Tag: Nandi

  • ಮೂರು ದಿನಗಳ ಹಿಂದಷ್ಟೇ ಲೆಜೆಂಡರಿ ಆಕ್ಟ್ರೆಸ್ ಅವಾರ್ಡ್ ಪಡೆದಿದ್ದರು ಲೀಲಾವತಿ

    ಮೂರು ದಿನಗಳ ಹಿಂದಷ್ಟೇ ಲೆಜೆಂಡರಿ ಆಕ್ಟ್ರೆಸ್ ಅವಾರ್ಡ್ ಪಡೆದಿದ್ದರು ಲೀಲಾವತಿ

    ಹಿರಿಯ ನಟಿ ಲೀಲಾವತಿ  (Leelavathi) ಅವರಿಗೆ ಸಿಗಬೇಕಾದ ಗೌರವ, ಪ್ರಶಸ್ತಿಗಳು ಸಿಗದೇ ಇದ್ದರೂ ಮೂರು ದಿನಗಳ ಹಿಂದೆಯಷ್ಟೇ ಪ್ರತಿಷ್ಠಿತ ನಂದಿ ಅವಾರ್ಡ್ ಅವರಿಗೆ ಒಲಿದು ಬಂದಿತ್ತು. ಈಗಷ್ಟೇ ಶುರು ಮಾಡಿರುವ ನಂದಿ (Nandi) ಪ್ರಶಸ್ತಿ ಸಂಸ್ಥೆಯು ಲೀಲಾವತಿ ಅವರಿಗೆ ಲೆಜೆಂಡರಿ ಆಕ್ಟ್ರೆಸ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಅವರಿಗೆ ಅನಾರೋಗ್ಯದ ಕಾರಣದಿಂದಾಗಿ ಪುತ್ರ ವಿನೋದ್ ರಾಜ್ ಆ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

    ಕನ್ನಡ ಚಿತ್ರರಂಗದಲ್ಲಿ (Sandalwood) ಮೊದಲ ಬಾರಿಗೆ ನಂದಿ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ಜರುಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ರವಿಚಂದ್ರನ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಇನ್ನೂ ಹಲವು ತಾರೆಯರು ಭಾಗಿಯಾಗಿದ್ದಾರೆ. ಜೊತೆಗೆ ಹಿರಿಯ ನಟ ಶ್ರೀನಾಥ್, ನಟಿ ಪ್ರೇಮ, ವಿನೋದ್ ರಾಜ್, ಅನುಪ್ರಭಾಕರ್, ಉಮಾಶ್ರೀ ಇನ್ನೂ ಹಲವು ನಟ-ನಟಿಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ನಟ ರವಿಚಂದ್ರನ್ ಮಾತನಾಡಿ, ‘ನಂದಿ ಪ್ರಶಸ್ತಿ ನೀಡುತ್ತಿರುವುದು ಬಹಳ ಖುಷಿಯಾಗಿದೆ. ಪ್ರಶಸ್ತಿ ಬಹಳ ಭಾರವಾಗಿದೆ ಅದು ನನಗೆ ಖುಷಿ ಕೊಟ್ಟಿತು, ನನ್ನಂಥಹಾ ಶಿವ ಭಕ್ತನಿಂದ ನಂದಿ ಪ್ರಶಸ್ತಿ ಕೊಡಿಸುತ್ತಿದ್ದೀರ. ಎಲ್ಲರ ಮನೆಗಳಿಗೂ ನಂದಿ ಸೇರುತ್ತದೆ ಎಂಬುದು ನನಗೆ ಖುಷಿ’ ಎಂದರು. ನಟ ಶ್ರೀನಾಥ್ ಅವರಿಗೆ ಜೀವನಮಾನ ಸಾಧನೆಗೆ ಲೈಫ್ ಟೈಮ್ ಅಚೀವ್ಮೆಂಟ್ ಅವಾರ್ಡ್ ಕೂಡ ನೀಡಲಾಗಿತ್ತು.

