Tag: Nani

  • ನೂರು ಕೋಟಿ ಕ್ಲಬ್ ಸೇರಿದ ‘ದಸರಾ’: ತಂಡಕ್ಕೆ ಕಾರು, ಚಿನ್ನ ಗಿಫ್ಟ್

    ನೂರು ಕೋಟಿ ಕ್ಲಬ್ ಸೇರಿದ ‘ದಸರಾ’: ತಂಡಕ್ಕೆ ಕಾರು, ಚಿನ್ನ ಗಿಫ್ಟ್

    ನ್ಯಾಚುರಲ್ ಸ್ಟಾರ್ ನಾನಿ (Nani) ದಸರಾ (Dasara) ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಕೇವಲ ಆರು ದಿನದಲ್ಲಿಯೇ ಶತ ಕೋಟಿ ಬಾಚಿಕೊಂಡಿದೆ. ಶ್ರೀರಾಮ ನವಮಿ ಪ್ರಯುಕ್ತ ವಿಶ್ವಾದ್ಯಂತ ತೆರೆಕಂಡ ದಸರಾ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ನೂರು ಕೋಟಿ ಕ್ಲಬ್ ಸೇರಿದ ನಾನಿ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

    ನಾನಿಯ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ದಸರಾಗೆ ಯುವ ಪ್ರತಿಭೆ ಶ್ರೀಕಾಂತ್ ಒಡೆಲಾ (Srikanth Odela) ಆಕ್ಷನ್ ಕಟ್ ಹೇಳಿದ್ದರು. ಕಲ್ಲಿದ್ದಲು ಗಣಿಯ ಸುತ್ತ ನಡೆಯುವ ಗ್ರಾಮೀಣ ಸೊಗಡಿನ ಕತೆಯಲ್ಲಿ ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ (Keerthi Suresh) ನಾಯಕಿಯಾಗಿ ನಟಿಸಿದ್ದರು. ವಿಶ್ವಾದ್ಯಂತ ಅದ್ಭುತ ಪ್ರದರ್ಶನ ಕಾಣ್ತಿರುವ ದಸರಾ ಚಿತ್ರವನ್ನು ಎಸ್ ಎಸ್ ರಾಜಮೌಳಿ, ಮಹೇಶ್ ಬಾಬು ಹಾಗೂ ಪ್ರಭಾಸ್ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ: ‘ಕಿರಿಕ್ ಪಾರ್ಟಿ’ ರಶ್ಮಿಕಾ ಮಂದಣ್ಣಗೆ ಶುಭಕೋರಿದ ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ

    ಎಸ್ ಎಲ್ ವಿ ಕ್ರಿಯೇಷನ್ ನಡಿ ಸುಧಾಕರ್ ಚೆರುಕೂರಿ ಅದ್ಧೂರಿಯಾಗಿ ದಸರಾ ಸಿನಿಮಾ ನಿರ್ಮಿಸಿದ್ದರು. ಚಿತ್ರ ಅಭೂತಪೂರ್ವ ಯಶಸ್ಸು ಕಂಡಿರುವ ಖುಷಿಯಲ್ಲಿರುವ ನಿರ್ಮಾಪಕರು‌ ಹೈದ್ರಾಬಾದ್ ಕರಿಮಾನಗರದಲ್ಲಿ ಸಕ್ಸಸ್ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಶ್ರೀಕಾಂತ್ ಒಡೆಲಾಗೆ ದುಬಾರಿ ಮೊತ್ತದ ಬಿಎಂಡಬ್ಲ್ಯೂ ಕಾರು ಗಿಫ್ಟ್ ನೀಡಿದ್ದು, ದಸರಾಗೆ ಕೆಲಸ ಮಾಡಿದ ಇಡೀ ತಂಡಕ್ಕೆ ತಲಾ 10 ಗ್ರಾಂ ಚಿನ್ನದ ನಾಣ್ಯವನ್ನು ನೀಡಿದ್ದಾರೆ.

  • ‘ದಸರಾ’ ಸಿನಿಮಾ ಕೊಂಡಾಡಿದ ರಾಜಮೌಳಿ-ಪ್ರಭಾಸ್-ಪ್ರಿನ್ಸ್

    ‘ದಸರಾ’ ಸಿನಿಮಾ ಕೊಂಡಾಡಿದ ರಾಜಮೌಳಿ-ಪ್ರಭಾಸ್-ಪ್ರಿನ್ಸ್

    ನ್ಯಾಚುರಲ್ ಸ್ಟಾರ್ ನಾನಿ (Nani) ಹಾಗೂ ಕೀರ್ತಿ ಸುರೇಶ್ ನಟನೆಯ ದಸರಾ (Dasara) ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗ್ತಿದೆ. ಗಲ್ಲಾಪೆಟ್ಟಿಗೆ ಲೂಟಿ ಮಾಡಿರುವ ನಾನಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ. ಶ್ರೀರಾಮನವಮಿ ಪ್ರಯುಕ್ತ ವಿಶ್ವಾದ್ಯಂತ ಬಿಡುಗಡೆಯಾದ ದಸರಾ ಅಬ್ಬರ ಕಲೆಕ್ಷನ್ ಮಾಡಿದ್ದು, ಸೆಲೆಬ್ರಿಟಿಗಳಿಂದಲೂ ಬಹುಪರಾಕ್ ಎನಿಸಿಕೊಂಡಿದೆ.

    ದಸರಾ ಮೆಚ್ಚಿದ ಜಕ್ಕಣ್ಣ ಹೇಳಿದ್ದೇನು?

