Tag: Naguvin hugala mele

  • ವೆಂಕಟ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ‘ಯು’ ಪ್ರಮಾಣಪತ್ರ

    ವೆಂಕಟ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ‘ಯು’ ಪ್ರಮಾಣಪತ್ರ

    ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚಿಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ  ತನ್ನದಾಗಿಸಿಕೊಂಡಿದೆ.

    ಶ್ರೀರಂಗ , ಕೆಂಪಿರ್ವೆ ಮತ್ತು  ಆಮ್ಲೆಟ್  ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್ ಭಾರದ್ವಾಜ್ (Venkat Bharadwaj) ಆಕ್ಷನ್ ಕಟ್ ಹೇಳಿರುವ ನಗುವಿನ ಹೂಗಳ ಮೇಲೆ  (Naguvin Hugala mele) ಸಿನಿಮಾದಲ್ಲಿ ಕಿರುತೆರೆಯಲ್ಲಿ ಖ್ಯಾತಿ ಗಳಿಸಿರುವ ಅಭಿದಾಸ್ (Abhidas), ಶರಣ್ಯ ಶೆಟ್ಟಿ (Sharanya Shetty)ಜೋಡಿಯಾಗಿ ನಟಿಸುತ್ತಿದ್ದು, ಬಾಲ ರಾಜವಾಡಿ, ಆಶಾ ಸುಜಯ್, ಗಿರೀಶ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತ್ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

    ಈಗಾಗಲೇ ಬಿಡುಗಡೆಯಾಗಿರುವ ಇರಲಿ ಬಿಡು ಈ ಜೀವ ನಿನಗಾಗಿ ಎಂಬ ರೋಮ್ಯಾಂಟಿಕ್ ಹಾಡು ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ವೆಂಕಟ್‌ ಭಾರದ್ವಾಜ್‌ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸಿರುವ ನಗುವಿನ ಹೂಗಳ ಮೇಲೆ ಸಿನಿಮಾವನ್ನು ಟಾಲಿವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳಾದ  ಬೆಂಗಾಲ್ ಟೈಗರ್, ಪಂಥಂ, ಒರೆ ಬುಜ್ಜುಗ , ಒಡೇಲ ರೈಲ್ವೆ ಸ್ಟೇಷನ್  ಮತ್ತು ಪ್ಯಾರ್  ಮೇ ಪಡೀಪೊಯಾನು ಚಿತ್ರಗಳನ್ನು ನಿರ್ಮಾಣ ಮಾಡಿರುವ  ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ.

    ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸವಿರುವ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

  • ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಲಂಡನ್ ಸ್ಟುಡಿಯೋದಲ್ಲಿ ಕನ್ನಡ ಚಿತ್ರಕ್ಕೆ ಹಿನ್ನೆಲೆ ಸಂಗೀತ

    ಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ.

    ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ ಸುಸೂತ್ರವಾಗಿ ಮುಗಿಸಿದ್ದು 7.1 ಫೈನಲ್ ಔಟ್ ಪುಟ್ ದೊರೆತಿದೆ. ಔಟ್ ಪುಟ್ ಕಂಡು ನಿರ್ದೇಶಕ ವೆಂಕಟ್ ಭಾರದ್ವಾಜ್ ಹರುಷಗೊಂಡಿದ್ದು, ಸಂತಸ ಹಂಚಿಕೊಂಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ನಡೆಸುತ್ತಿದೆ. ಇದೀಗ ಚಿತ್ರದ ಬ್ಯಾಗ್ರೌಂಡ್ ಸ್ಕೋರ್ ಅಂದುಕೊಂಡಂತೆ ಯಶಸ್ವಿಯಾಗಿರೋದು ಚಿತ್ರತಂಡದ ಸಂಭ್ರಮ ಹೆಚ್ಚಿಸಿದೆ. ಇದನ್ನೂ ಓದಿ:ಶ್ರದ್ಧಾ ಹೆಸರಿನ ಮುಂದಿರುವ ಈ ರಮಾ ಯಾರು? 

    ನಾಯಕ ಅಭಿಷೇಕ್ ರಾಮದಾಸ್, ನಾಯಕಿ ಶರಣ್ಯಾ ಶೆಟ್ಟಿ ಚಿತ್ರದ ಪ್ರಚಾರ ಕಾರ್ಯವನ್ನು ವಿಭಿನ್ನವಾಗಿ ನಡೆಸುತ್ತಿದ್ದು, ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಾಲ ರಾಜವಾಡಿ, ಗಿರೀಶ್, ಆಶಾ ಸುಜಯ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತಾ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ. ರೋಮ್ಯಾಂಟಿಕ್  ಜೊತೆಗೆ ಆಕ್ಷನ್ ಕಥಾಹಂದರ ಒಳಗೊಂಡ ಈ ಚಿತ್ರವನ್ನು ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ತೆಲುಗಿನ ಖ್ಯಾತ ನಿರ್ಮಾಪಕರಾದ ಕೆ.ಕೆ ರಾಧಾ ಮೋಹನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಮೊದಲ ಕನ್ನಡ ಸಿನಿಮಾವಾಗಿದೆ. ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ,  ಪ್ರಮೋದ್ ಭಾರತಿಯ ಛಾಯಾಗ್ರಹಣ, ಟೈಗರ್ ಶಿವು ಸಾಹಸ ಚಿತ್ರಕ್ಕಿದೆ.

     

    Live Tv
    [brid partner=56869869 player=32851 video=960834 autoplay=true]