Tag: Nagarahavu

  • ಬಾಲ ರಾಮಾಚಾರಿಯಾಗಿ ವಿಷ್ಣು ಪಾತ್ರಕ್ಕೆ ಜೀವ- ದಿವ್ಯಾಂಗರು, ಗರ್ಭಿಣಿಯರಿಗೆ ಉಚಿತ ಊಟ ನೀಡ್ತಿದ್ದಾರೆ ಹೇಮಚಂದ್ರ..!

    ಬಾಲ ರಾಮಾಚಾರಿಯಾಗಿ ವಿಷ್ಣು ಪಾತ್ರಕ್ಕೆ ಜೀವ- ದಿವ್ಯಾಂಗರು, ಗರ್ಭಿಣಿಯರಿಗೆ ಉಚಿತ ಊಟ ನೀಡ್ತಿದ್ದಾರೆ ಹೇಮಚಂದ್ರ..!

    ಹಾವೇರಿ: ಕನ್ನಡ ಅಲ್ಲ ಭಾರತ ಸಿನಿ ಇತಿಹಾಸದ ಪುಟ ಸೇರಿರೋದು ನಾಗರಹಾವು. ಈ ಚಿತ್ರದ ಮೂಲಕ ಎಂಟ್ರಿಕೊಟ್ಟ ವಿಷ್ಣುವರ್ಧನ್, ಅಂಬರೀಶ್ ದಿಗ್ಗಜರಾಗಿದ್ದಾರೆ. ಚಿತ್ರದಲ್ಲಿ ಹೇಮಚಂದ್ರ ಬಾಲರಾಮಾಚಾರಿಯಾಗಿ ಕಾಣಿಸಿಕೊಂಡಿದ್ದರು. ಅವರೀಗ ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿದ್ದು, ಪಬ್ಲಿಕ್ ಹೀರೋ ಆಗಿದ್ದಾರೆ.

    ಹೇಮಚಂದ್ರ ಅವರು ನಾಗರಹಾವು ಚಿತ್ರದಲ್ಲಿ ಬಾಲ ರಾಮಾಚಾರಿಯಾಗಿ ನಟಿಸಿದ್ದು, ಇವರು ಹಾವೇರಿಯ ಹಿರೇಕೆರೂರು ತಾಲೂಕಿನ ಹಂಸಭಾವಿದಲ್ಲಿ ನೆಲೆಸಿದ್ದಾರೆ. ಮೂಲತಃ ಬೆಳಗಾವಿಯ ಗೋಕಾಕ್‍ನವರಾದ ಹೇಮಚಂದ್ರ, ಉತ್ತರ ಕರ್ನಾಟಕದ ಮೊದಲ ನಾಟಕ ಕಂಪನಿ `ಶಾರದಾ ಸಂಗೀತ’ದ ಮಾಲೀಕ ಬಸವರಾಜ ಹೊಸಮನಿ ಅವರ ಪುತ್ರ. ಅಪ್ಪನ ನಾಟಕ ಕಂಪನಿಯಲ್ಲಿ ಬಾಲನಟನಾಗಿ ಹೇಮಚಂದ್ರ ಆಗಲೇ ಬಣ್ಣ ಹಚ್ಚಿದ್ದರು.

    ನಂತರ ರಾಜ್ ಅಭಿನಯದ ಸಂಪತ್ತಿಗೆ ಸವಾಲ್ ಹಾಗೂ ಚಾಮುಂಡೇಶ್ವರಿ ಮಹಾತ್ಮೆ, ಸ್ವಯಂವರ ಚಿತ್ರದಲ್ಲಿ ನಟಿಸಿದ್ದರು. ನಾಟಕ ಕಂಪನಿ ಮುಚ್ಚಿದಾಗ ಹಂಸಭಾವಿಗೆ ಬಂದು ನೆಲೆಸಿದ್ದು`ಮನೆ ಊಟ’ ಖಾನಾವಳಿ ಇಟ್ಟುಕೊಂಡಿದ್ದಾರೆ. ಗ್ರಾಮದಲ್ಲಿ ಬಾಲರಾಮಾಚಾರಿ ಅಂತಲೇ ಫೇಮಸ್ ಆಗಿದ್ದಾರೆ.