    ಚಿತ್ರಬ್ರಹ್ಮ ಎಸ್ ಎಸ್ ರಾಜಮೌಳಿ (Rajamouli) ದಸರಾ ಸಿನಿಮಾವನ್ನು ಬಾಯ್ ತುಂಬ ಹೊಗಳಿದ್ದಾರೆ. ಚಿತ್ರ ನೋಡಿ ತಮ್ಮದೇ ವಿಮರ್ಶೆ ಕೊಟ್ಟಿರುವ ಜಕ್ಕಣ್ಣ, ನಾನಿ ವೃತ್ತಿಜೀವನದ ಅತ್ಯುತ್ತಮ ನಟನೆ, ಶ್ರೀಕಾಂತ್ ಒಡೆಲ ಹೃದಯ ಸ್ಪರ್ಶಿ ಕಥೆ, ಪ್ರತಿಯೊಬ್ಬರ ಅಭಿನಯ ಗಮನಸೆಳೆಯುತ್ತದೆ. ಛಾಯಾಗ್ರಹಣ ಫಸ್ಟ್ ಕ್ಲಾಸ್ ಆಗಿದ್ದು, ಹಿನ್ನೆಲೆ ಸಂಗೀತ ವಿಶೇಷವಾಗಿದೆ. ಭರ್ಜರಿ ಯಶಸ್ಸು ಕಂಡಿರುವ ದಸರಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

    ದಸರಾ ಬೆರಗುಗೊಳಿಸುವ ಸಿನಿಮಾ ಎಂದ ಪ್ರಿನ್ಸ್

    ದಸರಾ ಸಿನಿಮಾ ನೋಡಿ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಬೆರಗಾಗಿದ್ದಾರೆ. ಚಿತ್ರದ ಬಗ್ಗೆ ಬಹಳ ಹೆಮ್ಮೆ ಇದೆ. ಸ್ಟನ್ನಿಂಗ್ ಸಿನಿಮಾ ಎಂದಿದ್ದಾರೆ. ಇದನ್ನೂ ಓದಿ: ಅವಳಿ ಮಕ್ಕಳ ಹೆಸರನ್ನು ರಿವೀಲ್ ಮಾಡಿದ ನಟಿ ನಯನತಾರಾ

    ಧೂಮ್ ಧಾಮ್ ಬ್ಲಾಕ್ ಬಸ್ಟರ್ ಪ್ರಭಾಸ್ ಬಣ್ಣನೆ

    ಬಾಹುಬಲಿ ಸೂಪರ್ ಸ್ಟಾರ್ ಡಾರ್ಲಿಂಗ್ ಪ್ರಭಾಸ್ (Prabhas) ದಸರಾ ಸಿನಿಮಾ ಮೆಚ್ಚಿಕೊಂಡಿದ್ದಾರೆ. ಈಗಷ್ಟೇ ದಸರಾ ನೋಡಿದೆ. ಎಂಥ ಅದ್ಭುತ ಸಿನಿಮಾ..ತುಂಬಾ ಇಷ್ಟವಾಯ್ತು,. ನಾನಿ, ಕೀರ್ತಿ ಸುರೇಶ್ ಹಾಗೂ ಶ್ರೀಕಾಂತ್ ಒಡೆಲಾ ಇಡೀ ತಂಡಕ್ಕೆ ಒಳ್ಳೆ ಸಿನಿಮಾ ಮಾಡಿದೆ. ಇದೇ ರೀತಿ ಮತ್ತಷ್ಟು ಸಿನಿಮಾ ಬರಲಿ ಎಂದಿದ್ದಾರೆ ಪ್ರಭಾಸ್.

    ದಸರಾ ಸಿನಿಮಾ ಔಟ್ ಅಂಡ್ ಔಟ್ ಮಾಸ್ ಸಿನಿಮಾವಾಗಿದ್ದು, ನಾನಿ ರಗಡ್ ಲುಕ್ ನಲ್ಲಿ ಜಾದು ಮಾಡಿದ್ದಾರೆ. ಕೀರ್ತಿ ಡಿಗ್ಲಾಮರ್ ಲುಕ್ ನಲ್ಲಿ ಬಲು ಸೊಗಸಾಗಿ ನಟಿಸಿದ್ದು,. ಕನ್ನಡದ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸುಧಾಕರ್ ಚೆರಕೂರಿ ನಿರ್ಮಿಸಿರುವ ದಸರಾಗೆ ಸಂತೋಷ್ ನಾರಾಯಣ್ ಸಂಗೀತ, ಸತ್ಯನ್ ಸೂರ್ಯನ್ ಛಾಯಾಗ್ರಹಣವಿದೆ. ಶೈನ್ ಟಾಮ್ ಚಾಕೋ, ಸಮುದ್ರಖನಿ, ಸಾಯಿಕುಮಾರ್, ಜಾನ್ಸಿ, ಶಮಾ ಖಾಸೀಂ, ರಾಜಶೇಖರ್ ಅನಿಂಗಿ, ರವಿ ತೇಜ ನನ್ನಿಮಾಲಾ ಮುಂತಾದ ತಾರಾಬಳಗ ಚಿತ್ರದಲ್ಲಿದೆ.

