Tag: Nagasekhar

  • ಅವನು ಸಂಜು ಅವಳು ಗೀತಾ: `ಸಂಜು ಮತ್ತು ಗೀತಾ 2′ ಸಾಂಗ್ ರಿಲೀಸ್

    ಅವನು ಸಂಜು ಅವಳು ಗೀತಾ: `ಸಂಜು ಮತ್ತು ಗೀತಾ 2′ ಸಾಂಗ್ ರಿಲೀಸ್

    ವಿತ್ರ ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ, ನಾಗಶೇಖರ್ (Nagasekhar) ಅವರ ನಿರ್ದೇಶನದ ಈ ವರ್ಷದ  ಬಹುನಿರೀಕ್ಷಿತ ಚಿತ್ರ ಸಂಜು ವೆಡ್ಸ್ ಗೀತಾ-2. (Sanju Weds Geetha 2) ನಾಗಶೇಖರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ‘ಅವನು ಸಂಜು ಅವಳು ಗೀತಾ ಅವರಿಬ್ಬರು ಸೇರಲು ಸಂಗೀತ’ ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಅಲ್ಲಿ  ನಟ ಉಪೇಂದ್ರ, ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ನಿರ್ಮಾಪಕರ ಸಂಘದ  ಅಧ್ಯಕ್ಷ ಉಮೇಶ್ ಬಣಕಾರ್ ಕೂಡ ಹಾಜರಿದ್ದರು. ಕವಿರಾಜ್ ಅವರ ಸಾಹಿತ್ಯ ರಚನೆಯ ಈ ಹಾಡಿಗೆ ಶ್ರೀಧರ್ ವಿ.ಸಂಭ್ರಮ್ ಅದ್ಭುತವಾದ ಟ್ಯೂನ್ ಹಾಕಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ‌ ನಾಗಶೇಖರ್ ನಾನು ಈ ಸಿನಿಮಾ ಮಾಡಬೇಕೆಂದು ನಿರ್ಧರಿಸಿದಾಗ ಮೊದಲು ಹಾಡುಗಳನ್ನು ರೆಡಿ ಮಾಡಿಕೊಳ್ಳಬೇಕಾಗಿತ್ತು. ಒಟ್ಟು 6 ಸುಂದರ ಹಾಡುಗಳು ಚಿತ್ರದಲ್ಲಿದ್ದು, ಈ ಹಾಡಿನಲ್ಲಿ ಒಬ್ಬ  ಸೈನಿಕನ ಪ್ರೇಮಕಥೆಯನ್ನು ಹೇಳಿದ್ದೇನೆ. ಸ್ವಿಟ್ಜರ್ ಲ್ಯಾಂಡ್ ಸೈನಿಕನೊಬ್ಬ ತನ್ನ ರಾಣಿ ಸೆಲ್ವಿಕ್ ಳನ್ನು ತನ್ನ  ಹೃದಯದಲ್ಲಿಟ್ಟುಕೊಂಡು ಪ್ರೀತಿ ಮಾಡ್ತಿರ್ತಾನೆ. ಆತನಿಗೆ ತನ್ನ ಪ್ರೀತಿಯನ್ನು ಹೇಳಿಕೊಳ್ಳಲಿಕ್ಕೆ ಆಗ್ತಿರಲಿಲ್ಲ, ಏಕೆಂದರೆ ಆಕೆ ಮಹಾರಾಣಿ. ಆತನದು ಒನ್ ವೇ ಲವ್, ಒಮ್ಮೆ ಜರ್ಮನ್ ಸೈನಿಕರು ಸ್ವಿಟ್ಜರ್ ಲ್ಯಾಂಡ್ ಮೇಲೆ ಅಟ್ಯಾಕ್ ಮಾಡ್ತಾರೆ. ಆಗ ವೀರಾವೇಶದಿಂದ ಹೋರಾಡಿದ ಆ ಸೈನಿಕ ಅವರನ್ನು ಸೋಲಿಸಿ ವೀರಮರಣವನ್ನಪ್ಪುತ್ತಾನೆ, ತನ್ನ ರಾಣಿಗೆ ಆಕೆಯ ಕಿರೀಟವನ್ನು ಮತ್ತೆ ತಂದುಕೊಡುತ್ತಾನೆ. ಸಾಯೋ ಸಮಯದಲ್ಲಿ ಆತ ರಾಣಿಗೆ ತನ್ನ ರಕ್ತದಲ್ಲಿ “ಐ ಲವ್ ಯು ಫಾರೆವರ್” ಅಂತ ಒಂದು ಪತ್ರ ಬರೆಯುತ್ತಾನೆ. ಈ ಹಾಡು ಚಿತ್ರಕಥೆಯಲ್ಲಿ ಬಹಳ ಮುಖ್ಯವಾದ ಭಾಗವಾಗಿರುತ್ತದೆ. ಈ ಸಾಂಗ್ ನಲ್ಲಿ ಮೊದಲಬಾರಿಗೆ ಆಕ್ಷನ್ ಇಟ್ಟಿದ್ದೇನೆ ಎಂದು ಹೇಳಿದರು.

    ಶ್ರೀಧರ್ ವಿ.ಸಂಭ್ರಮ್ ಮಾತನಾಡಿ ‌ನಾಗಶೇಖರ್ ಅವರು ಈ ಥರದ ಕಥೆ ಇದೆ ಎಂದಾಗ ಖುಷಿಯಾಯ್ತು. ಅವರುಸುಲಭವಾಗಿ ಟ್ಯೂನ್ ಒಪ್ಪುವವರಲ್ಲ, ಆದರೆ ಈ ನಾನು ಈ ಟ್ಯೂನ್ ಕೊಟ್ಟ ಕೂಡಲೇ ಒಪ್ಪಿದರು. ಎಲ್ಲಾ ಹಾಡುಗಳು ಕಥೆಗೆ ಪೂರಕವಾಗಿ ಮೂಡಿಬಂದಿವೆ ಎಂದರು. ಸಾಹಿತಿ ಕವಿರಾಜ್ ಮಾತನಾಡಿ ಇದು ಸಿನಿಮಾ ಕೆಲಸ ಅನಿಸೋದೇ ಇಲ್ಲ. ನಮಗೆ ಅಷ್ಟು ಫ್ರೀಡಂ ಕೊಟ್ಟಿರ್ತಾರೆ. ನಾಗಶೇಖರ್ ಸಿನಿಮಾಗೆ ಹಾಡುಗಳನ್ನು ಬರೀಬೇಕಾದ್ರೆ ತಾನಾಗೇ ಒಳ್ಳೊಳ್ಳೆ ಪದಗಳು ಹುಟ್ಟಿಕೊಳ್ಳುತ್ತವೆ. ನಿರ್ದೇಶಕರು  ನಮಗೆಲ್ಲ ಒಂದು ರೆಸಾರ್ಟ್ ಬುಕ್ ಮಾಡಿ ಲಿರಿಕ್ ಬರೆಯಲು ಹೇಳಿದ್ದರು, ಈ ಚಿತ್ರದ ಸಾಂಗ್ ಬರೆಯಲು ಹೋದಾಗ ಏನೋ ಹೊಸ ಸ್ಪೂರ್ತಿ ಬರುತ್ತದೆ  ಎಂದು ಹೇಳಿದರು.

    ನಟ ಉಪೇಂದ್ರ ಮಾತನಾಡಿ ನನಗೆ ಮೊದಲು ಈ ಚಿತ್ರದ ಕ್ಲೈಮ್ಯಾಕ್ಸ್ ಏನು ಅಂತ ಗೊತ್ತಾಯ್ತು.ನಾನು ಅವತ್ತೇ ಹೇಳಿದೆ ಈ ಸಿನಿಮಾ ಸೂಪರ್ ಸಕ್ಸಸ್ ಅಂತ. ಈಗ ಈ ಹಾಡನ್ನು ನೋಡಿದಾಗ ಡಿಸೈಡ್ ಮಾಡಿದೆ. 100% ಹಿಟ್ ಆಗುತ್ತೆ ಎಂದು ಕಾನ್ಫಿಡೆಂಟಾಗಿ ಹೇಳಿದರು. ನಿರ್ಮಾಪಕ ಛಲವಾದಿ ಕುಮಾರ್,  ಮಾತನಾಡುತ್ತ  ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಮುಂದಿನ ತಿಂಗಳು ಬಿಡುಗಡೆಯಾಗುತ್ತಿದೆ. ಖಂಡಿತ ಹಿಟ್ ಆಗುತ್ತೆ ಎಂಬ ಬಂಬಿಕೆಯಿದೆ ಎಂದರು.  ನಾಯಕಿ ರಚಿತಾರಾಮ್ ಶೂಟಿಂಗ್ ನಲ್ಲಿದ್ದುದರಿಂದ ಬಂದಿರಲಿಲ್ಲ.

    ವಿತರಕ ಗೋಕುಲರಾಜ್ ಮಾತನಾಡಿ ನನಗೆ ಚಿತ್ರದ ಸ್ಯಾಂಪಲ್ಸ್  ತೋರಿಸಿದರು.‌ ತುಂಬಾ ಚೆನ್ನಾಗಿ ಬಂದಿದೆ. ಎಂದರು.   ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ ನಟ  ಶ್ರೀನಗರ ಕಿಟ್ಟಿ ಅವರು ಕಾಣಿಸಿಕೊಂಡಿದ್ದು, ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ಹೆಸರಾಂತ ಕಲಾವಿದರೇ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ನ  ಅದ್ಭುತವಾದ ಲೊಕೇಶನ್‌ಗಳಲ್ಲಿ 72 ದಿನಗಳ ಕಾಲ  ಚಿತ್ರದ ಚಿತ್ರೀಕರಣ ನಡೆಸಲಾಗಿದೆ.  ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ  ಸಮಸ್ಯೆ,  ಅಲ್ಲಿನ ಕಪ್ಪುಮಣ್ಣಿನ  ಕಥೆಯನ್ನು  ಈ ಚಿತ್ರದ ಮೂಲಕ ನಾಗಶೇಖರ್ ಹೇಳ ಹೊರಟಿದ್ದಾರೆ. ಈಗಿನ  ಕಾಲದ ಲವ್‌ಸ್ಟೋರಿ  ಜೊತೆಗೆ ಒಂದು ಸರ್‌ ಪ್ರೈಸ್ ಕೂಡ  ಈ ಚಿತ್ರದಲ್ಲಿದೆ.

