Tag: Narayanapura Dam

  • `ಮಹಾ’ ಮಳೆಯಬ್ಬರಕ್ಕೆ ಅಪಾಯ ಮಟ್ಟ ಮೀರಿದ ಕೃಷ್ಣೆ – ಆಲಮಟ್ಟಿ ಜಲಾಶಯಕ್ಕೆ 2.45 ಲಕ್ಷ ಕ್ಯೂಸೆಕ್ ಒಳಹರಿವು

    `ಮಹಾ’ ಮಳೆಯಬ್ಬರಕ್ಕೆ ಅಪಾಯ ಮಟ್ಟ ಮೀರಿದ ಕೃಷ್ಣೆ – ಆಲಮಟ್ಟಿ ಜಲಾಶಯಕ್ಕೆ 2.45 ಲಕ್ಷ ಕ್ಯೂಸೆಕ್ ಒಳಹರಿವು

    – 36 ಗೇಟ್‌ಗಳಿಂದ ನಾರಾಯಣಪುರ ಡ್ಯಾಂಗೆ 2.50 ಲಕ್ಷ ಕ್ಯೂಸೆಕ್ ರಿಲೀಸ್

    ವಿಜಯಪುರ: ಮಹಾರಾಷ್ಟ್ರದಲ್ಲಿ  ಮಳೆಯಬ್ಬರ ಜೋರಾಗಿರುವ ಹಿನ್ನೆಲೆ ಕೃಷ್ಣಾ ನದಿ (Krishna River) ಅಪಾಯಮಟ್ಟ ಮೀರಿ ಹರಿಯುತ್ತಿದೆ.

    ಧಾರಾಕಾರ ಮಳೆಯಾದ ಹಿನ್ನೆಲೆ ವಿಜಯಪುರ (Vijayapura) ಜಿಲ್ಲೆಯ ನಿಡಗುಂದಿಯಲ್ಲಿರುವ ಆಲಮಟ್ಟಿ ಜಲಾಶಯಕ್ಕೆ (Alamatti Dam) ಒಳಹರಿವು ಹೆಚ್ಚಾಗಿದ್ದು, 2,45,000 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ 26 ಗೇಟ್‌ಗಳ ಮೂಲಕ ನಾರಾಯಣಪುರ ಜಲಾಶಯಕ್ಕೆ (Narayanapur Dam) 2,50,000 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.ಇದನ್ನೂ ಓದಿ: ಆ.25 ರಿಂದ ಅಮೆರಿಕಗೆ ಅಂಚೆ ಸೇವೆ ಸ್ಥಗಿತಗೊಳಿಸಿದ ಭಾರತ

    ಇನ್ನೂ ನಾರಾಯಣಪುರ ಜಲಾಶಯದಿಂದಲೂ (Narayanapur Dam) ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರನ್ನ ಹರಿಬಿಡಲಾಗುತ್ತಿದ್ದು, ರಾಯಚೂರಿನ ದೇವದುರ್ಗದ ಐತಿಹಾಸಿಕ ಕೊಪ್ಪರ ಲಕ್ಷ್ಮೀ ನರಸಿಂಹ ದೇವಾಲಯ ಸಂಪೂರ್ಣ ಜಲಾವೃತವಾಗಿದೆ.

    ನೂರಾರು ವರ್ಷಗಳ ಇತಿಹಾಸವಿರುವ ಲಕ್ಷ್ಮೀ ನರಸಿಂಹ ದೇವಾಲಯ ಸುತ್ತಲೂ ನೀರು ಆವರಿಸಿದೆ. ದೇವಾಲಯ ಬಳಿ ರಭಸವಾಗಿ ನೀರು ಹರಿಯುತ್ತಿದ್ದು, ಭಕ್ತರು ದೇವಾಲಯ ಬಳಿ ಸುಳಿಯದಂತಾಗಿದೆ. ಅರ್ಚಕರು ಪೂಜೆ ಮಾಡಲು ಹರಸಾಹಸ ಪಡುತ್ತಿದ್ದಾರೆ. ಕೃಷ್ಣಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದರೆ ದೇವಾಲಯ ಮುಳುಗಡೆಯಾಗಲಿದೆ. ಈಗಾಗಲೇ ದೇವದುರ್ಗ ಗಡ್ಡೆಗೂಳಿ ಬಸವೇಶ್ವರ ದೇವಾಲಯ ಮುಳುಗಡೆಯಾಗಿದೆ.ಇದನ್ನೂ ಓದಿ: ಶ್ರೀಲಂಕಾದ ಬೀಚ್‌ನಲ್ಲಿ ಗೋಲ್ಡ್‌ ಫಿಶ್‌ನಂತೆ ಕಂಗೊಳಿಸಿದ ಸೋನು!

