ್ತಲೆಯ ಮೆರವಣಿಗೆ ವಿಚಾರವಾಗಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಆರೋಪಿಯೊಬ್ಬನ ಮನೆಗೆ ಗ್ರಾಮಸ್ಥರು ಬೆಂಕಿ ಹಚ್ಚಿರುವುದು ವರದಿಯಾಗಿದೆ. ಕಳೆದ 2 ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರಕ್ಕೆ 142ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 17 ಜನ ಕಾಣೆಯಾಗಿದ್ದಾರೆ. ಇದನ್ನೂ ಓದಿ: ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಡುಗಿಯರೇ.. ನಾನು ನಿಮ್ಮನ್ನ ಕಡೆಗಣಿಸಿಲ್ಲ – ನಾಗಾಲ್ಯಾಂಡ್ ಸಚಿವರು ಹೀಗ್ಯಾಕಂದ್ರು?

    ಹುಡುಗಿಯರೇ.. ನಾನು ನಿಮ್ಮನ್ನ ಕಡೆಗಣಿಸಿಲ್ಲ – ನಾಗಾಲ್ಯಾಂಡ್ ಸಚಿವರು ಹೀಗ್ಯಾಕಂದ್ರು?

    ಕೊಹಿಮಾ: ನಾಗಾಲ್ಯಾಂಡ್ (Nagaland) ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ (Temjen Imna) ಅವರು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿದ್ದು, ಅನೇಕ ಬಾರಿ ತಮ್ಮನ್ನು ತಾವೇ ಟ್ರೋಲ್ ಮಾಡುಕೊಳ್ಳುತ್ತಾರೆ. ಈ ಬಾರಿ ತಾವು ತಿಂಡಿಯನ್ನು (Food) ತಿನ್ನುತ್ತಿರುವ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ.

    ವೈರಲ್ ಫೋಟೋದಲ್ಲಿ ಏನಿದೆ?: ಏರ್‌ಪೋರ್ಟ್ ಫುಡ್‍ಕೋರ್ಟ್‍ನಲ್ಲಿ ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಅವರನ್ನು ನೋಡಿ ಕೆಲವು ಹುಡುಗಿಯರು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಬಂದಿದ್ದಾರೆ. ಅಷ್ಟೇ ಅಲ್ಲದೇ ಅವರ ಹಿಂದೆ ನಿಂತು ಪೋಸ್ ನೀಡಿದ್ದಾರೆ. ಆದರೆ ಸಚಿವರು ಮಾತ್ರ ಆ ಕಡೆ ಗಮನ ನೀಡದೇ ತಮ್ಮ ತಿಂಡಿಯನ್ನು ನೋಡುತ್ತಿದ್ದಾರೆ.

    ಈ ಫೋಟೋವನ್ನು ಖುದ್ದು ಸಚಿವರೇ ಹಂಚಿಕೊಂಡಿದ್ದು, ಅದಕ್ಕೆ ಶೀರ್ಷಿಕೆಯನ್ನು ನೀಡಿದ್ದಾರೆ. ಹುಡುಗಿಯರೇ, ನಾನು ನಿಮ್ಮನ್ನು ನಿರ್ಲಕ್ಷಿಸುವುದಿಲ್ಲ ಎಂದು ಭರವಸೆ ನೀಡುತ್ತೇನೆ. ನನ್ನ ತಿಂಡಿಯೊಂದಿಗೆ ನಾನು ಸ್ವಲ್ಪ ಸಮಯ ಕಳೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಿನ್ನದ ಗಣಿ ಕುಸಿದು 15 ಕಾರ್ಮಿಕರು ಸಾವು

