ಬೆಂಗಳೂರು: ಕನ್ನಂಬಾಡಿ (Kannambadi Dam) ಕಟ್ಟಲು ಟಿಪ್ಪು ಸುಲ್ತಾನ್ (Tipu Sultan) ಅಡಿಗಲ್ಲು ಹಾಕಿದ್ದರು ಎಂಬ ಸಚಿವ ಮಹದೇವಪ್ಪ (Mahadevappa) ಹೇಳಿಕೆಗೆ ಇತಿಹಾಸ ತಜ್ಞ, ಸಂಶೋಧಕ ಡಾ. ತಲಕಾಡು ಚಿಕ್ಕರಂಗೇಗೌಡ (Talakadu Chikkarangegowda) ಬೇಸರ ವ್ಯಕ್ತಪಡಿಸಿದ್ದಾರೆ.
ಸಚಿವರ ಅಕ್ಕಪಕ್ಕ ಇದ್ದವರು ಸರಿಯಾದ ಮಾಹಿತಿ ನೀಡಿಲ್ಲ. ಸಚಿವರಿಗೆ ಇತಿಹಾಸದ ಬಗ್ಗೆ ಚೆನ್ನಾಗಿ ಗೊತ್ತಿದೆ. ಕನ್ನಂಬಾಡಿಯ ಸಂಪೂರ್ಣ ಕ್ರೆಡಿಟ್ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಸಲ್ಲಬೇಕು ಎಂದು ಹೇಳಿದರು. ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ (Nalwadi Krishnaraja Wadiyar) ಅಣೆಕಟ್ಟು ಕಟ್ಟಲು ಆರ್ಥಿಕ ಸಮಸ್ಯೆ ಬಂದಾಗ ಅವರ ತಾಯಿ, ಪತ್ನಿ ಒಡೆವೆಗಳನ್ನು ಮಾರಿ ನೀರಾವರಿ ಯೋಜನೆಗೆ ಸಹಕರಿಸಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹದೇವಪ್ಪ
ಶಿಲಾನ್ಯಾಸದಲ್ಲಿ ಟಿಪ್ಪು ಹೆಸರು ಯಾಕೆ ಇದೆ ಅಂದರೆ, ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತಕ್ಕಿಂತ ಹಿಂದೆ ಟಿಪ್ಪು ಸುಲ್ತಾಲ್‌ಗೆ ಅಣೆಕಟ್ಟು ಕಟ್ಟುವ ಕನಸಿತ್ತು. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಉದಾರತೆಯಿಂದ ಶಿಲಾನ್ಯಾಸದ ಬೋರ್ಡ್‌ಗೆ ಟಿಪ್ಪು ಹೆಸರು ಹಾಕಿಸಿದ್ದರು. ಇದನ್ನೇ ನೋಡಿ ಕೆಲವರು ಕನ್ನಂಬಾಡಿ ಕಟ್ಟಿಸಿದ್ದು ಟಿಪ್ಪು ಅಂದು ಕೊಂಡಿದ್ದಾರೆ ಎಂದು ವಿವರಣೆ ನೀಡಿದರು.
ಮೈಸೂರು: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಯತೀಂದ್ರ ವಿರುದ್ಧ ವಿಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.
ಆರ್.ಅಶೋಕ್ ಮಾತನಾಡಿ, ತಂದೆ ಮೇಲಿರುವ ದುರಭಿಮಾನದಿಂದ ಹೇಳಿದ್ದಾರೆ. ಕರ್ನಾಟಕಕ್ಕೆ ಒಡೆಯರ್ ಅವರ ಕಾಣಿಕೆ ತುಂಬಾ ಇದೆ. ಕೆಆರ್‌ಎಸ್‌ನಿಂದ ನಾವು ಅನ್ನ ತಿಂದಿದ್ದೇವೆ. ಎಲ್ಲಾ ಸಮುದಾಯಕ್ಕೆ ಸಾಮಾಜಿಕ ನ್ಯಾಯ ತಂದವರು ಒಡೆಯರ್. ಮುಡಾದಲ್ಲಿ 14 ಸೈಟ್ ನನಗೆ ಬೇಕು ಎಂದ ಸಿದ್ದರಾಮಯ್ಯ ಅವರನ್ನು, ಚಿನ್ನ ಅಡವಿಟ್ಟು ಕೆಆರ್‌ಎಸ್ ಕಟ್ಟಿದವರಿಗೆ ಹೋಲಿಕೆ ಮಾಡೋದು ಹಾಸ್ಯಾಸ್ಪದ. ಗಾಂಧೀಜಿ ಅವರಿಗೆ ಹೋಲಿಕೆ ಮಾಡ್ಲಿಲ್ವಲ್ಲ ಪುಣ್ಯ. ಇದು ರಾಜಮನೆತನಕ್ಕೆ, ಮೈಸೂರಿನ ಜನಕ್ಕೆ ಮಾಡಿದ ಅವಮಾನ. ಕೂಡಲೇ ಯತೀಂದ್ರ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಯದುವೀರ್ ಒಡೆಯರ್ ಪ್ರತಿಕ್ರಿಯಿಸಿ, ಯಾರು ಯಾರಿಗೂ ಹೋಲಿಕೆ ಮಾಡಿ ಮಾತನಾಡುವುದು ಸರಿಯಲ್ಲ. ನಾನು ಅವರಿಗಿಂತ ಜಾಸ್ತಿ ಇವರಿಗಿಂತ ಕಡಿಮೆ ಎಂದುಕೊಳ್ಳಬಾರದು. ಮಹಾರಾಜರು ಅವರ ಕೆಲಸ ಅವರು ಮಾಡಿದ್ದಾರೆ. ಇವರು ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಹೇಳಬೇಕು. ಮಹಾರಾಜರು ಮಾಡಿದ ಕೆಲಸ ಜನರ ಮುಂದೆ ಇದೆ. ನಾನು ಅದೇ ವಂಶಸ್ಥನಾಗಿ ಈ ಬಗ್ಗೆ ಮಾತನಾಡಿದರೆ ಸರಿ ಅನ್ನಿಸುವುದಿಲ್ಲ. ಜನರಿಗೆ ಗೊತ್ತಿದೆ ಮಹಾರಾಜರು ಏನು ಮಾಡಿದ್ದಾರೆ ಎಂಬುದು. ವಿಷಯಗಳನ್ನ ಡೈವರ್ಟ್ ಮಾಡಲು ಯಾವ ಯಾವುದೋ ವಿಚಾರವನ್ನ ಹೇಳುವುದು ಸರಿಯಲ್ಲ. ಮೈಸೂರು ವಿಮಾನ ನಿಲ್ದಾಣಕ್ಕೆ ಕಳೆದ 15 ವರ್ಷಗಳಿಂದ ಏನು ಕೊಟ್ಟಿದ್ದೀರಾ? ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಮೊದಲು ಜನರ ಸಮಸ್ಯೆ ಪರಿಹರಿಸಿ. ಟ್ಯಾಕ್ಸ್ ಹೆಸರಿನಲ್ಲಿ ಬಡ ವ್ಯಾಪರಸ್ಥರಿಗೆ ಹಿಂಸೆ ಕೊಡಲಾಗುತ್ತಿದೆ. ಮೊದಲು ಇದನ್ನು ನಿಲ್ಲಿಸಿ. ನೀವು ನೀವೇ ಹೋಲಿಕೆ ಮಾಡಿಕೊಳ್ಳುವುದು ಬೇಡ ಎಂದು ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 2011ರಿಂದಲೂ ಚುನಾವಣೆಯಲ್ಲಿ ಅಕ್ರಮ ನಡೆಯುತ್ತಲೇ ಇದೆ: ರಾಮಲಿಂಗಾ ರೆಡ್ಡಿ
ಮಾಜಿ ಸಚಿವ ಅಡಗೂರು ಹೆಚ್.ವಿಶ್ವನಾಥ್ ಮಾತನಾಡಿ, ಇದು ದುರಹಂಕಾರದ ಪರಮಾವಧಿ. ಸಿದ್ದರಾಮಯ್ಯ ಯಾವಾಗಲೂ ನಾನೇ ನಾನೇ ಅಂತಾರೆ. ದೇವರಾಜ ಅರಸುಗಿಂತಾ ನಾನೇ ಒಳ್ಳೆ ಆಡಳಿತ ಕೊಟ್ಟಿದ್ದು ಅಂತಾರೆ. ನಾನೇ ನಾನೇ ಎನ್ನುವ ಅಹಂ, ದುರಹಂಕಾರ ಸಿದ್ದರಾಮಯ್ಯ ಕುಟುಂಬದಲ್ಲಿ ವಂಶವಾಹಿ ರೀತಿ ಹರಿದು ಕೊಂಡು ಬಂದಿದೆ. ಸಿದ್ದರಾಮಯ್ಯ ಹಾಗೂ ಅವರ ಮಗ ಮನುಷ್ಯ ದ್ವೇಷಿಗಳು ಥರ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯರ ಮಗ ಈ ದೌಲತ್‌ಗಿರಿ ಮೊದಲು ಬಿಡಲಿ. ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಹೋಲಿಕೆ ಮಾಡುವ ಯಾವ ರಾಜಕಾರಣಿ ಈ ದೇಶದಲ್ಲೇ ಇಲ್ಲ ಎಂದು ಕಿಡಿಕಾರಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಯತೀಂದ್ರ ಅವರೇ ನಿಮ್ಮಪ್ಪನ ಕೊಡುಗೆ ಏನೂ ಹೇಳಿ? ಕೆಆರ್ ಆಸ್ಪತ್ರೆಗೆ ಸುಣ್ಣ ಹೊಡೆಸಲು ನಿಮ್ಮಪ್ಪನ ಕೈಯಲ್ಲಿ ಆಗಿಲ್ಲ. ಮೈಸೂರಿಗೆ ನಿಮ್ಮಪ್ಪನ ಕೊಡುಗೆ ಏನೂ ಹೇಳಿ? ನಿಮ್ಮ ಅಮ್ಮ-ಅಪ್ಪ ಸೇರಿ ಮುಡಾದಲ್ಲಿ ಸೈಟ್ ಹೊಡೆದರು, ಅದೇನಾ ನಿಮ್ಮ ಅಪ್ಪನಾ ಕೊಡುಗೆ ಯತೀಂದ್ರ ಎಂದು ಟಾಂಗ್ ಕೊಟ್ಟಿದ್ದಾರೆ.
