Tag: Nagatihalli Chandrasekhar

  • ನಾಗತಿಹಳ್ಳಿ ಶಿಷ್ಯನ ಹೊಸ ಪ್ರಯತ್ನ ದ್ವಂದ್ವಂ ದ್ವಯಂ

    ನಾಗತಿಹಳ್ಳಿ ಶಿಷ್ಯನ ಹೊಸ ಪ್ರಯತ್ನ ದ್ವಂದ್ವಂ ದ್ವಯಂ

    ಹೆಸರಾಂತ ಸಾಹಿತಿ ಹಾಗೂ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ಅವರ ಟೆಂಟ್ ಸ್ಕೂಲ್ ಆಫ್ ಸಿನಿಮಾದಲ್ಲಿ ಕಾರ್ಯಗಾರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮನ್ ಚಂಗಪ್ಪ ನಿರ್ದೇಶಿಸಿರುವ ಮೊದಲ ಕಿರುಚಿತ್ರ ‘ದ್ವಂದ್ವಂ ದ್ವಯಂ’ (Dvandvam Dwayam). ಇತ್ತೀಚಿಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಸಂವಾದ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನೆರವೇರಿತು. ನಾಗತಿಹಳ್ಳಿ ಚಂದ್ರಶೇಖರ್, ಡಾ.ನಾದ ಶೆಟ್ಟಿ, ಅಶೋಕ್ ಕಶ್ಯಪ್, ಅನೂಪ್ ಭಂಡಾರಿ ಹಾಗೂ ಚಂಪಾ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಿರುಚಿತ್ರವನ್ನು ವೀಕ್ಷಿಸಿ ತಮ್ಮ ಪ್ರೋತ್ಸಾಹಭರಿತ ಮಾತುಗಳೊಂದಿಗೆ ಕಿರುಚಿತ್ರ (Short Film) ತಂಡದವರಿಗೆ ಶುಭ ಕೋರಿದರು.

    ಮರಣದಂಡನೆಗೆ ಮುನ್ನ ಜೈಲು ಕೈದಿಯೊಬ್ಬನ ಕೊನೆಯ ರಾತ್ರಿಯ ಕ್ಯಾನ್ವಾಸ್ ನಲ್ಲಿ ತೆರೆದುಕೊಳ್ಳುವ ಚಿತ್ರವಿದು. ಪ್ರತಿಯೊಬ್ಬ ವ್ಯಕ್ತಿಯ ಅಸ್ತಿತ್ವದಲ್ಲಿ ಅಂತರ್ಗತವಾಗಿರುವ ಸಂಕೀರ್ಣವಾಗಿ ಪರಿಶೀಲಿಸುವ ಚಿತ್ರವಿದು. 17 ನಿಮಿಷಗಳ ಅವಧಿಯಲ್ಲಿ ಮಾನವ ಬದುಕಿನ ಸಂಕೀರ್ಣತೆಗಳನ್ನು ಆಳವಾಗಿ ಪರಿಶೋಧಿಸುವ ಪ್ರಯತ್ನವನ್ನು ಈ ಕಿರುಚಿತ್ರ ಮಾಡುತ್ತದೆ. ನಮ್ಮೆಲ್ಲರೊಳಗಿನ ಜೀವನ ಹಾಗೂ ಆಯ್ಕೆಗಳ ಅನ್ವೇಷಣೆಯೇ ಈ  ದ್ವಂದ್ವಂ ದ್ವಯಂ  ಎಂದು ಕಿರುಚಿತ್ರದ ಬಗ್ಗೆ ಕಿರು ಪರಿಚಯ ಮಾಡಿಕೊಟ್ಟ ನಿರ್ದೇಶಕ ಮನ್ ಚಂಗಪ್ಪ, ನನ್ನ ಮೊದಲ ಕಿರುಚಿತ್ರದ ಪ್ರದರ್ಶನ, ನನ್ನ ಇಬ್ಬರು ಗುರುಗಳಾದ ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ನಾದ ಶೆಟ್ಟಿ ಅವರ ಮುಂದೆ ಆಗಿರುವುದು ಬಹಳ ಖುಷಿಯಾಗಿದೆ. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಛಾಯಾಗ್ರಾಹಕ ಹಾಗೂ ನಿರ್ದೇಶಕ ಅಶೋಕ್ ಕಶ್ಯಪ್, ನಿರ್ದೇಶಕಿ ಚಂಪಾ ಶೆಟ್ಟಿ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಅವರಿಗೆ ಮತ್ತು ನನ್ನ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ನನ್ನ ಮೊದಲ ಪ್ರಯತ್ನಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು.

    ಯಲೋ ಡೈರೀಸ್ ಮೂಲಕ ಹರ್ಷಿಕಾ ವಸಂತ್ ಈ ಕಿರುಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.  ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿರುವ ವಿಕಾಶ್ ಉತ್ತಯ್ಯ “ಸೂರ್ಯ” ಎಂಬ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೂರ್ಯ ಹಾಗೂ ಸುಮೋಕ್ಷ ತಾರಾಬಳಗದಲ್ಲಿದ್ದಾರೆ.

    ಮನ್ ಚಂಗಪ್ಪ ಅವರೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ನಾದ ಶೆಟ್ಟಿ ಅವರದು. ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ರಾಜಾರಾವ್ ಅಂಚಲ್ಕರ್ ಛಾಯಾಗ್ರಹಣ ಹಾಗೂ  ಉದಯ್ ಕುಮಾರ್ ಅವರ ಸಂಕಲನ ದ್ವಂದ್ವಂ ದ್ವಯಂ ಕಿರುಚಿತ್ರಕ್ಕಿದೆ.

  • ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೃತಧಾರೆ’ ರಿಲೀಸ್ ಆಗಿ ಇಂದಿಗೆ 18 ವರ್ಷ

    ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೃತಧಾರೆ’ ರಿಲೀಸ್ ಆಗಿ ಇಂದಿಗೆ 18 ವರ್ಷ

    ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ನಿರ್ದೇಶನದಲ್ಲಿ ಮೂಡಿ ಬಂದ ‘ಅಮೃತಧಾರೆ’ (Amruthadhare) ಸಿನಿಮಾ ರಿಲೀಸ್ ಆಗಿ ಇಂದಿಗೆ 18 ವರ್ಷಗಳಾಗಿವೆ. ಈ ಸಿಹಿ ನೆನಪುಗಳನ್ನು ನಿರ್ದೇಶಕರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಜೊತೆಗೆ ಆ ಸಿನಿಮಾದ ಫೋಟೋವೊಂದನ್ನು ಹಂಚಿಕೊಂಡು, ಅದರ ದಾಖಲೆಯನ್ನು ನೆನಪಿಸಿಕೊಂಡಿದ್ದಾರೆ.

    16ನೇ ಸೆಪ್ಟೆಂಬರ್ 2005ರಲ್ಲಿ ಈ ಸಿನಿಮಾ ರಾಜ್ಯಾದ್ಯಂತ ರಿಲೀಸ್ ಆಗಿತ್ತು. ಬೆಂಗಳೂರಿನ ಸಾಗರ ಚಿತ್ರಮಂದಿರದಲ್ಲೇ ಬರೋಬ್ಬರಿ 40 ವಾರಗಳ ಭರ್ಜರಿ ಪ್ರದರ್ಶನವನ್ನು ಕಂಡು ದಾಖಲೆ ಬರೆದಿತ್ತು. ಈ ಸಿನಿಮಾದ ಮೂಲಕ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ (Amitabh Bachchan) ಅವರು ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದ ಹೆಗ್ಗಳಿಕೆಗಳಲ್ಲಿ ಇದು ಕೂಡ ಒಂದಾಗಿತ್ತು. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಬಂಪರ್ ಆಫರ್ ಗಿಟ್ಟಿಸಿಕೊಂಡ ‘ಸೀತಾರಾಮಂ’ ಬೆಡಗಿ

    ಮೋಹಕ ತಾರೆ ರಮ್ಯಾ (Ramya) ಮತ್ತು ಧ್ಯಾನ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ ಸಿನಿಮಾದಲ್ಲಿ ಉತ್ಕಟ ಪ್ರೇಮವಿತ್ತು. ಕಥಾ ನಾಯಕ ಮತ್ತು ನಾಯಕಿ ಈ ಯುವ ಜೋಡಿ ಮದುವೆಯಾದರೂ, ಗಂಡ ಹೆಂಡತಿ ರೀತಿಯಲ್ಲಿ ಬದುಕುವುದು ಬೇಡ, ಸ್ನೇಹಿತರಾಗಿ ಇರೋಣ ಎಂದುಕೊಂಡು ಜೀವನ ನಡೆಸುತ್ತಿರುವಾಗ, ಈ ಜೋಡಿಯಲ್ಲಿ ಸಮಸ್ಯೆಯೊಂದು ಕಾಣಿಸುತ್ತದೆ. ಆಗ ಅದನ್ನು ಅವರು ಹೇಗೆ ದಾಟಿಕೊಳ್ಳುತ್ತಾರೆ ಎನ್ನುವುದೇ ಸಿನಿಮಾವಾಗಿತ್ತು.

     

    ನಾಗತಿಹಳ್ಳಿ ಚಂದ್ರಶೇಖರ್ ಬರಹದಲ್ಲಿ ಮೂಡಿ ಬಂದಿದ್ದ ಈ ಸಿನಿಮಾವನ್ನು ಅನೇಕ ಪ್ರೇಮಿಗಳು ಮೆಚ್ಚಿದ್ದರು. ಆದರೆ, ದುರಂತದ ಕಥನವನ್ನು ನೋಡಿ ಕಣ್ಣೀರಿಟ್ಟಿದ್ದರು. ಧ್ಯಾನ್ ಮತ್ತು ರಮ್ಯಾ ಜೋಡಿಯ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬಂದಿದ್ದವು. ಇದೀಗ ಆ ಸಿನಿಮಾಗೆ 18ರ ಹರೆಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿರೋಧ ಪಕ್ಷದ ನಾಯಕ ಸ್ಥಾನ: ನಿರ್ದೇಶಕ ನಾಗತಿಹಳ್ಳಿ ಬಿಜೆಪಿಗೆ ಕೊಟ್ಟ ಸಲಹೆ ಏನು?

    ವಿರೋಧ ಪಕ್ಷದ ನಾಯಕ ಸ್ಥಾನ: ನಿರ್ದೇಶಕ ನಾಗತಿಹಳ್ಳಿ ಬಿಜೆಪಿಗೆ ಕೊಟ್ಟ ಸಲಹೆ ಏನು?

    ರಾಜ್ಯದಲ್ಲಿ ಕಾಂಗ್ರೆಸ್ (Congress) ಸರಕಾರ ಬಂದು ನೂರು ದಿನಗಳು ಕಳೆದರೂ, ಈವರೆಗೂ ಬಿಜೆಪಿಯಿಂದ (BJP) ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ವಿಧಾನಸಭಾ ಅಧಿವೇಶನ ನಡೆದರೂ, ಬಜೆಟ್ ಮಂಡನೆಯಾದರೂ ಈವರೆಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಯಾರೊಬ್ಬರೂ ಆಯ್ಕೆಯಾಗಿಲ್ಲ. ಹೀಗಾಗಿ ಜನರೂ ಬೇಸತ್ತಿದ್ದರು. ಇದೀಗ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್  (Nagatihalli Chandrasekhar) ಬಿಜೆಪಿಗೆ ಸಲಹೆಯೊಂದನ್ನು ನೀಡಿದ್ದಾರೆ.