    ಒಂದು ಊಟಕ್ಕೆ 60 ರೂಪಾಯಿ ನಿಗದಿ ಮಾಡಿರೋ ಹೇಮಚಂದ್ರ ಅವರು ಕಳೆದ 16 ವರ್ಷಗಳಿಂದ ದಿವ್ಯಾಂಗರಿಗೆ ವಿಶೇಷ ರಿಯಾಯತಿ ನೀಡಿದ್ರೆ, ಪತ್ನಿಯ ಆಸೆಯಂತೆ ಗರ್ಭಿಣಿಯರಿಗೆ ಉಚಿತವಾಗಿ ಊಟ ನೀಡ್ತಿದ್ದಾರೆ ಅಂತ ಗ್ರಾಮಸ್ಥ ಬಸವನಗೌಡ ಹೊಸಳ್ಳಿ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.

    ವಿಷ್ಣುವರ್ಧನ್, ರಾಜಕುಮಾರ್ ಅಂತ ನಟ ಬಾಲಪಾತ್ರಗಳಲ್ಲಿ ಕಾಣಿಸಿಕೊಂಡಿದ್ದೆ ಅನ್ನೋ ಹಮ್ಮು-ಬಿಮ್ಮು ಇಲ್ಲದೆ, ಹಂಸಭಾವಿಯಲ್ಲಿ ವಿಶಿಷ್ಟವಾಗಿ ಗುರ್ತಿಸಿಕೊಂಡು ಬದುಕುತ್ತಿದ್ದಾರೆ.

    https://www.youtube.com/watch?v=R4PKVyyKDUc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ವಿಷ್ಣುವರ್ಧನ್ ಮತ್ತು ಅಂಬರೀಶ್ ಸ್ನೇಹ ಶುರುವಾಗಿದ್ದು ಹೇಗೆ?

    ವಿಷ್ಣುವರ್ಧನ್ ಮತ್ತು ಅಂಬರೀಶ್ ಸ್ನೇಹ ಶುರುವಾಗಿದ್ದು ಹೇಗೆ?

    ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ನೇಹ ಶುರುವಾಗಿದ್ದು ಹೇಗೆ ಎಂಬ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ.

    ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಾಗರಹಾವು ಸಿನಿಮಾಗಾಗಿ ಹೊಸ ನಟರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆಗ ಚಿಗುರು ಮೀಸೆಯ ತೀಕ್ಷ್ಣ ಕಣ್ಣಿನ ಹುಡುಗ ವಿಷ್ಣುವರ್ಧನ್ ಈ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. ಇದೇ ಚಿತ್ರದಲ್ಲಿ ಒಂದು ಸಣ್ಣ ಪಾತ್ರ ಅದು ಜಲೀಲನ ಪಾತ್ರಕ್ಕಾಗಿ ತುಸು ಪುಂಡನ ಲುಕ್ ಇರೋ ನಟನಿಗಾಗಿ ಪುಟ್ಟಣ್ಣ ಹುಡುಕಾಡುತ್ತಿದ್ದರು. ಆಗ ರೆಬಲ್ ಸ್ಟಾರ್ ಅಂಬರೀಶ್ ಅವರು ಜಲೀಲನ ಪಾತ್ರಕ್ಕೆ ಆಯ್ಕೆಯಾಗಿದ್ದರು. ಹೀಗೆ ನಾಗರಹಾವು ಸಿನಿಮಾ ಸೆಟ್ ನಲ್ಲಿ ವಿಷ್ಣು ಹಾಗೂ ಅಂಬರೀಶ್ ಮೊದಲ ಭೇಟಿಯಾಗಿತ್ತು.

