Tag: nagamohan das committee

  • ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

    ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್‌ ರದ್ದು

    – ನ್ಯಾ. ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗ ರದ್ದುಪಡಿಸಿದ ಸರ್ಕಾರ

    ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ (Nagamohan Das Committee) ನೇತೃತ್ವದ ಏಕಸದಸ್ಯ ಆಯೋಗವನ್ನು ಸರ್ಕಾರ ದಿಢೀರನೆ ರದ್ದುಗೊಳಿಸಿದೆ.

    ಸೆ.30 ರ ವರೆಗೆ ತಮ್ಮ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ ಪರಿಗಣಿಸಿಲ್ಲ ಎನ್ನಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯ 40% ಕಮಿಷನ್ (40% Commission) ಆರೋಪ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆ‌ ಜವಾಬ್ದಾರಿಯನ್ನು ಈ ಆಯೋಗಕ್ಕೆ‌ ವಹಿಸಲಾಗಿತ್ತು. ಇದನ್ನೂ ಓದಿ: ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

    ಆಯೋಗಕ್ಕೆ‌ ನೀಡಲಾಗಿದ್ದ ವಾಹನ ಹಾಗೂ ಸಿಬ್ಬಂದಿಯನ್ನು ಸರ್ಕಾರ‌ ನಿನ್ನೆ ಸಂಜೆಯಿಂದ ವಾಪಸ್ ಪಡೆದಿದೆ. ಅಧ್ಯಕ್ಷರ ಸೂಚನೆ ಮೇರೆಗೆ ಆಯೋಗದ ಕಾರ್ಯಚಟುವಟಿಕೆ ಅಧಿಕೃತವಾಗಿ ಮುಕ್ತಾಯಗೊಳಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ ಎಂದು ಕೇಳಿಬಂದಿದೆ.

    ಬೆಂಗಳೂರು ಅಕ್ರಮ ಕಾಮಗಾರಿ ತನಿಖೆ ನಡೆಸಿದ ಆಯೋಗ ಆ.30 ರಂದು ಸರ್ಕಾರಕ್ಕೆ 8,900 ಪುಟಗಳ ಬೃಹತ್ ತನಿಖಾ ವರದಿಯನ್ನು ಸಲ್ಲಿಸಿತ್ತು. 761 ಕಾಮಗಾರಿಗಳನ್ನ ಪರಿಶೀಲಿಸಿ ಹಲವು ನ್ಯೂನತೆಗಳನ್ನು ಪತ್ತೆಹಚ್ಚಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿತ್ತು. ಇದನ್ನೂ ಓದಿ: ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು – ಡಿಸಿ ಕಚೇರಿ ಆವರಣದಲ್ಲಿ ಸುರಿದು ಆಕ್ರೋಶ

    ಏಕ ಸದಸ್ಯ ಆಯೋಗದ ಕೆಲಸ ಮುಗಿದಿದ್ದರೂ ಕೆಲವು ಆಡಳಿತಾತ್ಮಕ ಕಾರ್ಯ ಹಾಗೂ ದಾಖಲೆ ನಿರ್ವಾಹಣೆಗಾಗಿ ಸೆ.30 ರ ವರೆಗೆ ಅವಧಿ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು ಎನ್ನಲಾಗಿದೆ. ಆದರೆ, ಸರ್ಕಾರ ನಿನ್ನೆ ಏಕಾಏಕಿ ಆಯೋಗಕ್ಕೆ ನೀಡಿದ್ದ ಎಲ್ಲಾ ಸವಲತ್ತು ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.

  • ಬೆಂಗ್ಳೂರಲ್ಲಿ ಒಳ ಮೀಸಲಾತಿ ಸಮೀಕ್ಷೆಗೆ ಸಹಕರಿಸದಿದ್ರೆ ನೀರು, ಕರೆಂಟ್ ಯಾಕೆ ಕಟ್ ಮಾಡ್ಬಾರದು? – ನ್ಯಾ.ನಾಗಮೋಹನ್ ದಾಸ್

    ಬೆಂಗ್ಳೂರಲ್ಲಿ ಒಳ ಮೀಸಲಾತಿ ಸಮೀಕ್ಷೆಗೆ ಸಹಕರಿಸದಿದ್ರೆ ನೀರು, ಕರೆಂಟ್ ಯಾಕೆ ಕಟ್ ಮಾಡ್ಬಾರದು? – ನ್ಯಾ.ನಾಗಮೋಹನ್ ದಾಸ್

