Tag: Nagarahole

  • ಆನೆಮರಿ ರಕ್ಷಣೆಗೆ ಎಲ್ಲ ಕ್ರಮ ಕೈಗೊಳ್ಳುವ ಭರವಸೆ- ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ

    ಆನೆಮರಿ ರಕ್ಷಣೆಗೆ ಎಲ್ಲ ಕ್ರಮ ಕೈಗೊಳ್ಳುವ ಭರವಸೆ- ರಾಹುಲ್‌ ಗಾಂಧಿ ಪತ್ರಕ್ಕೆ ಸ್ಪಂದಿಸಿದ ಸಿಎಂ

    ಬೆಂಗಳೂರು: ನಾಗರಹೊಳೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಮರಿಯಾನೆಗೆ (Elephant) ಸೂಕ್ತ ಚಿಕಿತ್ಸೆ ನೀಡಿ ಎಂದು ಮನವಿ ಮಾಡಿದ್ದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ (Rahul Gandhi) ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai)  ಪ್ರತಿಕ್ರಿಯಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

    ಬುಧವಾರ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ನಾಗರಹೊಳೆ ಅಭಯಾರಣ್ಯಕ್ಕೆ (Nagarahole) ಭೇಟಿ ನೀಡಿದ್ದರು. ಈ ವೇಳೆ ತಾಯಿ ಆನೆಯೊಂದಿಗೆ ಮರಿಯಾನೆಯ ನರಳಾಟವನ್ನು ಕಂಡಿದ್ದಾರೆ. ಆ ಮರಿಯಾನೆಗೆ ಸೊಂಡಿಲು ಹಾಗೂ ಬಾಲದ ಗಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿಗೆ ರಾಹುಲ್‌ ಗಾಂಧಿ ಪತ್ರ ಬರೆದು, ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಮರಿಯಾನೆಯನ್ನು ರಕ್ಷಿಸಿ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ರೈತರ ಸಂಕಷ್ಟ, ಆತ್ಮಹತ್ಯೆ ಡಬಲ್‌ ಆಗಿದೆ – ಕಾಂಗ್ರೆಸ್‌ ವಾಗ್ದಾಳಿ

    ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿ ರಾಹುಲ್‌ ಗಾಂಧಿ ಅವರ ಕಾಳಜಿಯನ್ನು ಪ್ರಶಂಸಿದ್ದಾರೆ. ಈಗಾಗಲೇ ಈ ಬಗ್ಗೆ ಅಧಿಕಾರಿಗಳ ಜೊತೆಗೆ ಮಾತನಾಡಿ ಮರಿ ಆನೆಯ ಬಗ್ಗೆ ವಿಚಾರಿಸಲಾಗಿದೆ. ಕಾಡುಪ್ರಾಣಿಯ ದಾಳಿಯಿಂದಾಗಿ ಈ ರೀತಿಯ ತೊಂದರೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೂ ಗಾಯಾಳು ಆನೆಮರಿಯ ರಕ್ಷಣೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸೊಂಡಿಲು ಗಾಯದಿಂದ ಬಳಲುತ್ತಿರುವ ಮರಿಯಾನೆ- ಬೊಮ್ಮಾಯಿಗೆ ರಾಹುಲ್ ಗಾಂಧಿ ಪತ್ರ

    Live Tv
    [brid partner=56869869 player=32851 video=960834 autoplay=true]

  • ಗಜರಾಜನ ಸದ್ದಿಗೆ ಓಟಕಿತ್ತ ಹುಲಿಗಳು

    ಗಜರಾಜನ ಸದ್ದಿಗೆ ಓಟಕಿತ್ತ ಹುಲಿಗಳು

    ಮೈಸೂರು: ಈ ವಿಡಿಯೋ ನೋಡಿದರೆ ಆನೆಗಳಿಗೆ ಹುಲಿಗಳು ಹೆದುರುತ್ತವಾ ಎಂಬ ಪ್ರಶ್ನೆ ಕಾಡದೆ ಇರದು. ಅಷ್ಟೊಂದು ರೋಮಾಂಚನಕಾರಿಯಾದ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

    ಕಾಡಿನಲ್ಲಿ ಹುಲಿ ಹಾಗೂ ಆನೆಗಳ ನಡುವಿನ ಸಂಘರ್ಷದಿಂದಾಗಿ ಆನೆಗಳಿಗೆ ಹುಲಿಗಳು ಹೆದರುತ್ತಿವೆ ಎನ್ನಲಾಗಿದೆ. ಹುಲಿಗಳನ್ನು ಆನೆಗಳು ಹೆದರಿಸಿ ಓಡಿಸುತ್ತಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬಂಡೀಪುರ, ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದವರಿಗೆ ಈ ಅಪರೂಪದ ದೃಶ್ಯಗಳು ಸಿಗುತ್ತಿವೆ.

