ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ (Nandi Hills) ಪ್ರವಾಸಿಗರು ದಂಡು ಹರಿದು ಬಂದಿದ್ದು, ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೇ ಪ್ರವಾಸಿಗರು ಪರದಾಡಿದ್ದಾರೆ.
ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ನಂದಿಗಿರಿಧಾಮಕ್ಕೆ ವೀಕೆಂಡ್ ಹಿನ್ನೆಲೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು (Tourists) ಆಗಮಿಸಿದ್ದರು. ಈ ಹಿನ್ನೆಲೆ ವಾಹನ ದಟ್ಟನೆಯಿಂದಾಗಿ ಗಿರಿಧಾಮ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ಪ್ರವಾಸಿಗರು ಪರದಾಡುವಂತಾಗಿತ್ತು. ಇದನ್ನೂ ಓದಿ: PUBLiC TV Impact – ಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ
ಅಲ್ಲದೇ ಪ್ರವೇಶ ಟಿಕೆಟ್ ವಿತರಿಸುವಲ್ಲಿ ಅವ್ಯವಸ್ಥೆ ಉಂಟಾಗಿ, ಟಿಕೆಟ್ ಪಡೆಯಲು ಪ್ರವಾಸಿಗರು ಮುಗಿಬಿದ್ದರು. ಸಾವಿರಾರು ಜನ ಪ್ರವಾಸಿಗರಿಗೆ 2 ಕೌಂಟರ್‌ನಲ್ಲಿ ಮಾತ್ರ ಟಿಕೆಟ್ ವಿತರಿಸಲಾಗಿತ್ತು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಈ ಅವ್ಯವಸ್ಥೆಯ ವಿರುದ್ಧ ಪ್ರವಾಸಿಗರು ಆಕ್ರೋಶ ಹಾಕಿದ್ದಾರೆ.
ಸುರಿಯುವ ಮಳೆಯನ್ನೂ ಲೆಕ್ಕಿಸದೇ ಟಿಕೆಟ್‌ಗಾಗಿ ಮಹಿಳೆಯರು, ಮಕ್ಕಳು, ಯುವಕ-ಯುವತಿಯರೆನ್ನದೇ ಪ್ರವಾಸಿಗರು ಸಾಲುಗಟ್ಟಿ ನಿಂತಿದ್ದರು.
ಚಿಕ್ಕಬಳ್ಳಾಪುರ: ಸ್ನೇಹಿತರ ದಿನದ ಹಿನ್ನೆಲೆ ಬೈಕಿನಲ್ಲಿ ನಂದಿಬೆಟ್ಟಕ್ಕೆ ತೆರಳಿದ್ದ ಇಬ್ಬರು ಫ್ರೆಂಡ್ಸ್ ಅಪಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲ್ಲೂಕಿನ ನಂದಿಬೆಟ್ಟದ ರಸ್ತೆಯ 15ನೇ ತಿರುವಿನ ಬಳಿ ಸಂಭವಿಸಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಕಣಿತಹಳ್ಳಿ ಗ್ರಾಮದ ಅರವಿಂದ್ (21) ಹಾಗೂ ಶ್ರೀಕಾಂತ್ (21) ಮೃತರು. ಇಬ್ಬರು ಸ್ನೇಹಿತರಾಗಿದ್ದು Friendship Day ಅಂಗವಾಗಿ ಪ್ಲ್ಯಾನ್ ಮಾಡಿಕೊಂಡು ಒಂದೇ ಬೈಕಿನಲ್ಲಿ ಬೆಟ್ಟಕ್ಕೆ ಹೋಗಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರಿಯ ವಿವಿ ಆವರಣದಲ್ಲಿ ಗೋರಿ – ರಾತ್ರೋರಾತ್ರಿ ಕಾಂಪೌಂಡ್ ನಿರ್ಮಾಣ
ರಸ್ತೆ ಬದಿಯ ದೊಡ್ಡ ಬಂಡೆಗಲ್ಲಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗಳಿಗೆ ಗಂಭೀರ ಗಾಯಗಾಳಾಗಿ ಇಬ್ಬರೂ ಮೃತಪಟ್ಟಿದ್ದಾರೆ. ಮೃತದೇಹಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕೊಪ್ಪಳ| ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಕೊಲೆ
– 3,400 ಕೋಟಿ ಮೊತ್ತದ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ
ಚಿಕ್ಕಬಳ್ಳಾಪುರ: ನಂದಿಬೆಟ್ಟದಲ್ಲಿಂದು (Nandi Hills) ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಅಂತ ಮರು ನಾಮಕರಣ ಮಾಡಲಾಗಿದೆ. ಇದರೊಂದಿಗೆ ಜೊತೆಗೆ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ (Bengaluru University) ಡಾ. ಮನಮೋಹನ್ ಸಿಂಗ್ ಹೆಸರಿಡಲಾಗಿದೆ.
ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ.
ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ.
ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ… pic.twitter.com/YLiS67h69a
3,400 ಕೋಟಿ ರೂ. ಮೊತ್ತದ ಆಡಳಿತಾತ್ಮಕ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ (Chikkaballapura), ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ಕುಡಿಯುವ ನೀರು ಯೋಜನೆಗೆ 23,251 ಕೋಟಿ ವೆಚ್ಚಕ್ಕೆ ಸರ್ಕಾರ ಮುಂದಾಗಿದೆ. ಇದುವರೆಗೆ 17,147 ಕೋಟಿ ವೆಚ್ಚವಾಗಿದ್ದು, ಹೆಚ್ಚುವರಿಯಾಗಿ 6,103 ಕೋಟಿ ಖರ್ಚಿಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಬೆಂಗಳೂರು ಗ್ರಾಮಾಂತರ ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆ
ಪ್ರಮುಖ ನಿರ್ಣಯಗಳೇನು?
* ಆರೋಗ್ಯ ಇಲಾಖೆ ವತಿಯಿಂದ 46 ಕೋಟಿ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ಹಾಗೂ 21.40 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯೆಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್‌ಐ ಯಂತ್ರಗಳನ್ನು ಖರೀದಿಸಲು ಅನುಮತಿ.
* 56 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಹೆಚ್‌ಸಿ ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನ.
* ಕೋಲಾರದ ಬಾಲಕ ಹಾಗೂ ಬಾಲಕಿಯರ ಕಾಲೇಜಿನ ಅವಶ್ಯಕ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಕ್ರಮವಾಗಿ 40 ಕೋಟಿ ಮತ್ತು 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ನಿರ್ಧಾರ.
* ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 2ನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 123 ಕೋಟಿ ರೂ. ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ.
* ನಬಾರ್ಡ್ ಸಾಲದ ನೆರವಿನೊಂದಿಗೆ 10 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಬೆಂಗಳೂರು (IFAB) ನಿಯಮಿತ ಸಂಸ್ಥೆಯನ್ನು ಬಲಪಡಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
* ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಭಕ್ತರಹಳ್ಳಿ ಅರಸೀಕೆರೆಯ ಕೆಳಭಾಗದಲ್ಲಿ ಹೊಸ ಕೆರೆ ನಿರ್ಮಾಣ ಕಾಮಗಾರಿಯನ್ನು 36 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
* ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಸಿಕೆರೆ ಗ್ರಾಮದ ಸಮೀಪ ವೇದಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿಯನ್ನು 34 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
* ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭದ್ರಾ ನದಿಯ ಎಡ ಮತ್ತು ಬಲ ದಂಡೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳನ್ನು ರಕ್ಷಿಸಲು ತಡೆಗೋಡೆ ನಿರ್ಮಾಣಕ್ಕೆ 50 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
* ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮತ್ತು ದೊಣಬಘಟ್ಟ, ಕಾಗೆಕೊಡಮಗ್ಗೆ, ಹೊಳೆಹೊನ್ನೂರು – ಭದ್ರಾವತಿ ಮುಖ್ಯ ರಸ್ತೆಯ ನಡುವೆ ಸಂಪರ್ಕ ರಸ್ತೆ ಸುಧಾರಣೆ ಕಾಮಗಾರಿಯನ್ನು 35 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
* ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಡಗೊಪ್ಪ ಗ್ರಾಮದ ಹತ್ತಿರ ದಂಡಾವತಿ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಿಸಿ ಸುಮಾರು 15 ಕೆರೆಗಳನ್ನು ತುಂಬಿಸುಔ 38 ಕೋಟಿ ರೂ. ವೆಚ್ಚದ ಯೋಜನೆಗೆ ಅಡಳಿತಾತ್ಮಕ ಅನುಮೋದನೆ.
* ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದಂಡಾವತಿ ಮತ್ತು ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್‌ಗಳನ್ನು ನಿರ್ಮಿಸುವ 54.70 ಕೋಟಿ ರೂ. ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
* ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ತುಂಗಾಭದ್ರಾ ನದಿಯಿಂದ ನೀರೆತ್ತಿ ಚನ್ನಗಿರಿ ತಾಲೂಕಿನ 41 ಕೆರೆಗಳನ್ನು ತುಂಬಿಸುವ 365 ಕೋಟಿ ರೂ. ವೆಚ್ಚದ ಯೋಜನೆಯಡಿ ಮೊದಲ ಹಂತದಲ್ಲಿ 100 ಕೋಟಿ ಮೊತ್ತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ ಸೇರಿದಂತೆ ಹಲವು ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಯಿತು.