    ವಿಷ್ಣುವರ್ಧನ್ ಮೊದಲಿನಿಂದಲೂ ಸ್ವಲ್ಪ ಹ್ಯೂಮರಸ್ ವ್ಯಕ್ತಿತ್ವದವರು. ಹೀಗಾಗಿ, ಅಂಬರೀಶ್ ಗೆ ಬಹಳ ಬೇಗನೆ ಹತ್ತಿರವಾದರು. ಈ ಚಿತ್ರದಲ್ಲಿ ವಿಷ್ಣು ಹೀರೋ ಆಗಿದ್ರೆ, ಅಂಬರೀಶ್ ವಿಲನ್ ರೋಲ್ ನಿಭಾಯಿಸಿದ್ದರು. ಆದರೆ ನಿಜ ಜೀವನದಲ್ಲಿ ಇಬ್ಬರೂ ತುಂಬಾ ಒಳ್ಳೆಯ ಸ್ನೇಹಿತರಾಗೋದಕ್ಕೆ ಈ ಚಿತ್ರವೂ ಕಾರಣವಾಯ್ತು. ಜಲೀಲನ ಪಾತ್ರದಲ್ಲಿದ್ದ ಅಂಬರೀಶ್ ನಟಿ ಆರತಿ ಅವರನ್ನು ರೇಗಿಸುತ್ತಿದ್ದರೆ, ಇತ್ತ ವಿಷ್ಣುವರ್ಧನ್ ಸೈಕಲ್ ನಲ್ಲಿ ಬಂದು ಫೈಟ್ ಮಾಡುವ ದೃಶ್ಯ ನೋಡುಗರಿಗೆ ಖುಷಿ ಕೊಟ್ಟಿತ್ತು.

    ಸಾಹಸಸಿಂಹ ವಿಷ್ಣುವರ್ಧನ್ ಬಗ್ಗೆ ಅಂಬರೀಶ್ ಗೆ ಎಲ್ಲಿಲ್ಲದ ಅಭಿಮಾನ. ಇಬ್ಬರೂ ಗಂಟೆಗಟ್ಟಲೆ ಕೂತು ಹರಟೆ ಹೊಡೆಯುತ್ತಾ, ಒಬ್ಬರ ಕಾಲನ್ನು ಮತ್ತೊಬ್ಬರು ಎಳೆದು ನಕ್ಕು ನಲಿಸುತ್ತಿದ್ದರು. ಬಹುಶಃ ನಾಗರಹಾವು ಚಿತ್ರದ ಮೂಲಕ ಚಿಗುರಿದ ಸ್ನೇಹ ಆದರ್ಶ ಸ್ನೇಹವಾಗುತ್ತೆ ಅಂತಾ ಅವರಿಬ್ಬರಿಗೂ ಅಂದು ಅರಿವೇ ಇರಲಿಲ್ಲ. ಚಿತ್ರದುರ್ಗದಲ್ಲಿ ನಾಗರಹಾವು ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಇಬ್ಬರೂ ಒಂದೇ ರೂಂನಲ್ಲಿ ಮಲಗುವ ಸಂದರ್ಭವಿತ್ತು. ಈ ಸಂದರ್ಭದಲ್ಲಂತೂ ವಿಷ್ಣು ಹಾಗೂ ಅಂಬರೀಶ್ ಮತ್ತಷ್ಟು ಕ್ಲೋಸ್ ಆದರು. ಚಿತ್ರದುರ್ಗದಲ್ಲಿ ನಡೆಯುತ್ತಿದ್ದ ಶೂಟಿಂಗ್ ಯಾವಾಗ ಬೆಂಗಳೂರಿಗೆ ಶಿಫ್ಟ್ ಆಯ್ತು ಆಗ ಅಂಬರೀಶ್ ವಿಷ್ಣು ಮನೆಗೆ ಹೋಗುತ್ತಿದ್ದರು.

    ನಾಗರಹಾವು ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರದ ಮೊದಲ ಪ್ರಿಂಟ್ ಮದ್ರಾಸ್ ನ ಖಾಸಗಿ ಚಿತ್ರ ಮಂದಿರವೊಂದರಲ್ಲಿ ಪ್ರದರ್ಶನವಾಗಿತ್ತು. ಮದ್ರಾಸ್‍ನ ನಿರ್ಮಾಪಕರು, ನಿರ್ದೇಶಕರು ಅದಾಗಲೇ ಚಿತ್ರವನ್ನು ನೋಡಿ ಅದ್ಭುತ ಎಂದು ಹೇಳಿದ್ದರು. ನಿರ್ಮಾಪಕರ ಹಾಗೂ ನಿರ್ದೇಶಕರ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಂದರ್ಭದಲ್ಲಿ ವಿಷ್ಣುವರ್ಧನ್ ಅಲ್ಲಿ ಇರಲಿಲ್ಲ. ಆಗ ಈ ಸುದ್ದಿಯನ್ನು ಅಂಬರೀಶ್ ಮೊದಲು ವಿಷ್ಣುವರ್ಧನ್ ಅವರಿಗೆ ತಿಳಿಸಿದ್ದರು.

