Tag: Nagathihalli Chandrashekhar

  • Landmarks of Sandalwood: ‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ

    Landmarks of Sandalwood: ‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ

    – ಕನ್ನಡ ಚಿತ್ರರಂಗಕ್ಕೆ 90 ವರ್ಷಗಳ ಸಂಭ್ರಮ

    ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ 90 ವರ್ಷಗಳ ಸಂಭ್ರಮ. ಈ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವುದಕ್ಕಾಗಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯು ಅಪರೂಪದ ಕಾಫಿ ಟೇಬಲ್ ಪುಸ್ತಕವನ್ನು ಬಿಡುಗಡೆ ಮಾಡಿದೆ.‌

    ಭಾನುವಾರ ಬೆಂಗಳೂರಿನ ರಾಜಾಜಿನಗದರದಲ್ಲಿ ನಡೆದ ‘Landmarks of Sandalwood- ಚಂದನವನದ ಚಿಲುಮೆಗಳು’ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ, ನಿರ್ದೇಶಕ ಟಿ.ಎಸ್.ನಾಗಭರಣ, ನಾಗತಿಹಳ್ಳಿ ಚಂದ್ರಶೇಖರ್, ನಟ ಶ್ರೀಮುರುಳಿ ಸೇರಿದಂತೆ ಕನ್ನಡ ಸಿನಿರಂಗದ ಅನೇಕ ಗಣ್ಯರು ಭಾಗಿಯಾಗಿದ್ದರು.

     

    ಪತ್ರಕರ್ತ ಎಸ್.ಶ್ಯಾಮ್ ಪ್ರಸಾದ್ ಹಾಗೂ ಪಬ್ಲಿಕ್ ಟಿವಿ ಸಿನಿಮಾ ಬ್ಯೂರೋದ ಮುಖ್ಯಸ್ಥ ಡಾ. ಶರಣು ಹುಲ್ಲೂರು ಅವರು ಈ ಚಂದನವನದ ಚಿಲುಮೆಗಳು ಪುಸ್ತಕವನ್ನ ಬೆರೆದಿದ್ದಾರೆ. 90 ವರ್ಷದ ಇತಿಹಾಸದಲ್ಲಿ ಮೈಲಿಗಲ್ಲು ಸಾಧಿಸಿರೋ 90 ಚಿತ್ರಗಳ ಬಗ್ಗೆ ಈ ಪುಸ್ತಕದಲ್ಲಿ ವಿಸ್ತೃತವಾದ ವಿವರಣೆಗಳನ್ನ ದಾಖಲಿಸಿದ್ದಾರೆ.

  • `ಬನ್- ಟೀ’‌ ಫಿಲ್ಮ್‌ ಟ್ರೈಲರ್ ರಿಲೀಸ್, ಹೊಸಬರ ಕನಸಿಗೆ ನಾಗತಿಹಳ್ಳಿ ಚಂದ್ರಶೇಖರ್ ಸಾಥ್

    `ಬನ್- ಟೀ’‌ ಫಿಲ್ಮ್‌ ಟ್ರೈಲರ್ ರಿಲೀಸ್, ಹೊಸಬರ ಕನಸಿಗೆ ನಾಗತಿಹಳ್ಳಿ ಚಂದ್ರಶೇಖರ್ ಸಾಥ್

    ಯುವ ಸಿನಿಮೋತ್ಸಾಹಿ ತಂಡವೊಂದು ಸೇರಿ ಮಾಡಿರುವ `ಬನ್ ಟೀ’ (Bun Tea Film) ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಟ್ರೈಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಶಯ ಕೋರಿದ್ದಾರೆ. ಆನ್ ಲೈನ್ ಎಡಿಟರ್ ಆಗಿ ಗುರುತಿಸಿಕೊಂಡಿರುವ `ಖಾಕಿ’ ಸಿನಿಮಾ ಬರಹಗಾರದಲ್ಲಿ ಕೆಲಸ ನಿರ್ವಹಿಸಿರುವ ಉದಯ್ ಕುಮಾರ್ ಪಿಎಸ್ ಎರಡನೇ ಹೆಜ್ಜೆ ಇದು. `ಕಾರ್ಮೋಡ ಸರಿದು’ ಎಂಬ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಉದಯ್ `ಬನ್- ಟೀ’ ಎಂಬ ವಿಭಿನ್ನ ಶೀರ್ಷಿಕೆ ಮೂಲಕ ಮತ್ತೊಮ್ಮೆ ಚಿತ್ರರಸಿಕರನ್ನು ರಂಜಿಸಲು ಸಜ್ಜಾಗಿದ್ದಾರೆ.

    ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekar) ಮಾತನಾಡಿ, ಉದಯ್ ಹೇಳಿದ ಕಥೆ ಇಷ್ಟವಾಯ್ತು. ಹಂಚಿ ತಿನ್ನುವ ಅಗತ್ಯವಿರುವ ಈ ದಿನಗಳಲ್ಲಿ ಹಂಚಿ ಉಣ್ಣದೇ ಬರೀ ಬಾಚಿಕೊಳ್ಳುವ ಮನಸ್ಥಿತಿ, ಅದರಿಂದ ಉಂಟಾಗುವ ಸಾಮಾಜಿಕ ತೊಂದರೆಗಳ ಸುತ್ತ ಕಥೆ ಸಾಗುತ್ತದೆ. ಉದಯ್ ನಿರ್ಮಾಪಕರು ಸಿಕ್ತಾರೆ ಅಂತಾ ಫ್ಯಾಷನ್ ಗೋಸ್ಕರ್ ಸಿನಿಮಾ ಮಾಡಿಲ್ಲ. ಆಳವಾಗಿ ತಾಂತ್ರಿಕವಾಗಿ ಚಿತ್ರ ಮಾಡಿದ್ದಾರೆ. ತಮ್ಮದೇ ಟೆಂಟ್ ಸಿನಿಮಾ ಸೂಲ್ಕ್ ಪ್ರತಿಭೆಗಳು ಸೇರಿ `ಬನ್- ಟೀ’ ಚಿತ್ರ ಮಾಡಿದ್ದು, ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು. ಇದನ್ನೂ ಓದಿ: ʻಪಡ್ಡೆಹುಲಿʼ ಶ್ರೇಯಸ್‌ಗೆ ಪ್ರಿಯಾಂಕಾ ಕುಮಾರ್‌ ನಾಯಕಿ

    ನಿರ್ದೇಶಕ ಉದಯ್ (Uday) ಮಾತನಾಡಿ, `ಬನ್- ಟೀ’ (Bun Tea) ನಿರ್ದೇಶಕನಾಗಿ ನನ್ನ ಎರಡನೇ ಸಿನಿಮಾ. ಆನ್ ಲೈನ್ ಎಡಿಟರ್ ಆಗಿ ಕೆಲಸ ಮಾಡ್ತಿದ್ದು, `ಬನ್- ಟೀ’ ಏಳು ವರ್ಷದ ಕನಸು. ಸಿನಿಮಾ ಅವಕಾಶಕ್ಕಾಗಿ ಗಾಂಧಿನಗರ ಸುತ್ತುವಾಗ `ಬನ್ ಟೀ’ ನಮ್ಮ ಊಟ. ಟೈಟಲ್ ಡಿಫರೆಂಟಾಗಿದೆ. ಶೀರ್ಷಿಕೆ ವಿಭಿನ್ನವಾಗಿ ಇದ್ದರೇ ಕುತೂಹಲ ಮೂಡುತ್ತದೆ. ಟೈಟಲ್ ಬಗ್ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಕಷ್ಟಪಟ್ಟು ಓದು ಅನ್ನುವ ಬದಲು ಇಟ್ಟಪಟ್ಟು ಓದು ಅನ್ನೋದನ್ನು ಯಾಕೆ ಹೇಳುವುದಿಲ್ಲ ಅನ್ನೋದೇ ಚಿತ್ರದ ಒಟ್ಟಾರೆ ಸಾರಾಂಶ ಎಂದು ತಿಳಿಸಿದರು.

    ನೈಜ ಘಟನೆಯಿಂದ ಸ್ಫೂರ್ತಿ ಪಡೆದು ರೂಪಿಸಿರುವ `ಬನ್ ಟೀ’ ಸಿನಿಮಾಗೆ ಉದಯ್ ಕಥೆ ಬರೆದು ನಿರ್ದೇಶನದ ಜೊತೆಗೆ ಸಂಕಲನ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಮೌರ್ಯ, ತನ್ಮಯ್, ಉಮೇಶ್ ಸಕ್ಕರೆನಾಡು, ಶ್ರೀದೇವಿ, ನಿಶಾ, ಗುಂಡಣ್ಣ, ಸುನಿಲ್ ನಟಿಸಿರುವ ಈ ಚಿತ್ರಕ್ಕೆ ರಾಧಾಕೃಷ್ಣ ಬ್ಯಾನರ್ ಆರ್ ಕೇಶವ ನಿರ್ಮಾಣ ಮಾಡಿದ್ದು, ರಾಜರಾವ್ ಅಂಚಲ್ಕರ್ ಕ್ಯಾಮೆರಾ, ಪ್ರದ್ಯೋತನ್ ಸಂಗೀತ ಸಿನಿಮಾಕ್ಕಿದೆ. ಪ್ರಾಮಿಸಿಂಗ್ ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ `ಬನ್ ಟೀ’ ಸಿನಿಮಾವನ್ನು ಏಪ್ರಿಲ್ ತಿಂಗಳಾಂತ್ಯಕ್ಕೆ ತೆರೆಗೆ ತರುವ ಪ್ರಯತ್ನದಲ್ಲಿದೆ ಚಿತ್ರತಂಡ.

  • ನೀನಾಸಂ ಮಂಜು ‘ಕನ್ನೇರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ನಾಗತಿಹಳ್ಳಿ ಚಂದ್ರಶೇಖರ್

    ನೀನಾಸಂ ಮಂಜು ‘ಕನ್ನೇರಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ನಾಗತಿಹಳ್ಳಿ ಚಂದ್ರಶೇಖರ್

    ‘ಮೂಕಹಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ನೀನಾಸಂ ಮಂಜು ಮತ್ತೊಂದು ಚಿತ್ರ ಕೈಗೆತ್ತಿಕೊಂಡು ಚಿತ್ರೀಕರಣವನ್ನೂ ಕಂಪ್ಲೀಟ್ ಮಾಡಿದ್ದಾರೆ. ಆ ಚಿತ್ರದ ಹೆಸರೇ ‘ಕನ್ನೇರಿ’. ನೈಜ ಘಟನೆ ಆಧಾರಿತ ಈ ಚಿತ್ರ ಫಸ್ಟ್ ಲುಕ್ ಮೂಲಕ ಪ್ರೇಕ್ಷಕರೆದುರು ಬಂದಿದೆ. ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ‘ಕನ್ನೇರಿ’ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ‘ಕನ್ನೇರಿ’ ಮಹಿಳಾ ಪ್ರಧಾನ ಚಿತ್ರ. ಚಿತ್ರಕ್ಕೆ ನೈಜ ಘಟನೆಯೇ ಪ್ರೇರಣೆ ಎನ್ನುತ್ತಾರೆ ನಿರ್ದೇಶಕ ನೀಸಾಸಂ ಮಂಜು. ಅದು ಬೇರಾವ ಘಟನೆ ಅಲ್ಲ ಕೊಡಗಿನಲ್ಲಿ ಭಾರೀ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ. ಈ ಹೋರಾಟದ ಜೊತೆ ಕ್ಷೀರಸಾಗರ ಅವರ ‘ಜೇನು: ಆಕಾಶದ ಅರಮನೆ’ ಕಾದಂಬರಿ ಎಳೆಯನ್ನು ಆಧಾರವಾಗಿ ಇಟ್ಟುಕೊಳ್ಳಲಾಗಿದೆ. ಚಿತ್ರಕ್ಕೆ ಕಥೆಯ ಜವಾಬ್ದಾರಿಯನ್ನು ಕೋಟಿಗಾನಹಳ್ಳಿ ರಾಮಯ್ಯ ವಹಿಸಿಕೊಂಡಿದ್ರೆ, ಚಿತ್ರಕಥೆ ಹಾಗೂ ನಿರ್ದೇಶನದ ನೊಗವನ್ನು ನೀನಾಸಂ ಮಂಜು ಹೊತ್ತಿದ್ದಾರೆ. ಇದನ್ನೂ ಓದಿ: ತನ್ನ ವಿರುದ್ಧ ಟೀಕೆ ಮಾಡುತ್ತಿರೋರಿಗೆ ಸ್ಟ್ರಾಂಗ್ ಉತ್ತರ ಕೊಟ್ಟ ಸಮಂತಾ

    ಪ್ರಕೃತಿಯ ಮಡಿಲಲ್ಲಿ ಬದುಕು ಕಟ್ಟಿಕೊಂಡಿದ್ದ ಬುಡಕಟ್ಟು ಜನಾಂಗವನ್ನು ಒಕ್ಕಲೆಬ್ಬಿಸಿದ ನಂತರ ಏನಾಯಿತು? ಅಲ್ಲಿನ ಹೆಣ್ಣು ಮಕ್ಕಳು ಹೇಗೆ ದೌರ್ಜನ್ಯಕ್ಕೆ ಒಳಗಾಗುತ್ತಾರೆ, ಅವರ ಬದುಕು ಯಾವೆಲ್ಲ ತಿರುವು ಪಡೆಯುತ್ತೆ ಎಂಬ ಹೋರಾಟದ ಕಥೆ ಹೊಂದಿರುವ ಈ ಚಿತ್ರಕ್ಕೆ ಅರ್ಚನಾ ಮಧುಸೂಧನ್ ಮುಖ್ಯಭೂಮಿಕೆಯಲ್ಲಿ ಜೀವ ತುಂಬಿದ್ದಾರೆ. ಚಿತ್ರದ ತಾರಾಗಣದಲ್ಲಿ ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ, ಕರಿಸುಬ್ಬು ಒಳಗೊಂಡಂತೆ ಹಲವು ಪ್ರತಿಭಾನ್ವಿತ ಕಲಾವಿದರು ಜೊತೆಯಾಗಿದ್ದಾರೆ.

