Tag: Nana Patole

  • ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ: ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ವಾಗ್ದಾಳಿ

    ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ: ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ವಾಗ್ದಾಳಿ

    ಮುಂಬೈ: ಮಹಾರಾಷ್ಟ್ರ (Maharashtra) ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ (Nana Patole) ಅವರು ಬಿಜೆಪಿಯನ್ನು ನಾಯಿಗೆ ಹೋಲಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಒಬಿಸಿ ಸಮುದಾಯವನ್ನು ದುರುಪಯೋಗಪಡಿಸಿಕೊಂಡ ಪಕ್ಷಕ್ಕೆ ‘ತನ್ನ ಸ್ಥಾನವನ್ನು ತೋರಿಸಬೇಕು’ ಎಂದು ಅವರು ಪ್ರತಿಪಾದಿಸಿದ್ದಾರೆ‌.

    ಅಕೋಲಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಟೋಲೆ, ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿದ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಜನರು ತಮ್ಮನ್ನು ತಾವು ದೇವರು ಮತ್ತು ವಿಶ್ವಗುರು ಎಂದು ಪರಿಗಣಿಸುತ್ತಾರೆ. ಮಹಾರಾಷ್ಟ್ರದಲ್ಲಿ ಫಡ್ನವೀಸ್ ತಮ್ಮನ್ನು ತಾವು ದೇವರೆಂದು ಪರಿಗಣಿಸುತ್ತಾರೆ ಪಟೋಲೆ ಹೇಳಿದರು. ಇದನ್ನೂ ಓದಿ: ಆರ್‌ಡಿಎಕ್ಸ್ ಇಟ್ಟು ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವ ಬೆದರಿಕೆ

    ಒಬಿಸಿ ಸಮುದಾಯಕ್ಕೆ ಬಿಜೆಪಿ ಅಗೌರವ ತೋರುತ್ತಿದೆ ಎಂದು ಆರೋಪಿಸಿದ ಪಟೋಲೆ, ನಿಮ್ಮನ್ನು ನಾಯಿ ಎಂದು ಕರೆಯುವ ಬಿಜೆಪಿಗೆ ಅಕೋಲಾ ಜಿಲ್ಲೆಯ ಒಬಿಸಿ ಜನರು ಮತ ಹಾಕುತ್ತಾರೆಯೇ? ಈಗ ಬಿಜೆಪಿಯನ್ನು ನಾಯಿ ಮಾಡುವ ಸಮಯ ಬಂದಿದೆ ಎಂದು ಹೇಳಿದರು. ಮಹಾರಾಷ್ಟ್ರದಿಂದ ಬಿಜೆಪಿಯನ್ನು ಕಿತ್ತೊಗೆಯುವ ಸಮಯ ಬಂದಿದೆ. ಈ ಪಕ್ಷ ಸುಳ್ಳಿನ ಕಂತೆಯೊಂದಿಗೆ ಅಧಿಕಾರಕ್ಕೆ ಬಂದಿದೆ ಮತ್ತು ಈಗ ತನ್ನ ಸ್ಥಾನವನ್ನು ತೋರಿಸುವ ಸಮಯ ಬಂದಿದೆ.

    ಮಹಾ ವಿಕಾಸ್ ಅಘಾಡಿ ನಾಯಕರು ನಿರಾಶೆಗೊಂಡಿದ್ದಾರೆ, ಹತಾಶರಾಗಿದ್ದಾರೆ ಎಂದು ಬಿಜೆಪಿ ನಾಯಕ ಮತ್ತು ಮಾಜಿ ಸಂಸದ ಕಿರಿತ್ ಸೋಮಯ್ಯ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥರನ್ನು ನಾನಾ ಪಟೋಲೆ ತರಾಟೆಗೆ ತೆಗೆದುಕೊಂಡರು. ಅವರು ಈಗ ಬಿಜೆಪಿಯವರನ್ನು ನಾಯಿಗಳು ಎಂದು ಕರೆಯುತ್ತಿದ್ದಾರೆ, ಅವರು ಸೋಲನ್ನು ನೋಡಬಹುದು ಆದ್ದರಿಂದ ಹತಾಶೆಯಿಂದ ಈ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಹಿಂದೂ ವಾಟ್ಸಪ್‌ ಗ್ರೂಪ್‌ ರಚನೆ, ಹಿರಿಯ ಅಧಿಕಾರಿ ನಿಂದನೆ ಆರೋಪ – ಇಬ್ಬರು IAS ಅಧಿಕಾರಿಗಳು ಅಮಾನತು

  • 17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    – 5 ತಿಂಗಳ ಹಿಂದೆ ಪ್ರಧಾನಿ ಮೋದಿಯಿಂದ ಚಾಲನೆಗೊಂಡಿದ್ದ ʻಅಟಲ್‌ ಸೇತುʼ

    ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ʻಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ʼನಲ್ಲಿ (MTHL) ಬಿರುಕು ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ (Narendra Modi) ಅಟಲ್‌ ಸೇತುಗೆ ಚಾಲನೆ ನೀಡಿದ್ದರು.