  • ನಾರಾಯಣಪುರ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

    ನಾರಾಯಣಪುರ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

    ರಾಯಚೂರು: ನಾರಾಯಣಪುರ ಜಲಾಶಯದಿಂದ (Narayanapura Dam) ಕೃಷ್ಣಾ ನದಿಗೆ (Krishna River) ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ ಜಾಗೃತರಾಗಿರುವಂತೆ ನದಿ ಪಾತ್ರದ ಗ್ರಾಮಗಳ ಜನರಿಗೆ ರಾಯಚೂರು (Raichur) ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

    ಜನ ಜಾನುವಾರು ನದಿಪಾತ್ರಕ್ಕೆ ತೆರಳದಂತೆ ಸೂಚಿಸಿದೆ. ಪ್ರವಾಹ ಪರಿಸ್ಥಿತಿ ಉಂಟಾದರೆ ಎದುರಿಸಲು ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಜಲಾಶಯದ 25 ಗೇಟ್‌ಗಳ ಮೂಲಕ 1,45,750 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1,40,000 ಕ್ಯೂಸೆಕ್ ಒಳಹರಿವು ಇದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ವಿಚಾರದಲ್ಲಿ ಸರ್ಕಾರದ ಎಚ್ಚರಿಕೆ ಹೆಜ್ಜೆ

    ಶೇಕಡಾ 85.90 ರಷ್ಟು ಜಲಾಶಯ ಭರ್ತಿಯಾಗಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 28.615 ಟಿಎಂಸಿ ನೀರು ಸಂಗ್ರಹವಾಗಿದ್ದು, ಒಳ ಹರಿವು ಹೆಚ್ಚಾದ್ರೆ ನದಿಗೆ ಇನ್ನೂ ಹೆಚ್ಚು ಪ್ರಮಾಣದ ನೀರು ಬಿಡುವ ಸಾಧ್ಯತೆಯಿದೆ. ಇದನ್ನೂ ಓದಿ: ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ 14 ಕೋಟಿ ಮೌಲ್ಯದ ಗಾಂಜಾ ಸೀಜ್ – ಮಹಿಳೆ ಅರೆಸ್ಟ್

  • ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ರಾಯಚೂರು: ಪಶ್ಚಿಮಘಟ್ಟ ಹಾಗು ಕೃಷ್ಣಾ ನದಿ (Krishna River) ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ರಾಯಚೂರಿನಲ್ಲಿ (Raichur) ಕೃಷ್ಣೇ ಈಗ ಮೈದುಂಬಿ ಹರಿಯುತ್ತಿದ್ದಾಳೆ. ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 1,06,085 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಗ್ರಾಮಗಳಲ್ಲಿ ಈಗಲೇ ಪ್ರವಾಹದ ಭೀತಿ ಆರಂಭವಾಗಿದೆ.

    ಜಲಾಶಯದ 30 ಗೇಟ್‌ಗಳ ಮೂಲಕ ನೀರು ಹೊರಬಿಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1 ಲಕ್ಷ 10 ಸಾವಿರ ಕ್ಯುಸೆಕ್ ಒಳಹರಿವು ಇದೆ. ಇನ್ನೂ ಹೆಚ್ಚಳವಾಗುವ ಸಾಧ್ಯತೆಯಿದೆ. 492.25 ಮೀಟರ್ ಸಾಮರ್ಥ್ಯದ ಜಲಾಶಯದಲ್ಲಿ 490.72 ಮೀಟರ್ ನೀರು ಸಂಗ್ರಹವಾಗಿದೆ. ಜಲಾಶಯ ಒಟ್ಟು 33.313 ಟಿಎಂಸಿ ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ ಜಲಾಶಯದಲ್ಲಿ 26.74 ಟಿಎಂಸಿ ನೀರು ಸಂಗ್ರಹವಿದೆ. ಇದನ್ನೂ ಓದಿ: ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡುವುದಿಲ್ಲ: ಡಿಕೆಶಿ

    ಜಲಾಶಯಕ್ಕೆ ಒಳಹರಿವು ಹೆಚ್ಚಾದಂತೆ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಬಿಡುವ ಸಾಧ್ಯತೆ ಹಿನ್ನೆಲೆ ಜನ ಜಾನುವಾರು ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಮನ್ ಕಿ ಬಾತ್‌ನಲ್ಲಿ ಕಲಬುರಗಿ ರೊಟ್ಟಿಗೆ ಪ್ರಧಾನಿ ಮೋದಿ ಪ್ರಶಂಸೆ

  • ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

    ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

    ರಾಯಚೂರು: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ನಾರಾಯಣಪುರ ಜಲಾಶಯಕ್ಕೆ (Narayanapura Dam) ಒಳಹರಿವು ಹೆಚ್ಚಳವಾಗಿದ್ದು, ಜಲಾಶಯದಿಂದ ಕೃಷ್ಣಾ ನದಿಗೆ (Krishna River) ಹಂತ ಹಂತವಾಗಿ ನೀರು ಬಿಡುಗಡೆ ಮಾಡಲಾಗುತ್ತಿದೆ.