    ಈ ಪೋಸ್ಟ್ ಅನ್ನು ಏಪ್ರಿಲ್ 3 ರಂದು ಸಚಿವರು ಹಂಚಿಕೊಂಡಿದ್ದಾರೆ. ಈಗಾಗಲೇ 24 ಸಾವಿರಕ್ಕೂ ಅಧಿಕ ಲೈಕ್‍ಗಳು ಮತ್ತು 1 ಸಾವಿರಕ್ಕೂ ರಿಟ್ವೀಟ್‍ಗಳು ಬಂದಿವೆ. ಇದನ್ನೂ ಓದಿ: ಕೈ ನಾಯಕರು ಕುಡಿದು ಪಂಚಮಸಾಲಿ ಶ್ರೀಗಳಿಗೆ ಕರೆ ಮಾಡಿ ಕಿರುಕುಳ- ಸಿ.ಸಿ. ಪಾಟೀಲ್ ಗಂಭೀರ ಆರೋಪ

  • ನಾಗಾಲ್ಯಾಂಡ್‌ನಲ್ಲಿ ವಿರೋಧ ಪಕ್ಷವೇ ಇಲ್ಲ

    ನಾಗಾಲ್ಯಾಂಡ್‌ನಲ್ಲಿ ವಿರೋಧ ಪಕ್ಷವೇ ಇಲ್ಲ

    ಕೊಹಿಮಾ: ನಾಗಾಲ್ಯಾಂಡ್‌ನಲ್ಲಿ (Nagaland) ಈಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಪಿಪಿ-ಬಿಜೆಪಿ (NDPP-BJP) ಮೈತ್ರಿಕೂಟ ಬಹುಮತದೊಂದಿಗೆ ಜಯದ ನಗೆ ಬೀರಿದೆ. ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟಕ್ಕೆ ಇತರೆ ಪಕ್ಷಗಳು ಸಹ ಬೆಂಬಲ ಸೂಚಿಸಿದ್ದು, ನಾಗಾಲ್ಯಾಂಡ್‌ನಲ್ಲಿ ವಿರೋಧ ಪಕ್ಷವೇ ಇಲ್ಲದಂತಾಗಿದೆ.

    ಮಾ.2 ರಂದು ನಾಗಾಲ್ಯಾಂಡ್‌ (Nagaland Opposition) ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಯಿತು. ಸದನದ ಒಟ್ಟು ಸದಸ್ಯ ಬಲ 60. ಈ ಬಾರಿ ಚುನಾವಣೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ 37 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತು. ಕ್ರಮವಾಗಿ 25 ಮತ್ತು 12 ಸ್ಥಾನಗಳ ಗೆಲುವು ಸಾಧಿಸಿದವು. ಆ ಮೂಲಕ ಸರ್ಕಾರ ರಚನೆಗೆ ಸಿದ್ಧತೆ ನಡೆಸಿವೆ. ಇದನ್ನೂ ಓದಿ: ಆಪ್ ನಾಯಕ ಮನೀಶ್ ಸಿಸೋಡಿಯಾ ಜೈಲುಪಾಲು

    ಎನ್‌ಸಿಪಿ ಸೇರಿದಂತೆ ಇತರ ರಾಜಕೀಯ ಪಕ್ಷಗಳು 7 ಸ್ಥಾನಗಳನ್ನು ಗೆದ್ದಿವೆ. ಎನ್‌ಪಿಪಿ – 5, ಎಲ್‌ಜೆಪಿ (ರಾಮ್ ವಿಲಾಸ್), ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಮತ್ತು ಆರ್‌ಪಿಐ (ಅಠವಾಲೆ) – ತಲಾ 2, ಜೆಡಿ (ಯು) – 1 ಮತ್ತು ಸ್ವತಂತ್ರರು – 4. ಇದೇ ಮೊದಲ ಬಾರಿಗೆ ನಾಗಾಲ್ಯಾಂಡ್ ರಾಜ್ಯ ವಿಧಾನಸಭೆ ಚುನಾವಣೆಯು ಹಲವು ರಾಜಕೀಯ ಪಕ್ಷಗಳ ಗೆಲುವಿಗೆ ಸಾಕ್ಷಿಯಾಗಿದೆ. LJP(RV) ಮತ್ತು RPI (Athawale) ರಾಜ್ಯ ರಾಜಕಾರಣದಲ್ಲಿ ಹೊಸ ಪಕ್ಷಗಳು.