    ಸದ್ಯ ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಹುಲಿಗಳು ಆನೆಗಳನ್ನು ಬೇಟೆಯಾಡಿರುವ ಸಾಕಷ್ಟು ಪ್ರಕರಣಗಳು ನಡೆದಿವೆ. ಆದರೆ ಇದೀಗ ಆನೆಗಳೇ ರಾಜ ಗಾಂಭೀರ್ಯದಿಂದ ಹುಲಿಗಳನ್ನು ಓಡಿಸಿವೆ. ಈ ದೃಶ್ಯಗಳು ಎಂತಹವನ್ನಾದರೂ ರೋಮಾಂಚಿತವಾಗಿಸುತ್ತವೆ. ಪ್ರವಾಸಿಗರು ಈ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.

  • ನಾಗರಹೊಳೆ, ಬಂಡೀಪುರ ಸಫಾರಿ ಬಂದ್

    ನಾಗರಹೊಳೆ, ಬಂಡೀಪುರ ಸಫಾರಿ ಬಂದ್

    ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಹೊಳೆ, ಬಂಡೀಪುರ ಸಫಾರಿ ಬಂದ್ ಮಾಡಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

    ಜುಲೈ 10ರಿಂದ ಮುಂದಿನ ಆದೇಶದವರೆಗೆ ಹೊರ ಜಿಲ್ಲೆ/ರಾಜ್ಯ/ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಹೆಚ್.ಡಿ.ಕೋಟೆ ತಾಲೂಕಿನ ಎಲ್ಲ ಹೋಟೆಲ್, ರೆಸಾರ್ಟ್, ಲಾಡ್ಜ್, ಹೋಂ ಸ್ಟೇಗಳಲ್ಲಿ ವಸತಿ ಸೌಕರ್ಯ ನೀಡಕೂಡದು. ಮುಂದಿನ ಹೊರಭಾಗದ ಪ್ರವಾಸಿಗರ ಆನ್‍ಲೈನ್ ಅಥವಾ ಆಫ್‍ಲೈನ್ ಮುಂತಾದ ರೂಪದ ಬುಕ್ಕಿಂಗ್ ಮಾಡಿಕೊಳ್ಳಬಾರದು.

    ಸದ್ಯ ವಸತಿ ಸೌಕರ್ಯ ಪಡೆದುಕೊಂಡಿರುವ ಪ್ರವಾಸಿಗರನ್ನು ಬಲವಂತವಾಗಿ ಕಳಿಸಕೂಡದು. ಅವರ ಬುಕ್ಕಿಂಗ್ ಅವಧಿ ಮುಗಿಯವರೆಗೂ ಸೇವೆ ನೀಡತಕ್ಕದ್ದು ಎಂದು ಆದೇಶಿಸಿದೆ. ಪ್ರವಾಸಿ ಉದ್ದೇಶಕ್ಕೆ ಮುಂಗಡ ಬುಕ್ಕಿಂಗ್ ಮಾಡಿ ಆಗಮಿಸಿರದಿದ್ದಲ್ಲಿ ಸೂಕ್ತ ಮಾಹಿತಿ ನೀಡಿ ಬುಕ್ಕಿಂಗ್ ರದ್ದುಗೊಳಿಸಬೇಕು.

    ಹೆಚ್.ಡಿ.ಕೋಟೆ ತಾಲೂಕು ವ್ಯಾಪ್ತಿಯಲ್ಲಿ ಬರುವ ದಮ್ಮನಕಟ್ಟೆ, ಬಂಡೀಪುರ ಹಾಗೂ ನಾಗರಹೊಳೆ ಅಭಯಾರಣ್ಯಗಳಲ್ಲಿ ಬರುವ ಎಲ್ಲ ಸಫಾರಿಗಳಿಗೂ ಸಹ ಅನ್ವಯವಾಗುತ್ತದೆ. ಮುಂದಿನ ಆದೇಶದವರೆಗು ಇಡೀ ತಾಲೂಕಿನಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸುವಂತಿಲ್ಲ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