    ವಿರೋಧ ಪಕ್ಷದ ನಾಯಕನ (Leader of the Opposition) ಸ್ಥಾನದ ಕುರಿತಂತೆ ನಾಗತಿಹಳ್ಳಿ ಚಂದ್ರಶೇಖರ್ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದು, ‘ಬಿಜೆಪಿಗೆ ಒಂದು ವಿನಮ್ರ ಸಲಹೆ. ವಿಪಕ್ಷ ನಾಯಕನಿಲ್ಲದೆ ವಿಧಾನ ಸಭೆ ಅಪೂರ್ಣ ಎನಿಸುತ್ತಿದೆ. ನಿಮಗೆ ಆಯ್ಕೆ ತೀರಾ ಕಷ್ಟವಾದಲ್ಲಿ ಕಾಂಗ್ರೆಸ್ ನಲ್ಲೇ ಸೂಕ್ತರಾದ ಒಬ್ಬರನ್ನು ಹುಡುಕಿ ವಿಪಕ್ಷ ನಾಯಕನ ಹುದ್ದೆಯನ್ನು ಔಟ್ ಸೋರ್ಸ್ ಮಾಡಿ’ ಎಂದು ಸಲಹೆ ನೀಡಿದ್ದಾರೆ.

     

    ನಾಗತಿಹಳ್ಳಿ ಅವರು ಈ ಸಲಹೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಬಿಜೆಪಿಗೆ ಮುಖಭಂಗ ಎಂದು ಬಣ್ಣಿಸಲಾಗುತ್ತಿದೆ. ಇಂಥದ್ದೊಂದು ಮಾಡುವುದಕ್ಕೆ ಸಾಧ್ಯವಾ? ಎಂತಹ ಯೋಚನೆ ಇದು ಎಂದು ಕೆಲವರು ನಾಗತಿಹಳ್ಳಿ ವಿರುದ್ಧ ಕಾಮೆಂಟ್ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಹೋಗಲ್ಲ: ನಿರ್ದೇಶಕ ನಾಗತಿಹಳ್ಳಿ ಸ್ಪಷ್ಟನೆ

    ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಹೋಗಲ್ಲ: ನಿರ್ದೇಶಕ ನಾಗತಿಹಳ್ಳಿ ಸ್ಪಷ್ಟನೆ

    ಪ್ರಗತಿಪರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) ಆರ್.ಆರ್.ಎಸ್ ಸಂಘಟನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಆರ್.ಎಸ್.ಎಸ್ ಸಂಘಟನೆಯನ್ನು ವಿರೋಧಿಸುತ್ತಾ ಬಂದಿರುವ ಬಳಗದಲ್ಲಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅದು ಹೇಗೆ ಕಾರ್ಯಕ್ರಮವನ್ನು ಒಪ್ಪಿಕೊಂಡರು ಎನ್ನುವುದು ಕೆಲವರ ಪ್ರಶ್ನೆಯಾಗಿತ್ತು.

    ಬೆಂಗಳೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಶಂಕರಪುರ ಭಾಗ ಜುಲೈ 16ರಂದು ‘ಶ್ರೀ ಗುರು ಪೂಜಾ ಉತ್ಸವ’ವನ್ನು ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದ (Programme) ಅಧ್ಯಕ್ಷತೆಯನ್ನು ನಾಗತಿಹಳ್ಳಿ ಚಂದ್ರಶೇಖರ್ ವಹಿಸಿಕೊಳ್ಳಲಿದ್ದಾರೆ ಎಂದೂ, ಅಖಿಲ ಭಾರತ ಗ್ರಾಮ ವಿಕಾಸ ಸಂಯೋಜಕ ಶ್ರೀಗುರುರಾಜ್ ಅಂದಿನ ಸಮಾರಂಭದಲ್ಲಿ ಭಾಗಿಯಾಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿತ್ತು. ಈ ಆಹ್ವಾನ ಪತ್ರಿಕೆ ವೈರಲ್ ಆಗಿತ್ತು.

    ನಾಗತಿಹಳ್ಳಿ ಚಂದ್ರಶೇಖರ್ ಇತ್ತೀಚೆಗೆ ಬದಲಾಗಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದರೆ, ಇನ್ನೂ ಕೆಲವರು ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಜೊತೆ ಗುರುತಿಸಿಕೊಂಡು ತುಂಬಾ ದಿನವಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದರು. ನಾಗ್ತಿ ಮೇಷ್ಟ್ರ ಮೇಲೆ ನೆಗೆಟಿವ್ ಕಾಮೆಂಟ್ ಬಂದಿದ್ದೇ ಹೆಚ್ಚಿತ್ತು. ಹಾಗಾಗಿ ನಾಗತಿಹಳ್ಳಿಯವರು ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

    ಸೋಷಿಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ‘ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ (Absent). ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ, ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ  ಮನಸ್ಸುಗಳಿಗೆ ಹೇಳುವ ಒಂದು ಮಾತು, ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

     

    ಮುಂದುವರೆದು, ‘ತಪ್ಪು ತಿಳಿಯಲು, ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು’ ಎಂದು ನಾಗತಿಹಳ್ಳಿ ಚಂದ್ರಶೇಖರ್ ಬರೆದುಕೊಂಡಿದ್ದಾರೆ.
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಗ್ಗೇಶ್ ಗೆ ಕನ್ನಡ ಪಾಠ ಮಾಡಿದ ನಾಗ್ತಿ ಮೇಷ್ಟ್ರು

