Tag: Nandakishor

  • ಅಮೆರಿಕಾಗೆ ಹಾರಲು ಸಜ್ಜಾದ ನಂದಕಿಶೋರ್- ಮೋಹನ್ ಲಾಲ್

    ಅಮೆರಿಕಾಗೆ ಹಾರಲು ಸಜ್ಜಾದ ನಂದಕಿಶೋರ್- ಮೋಹನ್ ಲಾಲ್

    ಲಯಾಳಂ ಹೆಸರಾಂತ ನಟ ಮೋಹನ್ ಲಾಲ್ ಮತ್ತು ಕನ್ನಡದ ನಿರ್ದೇಶಕ ನಂದಕಿಶೋರ್ ಅತೀ ಶೀಘ್ರದಲ್ಲೇ ಅಮೆರಿಕಾಗೆ (America) ಪ್ರಯಾಣ ಬೆಳೆಸಲಿದ್ದಾರೆ. ಈ ಜೋಡಿಯ ಮುಂದಿನ ಹಂತದ ಚಿತ್ರೀಕರಣ ಅಮೆರಿಕಾದಲ್ಲಿ ನಡೆಯಲಿದ್ದು, ಈಗಾಗಲೇ ಮೊದಲ ಹಂತದ ಶೂಟಿಂಗ್ (Shooting) ಅನ್ನು ಮೈಸೂರಿನಲ್ಲಿ ಮುಗಿಸಿಕೊಂಡಿದ್ದಾರೆ.

    ಹು ನಿರೀಕ್ಷಿತ ‘ವೃಷಭ’ (Vrishabh) ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.  ಒಂದು ತಿಂಗಳ ಕಾಲ ಮೈಸೂರಿನಲ್ಲಿ (Mysore) ಚಿತ್ರೀಕರಣ ನಡೆದಿದೆ.  ಭಾರತೀಯ ಚಿತ್ರರಂಗದಲ್ಲಿ ಕಂಡು ಕೇಳರಿಯದ ಬೃಹತ್ ಆಕ್ಷನ್ ದೃಶ್ಯಗಳನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡಲಾಗಿದೆ. ನಂದಕಿಶೋರ್ (Nandakishor) ನಿರ್ದೇಶನದ ವೃಷಭ ಚಿತ್ರದ ಚಿತ್ರೀಕರಣ ಕಳೆದ ತಿಂಗಳು 22 ರಂದು ಮೈಸೂರಿನಲ್ಲಿ ಪ್ರಾರಂಭವಾಗಿತ್ತು. ಈ ಭಾಗದ  ಚಿತ್ರೀಕರಣದಲ್ಲಿ ಮೋಹನ್ ಲಾಲ್ (Mohanlal), ರೋಶನ್ ಮೇಕಾ, ಶನಾಯ ಕಪೂರ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ (Ragini Dwivedi) ಮುಂತಾದವರು ಪಾಲ್ಗೊಂಡಿದ್ದರು.

    ಹಾಲಿವುಡ್‌ ನ ಜನಪ್ರಿಯ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಗುರುತಿಸಿಕೊಂಡಿರುವ ನಿಕ್ ಥರ್ಲೋ ಈ ಚಿತ್ರಕ್ಕೆ ಕೆಲಸ ಮಾಡುತ್ತಿರುವುದು ಒಂದು ವಿಶೇಷತೆಯಾದರೆ, ಬಾಹುಬಲಿ,  ಪುಲಿಮುರುಗನ್, ಶಿವಾಜಿ – ದಿ ಬಾಸ್, ಎಂದಿರನ್, ಪುಷ್ಪ – ದಿ ರೈಸ್ ಸೇರಿದಂತೆ ಹಲವು ಚಿತ್ರಗಳಿಗೆ ಕೆಲಸ ಮಾಡಿರುವ ಭಾರತೀಯ ಚಿತ್ರರಂಗದ ಜನಪ್ರಿಯ ಸಾಹಸ ನಿರ್ದೇಶಕರಾದ ಪೀಟರ್ ಹೇನ್ಸ್ ಈ ಚಿತ್ರದ ಸಾಹಸ ದೃಶ್ಯಗಳನ್ನು ಸಂಯೋಜಿಸುತ್ತಿರುವುದು ಇನ್ನೊಂದು ಹೆಗ್ಗಳಿಕೆ.

    ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ನಂದಕಿಶೋರ್, ‘ಮೊದಲ ಹಂತದ ಚಿತ್ರೀಕರಣದಲ್ಲಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿನದನ್ನು ಸಾಧಿಸಿದ ಖುಷಿ ನಮಗಿದೆ.  ಜೊತೆಗೆ ಹಗಲು ರಾತ್ರಿ ಕಷ್ಟಪಟ್ಟು ದುಡಿದ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಹೇಳುವುದಕ್ಕೆ ಬಯಸುತ್ತೇನೆ.  ಮೋಹನ್ ಲಾಲ್ ಸರ್, ರೋಶನ್, ಶ್ರೀಕಾಂತ್, ರಾಗಿಣಿ ಮುಂತಾದವರು ನಮ್ಮ ಡೆಡ್ ಲೈನ್ ಗಳನ್ನು ಪೂರೈಸುವಲ್ಲಿ ಪೂರಕವಾಗಿ ಕೆಲಸ ಮಾಡಿದ್ದಾರೆ. ಪುಲಿಮುರುಗನ್ ಚಿತ್ರದ ನಂತರ ಮೋಹನ್ ಲಾಲ್ ಮತ್ತು ಪೀಟರ್ ಹೇನ್ಸ್ ಈ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದು, ವೃಷಭ ಚಿತ್ರವು ಭಾರತದ ಅತೀ ದೊಡ್ಡ ಆಕ್ಷನ್ ಚಿತ್ರವಾಗಿ ಮೂಡಿಬರಲಿದೆ’ ಎಂದಿದ್ದಾರೆ.

    ವೃಷಭ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಅತೀ ದೊಡ್ಡ  ಆಕ್ಷನ್ ಚಿತ್ರವಾಗಿದ್ದು, ಮೋಹನ್ ಲಾಲ್, ರೋಶನ್ ಮೇಕಾ, ಶನಾಯ ಕಪೂರ್, ಝಹ್ರ ಎಸ್ ಖಾನ್, ಶ್ರೀಕಾಂತ್ ಮೇಕಾ, ರಾಗಿಣಿ ದ್ವಿವೇದಿ ಮುಂತಾದವರು ನಟಿಸಿದ್ದಾರೆ. ಚಿತ್ರದಲ್ಲಿ ವಿಎಫ್ಎಕ್ಸ್ ದೊಡ್ಡ ಪ್ರಮಾಣದಲ್ಲಿದ್ದು, ಇದೊಂದು ಬರೀ ಆಕ್ಷನ್ ಚಿತ್ರವಷ್ಟೇ ಅಲ್ಲ, ಅದ್ಭುತ ಸೆಂಟಿಮೆಂಟ್ ಚಿತ್ರವಾಗಿ ಮೂಡಿಬರುತ್ತಿದ್ದು, 2024ರ ಅತೀ ಜನಿರೀಕ್ಷಿತ ಚಿತ್ರವಾಗಿದೆ.

     

    ವೃಷಭ ಚಿತ್ರವನ್ನು ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲಂಸ್, ಎವಿಎಸ್ ಸ್ಟುಡಿಯೋಸ್ ನ ಜೊತೆಗೆ ಅರ್ಪಿಸುತ್ತಿದೆ‌. ನಂದಕಿಶೋರ್ ನಿರ್ದೇಶನದ ಈ ಚಿತ್ರವನ್ನು, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಅಭಿಷೇಕ್ ವ್ಯಾಸ್ (ಏವಿಎಸ್), ಶ್ಯಾಮ್ ಸುಂದರ್ (ಫರ್ಸ್ಟ್ ಸ್ಟೆಪ್ ಮೂವೀಸ್), ಏಕ್ತಾ ಕಪೂರ್, ಶೋಭಾ ಕಪೂರ್ (ಬಾಲಾಜಿ ಟೆಲಿಫಿಲಂಸ್), ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ (ಕನೆಕ್ಟ್ ಮೀಡಿಯಾ) ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ತೆಲುಗು, ಮಲಯಾಳಂನಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿರುವ ಈ ಚಿತ್ರವು ತೆಲುಗು, ಮಲಯಾಳಂ, ಹಿಂದಿ, ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡಿಗ ನಂದಕಿಶೋರ್ ಚಿತ್ರಕ್ಕೆ ಹಾಲಿವುಡ್ ಕಾರ್ಯಕಾರಿ ನಿರ್ಮಾಪಕ

