Tag: Nano Narayanappa

  • ನನಸಾಗ್ತಿದೆ ಕೆಜಿಎಫ್ ತಾತನ ಹೀರೋ ಆಗುವ ಕನಸು: ಅವರು ಇರಬೇಕಿತ್ತು ಎಂದ ನಿರ್ದೇಶಕ ಕುಮಾರ್

    ನನಸಾಗ್ತಿದೆ ಕೆಜಿಎಫ್ ತಾತನ ಹೀರೋ ಆಗುವ ಕನಸು: ಅವರು ಇರಬೇಕಿತ್ತು ಎಂದ ನಿರ್ದೇಶಕ ಕುಮಾರ್

    ಕೆಜಿಎಫ್ (KGF) ಸಿನಿಮಾದಲ್ಲಿ ವಯೋವೃದ್ದ ಅಂಧನ ಪಾತ್ರಕ್ಕೆ ಬಣ್ಣ ಹಚ್ಚಿ ಬೆಂಕಿ ಡೈಲಾಗ್ ಬಿಟ್ಟಿದ್ದ ಕೃಷ್ಣೋಜಿ ರಾವ್ (Krishnaji Rao), ಕೆಜಿಎಫ್ ತಾತ ಅಂತಾನೇ ಫೇಮಸ್ ಆಗಿದ್ದು ನಿಮ್ಮೆಲ್ಲರಿಗೂ ಗೊತ್ತೆಯಿದೆ. ಅಂದ್ಹಾಗೇ, ಈ ತಾತನಿಗೆ ಒಂದು ಕನಸಿತ್ತು. ಬಣ್ಣ ಕಳಚುವುದರೊಳಗೆ ನಾನು ಹೀರೋ ಆಗ್ಬೇಕು, ನಾಯಕನಾಗಿ ನಾನು ಕೂಡ ಬೆಳ್ಳಿತೆರೆ ಮೇಲೆ ಮೆರವಣಿಗೆ ಹೊರಡಬೇಕು ಅಂತ ಆಸೆಪಟ್ಟಿದ್ದರು. ಅವರ ಆಸೆಯನ್ನು ನಿರ್ದೇಶಕ ಕುಮಾರ್ ಈಡೇರಿಸಿದರು. ನ್ಯಾನೋ ನಾರಾಯಣಪ್ಪ (Nano Narayanappa) ಚಿತ್ರಕ್ಕೆ ಕೆಜಿಎಫ್ ತಾತನ್ನು ಹೀರೋ ಮಾಡಿದರು. ಸದ್ಯ ಈ ಸಿನಿಮಾ ರಿಲೀಸ್‍ಗೆ ರೆಡಿಯಿದೆ, ಜುಲೈ 07ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸಲಿದೆ. ಆದರೆ, ಈ ಚಿತ್ರದ ಹೀರೋ ಕೆಜಿಎಫ್ ತಾತಾ ಅಲಿಯಾಸ್ ಕೃಷ್ಣೋಜಿ ರಾವ್ ಜೀವಂತವಾಗಿ ಉಳಿದಿಲ್ಲ. ಬಿಗ್‍ಸ್ಕ್ರೀನ್ ಮೇಲೆ ದಿಬ್ಬಣ ಹೊರಡುವ ಗಳಿಗೆಗೆ ಸಾಕ್ಷಿಯಾಗಬೇಕು ಎನ್ನುವ ಕೆಜಿಎಫ್ ತಾತನ ಕನಸು ನನಸಾಗಲಿಲ್ಲ.

