Tag: nandini ghee

  • ನಂದಿನಿಯೇ ಬೇಕು ಬೇರೆ ಬೇಡ – ಟಿಟಿಡಿಯಿಂದ ಬರೋಬ್ಬರಿ 10 ಲಕ್ಷ ಕೆಜಿ ತುಪ್ಪಕ್ಕೆ ಬೇಡಿಕೆ

    ನಂದಿನಿಯೇ ಬೇಕು ಬೇರೆ ಬೇಡ – ಟಿಟಿಡಿಯಿಂದ ಬರೋಬ್ಬರಿ 10 ಲಕ್ಷ ಕೆಜಿ ತುಪ್ಪಕ್ಕೆ ಬೇಡಿಕೆ

    ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಂನಿಂದ(TTD) ನಂದಿನಿ ತುಪ್ಪಕ್ಕೆ (Nandini Ghee) ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ.  ಈಗ ಬರೋಬ್ಬರಿ 10 ಲಕ್ಷ ಕೆ.ಜಿ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಟ್ಟಿದೆ.

    ನಂದಿನಿ ತುಪ್ಪ ಹೊರತುಪಡಿಸಿ ಬೇರೆ ಯಾವುದೇ ತುಪ್ಪ ಬೇಡ ಎಂದು ಟಿಟಿಡಿ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕರ್ನಾಟಕ ಹಾಲು ಮಹಾಮಂಡಳ (KMF) ತಿರುಪತಿಗೆ ಅಗತ್ಯ ತುಪ್ಪವನ್ನು ಕಳುಹಿಸಿಕೊಟ್ಟಿದೆ.

    ಸೋಮವಾರ ಒಂದೇ ದಿನ ತಿರುಪತಿಗೆ (Tirupati) 2.50 ಲಕ್ಷ ಕೆಜಿ ತುಪ್ಪವನ್ನು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ(ಕಹಾಮ) ಬಿಗಿ ಭದ್ರತೆಯೊಂದಿಗೆ ಕಳುಹಿಸಿಕೊಟ್ಟಿದೆ. ಇದನ್ನೂ ಓದಿ: ದೇಶ ತೊರೆಯಿರಿ ಇಲ್ವೋ ಇಂದು ಸಾಯಲು ಸಿದ್ಧವಾಗಿರಿ – ಕರೆ ಮಾಡಿ ಇರಾನ್‌ ಕಮಾಂಡರ್‌ಗಳಿಗೆ ಮೊಸಾದ್‌ ಎಚ್ಚರಿಕೆ

    ಮೊದಲ ಭಾಗವಾಗಿ ಮಂಡ್ಯದ ಹಾಲು ಒಕ್ಕೂಟದಿಂದ ತುಪ್ಪ ಪೊರೈಕೆ ಮಾಡಿದ್ದು ಇನ್ನುಳಿದ ತುಪ್ಪವನ್ನು ಇತರೇ ಮಹಾ ಮಂಡಳಿಯಿಂದ ಕೆಎಂಎಫ್‌ ಕಳುಹಿಸಿ ಕೊಡಲಿದೆ. ತಿರುಪತಿ ಅಗತ್ಯಕ್ಕೆ ತಕ್ಕಂತೆ ನಂದಿನಿ ತುಪ್ಪ ಪೂರೈಕೆ ಮಾಡುವುದಾಗಿ ಕೆಎಂಎಫ್‌ ತಿಳಿಸಿದೆ.

    ತಿರುಪತಿಯ ಲಡ್ಡುಗೆ ಮೊದಲು ಕೆಎಂಎಫ್‌ನಿಂದಲೇ ತುಪ್ಪ ಸರಬರಾಜು ಆಗುತ್ತಿತ್ತು. ಆದರೆ ಕೆಎಂಎಫ್‌ ತುಪ್ಪದ ಬೆಲೆ ಜಾಸ್ತಿ ಆಗಿದೆ ಎಂಬ ಕಾರಣ ನೀಡಿ ಜಗನ್‌ ಸರ್ಕಾರ ಖಾಸಗಿ ಡೈರಿಯಿಂದ ತುಪ್ಪ ಖರೀದಿ ಮಾಡಿತ್ತು.

    ಆಂಧ್ರದಲ್ಲಿ ಟಿಟಿಡಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಿರುಪತಿ ಲಡ್ಡಿನಲ್ಲಿ ಬಳಸುವ ತುಪ್ಪ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ತುಪ್ಪ ಖರೀದಿ ಟೆಂಡರ್‌ನಲ್ಲಿ ಅವ್ಯವಹಾರ ನಡೆದಿದೆ. ಕಳಪೆ ಗುಣಮಟ್ಟದ ಹಾಗೂ ಕಲಬೆರಕೆಯಾದ ತುಪ್ಪವನ್ನು ಪೂರೈಕೆ ಮಾಡಲಾಗಿದೆ ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದರು.

    ಆರೋಪದ ಬಳಿಕ ಟಿಟಿಡಿ ಖಾಸಗಿ ಡೈರಿಯಿಂದ ತುಪ್ಪ ಖರೀದಿ ಮಾಡುವುದನ್ನು ನಿಲ್ಲಿಸಿ ಕೇವಲ ಕೆಎಂಎಫ್‌ನಿಂದಲೇ ತುಪ್ಪ ಖರೀದಿಗೆ ಮುಂದಾಗಿದೆ.

  • ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ ತುಪ್ಪ ರವಾನೆ – ಯುಗಾದಿಗಾಗಿ ತುರ್ತು 2 ಸಾವಿರ ಟನ್‌ಗೆ ಡಿಮ್ಯಾಂಡ್

    ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ ತುಪ್ಪ ರವಾನೆ – ಯುಗಾದಿಗಾಗಿ ತುರ್ತು 2 ಸಾವಿರ ಟನ್‌ಗೆ ಡಿಮ್ಯಾಂಡ್

    -ವಾರ್ಷಿಕವಾಗಿ 5 ಸಾವಿರ ಟನ್ ತುಪ್ಪಕ್ಕೆ ಬೇಡಿಕೆಯಿಟ್ಟಿರುವ ಟಿಟಿಡಿ

    ಅಮರಾವತಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ (Tirupati Timmappa Temple) ದಾಖಲೆಯ ಕೆಎಂಎಫ್ (KMF) ನಂದಿನಿ ತುಪ್ಪ ರವಾನೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗಿದೆ.

