`ಸಿಂಹಪ್ರಿಯ’ ಜೋಡಿಯೆಂದೇ ಖ್ಯಾತಿಗಳಿಸಿದ್ದ ನಟ ವಸಿಷ್ಠ ಸಿಂಹ (Vasishta Simha) ಹಾಗೂ ನಟಿ ಹರಿಪ್ರಿಯಾ (Haripriya) ತಮ್ಮ ಮುದ್ದಾದ ಮಗನಿಗೆ ಕೃಷ್ಣ ಜನ್ಮಾಷ್ಟಮಿಯಂದೇ (Krishna Janmashtami) ನಾಮಕರಣ ಮಾಡಿದ್ದಾರೆ.
ದಂಪತಿಯು ಪುಟ್ಟ ಕೃಷ್ಣನಿಗೆ ವಿಪ್ರಾ ಎನ್ ಸಿಂಹ (Viprah N Simha) ಎಂದು ಹೆಸರಿಟ್ಟಿದ್ದಾರೆ. 2023ರ ಜನವರಿ 26ರಂದು ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. 2025 ಜನವರಿ 26ರಂದು ಹರಿಪ್ರಿಯಾ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಇದೀಗ ದಂಪತಿಗಳು ಮಗನ ನಾಮಕರಣದ ಸಂಭ್ರಮದಲ್ಲಿದ್ದಾರೆ. ಇದೀಗ ಮೂವರು ಹಳದಿ ಬಣ್ಣದ ಸೇಮ್ ಕಾಸ್ಟ್ಯೂಮ್‌ನಲ್ಲಿ ಮಿಂಚಿದ್ದಾರೆ. ಸದ್ಯ ಸಿಂಹಪ್ರಿಯ ಜೋಡಿಯ ಮಗನ ನಾಮಕರಣದ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಾಮಕರಣ ಕಾರ್ಯಕ್ರಮದಲ್ಲಿ ನಟಿ ಪ್ರಣಿತಾ, ಸೊನಾಲ್, ಕೆಜಿಎಫ್ ಖ್ಯಾತಿಯ ಗರುಡ ರಾಮ್ ಹಾಗೂ ಇನ್ನಿತರ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ
ಲಕ್ನೋ: ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯ ಯಶಸ್ಸಿನ ಹೆಮ್ಮೆಯಿಂದಾಗಿ ಉತ್ತರ ಪ್ರದೇಶದ (Uttara Pradesh) ಕುಷಿನಗರದಲ್ಲಿ 17 ನವಜಾತ ಶಿಶುಗಳಿಗೆ `ಸಿಂಧೂರ’ (Sindoor) ಎಂದು ನಾಮಕರಣ ಮಾಡಿದ್ದಾರೆ.
ಏ.22 ರಂದು ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಇದಕ್ಕೆ ಪ್ರತೀಕಾರವಾಗಿ ಮೇ 7ರಂದು ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಅಡಿಯಲ್ಲಿ ಪಾಕ್‌ನ 9 ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತು.ಇದನ್ನೂ ಓದಿ: ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ – ಸೈನಿಕರನ್ನು ಭೇಟಿಯಾದ ಮೋದಿ
ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದ ಎರಡು ದಿನಗಳ ಬಳಿಕ ಮೇ 9 ಮತ್ತು 10ರಂದು ಜನಿಸಿದ 17 ಮಕ್ಕಳಿಗೆ `ಸಿಂಧೂರ’ ಎಂದು ಹೆಸರಿಟ್ಟಿದ್ದು, ಆಪರೇಷನ್ ಸಿಂಧೂರದ ಯಶಸ್ಸು ಭಾರತೀಯರ ಹೆಮ್ಮೆ ಎಂದು ತಿಳಿಸಿದ್ದಾರೆ.