    ವಿಷ್ಣುವರ್ಧನ್ ಅವರಿಗೆ ಸಿನಿಮಾ ಬಗ್ಗೆ ತುಂಬಾ ಭಯವಿತ್ತು. ಚಿತ್ರ ಬಿಡುಗಡೆಯಾದಾಗ ಮುಂದೆ ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿತ್ತು. ರೀರೆಕಾರ್ಡಿಂಗ್ ಮುಗಿದು, ಸಿನಿಮಾ ಬಿಡುಗಡೆಯಾಯಿತು. ಅಂಬರೀಶ್ ಹಾಗೂ ವಿಷ್ಣು ಖುದ್ದಾಗಿ ಎಲ್ಲಾ ಚಿತ್ರಮಂದಿರಗಳಿಗೂ ಹೋಗಿ ಜನರ ಪ್ರತಿಕ್ರಿಯೆ ನೋಡಿಕೊಂಡು ಬರುತ್ತಿದ್ದರು. ನಾಗರ ಹಾವು ಸಿನಿಮಾ ಮೂಲಕ ಒಬ್ಬ ಹೀರೋ ಹಾಗೇ ಒಬ್ಬ ವಿಲನ್ ಪಾತ್ರಧಾರಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು. ಇಬ್ಬರಲ್ಲೂ ಅಸಾಧಾರಣವಾದ ಪ್ರತಿಭೆ ಇತ್ತು.

    ನಾಗರಹಾವು ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆಯಿಂದ ಇಬ್ಬರೂ ಸಖತ್ ಥ್ರಿಲ್ ಆಗಿದ್ದರು. ಕೇವಲ ಸೆಟ್‍ನಲ್ಲಷ್ಟೇ ಅಲ್ಲ. ಇನ್ನೂ ಮುಂದುವರಿದು ನಮ್ಮ ಸ್ನೇಹ ಎಂಥದ್ದು ಎನ್ನುವುದ್ದಕ್ಕೆ ಅಂಬರೀಶ್ ಮತ್ತು ವಿಷ್ಣು ಸಾಧಿಸಿದ್ದರು. ನಾಗರಹಾವು ಆರಂಭವಾಗಿದ್ದ ಸ್ನೇಹ ಮುಂದೆ ಆಫ್ ಸ್ಕ್ರೀನ್ ನಲ್ಲಿ ವಿಷ್ಣು ಅಂಬಿ ಒಬ್ಬರನೊಬ್ಬರು ಬಿಟ್ಟು ಇರುತ್ತಿರಲಿಲ್ಲ. 1973ರಲ್ಲಿ ಬಿಡುಗಡೆಯಾದ ನಾಗರಹಾವು ಸಿನಿಮಾ ಬೆಂಗಳೂರಿನ ಮೂರು ಥಿಯೇಟರ್ ಗಳಲ್ಲಿ ಜಯಭೇರಿ ಬಾರಿಸಿತ್ತು. ಈಗ ಮತ್ತೆ ಸಿನಿಮಾ ರೀ-ರಿಲೀಸ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್ ನ್ಯೂಸ್!

    ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್ ನ್ಯೂಸ್!

    ಬೆಂಗಳೂರು: ಬೆಳ್ಳಿತೆರೆ ಮೇಲೆ ಸಾಹಸಸಿಂಹ ವಿಷ್ಣುವರ್ಧನ್ ನಟಿಸಿದ ‘ನಾಗರಹಾವು’ ಚಿತ್ರ ರಿ-ರಿಲೀಸ್ ಆಗಲಿದೆ.

    ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಸಿನಿಮಾ ರಿ-ರಿಲೀಸ್ ಆಗ್ತಿರೋ ಮೂಲಕ ಬೆಳ್ಳಿತೆರೆ ಮೇಲೆ ಮತ್ತೆ ರಾಮಾಚಾರಿಯ ದರ್ಶನವಾಗುತ್ತಿದೆ. ಇದೀಗ ಹೊಸ ಲುಕ್‍ನಲ್ಲಿ ಅಭಿಮಾನಿ ದೇವರುಗಳಿಗೆ ದರ್ಶನ ಕೊಡೋದಕ್ಕೆ ಸಜ್ಜಾಗಿದ್ದು, ವೆಲ್‍ಕಮ್ ಮಾಡಿಕೊಳ್ಳೋಕ್ಕೆ ಚಿತ್ರರಂಗ ಕೂಡ ತುದಿಗಾಲಲ್ಲಿ ನಿಂತಿದೆ.

    ಚಂದನವನಕ್ಕೆ ಇಬ್ಬರು ದೊಡ್ಡ ನಟರನ್ನು ಕೊಟ್ಟ ನಾಗರಹಾವು ಎಂದೆಂದಿಗೂ ಎವರ್ ಗ್ರೀನ್ ಚಿತ್ರ. ಈ ಬಾರಿ ಬೆಳ್ಳಿತೆರೆ ಮೇಲೆ ಹೈ ಗ್ರೇಡ್ ಕಲರ್ ಫುಲ್ ರಾಮಾಚಾರಿಯನ್ನು ಎಲ್ಲರೂ ನೋಡಬಹುದಾಗಿದೆ.

    7.1 ತಂತ್ರಜ್ಞಾನದಲ್ಲಿ ನಾಗರಹಾವನ್ನ ರೆಡಿ ಮಾಡಿದ್ದು, ಮ್ಯೂಸಿಕ್‍ನ ರಿ-ಕ್ರಿಯೇಟ್ ಮಾಡಲಾಗಿದೆ. ಡಿಜಿಟಲ್ ಸೌಂಡಿಂಗ್ ಎಫೆಕ್ಟ್ ನಲ್ಲಿ ಎದ್ದು ಬರುತ್ತದೆ. ಈಗಾಗಲೇ ರಿಲೀಸ್ ಆಗಿರುವ ನಾಗರಹಾವು ಟೀಸರ್ ಭಾರೀ ಸದ್ದು ಮಾಡ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಹಲ್‍ಚಲ್ ಎಬ್ಬಿಸಿದೆ.

    ಇನ್ನೂ ವಿಶೇಷ ಅಂದ್ರೆ ಡಿಜಿಟಲ್ ತಂತ್ರಜ್ಞಾನದಲ್ಲಿ ಮೂಡಿ ಬರ್ತಿರುವ ನಾಗರಹಾವು ಸಿನಿಮಾ ನೋಡೋದಕ್ಕೆ ಸಿನಿಪ್ರಿಯರು ಮಾತ್ರವಲ್ಲ ಸಿನಿಮಾ ಮಂದಿ ಕೂಡ ಕಾದು ಕುಳಿತಿದ್ದಾರೆ. ಹೊಸ ರಾಮಾಚಾರಿಯ ಬಗ್ಗೆ ಮಾತನಾಡೋದಕ್ಕೆ ಸ್ಯಾಂಡಲ್‍ವುಡ್‍ನ ಹಲವು ಗಣ್ಯರು ಆಗಮಿಸಿದ್ರು.

    ಭಾರತಿ ವಿಷ್ಣುವರ್ಧನ್, ಕ್ರೇಜಿಸ್ಟಾರ್ ರವಿಚಂದ್ರನ್, ಅಂಬರೀಷ್, ಲೀಲಾವತಿ, ಜಯಂತಿ, ರಾಕ್‍ಲೈನ್ ವೆಂಕಟೇಶ್ ಸೇರಿದಂತೆ ಹಲವರು ಹೊಸ ನಾಗರಹಾವಿನ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ರು. ಒಟ್ಟಿನಲ್ಲಿ ನಾಗರಹಾವು ಸಿನಿಮಾ ಬಿಡುಗಡೆಗೆ ಸಕಲ ಸಿದ್ಧತೆಗಳು ಆಗಿವೆ. ಜುಲೈ 20 ರಂದು ರಾಜ್ಯಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಲಿದೆ.