    ಹೌದು, ತಿರುಪತಿಯಲ್ಲಿ ಈ ಹಿಂದೆ ಬೇರೆ ಬ್ರ‍್ಯಾಂಡ್ ತುಪ್ಪ ಬಳಸಿ ಲಡ್ಡು ತಯಾರಿಸಲಾಗುತ್ತಿತ್ತು. ಆದರೆ ಇದೀಗ ಲಡ್ಡು ತಯಾರಿಕೆಗಾಗಿ ಕೆಎಂಎಫ್ ನಂದಿನಿ ತುಪ್ಪವನ್ನು ಮಾತ್ರ ಬಳಸುತ್ತಿದ್ದು, ಇದರ ಹೊರತಾಗಿ ಬೇರೆ ಯಾವುದೇ ತುಪ್ಪವನ್ನು ಬಳಸುತ್ತಿಲ್ಲ. ಸದ್ಯ ಯುಗಾದಿ ಸಮೀಪಿಸುತ್ತಿದ್ದು, ಈ ಹಿನ್ನೆಲೆ ಲಡ್ಡು ತಯಾರಿಕೆಗಾಗಿ ತುರ್ತು 2 ಸಾವಿರ ಟನ್ ತುಪ್ಪವನ್ನು ಕಳುಹಿಸಿಕೊಡುವಂತೆ ಟಿಟಿಡಿ (TTD) ಕೆಎಂಎಫ್‌ಗೆ ಸೂಚಿಸಿದ್ದು, ಈ ತಿಂಗಳಲ್ಲಿ ಸಪ್ಲೈ ಮಾಡುವಂತೆ ತಿಳಿಸಿದೆ.ಇದನ್ನೂ ಓದಿ: ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್

    ಸತತವಾಗಿ ಕೆಎಂಎಫ್ ನಂದಿನಿಗೆ ಮಾತ್ರ ಟಿಟಿಡಿ ಟೆಂಡರ್ ಕೊಡುತ್ತಿದೆ. ಈ ಮೊದಲು ತಿಮ್ಮಪ್ಪನ ಸನ್ನಿಧಾನಕ್ಕೆ ಎರಡು ದಿನಕ್ಕೆ ಒಮ್ಮೆ ತುಪ್ಪ ರವಾನೆಯಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿ ದಿನವೂ ತುಪ್ಪ ರವಾನೆಯಾಗುತ್ತಿದೆ. ಈ ವರ್ಷ 5 ಸಾವಿರ ಟನ್ ತುಪ್ಪವನ್ನು ರವಾನಿಸುವಂತೆ ಟಿಟಿಡಿ ಕೆಎಂಎಫ್‌ಗೆ ಬೇಡಿಕೆ ಇಟ್ಟಿದ್ದು, ಈಗಾಗಲೇ 600 ಟನ್ ತುಪ್ಪ ಕಳುಹಿಸಿಕೊಡಲಾಗಿದೆ.

    ಬೇಸಿಗೆ ಕಾಲವಾಗಿರುವುದರಿಂದ ಹಾಲಿನ ಸಂಗ್ರಹದಲ್ಲಿಯೂ ಕುಸಿತ ಕಂಡಿದ್ದು, ಸಂಗ್ರಹವಿರುವ ಬೆಣ್ಣೆಯಲ್ಲಿ ಶೀಘ್ರ ತುಪ್ಪ ತಯಾರಿಕೆ ಮಾಡುವಂತೆ ಕೆಎಂಎಫ್ ಯೂನಿಯನ್‌ಗಳಿಗೆ ಸೂಚನೆ ನೀಡಿದೆ.ಇದನ್ನೂ ಓದಿ: ನಟಿ ರನ್ಯಾಗೆ ಸರ್ಕಾರ ಕ್ಲೀನ್‌ಚಿಟ್‌ ಕೊಟ್ಟರೂ ಆಶ್ಚರ್ಯ ಇಲ್ಲ: ಸುರೇಶ್‌ ಬಾಬು

     

  • ತಿರುಪತಿ ಲಡ್ಡು ವಿವಾದದ ಬಳಿಕ ಹೆಚ್ಚಿದ ಬೇಡಿಕೆ – ಹಾಸನಾಂಬ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ

    ತಿರುಪತಿ ಲಡ್ಡು ವಿವಾದದ ಬಳಿಕ ಹೆಚ್ಚಿದ ಬೇಡಿಕೆ – ಹಾಸನಾಂಬ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ

    – ನಂದಿನಿ ಹಾಲು & ಉತ್ಪನ್ನಕ್ಕೂ ಡಿಮ್ಯಾಂಡ್

    ಹಾಸನ: ತಿರುಪತಿ ಲಡ್ಡು ವಿವಾದದ (Tirupati Laddu Row) ಬಳಿಕ ನಂದಿನಿ ತುಪ್ಪಕ್ಕೆ (Nandini Ghee) ಬೇಡಿಕೆ ಹೆಚ್ಚಿದೆ. ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ಪ್ರಸಾದಕ್ಕೂ ನಂದಿನಿ ತುಪ್ಪ ಬಳಕೆಗೆ ನಿರ್ಧರಿಸಲಾಗಿದೆ.

    ಹಾಸನಾಂಬೆ ದೇವಾಲಯದ (Hasanamba Temple) ಗರ್ಭಗುಡಿ ಬಾಗಿಲು ತೆರೆಯಲು ತಿಂಗಳು ಮಾತ್ರ ಬಾಕಿ ಇದೆ. ಹಾಸನಾಂಬ ಮಹೋತ್ಸವದಲ್ಲಿ ಭಕ್ತರಿಗೆ ನೀಡುವ ಲಡ್ಡು ಪ್ರಸಾದವನ್ನು ನಂದಿನಿ ತುಪ್ಪದಿಂದಲೇ ತಯಾರಿಸಲು ನಿರ್ಧರಿಸಲಾಗಿದೆ. ಇದರ ಜವಾಬ್ದಾರಿಯನ್ನು ಬೆಂಗಳೂರಿನ ಇಸ್ಕಾನ್ ಸಂಸ್ಥೆಗೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕೆಲವೇ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: Badlapur Encounter | ಆರೋಪಿ ತಲೆಗೆ ಗುಂಡಿಟ್ಟಿದ್ದು ಏಕೆ? – ಪ್ರಕರಣ ಟೈಮ್‌ಲೈನ್ ಕೊಡುವಂತೆ ʻಹೈʼಸೂಚನೆ!

