Tag: Namma Metro Yellow Line

  • ಮೆಟ್ರೋ ಕ್ರೆಡಿಟ್‌ ವಾರ್‌ – ಕೇಂದ್ರದ್ದೆಷ್ಟು? ರಾಜ್ಯದ್ದೆಷ್ಟು?

    ಮೆಟ್ರೋ ಕ್ರೆಡಿಟ್‌ ವಾರ್‌ – ಕೇಂದ್ರದ್ದೆಷ್ಟು? ರಾಜ್ಯದ್ದೆಷ್ಟು?

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಯೆಲ್ಲೋ ಲೈನ್ ಮೆಟ್ರೋ (Namma Metro Yellow Line) ಉದ್ಘಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ (Congress) ಹಾಗೂ ಬಿಜೆಪಿ (BJP) ನಡುವೆ ಕ್ರೆಡಿಟ್ ವಾರ್‌ ಆರಂಭವಾಗಿದೆ.

    ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌, ಮೆಟ್ರೋ ಕಾಮಗಾರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ತಲಾ 50‍% ಅನುದಾನ ನೀಡಬೇಕು. ಆದರೆ ಇದರಲ್ಲಿ ರಾಜ್ಯದ್ದೇ ಹೂಡಿಕೆ ಹೆಚ್ಚಿದೆ. ಕೇಂದ್ರದ್ದು 20% ಇದ್ದರೆ, ರಾಜ್ಯದ್ದು 80% ಕೊಡುಗೆ ಇದೆ ಎಂದಿದ್ದರು. ಇದನ್ನೂ ಓದಿ: ನಮ್ಮ ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು – ಮೋದಿ ಎದುರೇ ಸಿದ್ದರಾಮಯ್ಯ ‘ಕ್ರೆಡಿಟ್‌’ ಕ್ಲೈಮ್

    ಅನುದಾನದ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಪೋಸ್ಟ್‌ನಲ್ಲಿ ಕೇಂದ್ರ 20% ರಾಜ್ಯ 30% ಹಾಗೂ ಬಿಎಂಆರ್‌ಸಿಎಲ್‌ 50% ಅನುದಾನ ಒದಗಿಸಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.

    ಪ್ರಿಯಾಂಕ್‌ ಖರ್ಗೆ ಪೋಸ್ಟ್‌ನಲ್ಲಿ ಏನಿದೆ?
    ಮೆಟ್ರೋ ಯೋಜನೆಯನ್ನು ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅಡಿಯಲ್ಲಿ ಪ್ರಾರಂಭಿಸಲಾಯಿತು. ಮೊದಲ ಹಂತದಲ್ಲಿ, ಯುಪಿಎ ಸರ್ಕಾರವು ವೆಚ್ಚದ ಹೆಚ್ಚಿನ ಭಾಗವನ್ನು ಭರಿಸಿದ್ದು, ರಾಜ್ಯ ಸರ್ಕಾರದ ಕೊಡುಗೆಯನ್ನು ಮೀರಿಸಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಯೋಜನೆಗೆ ಅವರ ಆಧ್ಯತೆ ಕಡಿಮೆಯಾಯಿತು. ಇದರಿಂದ ಕೇಂದ್ರ ಸರ್ಕಾರದ ಪಾಲು ತೀವ್ರ ಕುಸಿತವಾಯಿತು ಎಂದಿದ್ದಾರೆ.

    ಕರ್ನಾಟಕ ಸರ್ಕಾರವು ಭೂ ಸ್ವಾಧೀನ ವೆಚ್ಚ ಸೇರಿದಂತೆ ಹೆಚ್ಚಿನ ವೆಚ್ಚವನ್ನು ಭರಿಸಿದೆ. 12,000 ಕೋಟಿ ರೂ.ಗೂ ಹೆಚ್ಚು ಕೊಡುಗೆ ನೀಡಿದೆ. ಕೇಂದ್ರ ಸರ್ಕಾರವು 8,000 ಕೋಟಿ ರೂ. ಹಣ ಒದಗಿಸಿದೆ. ಇದರಿಂದ ಬಿಎಂಆರ್‌ಸಿಎಲ್ ಉಳಿದ ಯೋಜನಾ ವೆಚ್ಚಗಳಿಗೆ ಸಾಲ ಪಡೆಯಬೇಕಾಯಿತು.