    ಜಗ್ಗೇಶ್ ಗೆ ಕನ್ನಡ ಪಾಠ ಮಾಡಿದ ನಾಗ್ತಿ ಮೇಷ್ಟ್ರು

    ಹಿರಿಯ ನಟ ಜಗ್ಗೇಶ್ (Jaggesh) ಕಾಲು ಮುರಿದುಕೊಂಡಿರುವ ವಿಷಯವನ್ನು ಮೊನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದರು. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡಿದ್ದ ಫೋಟೋವನ್ನು ಶೇರ್ ಮಾಡಿದ್ದ ಅವರು, ‘ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ (Fractured leg). ಪಾದದ ಮೂಳೆ ಮುರಿದಿದೆ. ಆರು ವಾರಗಳ ಕಾಲ ‘ದಿಘ್ಬಂಧನ’ ನಡಿಗೆಗೆ ಎಂದು ಬರೆದುಕೊಂಡಿದ್ದರು. ‘ದಿಘ್ಬಂಧನ’ ಪದ ತಪ್ಪಾಗಿರುವ ಕುರಿತು ನಿರ್ದೇಶಕ, ಸಿನಿಮಾ ಮೇಷ್ಟ್ರು ನಾಗತಿಹಳ್ಳಿ ಚಂದ್ರಶೇಖರ್  ಸೋಷಿಯಲ್ ಮೀಡಿಯಾದ ಮೂಲಕವೇ ಜಗ್ಗೇಶ್ ಅವರಿಗೆ ಕನ್ನಡ  (Kannada) ಪಾಠ ಮಾಡಿದ್ದಾರೆ.

    ಜಗ್ಗೇಶ್ ಹಾಕಿರುವ ಪೋಸ್ಟ್ ಗೆ ಉತ್ತರವಾಗಿ ಬರೆದಿರುವ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar), ‘ದಿಘ್ಬಂದನ ಅಲ್ಲ, ದಿಗ್ಬಂಧನ. ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ. ಮೂಳೆ ಮುರಿತ ಬೇಗ ಗುಣವಾಗಲಿ. ಸಕ್ಕರೆ ರೋಗವಿದ್ದಲ್ಲಿ ಹೆಚ್ಚು ಜೋಪಾನ ವಹಿಸಿ. ಶುಭವಾಗಲಿ. ಪ್ರೀತಿಯಿಂದ ನಾಗತಿಹಳ್ಳಿ ಚಂದ್ರಶೇಖರ್ ಎಂದು ಬರೆದಿದ್ದಾರೆ. ಇದನ್ನೂ ಓದಿ:ಫ್ಯಾಷನ್‌ ರೂಲ್ಸ್‌ ಬ್ರೇಕ್‌ ಮಾಡಿ, ನೆಕ್ಲೇಸ್‌ ಧರಿಸಿ ಹಾಡಿದ ಸಂಜಿತ್‌ ಹೆಗ್ಡೆ

    ಸದ್ಯ ಜಗ್ಗೇಶ್ ಯಾವುದೇ ಸಿನಿಮಾ ಶೂಟಿಂಗ್ ನಲ್ಲಿ ಇರದೇ ಇರುವ ಕಾರಣದಿಂದಾಗಿ ಇವರ ಕಾಲು ಮುರಿತ ಯಾರಿಗೂ ತೊಂದರೆ ಮಾಡದು. ಆದರೂ, ವೈದ್ಯರು ಸಲಹೆಯಂತೆ ವಿಶ್ರಾಂತಿ ಪಡೆದುಕೊಳ್ಳಿ. ಬೇಗ ಕಾಲು ಗುಣಮುಖವಾಗಲಿ ಎಂದು ಅವರ ಅಭಿಮಾನಿಗಳು ಹಾರೈಸಿದ್ದಾರೆ. ನೆಚ್ಚಿನ ನಟನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಾರೆ.

     

    ಇತ್ತೀಚೆಗಷ್ಟೇ ಜಗ್ಗೇಶ್ ಅವರ ರಾಘವೇಂದ್ರ ಸ್ಟೋರ್ಸ್ (Raghavendra Stores) ಸಿನಿಮಾ ರಿಲೀಸ್ ಆಗಿತ್ತು. ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣಲಿಲ್ಲವಾದ್ದರೂ, ಒಂದೊಳ್ಳೆ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ ಜಗ್ಗೇಶ್ ರಂಗನಾಯಕ ಚಿತ್ರದಲ್ಲಿ ನಟಿಸಿದ್ದಾರೆ. ಗುರು ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕು.

  • ಏಪ್ರಿಲ್ 27 ರಿಂದ ಶ್ರೀಲಂಕಾದಲ್ಲಿ ನಾಗತಿಹಳ್ಳಿ ಚಿತ್ರೋತ್ಸವ

    ಏಪ್ರಿಲ್ 27 ರಿಂದ ಶ್ರೀಲಂಕಾದಲ್ಲಿ ನಾಗತಿಹಳ್ಳಿ ಚಿತ್ರೋತ್ಸವ

    ಶ್ರೀಲಂಕಾದ (SriLanka) ಫಿಲಮ್ ಕಾರ್ಪೋರೇಷನ್, ಅಲ್ಲಿನ ಪ್ರವಾಸೋದ್ಯಮ ಇಲಾಖೆ, ಏಷ್ಯನ್ ಮೀಡಿಯಂ ಕಲ್ಚರಲ್ ಅಸೊಸಿಯೇಶನ್ ಮತ್ತು ಶ್ರೀಲಂಕಾದ ಭಾರತೀಯ ರಾಯಭಾರಿ  ಕಚೇರಿ ಇವುಗಳ ಸಹಯೋಗದಲ್ಲಿ ಏಪ್ರಿಲ್ 27 ರಿಂದ ಮೇ 3 ರವರೆಗೆ ಶ್ರೀಲಂಕಾದಲ್ಲಿ ಅದ್ದೂರಿಯಾದ ನಾಗತಿಹಳ್ಳಿ (Nagatihalli Chandrasekhar) ಚಲನಚಿತ್ರೋತ್ಸವ (Chirotsava), ಚಲನಚಿತ್ರ ಕಾರ್ಯಾಗಾರ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಯಲಿವೆ.