    ಈ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ನದಿ ಪಾತ್ರದಲ್ಲಿ ಅಲರ್ಟ್ ಘೋಷಿಸಲಾಗಿದೆ. ನದಿ ಪಾತ್ರಕ್ಕೆ ಯಾರೂ ತೆರಳದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ. ಸದ್ಯ ಜಲಾಶಯದಿಂದ 29,226 ಕ್ಯೂಸೆಕ್‌ನಷ್ಟು ನೀರನ್ನು 7 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ನಾರಾಯಣಪುರ ಜಲಾಶಯಕ್ಕೆ 30,000 ಕ್ಯೂಸೆಕ್ ಒಳಹರಿವು ಇದ್ದು, 85.41% ರಷ್ಟು ಭರ್ತಿಯಾಗಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

    ಗರಿಷ್ಠ ಮಟ್ಟ 492.25 ಮೀಟರ್‌ನಲ್ಲಿ 491.15 ಮೀಟರ್ ತಲುಪಿದೆ. 33.313 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 28.45 ಟಿಎಂಸಿ ನೀರು ಸಂಗ್ರಹವಾಗಿದೆ. ಒಳಹರಿವು ಹೆಚ್ಚಾದಂತೆ ಹೆಚ್ಚು ಪ್ರಮಾಣದ ನೀರು ಕೃಷ್ಣಾ ನದಿಗೆ ಹರಿಸುವ ಸಾಧ್ಯತೆ ಹಿನ್ನೆಲೆ ರಾಯಚೂರು ಜಿಲ್ಲಾಡಳಿತ ಜನ ಜಾನುವಾರುಗಳೊಂದಿಗೆ ನದಿ ಬಳಿ ಹೋಗದಂತೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

  • ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು – ರೈತರು ಕಿಡಿ

    ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು – ರೈತರು ಕಿಡಿ

    – ಬೆಂಗಳೂರು ಪಾದಯಾತ್ರೆ ಹೋರಾಟಕ್ಕೆ ಸಜ್ಜು

    ಯಾದಗಿರಿ: ಬಸವಸಾಗರ ಜಲಾಶಯ (Basavasagar Dam) ನಾಲ್ಕು ಜಿಲ್ಲೆಯ ಜನರ ಜೀವನಾಡಿಯಾಗಿದೆ. ಅದೇ ಜಲಾಶಯ ನೀರು ಬಳಕೆ ಮಾಡಿಕೊಂಡು ನಾಲ್ಕು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯನ್ನು ಬೆಳೆಯಲಾಗುತ್ತದೆ. ಅದೇ ಜಲಾಶಯ ನೀರನ್ನು ಕುಡಿಯೋಕು ಸಹ ಬಳಕೆ ಮಾಡಿಕೊಳ್ಳಲಾಗುತ್ತದೆ. ಆದರೆ ಸರ್ಕಾರದ ಯಾವುದೇ ಆದೇಶವಿಲ್ಲದೆ ಅಧಿಕಾರಿಗಳು ಪಕ್ಕದ ತೆಲಂಗಾಣ ರಾಜ್ಯಕ್ಕೆ ನೀರು ಹರಿಬಿಟ್ಟಿದ್ದಾರೆ. ಇದಕ್ಕೆ ವಿರೋಧ ವ್ಯಕ್ತ ಪಡಿಸಿದ ಬಿಜೆಪಿ, ಅಧಿಕಾರಿಗಳ ವಿರುದ್ಧ ಕೆಂಡಕಾರಿದೆ.

    ಯಾದಗಿರಿ (Yadgiri) ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ (Narayanapura) ಬಳಿಯ ಬಸವಸಾಗರ ಜಲಾಶಯದಿಂದ ತೆಲಂಗಾಣಕ್ಕೆ (Telangana) ನೀರು ಬಿಡಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಜೋರಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಬಸವಸಾಗರ ಡ್ಯಾಂನಿಂದ ತೆಲಂಗಾಣಕ್ಕೆ ಕೃಷ್ಣನದಿ ಮೂಲಕ ನೀರು ಹರಿಬಿಡಲಾಗಿದೆ. ರಾತ್ರಿ ವೇಳೆ ಸುಮಾರು 1.24 ಟಿಎಂಸಿಯಷ್ಟು ನೀರನ್ನ ಹರಿಸಲಾಗಿದೆ. ಇದನ್ನೂ ಓದಿ: ಹೈವೇಯಲ್ಲಿ ಸರಣಿ ಅಪಘಾತ – ಈಶಾಗೆ ಬಂದಿದ್ದ ವಾಹನ ಸವಾರರ ಪರದಾಟ