     

    ರಾಜ್ಯದಲ್ಲಿ ನಂದಿನಿ ತುಪ್ಪ, ಹಾಲು ಹಾಗೂ ಹಾಲಿನ ಉತ್ಪನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ ಹಾಗೂ ವಿಜಯನಗರ ಹಾಲು ಒಕ್ಕೂಟದಲ್ಲೂ ಬೇಡಿಕೆ ಹೆಚ್ಚಿದೆ. ತಿರುಪತಿ ಲಡ್ಡು ವಿವಾದದ ನಂತರದಲ್ಲಿ ಹಾಲಿನ ಉತ್ಪನ್ನದ ಬೇಡಿಕೆ ಹೆಚ್ಚಳವಾಗಿದೆ. ಈಗಾಗಲೇ ಧಾರ್ಮಿಕ ಧತ್ತಿ ಇಲಾಖೆಯ ದೇವಸ್ಥಾನಗಳಲ್ಲೂ ನಂದಿನಿ ತುಪ್ಪ ಬಳಕೆಗೆ ಸರ್ಕಾರ ಆದೇಶಿಸಿದೆ. ಹೀಗಾಗಿ ಹೊಸದಾಗಿ ಡೀಲರ್ಸ್ಗಳು ಏಜೆನ್ಸಿಗಾಗಿ ಅರ್ಜಿ ಹಾಕುತ್ತಿದ್ದಾರೆ. ನಂದಿನಿ ಉತ್ಪನ್ನಗಳು ಮಾರಾಟಕ್ಕೆ ಸಾಲುತ್ತಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದ ಒಬ್ಬನೇ ಒಬ್ಬ ಬಿಜೆಪಿ ನಾಯಕನನ್ನು ತೋರಿಸಿದರೆ ಸನ್ಮಾನ: ಸಿಎಂ

    ಒಟ್ಟಿನಲ್ಲಿ ತಿರುಪತಿ ಲಡ್ಡು ವಿವಾದ ಬಳಿಕ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಇದೇ ವಿಶ್ವಾಸ ಉಳಿಸಿಕೊಂಡು ಮುಂದೆ ಹೋಗಬೇಕಿರುವ ಸವಾಲು ಸಹ ಕೆಎಂಎಫ್ ಮುಂದಿದೆ. ಇದನ್ನೂ ಓದಿ: ಯುಪಿ ಬಳಿಕ ಹಿಮಾಚಲದಲ್ಲೂ ಆಹಾರ ಮಳಿಗೆಗಳ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ!

  • ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ದಿನೇಶ್ ಗುಂಡೂರಾವ್ ಸೂಚನೆ

    ನಂದಿನಿ ಹೊರತುಪಡಿಸಿ ಉಳಿದ ತುಪ್ಪದ ಸ್ಯಾಂಪಲ್‌ಗಳ ಪರಿಶೀಲನೆಗೆ ದಿನೇಶ್ ಗುಂಡೂರಾವ್ ಸೂಚನೆ

    ಬೆಂಗಳೂರು: ನಂದಿನಿ ತುಪ್ಪ (Nandini Ghee) ಹೊರತುಪಡಿಸಿ, ರಾಜ್ಯದಲ್ಲಿ ಮಾರಾಟವಾಗುತ್ತಿರುವ ಉಳಿದ ತುಪ್ಪದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಅದರ ಗುಣಮಟ್ಟ ಕಾಪಾಡಲು ಪರಿಶೀಲನೆ ಮಾಡಬೇಕು. ಪ್ರಸಾದಗಳ ಸ್ಯಾಂಪಲ್ ಪರಿಶೀಲನೆ ಅಲ್ಲ, ನೇರವಾಗಿ ತುಪ್ಪದ ಪರಿಶೀಲನೆ ಮಾಡಬೇಕು ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸೂಚನೆ ನೀಡಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ರಾಜ್ಯದಲ್ಲಿ ಬಳಸುತ್ತಿರುವ ತುಪ್ಪದ ಬಗ್ಗೆ ತಪಾಸಣೆ ಮಾಡಲು ನಮ್ಮ ಆಹಾರ ಸುರಕ್ಷತಾ ಆಯುಕ್ತರಿಗೆ ಹೇಳಿದ್ದೇನೆ. ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ (Tirupati) ಆದ ರೀತಿ ಕೊಬ್ಬಿನ ಅಂಶಗಳು ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಇದೆಯಾ ಎಂದು ನೋಡುತ್ತಿದ್ದೇವೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಇಲ್ಲಿಗೆ ತುಪ್ಪ ಬರುತ್ತದೆ. ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ; ಸರ್ಕಾರದ ಸ್ವಾಧೀನದಿಂದ ದೇಗುಲ ಮುಕ್ತಗೊಳಿಸಿ – ಪೇಜಾವರ ಶ್ರೀ

    ಪ್ರಸಾದದ ಪರಿಶೀಲನೆ ನಾವು ಮಾಡುತ್ತಿಲ್ಲ. ಬೇರೆ ಪದಾರ್ಥಗಳಲ್ಲಿ ಕಲಬೆರಕೆ ಆಗುವ ಸಾಧ್ಯತೆ ಕಡಿಮೆ. ಆದರೆ ಆಂಧ್ರ ಮುಖ್ಯಮಂತ್ರಿ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇತ್ತೆಂದು ಹೇಳಿರುವುದು ಆತಂಕಕಾರಿಯಾದ ವಿಚಾರ. ಒಬ್ಬ ಸಿಎಂ ಹೇಳಿದ ಮೇಲೆ ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕು. ದೇವರ ಬಗ್ಗೆ ಶ್ರದ್ಧೆ ಇರೋರಿಗೆ ಈ ವಿಚಾರ ಬಹಳ ಆಘಾತಕಾರಿಯಾಗಿದೆ. ಹೀಗಾಗಿ ರಾಜ್ಯದಲ್ಲಿ ಪರಿಶೀಲನೆ ಮಾಡಿ ಎಂದು ಹೇಳಿದ್ದೇವೆ ಎಂದರು. ಇದನ್ನೂ ಓದಿ: ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ – ಸುರಕ್ಷತೆಗೆ ಜಿಪಿಎಸ್ ಅಳವಡಿಸಲು ಮುಂದಾದ KMF