    ನಾಗತಿಹಳ್ಳಿ ಚಂದ್ರಶೇಖರ ಅವರ ಪ್ರಶಸ್ತಿ ಪುರಸ್ಕೃತ ಹಾಗೂ ಮಹತ್ವದ ಚಿತ್ರಗಳಾದ ಅಮೆರಿಕಾ ಅಮೆರಿಕಾ, ಮಾತಾಡ್ ಮಾತಾಡ್ ಮಲ್ಲಿಗೆ, ಕೋಟ್ರೇಶಿ ಕನಸು, ಇಷ್ಟಕಾಮ್ಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕಥಾ ನಿರೂಪಣೆ, ಚಿತ್ರಕಥೆ ರಚನೆ, ಛಾಯಾಗ್ರಹಣ, ಸಂಕಲನ  ಮುಂತಾದ ವಿಷಯಗಳ ಬಗ್ಗೆ ಶ್ರೀಲಂಕಾದ ಸಿನಿಮಾಸಕ್ತ ವಿದ್ಯಾರ್ಥಿಗಳೊಂದಿಗೆ ಕಾರ್ಯಾಗಾರವನ್ನು ನಾಗತಿಹಳ್ಳಿ ಚಂದ್ರಶೇಖರ ಅವರು ನಡೆಸಿಕೊಡಲಿದ್ದಾರೆ. ಇದನ್ನೂ ಓದಿ:ಐರೆನ್ ಲೆಗ್ ಎಂದು ಟೀಕಿಸಿದವರಿಗೆ ಉತ್ತರ ಕೊಟ್ಟ ಶ್ರುತಿ ಹಾಸನ್

    ಈ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಅವರೊಟ್ಟಿಗೆ ನಟ ನಿರೂಪ್ ಭಂಡಾರಿ, ನಟಿ ಕಾವ್ಯಾಶೆಟ್ಟಿ, ಛಾಯಾಗ್ರಾಹಕ ಎಸ್. ಕೆ. ರಾವ್, ನಿರ್ಮಾಪಕ  ವೈ.ಎನ್.ಶಂಕರೇಗೌಡ ಮತ್ತು ಮಾಧ್ಯಮ ಕ್ಷೇತ್ರದ ಮದನ್‌ಗೌಡ, ಜಿ.ಎನ್,ಮೋಹನ್ ಭಾಗವಹಿಸಲಿದ್ದಾರೆ.

  • ನಂದಿನಿ ‘ನಮ್ಮವಳು’ ಅಲ್ಲ, ‘ನನ್ನವಳು’ : ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

    ನಂದಿನಿ ‘ನಮ್ಮವಳು’ ಅಲ್ಲ, ‘ನನ್ನವಳು’ : ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್

    ಮೂಲ್ (Amul) ಮತ್ತು ನಂದಿನಿ (Nandini) ಹಾಲಿನ ಜಟಾಪಟಿ ತಾರಕಕ್ಕೇರಿದೆ. ಕರ್ನಾಟಕದಲ್ಲಿ ತನ್ನ ಉದ್ಯಮವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಅಮೂಲ್ ಹಲವು ರೀತಿಯಲ್ಲಿ ಕಸರತ್ತು ಮಾಡುತ್ತಿದೆ. ಇದಕ್ಕೆ ತೀವ್ರ ವಿರೋಧವು ವ್ಯಕ್ತವಾಗಿದೆ. ವಿರೋಧದ ಕಾವು ಜೋರಾಗುತ್ತಿದ್ದಂತೆಯೇ  ಅಮೂಲ್ ಕಂಪೆನಿಯ ಎಂ.ಡಿ ಸದ್ಯಕ್ಕೆ ಒಂದಷ್ಟು ಕೆಲಸವನ್ನು ಸ್ಥಗಿತಗೊಳಿಸಿದ್ದೇವೆ ಎಂದು ಹೇಳಿದರೂ, ಹೋರಾಟಗಾರರು ಮಾತ್ರ ಸುಮ್ಮನಾಗಿಲ್ಲ.

    ನಂದಿನಿ ಉಳಿವಿಗಾಗಿ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದು, ನಿರ್ದೇಶಕ ಮಂಸೋರೆ, ಚಿತ್ರಸಾಹಿತಿ ಕವಿರಾಜ್ ಸೇರಿದಂತೆ ಹಲವರು ಗಟ್ಟಿಯಾಗಿ ಧ್ವನಿ ಎತ್ತಿದ್ದಾರೆ. ಇನ್ನೂ ಹಲವರು ಡಾ.ರಾಜ್ ಕುಟುಂಬ ನಂದಿನಿ ಡೈರಿಗೆ ಸಪೋರ್ಟ್ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೇ, ರೈತರ ಉಳಿವಿಗಾಗಿ ಎಂತಹ ಹೋರಾಟಕ್ಕೂ ಸಿದ್ಧ ಎಂದು ಕನ್ನಡಪರ ಹೋರಾಟಗಾರರು ಕರೆಕೊಟ್ಟಿದ್ದಾರೆ. ಈ ನಡುವೆ ನಾಗತಿಹಳ್ಳಿ ಚಂದ್ರಶೇಖರ್ (Nagatihalli Chandrasekhar) , ನಂದಿನಿ ಜೊತೆಗಿನ ಸಂಬಂಧವನ್ನು ಹೇಳಿಕೊಂಡಿದ್ದಾರೆ.