    ಕೆಜಿಎಫ್ ತಾತ ನಿಧನರಾಗಿ ಸುಮಾರು ಆರು ತಿಂಗಳು ಕಳೀತಾ ಬಂತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಕೃಷ್ಣೋಜಿ ರಾವ್ ಅವರು ಚಿಕಿತ್ಸೆ ಫಲಿಸದೇ ಉಸಿರು ಚೆಲ್ಲುವಂತಾಯ್ತು. ವೃತ್ತಿಜೀವನದಲ್ಲಿ ಮೊದಲ ಬಾರಿಗೆ ನಾಯಕನಾಗಿ ಬಣ್ಣ ಹಚ್ಚಿದ ಸಿನಿಮಾನ ಸಿಲ್ವರ್‌ ಸ್ಕ್ರೀನ್ ಮೇಲೆ ನೋಡುವ ಸುವರ್ಣಾವಕಾಶ ಮಿಸ್ ಆಯ್ತು. ಆದರೆ, ಸಿನಿಮಾನ ಡಬ್ಬಿಂಗ್ ಟೈಮ್‍ನಲ್ಲಿ ನೋಡಿ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ರಂತೆ. 40 ವರ್ಷಗಳ ಕಾಲ ಚಿತ್ರರಂಗದಲ್ಲಿ ಜೂನಿಯರ್ ಆರ್ಟಿಸ್ಟ್, ಅಸೋಸಿಯೇಟ್, ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದಕ್ಕೂ ಸಾರ್ಥಕವಾಯ್ತು ಎನ್ನುವ ಹೆಮ್ಮೆಯ ಭಾವ ವ್ಯಕ್ತಪಡಿಸಿದ್ರಂತೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಕಮ್ ನಿರ್ಮಾಪಕ ಕುಮಾರ್ (Kumar), ಕೆಜಿಎಫ್ ತಾತನ ಅನುಪಸ್ಥಿತಿಯಲ್ಲಿ ನಮ್ಮ ಸಿನಿಮಾ ರಿಲೀಸ್ ಆಗ್ತಿರುವುದು ನಮಗೂ ಬೇಸರವಿದೆ ಎಂದರು. ಇದನ್ನೂ ಓದಿ:ಡೆವಿಲ್‌ ಕಥೆ ಹೇಳಲು ಸಜ್ಜಾದ ತೆಲುಗಿನ ನಟ ಕಲ್ಯಾಣ್‌ ರಾಮ್‌

    ಸಿನಿಮಾದ ಬಗ್ಗೆ ಮಾತು ಮುಂದುವರೆಸಿದ ನಿರ್ದೇಶಕ ಕುಮಾರ್, ಬರೀ 30 ಲಕ್ಷದಲ್ಲಿ ನ್ಯಾನೋ ನಾರಾಯಣಪ್ಪ ಸಿನಿಮಾ ಮಾಡಿದ್ದೇನೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಹಾಗೂ ಕ್ರಿಟಿಕಲ್ ಕೀರ್ತನೆಗಳು ಕೂಡ ಕಡಿಮೆ ಬಜೆಟ್‍ನಲ್ಲಿ ನಿರ್ಮಾಣಗೊಂಡಿದ್ವು. ಹಾಕಿದ ಬಂಡವಾಳದ ಜೊತೆಗೆ ಲಾಭ ತಂದುಕೊಟ್ಟಿದ್ವು. ಹೀಗಾಗಿ, ನ್ಯಾನೋ ನಾರಾಯಣಪ್ಪನ ಮೇಲೂ ನಂಬಿಕೆಯಿದೆ. ಆಡಿಯೋ ರೈಟ್ಸ್ ಒಳ್ಳೆ ಅಮೌಂಟ್‍ಗೆ ಸೇಲಾಗಿದ್ದು, ಅಮೆಜಾನ್ ಪ್ರೈಮ್‍ಗೆ ಡಿಜಿಟಲ್ ರೈಟ್ಸ್ ಮಾತುಕತೆ ನಡೀತಿದೆ. ವಿಜಯ್ ಸಿನಿಮಾಸ್ ಅವರು ಡಿಸ್ಟ್ರಿಬ್ಯೂಷನ್ ಮಾಡ್ತಿದ್ದಾರೆ ಎಂದು ಹೇಳಿಕೊಂಡರು. ತಮ್ಮ ನಿರ್ದೇಶನದ ಮೂರು ಸಿನಿಮಾಗಳಲ್ಲೂ ನ್ಯಾನೋ ಕಾರು ಬಳಕೆ ಮಾಡಿರುವ ಕುರಿತು ಸೆಂಟಿಮೆಂಟ್ ಬಿಚ್ಚಿಟ್ಟರು.

    ಅಂದ್ಹಾಗೆ, ನ್ಯಾನೋ ನಾರಾಯಣಪ್ಪ ಕಾಮಿಡಿ ಡ್ರಾಮಾ ಒಳಗೊಂಡಿರುವ ಚಿತ್ರ. ಇಲ್ಲಿ 70ರ ದಶಕದ ಲವ್‍ಸ್ಟೋರಿಯಿದೆ. ಪ್ರೀತಿಯ ಜೊತೆಗೆ ಜೀವನದ ಪಾಠವೂ ಅಡಕವಾಗಿದೆ. ಒಂದಿಡೀ ಕುಟುಂಬ ಥಿಯೇಟರ್‍ಗೆ ಬಂದು ಕಣ್ಣರಳಿಸಿ ನೋಡುವಂತಹ ಸಿನಿಮಾ ಇದು. ಇಲ್ಲಿ ಕೆಜಿಎಫ್ ತಾತ ಜೂನಿಯರ್ ಆರ್ಟಿಸ್ಟ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೌಬಾಯ್ ಗೆಟಪ್‍ನಲ್ಲೂ ಖದರ್ ತೋರಿಸಿದ್ದಾರೆ. ಇಳಿವಯಸ್ಸಲ್ಲೂ ಕುಗ್ಗದ ಉತ್ಸಾಹ, ಹುಮ್ಮಸ್ಸು ಕೃಷ್ಣೋಜಿ ರಾವ್‍ರನ್ನ ಹೀರೋ ಮಾಡಿದೆ. 80ರ ದಶಕದಲ್ಲಿ ಕಂಡ ಕನಸು ಕೊನೆಗೂ ಈಡೇರಿದೆ. ಪ್ರಶಾಂತ್ ಸಿದ್ದಿ, ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಅಕ್ಷತಾ ಕುಕ್ಕಿ, ಅಪೂರ್ವ, ಕಾಮಿಡಿ ಕಿಲಾಡಿಗಳು ಸಂತು, ಅನಂತ್ ಪದ್ಮನಾಭ್, ಕಿಂಗ್ ಮೋಹನ್ ಸೇರಿದಂತೆ ಹಲವು ಕಲಾವಿದರ ದಂಡು ಚಿತ್ರದಲ್ಲಿದ್ದು, ನ್ಯಾನೋ ನಾರಾಯಣಪ್ಪನಿಗೆ ಬಲ ಬಂದಂತಾಗಿದೆ.

    ನ್ಯಾನೋ ನಾರಾಯಣಪ್ಪ ಟೈಟಲ್ಲೇ ಹೇಳುವಂತೆ ನ್ಯಾನೋ ಕಾರು ಈ ಚಿತ್ರದ ಹೈಲೆಟ್. ಎರಡು ರಿಯಲ್ ಇನ್ಸಿಡೆಂಟ್‍ಗಳನ್ನ ಸಿನಿಮಾರೂಪಕವಾಗಿಸಿರುವುದು ಮತ್ತೊಂದು ಹೈಲೆಟ್. ಹಾಸ್ಯದ ಜೊತೆಗೆ ಭಾವನೆಗಳನ್ನು ಬ್ಲೆಂಡ್ ಮಾಡಿ ಪ್ರೇಕ್ಷಕರನ್ನು ಹಿಡಿದು ಕೂರಿಸುವ ನಿರ್ದೇಶಕ ಕುಮಾರ್, ಈ ಭಾರಿಯೂ ಅಂತಹದ್ದೇ ಪ್ರಯೋಗ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಿದ್ದು, ಶಿವಶಂಕರ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಆಕಾಶ್ ಪರ್ವ ಸಂಗೀತ, ದೀಪು, ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದ್ದು, ಕೇಸರಿ ಫಿಲ್ಮಂ ಕ್ಯಾಪ್ಚರ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಕುಮಾರ್ ಅವ್ರ ಬಂಡವಾಳದಲ್ಲಿ ಸಿನಿಮಾ ಅದ್ದೂರಿಯಾಗಿ ಮೂಡಿಬಂದಿದೆ. ಇದೇ ಜುಲೈ 07ರಂದು ರಾಜ್ಯಾದ್ಯಂತ ನ್ಯಾನೋ ನಾರಾಯಣಪ್ಪನ ದರ್ಶನವಾಗಲಿದೆ. ಮಿಸ್ ಮಾಡದೇ ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಎನ್ನುತ್ತಿದೆ ಚಿತ್ರತಂಡ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಜಿಎಫ್ ತಾತ ಕೊನೆ ಸಿನಿಮಾ: ಜುಲೈ 07ಕ್ಕೆ ನ್ಯಾನೋ ನಾರಾಯಣಪ್ಪ ತೆರೆಗೆ

    ಕೆಜಿಎಫ್ ತಾತ ಕೊನೆ ಸಿನಿಮಾ: ಜುಲೈ 07ಕ್ಕೆ ನ್ಯಾನೋ ನಾರಾಯಣಪ್ಪ ತೆರೆಗೆ

    ಕೆಜಿಎಫ್ ತಾತ ಅಂತಾನೇ ಫೇಮಸ್ ಆಗಿದ್ದ ಕೃಷ್ಣೋಜಿ ರಾವ್ (Krishnaji Rao) ಈಗ ನಮ್ಮ ನಡುವೆ ಇಲ್ಲ. ಆದರೆ, ಅವರು ಕೊಟ್ಟು ಹೋದ ಕೊನೆಯ ಸಿನಿಮಾ ಬೆಳ್ಳಿ ಪರದೆ ಮೇಲೆ ಬರಲು ರೆಡಿಯಾಗಿದೆ. ಇದೇ ಜುಲೈ 07ರಂದು ಕೆಜಿಎಫ್ ತಾತ ನಾಯಕ ನಟನಾಗಿ ಅಭಿನಯಿಸಿರುವ, ಕುಮಾರ್ (Kumar) ಅವರ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಮೂಡಿಬಂದಿರುವ ‘ನ್ಯಾನೋ ನಾರಾಯಣಪ್ಪ’ (Nano Narayanappa) ಚಿತ್ರ ತೆರೆಗೆ ಬರಲಿದೆ.

    ನ್ಯಾನೋ ನಾರಾಯಣಪ್ಪ ಎರಡು ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಮಾಡಿರುವಂತಹ ಸಿನಿಮಾ.  ಯೂತ್ ಕಮರ್ಷಿಯಲ್ ಗಿಂತ ಕಂಟೆಂಟ್ ಓರಿಯೆಂಟೆಡ್ ಸಿನಿಮಾ ಕೊಡಬೇಕು ಅಂತ ನಿರ್ದೇಶಕ ಕುಮಾರ್, ಕಾಮಿಡಿ ಪ್ಲಸ್ ಎಮೋಷನ್ ಎಲಿಮೆಂಟ್ಸ್ ನ ಬ್ಲೆಂಡ್ ಮಾಡಿ ಒಂದು ಸಂದೇಶಭರಿತ ಚಿತ್ರ ತೆಗೆದಿದ್ದಾರೆ.

    ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಹೊತ್ತ ಕುಮಾರ್, ಯಂಗ್ ಜನರೇಷನ್ ಗೆ ಮಾದರಿ ಆಗುವಂತೆ ಸಿನಿಮಾ ಮಾಡಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲೂ ನ್ಯಾನೋ ನಾರಾಯಣಪ್ಪನ ಸಿದ್ದಪಡಿಸಿದ್ದಾರೆ. ಅಂದಹಾಗೆ ನಿರ್ದೇಶಕ ಕುಮಾರ್ ತಮ್ಮ ಸಿನಿಮಾಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡ್ತಾನೆ ಇರ್ತಾರೆ. ಡೆಬ್ಯೂ ಚಿತ್ರ ಕೆಮಿಸ್ಟ್ರಿ ಆಫ್ ಕರಿಯಪ್ಪದಲ್ಲೂ ಡಿವೋರ್ಸ್ ನಿಂದ ಜನ ಹೇಗೆ ತಮ್ಮ ಜೀವನ ಹಾಳು ಮಾಡಿಕೊಳ್ತಾರೆ ಅನ್ನೋದನ್ನ ತೋರಿಸಿದ್ದರು.  ಇದನ್ನೂ ಓದಿ:3ನೇ ಪತ್ನಿಯಿಂದಲೂ ದೂರಾವಾದ್ರಾ ನಟ ಪವನ್ ಕಲ್ಯಾಣ್?