    ಮಹಾರಾಷ್ಟ್ರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನಾನಾ ಪಟೋಲೆ (Nana Patole), ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ತೋರಿಸಿ ರಸ್ತೆ ಸುರಕ್ಷತೆಯ ಬಗ್ಗೆ ಪರಿಶೀಲಿಸಿದ್ದಾರೆ. ಜೊತೆಗೆ ಅದರ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮರದ ಪಟ್ಟಿಯನ್ನು ಬಿರುಕಿನೊಳಗೆ ಇಳಿಸಿ, ಬಿರುಕಿನ ಆಳದ ಪ್ರಮಾಣವನ್ನು ತೋರಿಸಿದ್ದಾರೆ. ಬಳಿಕ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬುದಾಗಿಯೂ ಅವರು ಆರೋಪಿಸಿದ್ದಾರೆ.

    ಅಲ್‌ ಸೇತು ಉದ್ಘಾಟನೆಯಾದ ಕೆಲ ತಿಂಗಳಲ್ಲೇ ಸೇತುವೆಯ ಬಳಿ ಅರ್ಧ ಕಿಮೀ ನಷ್ಟು ರಸ್ತೆ ಬಿರುಕು ಬಿಟ್ಟಿದೆ. ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ ಎಂದು ಪಟೋಲೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    ಅಲ್ಲದೇ ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು ಎಂದು ಆಗ್ರಹಿಸಿದ್ದಾರೆ.

    ಬಿಜೆಪಿ ತಿರುಗೇಟು:
    ನಾನಾ ಪಟೋಲೆ ಅವರ ಆರೋಪಕ್ಕೆ ಆಡಳಿತಾರೂಢ ಬಿಜೆಪಿ ಯೋಜನೆಯ ನೋಡಲ್ ಏಜೆನ್ಸಿಯಾಗಿರುವ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ಸ್ಪಷ್ಟನೆ ನೀಡಿದೆ. ಬಿರುಕು ಬಿಟ್ಟಿರುವುದು ಅಟಲ್‌ ಸೇತುವೆಯ ಮೇಲೆ ಅಲ್ಲ, ನವಿ ಉಲ್ವೆಯಿಂದ ಬರುವ ಸರ್ವಿಸ್‌ ರಸ್ತೆಯಲ್ಲಿ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಇನ್ನೂ ಈ ಬಗ್ಗೆ ಸ್ಪಷನೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಟಲ್‌ ಸೇತುಗೆ ಯಾವುದೇ ಅಪಾಯವಿಲ್ಲ. ಕಾಂಗ್ರೆಸ್‌ ಆರೋಪ ಸುಳ್ಳು. ಪಟೋಳೆ ಅವರು ಹಂಚಿಕೊಂಡಿರುವ ಚಿತ್ರ ಸರ್ವೀಸ್‌ ರಸ್ತೆಯದ್ದು ಎಂದು ತಿಳಿಸಿದ್ದಾರೆ.

    ಇದು ಸರ್ವಿಸ್ ರಸ್ತೆ, ಇದು ಮುಖ್ಯ ಸೇತುವೆಯ ಸಂಪರ್ಕ ಭಾಗವಾಗಿದೆ. ಇವುಗಳಲ್ಲಿ ಸಣ್ಣಪುಟ್ಟ ಬಿರುಕುಗಳಾಗಿದ್ದು, ಅವುಗಳನ್ನು ದುರಸ್ತಿ ಮಾಡಲಾಗುತ್ತಿದೆ. ಇದರಿಂದಾಗಿ ಯಾವುದೇ ಸಂಚಾರ ವ್ಯತ್ಯಯ ಉಂಟಾಗಿಲ್ಲ ಎಂದು ಅಟಲ್‌ ಸೇತು ಯೋಜನೆ ಮುಖ್ಯಸ್ಥ ಕೈಲಾಶ್ ಗಣತ್ರ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಸಾಧನೆ ಹಾಡಿಹೊಗಳಿದ ರಶ್ಮಿಕಾ ಮಂದಣ್ಣಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