ಈ ಕುರಿತು ನವಜಾತ ಶಿಶುವಿನ ತಾಯಿ ನೇಹಾ ಗುಪ್ತಾ ಮಾತನಾಡಿ, ಉತ್ತರ ಪ್ರದೇಶದ ಪೂರ್ವ ಭಾಗದಲ್ಲಿ ಈ ರೀತಿ ಹೆಸರಿಡುವುದು ಹಿಂದೂ ಸಂಪ್ರದಾಯಕ್ಕೆ ವಿರುದ್ಧವಾಗಿದೆ. ಇಲ್ಲಿ ನವಜಾತ ಶಿಶುಗಳಿಗೆ ತಂದೆಯ ಚಿಕ್ಕಮ್ಮ ಹೆಸರಿಡುತ್ತಾರೆ. ಆದರೆ ಹೆಣ್ಣುಮಕ್ಕಳ ಸಂಕೇತ ಈ `ಸಿಂಧೂರ’ ಈಗ ಒಗ್ಗಟಿನ ಸಂಕೇತವಾಗಿದೆ. ನಮ್ಮ ಸೈನಿಕರು ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿಕೊಂಡ ಎರಡು ದಿನಗಳ ನಂತರ, ಮೇ 9 ರಂದು ನನ್ನ ಮಗು ಜನಿಸಿತು. ಮೃತ ಕುಟುಂಬಸ್ಥರ ನೋವಿನ ಬಗ್ಗೆ ನನಗೆ ಕಾಳಜಿಯಿದೆ. ಆದರೆ ಇದಕ್ಕೆ ಸೇಡು ತೀರಿಸಿಕೊಂಡ ನಮ್ಮ ಗಡಿ ಕಾಯುವ ಸೈನಿಕರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಹೀಗಾಗಿ ಅವರನ್ನು ಗೌರವಿಸುವ ಉದ್ದೇಶದಿಂದ ನನ್ನ ಮಗಳಿಗೆ `ಸಿಂಧೂರ’ ಎಂದು ಹೆಸರಿಟ್ಟಿದ್ದೇನೆ ಎಂದು ತಿಳಿಸಿದರು.
ಕುಷಿನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಕೆ.ಶಾಹಿ ಮಾತನಾಡಿ, ಆಸ್ಪತ್ರೆಯಲ್ಲಿ ಜನಿಸಿದ 17 ಶಿಶುಗಳಿಗೆ `ಸಿಂಧೂರ’ ಎಂದು ನಾಮಕರಣ ಮಾಡಿದ್ದಾರೆ. ಇದು ಜನರು ರಾಷ್ಟ್ರದ ಮೇಲಿನ ಪ್ರೀತಿಯನ್ನು ಯಾವ ರೀತಿ ತೋರಿಸುತ್ತಾರೆ ಎನ್ನುವುದನ್ನು ಪ್ರತಿಬಿಂಬಿಸುತ್ತದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ತ್ಯಾಗ ಮತ್ತು ರಾಷ್ಟ್ರೀಯ ಏಕತೆಯ ಸಂಕೇತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸಾಮಾಜಿಕ ಕಾರ್ಯಕರ್ತ ರಾಜೇಶ್ ಮಣಿ ಮಾತನಾಡಿ, ಕುಶಿನಗರ ಮತ್ತು ಉತ್ತರ ಪ್ರದೇಶದ ಕೆಲವು ಜಿಲ್ಲೆಗಳ ಅನೇಕ ಕುಟುಂಬಗಳಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸಿದವರಿದ್ದಾರೆ. ನನ್ನ ಮಗುವಿನ ಜನನಕ್ಕೂ ಮುಂಚೆಯೇ `ಸಿಂಧೂರ’ ಎಂಬುದು ಹೆಸರಾಗಿರಬೇಕು ಎಂದು ನಿರ್ಧರಿಸಿದ್ದೆ, ಇದು ಧೈರ್ಯವನ್ನು ಸೂಚಿಸುತ್ತದೆ ಎಂದು ಹೇಳಿದರು.ಇದನ್ನೂ ಓದಿ: ಪಾಕ್ ಶೆಲ್ ದಾಳಿ, ಯುದ್ಧದ ತೀವ್ರತೆಯ ಅನುಭವ ಬಿಚ್ಚಿಟ್ಟ ಕಾಶ್ಮೀರದಿಂದ ಮರಳಿದ ಕನ್ನಡಿಗ ವಿದ್ಯಾರ್ಥಿಗಳು
ಕೊಡಗಿನ ಕುವರಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಬಿಗ್ ಬಾಸ್ ಸೀಸನ್ 4ರ ಸ್ಪರ್ಧಿ ಭುವನ್ ಪೊನ್ನಣ್ಣ (Bhuvan Ponnanna) ದಂಪತಿ ಕೊಡವ ಸಂಪ್ರದಾಯದಂತೆ ಇಂದು ವಿರಾಜಪೇಟೆಯಲ್ಲಿ ಮುದ್ದು ಮಗಳ ನಾಮಕರಣ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಆಧುನಿಕ ಶೈಲಿಯ ಹೆಸರನ್ನಿಡುವ ಈ ಕಾಲದಲ್ಲಿ ಹರ್ಷಿಕಾ-ಭುವನ್ ಮಗಳಿಗೆ ವಿಭಿನ್ನವಾಗಿ ದೇವಿಯ ಹೆಸರನ್ನಿಟ್ಟಿದ್ದಾರೆ.
ಹರ್ಷಿಕಾ-ಭುವನ್ ದಂಪತಿ ಮದುವೆ, ಸೀಮಂತ ಹೀಗೆ ಪ್ರತಿಯೊಂದು ಕಾರ್ಯಕ್ರಮವನ್ನೂ ಸಾಂಪ್ರದಾಯಿಕ ಶೈಲಿಯಲ್ಲೇ ಮಾಡಿಕೊಂಡು ಬಂದಿದ್ದರು. ಇದೀಗ ನವರಾತ್ರಿ ಮೊದಲ ದಿನ ಜನಿಸಿದ ಮಗಳಿಗೆ ‘ತ್ರಿದೇವಿ ಪೊನ್ನಕ್ಕ’ (Tridevi Ponnakkaah) ಎಂದು ಸಾಂಪ್ರದಾಯಿಕವಾಗಿ ನಾಮಕರಣ ಮಾಡಿದ್ದಾರೆ. ಮಗಳೊಂದಿಗಿನ ಫೋಟೋ ಹಂಚಿಕೊಳ್ಳುವ ಮೂಲಕ ಮಗಳ ಹೆಸರನ್ನು ದಂಪತಿ ರಿವೀಲ್ ಮಾಡಿದ್ದಾರೆ. ಕೊಡವ ಶೈಲಿಯಲ್ಲೇ ಮಗುವಿಗೆ ಉಡುಪನ್ನು ಧರಿಸಿದ್ದು ವಿಶೇಷವಾಗಿತ್ತು. ನಾಮಕರಣ ಕಾರ್ಯಕ್ರಮದಲ್ಲಿ ದಂಪತಿಯ ಕುಟುಂಬಸ್ಥರು, ಸಿನಿಮಾ ಕಲಾವಿದರು ಹಾಗೂ ಸ್ನೇಹಿತರು ಭಾಗಿಯಾಗಿದ್ದಾರೆ. ಇದನ್ನೂ ಓದಿ: 17 ವರ್ಷದ ಬಳಿಕ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್
ಗರ್ಭಿಣಿಯಾಗಿದ್ದ ಸಂದರ್ಭದಲ್ಲೂ ಹರ್ಷಿಕಾ ಪೂಣಚ್ಚ ವೆಸ್ಟರ್ನ್ ಸ್ಟೈಲ್ ಅನುಸರಿಸದೇ ಸಾಂಪ್ರದಾಯಿಕವಾಗಿ ಕೊಡವ ಶೈಲಿಯಲ್ಲಿಯೇ ಫೋಟೋಶೂಟ್ ಮಾಡಿಸಿಕೊಂಡು ಗಮನಸೆಳೆದಿದ್ದರು. ಇವರ ಸೀಮಂತ ಕಾರ್ಯಕ್ರಮವನ್ನು ಸಹ ಅದ್ಧೂರಿಯಾಗಿ ನೆರವೇರಿಸಲಾಗಿತ್ತು. 2024ರ ಸೆಪ್ಟೆಂಬರ್ ತಿಂಗಳಲ್ಲಿ ಹರ್ಷಿಕಾ ಮುದ್ದಾದ ಹೆಣ್ಣುಮಗುವಿಗೆ ಜನ್ಮಕೊಟ್ಟರು. ಇದನ್ನೂ ಓದಿ: ಕ್ರಿಕೆಟ್ ಲೋಕದ ಕಿಂಗ್ ವಿರಾಟ್ ಕೊಹ್ಲಿ ಬಯೋಪಿಕ್‌ನಲ್ಲಿ ಸಿಂಬು?
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ (Pranitha Subhash) ಮಗನ ನಾಮಕರಣ ಏ.20ರಂದು ಅದ್ಧೂರಿಯಾಗಿ ಜರುಗಿದೆ. ಈ ಸಮಾರಂಭಕ್ಕೆ ಮೋಹಕತಾರೆ ರಮ್ಯಾ (Ramya) ಸೇರಿದಂತೆ ಅನೇಕ ಕನ್ನಡದ ನಟ-ನಟಿಯರು ಭಾಗಿಯಾಗಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್‌ವೊಂದರಲ್ಲಿ ನಟಿಯ ಮಗನ ನಾಮಕರಣ (Naming Ceremony) ನಡೆದಿದೆ. ಈ ಕಾರ್ಯಕ್ರಮಕ್ಕೆ ಸ್ಯಾಂಡಲ್‌ವುಡ್ ನಟ, ನಟಿಯರಿಗೆ ಆಹ್ವಾನ ನೀಡಲಾಗಿತ್ತು. ಅದರಂತೆ ರಮ್ಯಾ ಕೂಡ ನಾಮಕರಣ ಫಂಕ್ಷನ್‌ಗೆ ಆಗಮಿಸಿ ಪ್ರಣಿತಾ ಮಗನಿಗೆ ಶುಭಕೋರಿದರು. ಈ ಸಮಾರಂಭದಲ್ಲಿ ರಮ್ಯಾ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಬಳಿಕ ಕುಟುಂಬಸ್ಥರು ಕಂಗಾಲಾಗಿದ್ದರು. ಕೊಲೆಯಾದಾಗ ರೇಣುಕಾಸ್ವಾಮಿ ಪತ್ನಿ ಸಹನಾ 5 ತಿಂಗಳ ಗರ್ಭಿಣಿಯಾಗಿದ್ದರು. ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಹಾಗೂ ತಾಯಿ ರತ್ನಪ್ರಭ ಮೊಮ್ಮಗನನ್ನು ಎತ್ತಿಕೊಂಡು ಮುದ್ದಾಡಿದ್ದರು. ಮಗನ ತದ್ರೂಪಿಯಾದ ಮೊಮ್ಮನಿಗೆ ಮುತ್ತಿಟ್ಟು ಕಾಶಿನಾಥ್ ಶಿವನ ಗೌಡ ಸಂಭ್ರಮಿಸಿದರು. ಇದನ್ನೂ ಓದಿ: Grand Championship | ಭಾರತ ತಂಡ ಪ್ರತಿನಿಧಿಸುತ್ತಿರೋ ಎನ್‍ಎಫ್‍ಸಿ ಕ್ಲಬ್
ಮೊಮ್ಮಗ ಶಶಿಧರ್ ಸ್ವಾಮಿ ಕೈ ಬೆರಳಿಗೆ ಉಂಗುರ ಹಾಕಿ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನ ಗೌಡ ಸಂಭ್ರಮಿಸಿದರು. ರತ್ನಪ್ರಭ ಮೊಮ್ಮಗನಿಗೆ ಬೆಳ್ಳಿ ಉಡುದಾರ ಹಾಕಿದರು. ಮಗುವನ್ನು ತೊಟ್ಟಿಲಿಗೆ ಹಾಕಿ ತೊಟ್ಟಿಲು ಶಾಸ್ತ್ರ ನೆರೆವೇರಿಸಿದ್ದು, ಕಾರ್ಯಕ್ರಮದಲ್ಲಿ ಬಂಧು ಮಿತ್ರರು ಭಾಗಿಯಾಗಿದ್ದರು.
ಯಾದಗಿರಿ: ಚಂದ್ರಯಾನ-3 ಯಶಸ್ಸಿನ ಸ್ಮರಣಾರ್ಥವಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಮ್ ಹಾಗೂ ಪ್ರಗ್ಯಾನ್ ಎಂದು ಹೆಸರಿಟ್ಟು ಸುದ್ದಿಯಾಗಿದ್ದಾರೆ.
ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ಇಬ್ಬರು ಮಕ್ಕಳಿಗೆ ವಿಕ್ರಮ್ ಮತ್ತು ಪ್ರಗ್ಯಾನ್ ಎಂದು ಹೆಸರಿಟ್ಟು ದೇಶಕ್ಕೆ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಒಂದೇ ಕುಟುಂಬದಲ್ಲಿ ಈಚೆಗೆ ಇಬ್ಬರು ಮಕ್ಕಳು ಜನಿಸಿದ್ದರು. ಬಾಲಪ್ಪ ಹಾಗೂ ನಾಗಮ್ಮ ದಂಪತಿಯ ಮಗುವಿಗೆ ವಿಕ್ರಮ್ ಎಂದು ಹೆಸರಿಡಲಾಗಿದೆ. ಅಲ್ಲದೇ ನಿಂಗಪ್ಪ ಹಾಗೂ ಶಿವಮ್ಮ ದಂಪತಿಯ ಮಗುವಿಗೆ ಪ್ರಗ್ಯಾನ್ ಎಂದು ನಾಮಕರಣ ಮಾಡಲಾಗಿದೆ.