    ಕ್ರಿಟಿಕಲ್ ಕೀರ್ತನೆಗಳು ಚಿತ್ರದಲ್ಲಿ ಐಪಿಎಲ್ ಬೆಟ್ಟಿಂಗ್ ನಿಂದಾಗಿ ಜನಸಾಮಾನ್ಯರ ಮೇಲೆ ಆಗುವ ಪರಿಣಾಮದ ಬಗ್ಗೆ ಮಾತನಾಡಿದ್ದರು. ಈಗ ನ್ಯಾನೋ ನಾರಾಯಣಪ್ಪ ಚಿತ್ರದಲ್ಲಿ ಬೇಗ ದುಡ್ಡು ಮಾಡುವ ಸಲುವಾಗಿ ಯಾವ್ ರೀತಿ ಸ್ಕ್ಯಾಮ್ ಮಾಡ್ತಾರೆ ಅನ್ನೋದನ್ನ ತಿಳಿಸಲಿಕ್ಕೆ ಹೊರಟಿದ್ದಾರೆ. ಕಾಮಿಡಿ ಜೊತೆಗೆ ಕಾಡುವ ಕಥೆಯನ್ನಿಟ್ಟು ಕುಟುಂಬ ಸಮೇತ ಥಿಯೇಟರ್ ಗೆ ಬಂದು ನೋಡುವಂತಹ ಸಿನಿಮಾ ಮಾಡಿದ್ದಾರೆ

    ಈ‌ ಚಿತ್ರದಲ್ಲಿ ಕೆಜಿಎಫ್ ತಾತ ಜೂನಿಯರ್ ಆರ್ಟಿಸ್ಟ್ ಪಾತ್ರ ಮಾಡಿದ್ದಾರೆ. ಕೌಬಾಯ್ ಗೆಟಪ್‍ನಲ್ಲೂ ಖದರ್ ತೋರಿಸಿದ್ದಾರೆ. ಇಳಿವಯಸ್ಸಲ್ಲೂ ಕುಗ್ಗದ ಉತ್ಸಾಹ, ಹುಮ್ಮಸ್ಸು ಕೃಷ್ಣೋಜಿ ರಾವ್‍ರನ್ನ ಹೀರೋ ಮಾಡಿದೆ. 80ರ ದಶಕದಲ್ಲಿ ಕಂಡ ಕನಸು ಕೊನೆಗೂ ಈಡೇರಿದೆ. ಪ್ರಶಾಂತ್ ಸಿದ್ದಿ (Prashant Siddi), ಕಾಕ್ರೋಚ್ ಸುಧಿ (Cockroach Sudhi), ಗಿರೀಶ್ ಶಿವಣ್ಣ, ಅಕ್ಷತಾ ಕುಕ್ಕಿ, ಅಪೂರ್ವ, ಕಾಮಿಡಿ ಕಿಲಾಡಿಗಳು ಸಂತು, ಅನಂತ್ ಪದ್ಮನಾಭ್, ಕಿಂಗ್ ಮೋಹನ್ ಸೇರಿದಂತೆ ಹಲವರು ಪಾತ್ರವರ್ಗದಲ್ಲಿದ್ದಾರೆ.

     

    ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಿದ್ದು, ಶಿವಶಂಕರ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಆಕಾಶ್ ಪರ್ವ ಸಂಗೀತ, ದೀಪು, ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದ್ದು, ಕೇಸರಿ ಫಿಲ್ಮಂ ಕ್ಯಾಪ್ಚರ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಕುಮಾರ್ ಅವ್ರ ಬಂಡವಾಳದಲ್ಲಿ ಸಿನಿಮಾ ಅದ್ದೂರಿಯಾಗಿ ಮೂಡಿಬಂದಿದೆ. ಇದೇ ಜುಲೈ 07ರಂದು ರಾಜ್ಯಾದ್ಯಂತ ನ್ಯಾನೋ ನಾರಾಯಣಪ್ಪನ ದರ್ಶನವಾಗಲಿದೆ. ಮಿಸ್ ಮಾಡದೇ ಥಿಯೇಟರ್ ಗೆ ಬಂದು‌ ಕೆಜಿಎಫ್ ತಾತನ ಕೊನೆಯ ಸಿನಿಮಾ ನೋಡಿ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಜಿಎಫ್ ತಾತನ ಕೊನೆಯ ಚಿತ್ರ ‘ನ್ಯಾನೋ ನಾರಾಯಣಪ್ಪ’ಗೆ ಸೆನ್ಸಾರ್ ಅಸ್ತು