     

    ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ  ಮೊದಲಬಾರಿಗೆ  ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ  ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ರಂಗಾಯಣ ರಘು, ಸಾಧು ಕೋಕಿಲ, ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಸೇರಿದಂತೆ  ಸಾಕಷ್ಟು  ಕಲಾವಿದರು ಈ ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.

  • ಸಂಜು ವೆಡ್ಸ್ ಗೀತಾ 2 : ಮಂಗ್ಲಿ ಹಾಡಿಗೆ ಸೊಂಟ ಬಳುಕಿಸಿದ ರಾಗಿಣಿ

    ಸಂಜು ವೆಡ್ಸ್ ಗೀತಾ 2 : ಮಂಗ್ಲಿ ಹಾಡಿಗೆ ಸೊಂಟ ಬಳುಕಿಸಿದ ರಾಗಿಣಿ

    ವಿತ್ರಾ  ಇಂಟರ್‌ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರು ನಿರ್ಮಿಸಿರುವ  ಕನ್ನಡದ ಬಹು ನಿರೀಕ್ಷಿತ  ಸಂಜು ವೆಡ್ಸ್  ಗೀತಾ-2  (Sanju Weds Geetha 2) ಚಿತ್ರದ  ಹಾಡಿನ ಬಿಡುಗಡೆ ಸಮಾರಂಭ ಅಂಬೇಡ್ಕರ್ ಭವನದ ಸುಂದರ ವೇದಿಕೆಯಲ್ಲಿ  ನೆರವೇರಿತು. ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅಭಿನಯದ ಈ ಹಾಡನ್ನು ಛಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಅವರು ಬಿಡುಗಡೆ ಮಾಡಿದರು. ಜೊತೆಗೆ ಬಸನಾಗಿ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು.

    ಇದೇ ವೇದಿಕೆಯಲ್ಲಿ ಉಪಸ್ಥಿತರಿದ್ದ ಛಲವಾದಿ  ಮಹಾಸಭಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತ ‘ನಮ್ಮ ಸಹೋದರ ಕುಮಾರ್ ಈಗ ಸಿನಿಮಾ ರಂಗದಲ್ಲಿ ನಿರ್ಮಾಪಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ, ತುಂಬಾ  ಖರ್ಚು ಮಾಡಿ ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ, ಅಲ್ಲದೆ ನಮ್ಮವರೇ ಆದ ನಾಗಶೇಖರ್  ಇದಕ್ಕೆ ನಿರ್ದೇಶನ ಮಾಡಿದ್ದಾರೆ. ಸಮಾಜದ ನ್ಯೂನತೆಗಳನ್ನು  ತೊಡೆದು ಹಾಕೋ ಕೆಲಸವನ್ನು ನಮ್ಮ  ಸಿನಿಮಾಗಳು ಮಾಡಲಿ, ಈ ಚಿತ್ರವು  ಅತ್ಯಂತ ಯಶಸ್ವಿಯಾಗಲಿ ಅಂತ ಹಾರೈಸುತ್ತೇನೆ ಎಂದು ಶುಭ ಹಾರೈಸಿದರು.   ನಾಗಶೇಖರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ನಿರೂಪಿಸಿದ್ದಾರೆ. ಈ ಚಿತ್ರದಲ್ಲಿ ಒಬ್ಬ ರೇಶ್ಮೆ ಬೆಳೆಗಾರನಾಗಿ  ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು,  ನಾಯಕಿಯಾಗಿ ರಚಿತಾರಾಮ್ ಅಭಿನಯಿಸಿದ್ದಾರೆ.

    ನಂತರ ನಡೆದ ಪತ್ರಿಕಾ ಗೋಷ್ಟಿಯಲ್ಲಿ  ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಡಿಪರೆಂಟ್ ಪ್ಯಾಟ್ರನ್‌ನಲ್ಲಿ ಮೂಡಿಬಂದಿರುವ, ರಾಗಿಣಿ ಅಭಿನಯದ  ಈ ಹಾಡನ್ನು  ನಮ್ಮ  ನಾರಾಯಣಸ್ವಾಮಿ ಅವರ ಕೈಲೇ  ರಿಲೀಸ್ ಮಾಡಿಸಬೇಕೆಂದಿತ್ತು, ಹಾಡು ಅದ್ಭುತವಾಗಿ ಮೂಡಿಬಂದಿದೆ. ಇದು ಅಪ್ಪಟ ಪ್ಯಾಮಿಲಿ ಸ್ಟೋರಿ, ಡಾ.ರಾಜ್‌ಕುಮಾರ್ ಅವರ ಸಿನಿಮಾಗಳನ್ನು ನೆನಪಿಸುತ್ತೆ, ರಚಿತಾರಾಮ್, ರಂಗಾಯಣ ರಘು, ಸಾಧುಕೋಕಿಲ, ತಬಲಾನಾಣಿ ಸಂಪತ್ ಹೀಗೆ ಎಲ್ಲಾ ದೊಡ್ಡ ದೊಡ್ಡ ಕಲಾವಿದರೇ ಅಭಿನಯಿಸಿದ್ದಾರೆ ಎಂದು ಹೇಳಿದರು.

    ನಿರ್ದೇಶಕ  ನಾಗಶೇಖರ್ ಮಾತನಾಡುತ್ತ ,  ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್  ಹೀಗೆ  ಅದ್ಭುತವಾದ ಲೊಕೇಶನ್‌ಗಳಲ್ಲಿ  72 ದಿನಗಳ ಕಾಲ  ಚಿತ್ರೀಕರಿಸಿದ್ದೇವೆ, ಇವತ್ತು ಇಂಥ ದೊಡ್ಡ ವೇದಿಕೆಯಲ್ಲಿ  ನಮ್ಮ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚಿತ್ರವೀಗ ರಿರೆಕಾರ್ಡಿಂಗ್ ಹಂತದಲ್ಲಿದ್ದು,  ಇನ್ನೊಂದು ತಿಂಗಳಲ್ಲಿ  ಚಿತ್ರದ ಫಸ್ಟ್ ಕಾಪಿ ಹೊರಬರಲಿದೆ, ಖುಷಿಯ ವಿಚಾರ  ಏನೆಂದರೆ  ಬಿಡುಗಡೆಗೂ ಮುನ್ನವೇ ಗೋಕುಲ್ ಪಿಲಂಸ್‌ನವರು  ನಮ್ಮ ಚಿತ್ರವನ್ನು ಖರೀದಿ ಮಾಡಿದ್ದಾರೆ. ರಿಲೀಸ್ ಡೇಟ್ ಅನೌನ್ಸ್ ಮಾಡಲು ನಾವಂತೂ  ರೆಡಿ  ಇದ್ದೇವೆ. ಚಿತ್ರದಲ್ಲಿ 5 ಹಾಡುಗಳಿದ್ದು, ಒಂದು ಹಾಡಿಗೆ ಲಹರಿ ಸಂಸ್ಥೆಯ ಅನುಮತಿ ಬೇಕಿದೆ, ನಮ್ಮ ಮಣ್ಣಿನ ಕಥೆ ಮಾಡಲು ಹೊರಟಾಗ ಶಿಡ್ಲಘಟ್ಟದಲ್ಲಿ ರೈತರು ಎದುರಿಸುತ್ತಿರೋ  ಸಮಸ್ಯೆ ಕಣ್ಣಮುಂದೆ ಬಂತು, ಅಲ್ಲಿನ ಕಪ್ಪುಮಣ್ಣಿನ  ಕಥೆಯನ್ನು  ಚಿತ್ರದಲ್ಲಿ  ಹೇಳಹೊರಟಿದ್ದೇವೆ, ಇದರಲ್ಲಿ ಎಲ್ಲವೂ ಹೊಸದಾಗಿರುತ್ತೆ. ನಿರ್ಮಾಪಕ ಕುಮಾರ್ ಅವರು ನೀಡಿದ  ಸಹಕಾರದಿಂದ ಚಿತ್ರದ ಇಷ್ಟು ಅದ್ದೂರಿಯಾಗಿ ಬಂದಿದೆ.  ಈಗಿನ  ಕಾಲದ ಲವ್‌ಸ್ಟೋರಿ  ಜೊತೆಗೆ ಒಂದು ಸರ್‌ ಪ್ರೈಸ್ ಕೂಡ  ಚಿತ್ರದಲ್ಲಿದೆ ಎಂದರು.