    ನಂದಿನಿ ಕುರಿತಾಗಿ ಟ್ವೀಟ್ ಮಾಡಿರುವ ನಾಗತಿಹಳ್ಳಿ, ‘ನಂದಿನಿ ನಮ್ಮವಳು ಅಲ್ಲ, ನನ್ನವಳು. ಆರೋಗ್ಯದಾಯಿನಿ. ನಾನು ಕೆಎಂಎಫ್ ನ ಮೈಸೂರು ಡೈರಿಯಲ್ಲಿ ಆರು ವರ್ಷ ದಿನಗೂಲಿ ಜತೆ ವ್ಯಾಸಂಗ ಮಾಡಿ ಬದುಕು ಕಟ್ಟಿಕೊಂಡವನು. ನಾಗತಿಹಳ್ಳಿಯಲ್ಲಿ ಹೆಣ್ಣು ಮಕ್ಕಳಿಗಾಗಿ ಮಾಡಿಕೊಟ್ಟ ಅಭಿವ್ಯಕ್ತಿ ಹಾಲು ಉತ್ಪಾದಕರ ಸಂಘ ಯಶಸ್ವಿಯಾಗಿ ನಡೆಯುತ್ತಿದೆ. ನಂದಿನಿ ಇಲ್ಲದ ಗ್ರಾಮ್ಯ ಬದುಕನ್ನು ಕಲ್ಪಿಸಿಕೊಳ್ಳುವುದೂ ಕಷ್ಟ’ ಎಂದು ಬರೆದಿದ್ದಾರೆ. ಇದನ್ನೂ ಓದಿ: ಬೋಲ್ಡ್ ಅವತಾರ ತಾಳಿದ ‘ಕಬ್ಜ’ ಸುಂದರಿ ಶ್ರೀಯಾ

    ನಾಗತಿಹಳ್ಳಿ ಮೇಷ್ಟ್ರು ಶಾಲಾ ದಿನಗಳಲ್ಲಿ ನಂದಿನಿ ಡೈರಿಯಲ್ಲಿ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೈರಿಯಲ್ಲಿ ಅವರು ಕೆಲಸ ಮಾಡಿದ್ದಾರಂತೆ. ಹಾಗಾಗಿ ಅದರೊಂದಿಗೆ ತಮ್ಮದು ಭಾವನಾತ್ಮಕ ಸಂಬಂಧವಿದೆ ಎಂದು ಹೇಳಿಕೊಂಡಿದ್ದಾರೆ. ಅದು ಎಲ್ಲರ ಬದುಕನ್ನು ಕಟ್ಟಿಕೊಟ್ಟಿದೆ ಎಂದು ವಿವರಿಸಿದ್ದಾರೆ.

  • ಟೂರ್ನಿಯಲ್ ಗೆ ಅದ್ಧೂರಿ ಚಾಲನೆ: ವಿವಿಧ ಗಣ್ಯರ ಉಪಸ್ಥಿತಿ

    ಟೂರ್ನಿಯಲ್ ಗೆ ಅದ್ಧೂರಿ ಚಾಲನೆ: ವಿವಿಧ ಗಣ್ಯರ ಉಪಸ್ಥಿತಿ

    ಟೂರ್ನಿವಲ್ (First indian international celebrbrity tournament and carnival) ನ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ANYELP Entertainment ಹಾಗೂ White lotus entertainment ಸಂಸ್ಥೆ ಆಯೋಜಿಸಿರುವ ಸಮಾರಂಭದಲ್ಲಿ ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯಾನ ಗ್ಯಾಮೇಜ್, ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿ ಪ್ರಿಯಾಂಕ ಉಪೇಂದ್ರ, ಜಾಕಿರ್ ಹುಸೇನ್, ನಟ ರುದ್ರ, ನಾಗತಿಹಳ್ಳಿ ಚಂದ್ರಶೇಖರ್, ನಟ ಅಜಯ್ ರಾವ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    “ಟೂರ್ನಿವಲ್” ಎಂದರೆ ಸೌತ್ ಏಷ್ಯಾ ದೇಶಗಳ ನಡುವಿನ ಸಾಂಸ್ಕೃತಿಕ ವಿನಿಮಯ. ನಮ್ಮ ರಾಜ್ಯದ ಸಿನಿತಾರೆಯರು ಹಾಗೂ ಮಾಲ್ಡೀವ್ಸ್ ನ ಸಿನಿತಾರೆಯರ ನಡುವೆ ಫುಟ್ಬಾಲ್ ಟೂರ್ನಮೆಂಟ್  ಆಯೋಜಿಸಲಾಗುವುದು. ಬರೀ ಕ್ರೀಡೆ ಅಷ್ಟೇ ಅಲ್ಲ. ಬೇರೆಬೇರೆ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂರು ದೇಶಗಳಲ್ಲೂ ನಡೆಸುವ ಉದ್ದೇಶವಿದೆ. ಇಲ್ಲಿನ ಚಿತ್ರ ಸಹ ಮಾಲ್ಡೀವ್ಸ್ ನಲ್ಲಿ ಬಿಡುಗಡೆಯಾಗಲಿದೆ ಎಂದು  ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದ “ಟೂರ್ನಿವಲ್” ನ ಮ್ಯಾನೇಜಿಂಗ್ ಡೈರೆಕ್ಟರ್ ಪೂಜಾಶ್ರೀ,  ಉದ್ಘಾಟನೆಗೆ ಆಗಮಿಸಿದ್ದ  ಶ್ರೀಲಂಕಾ ಹಾಗೂ ಮಾಲ್ಡೀವ್ಸ್ ದೇಶದ ಪ್ರವಾಸೋದ್ಯಮ ಸಚಿವರಿಗೆ, ಇಲ್ಲಿನ  ಗಣ್ಯರಿಗೆ ಧನ್ಯವಾದ ‌ತಿಳಿಸಿದರು. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಈ ಸಂಸ್ಥೆಯವರು ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅವರಿಗೆ ಬೇಕಾದ ಸಹಕಾರ ನೀಡಲು ನಾವು ಸಿದ್ದ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವರಾದ ಇಬ್ರಾಹಿಂ ರಷೀದ್ ಹಾಗೂ ಶ್ರೀಲಂಕಾ ಪ್ರವಾಸೋದ್ಯಮ ಸಚಿವರಾದ ಡಯನಾ ಗ್ಯಾಮೇಜ್ ತಿಳಿಸಿದರು.  ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಯಿತು. ಪ್ರಸಿದ್ದ ಕಲಾವಿದರೊಬ್ಬರ ಭರತನಾಟ್ಯ, ಖ್ಯಾತ ಶ್ರೀಲಂಕಾ ಗಾಯಕಿ ಯೋಹಾನಿ ಅವರ ಗಾಯನ ಹಾಗೂ ಫ್ಯಾಷನ್ ಶೋ ಸೇರಿದಂತೆ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಕಣ್ಮನ ಸೆಳೆಯಿತು. ಇದೇ ಸಂದರ್ಭದಲ್ಲಿ ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ  “Life of cockroach” ಚಿತ್ರದ ಶೀರ್ಷಿಕೆ ಅನಾವರಣ ಸಹ ನಡೆಯಿತು.