    ಎನ್‌ಡಿಪಿಪಿ-ಬಿಜೆಪಿ ಇನ್ನೂ ಸರ್ಕಾರ ರಚನೆಗೆ ಹಕ್ಕು ಮಂಡಿಸಿಲ್ಲ. ಇದರ ನಡುವೆಯೇ ಇತರ ರಾಜಕೀಯ ಪಕ್ಷಗಳಿಂದ ಬೇಷರತ್ ಬೆಂಬಲ ಪಡೆದಿವೆ. ಎಲ್‌ಜೆಪಿ (ರಾಮ್ ವಿಲಾಸ್), ಆರ್‌ಪಿಐ (ಅಠವಳೆ), ಜೆಡಿಯು ಈಗಾಗಲೇ ಮೈತ್ರಿಕೂಟಕ್ಕೆ ಅಧಿಕೃತ ಬೆಂಬಲ ವ್ಯಕ್ತಪಡಿಸಿವೆ. ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ – ಲಾಲು ಪತ್ನಿ, ಮಾಜಿ ಸಿಎಂ Rabri Devi ನಿವಾಸದ ಮೇಲೆ ಸಿಬಿಐ ದಾಳಿ

    ಮೂರನೇ ಏಕೈಕ ಅತಿ ದೊಡ್ಡ ಪಕ್ಷವಾಗಿರುವ ಎನ್‌ಸಿಪಿ, ನೆಫಿಯು ರಿಯೊ ನೇತೃತ್ವದ ಎನ್‌ಡಿಪಿಪಿಗೆ ಶನಿವಾರ ‘ಬೇಷರತ್’ ಬೆಂಬಲ ನೀಡುವ ಪತ್ರವನ್ನು ಸಲ್ಲಿಸಿದೆ. ಎಲ್ಲಾ ರಾಜಕೀಯ ಪಕ್ಷಗಳು ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟವನ್ನು ಬೆಂಬಲಿಸಿರುವುದರಿಂದ, ನಾಗಾಲ್ಯಾಂಡ್‌ನಲ್ಲಿ ಸರ್ವಪಕ್ಷ ಸರ್ಕಾರವಾಗುವ ಸಾಧ್ಯತೆ ದಟ್ಟೈಸಿದೆ.

  • ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ – ಮೇಘಾಲಯ ಅತಂತ್ರ

    ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಮತ್ತೆ ಬಿಜೆಪಿಗೆ ಅಧಿಕಾರ – ಮೇಘಾಲಯ ಅತಂತ್ರ

    ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳಿಗೆ ಪೂರಕವಾಗಿಯೇ ಈಶಾನ್ಯ ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು, ತ್ರಿಪುರ, ನಾಗಲ್ಯಾಂಡ್‍ನಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ.

    ಮೇಘಾಲಯದಲ್ಲಿ ಮಾತ್ರ ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ಎನ್‍ಪಿಪಿ ಹೆಚ್ಚು ಸ್ಥಾನ ಗಳಿಸಿದರೂ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಅತಂತ್ರ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಕಾನ್ರಾಡ್ ಅವರು ಬೆಂಬಲ ಪಡೆಯಲು ಅಮಿತ್ ಶಾ ಜೊತೆ ಮಾತುಕತೆ ನಡೆಸಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ  ಟ್ವೀಟ್‌ ಮಾಡಿ ಈ ವಿಚಾರ ತಿಳಿಸಿದ್ದಾರೆ.

    ತ್ರಿಪುರಾದಲ್ಲಿ ಮಾತ್ರ ಬಿಜೆಪಿಗೆ ಅಂದುಕೊಂಡಷ್ಟು ಸುಲಭವಾಗಿ ಗೆಲುವು ದಕ್ಕಲಿಲ್ಲ. ಮಾಣಿಕ್ಯ ರಾಜವಂಶದ ಪ್ರದ್ಯೋತ್ ಬಿಕ್ರಮ್ ವರ್ಮಾ ನೇತೃತ್ವದ ತಿಪ್ರಾ ಮೋಥಾ ಪಕ್ಷ ಕೆಸರಿ ಪಡೆಗೆ ಭಾರೀ ಸ್ಪರ್ಧೆ ನೀಡಿತ್ತು. ಐಪಿಎಫ್‍ಟಿ ಜೊತೆಗೆ ಸ್ಪರ್ಧೆ ಮಾಡಿದ್ದ ಬಿಜೆಪಿ ಅಂತಿಮವಾಗಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಸಫಲವಾಯಿತು.

    ಇದೇ ವೇಳೆ, ತಿಪ್ರಾ ಮೊಥಾ ಬೆಂಬಲ ನೀಡಿದಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಬಿಟ್ಟು ಉಳಿದೆಲ್ಲಾ ಬೇಡಿಕೆಗಳಿಗೆ ಸ್ಪಂದಿಸೋದಾಗಿ ಬಿಜೆಪಿ ಬಿಗ್ ಆಫರ್ ನೀಡಿದೆ. ಕಾಂಗ್ರೆಸ್ ಹೆಚ್ಚು ಕಡಿಮೆ ವಾಷ್‍ಔಟ್ ಆಗಿದೆ. ಎರಡು ರಾಜ್ಯಗಳಲ್ಲಿ ಗೆದ್ದ ಬಿಜೆಪಿ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಪ್ರಧಾನಿ ಮೋದಿ ಮಾತನಾಡಿ, ಈಶಾನ್ಯ ರಾಜ್ಯಗಳ ಜನತೆಗೆ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: ಈ ಮಹಿಳೆ ದಿನಕ್ಕೆ 22 ಗಂಟೆ ನಿದ್ರೆ ಮಾಡ್ತಾಳಂತೆ – ಒಮ್ಮೊಮ್ಮೆ 4 ದಿನ ಆದ್ರೂ ಎದ್ದೇಳಲ್ವಂತೆ!

    60 ವರ್ಷಗಳ ಇತಿಹಾಸವುಳ್ಳ ನಾಗಲ್ಯಾಂಡ್‍ನಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರು ಗೆದ್ದುಬೀಗಿದ್ದಾರೆ. ಎನ್‍ಡಿಪಿಪಿ ಪಕ್ಷದಿಂದ ಸ್ಪರ್ಧೆ ಮಾಡಿದ್ದ ಹೆಕಾನಿ ಜಖಾಲು ಮತ್ತು ಸಲ್ಹತುನೋ ಕ್ರುಸೆ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ.

    ತ್ರಿಪುರಾ 60 ಸ್ಥಾನ
    ಬಿಜೆಪಿ + 33
    ಎಡರಂಗ + 14
    ಟಿಎಂಪಿ – 13

    ನಾಗಾಲ್ಯಾಂಡ್ – 60 ಸ್ಥಾನ
    ಬಿಜೆಪಿ+ಎನ್‍ಡಿಪಿಪಿ – 37
    ಎನ್‍ಪಿಎಫ್ – 02
    ಕಾಂಗ್ರೆಸ್ – 00
    ಇತರರು – 21

    ಮೇಘಾಲಯ 59 ಸ್ಥಾನ
    ಎನ್‍ಪಿಪಿ -25
    ಕಾಂಗ್ರೆಸ್ – 05
    ಬಿಜೆಪಿ – 04
    ಇತರರು – 25

  • ಫಸ್ಟ್‌ ಟೈಂ ನಾಗಾಲ್ಯಾಂಡ್ ವಿಧಾನಸಭೆಗೆ ಮಹಿಳಾ ಶಾಸಕಿ ಎಂಟ್ರಿ

    ಫಸ್ಟ್‌ ಟೈಂ ನಾಗಾಲ್ಯಾಂಡ್ ವಿಧಾನಸಭೆಗೆ ಮಹಿಳಾ ಶಾಸಕಿ ಎಂಟ್ರಿ

    ಕೊಹಿಮಾ: ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ (ಎನ್‍ಡಿಪಿಪಿ) ಹೆಕಾನಿ ಜಖಲು (Hekani Jakhalu) ಅವರು ನಾಗಾಲ್ಯಾಂಡ್‍ನ (Nagaland) ವಿಧಾನಸಭೆಗೆ ಮೊದಲ ಶಾಸಕಿಯಾಗಿ (woman MLA) ಚುನಾಯಿತರಾಗಿದ್ದಾರೆ.