    ಕೆಜಿಎಫ್ ತಾತನ ಕೊನೆಯ ಚಿತ್ರ ‘ನ್ಯಾನೋ ನಾರಾಯಣಪ್ಪ’ಗೆ ಸೆನ್ಸಾರ್ ಅಸ್ತು

    ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಕುಮಾರ್. ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಕೆಜಿಎಫ್ ತಾತಾ ಎಂದೇ ಖ್ಯಾತಿ ಗಳಿಸಿದ ಕೃಷ್ಣಾಜಿ ರಾವ್ ಲೀಡ್ ರೋಲ್ ನಲ್ಲಿ ನಟಿಸಿರುವ ಈ ಚಿತ್ರದ ಟ್ರೇಲರ್ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದ್ದು, ಸಿನಿಮಾ ಪ್ರೇಕ್ಷಕರೆದುರು ಬರಲು ಸಜ್ಜಾಗಿದೆ.

    ಬಿಡುಗಡೆಗೆ ಸಕಲ ರೀತಿಯಲ್ಲೂ ಸಜ್ಜಾಗಿರುವ ‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ಬೇಸರದ ಸಂಗತಿಯೊಂದು ಕಾಡ್ತಿದೆ. ಸಂಪೂರ್ಣ ಚಿತ್ರದ ಜೀವಾಳವೇ ಆಗಿದ್ದ ಕೆಜಿಎಫ್ ತಾತಾ ಖ್ಯಾತಿಯ ಕೃಷ್ಣಾಜಿ ರಾವ್ ಇತ್ತೀಚೆಗೆ ವಯೋ ಸಹಜ ಕಾಯಿಲೆಯಿಂದ ಮರಣ ಹೊಂದಿದ್ರು. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರಿಲ್ಲ ಎಂಬ ನೋವು ಇಡೀ ಚಿತ್ರತಂಡವನ್ನು ಕಾಡ್ತಿದೆ. ಕೆಜಿಎಫ್ ನಂತರ ಮುಖ್ಯ ಪಾತ್ರಧಾರಿಯಾಗಿ ನಟಿಸಿದ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ತುಂಬಾ  ಲವಲವಿಕೆಯಿಂದ  ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ರು. ಚಿತ್ರದಲ್ಲಿ ಅವರ ನಟನೆ ತುಂಬಾ ಅದ್ಭುತವಾಗಿ ಮೂಡಿ ಬಂದಿದೆ. ಪ್ರತಿಬಾರಿ ಕರೆ ಮಾಡಿದಾಗಲು ಸಿನಿಮಾ ಯಾವಾಗ ಬಿಡುಗಡೆಯಾಗುತ್ತೆ ಎಂದು ಕೇಳುತ್ತಿದ್ರು ಆದ್ರೆ ಇಂದು ಅವರು ನಮ್ಮೊಂದಿಗಿಲ್ಲ ಎಂದು ನಿರ್ದೇಶಕ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಡುರಾತ್ರಿಯಲ್ಲಿ ಎಲಿಮಿನೇಷನ್: ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಔಟ್

