Tag: Narendra Modi Stadium

  • IPL 2023 Playoffs: ಮೇ 23ಕ್ಕೆ CSK vs GT ಹೈವೋಲ್ಟೇಜ್‌ ಕದನ – ಮಹಿ ಮೇಲೆ ಎಲ್ಲರ ಕಣ್ಣು

    IPL 2023 Playoffs: ಮೇ 23ಕ್ಕೆ CSK vs GT ಹೈವೋಲ್ಟೇಜ್‌ ಕದನ – ಮಹಿ ಮೇಲೆ ಎಲ್ಲರ ಕಣ್ಣು

    ಚೆನ್ನೈ: 16ನೇ ಆವೃತ್ತಿಯ ಐಪಿಎಲ್‌ನಲ್ಲಿ (IPL 2023) ಲೀಗ್‌ ಹಂತದ ಎಲ್ಲಾ ಪಂದ್ಯಗಳು ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಪ್ಲೇ ಆಫ್‌ ರೋಚಕ ಘಟ್ಟ ತಲುಪಿದೆ. ಮೇ 23 ರಿಂದ ಪ್ಲೇ ಆಫ್‌ (IPL 2023 Playoffs) ಪಂದ್ಯಗಳು ಆರಂಭವಾಗಲಿದೆ.

    10 ತಂಡಗಳ ಪೈಕಿ ಗುಜರಾತ್‌ ಟೈಟಾನ್ಸ್‌ (GT), ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಲಕ್ನೋ ಸೂಪರ್‌ ಜೈಂಟ್ಸ್‌ (LSG) ಹಾಗೂ ಮುಂಬೈ ಇಂಡಿಯನ್ಸ್‌ (MI) ತಂಡಗಳು ಪ್ಲೇ ಆಫ್‌ನಲ್ಲಿ ಉಳಿದಿವೆ.

    ಮೇ 23ರಂದು ಮೊದಲ ಕ್ವಾಲಿಫೈಯರ್‌ ಪಂದ್ಯ ಗುಜರಾತ್‌ ಟೈಟಾನ್ಸ್‌ ಹಾಗೂ ಸಿಎಸ್‌ಕೆ ಬಲಿಷ್ಠ ತಂಡಗಳ ನಡುವೆ ನಡೆಯಲಿದೆ. ಮೇ 24ರಂದು ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವೆ ಮೊದಲ ಎಲಿಮಿನೇಟರ್‌ ಪಂದ್ಯಗಳು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದನ್ನೂ ಓದಿ: RCB ಔಟ್, ಮುಂಬೈಗೆ ಪ್ಲೇ ಆಫ್ ಗಿಫ್ಟ್ – ಪಂದ್ಯ ಸೋತಿದ್ದಕ್ಕೆ ಕಣ್ಣೀರಿಟ್ಟ ಕೊಹ್ಲಿ

    ಇನ್ನೂ ಕ್ವಾಲಿಫೈಯರ್‌ ಮೊದಲ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಅದಾದ ಬಳಿಕ ಕ್ವಾಲಿಫೈಯರ್‌ ಮೊದಲ ಪಂದ್ಯದಲ್ಲಿ ಸೋತ ತಂಡ ಹಾಗೂ ಮೊದಲ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡಗಳ ನಡುವೆ ಮೇ 26ರಂದು 2ನೇ ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಜಯಭೇರಿ ಬಾರಿಸಿದ ಎರಡು ತಂಡಗಳು ಅಂತಿಮವಾಗಿ ಮೇ 28ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ ಪಂದ್ಯದಲ್ಲಿ ಸೆಣಸಲಿವೆ. ಇದನ್ನೂ ಓದಿ: IPL Playoffs Schedule: ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್‌ ಫೈನಲ್‌

    ಕಳೆದ ವರ್ಷವೂ 2ನೇ ಕ್ವಾಲಿಫೈಯರ್‌ ಹಾಗೂ ಫೈನಲ್‌ ಪಂದ್ಯಗಳು ಅಹಮದಾಬಾದ್‌ನಲ್ಲೇ ನಡೆದಿದ್ದವು. ಮೊದಲ ಕ್ವಾಲಿಫೈಯರ್‌ ಹಾಗೂ ಎಲಿಮಿನೇಟರ್‌ ಪಂದ್ಯಗಳು ಕೋಲ್ಕತಾದಲ್ಲಿ ನಡೆದಿತ್ತು. ಈ ವರ್ಷ ಉದ್ಘಾಟನಾ ಸಮಾರಂಭ ಹಾಗೂ ಫೈನಲ್‌ ಪಂದ್ಯಕ್ಕೂ ಮೋದಿ ಕ್ರೀಡಾಂಗಣವನ್ನೇ ಬಿಸಿಸಿಐ (BCCI) ಆಯ್ಕೆ ಮಾಡಿದೆ.