    ಕನ್ನಡಿಗ ನಂದಕಿಶೋರ್ ಚಿತ್ರಕ್ಕೆ ಹಾಲಿವುಡ್ ಕಾರ್ಯಕಾರಿ ನಿರ್ಮಾಪಕ

    ಮೋಹನ್ ಲಾಲ್ (Mohanlal) ಮತ್ತು ರೋಶನ್ ಮೇಕ ಅಭಿನಯದ ‘ವೃಷಭ’ ಚಿತ್ರದ ಚಿತ್ರೀಕರಣ ಕಳೆದ ವಾರವಷ್ಟೇ ಅಧಿಕೃತವಾಗಿ ಪ್ರಾರಂಭವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ಈ ಚಿತ್ರಕ್ಕೆ ನಿಕ್ ತರ್ಲೋ (Nick Tarlo) ಕಾರ್ಯಕಾರಿ ನಿರ್ಮಾಪಕರಾಗಿ ಸೇರ್ಪಡೆಯಾಗಿದ್ದಾರೆ.

    ನಿಕ್ ತರ್ಲೋ ಹಲವು ಹಾಲಿವುಡ್ (Hollywood) ಚಿತ್ರಗಳ ನಿರ್ಮಾಪಕರಾಗಿ ಮತ್ತು ಕಾರ್ಯಕಾರಿ ನಿರ್ಮಾಪಕರಾಗಿ ಗುರುತಿಸಿಕೊಂಡವರು. ಆಸ್ಕರ್ ಪ್ರಶಸ್ತಿ ಚಿತ್ರಗಳಾದ ‘ಮೂನ್ಲೈಟ್’, ‘ಮಿಸೌರಿ’, ‘ಥ್ರೀ ಬಿಲ್ಬೋರ್ಡ್ಸ್ ಔಟ್ಸೈಡ್ ಎಬ್ಬಿಂಗ್’ ಮುಂತಾದ ಚಿತ್ರಗಳಿಗೆ ದುಡಿದವರು. ಈಗ ಅವರು ‘ವೃಷಭ’ ಚಿತ್ರದ ಮೂಲಕ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ.

    ‘ವೃಷಭ’ ಚಿತ್ರವು ಹಾಲಿವುಡ್ ಚಿತ್ರಗಳ ಮಾದರಿಯಲ್ಲಿ ನಿರ್ಮಾಣವಾಗುತ್ತಿದ್ದು, ಇತ್ತೀಚೆಗೆ ಚಿತ್ರತಂಡದವರು ಚಿತ್ರಕ್ಕೆ ಹೇಗೆಲ್ಲ ತಯಾರಿಗಳು ನಡೆಯುತ್ತಿದೆ, ಚಿತ್ರೀಕರಣ ಸಮಯದಲ್ಲಿ ಏನೆಲ್ಲಾ ನಿಯಮಗಳನ್ನು ಪಾಲಿಸಲಾಗುತ್ತಿದೆ ಎಂದು ತಿಳಿಸುವ 57 ಸೆಕೆಂಡ್‌ಗಳ ಒಂದು ವೀಡಿಯೋ ಬಿಡುಗಡೆ ಮಾಡಲಾಗಿದೆ. ಹಾಲಿವುಡ್ ಮಾದರಿಯಲ್ಲಿ ನಿರ್ಮಾಣವಾಗುತ್ತಿರುವ ಭಾರತದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ವೃಷಭ ಪಾತ್ರವಾಗಿದೆ.

    ಈ ಚಿತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕುರಿತು ಮಾತನಾಡಿರುವ ನಿಕ್ ತರ್ಲೋ, ‘ಇದು ನನ್ನ ಮೊದಲ ಭಾರತೀಯ ಚಿತ್ರ ಮತ್ತು ನಾನು ಇಲ್ಲಿ ಕೆಲಸ ಮಾಡುವುದಕ್ಕೆ ಎದುರು ನೋಡುತ್ತಿದ್ದೇನೆ. ಒಬ್ಬ ಕಾರ್ಯಕಾರಿ ನಿರ್ಮಾಪಕನಾಗಿ, ಚಿತ್ರದ ಸೃಜನಶೀಲ ಚಟುವಟಿಕೆಗಳು ಸೇರಿದಂತೆ ಹಲವು ವಿಭಾಗಗಳ ಕುರಿತು ಕಾರ್ಯನಿರ್ವಹಿಸುತ್ತಿದ್ದೇನೆ. ನನ್ನ ದೇಶದ ಚಿತ್ರಗಳ ಹೊರತಾಗಿ, ನಾನು ಕೆಲಸ ಮಾಡುತ್ತಿರುವ ಬೇರೆ ದೇಶದ ಮೊದಲ ಚಿತ್ರವಿದು. ಅದರಲ್ಲೂ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗುತ್ತಿರುವ ಈ ಚಿತ್ರ ನನಗೆ ಒಂದು ಹೊಸ ಅನುಭವ. ಈ ಚಿತ್ರದಿಂದ ನಾನು ಬಹಳಷ್ಟು ಕಲಿಯುವುದಿದೆ ಮತ್ತು ಈ ಅನುಭವ ಅದ್ಭುತವಾಗಿ ಇರುತ್ತದೆ ಎಂದು ಎದುರು ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.

    ಚಿತ್ರತಂಡಕ್ಕೆ ನಿಕ್ ಸೇರ್ಪಡೆಯ ಕುರಿತು ಮಾತನಾಡಿರುವ ನಿರ್ಮಾಪಕ ವಿಶಾಲ್ ಗುರ್ನಾನಿ, ‘ನಿಕ್ ಸೇರ್ಪಡೆಯಿಂದ ನಮ್ಮ ಚಿತ್ರ ಇನ್ನಷ್ಟು ದೊಡ್ಡದಾಗಿದೆ. ಈ ಚಿತ್ರವನ್ನು ನಾವು ಹಾಲಿವುಡ್ ಶೈಲಿಯಲ್ಲಿ ನಿರ್ಮಿಸುತ್ತಿದ್ದು, ನಿಕ್ರಂತಹ ಸಮರ್ಥ ವ್ಯಕ್ತಿ ನಮ್ಮ ಜೊತೆಗೆ ಕೈಜೋಡಿಸಿರುವುದು ತಂಡದ ಆತ್ಮವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿದೆ’ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ತಮಿಳಿನಲ್ಲಿ ಬಂಪರ್ ಆಫರ್‌, ವಿಕ್ರಮ್‌ಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

    ‘ವೃಷಭ’ ಚಿತ್ರವು ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಂದು ಆಕ್ಷನ್-ಸೆಂಟಿಮೆಂಟ್ ಚಿತ್ರವಾಗಿದ್ದು, ಮೋಹನ್ ಲಾಲ್ ಮತ್ತು ರೋಶನ್ ಮೇಕ ಜೊತೆಗೆ ಶನಾಯ ಕಪೂರ್, ಜಹ್ರ ಎಸ್ ಖಾನ್, ಶ್ರೀಕಾಂತ್ ಮೇಕ, ರಾಗಿಣಿ ದ್ವಿವೇದಿ ಮುಂತಾದವರು ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಗ್ರಾಫಿಕ್ಸ್ ಕೆಲಸಗಳು ಹೆಚ್ಚಾಗಿದ್ದು, ಮುಂದಿನ ವರ್ಷದ ನಿರೀಕ್ಷಿತ ಚಿತ್ರಗಳು ಇದು ಸಹ ಒಂದಾಗಿದೆ.

    ‘ವೃಷಭ’ ಚಿತ್ರವನ್ನು ಬಾಲಿವುಡ್ ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಕನ್ನಡದ ನಂದಕಿಶೋರ್ (Nandakishor) ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವು ಮಲಯಾಳಂ, ಕನ್ನಡ, ತೆಲುಗು, ಹಿಂದಿ ಮತ್ತು ತಮಿಳುಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣಗೊಂಡು ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ರಾಗಿಣಿ

    ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರದಲ್ಲಿ ರಾಗಿಣಿ

    ಭಾರತದ ಬೃಹತ್ ಸಾಹಸಮಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ (Mohanlal) ಅಭಿನಯದ ‘ವೃಷಭ’ (Vrishabha) ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.

    ‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಸಾಹಸ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ. ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

    ‘ಕಾಂದಹಾರ್’ ನಂತರ ಇದೇ ಎರಡನೆಯ ಬಾರಿಗೆ ಮೋಹನ್ ಲಾಲ್ ಜೊತೆಗೆ ರಾಗಿಣಿ (Ragini Dwivedi) ನಟಿಸುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ನಂದಕಿಶೋರ್ (Nandakishor) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ:‘ಸಿಂಗಂ’ ಖ್ಯಾತಿಯ ನಟ ಜಯಂತ್ ಸಾವರ್ಕರ್ ವಿಧಿವಶ

    ಚಿತ್ರ ಪ್ರಾರಂಭವಾದ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡ ನಟ ಮೋಹನ್ ಲಾಲ್, ‘ವೃಷಭ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