    5 ತಿಂಗಳ ಹಿಂದೆ ಉದ್ಘಾಟನೆ:
    ಕಳೆದ 5 ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಸೇತುವೆಯನ್ನು ಉದ್ಘಾಟಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಸಹ ಈ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈ ಸಮುದ್ರ ಸೇತುವೆಯು ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ (Mumbai To Navi Mumbai) ಸಂಪರ್ಕ ಕಲ್ಪಿಸಲಿದ್ದು, ಎರಡು ಗಂಟೆಗಳ ಪ್ರಯಾಣವನ್ನ 15-20 ನಿಮಿಷಗಳಲ್ಲಿ ತಲುಪಬಹುದಾಗಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ MTHL, 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ.

  • Maharashtraː ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಕಾಂಗ್ರೆಸ್‌ಗೆ ಗುಡ್‌ಬೈ

    Maharashtraː ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಕಾಂಗ್ರೆಸ್‌ಗೆ ಗುಡ್‌ಬೈ

    ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕ ಬಾಳಾಸಾಹೇಬ್ ಥೋರಟ್ (Balasaheb Thorat) ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ (Nana Patole) ಅವರೊಂದಿಗಿನ ಅಸಮಾಧಾನ ಸ್ಫೋಟಗೊಂಡ ಒಂದು ದಿನದ ನಂತರ ಬೆಳವಣಿಗೆ ಕಂಡುಬಂದಿದೆ. ಇದನ್ನೂ ಓದಿ: ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ- ಭಾರೀ ವಿರೋಧದ ಬಳಿಕ ಹೆಚ್‍ಡಿಕೆ ಸ್ಪಷ್ಟನೆ

    ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ (Nana Patole) ಅವರಿಂದ ತನಗೆ ಅವಮಾನವಾಗಿದೆ ಎಂದು ದೂರಿರುವ ಥೋರಟ್, ಪಟೋಲೆ ಅವರೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. ಜೊತೆಗೆ ರಾಜೀನಾಮೆ ಪತ್ರವನ್ನೂ ಸಲ್ಲಿಸಿದ್ದಾರೆ. ಅವರು ತಮ್ಮ ನಿಲುವಿಗೆ ಬದ್ಧರಾಗಿದ್ದು, ರಾಜೀನಾಮೆ ಹಿಂಪಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

    ಥೋರಟ್ ಪಕ್ಷದಲ್ಲಿ ತಮಗೆ ಅವಮಾನವಾಗಿದ್ದು, ರಾಜೀನಾಮೆ ನೀಡುತ್ತಿರುವುದಾಗಿ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಪಾರ್ಟಿ ನೆಪದಲ್ಲಿ ಕರೆಸಿ, ಕಾಶ್ಮೀರ ಮೂಲದ ಯುವತಿಯರ ಮೇಲೆ ಅತ್ಯಾಚಾರ ಯತ್ನ

    ಬಾಳಾಸಾಹೇಬ್ ಥೋರಟ್ ಅವರ ಸಂಬಂಧಿಯಾಗಿರುವ ನಾಸಿಕ್ ಪದವೀಧರ ಕ್ಷೇತ್ರದ ಎಂಎಲ್‌ಸಿ (MLC) ಸುಧೀರ್ ತಾಂಬೆ ಅವರು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯಾಗಿದ್ದರು. ಆದರೂ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ತಾಂಬೆ ಅವರು ತಮ್ಮ ಮಗ ಸತ್ಯಜಿತ್ ತಾಂಬೆಯನ್ನು ಸ್ವತಂತ್ರವಾಗಿ ಸ್ಪರ್ಧಿಸುವಂತೆ ಮಾಡಿದರು. ಸತ್ಯಜಿತ್ ಅವರು ಚುನಾವಣೆಯಲ್ಲಿ ಗೆದ್ದರು. ಫೆಬ್ರವರಿ 2 ರಂದು ಫಲಿತಾಂಶ ಪ್ರಕಟಿಸಲಾಯಿತು.