     

    ನಾಯಕ ಶ್ರೀನಗರ ಕಿಟ್ಟಿ ಮಾತನಾಡುತ್ತ  ಮೊದಲಬಾರಿಗೆ  ಒಬ್ಬ ರೇಶ್ಮೆ ಬೆಳೆಗಾರನಾಗಿ ಈ ಚಿತ್ರದಲ್ಲಿ  ಕಾಣಿಸಿಕೊಂಡಿದ್ದೇನೆ. ಇಂದು ಮೊದಲ ಹಾಡು ರಿಲೀಸಾಗಿದೆ. ನಾಗಶೇಖರ್ ಅವರ ಪ್ಯಾಟ್ರನ್ ಅಲ್ಲದೆ ಇರುವ ಈ ಹಾಡಲ್ಲಿ ನಾನು, ರಚಿತಾರಾಮ್, ರಾಗಿಣಿ ದ್ವಿವೇದಿ  ಅಭಿನಯಿಸಿದ್ದೇವೆ, ರಾಜ್ಯಾದ್ಯಂತ ಆಗಮಿಸಿರುವ ನಾಯಕರೆಲ್ಲರ ಸಮ್ಮುಖದಲ್ಲಿ ಈ ಹಾಡನ್ನು ರಿಲೀಸ್ ಮಾಡಿದ್ದೇವೆ ಎಂದು ಹೇಳಿದರು. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಶ್ರೀಧರ್ ವಿ. ಸಂಭ್ರಮ್ ಅವರ ಸಂಗೀತ ನಿರ್ದೇಶನ, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ, ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್‌ಕುಮಾರ್ ಸೇರಿದಂತೆ  ಸಾಕಷ್ಟು  ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ

  • ನಾಗಶೇಖರ್ ಚಿತ್ರಕ್ಕೆ ಬಾಲಿವುಡ್ ನಟಿ ಆವಂತಿಕಾ ದಸ್ಸಾನಿ ನಾಯಕಿ

    ನಾಗಶೇಖರ್ ಚಿತ್ರಕ್ಕೆ ಬಾಲಿವುಡ್ ನಟಿ ಆವಂತಿಕಾ ದಸ್ಸಾನಿ ನಾಯಕಿ

    ಗಾಗಲೇ ನಾಗಶೇಖರ್ (Nagasekhar) ನಿರ್ದೇಶನದ ‘ಸಂಜು ವೆಡ್ಸ್ ಗೀತಾ’ ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಅದರ ಹಿಂದೆಯೇ ನಾಗಶೇಖರ್ ತಮ್ಮ ಮುಂದಿನ ಪ್ರಾಜೆಕ್ಟನ್ನು ಅನೌನ್ಸ್ ಮಾಡಿದ್ದಾರೆ. ಕನ್ನಡ, ತೆಲುಗು, ತಮಿಳು ಸೇರಿದಂತೆ ೩ ಭಾಷೆಗಳಲ್ಲಿ, ಬಿಗ್ ಬಜೆಟ್ ನಲ್ಲಿ  ನಿರ್ಮಾಣವಾಗುತ್ತಿರುವ ಆ ಚಿತ್ರದ ಹೆಸರು ‘ಕ್ಯೂ’.

    ತಮ್ಮದೇ ಆದ ನಾಗಶೇಖರ್ ಮ್ಯಾಜಿಕ್ಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸುತ್ತಿರುವ ನಾಗಶೇಖರ್ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತದ ಜವಾಬ್ದಾರಿಯನ್ನೂ ಸಹ ತಾವೇ  ಹೊತ್ತಿದ್ದಾರೆ. ರಾಮ್ ಚಿರು ಲೈನ್ ಪ್ರೊಡ್ಯೂಸರ್ ಆಗಿರುವ  ಈ ಚಿತ್ರವನ್ನು ಭಾವನಾ ರವಿ ಅವರು ಪ್ರೆಸೆಂಟ್ ಮಾಡುತ್ತಿದ್ದಾರೆ.

     

    ಈ ಚಿತ್ರದ ಮೂಲಕ ನಾಗಶೇಖರ್ ಅವರು, ಮೈನೆ ಪ್ಯಾರ್ ಕಿಯಾ ಖ್ಯಾತಿಯ ನಟಿ ಭಾಗ್ಯಶ್ರೀ ಅವರ ಪುತ್ರಿ ಅವಂತಿಕಾ ದಸ್ಸಾನಿ  (Avantika Dassani) ಅವರನ್ನು ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ. ಉಪೇಂದ್ರ ಅಣ್ಣನ ಪುತ್ರ ನಿರಂಜನ್ ಚಿತ್ರದ ನಾಯಕ. ಮುಂದಿನ ತಿಂಗಳಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ಡಿ.ಜೆ. ಚಕ್ರವರ್ತಿ ಸಂಭಾಷಣೆ ರಚಿಸಿದ್ದಾರೆ.

  • ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಶೂಟಿಂಗ್‍ ಮುಕ್ತಾಯ

    ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಶೂಟಿಂಗ್‍ ಮುಕ್ತಾಯ

    ಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 (Sanju Weds Geetha 2) ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್ ಬಿಡಿಸುತ್ತಿರುವ ದೃಶ್ಯದೊಂದಿಗೆ ಮಾಧ್ಯಮಗಳ ಸಮ್ಮುಖದಲ್ಲಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮಾಡಲಾಯಿತು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಜೊತೆ  ರಮ್ಯಾ ಬದಲು ನಾಯಕಿಯಾಗಿ  ರಚಿತಾರಾಮ್ ಎಂಟ್ರಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಾಗಶೇಖರ್, ನಮ್ಮ ಚಿತ್ರ ವರ್ಷದ ಹಿಂದೆ ಶುರುವಾಗಿತ್ತು. ಶಿಡ್ಲಘಟ್ಟ,  ಸ್ವಿಟ್ಜರ್ ಲ್ಯಾಂಡ್, ಬೆಂಗಳೂರು ಸುತ್ತಮುತ್ತ ಓಟ್ಟು 72 ದಿನಗಳ ಕಾಲ ಆರು ಹಂತಗಳಲ್ಲಿ ಯಶಸ್ವಿಯಾಗಿ  ಶೂಟಿಂಗ್ ನಡೆಸಲಾಯಿತು, ನಿರ್ಮಾಪಕ ಕುಮಾರ್ ಅವರ ಸಹಕಾರದಿಂದ ಇದು ಸಾಧ್ಯವಾಯಿತು. ಕಿಟ್ಟಪ್ಪ, ರಚಿತಾರಾಮ್, ಸಾಧು ಕೋಕಿಲ, ತಬಲಾನಾಣಿ ಸೇರಿದಂತೆ ಬಿಗ್ ಸ್ಟಾರ್ ಕಾಸ್ಟ್ ಚಿತ್ರದಲ್ಲಿದೆ. ಈಗಾಗಲೇ ಎಡಿಟಿಂಗ್, ಡಬ್ಬಿಂಗ್ ಕೂಡ ನಡೆದಿದೆ.  ಸದ್ಯದಲ್ಲೇ  ಆಡಿಯೋ ರಿಲೀಸ್ ಮಾಡೋ ಪ್ಲಾನಿದೆ. ಇವತ್ತಿನ ಟೆಕ್ನಾಲಜಿಯ ಲವ್ ಸ್ಟೋರಿ,  ಜೊತೆಗೆ ಒಂದು ಸರ್ ಪ್ರೈಸ್ ಚಿತ್ರದಲ್ಲಿದೆ. ಇದರಲ್ಲೂ ನಾಯಕ ಬ್ಯೂಟಿ, ಐ ಲವ್ ಯೂ ಗೀತಾ ಅಂತಲೇ ಹೇಳ್ತಾನೆ ಎಂದರು.

    ನಂತರ ಚಿತ್ರದ ಕುರಿತಂತೆ ಮಾತನಾಡಿದ ನಿರ್ಮಾಪಕ ಛಲವಾದಿ ಕುಮಾರ್, ಕಳೆದ ಆಗಸ್ಟ್ ನಲ್ಲಿ ಶೂಟಿಂಗ್ ಶುರು ಮಾಡಿದ್ದೆವು. ಆಗಸ್ಟ್ 19ಕ್ಕೇ ಶೂಟಿಂಗ್ ಮುಗಿದಿದೆ.ನಮ್ಮ ಟೆಕ್ನಿಕಲ್ ಟೀಮ್ ಸಹಕಾರ ತುಂಬಾ ಚೆನ್ನಾಗಿತ್ತು. ಒಂದೇ ಒಂದು ಅನ್ ವಾಂಟೆಡ್ ಶಾಟ್ಸ್ ತೆಗೆದಿಲ್ಲ. ಹಾಸನ, ಹಾವೇರಿ ಹೀಗೆ ಬೇರೆ ಬೇರೆ ಊರುಗಳಲ್ಲಿ  ನಮ್ಮ ಚಿತ್ರದ ಮೂರು ಹಾಡುಗಳನ್ನು ರಿಲೀಸ್ ಮಾಡೋ ಪ್ಲಾನಿದೆ ಎಂದು ಹೇಳಿದರು. ನಾಯಕ ಕಿಟ್ಟಿ ಮಾತನಾಡುತ್ತ ಇವತ್ತಿಗೆ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಸದ್ಯದಲ್ಲೇ ಹಾಡುಗಳ ಮೂಲಕ ನಿಮ್ಮ ಮುಂದೆ ಬರುತ್ತೇವೆ‌. ಇಲ್ಲಿ ರೇಶ್ಮೆ ಬೆಳೆಗಾರನಾಗಿ ನಾನು ಕಾಣಿಸಿಕೊಂಡಿದ್ದೇನೆ ಎಂದು ಹೇಳಿದರು.

    ನಾಯಕಿ ರಚಿತಾರಾಂ ಮಾತನಾಡಿ ಈ ಸಿನಿಮಾದ ಜರ್ನಿ ತುಂಬಾ ಚೆನ್ನಾಗಿತ್ತು. ನನ್ನ ಪಾತ್ರದ ಡಬ್ಬಿಂಗ್ ಮಾಡಿಲ್ಲ, ಟೈಟಲ್ ಅದೇ ಇದ್ದರೂ ಇದು ಬೇರೆ ಥರದ ಕಥೆ. ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ಸಮಯದಲ್ಲಿ ನಮಗಾದ ಅನುಭವ ನೆನಪಲ್ಲುಳಿದಿದೆ. ನವೆಂಬರ್-ಡಿಸೆಂಬರ್ ವೇಳೆ ಆದರೂ ವೆದರ್ ನಮಗೆಲ್ಲೂ ತೊಂದರೆ ಕೊಡಲಿಲ್ಲ, ಸಿನಿಮಾ ವಿಜ್ಯುಯಲಿ ತುಂಬಾ ಚೆನ್ನಾಗಿ ಬಂದಿದೆ. ಅದಕ್ಕೆ ಸತ್ಯ ಹೆಗಡೆ ಅವರೇ ಕಾರಣ. ಮುಖ್ಯವಾಗಿ ನಾವು ಹೋದಲ್ಲೆಲ್ಲ ವಾತಾವರಣ ನಮಗೆ ಸಹಕಾರಿಯಾಗಿತ್ತು ಎಂದರು. ರೇಶ್ಮೆ ನೂಲಿಗೆ ಉತ್ತಮ ಬೆಲೆ ಸಿಗಬೇಕೆಂದು ಹೋರಾಡುವ  ನಮ್ಮ ಮಣ್ಣಿನ ಪ್ರೇಮಿಗಳ  ಪ್ರೇಮಕಾವ್ಯವನ್ನು ನಾಗಶೇಖರ್ ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ. ವಿಶೇಷ ಪಾತ್ರದಲ್ಲಿ ನಟ ಚೇತನ್ ಚಂದ್ರ, ರಾಗಿಣಿ ದ್ವಿವೇದಿ ಕಾಣಿಸಿಕೊಂಡಿದ್ದಾರೆ.