    ತೆಲಂಗಾಣಕ್ಕೆ ನೀರು ಬಿಟ್ಟಿದ್ದನ್ನು ರೈತರು ಖಂಡಿಸಿದ್ದಾರೆ. ಬಸವಸಾಗರ ಜಲಾಶಯ ನೀರನ್ನ ಯಾದಗಿರಿ, ವಿಜಯಪುರ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಯ ಲಕ್ಷಾಂತರ ರೈತರು ಅವಲಂಬಿಸಿದ್ದಾರೆ. 4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯನ್ನು ಬೆಳೆಯುತ್ತಾರೆ. ನವೆಂಬರ್‌ನಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತರ ಎರಡನೇ ಬೆಳೆಗೆ ನೀರು ಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಡಿಸೆಂಬರ್ 10ರಿಂದ ಮಾರ್ಚ್ 23ರ ತನಕ ನೀರು ಹರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಾರಬಂದಿ ಅಂದರೆ 14 ದಿನಗಳ ಕಾಲ ನೀರು ಬಿಟ್ಟು ನಿರಂತರವಾಗಿ 10 ದಿನಗಳ ಕಾಲ ನೀರು ಬಂದ್ ಮಾಡಲಾಗುತ್ತದೆ. ಇದರಿಂದ ರೈತ ಮುಖಂಡರು ಆಕ್ರೋಶ ಹಾಕಿದ್ದಾರೆ. ಇದನ್ನೂ ಓದಿ: ಇಶಾ ಫೌಂಡೇಶನ್‌ ಶಿವರಾತ್ರಿ ಕಾರ್ಯಕ್ರಮ – ಅಮಿತ್‌ ಶಾ, ಡಿಕೆ ಶಿವಕುಮಾರ್‌ ಭಾಗಿ

    ಕಳೆದ ವರ್ಷ ಡ್ಯಾಂನಲ್ಲಿ ನೀರಿನ ಕೊರತೆಯಿದ್ದ ಕಾರಣಕ್ಕೆ ಎರಡನೇ ಬೆಳೆಗೆ ನೀರು ಬಿಡಲು ಅಧಿಕಾರಿಗಳು ಹಿಂದೇಟು ಹಾಕಿದ್ದರು. ಇದೇ ಕಾರಣಕ್ಕೆ ರೈತರು ನಿರಂತರ ಹೋರಾಟ ಮಾಡಿದ್ದರು. ಕೆಲ ಸಂಘಟನೆಗಳು ಡ್ಯಾಂಗೆ ಮುತ್ತಿಗೆ ಹಾಕುವ ಪ್ರಯತ್ನ ಕೂಡ ಮಾಡಿದ್ದರು. ಇಷ್ಟಾದ ಬಳಿಕ ಸರ್ಕಾರ ರೈತರಿಗೆ ನೀರು ಒದಗಿಸುವ ಕೆಲಸ ಮಾಡಿತ್ತು. ಆದರೆ ಈಗ ಡ್ಯಾಂನಲ್ಲಿ ನೀರಿದೆ ಎನ್ನುವ ಕಾರಣಕ್ಕೆ ಸರ್ಕಾರದ ಯಾವುದೇ ಆದೇಶವಿಲ್ಲದೇ ಇದ್ದರೂ ಅಧಿಕಾರಿಗಳು ನೀರು ಬಿಟ್ಟಿದ್ದಾರೆ. ಬುಧವಾರ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ಕಚೇರಿಗೆ ಭೇಟಿ ನೀಡಿದ ಮಾಜಿ ಸಚಿವ ರಾಜುಗೌಡ ಅಧಿಕಾರಿಗಳ ವಿರುದ್ಧ ಕೆಂಡಕಾರಿದ್ದಾರೆ. ಇದನ್ನೂ ಓದಿ: ರಾಜಕೀಯ ಲಾಭಕ್ಕಾಗಿ ನನ್ನ ಮೇಲೆ ಇಲ್ಲಸಲ್ಲದ ಆರೋಪ: ಅಪಪ್ರಚಾರ ಮಾಡಿದವರಿಗೆ ಮುನಿರತ್ನ ತರಾಟೆ

    ರಾಜ್ಯದ ಜನರಿಗೆ ಮುಂದೆ ನೀರಿನ ಸಮಸ್ಯೆ ಆಗುತ್ತದೆ. ಇಂತಹ ಸಂದರ್ಭದಲ್ಲಿ ಪಕ್ಕದ ರಾಜ್ಯಕ್ಕೆ ನೀರು ಬಿಟ್ಟಿರೋದು ಎಷ್ಟು ಸರಿ? ನೀರಾವರಿ ಸಚಿವರು ಮೊದಲು ನಮ್ಮ ರಾಜ್ಯದ ಬಗ್ಗೆ ಯೋಚಿಸಿ. ಬಳಿಕ ಪಕ್ಕದ ರಾಜ್ಯದ ಬಗ್ಗೆ ಕಾಳಜಿವಹಿಸಲಿ ಎಂಬುದು ರೈತರ ಅಭಿಪ್ರಾಯ. ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ಅಮಿತ್ ಶಾ ಜೊತೆ ಡಿಕೆಶಿ – ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ

  • Rain Alert | ಆಲಮಟ್ಟಿ ಡ್ಯಾಂನಿಂದ 1.76 ಲಕ್ಷ, ನಾರಾಯಣಪುರ ಜಲಾಶಯದಿಂದ 1.90 ಲಕ್ಷ ಕ್ಯುಸೆಕ್‌ ನೀರು ನದಿಗೆ