    ಸೆನ್ಸಾರ್ ನಲ್ಲಿ ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿರುವ ‘ನ್ಯಾನೋ ನಾರಾಯಣಪ್ಪ’ ಚಿತ್ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ನಿರ್ದೇಶಕ ಕುಮಾರ್ ಸಿನಿಮಾ ಅಂದ್ರೆ ಅಲ್ಲಿ ಕಾಮಿಡಿಗೆ ಮೊದಲ ಆದ್ಯತೆ ಇರುತ್ತೆ ಇಲ್ಲೂ ಕೂಡ ಅದೇ ಸೂತ್ರವನ್ನು ಫಾಲೋ ಮಾಡಿದ್ದು ಅದರೊಂದಿಗೆ ಒಂದಿಷ್ಟು ಭಾವನಾತ್ಮಕ ಅಂಶಗಳು ಈ ಚಿತ್ರದಲ್ಲಿದೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

    ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿಯನ್ನು ನಿರ್ದೇಶಕ ಕುಮಾರ್ ನಿರ್ವಹಿಸಿದ್ದು, ಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಫೆಬ್ರವರಿಯಲ್ಲಿ ಪ್ರೇಕ್ಷಕರನ್ನು ರಂಜಿಸಲು ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಬರಲಿದ್ದು ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

  • ಕೆಜಿಎಫ್ ತಾತಾ ನಟನೆಯ ‘ನ್ಯಾನೋ ನಾರಾಯಣಪ್ಪ’ ಟ್ರೇಲರ್ ರಿಲೀಸ್

    ಕೆಜಿಎಫ್ ತಾತಾ ನಟನೆಯ ‘ನ್ಯಾನೋ ನಾರಾಯಣಪ್ಪ’ ಟ್ರೇಲರ್ ರಿಲೀಸ್

    ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ (Nano Narayanappa) ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ಪ್ರೇಕ್ಷಕರೆದುರು ತೆರೆದುಕೊಂಡಿದೆ. ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರನ ಮತ್ತೊಂದು ಸಿನಿಮಾ: ಪ್ರೇಮ್ ಶಿಷ್ಯನೇ ನಿರ್ದೇಶಕ

    ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ (Kumar) ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ (Krishnaji Rao) ನಟಿಸಿದ್ದು. ಫಸ್ಟ್ ಲುಕ್ ಪೋಸ್ಟರ್, ಟೈಟಲ್ ಮೂಲಕ ಗಮನ ಸೆಳೆದ ಚಿತ್ರತಂಡ ಈಗ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೆಜಿಎಫ್ ನಲ್ಲಿ ಪುಟ್ಟ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡ ಕೃಷ್ಣಾಜಿ ರಾವ್ ಈ ಚಿತ್ರದಲ್ಲಿ ಇಡೀ ಸಿನಿಮಾ ಆವರಿಸಿಕೊಂಡಿದ್ದಾರೆ.  ಕುಮಾರ್ ಹಿಂದಿನ ಸಿನಿಮಾಗಳಂತೆ ಕಾಮಿಡಿ ಈ ಚಿತ್ರದ ಮೂಲ ಮಂತ್ರವಾಗಿದ್ದು ಭಾವನಾತ್ಮಕ ಅಂಶಗಳು ಸಿನಿಮಾದಲ್ಲಿವೆ ಅನ್ನೋದು ಟ್ರೇಲರ್ (trailer) ನೋಡಿದ್ರೆ ಗೊತ್ತಾಗುತ್ತೆ.

    ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ ಕುಮಾರ್. ಕಾಮಿಡಿ ಎಮೋಷನಲ್ ಸಿನಿಮಾ ಇದಾಗಿದ್ದು, ಕುಟುಂಬ ಸಮೇತ ನೋಡಿ ಎಂಜಾಯ್ ಮಾಡಬಹುದಾದ ಸಬ್ಜೆಕ್ಟ್ ಚಿತ್ರದಲ್ಲಿದೆ. ಶಿವಶಂಕರ ಕ್ಯಾಮೆರಾ ನಿರ್ದೇಶನ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಕಾಕ್ರೋಚ್ ಸುಧಿ,  ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಸೇರಿದಂತೆ ಪ್ರತಿಭಾನ್ವಿತ ಕಲಾವಿದರ ಬಳಗ ಚಿತ್ರದಲ್ಲಿದೆ.