    ಎಂಎಲ್‌ಸಿ ಚುನಾವಣೆಯಲ್ಲಿ ಪಕ್ಷ ವಿರೋಧ ಚಟುವಟಿಕೆ ನಡೆಸಿದ್ದಾರೆ ಎಂದು ಸುಧೀರ್ ತಾಂಬೆ ಹಾಗೂ ಸತ್ಯಜಿತ್ ತಾಂಬೆ ಅವರನ್ನು ಕಾಂಗ್ರೆಸ್ ಅಮಾನತುಗೊಳಿಸಿತ್ತು. ಹಾಗಾಗಿ ರಾಜ್ಯ ಕಾಂಗ್ರೆಸ್ ನಾಯಕತ್ವದಿಂದ ನನಗೆ ಅವಮಾನವಾಗಿದೆ. ತಾಂಬೆ ವಿಚಾರದಲ್ಲಿ ನನ್ನ ಕುಟುಂಬದ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಥೋರಟ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

    ಅಲ್ಲದೇ ಪಟೋಲೆ ಅವರು ನಾನು ಬಿಜೆಪಿ ವಿರುದ್ಧ ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಂಬಿಸಲು ಕೆಟ್ಟದ್ದಾಗಿ ಪ್ರಚಾರ ನಡೆಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ತನ್ನನ್ನು ಸಂಪರ್ಕಿಸಿಲ್ಲ ಎಂದು ಥೋರಟ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಯೋಧ್ಯೆಯಿಂದ ಶ್ರೀಲಂಕಾಗೆ ಶ್ರೀರಾಮ ನಡೆದದ್ದಕ್ಕಿಂತ ಹೆಚ್ಚು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡ್ತಿದ್ದಾರೆ – ಕಾಂಗ್ರೆಸ್‌ ನಾಯಕ

    ಅಯೋಧ್ಯೆಯಿಂದ ಶ್ರೀಲಂಕಾಗೆ ಶ್ರೀರಾಮ ನಡೆದದ್ದಕ್ಕಿಂತ ಹೆಚ್ಚು ರಾಹುಲ್‌ ಗಾಂಧಿ ಪಾದಯಾತ್ರೆ ಮಾಡ್ತಿದ್ದಾರೆ – ಕಾಂಗ್ರೆಸ್‌ ನಾಯಕ

    ಮುಂಬೈ: ಶ್ರೀರಾಮ (Lord Rama) ಅಯೋಧ್ಯೆಯಿಂದ ಶ್ರೀಲಂಕಾಗೆ ನಡೆದದ್ದಕ್ಕಿಂತ ಹೆಚ್ಚು ಪಾದಯಾತ್ರೆಯನ್ನು ರಾಹುಲ್‌ ಗಾಂಧಿಯವರು (Rahul Gandhi) ಮಾಡುತ್ತಿದ್ದಾರೆ ಎಂದು ಮಹಾರಾಷ್ಟ್ರದ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ (Nana Patole) ಬಣ್ಣಿಸಿದ್ದಾರೆ.

    ಅಯೋಧ್ಯೆಯಿಂದ (Ayodhya) ಶ್ರೀಲಂಕಾದವರೆಗೆ (Sri Lanka) ಶ್ರೀರಾಮ ಕೈಗೊಂಡಿದ್ದ ಪಾದಯಾತ್ರೆಯನ್ನು ರಾಹುಲ್ ಗಾಂಧಿಯವರ ಪಾದಯಾತ್ರೆಗೆ ಹೋಲಿಸಿದ ರಾಜಸ್ಥಾನದ ಸಚಿವ ಪರ್ಸಾದಿ ಲಾಲ್ ಮೀನಾ ಅವರ ಹೇಳಿಕೆಯನ್ನು ಪಟೋಲೆ ಬೆಂಬಲಿಸಿದ್ದಾರೆ. ಅಲ್ಲದೇ ರಾಮ ಹಾಗೂ ರಾಹುಲ್‌ ಗಾಂಧಿ ಹೆಸರಿಗೆ ಮೊದಲಕ್ಷರ ʼರಾʼಯಿಂದ ಶುರುವಾಗುವುದು ಕಾಕತಾಳೀಯವೂ ಹೌದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೈತರಿಗೆ ಭರ್ಜರಿ ಗಿಫ್ಟ್ – ಗೋಧಿ ಸೇರಿ 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

    ರಾಹುಲ್ ಗಾಂಧಿ ಅವರ ಪಾದಯಾತ್ರೆ ಐತಿಹಾಸಿಕವಾಗಲಿದೆ. ಶ್ರೀರಾಮ ಅಯೋಧ್ಯೆಯಿಂದ ಶ್ರೀಲಂಕಾಗೆ ಕಾಲ್ನಡಿಗೆಯಲ್ಲಿ ಹೋಗಿದ್ದರು. ರಾಹುಲ್ ಗಾಂಧಿ ಅದಕ್ಕಿಂತಲೂ ಹೆಚ್ಚಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿದ್ದಾರೆ ಎಂದು ಪರ್ಸಾದಿ ಲಾಲ್‌ ಮೀನಾ ಹೇಳಿಕೆ ನೀಡಿದ್ದರು.