ಚಿಕ್ಕಬಳ್ಳಾಪುರ/ಬೆಂಗಳೂರು: ರಾಮನಗರ (Ramangara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ (Bengaluru North District) ಎಂಬುದಾಗಿ ಮರು ನಾಮಕರಣ ಮಾಡಿದೆ.
ಇಂದು ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ (Nandi Hills) ನಡೆದ ಕ್ಯಾಬಿನೆಟ್ ಸಭೆ (Cabinet Meeting) ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (Bagepalli) ಹೆಸರನ್ನು ಭಾಗ್ಯನಗರ (Bhagya Nagara) ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ. ಇದನ್ನೂಓದಿ: ನೆಹರೂ ಕೈಯಿಂದ್ಲೇ RSS ಬ್ಯಾನ್ ಮಾಡೋಕೆ ಆಗ್ಲಿಲ್ಲ, ಪ್ರಿಯಾಂಕ್ ಖರ್ಗೆಯಿಂದ ಸಾಧ್ಯನಾ?: ಯತ್ನಾಳ್
ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಭಾಗವನ್ನು ರಿಯಲ್ ಎಸ್ಟೇಟ್ ಭಾಷೆಯಲ್ಲಿ ʼಬೆಂಗಳೂರು ಉತ್ತರʼ ಎಂದೇ ಕರೆಯಲಾಗುತ್ತದೆ.
1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ರಚಿಸಲಾಗಿತ್ತು. ಈ ವೇಳೆ ರಾಮನಗರ ಜಿಲ್ಲೆಯ ತಾತಾಲೂಕುಗಳು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟಿದ್ದವು. 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ರಾಮನಗರ ಜಿಲ್ಲೆ ರಚಿಸಲಾಗಿತ್ತು. ಇದನ್ನೂಓದಿ: ಬೇಕಾಬಿಟ್ಟಿ ಜನಗಣತಿ –ಪೌರ ಕಾರ್ಮಿಕರಿಂದ ಮನೆಗೆ ಸ್ಟಿಕ್ಕರ್!
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಹೆಸರನ್ನು ‘ಭಾಗ್ಯನಗರ’ ಎಂದು ಬದಲಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದರು.
ಚಿಕ್ಕಬಳ್ಳಾಪುರ (Chikkaballpura) ಜಿಲ್ಲೆಯಲ್ಲಿರುವ ಬಾಗೇಪಲ್ಲಿಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದೆ. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ. ಹೀಗಾಗಿ ಈ ಹೆಸರನ್ನು ಬದಲಿಸಬೇಕು ಎಂದು 2020ರಲ್ಲಿ ತಾಲೂಕಿನಲ್ಲಿ ಅಭಿಯಾನವೇ ಆರಂಭವಾಗಿತ್ತು.
ಬೆಂಗಳೂರು: ರಾಜ್ಯ ಸರ್ಕಾರದ 14ನೇ ಸಚಿವ ಸಂಪುಟ ಸಭೆ (Cabinet Meeting) ಇಂದು ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ನಡೆಯಲಿದೆ. ನಂದಿಬೆಟ್ಟದಲ್ಲಿ (Nandi Hills) ಸಚಿವ ಸಂಪುಟ ಸಭೆಗಾಗಿ ಅಂತಿಮ ಹಂತದ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂಸಿ ಸುಧಾಕರ್ ಅಧಿಕಾರಿಗಳೊಂದಿಗೆ ಮಂಗಳವಾರ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನಂದಿಗಿರಿಧಾಮ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೇರಿದಂತೆ ಸಂಪುಟ ಸಹೋದ್ಯೋಗಿಗಳು ಬೆಳಗ್ಗೆ 11:40ಕ್ಕೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗ್ರಾಮಕ್ಕೆ ಆಗಮಿಸಿಲಿದ್ದಾರೆ. ಗ್ರಾಮದ ಶ್ರೀ ಭೋಗನಂದೀಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದು, ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪ, ಪುಷ್ಕರಿಣಿಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಫೋಟೋಶೂಟ್‌ನಲ್ಲಿ ಭಾಗಿಯಾಗಲಿದ್ದಾರೆ. ನಂತರ 11:50ಕ್ಕೆ ನಂದಿಬೆಟ್ಟಕ್ಕೆ ಬಸ್‌ನಲ್ಲಿ ಪ್ರಯಾಣ ಮಾಡಲಿದ್ದಾರೆ. ಇದನ್ನೂ ಓದಿ: ಚಾಮುಂಡಿ ತಾಯಿಗೆ ಶಿವಣ್ಣ ದಂಪತಿ ಪೂಜೆ