  • ಮೊದಲ ದಿನವೇ 38 ಕೋಟಿ ಬಾಚಿದ ‘ದಸರಾ’ ಸಿನಿಮಾ

    ಮೊದಲ ದಿನವೇ 38 ಕೋಟಿ ಬಾಚಿದ ‘ದಸರಾ’ ಸಿನಿಮಾ

    ನಾನಿ (Nani) ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ದಸರಾ ಬಾಕ್ಸಾಫೀಸ್ (Box Office) ಲೂಟಿ ಮಾಡಿದೆ. ಮೊದಲ ದಿನವೆ ದಾಖಲೆ ಮೊತ್ತದ ಗಳಿಕೆ ಕಂಡಿದೆ. ಶ್ರೀರಾಮ ನವಮಿ ಪ್ರಯುಕ್ತ ತೆರೆಗೆ ಬಂದ ದಸರಾ ವಿಶ್ವಾದ್ಯಂತ ಬರೋಬ್ಬರಿ 38 ಕೋಟಿಗೂ ಅಧಿಕ ಹಣ ದೋಚಿದೆ. ಲವರ್ ಬಾಯ್ ಆಗಿ ಪ್ರೇಕ್ಷಕರನ್ನು ರಂಜಿಸುತ್ತಿದ್ದ ನಾನಿ ಮೊದಲ ಬಾರಿ ಔಟ್ ಅಂಡ್ ಔಟ್ ಮಾಸ್ ಲುಕ್ ನಲ್ಲಿ, ರಗಡ್ ಆಗಿ ಕಾಣಿಸಿಕೊಂಡಿದ್ದರು. ನಾನಿ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ನಾನೀಸ್ ದಸರಾ ಸಿನಿಮಾ ವಿದೇಶದಲ್ಲಿಯೂ ಜಾದು ಮಾಡಿದ್ದು, ಅಮೆರಿಕದಲ್ಲಿ ಭರ್ಜರಿ ಓಪನಿಂಗ್ ಕಂಡಿದೆ. ನಾನಿ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ಮೈಲೇಜ್ ಸಿಕ್ಕಂತಾಗಿದೆ. ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡನೇ ದಿನವೂ ಒಳ್ಳೆಯ ರೀತಿಯಲ್ಲಿ ಬುಕಿಂಗ್ ಆಗುತ್ತಿದೆ. ವೀಕೆಂಡ್ ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ಮೊದಲ ವಾರಾಂತ್ಯಕ್ಕೆ ಏನಿಲ್ಲವೆಂದರೂ 100 ಕೋಟಿ ಕ್ಲಬ್ ಸೇರುವ ನಿರೀಕ್ಷೆ ಇದೆ. ಇದನ್ನೂ ಓದಿ: ಅವಳಿ ಮಕ್ಕಳ ಮುದ್ದಾದ ಫೋಟೋ ಹಂಚಿಕೊಂಡ ಅಮೂಲ್ಯ

    ದಸರಾ ಸಿನಿಮಾ ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತೆ  ಕೀರ್ತಿ ಸುರೇಶ್ ನಾನಿಗೆ ಜೋಡಿಯಾಗಿ ನಟಿಸಿದ್ದಾರೆ. ಕನ್ನಡದ ದಿಯಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿ ಸೂರಿ ಎಂಬ ಪಾತ್ರದಲ್ಲಿ ಅದ್ಭುತವಾಗಿ ಅಭಿನಯಿಸಿದ್ದಾರೆ. ಸುಧಾಕರ್ ಚೆರಕೂರಿ ನಿರ್ಮಿಸಿರುವ ದಸರಾಗೆ ಸಂತೋಷ್ ನಾರಾಯಣನ್  ಸಂಗೀತ ನೀಡಿದ್ದು, ಸತ್ಯನ್ ಸೂರ್ಯನ್ ಛಾಯಾಗ್ರಹಣವಿದೆ. ಶೈನ್ ಟಾಮ್ ಚಾಕೋ, ಸಮುದ್ರಖನಿ, ಸಾಯಿಕುಮಾರ್, ಜಾನ್ಸಿ, ಶಮಾ ಖಾಸೀಂ, ರಾಜಶೇಖರ್ ಅನಿಂಗಿ, ರವಿ ತೇಜ ನನ್ನಿಮಾಲಾ ಮುಂತಾದ ತಾರಾಬಳಗ ಚಿತ್ರದಲ್ಲಿದೆ.

  • ಡಾಲಿ ಸಿನಿಮಾಗೆ ವಿಶ್ ಮಾಡಿ, ತೆಲುಗು ಚಿತ್ರ ನೋಡುತ್ತೇನೆ ಎಂದ ರಶ್ಮಿಕಾ ಮಂದಣ್ಣ

    ಡಾಲಿ ಸಿನಿಮಾಗೆ ವಿಶ್ ಮಾಡಿ, ತೆಲುಗು ಚಿತ್ರ ನೋಡುತ್ತೇನೆ ಎಂದ ರಶ್ಮಿಕಾ ಮಂದಣ್ಣ

    ನ್ನಡದ `ಕಿರಿಕ್ ಪಾರ್ಟಿ’ (Kirik Party) ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಸದಾ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿರುವ ರಶ್ಮಿಕಾ ಇದೀಗ ಮತ್ತೆ ಟ್ರೋಲಿಗರ ಬಾಯಿಗೆ ಆಹಾರವಾಗಿದ್ದಾರೆ. ಡಾಲಿ `ಹೊಯ್ಸಳ’ (Hoysala) ಚಿತ್ರಕ್ಕೆ ವಿಶ್ ಮಾಡಿ, ನಾನಿ ನಟನೆಯ `ದಸರಾ’ (Dasara) ತೆಲುಗು ಸಿನಿಮಾ ನೋಡುತ್ತೇನೆ ಎಂದು ನಟಿ ಹೇಳಿರೋದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

    ರಕ್ಷಿತ್ ಶೆಟ್ಟಿ (Raskshit Shetty) ಸಿನಿಮಾಗೆ ನಾಯಕಿಯಾಗುವ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ನಟಿ ರಶ್ಮಿಕಾ, ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಗಮನ ಸೆಳೆಯುತ್ತಿದ್ದಾರೆ. ಸದ್ಯ ಕನ್ನಡ ಮತ್ತು ತೆಲುಗು ಚಿತ್ರಕ್ಕೆ ನಟಿ ವಿಶ್ ಮಾಡಿರುವ ರೀತಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