    ಲೀಲಾವತಿ ಅವರಿಗೆ ಈಗಾಗಲೇ ಜೀವಮಾನ ಸಾಧನೆಗಾಗಿ ಕರ್ನಾಟಕ ಸರಕಾರವು ಡಾ.ರಾಜಕುಮಾರ್ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಅಲ್ಲದೇ, ತುಮಕೂರು ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ನೀಡಿದೆ. ಸಿನಿಮಾ ನಟನೆಗಾಗಿ ಹತ್ತು ಹಲವು ಪ್ರಶಸ್ತಿಗಳನ್ನೂ ಅವರು ಪಡೆದಿದ್ದಾರೆ.

  • ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯ – ರಣಭೀಕರ ಪ್ರವಾಹಕ್ಕೂ ನಲುಗದ ಶಿವಲಿಂಗ, ನಂದಿ ವಿಗ್ರಹ

    ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯ – ರಣಭೀಕರ ಪ್ರವಾಹಕ್ಕೂ ನಲುಗದ ಶಿವಲಿಂಗ, ನಂದಿ ವಿಗ್ರಹ

    ಚಿಕ್ಕೋಡಿ(ಬೆಳಗಾವಿ): ಕೃಷ್ಣಾ ನದಿ ತೀರದಲ್ಲೊಂದು ವಿಸ್ಮಯವೊಂದು ನಡೆದಿದೆ. ರಣಭೀಕರ ಪ್ರವಾಹಕ್ಕೂ ಶಿವಲಿಂಗ ಹಾಗೂ ನಂದಿ ವಿಗ್ರಹ ನಲುಗದೆ ಜನರಲ್ಲಿ ಅಚ್ಚರಿ ಮೂಡಿಸಿವೆ.

    ಹೌದು. ಕೃಷ್ಣಾ ನದಿ ತೀರ ಉಕ್ಕಿ ಹರಿದ ಪರಿಣಾಮ 2019 ಹಾಗೂ 2021ರಲ್ಲಿ ರಣ ಭೀಕರ ಪ್ರವಾಹ ಬಂದಿತ್ತು. ರಕ್ಕಸ ಪ್ರವಾಹಕ್ಕೆ ನದಿ ತೀರದ ಜನರ ಬದುಕು ಅಕ್ಷರಶಃ ನಲುಗಿ ಹೋಗುವುದರ ಜೊತೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅಷ್ಟೇ ಅಲ್ಲದೇ ಪ್ರವಾಹಕ್ಕೆ ಸಿಲುಕಿ ಸೇತುವೆಗಳು, ಸಾವಿರಾರು ಮನೆಗಳು, ಕಲ್ಲು ಬಂಡೆಗಳು ಕೊಚ್ಚಿ ಹೋಗಿದ್ದವು. ಆದರೆ ವಿಸ್ಮಯ ಎನ್ನುವಂತೆ ಶಿವಲಿಂಗ ಹಾಗೂ ನಂದಿ ಮೂರ್ತಿಗಳು ಒಂದಿಂಚು ಅಲುಗಾಡದೇ ತಟಸ್ಥವಾಗಿ ಅಲ್ಲೆ ಉಳಿದಿರುವುದು ಅಚ್ಚರಿಗೆ ಕಾರಣವಾಗಿದೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ನದಿ ತೀರದಲ್ಲಿರುವ ಈ ಎರಡು ಮೂರ್ತಿಗಳು ಭೀಕರ ಪ್ರವಾಹಕ್ಕೂ ಕೊಚ್ಚಿ ಹೋಗಿಲ್ಲ. ಈ ಎರಡು ಮೂರ್ತಿಗಳು ಇರುವ ಪಕ್ಕದಲ್ಲೇ ಇರುವ ಸೇತುವೆ ಕೊಚ್ಚಿ ಹೋಗಿವೆ. ಆದರೆ ಈ ವಿಗ್ರಹಗಳು ಮಾತ್ರ ಇದ್ದಲ್ಲೆ ಇರುವುದನ್ನು ಕಂಡು ಸ್ಥಳೀಯರು ಇದೊಂದು ಚಮತ್ಕಾರ ಎನ್ನುತ್ತಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಶಾಸಕನಿಗೆ ಹೆಚ್‍ಡಿಕೆ ಶಾಕ್ – ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹಾಕಲು ತಂತ್ರ!

  • ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು!

    ಚಾಮುಂಡಿ ಬೆಟ್ಟದ ನಂದಿ ವಿಗ್ರಹದಲ್ಲಿ ಬಿರುಕು!

    ಮೈಸೂರು: ಚಾಮುಂಡಿ ಬೆಟ್ಟದಲ್ಲಿನ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಕೆಲವರು ಆತಂಕ ಮತ್ತು ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ನಂದಿ ವಿಗ್ರಹ ಪರಿಶೀಲನೆ ನಡೆಸಿದೆ.

    ನಂದಿ ವಿಗ್ರಹ ಬಿರುಕು ಬಿಟ್ಟಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪಾರಂಪರಿಕ ತಜ್ಞರ ಸಮಿತಿಯನ್ನು ರಚಿಸಿ ವಿಗ್ರಹ ಪರಿಶೀಲನೆಗೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಶಿಲ್ಪಿ ತಂಡ ವಿಗ್ರಹ ಪರಿಶೀಲನೆ ನಡೆಸಿದೆ. ಕೆಲವು ಕಡೆ ಬಿರುಕು ಬಿಟ್ಟಿರುವ ರೀತಿ ಮೇಲ್ನೋಟಕ್ಕೆ ಕಾಣುತ್ತಿದೆ. ಆದರೆ ಅದು ಬಿರುಕಲ್ಲ, ಕಲ್ಲಿನ ನೈಜತೆ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಪೂರ್ಣವಾಗಿ ಪರಿಶೀಲನೆ ನಡೆಸಿ ಸಮಿತಿ ವರದಿ ನೀಡಲಿದ್ದು, ಬಿರುಕು ಬಿಟ್ಟಿದೆ ಎಂದು ತಜ್ಞರು ಸ್ಪಷ್ಟಪಡಿಸಿದರೆ ಅದನ್ನು ಮುಚ್ಚಲು ಕೂಡ ಜಿಲ್ಲಾಡಳಿತ ಮುಂದಾಗಲಿದೆ.

    ಸುಮಾರು 400 ವರ್ಷಗಳ ಹಳೆಯದಾದ ನಂದಿ ವಿಗ್ರಹ ಇದ್ದಾಗಿದ್ದು, 1659-73ರಲ್ಲಿ ನಿರ್ಮಾಣಗೊಂಡಿದೆ. ಚಾಮುಂಡಿ ಬೆಟ್ಟದ ಪ್ರಮುಖ ಕೇಂದ್ರ ಬಿಂದುವೇ ಈ ನಂದಿ ವಿಗ್ರಹ. ವಿಗ್ರಹದ ಕಾಲು, ಕುತ್ತಿಗೆ ಹಾಗೂ ಮುಖದ ಕೆಲವೆಡೆ ಬಿರುಕು ಕಾಣಿಸಿಕೊಂಡಿದೆ ಎಂದು ಭಕ್ತರು ಜಿಲ್ಲಾಡಳಿತಕ್ಕೆ ತಿಳಿಸಿದ್ದರು. ಕಪ್ಪಾಗಿದ್ದ ನಂದಿ ವಿಗ್ರಹವನ್ನು ಇತ್ತೀಚೆಗೆ ಪಾಲಿಶ್ ಮಾಡಿ ಹೊಸ ರೂಪ ಕೊಡಲಾಗಿತ್ತು. ಈ ವೇಳೆ ಬಿರುಕು ಬಿಟ್ಟಿರುವುದು ಪತ್ತೆಯಾಗಿತ್ತು.