    ಅಲ್ಲದೇ ಸಿಎಸ್‌ಕೆ ತಂಡದ ನಾಯಕ ಎಂ.ಎಸ್‌ ಧೋನಿ ಈ ಬಾರಿ ಐಪಿಎಲ್‌ನೊಂದಿಗೆ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಲಿದ್ದಾರೆ. ಈ ಹಿನ್ನೆಲೆಯಲ್ಲಿ ತವರು ಅಂಗಳದಲ್ಲಿ ಮಹಿ ಬ್ಯಾಟಿಂಗ್‌ ಅಬ್ಬರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರವಾಗಿದ್ದಾರೆ.

  • IPL Playoffs Schedule: ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್‌ ಫೈನಲ್‌

    IPL Playoffs Schedule: ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್‌ ಫೈನಲ್‌

    ಮುಂಬೈ: 16ನೇ ಆವೃತ್ತಿಯ ಐಪಿಎಲ್‌ನ ಪ್ಲೇ ಆಫ್ಸ್‌ ಹಾಗೂ ಫೈನಲ್‌ ಪಂದ್ಯಗಳ ವೇಳಾಪಟ್ಟಿಯನ್ನು (IPL Playoffs Schedule) ಬಿಸಿಸಿಐ (BCCI) ಪ್ರಕಟಿಸಿದ್ದು, ಮೇ 28 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಫೈನಲ್‌ ಪಂದ್ಯ ನಡೆಯಲಿದೆ.

    ಮೇ 23ರಂದು ಮೊದಲ ಕ್ವಾಲಿಫೈಯರ್‌, ಮೇ 24ರಂದು ಎಲಿಮಿನೇಟರ್‌ ಪಂದ್ಯಗಳು ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೇ 26ರಂದು 2ನೇ ಎಲಿಮಿನೇಟರ್‌ ಪಂದ್ಯ ನಡೆಯಲಿದ್ದು, ಮೇ 28ರಂದು ಫೈನಲ್‌ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

    ಮೇ 21ಕ್ಕೆ ಲೀಗ್‌ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದ್ದು, ಅಗ್ರಸ್ಥಾನದಲ್ಲಿರುವ 4 ತಂಡಗಳು ಪ್ಲೇ ಆಫ್ಸ್‌ ಪ್ರವೇಶಿಸಲಿವೆ. ಪ್ಲೇ ಆಫ್ಸ್‌ನ ಮೊದಲ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ. ಮೊದಲ ಹಂತದ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡದೊಂದಿಗೆ 2ನೇ ಹಂತದ ಎಲಿಮಿನೇಟರ್‌ ಪಂದ್ಯದಲ್ಲಿ ಸೆಣಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

    ಕಳೆದ ವರ್ಷವೂ 2ನೇ ಕ್ವಾಲಿಫೈಯರ್‌ ಹಾಗೂ ಫೈನಲ್‌ ಪಂದ್ಯಗಳು ಅಹಮದಾಬಾದ್‌ನಲ್ಲೇ ನಡೆದಿದ್ದವು. ಮೊದಲ ಕ್ವಾಲಿಫೈಯರ್‌ ಹಾಗೂ ಎಲಿಮಿನೇಟರ್‌ ಪಂದ್ಯಗಳು ಕೋಲ್ಕತಾದಲ್ಲಿ ನಡೆದಿತ್ತು. ಈ ವರ್ಷ ಉದ್ಘಾಟನಾ ಸಮಾರಂಭ ಹಾಗೂ ಫೈನಲ್‌ ಪಂದ್ಯಕ್ಕೂ ಮೋದಿ ಕ್ರೀಡಾಂಗಣವನ್ನೇ ಬಿಸಿಸಿಐ ಆಯ್ಕೆ ಮಾಡಿದೆ.