    ಡಾಲಿ-ಅಮೃತಾ ನಟನೆಯ `ಹೊಯ್ಸಳ’ ಸಿನಿಮಾದ 17 ಸೆಕೆಂಡ್‌ನ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಸ್ಟೋರಿಯಲ್ಲಿ ಹಂಚಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ, ಧನಂಜಯ್ ಅನ್ನು ಟ್ಯಾಗ್ ಮಾಡಿ `ಹೊಯ್ಸಳ’ ಸಿನಿಮಾಕ್ಕೆ ಒಳ್ಳೆಯದಾಗಲಿ ಎಂದಿದ್ದಾರೆ. ಅದೇ ಪೋಸ್ಟ್ ಅನ್ನು ನಿರ್ಮಾಪಕ ವಿಜಯ್ ಕಿರಗಂದೂರು, ನಾಯಕಿ ಅಮೃತಾ ಐಯ್ಯಂಗಾರ್, ಕೆಆರ್‌ಜಿ ಸ್ಟುಡಿಯೋಸ್, ನಿರ್ದೇಶಕ ವಿಜಯ್, ಕಾರ್ತಿಕ್ ಗೌಡ, ನಿರ್ಮಾಪಕ ಯೋಗಿರಾಜು, ಸಿನಿಮಾಟೊಗ್ರಾಫರ್ ಕಾರ್ತಿಕ್, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ ಆನಂದ್ ಆಡಿಯೋ ಅನ್ನು ಸಹ ಟ್ಯಾಗ್ ಮಾಡಿದ್ದಾರೆ.

    `ಹೊಯ್ಸಳ’ ಸಿನಿಮಾಕ್ಕೆ ಶುಭ ಹಾರೈಸಿ ಸ್ಟೋರಿ ಹಾಕಿರುವ ಜೊತೆಗೆ ನಾಳೆ `ಹೊಯ್ಸಳ’ ಸಿನಿಮಾದ ಜೊತೆಗೇ ಬಿಡುಗಡೆ ಆಗುತ್ತಿರುವ ತೆಲುಗು ಸಿನಿಮಾ ದಸರಾ ಬಗ್ಗೆಯೂ ಸ್ಟೋರಿ ಹಾಕಿದ್ದಾರೆ. ನಾನಿ, ಕೀರ್ತಿ ಸುರೇಶ್, ದೀಕ್ಷಿತ್ ಶೆಟ್ಟಿ ಹಾಗೂ ಇಡೀ ದಸರಾ ಚಿತ್ರತಂಡಕ್ಕೆ ದೊಡ್ಡ ಚಪ್ಪಾಳೆ. ನಿಮ್ಮೆಲ್ಲರಿಗೂ ನನ್ನ ಕಡೆಯಿಂದ ಶುಭ ಹಾರೈಕೆಗಳು. ಸಿನಿಮಾದ ಪೋಸ್ಟರ್ ಸಖತ್ ಆಗಿದೆ ಆಗಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡಲು ಕಾತರಳಾಗಿ ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನಟ ನಾನಿ, ಕೀರ್ತಿ ಸುರೇಶ್ ಹಾಗೂ ಕನ್ನಡಿಗರಾಗಿರುವ ದೀಕ್ಷಿತ್‌ಗೆ ಪೋಸ್ಟ್ ಅನ್ನು ಟ್ಯಾಗ್ ಮಾಡಿದ್ದಾರೆ. ಮಾ.30ರಂದು ʻಹೊಯ್ಸಳʼ ಮತ್ತು ʻದಸರಾʼ ತೆರೆಕಂಡಿದೆ.

    ಕನ್ನಡ ಸಿನಿಮಾಗಿಂತ ತೆಲುಗು ಚಿತ್ರರಂಗದಲ್ಲಿಯೇ ರಶ್ಮಿಕಾ ಮಂದಣ್ಣ ಗುರುತಿಸಿಕೊಂಡಿರುವ ಕಾರಣ. ತುಸು ತೆಲುಗು ಸಿನಿಮಾ ಮೇಲೆಯೇ ಪ್ರೀತಿ, ಕಾಳಜಿಯನ್ನ ರಶ್ಮಿಕಾ ತೋರಿಸಿದ್ದಾರೆ. ನಟಿಯ ಈ ನಡೆಯೇ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

  • ನಾನಿ ಸಿನಿಮಾದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆ

    ನಾನಿ ಸಿನಿಮಾದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆ

    ‘ದಿಯಾ’ (Diya) ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ದೀಕ್ಷಿತ್ ಶೆಟ್ಟಿ (Dixit Shetty) ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಬೆಳ್ಳಿ ತೆರೆ ಮೇಲೆ ಮಿಂಚಲು ರೆಡಿಯಾಗಿದ್ದಾರೆ. ‘ದಿಯಾ’ ಸಿನಿಮಾದಲ್ಲಿ ಸಿಂಪಲ್ ಹುಡುಗನ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದ ದೀಕ್ಷಿತ್ ನ್ಯಾಚುರಲ್ ಸ್ಟಾರ್ ನಾನಿ (Nani) ಅಭಿನಯದ ‘ದಸರಾ’ (Dasara) ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಇದೇ ಮಾರ್ಚ್ 30ರಂದು ‘ದಸರಾ’ ವರ್ಲ್ಡ್ ವೈಡ್ ಬಿಡುಗಡೆಯಾಗುತ್ತಿದ್ದು, ಸೂರಿ ಪಾತ್ರದ ಮೂಲಕ ದೀಕ್ಷಿತ್ ಶೆಟ್ಟಿ ತೆರೆ ಮೇಲೆ ಬರ್ತಿದ್ದಾರೆ.