    ಈ ಹೇಳಿಕೆಯನ್ನು ಬೆಂಬಲಿಸಿ ಮಾತನಾಡಿರುವ ಪಟೋಲೆ, ಭಗವಾನ್ ಶ್ರೀರಾಮ ಕೂಡ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಪಾದಯಾತ್ರೆ ಮಾಡಿದ್ದರು. ಶಂಕರಾಚಾರ್ಯರು ಕೂಡ ಅದೇ ದಾರಿಯಲ್ಲಿ ನಡೆದರು. ಹಾಗೆಯೇ ರಾಹುಲ್ ಗಾಂಧಿ ಪಾದಯಾತ್ರೆಯ ರೂಪದಲ್ಲಿ ಮಾಡುತ್ತಿದ್ದಾರೆ. ಜನರು ಅವರೊಂದಿಗೆ ಸೇರುತ್ತಿದ್ದಾರೆ. ಇದು ಭಗವಾನ್ ರಾಮನೊಂದಿಗೆ ಹೋಲಿಕೆಯಲ್ಲ. ಕಾಕತಾಳೀಯವೆಂದರೆ, ಭಗವಾನ್ ರಾಮ ಮತ್ತು ರಾಹುಲ್ ಗಾಂಧಿಯವರ ಹೆಸರುಗಳು “ರಾ”ಯಿಂದ ಪ್ರಾರಂಭವಾಗುತ್ತವೆ. ಆದರೆ ಬಿಜೆಪಿಯವರು ತಮ್ಮ ನಾಯಕರನ್ನು ದೇವರೊಂದಿಗೆ ಹೋಲಿಸಿದಂತೆ, ನಾವು ರಾಹುಲ್ ಅವರನ್ನು ರಾಮನಿಗೆ ಹೋಲಿಸುವುದಿಲ್ಲ. ದೇವರು ಎಂದರೆ ದೇವರು. ರಾಹುಲ್ ಗಾಂಧಿ ಮನುಷ್ಯ. ಅವರು ಮಾನವೀಯತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಾರದ ಕೆಟ್ಟದಿನ ಸೋಮವಾರ – ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಅಧಿಕೃತ ಘೋಷಣೆ

    ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ (Bharat Jodo Yatra) ಮಂಗಳವಾರ ಬೆಳಗ್ಗೆ ಆಂಧ್ರಪ್ರದೇಶ ಪ್ರವೇಶಿಸಿದೆ. ಯಾತ್ರೆಯನ್ನು 150 ದಿನಗಳ ಕಾಲ ನಡೆಸಲು ನಿರ್ಧರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನೈಜೀರಿಯಾದಿಂದ ತಂದ ಚೀತಾಗಳಿಂದ ದೇಶಾದ್ಯಂತ ಲಂಪಿ ವೈರಸ್‌ ಹರಡುತ್ತಿದೆ: ನಾಲಿಗೆ ಹರಿಬಿಟ್ಟ ಕೈ ನಾಯಕ ನಾನಾ ಪಾಟೋಲೆ

    ನೈಜೀರಿಯಾದಿಂದ ತಂದ ಚೀತಾಗಳಿಂದ ದೇಶಾದ್ಯಂತ ಲಂಪಿ ವೈರಸ್‌ ಹರಡುತ್ತಿದೆ: ನಾಲಿಗೆ ಹರಿಬಿಟ್ಟ ಕೈ ನಾಯಕ ನಾನಾ ಪಾಟೋಲೆ

    ಮುಂಬೈ: ಕಳೆದ ಕೆಲ ತಿಂಗಳಿಂದ ದೇಶದ ಜಾನುವಾರುಗಳನ್ನು ಲಂಪಿ ವೈರಸ್(Lumpy Virus) ಇನ್ನಿಲ್ಲದಂತೆ ಕಾಡುತ್ತಿದೆ. ಈ ಚರ್ಮ ರೋಗದ ಕುರಿತಾಗಿ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಾಟೋಲೆ(Nana Patole) ಹೇಳಿರುವ ಮಾತು ಈಗ ವಿವಾದಕ್ಕೆ ಕಾರಣವಾಗಿದೆ.