  • ಬಂಡೀಪುರದಲ್ಲಿ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಪ್ರತಾಪ್ ಸಿಂಹ

    ಬಂಡೀಪುರದಲ್ಲಿ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಪ್ರತಾಪ್ ಸಿಂಹ

    ಮೈಸೂರು: ಬಂಡೀಪುರ ಅಭಯಾರಣ್ಯಕ್ಕೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ. ಇಲ್ಲದಿದ್ದರೆ ಕಾಡಿಗೆ ಬೆಂಕಿ ಬೀಳಲು ಸಾಧ್ಯವೇ ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಅನುಮಾನ ವ್ಯಕ್ತಪಡಿಸಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶಗಳನ್ನು ನೋಡಿದ್ದೇನೆ. ಬಂಡಿಪುರದ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಯಾವ ಕಾರಣಕ್ಕೆ ಬೆಂಕಿ ತಗುಲಿತು ಅಂತ ತನಿಖೆಯಿಂದ ಪ್ರಕರಣದ ಸತ್ಯಾಂಶ ಹೊರ ಬರಬೇಕಿದೆ. ಉದ್ದೇಶಪೂರ್ವಕವಾಗಿ ಈ ಕೃತ್ಯ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಮರ, ಗಿಡಗಳು ಒಣಗಿರುವ ಕಾರಣಕ್ಕೆ ಒಂದು ಬೆಂಕಿ ಕಡ್ಡಿ ಇಟ್ಟರೆ ಇಡೀ ಕಾಡೇ ನಾಶ ಆಗುತ್ತದೆ ಎನ್ನುವ ಸಾಮಾನ್ಯ ಪ್ರಜ್ಞೆ ಇಲ್ಲದೇ ದುಷ್ಕರ್ಮಿಗಳು ಈ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ದೇಶದಲ್ಲಿ ಹುಲಿ ಸಂರಕ್ಷಣೆಗೆ ಸಾಕಷ್ಟು ಯೋಜನೆಗಳು ಜಾರಿಗೆ ಬಂದಿದೆ. ಅತಿ ಹೆಚ್ಚು ಹುಲಿ ಇರೋದು ಬಂಡೀಪುರ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ. ಇಲ್ಲೇ ಹುಲಿಗಳ ಸಂರಕ್ಷಣೆ ಮಾಡಲಿಲ್ಲ ಅಂದ್ರೆ ಹೇಗೆ? ಕಾರಿಗಾದ್ರೆ ಇನ್ಸೂರೆನ್ಸ್ ಇರುತ್ತೆ ಪ್ರಾಣಿಗಳಿಗೆ ಇಲ್ಲ. ಇಲ್ಲೇ ಈ ರೀತಿ ಸಂರಕ್ಷಣೆ ಮಾಡಿಲ್ಲ ಅಂದ್ರೆ ಬೇರೆಡೆ ಸಂರಕ್ಷಣೆ ಮಾಡಲು ಆಗುತ್ತಾ? ಇನ್ನು ಮುಂದೆ ಈ ರೀತಿಯ ಅವಘಡ ಎಂದೂ ಆಗಬಾರದು ಆ ರೀತಿಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

    ಈ ರೀತಿ ಅಗ್ನಿ ಅವಘಡಗಳು ನಡೆದಾಗ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಬಳಸಿ ಬೆಂಕಿ ನಂದಿಸಲು ಮುಂದಾಗಬೇಕು. ಹೆಲಿಕಾಪ್ಟರ್ ಮೂಲಕ ನೀರು ಅಥವಾ ಬೆಂಕಿ ಆರಿಸುವ ಸ್ಪ್ರೇಗಳನ್ನು ಬಳಸುವ ವ್ಯವಸ್ಥೆ ಮಾಡಬೇಕು. ಬಂಡೀಪುರ ಹಾಗೂ ನಾಗರಹೊಳೆ ಅರಣ್ಯವು ಅತಿ ಸೂಕ್ಷ್ಮ ಪ್ರದೇಶ, ಮಳೆಯ ತಾಣವೂ ಹೌದು. ಹಾಗೆಯೇ ಈ ಪ್ರದೇಶ ಪಶ್ಚಿಮ ಘಟ್ಟದ ಅರಣ್ಯಕ್ಕೆ ಸೇರುವುದರಿಂದ ಈ ಪ್ರದೇಶಗಳ ಬಗ್ಗೆ ನಾವು ಕಾಳಜಿ ವಹಿಸಬೇಕು. ಈ ವಿಚಾರದಲ್ಲಿ ನಾನು ಯಾರ ಮೇಲೂ ಆರೋಪ ಪ್ರತ್ಯಾರೋಪ ಮಾಡುವುದಿಲ್ಲ. ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದು ಪ್ರತಾಪ್ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv