– ಇಂದು ಕಾಂಗ್ರೆಸ್‍ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ
ಬೆಂಗಳೂರು: ಒಂದು ಕಡೆ ನೂತನ ಸಿಎಂ ಆಗಿ ಆಯ್ಕೆಗೊಂಡಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖವಾದ ದಿನವಾಗಿದೆ. ಈಗಾಗಲೇ ರಾಜ್ಯಪಾಲ ವಜೂಭಾಯಿ ವಾಲಾರ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿವೆ. ಇಂದು ಕಾಂಗ್ರೆಸ್-ಜೆಡಿಎಸ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
ಸುಪ್ರೀಂ ವಿಚಾರಣೆಯ ಬಗ್ಗೆ ಬಿಜೆಪಿ ಅಂಗಳದಲ್ಲಿ ಭಾರೀ ಚರ್ಚೆಗಳು ಆರಂಭಗೊಂಡಿವೆ. ಇತ್ತ ಕರ್ನಾಟಕದ ರಾಜ್ಯಪಾಲರ ನಡೆಯನ್ನು ಗಾಳವಾಗಿ ಬಳಸಿಕೊಂಡು ಬಿಹಾರ, ಗೋವಾ, ಮೇಘಾಲಯ ಮತ್ತು ಮಣಿಪುರ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿದೆ.
ಪ್ರಜಾಪ್ರಭುತ್ವ ಉಳಿಸಿ: ಕಾಂಗ್ರೆಸ್ ನಾಯಕರುಗಳು ಇಂದು ರಾಜಭವನ ಚಲೋ ನಡೆಸಲು ತೀರ್ಮಾನಿಸಿದ್ದಾರೆ. ರಾಜ್ಯಪಾಲ ವಜೂಬಾಯ್ ವಾಲ ಬಿಜೆಪಿ ಪರ ವರ್ತಿಸುತ್ತಿದ್ದಾರೆ ಎಂಬುದನ್ನ ಖಂಡಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. `ಪ್ರಜಾಪ್ರಭುತ್ವ ಉಳಿಸಿ’ ಹೆಸರಿನಡಿ ಇಂದು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ರಾಷ್ಟ್ರ ಹಾಗೂ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಲ್ಲಿಕಾರ್ಜುನ್ ಖರ್ಗೆ, ಗುಲಾಂ ನಬಿ ಆಜಾದ್, ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ನಾಯಕರುಗಳು ಭಾಗವಹಿಸಲಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಿ ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ.
ಗೋವಾ ವಿಧಾನಸಭಾ ಸಭೆ ಒಟ್ಟು 40 ಸ್ಥಾನಗಳನ್ನು ಹೊಂದಿದೆ. 2017 ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 17, ಬಿಜೆಪಿ 13, ಎಂಎಜಿ 3, ಎಫ್‍ಪಿ 3, ಐಎನ್‍ಡಿ 3 ಹಾಗೂ ಇತರೇ ಒಂದು ಸ್ಥಾನ ಪಡೆದಿದ್ದರು. ಕಾಂಗ್ರೆಸ್ 17 ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರು, 13 ಕ್ಷೇತ್ರಗಳಲ್ಲಿ ಜಯ ಪಡೆದಿದು ಎರಡನೇ ಸ್ಥಾನ ಪಡೆದಿದ್ದ ಬಿಜೆಪಿ, ಗೋವಾ ಫಾರವರ್ಡ್ ಪಾರ್ಟಿ (ಜಿಎಫ್‍ಪಿ) ಮತ್ತು ಎಂಜಿಪಿ ಪಕ್ಷಗಳ ನೆರವಿನಿಂದ ಬಹುಮತ ಪಡೆದು ಸರ್ಕಾರ ರಚಿಸಿತ್ತು. ಇತರೇ 3 ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಪಕ್ಷೇತರರು ಸಹ ಬಿಜೆಪಿಗೆ ಬೆಂಬಲ ನೀಡಿದ್ದರು. ಗೋವಾ ವಿಧಾನಸಭಾ ಮ್ಯಾಜಿಕ್ ನಂಬರ್ 20 ಸ್ಥಾನಗಳನ್ನು ಗಡಿದಾಟಿ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದೆ.