Tag: Nanjavadhuta Swamiji

  • ಮೇಕೆದಾಟು ವರ ಅಂತ ತ.ನಾಡು ಶಾಸಕರೇ ಹೇಳಿದ್ದಾರೆ, ರಾಜಕೀಯಕ್ಕಾಗಿ ವಿರೋಧ: ನಂಜಾವಧೂತ ಶ್ರೀ

    ಮೇಕೆದಾಟು ವರ ಅಂತ ತ.ನಾಡು ಶಾಸಕರೇ ಹೇಳಿದ್ದಾರೆ, ರಾಜಕೀಯಕ್ಕಾಗಿ ವಿರೋಧ: ನಂಜಾವಧೂತ ಶ್ರೀ

    -ಪಕ್ಷಾತೀತವಾಗಿ ಹೋರಾಟ ಮಾಡಿದ್ರೆ ಮೇಕೆದಾಟು ಆಗುತ್ತೆ

    ರಾಮನಗರ: ಮೇಕೆದಾಟು (Mekedatu) ನಮಗೆ ವರ ಎಂದು ತಮಿಳುನಾಡು (Tamil Nadu) ಶಾಸಕರೇ ನನ್ನ ಬಳಿ ಹೇಳಿದ್ದಾರೆ. ಆದರೆ ರಾಜಕೀಯವಾಗಿ ವಿರೋಧ ಮಾಡುತ್ತಿದ್ದಾರೆ ಅಷ್ಟೇ ಎಂದು ನಂಜಾವಧೂತ ಶ್ರೀ ಹೇಳಿಕೆ ನೀಡಿದ್ದಾರೆ.

    ಮೇಕೆದಾಟು ಯೋಜನೆ ಕುರಿತು ಮಾಗಡಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದ ವಿರೋಧ ಇದೆ. ಈ ನಡುವೆ ದೇವೇಗೌಡರು ಕೇಂದ್ರದ ಜೊತೆ ಮಾತನಾಡಿ ಮನವೊಲಿಕೆ ಮಾಡಿದ್ದಾರೆ. ಮೇಕೆದಾಟು ನಮ್ಮ ಹಕ್ಕು ಎಂದು ಡಿಸಿಎಂ ಡಿಕೆಶಿ ಪಾದಯಾತ್ರೆ ಮಾಡಿದ್ದಾರೆ. ಆದರೆ ಅದಕ್ಕೂ ಮೊದಲು ಮೇಕೆದಾಟು ಯೋಜನೆ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದರು. ಪಕ್ಷಾತೀತವಾಗಿ ಮೇಕೆದಾಟು ಯೋಜನೆ ಮಾಡಬೇಕು ಅನ್ನೋ ಹಂಬಲವಿದೆ. ಪಕ್ಷಾತೀತವಾಗಿ ಎಲ್ಲರೂ ಮೇಕೆದಾಟು ಯೋಜನೆಗೆ ಬೆಂಬಲಿಸುತ್ತಾರೆ ಎಂದರು. ಇದನ್ನೂ ಓದಿ: ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ `ವಿದಿಶಾ ಪ್ರಹಸನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ

    ತಮಿಳುನಾಡಿನಲ್ಲಿ ಯಾವ ರೀತಿ ನೀರಿಗೆ ಜಾತಿ, ಪಕ್ಷ ಇಲ್ಲವೋ ಆ ರೀತಿ ಕರ್ನಾಟಕದಲ್ಲೂ ಬೆಂಬಲ ಸಿಗಬೇಕು. ಎಲ್ಲಾ ಜನ ನಮ್ಮವರೇ, ಇಡೀ ನಾಡು ನಮ್ಮದು ಎನ್ನುವ ರೀತಿ ಒಗ್ಗಟ್ಟಾಗಿ ನಿಲ್ಲಬೇಕು. ಪಕ್ಷಾತೀತವಾಗಿ ಹೋರಾಟ ಆಗಿದ್ದೇ ಆದಲ್ಲಿ ಕೆಲವೇ ವರ್ಷಗಳಲ್ಲಿ ಮೇಕೆದಾಟು ಆಗುತ್ತದೆ. 64 ಟಿಎಂಸಿ ನೀರು ಸದ್ಬಳಕೆ ಮಾಡಕೊಳ್ಳಬಹುದಾಗಿದೆ. ತಮಿಳುನಾಡಿನಲ್ಲೂ ಈ ನೀರನ್ನು ಬಳಸಿಕೊಳ್ಳುತ್ತಿಲ್ಲ. ನಾವು ಕೂಡ ಬಳಸಿಕೊಳ್ಳುತ್ತಿಲ್ಲ. ನೂರಾರು ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೊಪ್ಪಳ| ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ನಾಪತ್ತೆಯಾಗಿದ್ದ ಪ್ರವಾಸಿಗ ಶವವಾಗಿ ಪತ್ತೆ

    ಹೊಸೂರಿಗೆ ಹೋಗಿದ್ದ ವೇಳೆ ತಮಿಳುನಾಡಿನ ಶಾಸಕರು ಈ ಬಗ್ಗೆ ನನ್ನ ಬಳಿ ಹೇಳಿಕೊಂಡಿದ್ದಾರೆ. ಮೇಕೆದಾಟು ನಮಗೆ ವರ ಎಂದು ಮೂರ್ನಾಲ್ಕು ಶಾಸಕರು ನಮ್ಮ ಬಳಿ ಮಾತನಾಡಿದ್ದರು. ಆದರೆ ರಾಜಕೀಯವಾಗಿ ಇದನ್ನ ವಿರೋಧ ಮಾಡುತ್ತಿದ್ದಾರೆ ಅಷ್ಟೇ. ಇದು ಯಾರಿಗೂ ಶ್ರೇಯಸ್ಸು ತರುವುದಿಲ್ಲ. ಹೀಗಾಗಿ ಎರಡೂ ರಾಜ್ಯದ ಸರ್ಕಾರಗಳು ಮೇಕೆದಾಟು ಯೋಜನೆ ಮಾಡಿದ್ರೆ ಒಳ್ಳೆಯದಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಪ್ಪಳದಲ್ಲಿ ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ

  • ಪ್ರಧಾನಿ ಮೋದಿಗೆ ಎಚ್ಚರಿಕೆ, ಮುಖ್ಯಮಂತ್ರಿ ಪರ ನಂಜಾವಧೂತ ಶ್ರೀ ಬ್ಯಾಟಿಂಗ್

    ಪ್ರಧಾನಿ ಮೋದಿಗೆ ಎಚ್ಚರಿಕೆ, ಮುಖ್ಯಮಂತ್ರಿ ಪರ ನಂಜಾವಧೂತ ಶ್ರೀ ಬ್ಯಾಟಿಂಗ್

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಮ್ಮಿಶ್ರ ಸರ್ಕಾರಕ್ಕೆ ಸಹಕಾರ ನೀಡಬೇಕು. ಇಲ್ಲದಿದ್ದರೇ ಒಕ್ಕಲಿಗ ಸಮುದಾಯ ಪ್ರಧಾನಿಗಳ ವಿರುದ್ಧ ನಿಲ್ಲುತ್ತದೆ ಎಂದು ಶ್ರೀ ಗುರುಗುಂಡಾ ಬ್ರಹ್ಮೇಶ್ವರ ಸ್ವಾಮಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಹೇಳಿದ್ದಾರೆ.

    ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಮುಖ್ಯಮಂತ್ರಿ ಸ್ಥಾನದಿಂದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಳಿಸುವುದಕ್ಕೆ ಪ್ರಯತ್ನ ಸಲ್ಲದು. ಸಿಎಂ ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಹಕಾರ ನೀಡಬೇಕು ಎಂದು ಸ್ವಾಮೀಜಿ ಹೇಳಿದರು.

    ಮಾಜಿ ಸಿಎಂ ಸದಾನಂದ ಗೌಡ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದಕ್ಕೆ ನಂತರದ ಚುನಾವಣೆಯಲ್ಲಿ ಬಿಜೆಪಿ ಸೋಲಬೇಕಾಯಿತು. ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಕೊಟ್ಟ ಭರವಸೆಯಂತೆ ಡಿ.ಕೆ.ಶಿವಕುಮಾರ್ ಅವರು ನಡೆದುಕೊಂಡಿದ್ದಾರೆ ಎಂದು ಶ್ರೀಗಳು ಹೇಳಿದರು.

    ನಂಜಾವಧೂತ ಸ್ವಾಮೀಜಿ ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಹಾಜರಿದ್ದ ಚಂದ್ರಶೇಖರ ಸ್ವಾಮೀಜಿ ಕೂಡ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರ ಪರ ಬ್ಯಾಟ್ ಬೀಸಿದರು.

    https://youtu.be/40QtfNpVLEY