     

    ಛಾಯಾಗ್ರಾಹಕ‌ ಸತ್ಯ ಹೆಗ್ಡೆ ಮಾತನಾಡಿ ಒಂದು  ಸೂಪರ್ ಹಿಟ್ ಚಿತ್ರದ ಸೀಕ್ವೇಲ್ ಮಾಡುವಾಗ ಭಯ ಇದ್ದೇ ಇರುತ್ತೆ. ಶಿಡ್ಲಘಟ್ಟದಲ್ಲಿ ಶೂಟ್ ಮಾಡಿದ್ದು ನಮಗೆ ಸರ್ ಪ್ರೈಸ್ ಹಾಗೀ ಚಾಲೆಂಜ್ ಆಗಿತ್ತು. ಈ ಚಿತ್ರದಲ್ಲಿ ಕಥೆ ಹೇಳುವ ರೀತಿ ಚೇಂಜ್ ಮಾಡಿಕೊಂಡಿದ್ದೇವೆ. ಸ್ವಿಟ್ಜರ್ ಲ್ಯಾಂಡ್ ನ ಹನ್ನೊಂದು ಲೊಕೇಶನ್ ಗಳಲ್ಲಿ  ಚಿತ್ರೀಕರಣ ನಡೆಸಿದ್ದೇವೆ ಎಂದು ಹೇಳಿದರು. ಸಾಧು ಕೋಕಿಲ, ತಬಲಾನಾಣಿ, ಮೂಗು ಸುರೇಶ್ ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ ಚಿತ್ರದ ಕುರಿತಂತೆ ಮಾತನಾಡಿದರು. ಸಂಗೀತ ನಿರ್ದೇಶಕ‌  ಶ್ರೀಧರ ವಿ. ಸಂಭ್ರಮ್ ಚಿತ್ರದಲ್ಲಿ ಐದು ಸುಂದರ ಹಾಡುಗಳನ್ನು  ಮಾಡಿದ್ದು, ಸೋನು ನಿಗಂ, ಶ್ರೇಯಾ ಘೋಷಾಲ್, ಮಂಗ್ಲಿ ದನಿಯಾಗಿದ್ದಾರೆ.  ರಾಗಿಣಿ ದ್ವಿವೇದಿ, ಚೇತನ್ ಚಂದ್ರ, ರಂಗಾಯಣ ರಘು, ಸಾಧು ಕೋಕಿಲ , ತಬಲಾನಾಣಿ, ಗಿಚ್ಚಿಗಿಲಿಗಿಲಿ ವಿನೋದ್ ಅಲ್ಲದೆ ಖಳನಟ ಸಂಪತ್ ಕುಮಾರ್ ಸೇರಿದಂತೆ  ಹೆಸರಾಂತ ಕಲಾವಿದರ ತಾರಾಗಣ ಈ ಚಿತ್ರಕ್ಕಿದೆ. A 24 ಕ್ರಿಯೇಶನ್ಸ್ ಥ್ರೂ ಗೋಕುಲ್ ಫಿಲಂಸ್ ಈ ಚಿತ್ರವನ್ನು ಪ್ರಪಂಚದಾದ್ಯಂತ ರಿಲೀಸ್  ಮಾಡುತ್ತಿದೆ.

  • ಸಂಜು ವೆಡ್ಸ್ ಗೀತಾಗಾಗಿ ಭಾರೀ ಸೆಟ್ ಹಾಕಿದ್ದಾರೆ ನಾಗಶೇಖರ್

    ಸಂಜು ವೆಡ್ಸ್ ಗೀತಾಗಾಗಿ ಭಾರೀ ಸೆಟ್ ಹಾಕಿದ್ದಾರೆ ನಾಗಶೇಖರ್

    ಶ್ರೀನಗರ ಕಿಟ್ಟಿ (Srinagar Kitty) ಮತ್ತು ರಚಿತಾ ರಾಮ್ (Rachita Ram)  ಕಾಂಬಿನೇಷನ್ ನ ‘ಸಂಜು ವೆಡ್ಸ್ ಗೀತಾ’ ಸಿನಿಮಾದ ಶೂಟಿಂಗ್ ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ. ಈ ಸಿನಿಮಾಗಾಗಿಯೇ ಶಿಡ್ಲಘಟ್ಟ ಪ್ರದೇಶದ ಕೆಲ ಭಾಗಗಳಲ್ಲಿ ಸೆಟ್ ಹಾಕಲಾಗಿದೆಯಂತೆ. ಈ ಪ್ರದೇಶದಲ್ಲಿ ಸಿನಿಮಾದ ಕಥೆ ನಡೆಯುವುದರಿಂದ ಸೆಟ್ ಹಾಕಿ ಶೂಟ್ ಮಾಡುತ್ತಿದ್ದಾರಂತೆ ನಿರ್ದೇಶಕ ನಾಗಶೇಖರ್.

    ಚೇತನ್ ಕೂಡ ನಟನೆ

    ಆ ದಿನಗಳು ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿ ನೀಡಿರುವ ಅಹಿಂಸಾ ಚೇತನ್ (Ahimsa Chetan), ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗಿಂತ ಹೆಚ್ಚು ಹೋರಾಟಗಳಲ್ಲಿ ಭಾಗಿಯಾಗಿದ್ದರು. ಮತ್ತೆ ಅವರನ್ನು ಚಿತ್ರರಂಗಕ್ಕೆ ಕರೆತರುವ ಕೆಲಸಕ್ಕೆ ಮುಂದಾಗಿದ್ದಾರೆ ನಿರ್ದೇಶಕ ನಾಗಶೇಖರ್ (Nagasekhar). ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಚೇತನ್ ನಟಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಂಜು ವೆಡ್ಸ್ ಗೀತಾ 2 ತ್ರಿಕೋನ ಪ್ರೇಮಕಥೆಯನ್ನು ಹೊಂದಿದ್ದು, ನಾಯಕನಾಗಿ ಶ್ರೀನಗರ ಕಿಟ್ಟಿ ಮತ್ತು ನಾಯಕಿಯಾಗಿ ರಚಿತಾ ರಾಮ್ ಈಗಾಗಲೇ ಆಯ್ಕೆಯಾಗಿದ್ದಾರೆ. ಈ ಜೋಡಿ ನಡುವೆ ಮತ್ತೊಂದು ಮಹತ್ವದ ಪಾತ್ರವಿದ್ದು, ಅದನ್ನು ಚೇತನ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಚೇತನ್ ಅವರ ಜೊತೆ ನಾಗಶೇಖರ್ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರಂತೆ.

     

    ಹನ್ನೆರಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ (Sanju Weds Geetha 2) ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಚಿತಾ ರಾಮ್  ನಾಯಕಿಯಾಗಿದ್ದಾರೆ.

  • ‘ಸಂಜು ವೆಡ್ಸ್ ಗೀತಾ’ ರಿಲೀಸ್ ಆದ ದಿನವೇ ‘ಪಾರ್ಟ್ 2’ ಕೂಡ ಬಿಡುಗಡೆ

    ‘ಸಂಜು ವೆಡ್ಸ್ ಗೀತಾ’ ರಿಲೀಸ್ ಆದ ದಿನವೇ ‘ಪಾರ್ಟ್ 2’ ಕೂಡ ಬಿಡುಗಡೆ

    ಮೂರು ತಿಂಗಳ‌ ಹಿಂದೆ ಅದ್ದೂರಿಯಾಗಿ ಮುಹೂರ್ತ ಆಚರಿಕೊಂಡಿದ್ದ ನಾಗಶೇಖರ್ (Nagasekhar) ಅವರ  ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಚಿತ್ರದ ಚಿತ್ರೀಕರಣ ಇದೀಗ ಕನಕಪುರ ರಸ್ತೆಯ ಫಾರಂ ಹೌಸ್ ನಲ್ಲಿ ನಡೆಯುತ್ತಿದೆ. ಅಲ್ಲಿ  ತಮ್ಮ  10ನೇ ವರ್ಷದ ವೆಡ್ಡಿಂಗ್ ಆನಿವರ್ಸರಿ ಪ್ರಯುಕ್ತ ನಾಯಕ, ನಾಯಕಿಗೆ ಲಕ್ಷುರಿ ಕಾರ್ ಗಿಫ್ಟ್ ಕೊಡುವ ದೃಶ್ಯವನ್ನು ಛಾಯಾಗ್ರಾಹಕ ಸತ್ಯ ಹೆಗಡೆ ಸೆರೆ ಹಿಡಿಯುತ್ತಿದ್ದರು.

    ಚಿತ್ರೀಕರಣ ವೀಕ್ಷಣೆಗೆಂದು‌ ಮಾದ್ಯಮ ಮಿತ್ರರನ್ನು ಶೂಟಿಂಗ್ ಲೊಕೇಶನ್ ಗೆ  ಆಹ್ವಾನಿಸಿದ್ದ  ನಿರ್ದೇಶಕ ನಾಗಶೇಖರ್,  ಶೂಟಿಂಗ್ ಆರಂಭಿಸುವುದು ತಡವಾಗಿದ್ದಕ್ಕೆ ಕಾರಣ ನಮ್ಮ ಚಿತ್ರದ ಮತ್ತೋರ್ವ ನಿರ್ಮಾಪಕ, ಒಳ್ಳೆಯ ಸ್ನೇಹಿತ ಮಾಭಿ ನಾರಾಯಣ್ ಅಗಲಿದ್ದು. ಹಾಗಾಗಿ ಲೇಟ್ ಆಯ್ತು ಎಂದು  ಆರಂಭದಲ್ಲಿಯೇ ಮಾಹಿತಿ‌ ನೀಡಿದರು.