ವಿಕ್ರಮ್ ಹೆಸರಿನ ಮಗು ಜನಿಸಿದ್ದು ಜುಲೈ 28 ರಂದು ಹಾಗೂ ಪ್ರಗ್ಯಾನ್ ಹೆಸರಿನ ಮಗು ಜನಿಸಿದ್ದು ಆಗಸ್ಟ್ 18 ರಂದು. ಆಗಸ್ಟ್ 24 ರಂದು (ಇಸ್ರೋದ ಚಂದ್ರಯಾನ-3 ಸಕ್ಸಸ್ ಆದ ಮಾರನೇ ದಿನ) ಕುಟುಂಬಸ್ಥರು ಎರಡು ಮಕ್ಕಳ ನಾಮಕರಣ ಮಾಡಿದ್ದಾರೆ. ಆ ಮೂಲಕ ಚಂದ್ರಯಾನ-3 ಯಶಸ್ವಿಗೊಳಿಸಿದ ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ರಾಜಕೀಯ ಸಂಚಲನ ಆರಂಭವಾಗಿದೆ. ಗಣಿ ನಾಡಿನ ಇಬ್ಬರು ಸ್ನೇಹಿತರ ನಡುವೆ ಕೋಲ್ಡ್ ವಾರ್ ಆರಂಭವಾಗಿದೆ ಎನ್ನುವ ಅನುಮಾನ ಈಗ ವ್ಯಕ್ತವಾಗಿದೆ.
ಹೌದು. ಒಂದು ಕಾಲದಲ್ಲಿ ಸರ್ಕಾರವನ್ನು ಕಿತ್ತು ಹಾಕಿ ಮತ್ತೊಂದು ಸರ್ಕಾರ ರಚನೆ ಮಾಡುವ ಶಕ್ತಿ ಹೊಂದಿದ್ದ ಈ ಇಬ್ಬರು ನಾಯಕರು ಈಗ ದೂರಾ ದೂರಾ ಆಗಿದ್ದಾರೆ. ಅದಕ್ಕೆ ಕಾರಣ ಜನಾರ್ದನ ರೆಡ್ಡಿ (Janardhan Reddy) ಹಾಗೂ ಸಚಿವ ಶ್ರೀರಾಮುಲು (Sriramulu) ಅವರ ನಡುವಿನ ಕೋಲ್ಡ್ ವಾರ್. ಇಷ್ಟು ದಿನ ಮನಸ್ಸಿನಲ್ಲಿ ಮಾತ್ರ ಇದ್ದ ಕೋಲ್ಡ್ ವಾರ್ ಈಗ ಬಹಿರಂಗವಾಗಿದೆ.
ಕಳೆದ ಮೂರು ದಿನಗಳ ಹಿಂದೆ ಗಾಲಿ ಜನಾರ್ದನ ರೆಡ್ಡಿ ಅವರ ಮೊಮ್ಮಗಳ ನಾಮಕರಣ ಕಾರ್ಯಕ್ರಮವು ಬೆಂಗಳೂರಿನ ಪಾರಿಜಾತ ಅಪಾರ್ಟ್ ಮೆಂಟ್ (Parijatha Apartment) ನಲ್ಲಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಗಾಲಿ ಸೋಮಶೇಖರ್ ರೆಡ್ಡಿ, ಗಾಲಿ ಕರುಣಾಕರ ರೆಡ್ಡಿ ಹಾಗೂ ಮಾಜಿ ಸಿಎಂ ಬಿಎಸ್‍ವೈ ಕೂಡಾ ಭಾಗಿಯಾಗಿದ್ದರು. ಆದರೆ ರೆಡ್ಡಿ ಆಪ್ತ ಸ್ನೇಹಿತ ಶ್ರೀರಾಮುಲು ಮಾತ್ರ ಭಾಗಿ ಆಗಿರಲಿಲ್ಲ. ಈಗ ಇದು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜನಾರ್ದನ ರೆಡ್ಡಿ ಚುನಾವಣೆಯಲ್ಲಿ ಸ್ಪರ್ಧಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ಕೊಡಲೇ ಇಲ್ಲಾ ಇದೇ ಕಾರಣಕ್ಕೆ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಲು ಮುಂದಾಗಿದ್ದು, ಇದೇ ಕಾರಣಕ್ಕೆ ರೆಡ್ಡಿ ರಾಮುಲು ನಡುವೆ ವೈ ಮನಸ್ಸು ಮೂಡಿದೆ ಎನ್ನಲಾಗಿದೆ.