    ವರದಿಯಲ್ಲಿ ಏನು ಬರುತ್ತೆ ಎಂದು ತಿಳಿದುಕೊಳ್ಳೋಣ. ಯಾಕೆಂದರೆ ಜನರಿಗೆ ಈ ವಿಚಾರದಲ್ಲಿ ಬಹಳ ಗೊಂದಲ ಶುರುವಾಗಿದೆ. ತಿರುಪತಿ ಲಡ್ಡು ವಿಚಾರದಲ್ಲಿ ಈ ರೀತಿ ಇದೆ ಎಂದು ಆದಾಗ ಯಾರನ್ನ ನಂಬಬೇಕು ಅನ್ನುವ ಪ್ರಶ್ನೆ ಎದುರಾಗಿದೆ. ನಾಳೆ ಪ್ರಸಾದವನ್ನು ಸ್ವೀಕರಿಸದೆ ಇರುವಂತ ಪರಿಸ್ಥಿತಿ ಹೋಗಬಹುದು. ಹಾಗಾಗಿ ನಮ್ಮ ಕಡೆಯಿಂದ ಪರಿಶೀಲನೆ ಮಾಡಿಸುತ್ತಿದ್ದೇವೆ. ಮೊದಲು ವರದಿ ಬರಲಿ ಬಳಿಕ ಮುಂದಿನ ಕ್ರಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್‌ ವಿಷಾದ

  • ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ – ಸುರಕ್ಷತೆಗೆ ಜಿಪಿಎಸ್ ಅಳವಡಿಸಲು ಮುಂದಾದ KMF

    ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ – ಸುರಕ್ಷತೆಗೆ ಜಿಪಿಎಸ್ ಅಳವಡಿಸಲು ಮುಂದಾದ KMF

    ಬೆಂಗಳೂರು: ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ವಿವಾದದ (Tirupati Laddu Controversy) ಬೆನ್ನಲ್ಲೇ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ಟಿಟಿಡಿ (TTD) ಬೇರೆ ಭಾಗಗಳಿಂದ ತರಿಸುತ್ತಿದ್ದ ತುಪ್ಪವನ್ನು ನಿಲ್ಲಿಸಿ, ಪ್ರತಿ ನಿತ್ಯ ನಂದಿನಿ ತುಪ್ಪವನ್ನೇ ತರಿಸಿಕೊಳ್ಳಲು ಮುಂದಾಗಿದೆ. ನಿತ್ಯ ಒಂದೊಂದು ಟ್ಯಾಂಕರ್‌ ಆಮದು ಮಾಡಿಕೊಳ್ಳಲು ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಮುಂದಾಗಿದೆ.

    ಈ ಹಿಂದೆ ವಾರಕ್ಕೆ ಮೂರು ಟ್ಯಾಂಕರ್‌ಗಳನ್ನ ಆಮದು ಮಾಡಿಕೊಳ್ಳಲಾಗುತ್ತಿತ್ತು. ಒಟ್ಟಾರೆ 3 ತಿಂಗಳಿಗೆ 350 ಟನ್‌ ತುಪ್ಪ ನೀಡುವಂತೆ ಕೆಎಂಎಫ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಹಿಂದೆ ಟಿಟಿಡಿ ಮಾಡಿಕೊಂಡ ಒಪ್ಪಂದ ಇನ್ನೂ ಒಂದೂವರೆ ತಿಂಗಳಲ್ಲಿ ಮುಕ್ತಾಯವಾಗಲಿದೆ. ಹಾಗಾಗಿ ಪ್ರತಿನಿತ್ಯ ಒಂದೊಂದು ಟ್ಯಾಂಕರ್‌ ತುಪ್ಪ ತರಿಸಿಕೊಳ್ಳಲು 6 ತಿಂಗಳ ಒಪ್ಪಂದ ಮಾಡಿಕೊಳ್ಳುವ ಚಿಂತನೆ ನಡೆದಿದೆ ಎಂದು ಕೆಎಂಎಫ್ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸ್ಪಿನ್‌ ಮಾಂತ್ರಿಕ ಅಶ್ವಿನ್‌ ಆಲ್‌ರೌಂಡ್‌ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ

    ತಿರುಪತಿ ಲಡ್ಡು ವಿವಾದ ಬಳಿಕ ಕೆಎಂಎಫ್ ಅಲರ್ಟ್:
    ತಿರುಪತಿ ಲಡ್ಡು ವಿವಾದದ ಬಳಿಕ ಕೆಎಂಎಫ್‌ ನಂದಿನಿ ತುಪ್ಪದ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತಷ್ಟು ಎಚ್ಚರ ವಹಿಸಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ಮಾರ್ಗ ಮಧ್ಯೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಎಲ್ಲಾ ವಾಹನಗಳಿಗೆ ಜಿಪಿಎಸ್ (GPS) ಅಳವಡಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:  ತಿರುಪತಿ ಲಡ್ಡಿಗೆ ದನದ ಕೊಬ್ಬು ಬೆರಸುವುದು ಘೋರ ಅಪರಾಧ – ಎಂ.ಬಿ ಪಾಟೀಲ್‌ ವಿಷಾದ