    Rain Alert | ಆಲಮಟ್ಟಿ ಡ್ಯಾಂನಿಂದ 1.76 ಲಕ್ಷ, ನಾರಾಯಣಪುರ ಜಲಾಶಯದಿಂದ 1.90 ಲಕ್ಷ ಕ್ಯುಸೆಕ್‌ ನೀರು ನದಿಗೆ

    – ಗುಜರಾತ್‌ಗೆ ಈಗ ಚಂಡಮಾರುತ ಭೀತಿ
    – ಬಾಗಲಕೋಟೆ, ರಾಯಚೂರಿಗೆ ಪ್ರವಾಹ ಭೀತಿ

    ಬೆಂಗಳೂರು: ಮಹಾರಾಷ್ಟ್ರದಲ್ಲಿ ಭಾರೀ ಮಳೆ (Heavy Rain In Maharashtra) ಕಾರಣ ಬೆಳಗಾವಿ ಭಾಗದ ನದಿಗಳೆಲ್ಲಾ ಉಕ್ಕಿಹರಿಯುತ್ತಿವೆ. ಈ ಬೆನ್ನಲ್ಲೇ ಆಲಮಟ್ಟಿ ಜಲಾಶಯದಿಂದ ಇನ್ನೂ ಹೆಚ್ಚಿನ ನೀರನ್ನು ಬಿಡುವಂತೆ ಮಹಾರಾಷ್ಟ್ರ ನೀರಾವರಿ ಇಲಾಖೆ ಮನವಿ ಮಾಡಿದೆ.

    ಮಹಾರಾಷ್ಟ್ರ ಮನವಿ ಮಾಡಿರುವ ಕಾರಣ, ಕೃಷ್ಣಾ ನದಿ (Krishna River) ಪಾತ್ರದಲ್ಲಿ 5 ದಿನ ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯ ಆಲಮಟ್ಟಿ ಜಲಾಶಯದಿಂದ (Almatti Dam) 1.76 ಲಕ್ಷ ಕ್ಯುಸೆಕ್‌ ನೀರು, ನಾರಾಯಣಪುರ ಡ್ಯಾಂನಿಂದ (Narayanapura Dam) 1.90 ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದನ್ನೂ ಓದಿ: ಯುಜಿ ನೀಟ್ & ಯುಜಿ ಸಿಇಟಿ-24 | ಮೊದಲ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ – ಆ.31 ರಿಂದ ʻಚಾಯ್ಸ್ʼ ಆಯ್ಕೆ!

    ನಿರಂತರ ಮಳೆ ಹಿನ್ನೆಲೆ ಬಾಗಲಕೋಟೆ, ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಯಾದಗಿರಿಯ ಗುರುಸಣಗಿ ಬ್ಯಾರೇಜ್‌ನಿಂದ ಭೀಮಾನದಿಗೆ 1 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. ಇದರಿಂದ ಭೀಮಾತೀರದ ವೀರಾಂಜನೇಯ, ಕಂಗಳೇಶ್ವರ ದೇವಾಲಯಗಳು ಮುಳುಗಡೆ ಆಗಿವೆ.

    ಅಲ್ಲದೇ ಅಫಜಲಪುರದ ಘತ್ತರಗಾ ಸೇತುವೆ ಜಲಾವೃತವಾಗಿವೆ. ಹಾಸನದ ಸಕಲೇಶಪುರ ಭಾಗದಲ್ಲಿ ಮತ್ತೆ ಗುಡ್ಡಕುಸಿತದ ಭೀತಿ ಆವರಿಸಿದೆ. ಇನ್ನೂ ಶುಕ್ರವಾರ ಸಂಜೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲೂ ಮಳೆಯಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: `ಕರಿಯಾ’ ಸಿನಿಮಾ ರೀ ರಿಲೀಸ್ ವೇಳೆ ಪುಂಡಾಟಿಕೆ – ಬೆಂಗಳೂರಲ್ಲಿ ಕೆಲ ಅಭಿಮಾನಿಗಳಿಗೆ ಲಾಠಿ ರುಚಿ ತೋರಿಸಿದ ಪೊಲೀಸ್!

    ಅತ್ತ, ಪ್ರವಾಹದಿಂದ (Gujarat floods) ತತ್ತರಿಸಿರುವ ಗುಜರಾತ್‌ಗೆ ಈಗ ಚಂಡಮಾರುತ ಭೀತಿ ಎದುರಾಗಿದೆ. ಅರಬ್ಬಿ ಸಮುದ್ರದಲ್ಲಿ ರೂಪುಗೊಳ್ತಿರುವ ಚಂಡಮಾರುತ ಮುಂದಿನ 12 ಗಂಟೆಯಲ್ಲಿ ಕಛ್ ತೀರಕ್ಕೆ ಅಪ್ಪಳಿಸುವ ಸಂಭವ ಇದೆ. ಹೀಗಾಗಿ ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಉತ್ಸವವನ್ನು ಜನೋತ್ಸವವನ್ನಾಗಿ ಆಚರಿಸಿ: ಪ್ರಿಯಾಂಕ್‌ ಖರ್ಗೆ

  • ಯಾದಗಿರಿ ಜಿಲ್ಲೆಯಾದ್ಯಂತ 1 ಗಂಟೆಗೂ ಹೆಚ್ಚು ಕಾಲ ಮಳೆ – ರೈತರ ಮೊಗದಲ್ಲಿ ಮಂದಹಾಸ

    ಯಾದಗಿರಿ ಜಿಲ್ಲೆಯಾದ್ಯಂತ 1 ಗಂಟೆಗೂ ಹೆಚ್ಚು ಕಾಲ ಮಳೆ – ರೈತರ ಮೊಗದಲ್ಲಿ ಮಂದಹಾಸ

    ಯಾದಗಿರಿ: ಯಾದಗಿರಿ (Yadgir) ಜಿಲ್ಲೆಯಾದ್ಯಂತ ವರುಣ ಅಬ್ಬರಿಸಿ, ಬೊಬ್ಬಿರಿದಿದ್ದಾನೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದಾಗಿ, ಜಿಲ್ಲೆಯ ರೈತರು (Farmers) ಫುಲ್ ಖುಷ್ ಆಗಿದ್ದಾರೆ.

    ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಮಳೆ ಇಲ್ಲದೇ ರೈತರು ಕಂಗಾಲಾಗಿದ್ದರು. ಹಿಂಗಾರು ಮಳೆಯನ್ನ (Rain) ನಂಬಿ ಬಿತ್ತನೆ ಮಾಡಿದ್ದ ರೈತರು, 15 ದಿನಗಳಿಂದ ಮಳೆ ಇಲ್ಲದೇ ಬೆಳೆ ಒಣಗುವ ಸ್ಥಿತಿ ಬಂದೊದಗಿತ್ತು. ಆದರಿಂದು ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗಿರುವುದು ರೈತರ ಮುಖದಲ್ಲಿ ಮಂದಹಾಸ ತರಿಸಿದೆ. ಇದನ್ನೂ ಓದಿ: ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ: ಕಾಂಗ್ರೆಸ್‌ ಗೇಲಿಗೆ ಬಿಜೆಪಿ ತಿರುಗೇಟು

    ಕಾಲುವೆಗೆ ನೀರು ಹರಿಸಲು ಒತ್ತಾಯ:
    ಮತ್ತೊಂದೆಡೆ ನಾರಾಯಣಪುರ ಜಲಾಶಯದಿಂದ (Narayanpura Reservoir) ಕಾಲುವೆಗೆ ನೀರು ಹರಿಸದ ಹಿನ್ನೆಲೆಯಲ್ಲಿ ರಾಯಚೂರಿನ ದೇವದುರ್ಗದಲ್ಲಿ ರೈತರು ರಸ್ತೆ ತಡೆ ನಡೆಸಿ ನೀರಿಗಾಗಿ ಹೋರಾಟ ನಡೆಸಿದ್ದಾರೆ. ಇತ್ತೀಚಿಗೆ ನಡೆದ ನೀರಾವರಿ ಸಲಹಾ ಸಮಿತಿಯ ತೀರ್ಮಾನ ರೈತರಿಗೆ ಸಂಪೂರ್ಣ ವ್ಯತಿರಿಕ್ತವಾಗಿದೆ ಅಂತ ರಾಜ್ಯ ರೈತ ಸಂಘ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆ.28 ರಿಂದ 30 ರವರೆಗೆ ಮೈಸೂರು ಜಿಲ್ಲಾಡಳಿತ ಅಧಿಕಾರಿಗಳು ರಜೆ ಹಾಕುವಂತಿಲ್ಲ: ಜಿಲ್ಲಾಧಿಕಾರಿ ಸೂಚನೆ 

    ಯಾವುದೇ ಮುನ್ಸೂಚನೆಯಿಲ್ಲದೇ ನಾರಾಯಣಪುರ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಬಂದ್ ಮಾಡಿದ್ದಾರೆ. ಇದರಿಂದ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಬೆಳೆಯಬೇಕಾದ ಮೆಣಸಿನಕಾಯಿ, ಭತ್ತದ ಸಸಿ ಹಚ್ಚುವ ಕೆಲಸಗಳು ವಿಳಂಬವಾಗಿವೆ. ರೈತರು ಆತಂಕಗೊಂಡಿದ್ದಾರೆ. ಕೆಲ ರೈತರು ನೀರಿಲ್ಲದೇ ಈಗಾಗಲೇ ನಾಟಿ ಮಾಡಿದ ಸಸಿ ಕಿತ್ತುಹಾಕಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಏರಿಕೆ- ರಾಯಚೂರಿನಲ್ಲಿ ಹೆಚ್ಚಿದ ಪ್ರವಾಹ ಭೀತಿ

    ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಏರಿಕೆ- ರಾಯಚೂರಿನಲ್ಲಿ ಹೆಚ್ಚಿದ ಪ್ರವಾಹ ಭೀತಿ

    ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚು ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ರಾಯಚೂರಿನ ದೇವದುರ್ಗದ ಕೊಪ್ಪರ ಲಕ್ಷ್ಮೀ ನರಸಿಂಹ ದೇವಾಲಯ ಭಾಗಶಃ ಜಲಾವೃತವಾಗಿದ್ದು ಸಂಜೆಯ ವೇಳೆಗೆ ದೇವಾಲಯ ಸಂಪೂರ್ಣ ಜಲಾವೃತ ಭೀತಿ ಎದುರಾಗಿದೆ.