    ನಂತರ ಚಿತ್ರದ ಬಗ್ಗೆ ಮಾತನಾಡುತ್ತ  ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಸಿಕ್ಕ ಯಶಸ್ಸೇ ಭಾಗ ಎರಡು ಆಗಲು ಕಾರಣ. ಮೊದಲ ಹಂತದಲ್ಲಿ ಈಗಾಗಲೇ 5-6 ದಿನ ಶೂಟಿಂಗ್ ನಡೆದಿದೆ.‌ ಅಚಾನಕ್ಕಾಗಿ ಒಂದಷ್ಟು ಬದಲಾವಣೆಗಳಾದವು. ರಂಗಾಯಣ ರಘು, ಸಾಧು ಕೋಕಿಲ ಸುಂದರವಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನನ್ನ‌ ಈ ಕನಸಿಗೆ ಎಂಜಿನಿಯರಿಂಗ್ ಕ್ಲಾಸ್ ಮೆಟ್ ಕುಮಾರ್ ಜೊತೆಗಿದ್ದಾರೆ. ನನ್ನ  ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇನೆ.  ಶ್ರೀಧರ್ ಸಂಭ್ರಮ್ ಒಳ್ಳೆಯ ಟ್ಯೂನ್ ಕೊಟ್ಟಿದ್ದಾರೆ. ಲೀಡ್ ಪಾತ್ರಗಳಲ್ಲಿ ರಚಿತಾ ರಾಮ್ (Rachita Ram), ಶ್ರೀನಗರ ಕಿಟ್ಟಿ  (Srinagar Kitty)ಸಾಥ್ ನೀಡುತ್ತಿದ್ದಾರೆ.   ಇದೀಗ ಮೊದಲ ಹಂತದಲ್ಲಿ   5 ದಿನ ಮಾಡಿ ಬ್ರೇಕ್ ಕೊಟ್ಟು ಡಿಸೆಂಬರ್ 2 ರಿಂದ ಬೆಂಗಳೂರಲ್ಲಿ  ಡಿ. 9ರಿಂದ ಸ್ವಿಟ್ಜರ್ಲ್ಯಾಂಡ್ ನಲ್ಲಿ 12 ದಿನ ಮುಗಿಸಿ, ನಂತರ ಮುಂಬಯಿ, ಹೈದರಾಬಾದ್ ಶೂಟಿಂಗ್ ಮಾಡಿ, 2024ರ ಏಪ್ರಿಲ್ 1ರಂದು ಚಿತ್ರವನ್ನು  ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಕಾರಣ ಅದೇ ದಿನ ಮೊದಲ ಭಾಗ ಬಿಡುಗಡೆಯಾಗಿತ್ತು. ಜೊತೆಗೆ ಇದೇ ಡಿಸೆಂಬರ್ 29 ನಮ್ಮ ನಿರ್ಮಾಪಕರಾದ ಚಲವಾದಿ ಕುಮಾರ್ ಅವರ ಹುಟ್ಟುಹಬ್ಬ. ಅಂದು ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡುತ್ತೇವೆ’ ಎಂದು ಹೇಳಿದರು.

    ಸಂಗೀತ ನಿರ್ದೇಶಕ‌  ಶ್ರೀಧರ ವಿ. ಸಂಭ್ರಮ ಮಾತನಾಡಿ ನಾನು ಈ ಸಿನಿಮಾಗೆ ಮ್ಯೂಸಿಕ್ ಮಾಡ್ತಾ  ಇರೋದೇ  ಅದೃಷ್ಟ ಎನ್ನಬಹುದು. ಚಿತ್ರದಲ್ಲಿ 5  ಹಾಡುಗಳಿದ್ದು, ಕವಿರಾಜ ಸಾಹಿತ್ಯ ಒಳ್ಳೆ ಸಾಹಿತ್ಯ ಬರೆದಿದ್ದಾರೆ ಎಂದರು. ರಂಗಾಯಣ ರಘು ಮಾತನಾಡಿ ನನ್ನ ಪಾತ್ರದ ಬಗ್ಗೆ ಗೊತ್ತಿಲ್ಲ.  ಒಳ್ಳೆಯ ನಿರ್ಮಾಪಕರು ನಮಗೆ ಸಿಕ್ಕಿದ್ದಾರೆ‌ ಎಂದರು.  ಸಾಧುಕೊಕಿಲ ಮಾತನಾಡಿ  ಇದರಲ್ಲಿ ಒಳ್ಳೆಯ ಪಾತ್ರ ಮಾಡ್ತಾ  ಇದ್ದೇನೆ. ನಾಗಶೇಖರ್ ಜೊತೆ ಕೆಲಸ ಮಾಡಿದ್ದು  ಯಾವಾಗಲೂ ಮರೆಯಲ್ಲ. ಸಂಜು ವೆಡ್ಸ್ ಗೀತಾ ಇಂದ ಜೊತೆಗಿದ್ದೇನೆ ಎಂದರು.

    ನಿರ್ಮಾಪಕ ಚಲವಾದಿ ಕುಮಾರ್‌ ಮಾತನಾಡಿ,  ನಾಗಶೇಖರ್ ನಾನು ಇಂಜಿನಿಯರಿಂಗ್ ಕ್ಲಾಸ್ ಮೆಟ್ಸ್. ಸ್ಕ್ರಿಪ್ಟ್ ನಲ್ಲೂ ನಾನು ಜೊತೆ ಕುಳಿತಿದ್ದೆ. ಸಿನಿಮಾ ತುಂಬಾ ಚನ್ನಾಗಿ ಬರ್ತಾ ಇದೆ.‌ ಇನ್ನು  ಮುಂದೆಯೂ ಒಳ್ಳೆಯ ಸಿನಿಮಾ‌ ಮಾಡುವೆ ಎಂದು ಹೇಳಿದರು. ಛಾಯಾಗ್ರಾಹಕ ಸತ್ಯ ಹೆಗಡೆ ಮಾತನಾಡಿ ೧೪ ವರ್ಷದ ಹಿಂದೆ ಮಾಡಿದ್ವಿ. ಈಗ ಟೆಕ್ನಾಲಜಿ  ಬದಲಾಗಿದೆ.‌ ಈ‌ ಸಿನಿಮಾನ ಇನ್ನೂ ಚೆನ್ನಾಗಿ ಮಾಡಬೇಕಿದೆ ಎಂದು ಹೇಳಿದರು.

    ನಾಯಕ ಶ್ರೀನಗರ ಕಿಟ್ಟಿ ಮಾತನಾಡಿ ನಾವೆಲ್ಲ ಸೇರಿ  ಅಷ್ಟೇ ಪ್ರೀತಿಯಿಂದ  ಈ ಸಿನಿಮಾ ಮಾಡ್ತಾ ಇದ್ದೇವೆ ಕಥೆಯೂ ಮುದ್ದಾಗಿ ಬಂದಿದೆ.‌ ನಿರ್ಮಾಪಕರ ಹುಟ್ಟುಹಬ್ಬದಂದು ಟ್ರೇಲರ್ ಬಿಡುಗಡೆ ಮಾಡುತ್ತೇವೆ ಎಂದರು.

     

    ನಾಯಕಿ ರಚಿತಾ ರಾಮ್ ಮಾತನಾಡಿ ನನ್ನ ಪಾತ್ರದ ಹೆಸರು ಗೀತಾ, ತುಂಬಾ ಶೇಡ್ಸ್ ಇರುವಂಥ  ಪಾತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು.  ನಾಲ್ಕು ದಿನದಿಂದ  ಶೂಟ್ ನಲ್ಲಿ ಭಾಗಿಯಾಗಿದ್ದು ಒಳ್ಳೆ ಅನುಭವ ನೀಡ್ತಾ ಇದೆ.  ಕಿಟ್ಟಿ ಅವರ ಜೊತೆ ಒಂದೆರಡು ಶಾಟ್ ಮಾಡಿದ್ದೇನೆ. ಒಳ್ಳೆ ಎನರ್ಜಿ ಚಿತ್ರದಲ್ಲಿದೆ ಎಂದರು. ನಾಗಶೇಖರ್ ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ  ನಾಗಶೇಖರ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

  • ಸಂಜು ವೆಡ್ಸ್ ಗೀತಾ 2: ಅಹಿಂಸಾ ಚೇತನ್ ಪಾತ್ರವೇನು?

    ಸಂಜು ವೆಡ್ಸ್ ಗೀತಾ 2: ಅಹಿಂಸಾ ಚೇತನ್ ಪಾತ್ರವೇನು?

    ದಿನಗಳು ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಎಂಟ್ರಿ ನೀಡಿರುವ ಅಹಿಂಸಾ ಚೇತನ್ (Ahimsa Chetan), ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಿಗಿಂತ ಹೆಚ್ಚು ಹೋರಾಟಗಳಲ್ಲಿ ಭಾಗಿಯಾಗಿದ್ದರು. ಮತ್ತೆ ಅವರನ್ನು ಚಿತ್ರರಂಗಕ್ಕೆ ಕರೆತರುವ ಕೆಲಸಕ್ಕೆ ಮುಂದಾಗಿದ್ದಾರೆ ನಿರ್ದೇಶಕ ನಾಗಶೇಖರ್. ಇವರ ನಿರ್ದೇಶನದಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಚೇತನ್ ನಟಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಂಜು ವೆಡ್ಸ್ ಗೀತಾ 2 ತ್ರಿಕೋನ ಪ್ರೇಮಕಥೆಯನ್ನು ಹೊಂದಿದ್ದು, ನಾಯಕನಾಗಿ ಶ್ರೀನಗರ ಕಿಟ್ಟಿ ಮತ್ತು ನಾಯಕಿಯಾಗಿ ರಚಿತಾ ರಾಮ್ ಈಗಾಗಲೇ ಆಯ್ಕೆಯಾಗಿದ್ದಾರೆ. ಈ ಜೋಡಿ ನಡುವೆ ಮತ್ತೊಂದು ಮಹತ್ವದ ಪಾತ್ರವಿದ್ದು, ಅದನ್ನು ಚೇತನ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಚೇತನ್ ಅವರ ಜೊತೆ ನಾಗಶೇಖರ್ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರಂತೆ.