    ರಾಜ್ಯ ಸರ್ಕಾರದ 30% (12,184 ಕೋಟಿ ರೂ.) ವೆಚ್ಚದಲ್ಲಿ ಭೂ ಸ್ವಾದೀನ ಮತ್ತು ಹೆಚ್ಚುವರಿ ವೆಚ್ಚ ಸೇರಿದೆ. ಯೋಜನೆಗೆ ಬಿಎಂಆರ್‌ಸಿಎಲ್ 20,307 ಕೋಟಿ ರೂ. (50%‌) ವೆಚ್ಚ ಮಾಡಿದ್ದು, ಇದರಲ್ಲಿ ಸಾಲ ಸಹ ಸೇರಿದೆ. ಇನ್ನೂ ಕೇಂದ್ರದಿಂದ 8,122 ಕೋಟಿ ರೂ. (20%) ಅನುದಾನ ನೀಡಿದೆ.

    ಕೇಂದ್ರಕ್ಕೆ ಕರ್ನಾಟಕದ ಕೊಡುಗೆ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಲೇ ಇದೆ. ಆದರೆ ರಾಜ್ಯಕ್ಕೆ ಬರುವ ಆದಾಯ ಕಡಿಮೆಯಾಗುತ್ತಿದೆ. ಮೆಟ್ರೋ ಹಳದಿ ಮಾರ್ಗ ಯೋಜನೆ ಇದಕ್ಕೆ ಒಂದು ಸ್ಪಷ್ಟ ಉದಾಹರಣೆಯಾಗಿದೆ. ಕರ್ನಾಟಕವು ಮೋದಿ ಸರ್ಕಾರದಿಂದ ನಿರ್ಲಕ್ಷಿಸಲ್ಪಟ್ಟಿದೆ ಎಂಬುದು ಸತ್ಯ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಮೋದಿ ಅಭಿನಂದನೆ

  • ಬೆಂಗಳೂರಿನಲ್ಲಿ ಮೋದಿ – ಇಂದು ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

    ಬೆಂಗಳೂರಿನಲ್ಲಿ ಮೋದಿ – ಇಂದು ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

    ಬೆಂಗಳೂರು: ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸುವ ಯೆಲ್ಲೋ ಮೆಟ್ರೋ ಮಾರ್ಗ (Namma Metro Yellow Line) ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು ಬೆಂಗಳೂರಿಗೆ (Bengaluru) ಬಂದಿರುವ ಕಾರಣ  ಕೆಲವೆಡೆ ಸಂಚಾರ ನಿರ್ಬಂಧ ಹೇರಲಾಗಿದೆ.

    ಎಲ್ಲೆಲ್ಲಿ ಸಂಚಾರ ನಿರ್ಬಂಧ?
    ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಹಿಂಬದಿ ಗೇಟ್ ಭಾನುವಾರ ಮಧ್ಯಾಹ್ನ 2 ಗಂಟೆವರೆಗೆ ಬಂದ್ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಸಹ ಬೆಳಗ್ಗೆ 9:30ರಿಂದ ಮಧ್ಯಾಹ್ನ 2:00 ಗಂಟೆವರೆಗೆ ಬಂದ್ ಮಾಡಲಾಗುತ್ತಿದೆ. ಇನ್ನು, ಹೊಸೂರು ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ, ಮೋದಿ ಸ್ವಾಗತಕ್ಕೆ ಬಿಜೆಪಿಯಿಂದ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇಖ್ರಿ, ಚಾಲುಕ್ಯ, ಸಂಗೊಳ್ಳಿ ರಾಯಣ್ಣ, ಸೌತ್ ಎಂಡ್, ರಾಗಿಗುಡ್ಡ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸರ್ಕಲ್‍ಗಳಲ್ಲಿ ಕಾರ್ಯಕರ್ತರು ಸೇರಿಕೊಳ್ಳಲು ಅನುವು ಮಾಡಿಕೊಡಲಾಗಿದೆ. ಪ್ರತಿ ಜಂಕ್ಷನ್‍ನಲ್ಲೂ ಅಂದಾಜು 3ರಿಂದ 5 ಸಾವಿರ ಕಾರ್ಯಕರ್ತರು ಸೇರುವ ಸಾಧ್ಯತೆಗಳಿವೆ. ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ ಖಚಿತ – ಬಿಜೆಪಿ ಕಾರ್ಯಕರ್ತರ ಸಮಾವೇಶ, ರೋಡ್ ಶೋಗೆ ಕೊಕ್

    ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳಿಗೆ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಇನ್ನೂ ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ಎಲ್ಲಾ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ಮುಖಾಂತರ ಸಂಚರಿಸಲು ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಕೆಳಕಂಡಂತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

    + ಕನಕಪುರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
    + ನಾಯಂಡಹಳ್ಳಿ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
    + ಸೋಂಪುರ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಬೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
    + ಪಿಇಎಸ್ ಕಾಲೇಜು ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
    + ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
    + ಮಾಗಡಿ ರಸ್ತೆ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಬೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
    + ಮಾಧವರ ರಸ್ತೆ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
    + ಪಾರ್ಲೆ ಬಿಸ್ಕಟ್ಸ್ ಫಾಕ್ಟರಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ

    ಪರ್ಯಾಯ ಮಾರ್ಗಗಳು ಯಾವುದು?
    * ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಶನ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್ ವುಡ್ ಜಂಕ್ಷನ್-ಕೋಳಿಫಾರಂಗೇಟ್ ಜಂಕ್ಷನ್-ಬನ್ನೇರುಘಟ್ಟ ಗ್ರಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ /ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿರುತ್ತದೆ.

    * ದಾಬಸ್‌ಪೇಟೆ ಬಳಿ ಎಡ ತಿರುವು ಪಡೆದು-ದೊಡ್ಡಬಳ್ಳಾಪುರ-ದೇವನಹಳ್ಳಿ-ಸೂಲಿಬೆಲೆ-ಹೊಸಕೋಟೆ-ಮಾರ್ಗವಾಗಿ ಚಲಿಸಿ-ಚಂದಾಪುರ-ಅತ್ತಿಬೆಲೆ-ಹೊಸೂರು ರಸ್ತೆ ತಲುಪಬಹುದಾಗಿರುತ್ತದೆ. ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

  • ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ –  ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಆ.10ರಂದು ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಮೋದಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಆ.10ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ (Namma Metro Yellow Line)  ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ್ ಲಾಲ್ ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಮೆಟ್ರೋ ಫೇಸ್ 3ಗೂ ಮೋದಿಯವರು ಅಂದೇ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗ ಸುಮಾರು 19.5 ಕಿ.ಮೀ ಇದ್ದು, ಸಂಚಾರ ಮುಕ್ತಕ್ಕೆ ಸಿದ್ಧವಾಗಿದೆ. ಈ ಮಾರ್ಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದೆ. ಪ್ರತಿದಿನ ಸುಮಾರು 25,000 ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ನಿರೀಕ್ಷೆ ಇದೆ. ರೈಲುಗಳು 20 ರಿಂದ 30 ನಿಮಿಷಗಳ ಅಂತರದಲ್ಲಿ ಸಂಚರಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗದಲ್ಲಿ ವಯಾಡಕ್ಟ್ ಪರಿಶೀಲನಾ ಕಾರ್ಯ ಆರಂಭ

    ಈ ಮಾರ್ಗದ ಬಗ್ಗೆ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ಸುರಕ್ಷತಾ ತಪಾಸಣೆ ವರದಿ ಸಲ್ಲಿಕೆ ಮಾಡಿದ್ದಾರೆ. ವರದಿಯಲ್ಲಿ ಕೆಲವು ಸಣ್ಣಪುಟ್ಟ ಷರತ್ತುಗಳನ್ನು ವಿಧಿಸಲಾಗಿದೆ. ಅವುಗಳನ್ನು ಕೆಲವೇ ದಿನಗಳಲ್ಲಿ ಸರಿಪಡಿಸುವುದಾಗಿ ಬಿಎಂಆರ್‌ಸಿಎಲ್‌ (BMRCL) ಹೇಳಿದೆ. ಇದನ್ನೂ ಓದಿ: ಡ್ರೈವರ್‌ಲೆಸ್ ಮೆಟ್ರೋದ ಫಸ್ಟ್ ಫೋಟೋ ರಿವೀಲ್