  • 45 ವರ್ಷಗಳ ನಂತರ ಹೊಸ ರೂಪದಲ್ಲಿ ನಾಗರಹಾವು ರೀ ರಿಲೀಸ್

    45 ವರ್ಷಗಳ ನಂತರ ಹೊಸ ರೂಪದಲ್ಲಿ ನಾಗರಹಾವು ರೀ ರಿಲೀಸ್

    ಬೆಂಗಳೂರು: 45 ವರ್ಷಗಳ ನಂತರ ಹೊಸ ರೂಪದಲ್ಲಿ ನಾಗರಹಾವು ತೆರೆಗೆ ಬರುತ್ತಿದ್ದು, ಸಾಹಸ ಸಿಂಹ ಅಭಿವನ ಭಾರ್ಗವ ವಿಷ್ಣುವರ್ಧನ್ ಪುಣ್ಯ ತಿಥಿಯಂದು ಸಿನಿಮಾ ಬಿಡುಗಡೆಯಾಗಲಿದೆ.

    ನಾಗರಹಾವು ರಿಲೀಸ್ ಆಗಿ ಬರೋಬ್ಬರಿ 45 ವರ್ಷಗಳಾಗಿವೆ. ಆದರೆ ಈಗ ಅವರ ಪುಣ್ಯತಿಥಿ ಪ್ರಯುಕ್ತ ಮತ್ತೆ ನಾಗರಹಾವು ರೀ ರಿಲೀಸ್ ಆಗುತ್ತಿದ್ದು, ತೆರೆಯ ಮೇಲೆ ರಾಮಾಚಾರಿ ಮತ್ತು ಚಾಮಯ್ಯ ಮೇಷ್ಟ್ರು ಮತ್ತೆ ಮೋಡಿ ಮಾಡಲು ಬರುತ್ತಿದ್ದಾರೆ.

    ಪುಟ್ಟಣ್ಣ ಕಣಗಾಲ್ ನಿರ್ದೇಶನದಲ್ಲಿ ಮೂಡಿಬಂದಿದ್ದ ನಾಗರಹಾವು ಸಿನಿಮಾ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆಯನ್ನು ಪಡೆದಿತ್ತು. ಅದೇ ಮೊದಲ ಬಾರಿಗೆ ನಾಯಕ ನಟರಾಗಿ ವಿಷ್ಣುವರ್ಧನ್ ಅಭಿನಯಿಸಿದ್ದು, ನಾಗರಹಾವು ಸಿನಿಮಾ ಅವರಿಗೆ ಹೆಸರು ಮತ್ತು ಖ್ಯಾತಿಯನ್ನು ತಂದುಕೊಟ್ಟಿತ್ತು. ಈಗ ನಾಗರಹಾವು ಸಿನಿಮಾವನ್ನು ವೀರಾಸ್ವಾಮಿಯವರ ಮಗ ಬಾಲಾಜಿ ಅವರು ರೀ ರಿಲೀಸ್ ಮಾಡುತ್ತಿದ್ದು, ವಿಶೇಷವಾಗಿ ಡಿಟಿಎಸ್ ಸೌಂಡ್ ಎಫೆಕ್ಟ್ ನೊಂದಿಗೆ ಬಿಡುಗಡೆಯಾಗುತ್ತಿದೆ.

    ಈ ಹಿಂದೆ ಕಸ್ತೂರಿ ನಿವಾಸ ಚಿತ್ರ ಕೂಡ ಹೊಸ ರೂಪದಲ್ಲಿ ಬಿಡುಗಡೆಯಾಗಿತ್ತು. ಈಗ ಇದೇ ತಿಂಗಳು ತೆರೆಯ ಮೇಲೆ ನಾಗರಹಾವು ಸಿನಿಮಾ ರಾರಾಜಿಸಲಿದೆ. ಡಿಸೆಂಬರ್ ತಿಂಗಳಲ್ಲಿ ವಿಷ್ಣು ಅಗಲಿದ್ದರು. ಹಾಗಾಗಿ ಅವರ ಪುಣ್ಯತಿಥಿಯ ಪ್ರಯುಕ್ತ ಇದೇ ತಿಂಗಳು ಮತ್ತೆ ನಾಗರಹಾವು ಚಿತ್ರ ಬಿಡುಗಡೆಯಾಗುತ್ತಿದೆ.