    ಹನ್ನೆರೆಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ (Sanju Weds Geetha 2) ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್  ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-2 ಚಿತ್ರದ ಮುಹೂರ್ತ (Muhurta) ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಹಿಂದಿನ ಚಿತ್ರದ  ಎವಿ ಪ್ರದರ್ಶನ ಹಾಗೂ ಆ ಚಿತ್ರದ ಟೈಟಲ್ ಟ್ರ್ಯಾಕ್ ಗೆ ನೃತ್ಯ ಮಾಡುವ ಮೂಲಕ ಮೆಲುಕು ಹಾಕಲಾಯಿತು.

    ನಾಗಶೇಖರ್ (Nagasekhar) ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ವರ್ಣರಂಜಿತವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಗಶೇಖರ್, ನಾನು ಸೀರಿಯಲ್ ಗಳಲ್ಲಿ ಆಕ್ಟ್ ಮಾಡ್ತಿರುವಾಗ, ಕಪ್ಪಗಿರುವ ಈ ಹುಡುಗನನ್ನು ಕರೆದು ತಮ್ಮ ನಿರ್ದೇಶನದ ನಿನಗಾಗಿ ಚಿತ್ರದಲ್ಲಿ ಅವಕಾಶ ನೀಡಿದವರು  ಎಸ್ ಮಹೇಂದರ್,  ಅವರು ಇಂದು ನಮ್ಮ ಚಿತ್ರದ ಟೀಸರ್ ರಿಲೀಸ್ ಮಾಡಿದ್ದು  ತುಂಬಾ ಖುಷಿಯಾಗಿದೆ.  ಈ ಸಿನಿಮಾವನ್ನು  5 ವರ್ಷಗಳ ಹಿಂದೆಯೇ  ಪ್ರಾರಂಭಿಸಬೇಕಾಗಿತ್ತು. ಆದರೆ ನಾನು ತೆಲುಗು, ತಮಿಳು ಕಡೆ ಹೋಗಿದ್ದರಿಂದ ಆಗಲಿಲ್ಲ.  ರಮ್ಯ ಅವರು ಈ ಚಿತ್ರದಲ್ಲೂ ಆಕ್ಟ್ ಮಾಡಬೇಕಿತ್ತು. ಅದರೆ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರ ಬದಲಾಗಿ ಈ ಪಾತ್ರಕ್ಕೆ ಮೊದಲು ನನ್ನ ಕಣ್ಣಮುಂದೆ ಬಂದದ್ದೇ ರಚಿತಾ ರಾಮ್, ತಮ್ಮ ಅದ್ಭುತವಾದ ಅಭಿನಯದ ಮೂಲಕವೇ ಅವರು ಹೆಸರು‌ ಮಾಡಿದವರು. ನನ್ನ ಚಿತ್ರದಲ್ಲಿ ಈ‌ ಪಾತ್ರಕ್ಕೆ ಜೀವ ತುಂಬುವುದೇ ಅಭಿನಯ. ಇನ್ನು ಹಿಂದಿನ ಚಿತ್ರದಲ್ಲಿದ್ದ ಬಹುತೇಕರು ಇದರಲ್ಲೂ ಇರುತ್ತಾರೆ. ನಾನು ಚಿತ್ರದಲ್ಲಿ ಕಥೆಯ ಜೊತೆ ಹಾಡುಗಳಿಗೂ  ಜಾಸ್ತಿ ಪ್ರಾಮುಖ್ಯತೆ ಕೊಡುತ್ತೇನೆ. ಶ್ರೀಧರ್ ಸಂಭ್ರಮ್ ಅವರಿಗೆ ರಾತ್ರಿ 12 ಗಂಟೆಗೆ ಕಾಲ್ ಮಾಡಿ ಹಾಡುಗಳ ಸನ್ನಿವೇಶ ವಿವರಿಸಿದ್ದೇನೆ. ಅವರು ಸೂಪರ್ ಸಾಂಗ್ಸ್ ಕೊಟ್ಟಿದ್ದಾರೆ. ಅದ್ಭುತವಾದ 5 ಹಾಡುಗಳು ಮೂಡಿಬಂದಿವೆ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದರು.

     

    ಸಂಗೀತ ನಿರ್ದೇಶಕ ಶ್ರೀಧರ್ ವಿ. ಸಂಭ್ರಮ್, ಛಾಯಾಗ್ರಾಹಕ ಸತ್ಯ ಹೆಗಡೆ, ಸಾಹಿತಿ ಕವಿರಾಜ್   ಚಿತ್ರತಂಡದಲ್ಲಿ ಇರಲಿದ್ದಾರೆ.

  • ಭೀಮಾ ಕೋರೇಗಾಂವ ಚಿತ್ರದಲ್ಲಿ ದೀಪಿಕಾ ಪಡುಕೋಣೆ: ನಿರ್ದೇಶಕರು ಹೇಳಿದ್ದೇನು?

    ಭೀಮಾ ಕೋರೇಗಾಂವ ಚಿತ್ರದಲ್ಲಿ ದೀಪಿಕಾ ಪಡುಕೋಣೆ: ನಿರ್ದೇಶಕರು ಹೇಳಿದ್ದೇನು?

    ತ್ತೀಚೆಗಷ್ಟೆ ‘ಸಂಜು ವೆಡ್ಸ್ ಗೀತಾ-2’ ಚಿತ್ರಕ್ಕೆ ಚಾಲನೆ ನೀಡಿದ್ದ ನಿರ್ದೇಶಕ ನಾಗಶೇಖರ್ (Nagasekhar),  ಅದರ ಬೆನ್ನಲ್ಲೇ ಮತ್ತೊಂದು  ಬಿಗ್ ಪ್ರಾಜೆಕ್ಟ್   ಚಿತ್ರಕ್ಕೆ ಕೈ  ಹಾಕಿದ್ದಾರೆ. ರೆವಲ್ಯೂಷನರಿ ಸಬ್ಜೆಕ್ಟ್ ಇಟ್ಟುಕೊಂಡು ನೈಜ ಘಟನೆಯನ್ನು ತೆರೆಯ ಮೇಲೆ ಹೇಳಹೊರಟಿದ್ದಾರೆ. ಅದಕ್ಕೆ ಕೊಟ್ಟಿರುವ ಹೆಸರು ಭೀಮಾ ಕೋರೇಗಾಂವ (Bhima Koregaon). ನಾಗಶೇಖರ್ ಮೂವೀಸ್ ಹಾಗೂ ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿ ಛಲವಾದಿ ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಹು ಸೂಕ್ಷ್ಮ ವಿಚಾರ ಇಟ್ಟುಕೊಂಡು  ಮಾಡುತ್ತಿರುವ ಚಲನಚಿತ್ರ ಇದಾಗಿದ್ದು,  ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದ ಶೀರ್ಷಿಕೆಯನ್ನು  ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿಗಳು  ಬಿಡುಗಡೆ ಮಾಡಿದರು.

    ನಿರ್ಮಾಪಕ ಛಲವಾದಿ ಕುಮಾರ್ ಮಾತನಾಡುತ್ತ ‘ಸಂಜು ವೆಡ್ಸ್ ಗೀತಾ’  ಚಿತ್ರದ ಬಗ್ಗೆ ಚರ್ಚೆ ನಡೆಸುವಾಗ ಈ ವಿಷಯ ಪ್ರಸ್ತಾಪಕ್ಕೆ ಬಂತು. ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಈ ಘಟನೆಯನ್ನು ನಮ್ಮ ಜನರಿಗೆ ತಿಳಿಸಬೇಕು ಎಂದು ನಿರ್ಧರಿಸಿ ನಿರ್ಮಾಣಕ್ಕೆ ಮುಂದಾಗಿದ್ದೇನೆ ಎಂದರು. ನಂತರ ನಾಗಶೇಖರ್ ಮಾತನಾಡಿ ‘1818ರ ಜ.1 ರಂದು ನಡೆದ ರೆವಲ್ಯೂಷನರಿ ಸಬ್ಜೆಕ್ಟ್. ಶೋಷಿತರ  ಬದುಕಿಗೆ ಬೆಳಕು ಹಚ್ಚುವ ಕೆಲಸಕ್ಕೆ ದೀಪ ಹಚ್ಚುವ ಮೂಲಕ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ಇದು ಬಹಳ ದೊಡ್ಡ ವಿಚಾರವಾಗಿದೆ ಎಂದರು.

    ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡುತ್ತಾ, ‘ಪೂನಾ ನದಿಯ ದಡದಲ್ಲಿ ಡಿ.31ರಿಂದ ಜ.1ರವರೆಗೆ ಸ್ವಾಭಿಮಾನಿ ಬದುಕಿಗೋಸ್ಕರ. ನಡೆದ ಘನಘೋರ ಯುದ್ಧ . 2ನೇ ಬಾಜೀರಾಯನ ಘೋರ ಕೃತ್ಯಗಳನ್ನು ವಿರೋಧಿಸಿ ಮೆಹರ್ ಸೈನಿಕರು ನಡೆಸಿದ ಯುದ್ದ, ಭಾರತದ ನೆಲದಲ್ಲಿ ಬಾಜೀರಾಯ ಅಸ್ಪೃಶ್ಯರನ್ನು ಹೇಗೆ ನಡೆಸಿಕೊಂಡಿದ್ದ, ಯಾವ ರೀತಿ ನೋಡಿಕೊಂಡಿದ್ದ, ಯಾವ ಉದ್ದೇಶಕ್ಕೆ ಈ ಯುದ್ಧ ನಡೆಯಿತು ಅನ್ನುವುದನ್ನು ಈ ಸಿನಿಮಾದಲ್ಲಿ ದಾಖಲು ಮಾಡಲಾಗುತ್ತೆ’ ಎಂದರು.