    ಕೆಎಂಎಫ್ ವಾಹನಗಳಿಗೆ ಅಳವಡಿಸುವ ಜಿಪಿಎಸ್ ವಿಶೇಷತೆ?
    * ಟಿಟಿಡಿಗೆ ಕೆಎಂಎಫ್‌ನಿಂದ ಸರಕು ಸಾಗಿಸುವ ಎಲ್ಲಾ ವಾಹನಗಳಿಗೆ ಜಿಪಿಎಸ್ ಅಳವಡಿಕೆ.
    * ತುಪ್ಪ ಇರುವ ಟ್ಯಾಂಕರ್‌ಗೆ ಜಿಪಿಎಸ್ ಸ್ಕ್ಯಾನರ್ ಲಾಕ್ ಅಳವಡಿಕೆ.
    * ಇಲ್ಲಿ ಟ್ಯಾಂಕರ್ ಒಮ್ಮೆ ಲಾಕ್ ಆದ್ರೆ ಟಿಟಿಡಿಯಲ್ಲಿಯೇ ಓಪನ್ ಮಾಡಲು ಅವಕಾಶ.
    * ಟಿಟಿಡಿಯಲ್ಲಿ ಓಪನ್ ಮಾಡಬೇಕು ಅಂದ್ರೆ ಪಾಸ್ ವರ್ಡ್ ಕಡ್ಡಾಯ.
    * ಟ್ಯಾಂಕರ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ತಕ್ಷಣ ಕೆಎಂಎಫ್ ಅಧಿಕಾರಿಗಳಿಗೆ ಒಟಿಪಿ ರವಾನೆ.
    * ಒಟಿಪಿ ನಂಬರ್ ಹೇಳಿದ್ರೆ ಮಾತ್ರ ಓಪನ್ ಆಗಲಿರುವ ತುಪ್ಪದ ಟ್ಯಾಂಕರ್.

  • ಗುಣಮಟ್ಟದಲ್ಲಿ ರಾಜಿಯಾಗೋ ಪ್ರಶ್ನೆಯೇ ಇಲ್ಲ, ದೇಶದ ಯಾವ ಲ್ಯಾಬ್‌ನಲ್ಲಾದ್ರೂ ನಂದಿನಿ ಪ್ರೊಡಕ್ಟ್ ಪರೀಕ್ಷೆ ಮಾಡಲಿ: KMF ಎಂಡಿ

    ಗುಣಮಟ್ಟದಲ್ಲಿ ರಾಜಿಯಾಗೋ ಪ್ರಶ್ನೆಯೇ ಇಲ್ಲ, ದೇಶದ ಯಾವ ಲ್ಯಾಬ್‌ನಲ್ಲಾದ್ರೂ ನಂದಿನಿ ಪ್ರೊಡಕ್ಟ್ ಪರೀಕ್ಷೆ ಮಾಡಲಿ: KMF ಎಂಡಿ

    – ನಂದಿನಿ ತುಪ್ಪದ ದರದಲ್ಲಿ ಬದಲಾವಣೆ ಯೋಚನೆ ಇಲ್ಲ

    ಬೆಂಗಳೂರು: ನಾವು ಗುಣಮಟ್ಟದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ದೇಶದ ಯಾವ ಲ್ಯಾಬ್‌ನಲ್ಲಾದರೂ ಪರೀಕ್ಷೆ ಮಾಡಲಿ ಎಂದು ಕೆಎಂಎಫ್ (KMF) ಎಂಡಿ ಜಗದೀಶ್ ಹೇಳಿದ್ದಾರೆ.

    ತಿರುಮಲ ತಿರುಪತಿ ದೇವಾಲಯ ಲಡ್ಡು ವಿವಾದದ (Tirupati Laddu Row) ಕುರಿತು ‘ಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ ಅವರು, ರೈತರಿಂದ ನೇರವಾಗಿ ಹಾಲು ಖರೀದಿಸಿ, ರೈತರ ಪರವಾಗಿ ಕೆಲಸ ಮಾಡುವ ಸಂಸ್ಥೆ ನಮ್ಮದು. ಇಡೀ ದೇಶದಲ್ಲೇ ಅತ್ಯುತ್ತಮ ಲ್ಯಾಬ್ ವ್ಯವಸ್ಥೆ ಇರೋದು ನಮ್ಮಲ್ಲಿಯೇ. ಎನ್‌ಎಬಿಎಲ್‌ನಿಂದ ಮಾನ್ಯತೆ ಪಡೆದಿರೋ ಏಕೈಕ ಲ್ಯಾಬ್ ನಮ್ಮ ಕೆಎಂಎಫ್ ಸಂಸ್ಥೆಯಲ್ಲಿದೆ. ನಮ್ಮ ಲ್ಯಾಬ್‌ನಲ್ಲೇ ಟೆಸ್ಟ್ ಮಾಡುವ ಸೌಲಭ್ಯವಿದೆ ಎಂದರು. ಇದನ್ನೂ ಓದಿ: ಇಡೀ ರಾಜ್ಯಕ್ಕೆ ಬೆಳಕು ನೀಡುವ ರಾಯಚೂರಿನಲ್ಲೇ ಬೆಳಕಿಲ್ಲ – ಸಾರ್ವಜನಿಕರಿಂದ ತೀವ್ರ ಆಕ್ರೋಶ