     

    ‘ವೃಷಭ’ ಚಿತ್ರವನ್ನು ಬಾಲಿವುಡ್‌ ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋದ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರವು ಮುಂದಿನ ವರ್ಷ ಜಗತ್ತಿನಾದ್ಯಂತ 4500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲಯಾಳಂ ಚಿತ್ರರಂಗಕ್ಕೆ ಹಾರಿದ ನಂದಕಿಶೋರ್ : ಮೋಹನ್ ಲಾಲ್ ಹೀರೋ

    ಮಲಯಾಳಂ ಚಿತ್ರರಂಗಕ್ಕೆ ಹಾರಿದ ನಂದಕಿಶೋರ್ : ಮೋಹನ್ ಲಾಲ್ ಹೀರೋ

    ನ್ನಡದ ಮತ್ತೋರ್ವ ಪ್ರತಿಭಾವಂತ ನಿರ್ದೇಶಕ ಬೇರೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಹಿಟ್ ಸಿನಿಮಾಗಳನ್ನು ನೀಡಿರುವ ನಂದಕಿಶೋರ್, ಇದೀಗ ಮಲಯಾಳಂ (Malayalam) ಚಿತ್ರರಂಗಕ್ಕೆ ಹಾರಿದ್ದಾರೆ. ಮಲಯಾಳಂ ಚಿತ್ರರಂಗದ ದಿಗ್ಗಜ ಮೋಹನ್ ಲಾಲ್ (Mohanlal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ.

    ಈ ಹಿಂದೆ ಮೋಹನ್ ಲಾಲ್ ಜೊತೆಗಿರುವ ನಂದಕಿಶೋರ್ (Nandakishor) ಫೋಟೋ ವೈರಲ್ ಆಗಿತ್ತು. ಅವರೊಂದಿಗೆ ಸಿನಿಮಾ ಮಾಡಲಿದ್ದಾರಾ ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದೀಗ ನಿಜವಾಗಿದೆ. ಚಿತ್ರಕ್ಕೆ ವೃಷಭ  (Vrushabha) ಎಂದು ಹೆಸರಿಟ್ಟಿದ್ದು, ಇದೇ ತಿಂಗಳಿನಿಂದಲೇ ಚಿತ್ರೀಕರಣ ಆರಂಭಿಸುವುದಾಗಿ ನಂದಕಿಶೋರ್ ತಿಳಿಸಿದ್ದಾರೆ. ಮೋಹಲ್ ಲಾಲ್ ಜೊತೆ ಸಿನಿಮಾ ಮಾಡುತ್ತಿರುವುದು ತಮ್ಮ ಪುಣ್ಯ ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:3ನೇ ಪತ್ನಿಯಿಂದಲೂ ದೂರಾವಾದ್ರಾ ನಟ ಪವನ್ ಕಲ್ಯಾಣ್?

    ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ. ಸತತ ಎಂಟು ತಿಂಗಳ ಕಾಲ ಸ್ಕ್ರಿಪ್ಟ್ ಮೇಲೆಯೇ ಕೆಲಸ ಮಾಡಿದ್ದಾರಂತೆ ನಂದಕಿಶೋರ್, ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಜುಲೈ 22 ರಿಂದ ಶೂಟಿಂಗ್ ಶುರು ಮಾಡುತ್ತಾರಂತೆ.

    ಮೋಹನ್ ಲಾಲ್ ಜೊತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದ್ದು, ಶ್ರೀಕಾಂತ್ ಮೇಕಾ ಪುತ್ರ ರೋಷನ್ ಕೂಡ ನಟಿಸುತ್ತಿದ್ದಾರೆ. ಅಲ್ಲದೇ, ಕನ್ನಡದ ಕಲಾವಿದರಿಗೂ ಅವಕಾಶ ನೀಡಲಿದ್ದಾರಂತೆ. ಹಿಂದಿ ಸಿನಿಮಾಗಳಲ್ಲಿ ಪಳಗಿರುವ ಸಂತೋಷ್ ತುಂಡಿಯಲ್ ಸಿನಿಮಾಟೋಗ್ರಾಫರ್ ಆಗಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಸಂಗೀತ ಚಿತ್ರಕ್ಕಿದೆ. ಮೂಲ ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ತಯಾರಾಗಲಿದ್ದು, ನಂತರ ಇತರ ಭಾಷೆಗಳಿಗೆ ಡಬ್ ಮಾಡುತ್ತಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]