    ಮುಖ್ಯ ಅತಿಥಿಯಾಗಿದ್ದ ಚಿಂತಕ ಗೋಪಾಲ್ ಮಾತನಾಡುತ್ತಾ, ‘ಅಸಮಾನತೆಯ ವಿರುದ್ಧ ನಡೆದ ಹೋರಾಟವಿದು. 500 ಜನ ಸೈನಿಕರು, 30  ಸಾವಿರ ಪೇಶ್ವೆ ಬಾಜೀರಾಯನ ಸೈನಿಕರನ್ನು 12 ಗಂಟೆಗಳಲ್ಲಿ ಧ್ವಂಸ ಮಾಡಿದ ಘಟನೆ. ಮೆಹರ್ಸ್ ಅಂದರೆ ಗುಲಾಮರು. ಬಾಜೀರಾಯ  ಅಸ್ಪೃಶ್ಯರ ವಿರುದ್ಧ  ಕಠಿಣ  ಕಾನೂನುಗಳನ್ನು ಜಾರಿಗೆ ತಂದಿದ್ದ. ಇದನ್ನು ವಿರೋಧಿಸಿ ನಡೆದ ಯುದ್ದವಿದು. ಹಾಲಿವುಡ್ ಶೈಲಿಯ ಸಿನಿಮಾ ಆಗಲಿದೆ‌’ ಎಂದರು. ಉಳಿದಂತೆ ನೆಹರು ಓಲೇಕಾರ್, ಚಕ್ರವರ್ತಿ ಚಂದ್ರಚೂಡ್, ಈ ಘಟನೆಯ ಬಗ್ಗೆ ಒಂದಷ್ಟು ಮಾಹಿತಿ‌ ನೀಡಿದರು.

     

    ಕೊನೆಯಲ್ಲಿ ಮಾತು ಮುಂದುವರೆಸಿದ ನಾಗಶೇಖರ್, ‘ಈ ಸಿನಿಮಾ ಮಾಡುವಂತೆ ನನಗೆ ಪ್ರೇರೇಪಿಸಿದ್ದು ರೈಟರ್ ಚಂದ್ರಚೂಡ್ (Chakravarty Chandrachud),  ಜಾಸ್ತಿ ಬಂಡವಾಳ ಕೇಳುತ್ತೆ. ಚಿತ್ರದ ಬಜೆಟ್ 120 ಕೋಟಿ ಆಗಬಹುದು. ನಿರ್ಮಾಪಕ ಕುಮಾರ್ ಎಷ್ಟೇ ಆದರೂ ಖರ್ಚು ಮಾಡಲು ರೆಡಿ ಇದ್ದಾರೆ. ಕನ್ನಡದ ಸೂಪರ್ ಸ್ಟಾರ್ ಒಬ್ಬರು ಚಿತ್ರದಲ್ಲಿ ಅಭಿನಯಿಸಲು ಒಪ್ಪಿದ್ದಾರೆ. ನಟಿ ದೀಪಿಕಾ ಪಡುಕೋಣೆ (Deepika Padukone)ಅವರನ್ನು ನಾಯಕಿ ಪಾತ್ರಕ್ಕೆ ಕರೆತರುವ ಉದ್ದೇಶವಿದೆ. 54 ಕೋಟಿ ಶೋಷಿತರಿಗೆ ಬೆಳಕಾಗುವ ಕಥಾನಕವಿದು. ಚಂದ್ರಚೂಡ್ ನೇತೃತ್ವದಲ್ಲಿ ಬರಹಗಾರರ ತಂಡ ಕಟ್ಟಿ ಭಾಗ-1,  ಭಾಗ-2 ಮಾಡುವ ಯೋಚನೆಯಿದೆ. ಪ್ರೀ ಪ್ರೊಡಕ್ಷನ್ ಗೆ  365 ದಿನ ತೆಗೆದುಕೊಂಡಿದ್ದೇನೆ. ಈ ಕಥೆಯನ್ನು ಕಣ್ಣಿಗೆ ಕಟ್ಟುವ ಹಾಗೆ ಮನಸಿಗೆ ಮುಟ್ಟುವ ಹಾಗೆ ಕಟ್ಟಿಕೊಡುವ ಜವಾಬ್ದಾರಿ ನನ್ನ ಮೇಲಿದೆ’ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸಂಜು ವೆಡ್ಸ್ ಗೀತಾ -2’ ಚಿತ್ರಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ‘ಸಂಜು ವೆಡ್ಸ್ ಗೀತಾ -2’ ಚಿತ್ರಕ್ಕೆ ಚಾಲನೆ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ನ್ನೆರೆಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ (Sanju Weds Geetha 2) ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ  ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್  ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್  ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-2 ಚಿತ್ರದ ಮುಹೂರ್ತ (Muhurta) ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಹಿಂದಿನ ಚಿತ್ರದ  ಎವಿ ಪ್ರದರ್ಶನ ಹಾಗೂ ಆ ಚಿತ್ರದ ಟೈಟಲ್ ಟ್ರ್ಯಾಕ್ ಗೆ ನೃತ್ಯ ಮಾಡುವ ಮೂಲಕ ಮೆಲುಕು ಹಾಕಲಾಯಿತು.

    ನಾಗಶೇಖರ್ (Nagasekhar) ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ವರ್ಣರಂಜಿತವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಗಶೇಖರ್, ನಾನು ಸೀರಿಯಲ್ ಗಳಲ್ಲಿ ಆಕ್ಟ್ ಮಾಡ್ತಿರುವಾಗ, ಕಪ್ಪಗಿರುವ ಈ ಹುಡುಗನನ್ನು ಕರೆದು ತಮ್ಮ ನಿರ್ದೇಶನದ ನಿನಗಾಗಿ ಚಿತ್ರದಲ್ಲಿ ಅವಕಾಶ ನೀಡಿದವರು  ಎಸ್ ಮಹೇಂದರ್,  ಅವರು ಇಂದು ನಮ್ಮ ಚಿತ್ರದ ಟೀಸರ್ ರಿಲೀಸ್ ಮಾಡಿದ್ದು  ತುಂಬಾ ಖುಷಿಯಾಗಿದೆ.  ಈ ಸಿನಿಮಾವನ್ನು  5 ವರ್ಷಗಳ ಹಿಂದೆಯೇ  ಪ್ರಾರಂಭಿಸಬೇಕಾಗಿತ್ತು. ಆದರೆ ನಾನು ತೆಲುಗು, ತಮಿಳು ಕಡೆ ಹೋಗಿದ್ದರಿಂದ ಆಗಲಿಲ್ಲ.  ರಮ್ಯ ಅವರು ಈ ಚಿತ್ರದಲ್ಲೂ ಆಕ್ಟ್ ಮಾಡಬೇಕಿತ್ತು. ಅದರೆ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರ ಬದಲಾಗಿ ಈ ಪಾತ್ರಕ್ಕೆ ಮೊದಲು ನನ್ನ ಕಣ್ಣಮುಂದೆ ಬಂದದ್ದೇ ರಚಿತಾ ರಾಮ್, ತಮ್ಮ ಅದ್ಭುತವಾದ ಅಭಿನಯದ ಮೂಲಕವೇ ಅವರು ಹೆಸರು‌ ಮಾಡಿದವರು. ನನ್ನ ಚಿತ್ರದಲ್ಲಿ ಈ‌ ಪಾತ್ರಕ್ಕೆ ಜೀವ ತುಂಬುವುದೇ ಅಭಿನಯ. ಇನ್ನು ಹಿಂದಿನ ಚಿತ್ರದಲ್ಲಿದ್ದ ಬಹುತೇಕರು ಇದರಲ್ಲೂ ಇರುತ್ತಾರೆ. ನಾನು ಚಿತ್ರದಲ್ಲಿ ಕಥೆಯ ಜೊತೆ ಹಾಡುಗಳಿಗೂ  ಜಾಸ್ತಿ ಪ್ರಾಮುಖ್ಯತೆ ಕೊಡುತ್ತೇನೆ. ಶ್ರೀಧರ್ ಸಂಭ್ರಮ್ ಅವರಿಗೆ ರಾತ್ರಿ 12 ಗಂಟೆಗೆ ಕಾಲ್ ಮಾಡಿ ಹಾಡುಗಳ ಸನ್ನಿವೇಶ ವಿವರಿಸಿದ್ದೇನೆ. ಅವರು ಸೂಪರ್ ಸಾಂಗ್ಸ್ ಕೊಟ್ಟಿದ್ದಾರೆ. ಅದ್ಭುತವಾದ 5 ಹಾಡುಗಳು ಮೂಡಿಬಂದಿವೆ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದರು.

    ಶ್ರೀನಗರ ಕಿಟ್ಟಿ (Srinagar Kitty), ರಚಿತಾ ರಾಂ (Rachita Ram) ಅಭಿನಯದ ಹಾಡಿನೊಂದಿಗೆ ಚಿತ್ರೀಕರಣ ಪ್ರಾರಂಭಿಸಲಾಯಿತು. ಮುಹೂರ್ತ ದೃಶ್ಯಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕ್ಲಾಪ್ ಮಾಡಿದರೆ, ನಾಗಶೇಖರ್ ಅವರ ತಾಯಿ ವರಲಕ್ಷ್ಮಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಈ ಚಿತ್ರವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುವ ಮೂಲಕ  ನಾಗಶೇಖರ್, ರಾಜರತ್ನನಿಗೆ ಗೌರವ ಸಲ್ಲಿಸಿದ್ದಾರೆ.

    ನಿರ್ಮಾಪಕ ಚಲುವಾದಿ ಕುಮಾರ್ ಮಾತನಾಡಿ ಹಿಙದಿನ ಚಿತ್ರಗಳಲ್ಲಿ  ನಾಗಶೇಖರ್ ಅವರ ವರ್ಕ್ ನೋಡಿದ್ದೇನೆ. ಈ ಚಿತ್ರದ ಬಗ್ಗೆ 5 ವರ್ಷಗಳ ಹಿಂದೆಯೇ ಮಾತಾಡಿದ್ವಿ, ಕಥೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ 12 ವರ್ಷವಾದರೂ ಹಾಡು, ಕಥೆ ಜೀವಂತವಾಗಿದೆ ಎಂದರೆ ಅದಕ್ಕಿರುವ ಜನಪ್ರಿಯತೆ ಕಾರಣ ಎಂದರು. ಮತ್ತೊಬ್ಬ‌ ನಿರ್ಮಾಪಕ ನಾರಾಯಣ ಎಂ.ಸಿ. ಮಾತನಾಡಿ ನನಗೆ ಬಹಳ  ಇಷ್ಟವಾದ ಟೀಂ ಇದು. ಮೊದಲ ಚಿತ್ರಕ್ಕಿಂತ ಈ ಚಿತ್ರ, ಹೆಚ್ಚು ಜನಪ್ರಿಯವಾಗುವ ನಂಬಿಕೆಯಿದೆ ಎಂದರು.