ಹೀಗೊಂದು ಗಾಳಿ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದೆ. ಇದೇ ಕಾರಣಕ್ಕೆ ರೆಡ್ಡಿ ಹೊಸ ಪಕ್ಷಕ್ಕೆ ರಾಮುಲು ಅವರನ್ನು ಕರೆದಿದ್ದು, ಕಾರಣ ರಾಮುಲು ಅವರು ಹೊಸ ಪಕ್ಷದ ಕಡೆಗೆ ಒಲವು ತೋರಿಲ್ಲ. ಹೀಗಾಗಿ ರೆಡ್ಡಿ ರಾಮುಲು ನಡುವೆ ಕೋಲ್ಡ್ ವಾರ್ ಆರಂಭವಾಗಿದೆ ಎನ್ನುವ ಮಾತಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಇಂದಿನಿಂದ ಸಂಕೀರ್ತನಾ ಯಾತ್ರೆ- ಆಂಜನೇಯ ದೇಗುಲ ಪುನರ್ ಸ್ಥಾಪನೆಗೆ ಆಗ್ರಹ
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು, ನಮ್ಮ ಸ್ನೇಹ ರಾಜಕೀಯ ಹೊರತಾಗಿಯೂ ಇದೆ ಎಂದಿದ್ದಾರೆ. ನನಗೆ ಮುಂಚೆ ಜೈಪುರ್ ಸ್ವಾಮೀಜಿ ತಂಗಿ ಮದ್ವೆ ಇತ್ತು. ಹಾಗಾಗಿ ನಾನು ಜನಾರ್ದನ ರಡ್ಡಿ ಮೊಮ್ಮಗಳ ನಾಮಕರಣಕ್ಕೆ ಹೋಗಿಲ್ಲ. ಈ ವಿಚಾರ ರಾಜಕೀಯ ಅರ್ಥ ಕಲ್ಪಸುವ ಅಗತ್ಯವಿಲ್ಲ. ಜೈಪುರ ಮದುವೆ ಮುಗಿಸಿ ಬರೋವಾಗ ತಡರಾತ್ರಿ ಆಯ್ತು ಅದ್ಕೆ ಹೋಗಿಲ್ಲ. ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣ ಹೋಗಿಲ್ಲ ಅಂತಾ ತಪ್ಪು ಕಲ್ಪಿಸುವುದು ಬೇಡ. ಬೇರೆ ಕೆಲಸದ ನಿಮಿತ್ತ ಕೆಲವೊಂದು ಕಾರ್ಯಕ್ರಮಕ್ಕೆ ಹೋಗಲು ಆಗಿಲ್ಲ. ಬೇರೆ ಕಾರ್ಯಕ್ರಮವಿತ್ತು ನಾನು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ರಾಜಕೀಯ ಹೊರತುಪಡಿಸಿ ನಾನು ಜನಾರ್ದನ ರೆಡ್ಡಿ ಸ್ನೇಹಿತರು, ಕುಟುಂಬ ಸ್ನೇಹ ರಾಜಕಾರಣ ಬೇರೆ, ಕುಟುಂಬ ಬೇರೆ. ಕೆಲವು ಬಾರಿ ರಾಜಕೀಯ ಮೇಲು ಕೆಳ ಆಗಬಹುದು. ರಾಜಕೀಯ ಹೊರತುಪಡಿಸಿ ನಾನು ಸ್ನೇಹಿತರು ಎಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕೊಪ್ಪಳ: ಪುನೀತ್ ರಾಜ್‍ಕುಮಾರ್ ನಿಧನರಾಗಿ ತಿಂಗಳು ಕಳೆದರೂ ಅಪ್ಪು ಮೇಲಿನ ಅಭಿಮಾನವನ್ನು ಜನರು ಒಂದಲ್ಲ ಒಂದು ರೀತಿಯಲ್ಲಿ ತೋರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಕಡುಬಡತನದಲ್ಲಿದ್ದರೂ ದಂಪತಿ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ಮಾಡಿ ಮಗನಿಗೆ ಪುನೀತ್ ಎಂದು ಹೆಸರಿಟ್ಟಿದ್ದಾರೆ.
ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪೂರ ಗ್ರಾಮದಲ್ಲಿ ಪಕ್ಕೀರಪ್ಪ ಹಾಗೂ ಪಾರ್ವತಿ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಗಳು. ಈಗ ಇವರು ತಮ್ಮ ಮಗನಿಗೆ ಪುನೀತ್ ಎಂದು ನಾಮಕರಣ ಮಾಡಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಿದ್ದಾರೆ. ಇದನ್ನೂ ಓದಿ: ಮಗಳ ದಾಂಪತ್ಯ ಸರಿಪಡಿಸಲು ರಜನಿಕಾಂತ್ ಸರ್ಕಸ್
ಫಕೀರಪ್ಪ ಪುನೀತ್ ಅಭಿಮಾನಿಯಾಗಿದ್ದಾರೆ. ಅಪ್ಪು ನೆನಪಿಗಾಗಿ ಮಗನಿಗೆ ಪುನೀತ್ ಎಂದು ನಾಮಕರಣ ಮಾಡಿದ್ದಾರೆ. ಕಡು ಬಡತನದಲ್ಲಿದ್ದರೂ ಅಪ್ಪು ನೆನಪಿಗೆ ಅದ್ಧೂರಿ ಕಾರ್ಯಕ್ರಮದ ಮೂಲಕ ಮಗನಿಗೆ ನಾಮಕರಣ ಮಾಡಿದ್ದಾರೆ. ಅಪ್ಪು ಅಭಿಮಾನಕ್ಕೆ ಜನರ ಹಾಗೂ ಗ್ರಾಮಸ್ಥರಿಂದ ಮೆಚ್ಚುಗೆ ಹರಿದು ಬರುತ್ತಿದೆ. ಅಭಿಮಾನದ ಮುಂದೆ ಬಡತನ ಅಡ್ಡಿಯಾಗಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ನನ್ನ ಟ್ವಿಟ್ಟರ್ ರೀಚ್ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ – ದಾಖಲೆ ಮುಂದಿಟ್ಟು ಪರಾಗ್‍ಗೆ ರಾಹುಲ್ ಪತ್ರ
ಕಲಬುರಗಿ: ಸಾಮಾನ್ಯವಾಗಿ ಮನೆಯಲ್ಲಿ ಮಕ್ಕಳು ಹುಟ್ಟಿದರೆ ತೊಟ್ಟಿಲು ನಾಮಕಾರಣ ಮಾಡಿ ಸಂಭ್ರಮಿಸುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ ಕಲಬುರಗಿಯಲ್ಲಿ ಮಹಿಳಾ ಪೋಲಿಸ್ ಅಧಿಕಾರಿಯೊಬ್ಬರು ತಾವು ಸಾಕಿದ ಕರುವಿಗೆ ನಾಮಕರಣ ಮಾಡುವ ಮೂಲಕ ಗೋ ಪ್ರೇಮ ಮೆರೆದಿದ್ದಾರೆ.
ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಪಿಎಸ್ಐ ಯಶೋಧಾ ಕಟಕೆ ಅವರು ಸಾಕಿರುವ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದೆ. ತಮ್ಮ ಮನೆಯ ಮಗುವಿನಂತೆ ಕರುವಿಗೆ ರಾಧಾ ಎಂದು ನಾಮಕರಣ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕ್ರಿಸ್‍ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ ಸಾಧ್ಯತೆ
ಪೊಲೀಸ್ ಇಲಾಖೆಯ ವೃತ್ತಿ ಜೊತೆ ಪ್ರಾಣಿ-ಪಕ್ಷಿಗಳ ಪಾಲನೆ ಮಾಡುವುದು ಯಶೋಧಾ ಅವರಿಗೆ ಮೊದಲಿನಿಂದಲೂ ಇರುವ ಹವ್ಯಾಸ. ಹೀಗಾಗಿ ಒಂದು ಮಗುವಿಗೆ ಸಿಗುವ ಪ್ರೀತಿ ಈ ಕರುವಿಗೂ ಸಿಗಲಿ ಎಂದು ತೊಟ್ಪಿಲು ಶಾಸ್ತ್ರ ಮಾಡಿ ರಾಧಾ ಅಂತ ಹೆಸರಿಟ್ಟು ಪ್ರಾಣಿಗಳ ಮೇಲಿರುವ ತಮ್ಮ ಪ್ರೀತಿ ವ್ಯಕ್ತಪಡಿಸಿದ್ದಾರೆ.
ಯಶೋಧಾ ಅವರು ಪೊಲೀಸ್ ಇಲಾಖೆಗೆ ಸೇರಿದ ಮೇಲೆ ಜನಸ್ನೇಹಿ ಪೊಲೀಸ್ ಎಂದು ಹೆಸರು ಮಾಡಿದ್ದಾರೆ. ಕೊರೊನಾ ಕಾಲದ ವೇಳೆ ಸ್ವಂತ ಖರ್ಚಿನಲ್ಲಿ ಬಡವರಿಗೆ ಸಹಾಯ ಮಾಡಿದ್ದಾರೆ. ಇದೀಗ ತೊಟ್ಟಿಲು ಕಾರ್ಯಕ್ರಮದಲ್ಲಿ ಮಂಗಳಮುಖಿಯರನ್ನು ಕರೆಸಿ ಅರಿಶಿಣ, ಕುಂಕುಮ ಕೊಟ್ಟು ಗೌರವಿಸಿದ್ದಾರೆ. ತೊಟ್ಟಿಲು ಶಾಸ್ತ್ರದಲ್ಲಿ ಮಂಗಳಮುಖಯರಿಂದಲೇ ಕರುವಿಗೆ ಹೆಸರಿಡಿಸಿದ್ದಾರೆ. ಇದನ್ನೂ ಓದಿ: ಬಲವಂತದ ಮತಾಂತರ ಜಾಮೀನುರಹಿತ ಅಪರಾಧ
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ದಂಪತಿಯ ಪ್ರೀತಿಯ ಪುತ್ರನ ನಾಮಕರಣದಲ್ಲಿ ಭಾಗಿಯಾಗಿದ್ದ ಸಂತೋಷದ ಕ್ಷಣಗಳನ್ನು ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪುಟ್ಟ ರಾಯನ್ ರಾಜ್ ಸರ್ಜಾ ಅವರಿಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ ಎಂದು ಬರೆದುಕೊಂಡು ಅಭಿಷೇಕ್ ಅಂಬರೀಶ್, ಸುಮಲತಾ, ಸುಂದರ್ ರಾಜ್, ಧ್ರವಾ ಸರ್ಜಾ, ಮೇಘನಾ ರಾಜ್ ಮತ್ತು ಅವರು ಮಗ ಒಂದೇ ಫ್ರೇಮ್‍ನಲ್ಲಿ ಇರುವ ಚಂದೆದ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದಾರೆ.