    ನೈಜೀರಿಯಾದಿಂದ ತರಲಾದ ಚೀತಾಗಳಿಂದಾಗಿಯೇ(Nigerian’ Cheetahs) ದೇಶಾದ್ಯಂತ ಲಂಪಿ ವೈರಸ್ ಹಬ್ಬುತ್ತಿದ್ದು, ಸಾವಿರಾರು ಪಶುಗಳು ಸಾವನ್ನಪ್ಪುತ್ತಿವೆ ಎಂದು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ದೇಶದ ರೈತರಿಗೆ ನಷ್ಟ ಉಂಟು ಮಾಡಬೇಕೆಂಬ ದುರುದ್ದೇಶದಿಂದಲೇ ಈ ಚೀತಾಗಳನ್ನು ಕೇಂದ್ರ ಸರ್ಕಾರ ಭಾರತಕ್ಕೆ ತಂದಿದೆ ಎಂದು ಹೇಳಿ ನಾಲಿಗೆ ಹರಿಬಿಟ್ಟಿದ್ದಾರೆ.

    ಈ ಹೇಳಿಕೆಯ ಬೆನಲ್ಲೇ ನಾನಾ ಪಾಟೋಲೆ ಮೇಲೆ ಬಿಜೆಪಿ ಮುಗಿಬಿದ್ದಿದೆ. ನಾನಾ ಪಾಟೋಲೆಗೆ ಕನಿಷ್ಠ ನೈಜೀರಿಯಾ ಮತ್ತು ನಮೀಬಿಯಾಗೆ ಇರುವ ವ್ಯತ್ಯಾಸ ಕೂಡ ಗೊತ್ತಿಲ್ಲ. ಅವರು ಮಹಾರಾಷ್ಟ್ರದ ರಾಹುಲ್ ಗಾಂಧಿ ಇದ್ದಂತೆ ಎಂದು ಲೇವಡಿ ಮಾಡಿದೆ. ಇದನ್ನೂ ಓದಿ: ಚುನಾವಣೆ ವೇಳೆ ಉಚಿತ ಕೊಡುಗೆ ಆಫರ್ – ಪಕ್ಷಗಳಿಗೆ ಶಾಕ್, ಆಯೋಗದ ನಿರ್ಧಾರಕ್ಕೆ ವಿಪಕ್ಷಗಳು ಕಿಡಿ

    ಸುಳ್ಳು ಸುದ್ದಿ, ತಪ್ಪು ತಪ್ಪಾಗಿ ಅಪಪ್ರಚಾರ ಮಾಡುವುದು ಕಾಂಗ್ರೆಸ್‍ಗೆ ಹೊಸದಲ್ಲ. ಕೋವಿಡ್‌ ಸಮಯದಲ್ಲೂ ಹೀಗೆ ಮಾಡಿತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದೆ. ಸುಳ್ಳು ಸುದ್ದಿ ಹಬ್ಬಿಸುವ ಇಂಥವರ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳುತ್ತಾ ಎಂದು ಸವಾಲು ಹಾಕಿದೆ.

    ಬಿಜೆಪಿ ಶಾಸಕ ರಾಮ್‌ ಕದಮ್‌ ಅವರು, ಚೀತಾವನ್ನು ತಂದಿದ್ದರಿಂದ ಭಾರತದಲ್ಲಿ ಲಂಪಿ ವೈರಸ್‌ ಹರಡುತ್ತಿದೆ ಎಂದು ಸಂಶೋಧನೆ ಮಾಡಿದ ನಾನಾ ಪಾಟೋಲೆಗೆ ನೊಬೆಲ್‌ ಪ್ರಶಸ್ತಿ(Nobel Award) ನೀಡಬೇಕೆಂದು ವ್ಯಂಗ್ಯವಾಡಿದ್ದಾರೆ.

    ಸೆಪ್ಟೆಂಬರ್ 17ರಂದು ನಮೀಬಿಯಾದಿಂದ ಭಾರತಕ್ಕೆ ಚೀತಾಗಳನ್ನು ತರಲಾಗಿತ್ತು. ಜುಲೈ ತಿಂಗಳಿನಲ್ಲಿ ಮೊದಲ ಬಾರಿಗೆ ಲಂಪಿ ವೈರಸ್‌ ಭಾರತದಲ್ಲಿ ಪತ್ತೆಯಾಗಿತ್ತು.

    Live Tv
    [brid partner=56869869 player=32851 video=960834 autoplay=true]