    ಈಗಾಗಲೇ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಬಿಜೆಪಿಯ (BJP) ಮಿತ್ರ ಪಕ್ಷವಾದ ಎನ್‍ಡಿಪಿಪಿ (NDPP) ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ಬಾರಿಯ ವಿಶೇಷವೆಂದರೆ ನಾಗಾಲ್ಯಾಂಡ್ ರಾಜ್ಯದ ಸ್ಥಾನಮಾನವನ್ನು ಪಡೆದ 60 ವರ್ಷಗಳ ನಂತರ ಮೊದಲ ಮಹಿಳಾ ಶಾಸಕಿ ಆಯ್ಕೆ ಆಗಿದ್ದಾರೆ. ಈ ಹೆಗ್ಗಳಿಕೆಗೆ ಬಿಜೆಪಿಯ ಮಿತ್ರ ಪಕ್ಷವಾದ ಎನ್‍ಡಿಪಿಪಿಯ ಹೆಕಾನಿ ಜಖಲು ಅವರು ಪಾತ್ರಾಗಿದ್ದಾರೆ. ದಿಮಾಪುರ್ – 3 ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.

    ಜಖಲು 31,874 (45.16%) ಮತಗಳನ್ನು  ಪಡೆದರು. ಅವರ ಪ್ರತಿಸ್ಪರ್ಧಿ ಲೋಕ ಜನಶಕ್ತಿ ಪಕ್ಷದ ಅಝೆಟೊ ಝಿಮೊಮಿ ಅವರು 40.34 ಶೇಕಡಾ ಮತಗಳನ್ನು ಪಡೆದರು. ಸ್ಪರ್ಧೆಯು ಕೊನೆಗೊಳ್ಳುವವರೆಗೂ ಇಬ್ಬರ ನಡುವೆಯೂ ಭರ್ಜರಿ ಫೈಟ್ ಏರ್ಪಟ್ಟಿತ್ತು.

    ಗುರುವಾರ ಮಧ್ಯಾಹ್ನ ರಾಜ್ಯದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಅಂತಿಮವಾಗಿ ಜಖಲು ಅವರನ್ನು ಭಾರತೀಯ ಚುನಾವಣಾ ಆಯೋಗ ಅಧಿಕೃತವಾಗಿ ಗೆಲುವು ಸಾಧಿಸಿದ್ದಾರೆ ಎಂದು ಘೋಷಣೆ ಮಾಡಿದೆ. ಇಲ್ಲಿಯವರೆಗೆ ಒಬ್ಬ ಮಹಿಳೆ ಶಾಸಕರಾಗಿ ಆಯ್ಕೆಯಾಗಿಲ್ಲ. ಇದನ್ನೂ ಓದಿ: ನನಗೆ, ಕುಮಾರ ಬಂಗಾರಪ್ಪಗೆ ಇನ್ಮುಂದೆ ಅಣ್ಣ-ತಮ್ಮ ಎಂದು ಕರೆಯಬೇಡಿ : ಮಧು ಬಂಗಾರಪ್ಪ

    ಈ ಬಾರಿ ಒಟ್ಟು 183 ಅಭ್ಯರ್ಥಿಗಳ ಪೈಕಿ ನಾಲ್ವರು ಮಹಿಳೆಯರು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪಧಿಸಿದ್ದರು. ಇದನ್ನೂ ಓದಿ: ತ್ರಿಪುರಾದಲ್ಲಿ ಬಿಜೆಪಿ, ನಾಗಾಲ್ಯಾಂಡ್‌ ಎನ್‌ಡಿಪಿಪಿ, ಮೇಘಾಲಯದಲ್ಲಿ ಎನ್‌ಪಿಪಿ ಮುನ್ನಡೆ