ಸಿನಿಮಾ ರಂಗದಿಂದ ದೂರ ಉಳಿದಿರುವ ಸುಮಲತಾ ಅಂಬರೀಶ್ ಅವರು ಸದ್ಯ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿಯೂ ಸಖತ್ ಆ್ಯಕ್ಟೀವ್ ಆಗಿದ್ದು, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜೊತೆ ನಿತ್ಯ ಸಂಪರ್ಕದಲ್ಲಿರುತ್ತಾರೆ. ಇದನ್ನೂ ಓದಿ: ಮಗನಿಗೆ ರಾಯನ್ ಹೆಸರಿಟ್ಟಿದ್ದಕ್ಕೆ ಮೇಘನಾ ಸ್ಪಷ್ಟನೆ
ಹಿಂದೂ ಸಂಪ್ರದಾಯದ ಜೊತೆಗೆ ಕ್ರೈಸ್ತ ಸಂಪ್ರದಾಯದ ಪ್ರಕಾರ ನಾಮಕರಣ ಮಾಡಲಾಗಿತ್ತು. ಈ ಕುರಿತಂತೆ ಕೆಲವು ಮಂದಿ ರಾಯನ್ ರಾಜ್ ಸರ್ಜಾ ಎಂಬ ಹೆಸರಿನ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯ ಈ ಬಗ್ಗೆ ಮೇಘನಾ ರಾಜ್ ಸ್ಪಷ್ಟನೆ ನೀಡಿದ್ದಾರೆ. ಒಬ್ಬ ತಾಯಿಯಾಗಿ ನಾನು ನನ್ನ ಮಗನಿಗೆ ಉತ್ತಮವಾದುದನ್ನು ನೀಡುವುದು ಬಹಳ ಮುಖ್ಯ. ಅವನ ತಂದೆ, ತಾಯಿ ಖುಷಿಪಟ್ಟಂತೆ ಎರಡು ಧರ್ಮದಲ್ಲಿರುವ ಒಳ್ಳೆಯ ಅಂಶ ಅವನಿಗೆ ಯಾಕೆ ಸಿಗಬಾರದು? ಜನರು ತಮ್ಮ ಜಾತಿ, ಧರ್ಮವನ್ನು ಲೆಕ್ಕಿಸದೇ ಅವನಿಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಪ್ರಾರ್ಥಿಸಿದ್ದಾರೆ. ಎಲ್ಲ ದೇವರಿಂದಲೂ ನಾವು ಆಶೀರ್ವಾದವನ್ನು ಕೋರುತ್ತೇವೆ. ಎರಡು ಸಂಪ್ರದಾಯದ ಪ್ರಕಾರ ಇದನ್ನು ಮಾಡುವುದು ನನಗೆ ಬಹಳ ಮುಖ್ಯವಾಗಿತ್ತು. ಏಕೆಂದರೆ ಇದಕ್ಕೆ ಕಾರಣ ಅವನ ತಂದೆ, ನಮ್ಮ ರಾಜ ಚಿರು ಎಲ್ಲದಕ್ಕಿಂತ ಹೆಚ್ಚಾಗಿ ಮಾನವೀಯತೆ ಮುಖ್ಯ ಎಂದು ನಂಬಿದ್ದರು. ಹೀಗಾಗಿ ಎರಡು ಸಂಪ್ರದಾಯದಲ್ಲಿ ಉತ್ತಮವಾಗಿರುವುದನ್ನು ಆಚರಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.