ಮಂಡ್ಯ: 87ನೇ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನ (87th Kannada Literary Conference) ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯಲ್ಲಿ ಜರುಗಲಿದೆ. ಸಮ್ಮೇಳನದ ಆರಂಭಕ್ಕೂ ಮೊದಲೇ ಇದೀಗ ಟಿಪ್ಪು ಸುಲ್ತಾನ್ ಬಗೆಗಿನ ವಿಚಾರ ಸಂಕಿರಣದ (Symposium) ವಿವಾದ ಹುಟ್ಟಿಕೊಂಡಿದೆ.
ಮಂಡ್ಯದಲ್ಲಿ ನಡೆಯುವ ಈ ಸಮ್ಮೇಳನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್ ಅವರನ್ನು ನೆನೆಯಬೇಕು. ಇವರಿಗಿಂತ ಹೆಚ್ಚಾಗಿ ಟಿಪ್ಪು ಸುಲ್ತಾನ್ ಅವರನ್ನು ನೆನಯಬೇಕು. ಟಿಪ್ಪು ರೈತರಿಗೆ, ಜನ ಸಾಮಾನ್ಯರಿಗೆ ಹಾಗೂ ಮಂಡ್ಯ ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ಟಿಪ್ಪು ಆಡಳಿತ ವ್ಯವಸ್ಥೆಯನ್ನು ನಾವು ಇಂದಿಗೂ ಸಹ ಅಳವಡಿಸಿಕೊಂಡಿದ್ದೇವೆ, ಹೀಗಿರುವಾಗ ಟಿಪ್ಪು ನೆನೆಯುವುದು ನಮ್ಮ ಕರ್ತವ್ಯ ಎಂದು ಪ್ರಗತಿಪರರು ಪಟ್ಟು ಹಿಡಿದಿದ್ದಾರೆ.
ಇನ್ನೂ ಇದಕ್ಕೆ ಹಿಂದೂ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. ಟಿಪ್ಪು ಒಬ್ಬ ಕನ್ನಡ ಹಾಗೂ ಹಿಂದೂ ವಿರೋಧಿಯಾಗಿದ್ದ. ಈತ ಕನ್ನಡದ ಬದಲು ಪರ್ಷಿಯನ್ ಭಾಷೆಗೆ ಹೆಚ್ಚು ಒಲವು ನೀಡುತ್ತಿದ್ದ ವ್ಯಕ್ತಿ. ಇಂತಹ ವ್ಯಕ್ತಿಯ ವಿಚಾರ ಸಂಕೀರ್ಣವನ್ನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಡಲು ಮುಂದಾದರೆ ನಾವು ತಡೆಯುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯಿಸಿಕೊಂಡು ಲಕ್ಷ ಲಕ್ಷ ವಂಚನೆ – ಆರೋಪಿ ಅರೆಸ್ಟ್
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲಿ ಅಭಿವೃದ್ಧಿಗೆ ಹೊಸ ವ್ಯಾಖ್ಯಾನ ಬರೆದ ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನಲ್ಲಿ ಕೆಲವು ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ನಿರಾಣಿ ಅವರು, ಮುಂದಿನ ಯುವಜನಾಂಗಕ್ಕೆ ಇದು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಪಠ್ಯ ಪುಸ್ತಕದಲ್ಲಿ ಅವರ ಚರಿತ್ರೆಯನ್ನು ಆಳವಡಿಸಲು ಕ್ರಮಕೈಗೊಳ್ಳಬೇಕು. ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯನ್ನು ಎಂಜಿನಿಯರ್ ದಿನಾಚರಣೆ ಮಾಡಿದಂತೆ ಇನ್ನು ಮುಂದೆ ಜೂನ್ 4 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನವನ್ನು ಸರ್ಕಾರದ ವತಿಯಿಂದ ಆಚರಿಸಬೇಕು. ಅನೇಕ ಕೈಗಾರಿಕೆಗಳ ಸ್ಥಾಪನೆಗೆ ಕಾರಣೀಭೂತರಾದ ಅವರ ದಿನಾಚರಣೆಯನ್ನು ‘ಕೈಗಾರಿಕಾ ದಿನಾಚರಣೆ’ ಎಂದು ಆಚರಿಸಲು ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶತಕದಂಚಿಗೆ ತಲುಪಿದ ಪೆಟ್ರೋಲ್ ಬೆಲೆ
ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆ ಸ್ಥಾಪನೆ, ಪಠ್ಯಪುಸ್ತಕಗಳಲ್ಲಿ ಜೀವನ ಚರಿತ್ರೆ ಅಳವಡಿಕೆ, ಕೈಗಾರಿಕಾ ಹಾಗೂ ಪ್ರತಿ ವರ್ಷ ಜೂನ್ 4 ರಂದು ಜನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದಲೇ ಆಚರಣೆ ಮಾಡುವಂತೆ ಕೋರಿದ್ದಾರೆ.
ರಾಜ್ಯದ ಪ್ರಮುಖ ಸ್ಥಳಗಳಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ನಿರ್ಮಿಸಿರುವುದರಿಂದ ದೇಶ – ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಅವರ ವ್ಯಕ್ತಿತ್ವವನ್ನು ಪರಿಚಯಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಇವರ ಕಾಲದಲ್ಲಿ ಮೈಸೂರು ರಾಜ್ಯದಲ್ಲಿ ಹೆಸರಿಗೆ ಮಾತ್ರ ಇದ್ದ ‘ಪ್ರಜಾ ಪ್ರತಿನಿಧಿ ಸಭೆ’ಯು ನೂತನ ರೂಪವನ್ನು ಪಡೆದು, ನಿಜವಾದ ಜನ ಪ್ರತಿನಿಧಿ ಸಭೆಯಾಗಿ ಪರಿವರ್ತನೆಯಾಯಿತು. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ 1905ರ ಆಗಸ್ಟ್ 3 ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು. ಮೈಸೂರು ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದ್ದು ಒಡೆಯರ್ ಅವರ ಮತ್ತೊಂದು ಮೈಲಿಗಲ್ಲು ಎಂದು ನಿರಾಣಿ ಅವರು ಬಣ್ಣಿಸಿದ್ದಾರೆ. ಇದನ್ನೂ ಓದಿ: ಸೋಂಕಿತ ಮಾವನನ್ನು ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ಸಾಗಿದ ಸೊಸೆ
ದೇಶದಲ್ಲೇ ಮೊಟ್ಟಮೊದಲ ಬಾರಿಗೆ ವಿಶ್ವವಿದ್ಯಾನಿಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಅವರ ಕಾಲದಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ 27೦ ಉಚಿತ ಆಸ್ಪತ್ರೆಗಳು ಕಾರ್ಯಾರಂಭ ಮಾಡಿದವು. ಬೆಂಗಳೂರಿನ ಮಿಂಟೊ ಕಣ್ಣಾಸ್ಪತ್ರೆ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿತ್ತು. ಮೈಸೂರಿನ ಕ್ಷಯರೋಗ ಆಸ್ಪತ್ರೆ ಉತ್ತಮಗೊಂಡಿತು. ವಾಣಿಜ್ಯ ಕ್ಷೇತ್ರದಲ್ಲಿ ಮೈಸೂರು ಬ್ಯಾಂಕ್ ಖಾಸಗಿ ಸಹಭಾಗಿತ್ವದೊಡನೆ ಕಾರ್ಯಾರಂಭ ಮಾಡಿತು. ಈ ಎಲ್ಲಾ ಸಾಧನೆಯನ್ನು ಪರಿಗಣಿಸಿ ಸರ್ಕಾರ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಬರೆದಿರುವ ಪತ್ರದಲ್ಲಿ ನಿರಾಣಿ ಅವರು ಮನವಿ ಮಾಡಿದ್ದಾರೆ.