    ನಾಯಕಿ ರಚಿತಾ ಮಾತನಾಡಿ ಲಾಂಚ್ ಇವೆಂಟ್ ಇಷ್ಟೊಂದು ಗ್ರ್ಯಾಂಡ್ ಆಗಿ ಮಾಡಿದ್ದಾರೆ. ನಾಗಶೇಖರ್ ಅವರ  ಜೊತೆ ಫಸ್ಟ್ ಟೈಮ್ ಕೆಲಸ ಮಾಡುತ್ತಿದ್ದೇನೆ. ಚಿತ್ರದ ಬಗ್ಗೆ ಅವರಿಗೆ ಡೆಡಿಕೇಶನ್ ಜಾಸ್ತಿ, ಅದನ್ನು ಫೋಟೋಶೂಟ್ ಸಮಯದಲ್ಲೇ ನೋಡಿದೆ. ನನ್ನ  ಪಾತ್ರಕ್ಕೆ ನ್ಯಾಯ ಒದಗಿಸುತ್ತೇನೆ ಎಂದರು. ನಾಯಕ ಕಿಟ್ಟಿ ಮಾತನಾಡಿ ನಾಗಶೇಖರ್  ಚಿತ್ರದ ಕಥೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ನನ್ನ ಲ್ಯಾಂಡ್ ಮಾರ್ಕ್ ಸಿನಿಮಾಗಳಲ್ಲಿ ಸಂಜು ವೆಡ್ಸ ಗೀತಾ ಒಂದು. ಅದ್ಭುತವಾದ ಪ್ರೇಮಕಥೆಯೊಂದಿಗೆ  ಮತ್ತೆ ಬರುತ್ತೇವೆ.

    ಮೊದಲ ಚಿತ್ರಕ್ಕಿಂತ ಈ ಚಿತ್ರದ ಪಾತ್ರ ಇನ್ನೂ ಚೆನ್ನಾಗಿದೆ. ರಚಿತಾ ರಾಮ್ ಅವರ ಜೊತೆ ಮೊದಲಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದೇನೆ ಎಂದರು. ನಂತರ ಸಂಗೀತ ನಿರ್ದೇಶಕ ಶ್ರೀಧರ್ ವಿ. ಸಂಭ್ರಮ್, ಛಾಯಾಗ್ರಾಹಕ ಸತ್ಯ ಹೆಗಡೆ, ಸಾಹಿತಿ ಕವಿರಾಜ್  ಚಿತ್ರದ ಕುರಿತಂತೆ ಮಾತನಾಡಿದರು. ಅತಿಥಿಯಾಗಿ ಆಗಮಿಸಿದ್ದ  ಅಭಿಷೇಕ್ ಅಂಬರೀಶ್ ಮಾತನಾಡಿ ನಾಗಶೇಖರ್  ಅದ್ಭುತವಾದ ತಂತ್ರಜ್ಞ ಎಂದು ಹೇಳಿದರು.

     

    ಮಂಜುನಾಥ್ ಐಎಎಸ್. ನಿರ್ಮಾಪಕ ಕಾರ್ತಿಕ್ ಗೌಡ, ನಟ ಆದಿತ್ಯ, ಮಾಜಿ ಎಂ.ಎಲ್.ಎ.ಬಾಲರಾಜ್ ನಾಗತಿಹಳ್ಳಿ, ಚಂದ್ರಶೇಖರ್,  ಚೇಂಬರ್ ಅಧ್ಯಕ್ಷ ಭಾ.ಮಾ. ಹರೀಶ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ನಿರ್ಮಾಪಕ ಜಾಕ್ ಮಂಜು ಅವರು ಈ ಚಿತ್ರವನ್ನು ವಿಶ್ವಾದ್ಯಂತ  ರಿಲೀಸ್ ಮಾಡಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಜು ವೆಡ್ಸ್ ಗೀತಾ2 ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆ ತಮನ್ನಾ

    ಸಂಜು ವೆಡ್ಸ್ ಗೀತಾ2 ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆ ತಮನ್ನಾ

    ಮಿಲ್ಕಿ ಬ್ಯೂಟಿ ತಮನ್ನಾ ಮತ್ತೆ ಕನ್ನಡ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ನಾಗಶೇಖರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ತಮನ್ನಾ (Tamannaah) ಹಾಡೊಂದಕ್ಕೆ ಸೊಂಟ ಬಳುಕಿಸಲಿದ್ದಾರಂತೆ. ಅದೊಂದು ಸ್ಪೆಷಲ್ ಹಾಡು ಆಗಿರುವುದರಿಂದ ತಮನ್ನಾ ಅವರನ್ನು ಕೇಳಿದ್ದಾರಂತೆ ನಿರ್ದೇಶಕರು. ತಮನ್ನಾ ಮತ್ತು ನಾಗಶೇಖರ್ ಇಬ್ಬರ ನಡುವೆ ಮಾತುಕತೆ ಆಗಿದೆ ಎಂದು ಹೇಳಲಾಗುತ್ತಿದೆ.

    ರಮ್ಯಾ ಬದಲು ರಚಿತಾ ನಾಯಕಿ

    ಶ್ರೀನಗರ ಕಿಟ್ಟಿ (Srinagar Kitty) ಮುಖ್ಯಭೂಮಿಕೆಯಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದಲ್ಲಿ ಅಚ್ಚರಿಯ ತಾರಾಬಳಗ ಇರಲಿದೆ ಎಂದು ಈ ಹಿಂದೆ ನಿರ್ದೇಶಕ ನಾಗಶೇಖರ್ (Nagashekhar) ತಿಳಿಸಿದ್ದರು. ಈ ಸಿನಿಮಾದಲ್ಲಿ ಕಿಟ್ಟಿ ನಾಯಕನಾದರೆ, ನಾಯಕಿಯ ಆಯ್ಕೆ ನಡೆಯಬೇಕಿದೆ. ಈಗಾಗಲೇ ರಚಿತಾ ರಾಮ್ (Rachita Ram) ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿರುವುದರಿಂದ, ಬಹುತೇಕ ಅವರೇ ಖಚಿತ ಎಂದು ಹೇಳಲಾಗುತ್ತಿತ್ತು. ಇದೀಗ ಚಿತ್ರತಂಡವೇ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿ ರಚಿತಾ ರಾಮ್ ಅವರನ್ನು ಖಚಿತ ಪಡಿಸಿದೆ.

    ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆಗಳಾದ ಪ್ರಕಾಶ್ ರೈ (Prakash Rai) ಮತ್ತು ರಮ್ಯಾಕೃಷ್ಣ (Ramya Krishna) ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಯಾರು, ಯಾವ ಪಾತ್ರಗಳನ್ನು ಮಾಡಲಿದ್ದಾರೆ ಎಂದು ನಾಗಶೇಖರ್ ಹೇಳದೇ ಇದ್ದರೂ, ಇಬ್ಬರೂ ನಟಿಸುವುದು ಪಕ್ಕಾ ಎಂದಿದ್ದಾರೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆಯ ಕೆಲಸ ಪ್ರಾರಂಭವಾಗಿದೆ.  ಇದನ್ನೂ ಓದಿ:ಮಗಳ ವಯಸ್ಸಿನ ನಟಿ ಜೊತೆ ಅನಿಲ್ ಕಪೂರ್ ಲಿಪ್‌ಲಾಕ್- ನೆಟ್ಟಿಗರಿಂದ ಛೀಮಾರಿ

    ಈ ಸಿನಿಮಾದ ಕುರಿತು ಹತ್ತಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ ನಿರ್ದೇಶಕ ನಾಗಶೇಖರ್. ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾದರೆ, ರಮ್ಯಾ ನಾಯಕಿ. ಆದರೆ, ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮುಂದುವರೆದರೆ, ರಮ್ಯಾ ನಾಯಕಿಯಾಗಿ ನಟಿಸುತ್ತಿಲ್ಲ. ಅದರ ಬದಲು ರಚಿತಾ ರಾಮ್ ಅವರಿಗೆ ಮಣೆ ಹಾಕಿದ್ದಾರೆ ನಾಗಶೇಖರ್.

     

    ಮೊದಲ ಭಾಗದ ಕಥೆಯನ್ನು ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿ ಹೇಳಿದ್ದರು. ಅವರು ತನಿಖೆ ಮಾಡಿದ್ದ ಕೇಸ್ ಅನ್ನು ಆಧರಿಸಿದ ಸಿನಿಮಾ ಅದಾಗಿತ್ತು. ಪಾರ್ಟ್ 2 ಸಿನಿಮಾಗೆ ಕಥೆ ಹೇಳಿದ್ದು ಕನ್ನಡದ ಒಬ್ಬ ಸೂಪರ್ ಸ್ಟಾರ್ ಅಂತೆ. ಈ ಕುರಿತು ನಾಗಶೇಖರ್ ಮಾತನಾಡಿದ್ದಾರೆ. ಆದರೆ, ಆ ಸ್ಟಾರ್ ಯಾರು ಎನ್ನುವ ಕುತೂಹಲವನ್ನು ಅವರು ಬಿಟ್ಟುಕೊಟ್ಟಿಲ್ಲ. ಸ್ಟಾರ್ ನಟರೊಬ್ಬರು ಹೇಳಿದ ಕಥೆಯನ್ನೇ ಡೆವಲಪ್‌ ಮಾಡಿದ್ದೇನೆ ಎಂದಿದ್ದಾರೆ ನಾಗಶೇಖರ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]