    ನಾವು ಗುಣಮಟ್ಟದಲ್ಲಿ ರಾಜಿಯಾಗದೇ ಇರೋದಕ್ಕೆ ಕಾರಣವೇ ನಮ್ಮಲ್ಲಿರೋ ಸೌಲಭ್ಯ ಮತ್ತು ಸೌಕರ್ಯಗಳು. ಪ್ರತಿ ಹಂತದಲ್ಲೂ ಗುಣಮಟ್ಟದ ಪರೀಕ್ಷೆ ಮಾಡಿಯೇ ತುಪ್ಪದ ಉತ್ಪಾದನೆ ನಡೆಯಲಿದೆ. ಆಹಾರ ಗುಣಮಟ್ಟದ ಪರೀಕ್ಷೆಯನ್ನು ಮೈಸೂರು ಲ್ಯಾಬ್‌ನಲ್ಲಿ ಅಲ್ಲ ಯಾವುದೇ ಲ್ಯಾಬ್‌ನಲ್ಲಿ ಬೇಕಾದರೂ ಮಾಡಿಸಲಿ. ನಮ್ಮದು ಅತ್ಯುತ್ತಮ ಗುಣಮಟ್ಟದ ಪ್ರೊಡಕ್ಟ್ ಎಂದು ಹೇಳಿದರು. ಇದನ್ನೂ ಓದಿ: ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ನಂದಿನಿ ತುಪ್ಪದ (Nandini Ghee) ದರದ ಬದಲಾವಣೆ ಮಾಡುವ ಯೋಚನೆ ಇಲ್ಲ. ತಿರುಮಲದಿಂದ ಮತ್ತೆ ನಮಗೆ ಟೆಂಡರ್ ನೀಡಿದ್ದಾರೆ. ಅವರು ಎಷ್ಟೇ ಬೇಡಿಕೆ ಇಟ್ಟರೂ ಅಷ್ಟು ಪ್ರಮಾಣದ ತುಪ್ಪವನ್ನು ಸರಬರಾಜು ಮಾಡುತ್ತೇವೆ. ಬೇಡಿಕೆ ಹೆಚ್ಚಾದರೂ ಗುಣಮಟ್ಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ತಿರುಮಲಕ್ಕೆ ಟ್ಯಾಂಕರ್ ಮೂಲಕ ತುಪ್ಪವನ್ನು ಕಳುಹಿಸಿಕೊಡಲಾಗುತ್ತದೆ. ಟ್ಯಾಂಕರ್‌ಗಟ್ಟಲೆ ತುಪ್ಪ ಕಳುಹಿಸುವುದರಿಂದ ಆ ತುಪ್ಪದ ಬೆಲೆ ಬೇರೆಯಾಗಿಯೇ ಇರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್‌ ಡಿಮ್ಯಾಂಡ್‌ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

  • ಒಂದೂವರೆ ವರ್ಷದಿಂದ್ಲೇ ತಿರುಪತಿಗಿಲ್ಲ ನಂದಿನಿ ತುಪ್ಪ- ಕಟೀಲ್ ಟೀಕೆಗೆ ಸಿಎಂ ತಿರುಗೇಟು

    ಒಂದೂವರೆ ವರ್ಷದಿಂದ್ಲೇ ತಿರುಪತಿಗಿಲ್ಲ ನಂದಿನಿ ತುಪ್ಪ- ಕಟೀಲ್ ಟೀಕೆಗೆ ಸಿಎಂ ತಿರುಗೇಟು

    ಬೆಂಗಳೂರು: ತಿರುಪತಿ (Tirupati) ತಿಮ್ಮಪ್ಪನ ಲಡ್ಡುಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತ ವಿಚಾರದಲ್ಲಿ ರಾಜಕೀಯ ಮುಂದುವರಿದಿದೆ.

    ದೇವಸ್ಥಾನ ಮತ್ತು ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿದೆ. ಹಿಂದೂಗಳೆಡೆಗಿನ ಸಿದ್ದರಾಮಯ್ಯನವರ (Siddaramaiah) ತಾತ್ಸಾರ ನೀತಿ ಋಜುವಾತಾಗಿದೆ ಎಂದು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಟ್ವೀಟ್ ಮೂಲಕ ಆರೋಪ ಮಾಡಿದ್ರು. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ತಿರುಪತಿಗೆ (Tirupati) ನಂದಿನಿ ತುಪ್ಪ ಪೂರೈಕೆ ನಿಂತಿರೋದು ಇಂದು-ನಿನ್ನೆಯ ವಿಚಾರವಲ್ಲ ಒಂದೂವರೆ ವರ್ಷದ ಹಿಂದೆಯೇ ಅಂದ್ರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆ ಬಂದ್ ಆಗಿದೆ. ಮಾನ್ಯ ಕಟೀಲ್ ಅವರೇ, ಈಗ ಹೇಳಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾಭಕ್ತಿಯ ವಿರೋಧಿಯೋ? ಅಥವಾ ಬೊಮ್ಮಾಯಿ ಮಾತ್ರ ಹಿಂದೂ ವಿರೋಧಿಯೋ ಎಂದು ಪ್ರಶ್ನಿಸಿದ್ದಾರೆ. ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಕೂಡ ಮುಖ್ಯ. ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ಟಿಟಿಡಿ ಒಪ್ಪುವುದಾದ್ರೇ ತುಪ್ಪ ಪೂರೈಸಲು ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸಿಎಂ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಕಾಂಗ್ರೆಸ್ (Congress) ಟ್ವೀಟ್ ಮಾಡಿ, ನಮ್ಮ ಹೆಮ್ಮೆಯ ನಂದಿನಿಗೆ ಮಾರ್ಕೆಟ್‍ನಲ್ಲಿ ತನ್ನದೇ ಆದ ಸ್ಥಾನವಿದೆ. ಉತ್ತಮ ಹೆಸರಿದೆ. ಗುಣಮಟ್ಟ ಮತ್ತು ಬೆಲೆಯಲ್ಲಿ ರಾಜಿಯಾಗಲ್ಲ ಟೆಂಡರ್ ಪಡೆಯಬೇಕು ಎಂಬ ಒಂದೇ ಉದ್ದೇಶಕ್ಕೆ ಬೆಲೆಯಲ್ಲಿ ರಾಜೀ ಮಾಡ್ಕೊಂಡು ನಷ್ಟ ಮಾಡ್ಕೊಳ್ಳುವ ಅಗತ್ಯವಿಲ್ಲ. ನಂದಿನಿಗೆ ಹೆಚ್ಚು ಬೇಡಿಕೆ ಇದೆ. ಟೆಂಡರ್ ಕೈತಪ್ಪಿದ್ರೂ ಕೆಎಂಎಫ್‍ಗೆ ನಷ್ಟವೇನಿಲ್ಲ ಎಂದು ಹೇಳಿದೆ.