    ಶ್ರೀಕಾಂತ್ ಒಡೆಲಾ ನಿರ್ದೇಶನದಲ್ಲಿ ನ್ಯಾಚುರಲ್ ಸ್ಟಾರ್ ನಾನಿ, ಕೀರ್ತಿ ಸುರೇಶ್ ಅಭಿನಯದ ‘ದಸರಾ’ ಸಖತ್ ಬಝ್ ಕ್ರಿಯೇಟ್ ಮಾಡಿದೆ. ಟೀಸರ್ ಮೂಲಕ ವರ್ಲ್ಡ್ ವೈಡ್ ಸಖತ್ ಸೌಂಡ್ ಮಾಡಿರುವ ಈ ಚಿತ್ರ ನಾನಿ ಬಹು ನಿರೀಕ್ಷಿತ  ಪ್ಯಾನ್ ಇಂಡಿಯಾ ಪ್ರಾಜೆಕ್ಟ್. ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ನ್ಯಾಚುರಲ್ ಸ್ಟಾರ್ ಜೊತೆ ಸ್ಕ್ರೀನ್ ಶೇರ್ ಮಾಡಿರೋದು ವಿಶೇಷ. ಇದನ್ನೂ ಓದಿ: Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    ನಾನಿ ಸರ್ ಪ್ರೊಡಕ್ಷನ್ ಹೌಸ್ ನಡಿ ನಿರ್ಮಾಣವಾದ ‘ಮೀಟ್ ಕ್ಯೂಟ್’ ವೆಬ್ ಸೀರೀಸ್ ನಲ್ಲಿ ನಟಿಸಿದ್ದೆ. ವೆಬ್ ಸೀರೀಸ್ ಸಹ ನಿರ್ದೇಶಕರಾದ ವಿನಯ್ ನನ್ನ ಅಭಿನಯ ನೋಡಿ ದಸರಾ ಸಿನಿಮಾಗೆ ರೆಫರ್ ಮಾಡಿದ್ರು. ನಾನಿ ಸರ್ ಕೂಡ ವೆಬ್ ಸೀರೀಸ್ ನಲ್ಲಿ ನನ್ನ ಅಭಿನಯ ನೋಡಿ ಮೆಚ್ಚಿಕೊಂಡಿದ್ರು ಇದ್ರಿಂದ ದಸರಾ ಸಿನಿಮಾದಲ್ಲಿ ನಟಿಸೋ ಅವಕಾಶ ಸಿಕ್ತು ಎನ್ನುತ್ತಾರೆ ದೀಕ್ಷಿತ್ ಶೆಟ್ಟಿ.

    ಚಿತ್ರದಲ್ಲಿ ಸೂರಿ ಎಂಬ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಇಡೀ ಸಿನಿಮಾದಲ್ಲಿ ಈ ಪಾತ್ರ ಕ್ಯಾರಿಯಾಗುತ್ತೆ. ಹತ್ತು ತಿಂಗಳು ‘ದಸರಾ’ ಸಿನಿಮಾ ತಂಡದೊಂದಿಗೆ ಕೆಲಸ ಮಾಡಿದ್ದೇನೆ. ಈ ಚಿತ್ರ ಅದ್ಭುತ ಅನುಭವ ನೀಡಿದೆ. ನಿರ್ದೇಶಕರ ಜೊತೆಗೆ ನಾನಿ ಸರ್ ಕೂಡ ನನ್ನ ಪಾತ್ರ ನಿರ್ವಹಿಸಲು ಒಂದಿಷ್ಟು ಸಲಹೆ ನೀಡುತ್ತಿದ್ರು ಎಂದು ತಮ್ಮ ಪಾತ್ರ ಹಾಗೂ ‘ದಸರಾ’ ತಂಡದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ ದೀಕ್ಷಿತ್ ಶೆಟ್ಟಿ.

    ‘ದಿಯಾ’ ನಂತರ ದೀಕ್ಷಿತ್ ಶೆಟ್ಟಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದೇ ರೀತಿಯ ಕಥೆ, ಪಾತ್ರಕ್ಕೆ ಸೀಮಿತವಾಗದೇ  ಅಳೆದು ತೂಗಿ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ‘ಕೆಟಿಎಂ’ ಹಾಗೂ ‘ಬ್ಲಿಂಕ್’ ಸಿನಿಮಾಗಳು ಕನ್ನಡದಲ್ಲಿ ಬಿಡುಗಡೆಗೆ ರೆಡಿಯಾಗಿವೆ.  ಅದಕ್ಕೂ ಮೊದಲು ‘ದಸರಾ’ ಮೂಲಕ ಸೂರಿ ಪಾತ್ರದಲ್ಲಿ ತೆರೆ ಮೇಲೆ ರಂಜಿಸಲು ರೆಡಿಯಾಗಿದ್ದಾರೆ ದೀಕ್ಷಿತ್ ಶೆಟ್ಟಿ.

  • 130 ಜನರಿಗೆ ಚಿನ್ನದ ನಾಣ್ಯ ಕೊಟ್ಟ ನಟಿ ಕೀರ್ತಿ ಸುರೇಶ್

    130 ಜನರಿಗೆ ಚಿನ್ನದ ನಾಣ್ಯ ಕೊಟ್ಟ ನಟಿ ಕೀರ್ತಿ ಸುರೇಶ್

    ಮೊದಲ ಸಿನಿಮಾದಲ್ಲೇ ರಾಷ್ಟ್ರ ಪ್ರಶಸ್ತಿ ಪಡೆದ ತಮಿಳು ನಟಿ ಕೀರ್ತಿ ಸುರೇಶ್ (Kirti Suresh), ತನ್ನ ಗೆಲುವಿಗೆ ಕಾರಣರಾಗುತ್ತಿರುವ ವ್ಯಕ್ತಿಗಳು ಬರೋಬ್ಬರಿ 75 ಲಕ್ಷ ರೂಪಾಯಿಗೂ ಅಧಿಕ ಹಣ ಖರ್ಚು ಮಾಡಿ ಚಿನ್ನದ ನಾಣ್ಯವನ್ನು (Gold Coin) ನೀಡಿದ್ದಾರೆ. ಯುಗಾದಿ ಹಬ್ಬಕ್ಕಾಗಿ ಅವರು ಈ ಉಡುಗೊರೆಯನ್ನು ನೀಡಿರುವುದಾಗಿ ಹೇಳಿಕೊಂಡಿದ್ದಾರೆ.

