Tag: nagartna

  • ವಿಜಿ ಮೊದಲ ಪತ್ನಿ ನಾಗರತ್ನಗೆ ಮಧ್ಯಂತರ ನಿರೀಕ್ಷಣಾ ಜಾಮೀನು

    ವಿಜಿ ಮೊದಲ ಪತ್ನಿ ನಾಗರತ್ನಗೆ ಮಧ್ಯಂತರ ನಿರೀಕ್ಷಣಾ ಜಾಮೀನು

    ಬೆಂಗಳೂರು: ನಟ ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಹಾಗೂ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನಗೆ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

    ನಗರದ ಸಿಟಿ ಸಿವಿಲ್ ಕೋರ್ಟ್ 50 ಸಾವಿರ ರೂ. ಬಾಂಡ್ ಷರತ್ತು ವಿಧಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಪ್ರಕರಣವನ್ನು ನ.12ಕ್ಕೆ ಮುಂದೂಡಿದೆ.

    ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ನಾಗರತ್ನ ಅವರ ಪರ ವಕೀಲರು ಇನ್ನು 2 ದಿನದಲ್ಲಿ ದೀಪಾವಳಿ ಹಬ್ಬ ಇರುವುದರಿಂದ ಮಕ್ಕಳೊಂದಿಗೆ ತಾಯಿ ಇರಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದರು. ಇದರ ಹಿನ್ನೆಲೆಯಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ನೀಡಿದೆ.

    ನ್ಯಾಯಾಲಯಕ್ಕೆ 2 ದಿನ ರಜೆ ಇದ್ದು ಕೋರ್ಟ್ ಆದೇಶ ಪೊಲೀಸರಿಗೆ ತಲುಪವರೆಗೂ ನಾಗರತ್ನ ಬಂಧನ ಮಾಡಬಹುದಾಗಿದೆ.

    ನಾಗರತ್ನ ನಾಪತ್ತೆ: ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ ಬಳಿಕ ನಾಗರತ್ನ ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದಾರೆ. ಗಿರಿನಗರ ಪೊಲೀಸರು ನಾಗರತ್ನಗಾಗಿ ತೀವ್ರ ಹುಡುಕಾಟ ನಡೆಸಿದ್ದರೂ ಬಂಧಿಸುವಲ್ಲಿ ವಿಫಲವಾಗಿದ್ದರು.

    ಕೀರ್ತಿಗೌಡ ಅವರು ತಮ್ಮ ಮೇಲೆ ನಡೆದ ಹಲ್ಲೆ ಸಂಬಂಧಿಸಿದಂತೆ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹಲ್ಲೆ ಮತ್ತು ಅಂಗಾಂಗ ಊನಗೊಳಿಸಿದ ಆರೋಪದಡಿ ಐಪಿಸಿ ಸೆಕ್ಷನ್ 326ರ ಅಡಿಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿತ್ತು. ಹಲ್ಲೆ ವಿಡಿಯೋ ಲಭ್ಯವಾಗುವುದಕ್ಕೂ ಮೊದಲು ಕೀರ್ತಿ ಅವರು ದೂರು ದಾಖಲಿಸಿದ್ದರು. ಆ ವೇಳೆ ನಾಗರತ್ನ ವಿರುದ್ಧ ಐಪಿಸಿ ಸೆಕ್ಷನ್ 306 ಮತ್ತು 309 ಅಡಿ ಮಾತ್ರ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ 326 ಸೆಕ್ಷನ್ ಹೆಚ್ಚುವರಿಯಾಗಿ ಹಾಕಲು ಪೊಲೀಸರು ನಿರ್ಧಾರ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇನ್ನೂ ಪತ್ತೆಯಾಗದ ನಾಗರತ್ನ- ಪೊಲೀಸರಿಂದ ತೀವ್ರ ಹುಡುಕಾಟ

    ಇನ್ನೂ ಪತ್ತೆಯಾಗದ ನಾಗರತ್ನ- ಪೊಲೀಸರಿಂದ ತೀವ್ರ ಹುಡುಕಾಟ

    ಬೆಂಗಳೂರು: ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೊದಲ ಪತ್ನಿ ನಾಗರತ್ನ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಹೀಗಾಗಿ ಪೊಲೀಸರು ನಾಗರತ್ನಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

    ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ನಾಗರತ್ನ ಪೊಲೀಸರ ಕಣ್ಣು ತಪ್ಪಿಸಿದ್ದು, ಇದೂವರೆಗೂ ಪತ್ತೆಯಾಗಿಲ್ಲ. ಹೀಗಾಗಿ ಗಿರಿನಗರ ಪೊಲೀಸರು ನಾಗರತ್ನಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಹೊಸೂರು ಸುತ್ತಮುತ್ತ ಕಳೆದ ರಾತ್ರಿಯೂ ನಾಗರತ್ನಗಾಗಿ ಗಿರಿನಗರ ಪೊಲೀಸರ ಹುಡುಕಾಡಿದ್ದಾರೆ.

    ಇಂದು ನಾಗರತ್ನ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸೋ ಸಾಧ್ಯತೆಗಳಿವೆ. ಜಾಮೀನು ರಹಿತ ಕೇಸ್ ಹಾಕಿದ್ದ ಕಾರಣಕ್ಕೆ ಯಾರ ಕೈಗೂ ಸಿಗದೆ ನಾಗರತ್ನ ಎಸ್ಕೇಪ್ ಆಗಿದ್ದಾರೆ. ಕೆಲವು ಮೂಲಗಳ ಪ್ರಕಾರ ನ್ಯಾಯಾಧೀಶರ ಮುಂದೆ ನಾಗರತ್ನ ಸರೆಂಡರ್ ಆಗೋ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದ್ರೆ ಸರೆಂಡರ್ ಆಗೋಕು ಮುಂಚೆಯೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಲಾಗುತ್ತಿದ್ದು, ಜಾಮೀನು ನಿರಾಕರಣೆ ಆದ ಪಕ್ಷದಲ್ಲಿ ನ್ಯಾಯಾಧೀಶರ ಮುಂದೆ ಸರೆಂಡರ್ ಆಗಲು ನಾಗರತ್ನ ಚಿಂತನೆ ನಡೆಸಿದ್ದಾರೆ ಎಂಬುದಾಗಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=5y-xIKjMyBI

    https://www.youtube.com/watch?v=lxI7qMTcO28