    ]Live Tv
    [brid partner=56869869 player=32851 video=960834 autoplay=true]

  • ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

    ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ ಹಾಸ್ಯ ನಟ ಮಿತ್ರ: ಇದು ಅನ್ನದ ಋಣವೆಂದು ನಟ

    ಸಿನಿಮಾ ಅನ್ನೋದು ಅದ್ಭುತ ಪ್ರತಿಕ್ರಿಯೆ. ಸಿನಿಮಾ ಪ್ರೀತಿ ಮಾಡೋರಿಗೆ ಸದಾ ಅದರದ್ದೇ ಧ್ಯಾನ. ಕನ್ನಡ ಚಿತ್ರರಂಗ ಈಗ ಭಾರತೀಯ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಂಡಿದೆ. ಇಡೀ ಭಾರತೀಯ ಸಿನಿಮಾರಂಗವೇ ಹಾಗೊಮ್ಮೆ ಇತ್ತ ಕಣ್ಣಾಯಿಸುವಂತೆ ಮಾಡಿದ್ದು ಸುಳ್ಳಲ್ಲ. ಇಲ್ಲಿ ಸಿನಿಮಾ ಮಾಡೋದು ಎಷ್ಟು ಕಷ್ಟ-ಇಷ್ಟ ಅನ್ನೋದು ಅಲ್ಲಿ ಅನುಭವಿಸಿದವರಿಗಷ್ಟೇ ಗೊತ್ತು. ಸಿನಿಮಾ ಮಾಡೋದು ದೊಡ್ಡದ್ದಲ್ಲ. ಅದನ್ನು ರಿಲೀಸ್ ಮಾಡಿ, ವ್ಯಾಪಾರ ವಹಿವಾಟು ನಡೆಸೋದು ಮುಖ್ಯ. ಅದೆಷ್ಟೋ  ಸಿನಿಮಾಗಳು ತಯಾರಾಗಿ ರಿಲೀಸ್ ಅಗದೆ ಇಂದಿಗೂ ಆ ಪ್ರಯತ್ನದಲ್ಲಿವೆ. ಹಾಕಿದ ಹಣ ವಾಪಾಸ್ ಪಡೆಯೋದು ಕಷ್ಟ ಅನಿಸಿರುವ ಈ ಸಂದರ್ಭದಲ್ಲೊಂದು ಕನ್ನಡ ಸಿನಿಮಾ ನಿರ್ಮಾಪಕ, ನಿರ್ದೇಶಕರಿಗೆ ಖುಷಿಯ ಸುದ್ದಿಯೊಂದು ಹೊರಬಿದ್ದಿದೆ.

    ಹೌದು, ಕನ್ನಡದ ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವುಗಳಿಗೆ ಪ್ರಚಾರವನ್ನೂ ಮಾಡಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಮೂಲಕ ಆ ನಿರ್ಮಾಪಕರಿಗೆ ಸಾಥ್ ನೀಡುವ ಸಂಸ್ಥೆಯೊಂದು ಹುಟ್ಟುಕೊಂಡಿದೆ. ಅಂದಹಾಗೆ, ಅದು ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್’ ಸಂಸ್ಥೆ. ಇದು ಕನ್ನಡ ಸಿನಿ ಜಗತ್ತಿನಲ್ಲಿ ಆರಂಭಗೊಂಡ ಹೊಸ ಸಂಸ್ಥೆ. ಇದು ಕನ್ನಡದ ಹಾಸ್ಯ ನಟ ಮಿತ್ರ (Mitra) ಅವರ ಸಾರಥ್ಯದಲ್ಲಿ ಉದ್ಯಮಿ ಮನೀಶ್ ಮೆಹ್ತಾ (Manish Mehta) ಮತ್ತು ಗೆಳೆಯರು ಸೇರಿ ಮಾಡಿರುವ ಸಂಸ್ಥೆ. ‘ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ‘ ಎಂಬ ಬ್ಯಾನರ್ ಮೂಲಕ ಸದಭಿರುಚಿಯ ಸಿನಿಮಾಗಳ ರೈಟ್ಸ್ , ಅವುಗಳ ವಿತರಣೆ, ರಿಲೀಸ್ ಹೊಣೆ ಹಾಗು ಸಿನಿಮಾ ನಿರ್ಮಾಣ ಆಗಲಿದೆ. ಪ್ರಮುಖವಾಗಿ ಈ ಸಂಸ್ಥೆಯ ಉದ್ದೇಶ, ಕಂಟೆಂಟ್ ಮತ್ತು ಗುಣಮಟ್ಟದ ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ಕೆಲಸಕ್ಕೆ ಕೈ ಹಾಕಿದೆ. ತಯಾರಾದ ಚಿತ್ರಗಳು, ತಯಾರಾಗದೆ ಸಮಸ್ಯೆಯಲ್ಲಿರುವ ಸಿನಿಮಾಗಳಿಗೂ ಸಾಥ್ ನೀಡುವ ಕೆಲಸ ಈ ಸಂಸ್ಥೆ ಮಾಡಲು ಮುಂದಾಗಿದೆ.