    ಮಹಾನಟಿ ಸಿನಿಮಾ ಮೂಲಕ ಚಿತ್ರ ಜಗತ್ತಿಗೆ ಪರಿಚಯವಾದ ಕೀರ್ತಿ ಸುರೇಶ್, ಮೂಲತಃ ಮಲಯಾಳಂ ಚಿತ್ರರಂಗದವರಾದರೂ, ಸಾಕಷ್ಟು ಹೆಸರು ಮಾಡಿದ್ದು ತೆಲುಗು ಮತ್ತು ತಮಿಳಿನಲ್ಲಿ. ಇದೀಗ ಅವರ ನಟನೆಯ ತೆಲುಗಿನ ದಸರಾ (Dasara) ಸಿನಿಮಾ ರಿಲೀಸ್‍ ಗೆ ರೆಡಿಯಾಗಿದೆ. ನಾನಿ (Nani) ಜೊತೆ ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿರುವ ಅವರು, ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗೂ ಮುಂದಾಗಿದ್ದಾರೆ. ಈ ಸಮಯದಲ್ಲಿ ಉಡುಗೊರೆ ನೀಡಿ ಸಖತ್ ಸುದ್ದಿ ಆಗಿದ್ದಾರೆ.

    ದಸರಾ ಸಿನಿಮಾದಲ್ಲಿ ತಮ್ಮೊಂದಿಗೆ ಕೆಲಸ ಮಾಡಿದ 130 ಜನರಿಗೆ ತಲಾ ಹತ್ತು ಗ್ರಾಂ ಚಿನ್ನದ ನಾಣ್ಯಗಳನ್ನು ಕೊಡುವ ಮೂಲಕ ಯುಗಾದಿ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ ಕೀರ್ತಿ ಸುರೇಶ್. ಸಿನಿಮಾದ ಕೊನೆಯ ದಿನದ ಶೂಟಿಂಗ್ ನಲ್ಲಿ ಸೆಟ್ ನಲ್ಲಿದ್ದ ಬಹುತೇಕರು ಭಾವುಕರಾಗಿದ್ದರಂತೆ. ಅಷ್ಟೊಂದು ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ಈ ಕಾರಣಕ್ಕಾಗಿ ಎಲ್ಲರಿಗೂ ಚಿನ್ನದ ಉಡುಗೊರೆ ಸಿಕ್ಕಿದೆ.

  • ಕಲರ್‌ಫುಲ್ ಉಡುಗೆಯಲ್ಲಿ ಮಿಂಚಿದ ಕೀರ್ತಿ ಸುರೇಶ್

    ಕಲರ್‌ಫುಲ್ ಉಡುಗೆಯಲ್ಲಿ ಮಿಂಚಿದ ಕೀರ್ತಿ ಸುರೇಶ್

    ಸೌತ್ ಬ್ಯೂಟಿ ಕೀರ್ತಿ ಸುರೇಶ್ (Keerthy Suresh) ಅವರು ಸದ್ಯ `ದಸರಾ’ (Dasara) ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಹೊಸ ಫೋಟೋಶೂಟ್‌ನಿಂದ ಕೀರ್ತಿ ಸುರೇಶ್ ಕಂಗೊಳಿಸಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ: ಭೈರತಿ ರಣಗಲ್‌ಗೆ `ಕೆಜಿಎಫ್ 2′ ರವಿ ಬಸ್ರೂರು ಸಂಗೀತ

    `ನಾನೀಸ್ ದಸರಾ’ (Nani’s Dasara) ಚಿತ್ರದ ಮೂಲಕ ನಾನಿಗೆ ಜೊತೆಯಾಗಿ `ಮಹಾನಟಿ’ (MahaNati) ಕೀರ್ತಿ ಸುರೇಶ್ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಇದೀಗ ಚೆಂದದ ಫೋಟೋಶೂಟ್‌ನಿಂದ ಪಡ್ಡೆಹುಡುಗರ ನಿದ್ದೆಕದ್ದಿದ್ದಾರೆ. ಕಲರ್‌ಫುಲ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ನಟಿಯ ಬೋಲ್ಡ್ ಲುಕ್ ಫೋಟೋಸ್ ಈಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

    `ದಸರಾ’ ಸಿನಿಮಾ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಇದೇ ಮಾರ್ಚ್ 30ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸುತ್ತಿದೆ.

  • ನಾನಿ ಸಿನಿಮಾದಲ್ಲಿ ಮೃಣಾಲ್ ಠಾಕೂರ್ : ಚಿರಂಜೀವಿ ಸಾಥ್

    ನಾನಿ ಸಿನಿಮಾದಲ್ಲಿ ಮೃಣಾಲ್ ಠಾಕೂರ್ : ಚಿರಂಜೀವಿ ಸಾಥ್

    ಹೊಸ ವರ್ಷದ ಆರಂಭದ ದಿನ ನ್ಯಾಚುರಲ್ ಸ್ಟಾರ್ ನಾನಿ (Nani) ತಮ್ಮ ಮೂವತ್ತನೇ ಸಿನಿಮಾದ ಅಪ್ಡೇಟ್ ಹಂಚಿಕೊಂಡಿದ್ದರು. ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಾನಿ ಸಿನಿ ಕೆರಿಯರ್ ನ ಮೂವತ್ತನೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಚಿಕ್ಕ ವೀಡಿಯೋ ಝಲಕ್ ಮೂಲಕ ಗಮನ ಸೆಳೆದಿದ್ದ ಚಿತ್ರತಂಡ ಇಂದು ಅದ್ದೂರಿಯಾಗಿ ಮುಹೂರ್ತ ಆಚರಿಸಿಕೊಂಡು ಸಿನಿಮಾಗೆ ಚಾಲನೆ ನೀಡಿದೆ.

    ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು, ಅಶ್ವಿನಿ ದತ್ ಕ್ಯಾಮೆರಾ ಚಾಲನೆ ಮಾಡುವ ಮೂಲಕ ಸಿನಿಮಾಗೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಬುಚ್ಚಿ ಬಾಬು, ಕಿಶೋರ್ ತಿರುಮಲ, ಹನು ರಾಘವಪುಡಿ, ವಸಿಷ್ಠ ಮತ್ತು ವಿವೇಕ್ ಆತ್ರೇಯ ಚಿತ್ರದ ಮೊದಲ ದೃಶ್ಯಕ್ಕೆ ಆಕ್ಷನ್ ಕಟ್ ಹೇಳಿದ್ರೆ, ವಿಜೇಂದ್ರ ಪ್ರಸಾದ್ ಚಿತ್ರದ ಸ್ಕ್ರಿಪ್ಟ್ ಅನ್ನು ಚಿತ್ರತಂಡಕ್ಕೆ ಹಸ್ತಾಂತರಿಸಿದ್ರು. ಪಸಲ ಕರುಣ್ ಕುಮಾರ್, ಗಿರೀಶ್ ಅಯ್ಯರ್, ಚೋಟ ಕೆ ನಾಯ್ಡು, ಸುರೇಶ್ ಬಾಬು, ದಿಲ್ ರಾಜು, 14 ರೀಲ್ಸ್ ಗೋಪಿ-ರಾಮ್ ಅಚಂತ, ಎಕೆ ಅನಿಲ್ ಸುಂಕರ, ಮೈತ್ರಿ ರವಿ, ಡಿವಿವಿ ದಾನಯ್ಯ, ಶ್ರವತಿ ರವಿ ಕಿಶೋರೆ, ಕೆ.ಎಸ್ ರಾವ್, ಸಾಹು ಗರಪಾಟಿ, ನಿಹಾರಿಕ ಕೊನಿಡೇಲ ಸೇರಿದಂತೆ ಹಲವರು ಚಿತ್ರದ ಮುಹೂರ್ತದಲ್ಲಿ ಭಾಗಿಯಾಗಿ ಚಿತ್ರತಂಡಕ್ಕೆ ಶುಭ ಹಾರೈಸಿದ್ರು. ಇದನ್ನೂ ಓದಿ: ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ

    ನಾನಿ ಮೂವತ್ತನೆ ಚಿತ್ರ ಇದಾಗಿದ್ದು, ಶೌರ್ಯುವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕನಾಗಿ ಇದು ಇವರ ಮೊದಲ ಸಿನಿಮಾವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂದವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ (Mrinal Thakur) ತೆರೆ ಹಂಚಿಕೊಳ್ಳುತ್ತಿದ್ದು, ಚಿತ್ರದ ಟೈಟಲ್ ಬಗ್ಗೆ ಸದ್ಯದಲ್ಲೇ ಚಿತ್ರತಂಡ ಮಾಹಿತಿ ಹಂಚಿಕೊಳ್ಳಲಿದೆ.

    ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ

    ಟಾಲಿವುಡ್ ನಟ ನಾನಿಗೆ ಮೃಣಾಲ್ ಠಾಕೂರ್ ನಾಯಕಿ

    `ಸೀತಾರಾಮಂ’ (Seetharamam) ನಟಿ ಮೃಣಾಲ್ ಠಾಕೂರ್ (Mrunal Thakur) ದೀಗ ಟಾಲಿವುಡ್‌ನತ್ತ (Tollywood) ಮುಖ ಮಾಡಿದ್ದಾರೆ. ನಾನಿಗೆ ನಾಯಕಿಯಾಗುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಮೃಣಾಲ್ ಠಾಕೂರ್ ಇದೀಗ ಸೌತ್ ಸಿನಿಮಾಗಳ ಜೊತೆ ಬಾಲಿವುಡ್‌ನಲ್ಲೂ ಬ್ಯುಸಿಯಾಗಿದ್ದಾರೆ. ಸದ್ಯ ನಾನಿ (Actor Nani) ಜೊತೆಗಿನ ಹೊಸ ಸಿನಿಮಾಗೆ ಮುಹೂರ್ತ ಕಾರ್ಯಕ್ರಮ ನಡೆದಿದೆ. ಸಿನಿಮಾ ಶೂಟಿಂಗ್‌ಗೆ ಚಾಲನೆ ಸಿಕ್ಕಿದೆ.‌ ಇದನ್ನೂ ಓದಿ:ಥೈಲ್ಯಾಂಡ್‌ನಲ್ಲಿ ನಟಿ ಸೋನು ಜೊತೆ ನೇಹಾ ಗೌಡ ಮೋಜು- ಮಸ್ತಿ

     

    View this post on Instagram

     

    A post shared by Mrunal Thakur (@mrunalthakur)

    ಹೈದರಾಬಾದ್‌ನಲ್ಲಿ ಸರಳವಾಗಿ `ನಾನಿ 30′ ಚಿತ್ರದ ಮುಹೂರ್ತ ಮಂಗಳವಾರ (ಜ.31) ನೆರವೇರಿದೆ. ಕಾರ್ಯಕ್ರಮಕ್ಕೆ ಮೆಗಾಸ್ಟಾರ್‌ ಚಿರಂಜೀವಿ ಆಗಮಿಸಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್‌ ಶುರುವಾಗಲಿದೆ. ವಿಭಿನ್ನ ಕಥೆಯ ಮೂಲಕ ನಾನಿ- ಮೃಣಾಲ್ ಜೋಡಿ ತೆರೆಯ ಮೇಲೆ ರೊಮ್ಯಾನ್ಸ್ ಮಾಡಲು ಸಜ್ಜಾಗಿದ್ದಾರೆ.