    ನೈಜತೆಗೆ ಹೆಚ್ಚು ಒತ್ತು ನೀಡಿರುವ ಚಿತ್ರತಂಡ ಬುಡಕಟ್ಟು ಜನರನ್ನೂ ಕೂಡ ಚಿತ್ರದಲ್ಲಿ ತೊಡಗಿಸಿಕೊಂಡಿದೆ. ಬೆಂಗಳೂರು, ಎಚ್.ಡಿ.ಕೋಟೆ, ಕೋಲಾರ ಸೇರಿದಂತೆ ಹಲವು ಭಾಗಗಳಲ್ಲಿ ಸಿನಿಮಾ ಸೆರೆ ಹಿಡಿಯಲಾಗಿದೆ. ಗಣೇಶ್ ಹೆಗ್ಡೆ ಕ್ಯಾಮೆರಾ ವರ್ಕ್, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ಚಿತ್ರಕ್ಕಿದೆ. ಸದ್ಯ ಚಿತ್ರೀಕರಣ ಕಂಪ್ಲೀಟ್ ಮಾಡಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ‘ಕನ್ನೇರಿ’ ಚಿತ್ರತಂಡ ಫಸ್ಟ್ ಲುಕ್ ಬಿಡುಗಡೆ ಮೂಲಕ ಪ್ರಚಾರ ಕಾರ್ಯ ಆರಂಭಿಸಿದೆ. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಮೊದಲೇ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಪ್ರಭಾಸ್

  • ಆರೋಗ್ಯ ಸರಿ ಇದ್ದಿದ್ದರೆ ಕನ್ನಡದಲ್ಲೂ ನಟಿಸಲಿದ್ದರು ಇರ್ಫಾನ್

    ಆರೋಗ್ಯ ಸರಿ ಇದ್ದಿದ್ದರೆ ಕನ್ನಡದಲ್ಲೂ ನಟಿಸಲಿದ್ದರು ಇರ್ಫಾನ್

    ಬೆಂಗಳೂರು: ಆರೋಗ್ಯ ಸರಿ ಇದ್ದಿದ್ದರೆ ಇಂದು ಮೃತರಾದ ಬಾಲಿವುಡ್ ನಟ ಇರ್ಫಾನ್ ಖಾನ್ ಅವರು ಕನ್ನಡದಲ್ಲೂ ನಟಿಸುತ್ತಿದ್ದರು ಎಂಬ ಮಾಹಿತಿಯನ್ನು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ನೀಡಿದ್ದಾರೆ.

    ಬಹಳ ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪ್ರತಿಭಾನ್ವಿತ ನಟ ಇರ್ಫಾನ್ ಖಾನ್ ಅವರು, ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆದರೆ ಅವರು ಆರೋಗ್ಯ ಸರಿ ಇದ್ದಿದ್ದರೆ ಅವರು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದರು ಎಂದು ನಾಗತಿಹಳ್ಳಿ ಚಂದ್ರಶೇಖರ್ ಅವರು ಟ್ವೀಟ್ ಮಾಡಿದ್ದಾರೆ.