ಇನ್ನೂ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆ ನಂದಿ ಗಿರಿಧಾಮದಲ್ಲಿರುವ ಕೆಎಸ್‌ಟಿಡಿಸಿ ಹೋಟೆಲ್‌ನ ಮಯೂರ ಸಭಾಂಗಣಕ್ಕೆ ಹೊಸ ಲುಕ್ ನೀಡಲಾಗಿದೆ. ಸಭಾಂಗಣವನ್ನು ನವೀಕರಿಸಿ ಸುಣ್ಣಬಣ್ಣ ಬಳಿದು ಹೊಸ ಹೊಸ ಚೇರ್ ಟೇಬಲ್‌ಗಳನ್ನು ಅಳವಡಿಸಲಾಗಿದೆ. ಲಕ್ಷಾಂತರ ರೂ. ಖರ್ಚು ಮಾಡಿ ಸಾಮಾನ್ಯ ಹಾಲನ್ನು ಹವಾನಿಯಂತ್ರಿತ ಸಭಾಂಗಣವನ್ನಾಗಿ ಪರಿವರ್ತಿಸಲಾಗಿದೆ. ಸಚಿವರ ವಾಸ್ತವ್ಯ ಹಾಗೂ ವಿಶ್ರಾಂತಿಗೆ ರೂಂಗಳನ್ನು 7 ಸ್ಟಾರ್ ರೂಂಗಳಾಗಿ ಆಧುನೀಕರಣಗೊಳಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಭೋಗನಂದೀಶ್ವರ ದೇವಸ್ಥಾನ, ನಂದಿಗಿರಿಧಾಮದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ. ಇದನ್ನೂ ಓದಿ: ರೈಲ್ವೆ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಆಗ್ರಹ
ಇನ್ನು ನಂದಿಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಭರಪೂರ ಕೊಡುಗೆ ಘೋಷಣೆ ಮಾಡುವ ನೀರೀಕ್ಷೆಯಿದ್ದು, ಜನಪ್ರತಿನಿಧಿಗಳು, ಜನರ ಚಿತ್ತ ಸಂಪುಟ ಸಭೆಯತ್ತ ನೆಟ್ಟಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಮಾಸ್ ಲೀಡರ್ – ಬಿಆರ್ ಪಾಟೀಲ್ ಸ್ಪಷ್ಟನೆ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ (Nandi Hills) ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆ (Cabinet Meeting) ಕೊನೆ ಕ್ಷಣದಲ್ಲಿ ರದ್ದಾಗಿದೆ.
ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್ ಸಭೆಯನ್ನು ವಿಧಾನಸೌಧದ ಸಭಾಂಗಣದಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಸಿಎಂ ಸೂಚನೆಯ ಮೇರೆಗೆ ಕೊನೆಕ್ಷಣದಲ್ಲಿ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ವಿಶೇಷ ಸಚಿವ ಸಂಪುಟ ಸಭೆಯನ್ನ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್
ವಿಶೇಷ ಸಚಿವ ಸಂಪುಟ ಸಭೆಗಾಗಿ ಕಳೆದ ಒಂದು ವಾರದಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಶ್ರಮವಹಿಸಿ ಸಾಕಷ್ಟು ಕೆಲಸ ಕಾರ್ಯಗಳನ್ನು ಕೈಗೊಂಡಿದ್ದರು.
ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.ಇದನ್ನೂ ಓದಿ: Israel-Iran Conflict – ರಾಜ್ಯದ 9 ವಿದ್ಯಾರ್ಥಿಗಳನ್ನು ಕರೆತರಲು ವಿದೇಶಾಂಗ ಸಚಿವರಿಗೆ ಪತ್ರ
ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.
ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂದು ಮಾಜಿ ಸಿಎಂ ವಿಜಯ್ ರೂಪಾನಿ ಅಂತ್ಯಕ್ರಿಯೆ
ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ (PN Ravindra) ಆದೇಶ ಹೊರಡಿಸಿದ್ದು, ಜೂ.16ರ ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳನ್ನ ಮುಂಗಡ ಕಾಯ್ದಿರಿಸುವಿಕೆಗೂ ನಿಷೇಧ ವಿಧಿಸಿದ್ದಾರೆ.
ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ. ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಮಣಿಪುರದ 3 ಜಿಲ್ಲೆಗಳಲ್ಲಿ ಬೆ.5 ರಿಂದ ಸ.5ರವರೆಗೆ ನಿಷೇಧಾಜ್ಞೆ ಸಡಿಲಿಕೆ
ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ನಂದಿಗಿರಿಧಾಮದ ರಸ್ತೆ (Nandi Hills Road) ನವೀಕರಣ ಕಾಮಗಾರಿ ಹಿನ್ನಲೆಯಲ್ಲಿ 1 ತಿಂಗಳು ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಮಾಡಿದ್ದಾರೆ.
ಉಳಿದಂತೆ ವಾರದ ಐದೂ ದಿನಗಳು ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಮಾರ್ಚ್ 24 ರಿಂದ ಏಪ್ರಿಲ್ 25ರ ವರೆಗೂ 1 ತಿಂಗಳು 4 ವಾರಗಳ ಕಾಲ ನಿರ್ಬಂಧ ಇರಲಿದೆ. ನಂದಿಬೆಟ್ಟದ ತಪ್ಪಲಿನಿಂದ ಬೆಟ್ಟದವರೆಗೂ 7.70 ಕಿಲೋಮೀಟರ್ ದೂರದ ರಸ್ತೆ ಕಾಮಗಾರಿ ನಡೆಯಲಿದೆ.
ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು.. ಪ್ರಕೃತಿ ಮಡಿಲಲ್ಲಿ ಕುಡಿದು ಕುಣಿದು ಕುಪ್ಪಳಿಸಿ ಹೊಸ ವರ್ಷ 2025ನ್ನು (New Year 2025) ಸ್ವಾಗತಿಸೋಣ ಅಂತ, ಕೆಲ ಪಾರ್ಟಿ ಪ್ರಿಯರು ಅಂದುಕೊಂಡಿದ್ರೆ… ಈಗಲೇ ನಿಮ್ಮ ಪ್ಲ್ಯಾನ್ ಬದಲಾಯಿಸಿಕೊಳ್ಳಿ, ಯಾಕಂದ್ರೆ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲಾಡಳಿತ ಸಂಪೂರ್ಣ ನಿಷೇಧ ಏರಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ (Nandi Hills) ಅಂದ್ರೆ ತಂಪಾದ ಹವಾಗುಣ, ತುಂತುರು ಮಳೆ, ಗಿಡ, ಮರ, ಬಳ್ಳಿಗಳ ಸೊಬಗು, ನಕ್ಕು ನಲಿಯುವ ತರಹೆವಾರು ಹೂಗಳ ವಯ್ಯಾರ. ಮಿಗಿಲಾಗಿ ಸಮುದ್ರಮಟ್ಟದಿಂದ 1,478 ಮೀಟರ್ ಎತ್ತರದಲ್ಲಿ ನಿಂತು ಸೂರ್ಯೋದಯ ಹಾಗೂ ಸೂರ್ಯಾಸ್ತ ವಿಹಂಗಮ ನೋಟ ನೋಡುವುದಕ್ಕೆ ತುಂಬಾ ಫೇಮಸ್. ಇನ್ನೂ ನಂದಿಗಿರಿಧಾಮದಲ್ಲಿ ಕಾಣಸಿಗುವ ಬೆಳ್ಳಿ ಮೋಡ, ಇಬ್ಬನಿ, ಸುತ್ತಲೂ ಎತ್ತ ನೋಡಿದರೂ ಮುತ್ತಿಕ್ಕುವ ಮಂಜು, ಇಂಥ ಪ್ರಕೃತಿ ಸೊಬಗಿನಲ್ಲಿ ಕುಳಿತು ಹೊಸ ವರ್ಷ 2025ನ್ನು ಸ್ವಾಗತೀಸೋಣ ಅಂತ ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ರು. ಆದ್ರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಪಾರ್ಟಿ ಪ್ರಿಯರ ಕನಸಿಗೆ ತಣ್ಣೀರು ಎರಚಿದೆ. ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿದೆ.
ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2025 ಜನವರಿ 1 ರಂದು ಬೆಳಿಗ್ಗೆ 6 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶವನ್ನೂ ಬಂದ್ ಮಾಡಲಾಗಿದೆ. ಇದ್ರಿಂದ ಪ್ರವಾಸೋದ್ಯಮ ಇಲಾಖೆಗೂ ನಿರ್ಬಂಧದ ಬಿಸಿ ಮುಟ್ಟಿದೆ. ಇದನ್ನೂ ಓದಿ: ಕಬ್ಬನ್ ಪಾರ್ಕ್ – ಯಾವುದೇ ಗುಂಪು ಚಟುವಟಿಕೆಗೆ ಅನುಮತಿ ಕಡ್ಡಾಯ