    ಅತ್ತ ಟಿಟಿಡಿ ಇಓ ಧರ್ಮಾರೆಡ್ಡಿ ಪ್ರತಿಕ್ರಿಯಿಸಿ, ನಂದಿನಿ ತುಪ್ಪ ಪೂರೈಕೆಗೆ ನಾವೇನು ಅಡ್ಡಿ ಮಾಡಿಲ್ಲ. ಕೆಎಂಎಫ್ (KMF) ಅಧ್ಯಕ್ಷರ ಮಾತು ಸತ್ಯಕ್ಕೆ ದೂರವಾದುದು. ಮಾರ್ಚ್‍ನಲ್ಲಿ ಕರೆದ ಟೆಂಡರ್‍ನಲ್ಲಿ ಕೆಎಂಎಫ್ ಭಾಗವಹಿಸಿರಲಿಲ್ಲ. ನಿಯಮ ಮೀರಿ ನಾವು ಕೆಎಂಎಫ್‍ಗೆ ಟೆಂಡರ್ ನೀಡಲು ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಕೆಎಂಎಫ್ ರಾಯಭಾರಿಯಾಗಿ ನಟ ಶಿವರಾಜ್‍ಕುಮಾರ್ ನೇಮಕಗೊಂಡಿದ್ದಾರೆ. ಈ ಮೂಲಕ ಅವರ ಅಪ್ಪ ಮತ್ತು ಅಪ್ಪು ಪರಂಪರೆಯನ್ನು ಮುಂದುವರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ

    ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ

    ಬೆಂಗಳೂರು: ಇದು ದರದ ಪ್ರಶ್ನೆ ಅಲ್ಲ. ಬೇರೆಯವರಿಗೆ ಮಾರುಕಟ್ಟೆ ಬಿಟ್ಟು ಕೊಟ್ಟಂತೆ ಎಂದು ಕೆಎಂಎಫ್‌ (KMF) ಮಾಜಿ ಅಧ್ಯಕ್ಷ ಸೋಮಶೇಖರ ರೆಡ್ಡಿ (Somashekara Reddy) ಪ್ರತಿಕ್ರಿಯಿಸಿದ್ದಾರೆ.

    ತಿರುಪತಿ ಲಡ್ಡುಗೆ ನಂದಿನಿ ತುಪ್ಪದ ಟೆಂಡರ್‌ (No More Nandini Ghee for Tirupati Laddus) ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಂದಿನಿ ತುಪ್ಪ ತಿರುಪತಿ ದೇವರ ಸಂಬಂಧ ಅವಿನಾಭಾವ. ಸರಬರಾಜು ನಿಲ್ಲಿಸಿದರೆ ರೈತರಿಗೆ ತೊಂದರೆಯಾಗಲಿದೆ. ಅಷ್ಟೇ ಅಲ್ಲದೇ ನಂದಿನಿಯ ಅಂತರಾಷ್ಟ್ರೀಯ ಮಾರುಕಟ್ಟೆ ವಿಸ್ತರಣೆಗೆ ಸಮಸ್ಯೆಯಾಗಲಿದೆ ಎಂದರು. ಇದನ್ನೂ ಓದಿ: ತಿರುಪತಿ ಲಡ್ಡುಗೆ ಇಲ್ಲ ನಂದಿನಿ ತುಪ್ಪ-ಕಾಂಗ್ರೆಸ್‌ ತನ್ನ ಅಜೆಂಡಾಕ್ಕಾಗಿ ಸುವರ್ಣ ಕರ್ನಾಟಕವನ್ನು ನಾಶ ಮಾಡಲು ಮುಂದಾಗಿದೆ: ಸಿಟಿ ರವಿ

     

    ಈ ಹಿಂದೆ ಒಂದು ಬಾರಿ ಟಿಟಿಡಿಯವರು (TTD) ದರ ಕಡಿಮೆ ಎಂದು ಬೇರೆ ಬ್ರ್ಯಾಂಡ್ ತುಪ್ಪ ಬಳಸಿದ್ದರು. ಆದರೆ ಗುಣಮಟ್ಟ ಕಡಿಮೆ ಎಂದು ಅವರಿಗೆ ಅನಿಸಿತು. ಆಮೇಲೆ ನಾನೇ ಖುದ್ದು ನಮ್ಮ ನಂದಿನಿ ತುಪ್ಪ ತೆಗೆದುಕೊಳ್ಳುವಂತೆ ಮನವೊಲಿಸಿದ್ದೆ ಎಂದು ತಿಳಿಸಿದರು.

    ಟಿಟಿಡಿಯರಿಗೆ ನಾವು ಮಾರುಕಟ್ಟೆ ದರಕ್ಕಿಂತ ಎರಡು ರೂಪಾಯಿ ಕಡಿಮೆಗೆ ಕೊಡುತ್ತಿದ್ದೆವು. ದಯವಿಟ್ಟು ಕೆಎಂಎಫ್‌ ಈ ಟೆಂಡರ್‌ ಅನ್ನು ಬಿಡಬಾರದು. ನಾನು ಖುದ್ದು ಭೀಮಾ ನಾಯ್ಕ್ (Bhima Nayak) ಜೊತೆ ಮಾತನಾಡುತ್ತೇನೆ. ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ನಂದಿನಿ ತುಪ್ಪ ಕಳುಹಿಸಬೇಕು ಎಂದರು.‌

    ಸುಮಾರು 50 ವರ್ಷಗಳ ಬಳಿಕ ತಿರುಪತಿ ತಿರುಮಲ ದೇವಸ್ಥಾನ ಮಂಡಳಿ ಕೆಎಂಎಫ್‌ನಿಂದ ನಂದಿನಿ ತುಪ್ಪದ ಖರೀದಿಯನ್ನು ಸ್ಥಗಿತ ಮಾಡಿದೆ. ಇದರಿಂದಾಗಿ ವಿಶ್ವ ಪ್ರಸಿದ್ಧ ಲಾಡುಗಳಲ್ಲಿ ಇನ್ನು ಮುಂದೆ ನಂದಿನಿ ತುಪ್ಪದ ಘಮ ಇರುವುದಿಲ್ಲ. ಈ ಬಗ್ಗೆ ಬಳ್ಳಾರಿಯಲ್ಲಿ ಪ್ರತಿಕ್ರಿಯಿಸಿದ ಕರ್ನಾಟಕ ಹಾಲು ಮಹಾಮಂಡಳ ಅಧ್ಯಕ್ಷ ಭೀಮಾನಾಯ್ಕ್‌, ಕೆಎಂಎಫ್ ಸಲ್ಲಿಸಿದ ತುಪ್ಪದ ದರ ಪ್ರಸ್ತಾವನೆಯನ್ನು ಟಿಟಿಡಿ ಒಪ್ಪಿಕೊಂಡಿಲ್ಲ. ತಿರುಮಲ ಆಡಳಿತ ಮಂಡಳಿ ನಿಗದಿ ಮಾಡಿದ ಬೆಲೆಗೆ ತುಪ್ಪ ಪೂರೈಕೆ ಮಾಡಲು ಸಾಧ್ಯವಾಗದ ಕಾರಣ ಟೆಂಡರ್‌ನಿಂದ ಕೆಎಂಎಫ್‌ ದೂರ ಉಳಿದಿದೆ ಎಂದಿದ್ದಾರೆ.