    ದೇವಾಲಯ ಮೆಟ್ಟಿಲುವರಗೆ ನದಿ ನೀರು ಬಂದಿದ್ದು ದೇವಾಲಯ ಬಳಿಯೇ ವಾಸವಾಗಿರುವ ಕುಟುಂಬಗಳಿಗೆ ಪ್ರವಾಹ ಭೀತಿ ಉಂಟಾಗಿದೆ. ಜಲಾಶಯದಿಂದ ಹಂತ ಹಂತವಾಗಿ ಹೆಚ್ಚು ನೀರು ಬಿಡುವ ಮುನ್ಸೂಚನೆಯಿರುವ ಹಿನ್ನೆಲೆ ನದಿ ಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಹೆಚ್ಚಾಗಿದೆ.

    ನಾರಾಯಣಪುರ ಜಲಾಶಯದಿಂದ 2.20 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಹೀಗಾಗಿ ದೇವದುರ್ಗದ ಹೂವಿನಹೆಡಗಿ ಸೇತುವೆ ಮುಳುಗಡೆ ಸಾಧ್ಯತೆ ಹೆಚ್ಚಾಗಿದೆ. 2.25 ಲಕ್ಷ ಕ್ಯೂಸೆಕ್ ನೀರು ಬಂದಲ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಲಿದೆ. ಈಗಾಗಲೇ ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಲಾಗಿದೆ. ಲಿಂಗಸುಗೂರಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು ಆರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

    ನದಿಯಲ್ಲಿ ಪ್ರವಾಹ ಭೀತಿ ಹೆಚ್ಚಾಗುತ್ತಿದ್ದಂತೆ ನಾರಾಯಣಪುರ ಜಲಾಶಯದ ಹಿನ್ನೀರಿನಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಲಿಂಗಸುಗೂರು ತಾಲೂಕಿನ ಚಿತ್ತಾಪುರ ಬಳಿ ಶವ ಪತ್ತೆಯಾಗಿದೆ. ಸುಮಾರು 75 ವರ್ಷದ ವೃದ್ದನ ಶವ ಪತ್ತೆಯಾಗಿದೆ. ಕೃಷ್ಣಾ ನದಿಯಲ್ಲಿ ಪ್ರವಾಹ ಹೆಚ್ಚಾದ ಹಿನ್ನೆಲೆಯಲ್ಲಿ ಹಿನ್ನೀರಿನ ದಡಕ್ಕೆ ಶವ ಬಂದಿದೆ ಎನ್ನಲಾಗಿದೆ.

    ಲಿಂಗಸಗೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

  • ಭೋರ್ಗರೆದು ಹರಿಯುತ್ತಿರುವ ಜಲಾಶಯದಲ್ಲಿ ಜನರ ಸೆಲ್ಫಿ ಹುಚ್ಚಾಟ

    ಭೋರ್ಗರೆದು ಹರಿಯುತ್ತಿರುವ ಜಲಾಶಯದಲ್ಲಿ ಜನರ ಸೆಲ್ಫಿ ಹುಚ್ಚಾಟ

    ಯಾದಗಿರಿ: ಒಂದು ಕಡೆ ಕೃಷ್ಣ ನದಿ ತೀರದಲ್ಲಿ ಪ್ರವಾಹದ ಭೀತಿ, ಮತ್ತೊಂದು ಸಾಗರದಂತೆ ಹರಿಯುತ್ತಿರುವ ನಾರಾಯಣಪುರ ಜಲಾಶಯದ ಬಳಿ ಜನರು ಸೆಲ್ಫಿಗಾಗಿ ಮುಗಿದು ಬೀಳುತ್ತಿದ್ದಾರೆ. ಜನರ ಸೆಲ್ಫಿ ಹುಚ್ಚು ಭಾರಿ ಅನಾಹುತ ಸೃಷ್ಟಿಸುವಂತಿದೆ.

    ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆರಾಯನ ಅಬ್ಬರಕ್ಕೆ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಲ್ಲಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಕಾರಣಕ್ಕೆ ನಾರಾಯಣಪುರ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಈ ಮಧ್ಯೆ ಜಲಾಯಶಯದಿಂದ ನೀರು ಹೊರಹೋಗುವ ದೃಶ್ಯವನ್ನು ನೋಡಲು ಜನರು ತಾ ಮುಂದು ನಾ ಮುಂದು ಎಂದು ಬರುತ್ತಿದ್ದಾರೆ. ಅಲ್ಲದೆ ಭೋರ್ಗರೆದು ಹರಿಯುತ್ತಿರುವ ನೀರನ ಸೆಲ್ಫಿ ತೆಗೆದುಕೊಳ್ಳುತ್ತಿದ್ದರೆ. ಫೋಟೋ ಕ್ಲಿಕ್ಕಿಸುವಾಗ ಸ್ವಲ್ಪ ಯಾಮಾರಿದರು ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಿಳಿದಿದ್ದರು ನೀರಿನೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ.