    ಇರ್ಫಾನ್ ಸಾವಿನ ಸುದ್ದಿ ಕೇಳಿ ಟ್ವೀಟ್ ಮಾಡಿರುವ ನಾಗತಿಹಳ್ಳಿ ಚಂದ್ರಶೇಖರ್, ಐದು ವರ್ಷದ ಹಿಂದೆಯೇ ನಾನು ಕನ್ನಡ ಸಿನಿಮಾರಂಗಕ್ಕೆ ಇರ್ಫಾನ್ ಅವರನ್ನು ಕರೆತರುವ ಪ್ರಯತ್ನವನ್ನು ಮಾಡಿದ್ದೆ. ಆದರೆ ಅವರು ಅಂದೇ ನನಗೆ ಆರೋಗ್ಯ ಸಮಸ್ಯೆಯಿದೆ ನನಗೆ ಅಭಿನಯಿಸಲು ಆಗುವುದಿಲ್ಲ ಎಂದು ಹೇಳಿದ್ದರು. ಬಿಗ್‍ಬಿ ಅಮಿತಾಬ್ ಬಚ್ಚನ್ ನಂತರ ನಾನು ಇರ್ಫಾನ್ ಅವರನ್ನು ಕನ್ನಡಕ್ಕೆ ತರಬೇಕು ಎಂಬ ಆಸೆ ಹೊಂದಿದ್ದೆ. ಅವರ ಕುಟುಂಬಕ್ಕೆ ದೇವರ ಅವರ ಸಾವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಕನ್ನಡದಲ್ಲಿ ವಿಶಿಷ್ಟವಾದ ಚಿತ್ರಗಳನ್ನು ತಯಾರಿಸುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು, ಈ ಹಿಂದೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರನ್ನು ಕನ್ನಡ ಸಿನಿಮಾದಲ್ಲಿ ನಟಿಸುವಂತೆ ಮಾಡಿದ್ದರು. ಇದಾದ ಬಳಿಕ ಅವರು, ಬಾಹ್ಯಾಕಾಶದ ಕಥೆಯೊಂದಕ್ಕೆ ಇರ್ಫಾನ್ ಅವರನ್ನು ಕನ್ನಡಕ್ಕೆ ಕರೆತರಲು ಯತ್ನಿಸಿದ್ದರು. ಕಥೆ ಕೇಳಿ ಇಷ್ಟಪಟ್ಟಿದ್ದ ಇರ್ಫಾನ್ ನನಗೆ ಆರೋಗ್ಯ ಸಮಸ್ಯೆ ಇದೆ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರಂತೆ.

    ಬಾಲಿವುಡ್‍ನಲ್ಲಿ ಹೀರೋ ಮತ್ತು ಪೋಷಕ ನಟ ಯಾವುದೇ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಇರ್ಫಾನ್ ಅವರು, ಹಾಲಿವುಡ್‍ನಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. 1988ರಲ್ಲಿ ತೆರೆಕಂಡ ಸಲಾಮ್ ಬಾಂಬೆ ಎಂಬ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಇರ್ಫಾನ್ ನಂತರ ನೂರಾರು ಸಿನಿಮಾದಲ್ಲಿ ನಟಿಸಿ ತನ್ನದೇ ಆದ ಅಭಿಮಾನಿಗಳನ್ನು ಗಳಿಸಿದ್ದರು. ಜೊತೆಗೆ ಇವರಿಗೆ 2011ರಲ್ಲಿ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿತ್ತು.

    ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಅಸ್ಪತ್ರೆಯ ಐಸಿಯುನಲ್ಲಿ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತು ಮಾಹಿತಿ ನೀಡಿದ್ದ ವೈದ್ಯಾಧಿಕಾರಿಗಳು, ಕೊಲೊನ್ ಇನ್‍ಫೆಕ್ಷನ್‍ನಿಂದಾಗಿ ಇರ್ಫಾನ್ ಅವರನ್ನು ಅಬ್ಸರ್ವೇಶನ್‍ನಲ್ಲಿ ಇಡಲಾಗಿದೆ ಎಂದು ಮಾಹಿತಿ ನೀಡಿದ್ದರು. ಆದರೆ ಇಂದು ಅವರು ಚಿಕಿತ್ಸೆ ಫಲಿಸದೆ ತನ್ನ 53ನೇ ವಯಸ್ಸಿಗೆ ಕೊನೆಯುಸಿರೆಳೆದಿದ್ದಾರೆ.

    ಇರ್ಫಾನ್ ಅವರಿಗೆ ನ್ಯೂರೋಎಂಡೋಕ್ರೈನ್ ಗಡ್ಡೆ ಇರುವುದು 2018ರಲ್ಲೇ ತಿಳಿದಿತ್ತು. ಇದಕ್ಕಾಗಿ ಅವರು ವಿದೇಶದಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶನಿವಾರ ಅವರ ತಾಯಿ ಸಾಯಿಬಾ ಬೇಗಂ ಅವರನ್ನು ಕಳೆದುಕೊಂಡಿದ್ದ ಅವರು ವಿಡಿಯೋ ಕಾಲ್ ಮೂಲಕ ಅವರಿಗೆ ಅಂತಿಮ ನಮನ ಸಲ್ಲಿಸಿದ್ದರು. ಆದರೆ ಇಂದು ಅವರು ಮೃತಪಟ್ಟಿದ್ದಕ್ಕೆ ಇಡೀ ಭಾರತ ಚಿತ್ರರಂಗವೇ ಕಂಬನಿ ಮಿಡಿದಿದೆ.