    Live Tv
    [brid partner=56869869 player=32851 video=960834 autoplay=true]

  • ಕೆಜಿಎಫ್ ತಾತ ಕೃಷ್ಣ ಜಿ ರಾವ್ ಇದೀಗ ‘ನ್ಯಾನೋ ನಾರಾಯಣಪ್ಪ’

    ಕೆಜಿಎಫ್ ತಾತ ಕೃಷ್ಣ ಜಿ ರಾವ್ ಇದೀಗ ‘ನ್ಯಾನೋ ನಾರಾಯಣಪ್ಪ’

    ಕೆ.ಜಿ.ಎಫ್ ಸರಣಿ ಸಿನಿಮಾದಲ್ಲಿ ದೃಷ್ಟಿಹೀನಾ ಮುದುಕನ ಪಾತ್ರದಲ್ಲಿ ಕಾಣಿಸಿಕೊಂಡು ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಇದೀಗ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಕೆಜಿಎಫ್ ತಾತ ಅಂತಾನೇ ಖ್ಯಾತಿ ಪಡೆದಿರುವ ಕೃಷ್ಣ ಜಿ ರಾವ್ ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ನ್ಯಾನೋ ನಾರಾಯಣಪ್ಪ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ.

    ಹತ್ತು ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದು, ನ್ಯಾನೋ ಕಾರು ಕೂಡ ಹೈಲೇಟ್ ಆಗಿದ್ದು, ಒಂದಷ್ಟು ಪ್ರತಿಭಾನ್ವಿತ ಕಲಾವಿದರು ಪೋಸ್ಟರ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಆನಂತು, ಅಪೂರ್ವ ಸೇರಿದಂತೆ ಹಲವರು ಸಿನಿಮಾದಲ್ಲಿ ನಟಿಸ್ತಿದ್ದಾರೆ. ಇದನ್ನೂ ಓದಿ:ಅಂಡರ್ ವರ್ಲ್ಡ್ ನಿಂದಾಗಿ ಬಾಲಿವುಡ್ ನಟಿ ಸೋನಾಲಿ ಬೇಂದ್ರೆಗೆ ಹಿನ್ನೆಡೆ

    ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ಉಣಬಡಿಸಿದ್ದ ನಿರ್ದೇಶಕ ಕುಮಾರ್ ಕ್ರಿಟಿಕಲ್ ಕೀರ್ತನೆಗಳು ಸಿನಿಮಾದಲ್ಲಿ ಬೆಟ್ಟಿಂಗ್ ಧಂದೆಯ ಕರಾಳತೆಯನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದರು. ಇದೀಗ ನ್ಯಾನೋ ನಾರಾಯಣಪ್ಪ ಸಿನಿಮಾದ ಮೂಲಕ ಮತ್ತೊಮ್ಮೆ ಚಿತ್ರಪ್ರೇಮಿಗಳನ್ನು ಎಂಟರ್ ಟೈನ್ ಮಾಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ಕುಮಾರ್ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಬಂಡವಾಳ ಕೂಡ ಹಾಕಿದ್ದಾರೆ. ಇದೊಂದು  ಕಾಮಿಡಿ ಎಮೋಷನಲ್ ಡ್ರಾಮ್ ಸಿನಿಮಾವಾಗಿದ್ದು, ತುಂಬ ಕಾಡುವ ಕಥೆ, ಮನೆ ಮಂದಿಯಲ್ಲಾ ಕುಳಿತು ನೋಡುವ ಸಿನಿಮಾ ಅಂತಾರೇ ಕುಮಾರ್.

    ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಆಗಸ್ಟ್ ನಲ್ಲಿ ಸಿನಿಮಾವನ್ನು ತೆರೆಗೆ ಯೋಜನೆ ಹಾಕಿಕೊಂಡಿದೆ. ಕುಮಾರ್ ನಿರ್ಮಾಣದ ನ್ಯಾನೋ‌ ನಾರಾಯಣಪ್ಪ ಸಿನಿಮಾಗೆ ರಾಜಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ಸಿದ್ದು ಸಂಕಲನವಿದೆ. ಸದ್ಯ ಫಸ್ಟ್ ಲುಕ್ ರಿವೀಲ್ ಮಾಡಿರುವ ಚಿತ್ರತಂಡ ಶೀರ್ಘದಲ್ಲಿ ಟೀಸರ್ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.

    Live Tv