    ಈಗಾಗಲೇ ನಾಗತಿಹಳ್ಳಿ (Nagatihalli Chandrasekhar) ಸಿನಿ ಕ್ರಿಯೇಷನ್ಸ್ ನಡಿ ತಯಾರಾಗಿರುವ ‘ ಡೈಮಂಡ್ ಕ್ರಾಸ್’ (Diamond Cross) ಎಂಬ ಜಾಕಿಚಾನ್ ಮಾದರಿಯ ಕನ್ನಡದ ಆಕ್ಷನ್ ಸಿನಿಮಾವೊಂದರ ರೈಟ್ಸ್ ಪಡೆದು ರಿಲೀಸ್ ಮಾಡಲು ಮುಂದಾಗಿದೆ. ಇದರೊಂದಿಗೆ ಇನ್ನೂ ಹನ್ನೊಂದು ಸಿನಿಮಾಗಳ ರೈಟ್ಸ್ ಪಡೆದು ರಿಲೀಸ್ ಮಾಡುವ ತಯಾರಿಯಲ್ಲಿದೆ. ‘ಡೈಮಂಡ್ ಕ್ರಾಸ್’ ಚಿತ್ರವನ್ನು ನಾಗತಿಹಳ್ಳಿ ಅವರ ಅಕ್ಕನ ಮಗ ರಾಮ್ ದೀಪ್ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದ ಪ್ರತಿಭೆ ಧ್ರುವ , ರೋಜರ್ ನಾರಾಯಣ್ ಸೇರಿದಂತೆ ಹಲವರು ಸಿನಿಮಾದಲ್ಲಿದ್ದಾರೆ. ಕನ್ನಡಕ್ಕೆ ಈ ರೀತಿಯ ಒಂದು ಫ್ಲಾಟ್ ಫಾರಂ ಕೊರತೆ ಇತ್ತು. ಅದನ್ನು ಮನೀಶ್ ಅಂಡ್ ಮಿತ್ರ ಎಂಟರ್ಟೈನ್ ಸಂಸ್ಥೆ ದೊಡ್ಡ ಪ್ರಯತ್ನಕ್ಕೆ ಮುಂದಾಗಿದೆ. ಇದನ್ನೂ ಓದಿ:ನೆಗೆಟಿವ್ ಕಾಮೆಂಟ್ ಗೆ ಹೆದರಲ್ಲ, ತುಂಬಾ ಜನ ನನ್ನನ್ನು ಪ್ರೀತಿಸ್ತಾರೆ ಎಂದ ಸೋನು ಶ್ರೀನಿವಾಸ್ ಗೌಡ

    ಈಗ ಸಿನಿಮಾ ಮಾಡಿ ರಿಲೀಸ್ ಮಾಡೋದು ಕಷ್ಟ ಸಾಧ್ಯ. ಅದರಲ್ಲೂ ಹಾಕಿದ ಬಂಡವಾಳ ಹಿಂದಕ್ಕೆ ಬಂದರೆ ಅದೇ ಗೆಲುವು. ಇಂತಹದರಲ್ಲಿ ಹೊಸಬರ ಕಂಟೆಂಟ್ ಸಿನಿಮಾಗಳು ಬಿಡುಗಡೆಗೆ, ವ್ಯಾಪಾರಕ್ಕೆ ಅಲೆದಾಡುವ ಸ್ಥಿತಿ ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಈ ಸಂಸ್ಥೆ ಸಿನಿಮಾಗಳ ಖರೀದಿಸಿ, ಬಿಡುಗಡೆ ಮಾಡುವ ಉದ್ದೇಶ ಹೊಂದಿದೆ. ಇನ್ನು, ಎಲ್ಲಾ ಸಿನಿಮಾಗಳ ರೈಟ್ಸ್ ಅಸಾಧ್ಯ. ಇಲ್ಲೂ ಕೆಲ ಮಾನದಂಡಗಳಿವೆ. ಸಂಸ್ಥೆಯ ಮುಖ್ಯಸ್ಥ ಮನೀಶ್ ಅವರು ಹೇಳುವಂತೆ, ಸದಭಿರುಚಿಯ ಸಿನಿಮಾಗಳನ್ನು ಖರೀದಿಸಿ, ಅವರ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ನಟ ಮಿತ್ರ ಅವರು ಸಿನಿಮಾ ವೀಕ್ಷಿಸಿ, ಅದರ ಕಂಟೆಂಟ್ ಹಾಗು ಕ್ವಾಲಿಟಿ ಪರಿಶೀಲಿಸಿ, ಅದು ಚೆನ್ನಾಗಿದೆ ಎಂದು ಸರ್ಟಿಫಿಕೇಟ್ ಕೊಟ್ಟ ಬಳಿಕವೇ ಆ ಸಿನಿಮಾ ರೈಟ್ಸ್ ಇತ್ಯಾದಿ ಬಗ್ಗೆ ಅಂತಿಮಗೊಳಿಸಲಾಗುತ್ತದೆ ಎನ್ನುತ್ತಾರೆ.

    ಮಿತ್ರ ಅವರ ಪ್ರಕರ, ಈ ವೇದಿಕೆ ಹುಟ್ಟುಹಾಕಿದ್ದೇ, ಹೊಸ ಪ್ರತಿಭೆಗಳಿಗಂತೆ. ಸಿನಿಮಾ ಮಾಡಿ ರಿಲೀಸ್ ಮಾಡಲಾಗದೆ, ವ್ಯಾಪಾರ ಮಾಲಾಗದೆ ಅಸಹಾಯಕರಾಗುವ ನಿರ್ಮಾಪಕರಿಗೆ ಸಾಥ್ ನೀಡಬೇಕೆಂಬ ಉದ್ದೇಶದಿಂದ. ಅದೀಗ ಸಾಕಾರವಾಗುತ್ತಿದೆ. ಈ ವೇದಿಕೆ ಮೂಲಕ ಕನ್ನಡದ ಒಂದಷ್ಟು ಪ್ರತಿಭಾವಂತರನ್ನು ಗಟ್ಟಿಗೊಳಿಸುವ ಸಣ್ಣ ಪ್ರಯತ್ನ ನಮ್ಮದು ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]