    – ಮನೆ ಮನೆ ಸಮೀಕ್ಷೆ ಮೇ 25ರ ವರೆಗೆ ವಿಸ್ತರಣೆ

    ಬೆಂಗಳೂರು: ನಗರದಲ್ಲಿ (Bengaluru) ಒಳ ಮೀಸಲಾತಿ ಸಮೀಕ್ಷೆಗೆ ಸಹಕರಿಸದಿದ್ರೆ ನೀರು, ಕರೆಂಟ್ ಯಾಕೆ ಕಟ್ ಮಾಡ್ಬಾರದು ಎಂದು ಏಕಸದಸ್ಯ ಆಯೋಗದ ಅಧ್ಯಕ್ಷ ನ್ಯಾ. ಹೆಚ್.ಎನ್.ನಾಗಮೋಹನ್ ದಾಸ್ (Nagamohan Das ) ಕಿಡಿಕಾರಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಒಳ ಮೀಸಲಾತಿ ಜಾರಿ ವಿಚಾರವಾಗಿ ದತ್ತಾಂಶ ಸಂಗ್ರಹಕ್ಕೆ ನಡೆಯುತ್ತಿದೆ. ಎಸ್‌ಸಿ ಸಮುದಾಯದ ಮನೆ ಮನೆ ಸಮೀಕ್ಷಾ ಅವಧಿ ವಿಸ್ತರಣೆ ಮಾಡಲಾಗಿದೆ.‌ ಎಸ್‌ಸಿ ಸಮುದಾಯದ ಮನೆ ಮನೆ ಸಮೀಕ್ಷೆ ಮೇ 25ರ ತನಕ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಳ ಮೀಸಲಾತಿಗಾಗಿ ಇಂದಿನಿಂದ ಸಮೀಕ್ಷೆ, 2 ತಿಂಗಳಲ್ಲಿ ಜಾರಿ – ಯಾವ ಹಂತದಲ್ಲಿ ಏನು?

    73.72% ಮನೆ ಮನೆ ಸಮೀಕ್ಷೆ ಪೂರ್ಣ
    ವಿಶೇಷ ಶಿಬಿರದ ದಿನಾಂಕ ಮರು ನಿಗದಿ ಮಾಡಿದ್ದು, ಮೇ 26ರಿಂದ ಮೇ 28ರ ತನಕ ನಡೆಯಲಿದೆ. ಅನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ದಿನಾಂಕ ಮೇ 19ರಿಂದ ಮೇ 28ರ ತನಕ ನಿಗದಿ ಮಾಡಿದ್ದು, ಇಲ್ಲಿ ತನಕ 73.72% ಮನೆ ಮನೆ ಸಮೀಕ್ಷೆ ಪೂರ್ಣ ಆಗಿದೆ.

    ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು?
    ಬೆಂಗಳೂರಿನಲ್ಲಿ ಕೇವಲ 36% ಮಾತ್ರ ಸಮೀಕ್ಷೆ ಆಗಿದ್ದು, ಅಪಾರ್ಟ್‌ಮೆಂಟ್‌ಗಳಲ್ಲಿ ಸಮೀಕ್ಷೆಗೆ ಸಹಕರಿಸುತ್ತಿಲ್ಲ. ಅವರ ಮಾಹಿತಿಯನ್ನೇ ನೀಡಲ್ಲ ಎಂದರೆ ಅವರಿಗೆ ನೀರು, ಕರೆಂಟ್ ಕಟ್ ಮಾಡಿದರೆ ಹೇಗೆ? ಅವರು‌ ಸಮೀಕ್ಷೆಯಲ್ಲಿ ಭಾಗವಹಿಸಲ್ಲ‌ ಅಂದ್ರೆ ನೀರು, ಕರೆಂಟ್ ಏಕೆ ಬೇಕು? ಈಗಾಗಲೇ ಬಿಬಿಎಂಪಿಗೆ ಸೂಚನೆ ಕೊಟ್ಟಿದ್ದೇವೆ. ಸಮೀಕ್ಷೆ ಸಹಕರಿಸಲು ಎಚ್ಚರಿಕೆ ಕೊಡುವಂತೆ ಲಿಖಿತವಾಗಿ ಬಿಬಿಎಂಪಿಗೆ ಸೂಚಿಸಿದ್ದೇವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂಟ್ರೋಲ್‌ ರೂಂ ತೆರೆಯಲು‌ ಸಹ ಸೂಚಿಸಿದ್ದೇವೆ. ಖಾಸಗಿ ಶಾಲೆಯ ಶಿಕ್ಷಕರನ್ನ ಸಮೀಕ್ಷೆಗೆ ನೇಮಿಸಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಕರ್ನಾಟಕದಲ್ಲಿ 2011ರ ಜನಗಣತಿ ಪ್ರಕಾರ ಎಸ್‌ಸಿ ಸಮುದಾಯದಲ್ಲಿ 101 ಉಪಜಾತಿಗಳಿವೆ. ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂದು ನಮೂದಿಸಿದ್ದಾರೆ. ಸಮೀಕ್ಷೆಗಳು ಮುಗಿದ ಬಳಿಕ ದತ್ತಾಂಶ ಸಂಗ್ರಹದ ಅಧ್ಯಯನ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಆದೇಶದ ಮಾನದಂಡಗಳನ್ನು ಅನುಸರಿಸುತ್ತೇವೆ. ಆ ಬಳಿಕ ಒಳ ಮೀಸಲಾತಿ ಜಾತಿಗಳನ್ನ ವರ್ಗೀಕರಣ ಮಾಡುತ್ತೇವೆ. ಯಾವುದೇ ವಿಳಂಬ ಆಗದಂತೆ ಅಂತಿಮ ವರದಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಮಾಡಿಯೇ ಮಾಡ್ತೀವಿ, ಯಾರಿಗೂ ಅನ್ಯಾಯ ಮಾಡಲ್ಲ: ಸಿದ್ದರಾಮಯ್ಯ

  • SC-ST ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅಸ್ತು

    SC-ST ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಅಸ್ತು

    ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡಗಳ (Schedule Tribes) ಮೀಸಲಾತಿ (Reservation) ಹೆಚ್ಚಳಕ್ಕೆ ಇಂದು ವಿಶೇಷ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

    ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಸಂಪುಟ ಶನಿವಾರ ಅನುಮೋದನೆ ನೀಡಿದೆ. ಮೀಸಲಾತಿ ಸಂಬಂಧ ಕಾನೂನಾತ್ಮಕ ವಿಚಾರಗಳ ಬಗ್ಗೆ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಿದೆ. ಇದನ್ನೂ ಓದಿ: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಘೋಷಣೆ

    ಮೀಸಲಾತಿ ಹೆಚ್ಚಳ ಸಂಬಂಧ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸರ್ವ ಪಕ್ಷಗಳ ಸಭೆ ನಡೆದಿತ್ತು. ಸಭೆಯಲ್ಲಿ ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್ ದಾಸ್ (Justice Nagamohan Das) ನೀಡಿರುವ ವರದಿ ಯಥಾವತ್ತಾಗಿ ಜಾರಿಗೆ ತರಲು ಒಮ್ಮತದ ಅಭಿಪ್ರಾಯ ವ್ಯಕ್ತವಾಗಿತ್ತು. ಶನಿವಾರ ಕ್ಯಾಬಿನೆಟ್‌ನಲ್ಲಿ ವಿಷಯ ಮಂಡಿಸಿ ಅಧಿಕೃತ ಆದೇಶ ಹೊರಡಿಸುವುದಾಗಿ ಸಿಎಂ ಬೊಮ್ಮಾಯಿ ನಿನ್ನೆ ಘೋಷಣೆ ಮಾಡಿದ್ದರು. ಅದರಂತೆ ಇಂದು ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ.

    ಸದ್ಯ ಪರಿಶಿಷ್ಟ ಜಾತಿಗೆ 15% ಮತ್ತು ಪರಿಶಿಷ್ಟ ಪಂಗಡಕ್ಕೆ 3% ಮೀಸಲಾತಿ ಇದೆ. ನ್ಯಾ.ನಾಗಮೋಹನ್ ದಾಸ್ ಸಮಿತಿ ಜನಸಂಖ್ಯೆ ಆಧಾರದಲ್ಲಿ ಎಸ್‌ಸಿ ಮೀಸಲಾತಿ 15% ನಿಂದ 17%ಗೆ ಹಾಗೂ ಎಸ್‌ಟಿ ಮೀಸಲಾತಿ 3% ನಿಂದ 7%ಗೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    Live Tv
    [brid partner=56869869 player=32851 video=960834 autoplay=true]