    ಆರು ತಿಂಗಳಿಗೆ 14 ಲಕ್ಷ ಕೆಜಿ ತುಪ್ಪ ನಂದಿನಿಯಿಂದ ಸರಬರಾಜು ಆಗುತ್ತಿತ್ತು. ಈ ಹಿಂದೆ ರಿಯಾಯಿತಿ ದರದಲ್ಲಿ ತಿಮ್ಮಪ್ಪನ ಸನ್ನಿಧಿಗೆ ತುಪ್ಪ ಹೋಗುತ್ತಿತ್ತು. ಆದರೆ ಈಗ ಕೆಎಂಎಫ್‌ ಹಾಲಿನ ಬೆಲೆ ಏರಿಕೆ ಮಾಡಿದ್ದರಿಂದ ತಪ್ಪದ ದರವನ್ನು ಏರಿಸಿತ್ತು. ದರದ ಗೊಂದಲದಿಂದ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸರಲಿಲ್ಲ


    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಎಸ್‍ಟಿಎಸ್ ಸೂಚನೆ

    ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಎಸ್‍ಟಿಎಸ್ ಸೂಚನೆ

    ಬೆಳಗಾವಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

    ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ನಕಲಿ ತುಪ್ಪ ತಯಾರಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸೂಚಿಸಲಾಗಿದೆ ಎಂದರು. ಇದನ್ನೂ ಓದಿ: ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೋಡೌನ್‌ ಮೇಲೆ ಅಧಿಕಾರಿಗಳ ದಾಳಿ

    ರುಚಿ, ಪರಿಶುದ್ಧತೆಯ ಮೂಲಕ ನಂದಿನಿ ತುಪ್ಪ ಸಾಕಷ್ಟು ಪ್ರಖ್ಯಾತಿ ಆಗಿದೆ. ನಿತ್ಯ ನೂರು ಟನ್‍ಗೂ ಹೆಚ್ಚು ತುಪ್ಪ ಉತ್ಪಾದನೆ ಮಾಡಲಾಗುತ್ತದೆ. ತಿರುಪತಿ, ಅಯೋಧ್ಯೆಗೆ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ಸೇನೆಗೂ ಸಹ ನಂದಿನಿ ತುಪ್ಪ ಕಳುಹಿಸಲಾಗುತ್ತಿದೆ. ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸಿದರೆ ಸಾರ್ವಜನಿಕರು ಕೆಎಂಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಮಹಾರಾಷ್ಟ್ರದ ಗಡಿಯ 40 ಗ್ರಾಮಗಳು ಕರ್ನಾಟಕಕ್ಕೆ ಸೇರಿಸುವಂತೆ ಅರ್ಜಿ ಸಲ್ಲಿಕೆ

    ಕಲಬೆರೆಕೆ ತುಪ್ಪದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಸಹ ಕೆಎಂಎಫ್ ಜೊತೆ ಕೈಜೋಡಿಸಬೇಕು. ಮೈಸೂರಿನಲ್ಲಿ ನಕಲಿ ತುಪ್ಪ ತಯಾರಿಸಿದ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಾಹಿತಿ ಹಂಚಿಕೊಂಡರು.

  • ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೋಡೌನ್‌  ಮೇಲೆ ಅಧಿಕಾರಿಗಳ ದಾಳಿ

    ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೋಡೌನ್‌ ಮೇಲೆ ಅಧಿಕಾರಿಗಳ ದಾಳಿ

    ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಕೆಎಂಎಫ್‌ ಅಧಿಕಾರಿಗಳು ಬೇಧಿಸಿದ್ದಾರೆ.

    ಇಲ್ಲಿನ ಹೊಸ ಹುಂಡಿಯಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕಾ ಗೋಡೌನ್‌ ಮೇಲೆ ಮಾನವ ಹಕ್ಕು ಹೋರಾಟಗಾರರ ತಂಡ ದಾಳಿ ನಡೆಸಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಒಂದೇ ದಿನ 2 ಸರಕಳ್ಳತನ – ಆರೋಪಿಗಳು ಪರಾರಿ

    ಈ ಗೋಡೌನ್‌ ಮೂಲಕ ಕಳೆದ ನಾಲ್ಕು ತಿಂಗಳಿಂದ ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪವನ್ನು ಮೈಸೂರು ನಗರಾದ್ಯಂತ ಮಾರಾಟ ಮಾಡಲಾಗುತ್ತಿದೆ. ನಕಲಿ ತುಪ್ಪ ತಯಾರಕರ ವಿತರಣಾ ಜಾಲವನ್ನು ಕೊನೆಗೂ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

    ಅಧಿಕಾರಿಗಳ ದಾಳಿ ವೇಳೆ, ಕೆಲವು ಅಸಲಿ ನಂದಿನಿ ತುಪ್ಪದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಇನ್ನೂ ಕೆಲವನ್ನು ಪ್ಯಾಕಿಂಗ್‌ ಮಾಡಲಾಗುತ್ತಿತ್ತು. ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಶ್ರಣ ಮಾಡಿ ಅದನ್ನು ಟನಲ್‌ನಲ್ಲಿ ತುಂಬಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರು ಅರಮನೆ ಆನೆಗಳು ಗುಜರಾತ್‌ಗೆ ಶಿಫ್ಟ್‌

    ಈ ಮಾದರಿಯ ತುಪ್ಪ ಆರೋಗ್ಯಕ್ಕೆ ಹಾನಿಕಾರಕ. ಈ ಜಾಲದ ಹಿಂದೆ ಯಾರ‍್ಯಾರು ಇದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.