    ನಾನಿ ಹೊಸ ಸಿನಿಮಾಗೆ ಶೌರ್ಯುವ್ ನಿರ್ದೇಶನ ಮಾಡ್ತಿದ್ದಾರೆ. ನಾನಿ ನಟನೆಯ ಹೊಸ ಚಿತ್ರದ ಮೂಲಕ ಮೃಣಾಲ್ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಾನಿ- ಮೃಣಾಲ್ ಜೋಡಿ ತೆರೆಯ ಮೇಲೆ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡುತ್ತೆ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ದಸರಾ’ ಟೀಸರ್ ಬಿಡುಗಡೆ ಮಾಡಿದ ನಿರ್ದೇಶಕ ಎಸ್. ಎಸ್ ರಾಜಮೌಳಿ

    ‘ದಸರಾ’ ಟೀಸರ್ ಬಿಡುಗಡೆ ಮಾಡಿದ ನಿರ್ದೇಶಕ ಎಸ್. ಎಸ್ ರಾಜಮೌಳಿ

    ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಮಾಸ್ ಟೀಸರ್ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಎಸ್. ಎಸ್ ರಾಜಮೌಳಿ ತೆಲುಗು ಟೀಸರ್ ಬಿಡುಗಡೆ ಮಾಡಿದ್ದು, ಶಾಹಿದ್ ಕಪೂರ್, ರಕ್ಷಿತ್ ಶೆಟ್ಟಿ, ದುಲ್ಕರ್ ಸಲ್ಮಾನ್, ಧನುಷ್,  ಹಿಂದಿ, ಕನ್ನಡ, ಮಲಯಾಳಂ, ತಮಿಳು ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುವ ದಸರಾ ಹಬ್ಬವನ್ನು ಭಾರತದಾದ್ಯಂತ ಹೆಚ್ಚು ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ. ಈ ಆಚರಣೆಗಳಲ್ಲಿ ರಾವಣನ ಪ್ರತಿಕೃತಿಗಳನ್ನು ಸುಡಲಾಗುತ್ತದೆ. ಅದರಂತೆ ‘ದಸರಾ’ ಚಿತ್ರವೂ ಕೆಟ್ಟದರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂಬುದಕ್ಕೆ ಟೀಸರ್ ತುಣುಕು ಸಾಕ್ಷಿಯಾಗಿದೆ.

    ಚಿತ್ರಕ್ಕಾಗಿ ನ್ಯಾಚುರಲ್ ಸ್ಟಾರ್ ನಾನಿ ಮೇಕೋವರ್, ರಗಡ್ ಲುಕ್ ಟೀಸರ್ ನಲ್ಲಿ ಗಮನ ಸೆಳೆಯುತ್ತಿದೆ. ಗೋದಾವರಿಖಾನಿ ಸುತ್ತಮುತ್ತಲಿನ ವೀರ್ಲಪಲ್ಲಿ ಗ್ರಾಮ ಹಾಗೂ ಸಿಂಗರೇಣಿ ಕಲ್ಲಿದ್ದಲಿನ ಪ್ರಪಂಚವನ್ನು ಟೀಸರ್ ಝಲಕ್ ನಲ್ಲಿ ಅನಾವರಣ ಮಾಡಲಾಗಿದ್ದು ಪ್ರೇಕ್ಷಕರಲ್ಲಿ ಟೀಸರ್ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿದೆ. ಬಿಡುಗಡೆಯಾದ ಎಲ್ಲಾ ಭಾಷೆಗಳಲ್ಲೂ ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಟೀಸರ್ ಬಿಡುಗಡೆ ವೇಳೆ ಮಾತನಾಡಿದ ನಟ ನ್ಯಾಚುರಲ್ ಸ್ಟಾರ್ ನಾನಿ ಕಳೆದ ವರ್ಷ ತೆಲುಗಿನಲ್ಲಿ ಆರ್ ಆರ್  ಆರ್ ಕನ್ನಡದಲ್ಲಿ ಕೆಜಿಎಫ್ 2 , ಕಾಂತಾರ ಸಿನಿಮಾಗಳ ಸೂಪರ್ ಹಿಟ್ ಆಗಿವೆ ಈ ವರ್ಷ ದಸರಾ ಆ ಸಿನಿಮಾಗಳ ಲಿಸ್ಟ್ ಗೆ ಸೇರಲಿದೆ ಎಂದು  ಗರ್ವದಿಂದ ಹೇಳುತ್ತೇನೆ ಎಂದು ಭರವಸೆಯ ಮಾತುಗಳನ್ನಾಡಿದ್ರು.

    ಶ್ರೀಕಾಂತ್ ಒಡೆಲಾ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೆಗಾ ಪ್ರಾಜೆಕ್ಟ್ ಚಿತ್ರ ಇದಾಗಿದ್ದು, ಚಿತ್ರದಲ್ಲಿ ನಾಯಕಿಯಾಗಿ ಕೀರ್ತಿ ಸುರೇಶ್ ನಾನಿ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿದ ಚಿತ್ರತಂಡ ಟೀಸರ್ ಮೂಲಕ ಮಾರ್ಚ್ 30ರಂದು ಬಿಡುಗಡೆಯಾಗುತ್ತಿರುವ ಚಿತ್ರಕ್ಕೆ ಆಮಂತ್ರಣ ನೀಡಿದೆ. ಇದನ್ನೂ ಓದಿ: `ಸಾಕ್ಷಾತ್ಕಾರ’ ನಟಿ ಜಮುನಾ ಬಯೋಪಿಕ್‌ನಲ್ಲಿ ತಮನ್ನಾ ಭಾಟಿಯಾ

    ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗ ಈ ಚಿತ್ರದಲ್ಲಿದೆ. ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k