    ಪ್ರವಾಸಿಗರು ಪ್ರಾಣದ ಹಂಗು ತೊರೆದು ಸೆಲ್ಫಿ ತೆಗದುಕೊಳ್ಳುತ್ತಿದ್ದರು ಅಲ್ಲಿನ ಸಿಬ್ಬಂದಿಯಾಗಲಿ, ಯಾದಗಿರಿ ಜಿಲ್ಲಾಡಳಿತವಾಗಲಿ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಜಲಾಶಯ ಬಾಯಿಗೆ ಜನರನ್ನು ಬಿಟ್ಟ ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದೆ. ಜಲಾಶಯದ ಮುಖ್ಯ ಗೇಟಿನ ಬಳಿ ಜನರನ್ನು ಬಿಡುವುದು ಬಹಳ ಅಪಾಯಕಾರಿ, ಹೀಗಾಗಿ ಜಲಾಶಯ ಮುಖ್ಯ ಭಾಗಕ್ಕೆ ಸಾರ್ವಜನಿಕರಿಗೆ ಸಂಪೂರ್ಣ ನಿಷೇಧವಿದೆ. ಹೀಗಿದ್ದರೂ ಪ್ರವಾಸಿಗರು ಕ್ಯಾರೆ ಎನ್ನದೆ ಜಲಾಶಯದಲ್ಲಿ ಮನಬಂದಂತೆ ವರ್ತನೆ ಮಾಡುತ್ತಿದ್ದಾರೆ.

    ಸ್ಥಳದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇಲ್ಲ. ಯಾವುದೇ ಮುಂಜಾಗೃತ ಕ್ರಮಗಳನ್ನು ಕೈಗೊಂಡಿಲ್ಲ. ಜಲಾಶಯಕ್ಕೆ ಭೇಟಿ ನೀಡುವ ಪ್ರವಾಸಿಗರು ಒಂದು ಕ್ಷಣ ಮೈಮರೆತರು ಅನಾಹುತ ನಡೆಯೋದು ಗ್ಯಾರೆಂಟಿ. ಹೀಗಾಗಿ ಜಿಲ್ಲಾಡಳಿತ ಈ ಬಗ್ಗೆ ಗಮನವರಿಸಿ, ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು – ದ್ವೀಪಗಳಾದ ಹಳ್ಳಿಗಳು

    ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು – ದ್ವೀಪಗಳಾದ ಹಳ್ಳಿಗಳು

    ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರೀ ಪ್ರಮಾಣದ ನೀರು ಬಿಟ್ಟಿರುವುದರಿಂದ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.

    ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ ಐದು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಮ್ಯಾದರಗಡ್ಡಿ, ಕಡದರಗಡ್ಡಿ ನಡುಗಡ್ಡೆ ಗ್ರಾಮಗಳು ದ್ವೀಪಗಳಾಗಿ ಪರಿವರ್ತನೆಯಾಗಿವೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದಾಗಲೆಲ್ಲಾ ಈ ಗ್ರಾಮಗಳು ದ್ವೀಪಗಳಾಗಿ ಪರಿವರ್ತನೆಯಾಗುತ್ತವೆ.

    ನಡುಗಡ್ಡೆ ಗ್ರಾಮಸ್ಥರಿಗೆ ಸಮರ್ಪಕವಾದ ವಸತಿ ಹಾಗೂ ಭೂಮಿ ಸೌಲಭ್ಯ ಸಿಗದೇ ಸ್ಥಳಾಂತರ ಸಾಧ್ಯವಾಗಿಲ್ಲ. ಹೀಗಾಗಿ ನಡುಗಡ್ಡೆ ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇಲ್ಲಿನ ಯರಗೋಡಿ ಗ್ರಾಮದಿಂದ ಕಡದರಗಡ್ಡಿ ಗ್ರಾಮದ ಮಧ್ಯೆ ಸೇತುವೆ ನಿರ್ಮಿಸಲು 4 ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಕಾಮಗಾರಿಗೆ 16 ಕೋಟಿ ರೂ. ಅವಶ್ಯಕತೆ ಇರುವುದರಿಂದ ಸೇತುವೆ ಕಾಮಗಾರಿ ನೆನೆಗುದಿಗೆ ಬಿದ್ದಿದೆ ಎಂದು ಲಿಂಗಸುಗೂರು ಶಾಸಕ ಡಿ.ಎಸ್ ಹೂಲಿಗೇರಿ ಹೇಳಿದ್ದಾರೆ.

    https://www.facebook.com/publictv/videos/374289933210694/