  • ನಾವು ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಸ್ಟೇಡಿಯಂನ ಹೆಸರು ಬದಲಾಯಿಸುತ್ತೇವೆ – ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

    ನಾವು ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಸ್ಟೇಡಿಯಂನ ಹೆಸರು ಬದಲಾಯಿಸುತ್ತೇವೆ – ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

    ಗಾಂಧೀನಗರ: ನಾವು ಗುಜರಾತ್‍ನಲ್ಲಿ (Gujarat Assembly Election) ಅಧಿಕಾರಕ್ಕೆ ಬಂದರೆ ನರೇಂದ್ರ ಮೋದಿ ಸ್ಟೇಡಿಯಂನ (Narendra Modi Stadium)  ಹೆಸರನ್ನು ಸರ್ದಾರ್ ಪಟೇಲ್ ಸ್ಟೇಡಿಯಂ ಎಂದು ಮರುನಾಮಕರಣ ಮಾಡುತ್ತೇವೆ ಎಂದು ಕಾಂಗ್ರೆಸ್ (Congress) ಪ್ರಣಾಳಿಕೆಯಲ್ಲಿ (Manifesto) ಪ್ರಕಟಿಸಿದೆ.

    ಮುಂಬರುವ ವಿಧಾನಸಭೆ ಚುನಾವಣೆಗಾಗಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ಇಂದು ಪ್ರಣಾಳಿಕೆ ಕುರಿತಾಗಿ ತಿಳಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ನೇತೃತ್ವದಲ್ಲಿ ಸಭೆ ನಡೆದು ಬಳಿಕ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು. ಪ್ರಮುಖವಾಗಿ ಅಹಮದಾಬಾದ್‍ನಲ್ಲಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ (Cricket) ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಸ್ಟೇಡಿಯಂ ಹೆಸರನ್ನು ಬದಲಾಯಿಸುವ ಭರವಸೆ ನೀಡಿದೆ. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ – 15 ದಿನಗಳಲ್ಲಿ 40 ರ‍್ಯಾಲಿ ನಡೆಸಲಿದ್ದಾರೆ ಮೋದಿ

    ಪ್ರಣಾಳಿಕೆಯಲ್ಲಿ ಎಲ್ಲಾ ಗುಜರಾತಿಗಳಿಗೆ ರಾಜ್ಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದೆ. ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇಕಡಾ 50 ರಷ್ಟು ಮೀಸಲಾತಿ. ರಾಜ್ಯದ ಪ್ರತಿಯೊಬ್ಬ ಮಹಿಳೆ, ವಿಧವೆ ಮತ್ತು ವೃದ್ಧ ಮಹಿಳೆಗೆ ಮಾಸಿಕ 2,000 ರೂ. ಅನುದಾನ. ಸರ್ಕಾರದಿಂದ 3,000 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲಾಗುವುದು. ರಾಜ್ಯದ ಹೆಣ್ಣುಮಕ್ಕಳಿಗೆ ಅವರ ಸ್ನಾತಕೋತ್ತರ ಪದವಿಯವರೆಗೆ ಉಚಿತ ಶಿಕ್ಷಣವನ್ನು ನೀಡಲಾಗುವುದು ಎಂದು ಆಶ್ವಾಸನೆ ನೀಡಿದೆ. ಇದನ್ನೂ ಓದಿ: 30 ಸಾವಿರ ವಾಟ್ಸಾಪ್ ಉಸ್ತುವಾರಿಗಳ ನೇಮಕ – ಗುಜರಾತ್‍ನಲ್ಲಿ ಹೇಗಿದೆ ಬಿಜೆಪಿ ಸೋಶಿಯಲ್ ಮೀಡಿಯಾ ಮ್ಯಾನೇಜ್ಮೆಂಟ್?

    3 ಲಕ್ಷದವರೆಗಿನ ಕೃಷಿ ಸಾಲ ಮನ್ನಾ. 300 ಯೂನಿಟ್ ಉಚಿತ ವಿದ್ಯುತ್. ಪ್ರತಿ ನಿರುದ್ಯೋಗಿ ಯುವಕರಿಗೆ 3,000 ರೂ. ಮಾಸಿಕ ಅನುದಾನ ಮತ್ತು 500 ರೂ.ಗೆ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ ಕೊಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದನ್ನೂ ಓದಿ: ಗುಜರಾತ್ ಗೆಲ್ಲಲು ‘ಯುವ’ ಸ್ಟ್ರಾಟರ್ಜಿ – ವಿದ್ಯಾವಂತ ಯುವಕರೇ ಬಿಜೆಪಿ ಅಭ್ಯರ್ಥಿಗಳು

    ಈಗಾಗಲೇ ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಗೂ ಆರು ತಿಂಗಳು ಮುನ್ನವೇ ಕಾಂಗ್ರೆಸ್ ಬಿಜೆಪಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದು, ಈ ಬಾರಿ ಆಪ್ ಅಸ್ತಿತ್ವಕ್ಕಾಗಿ ಹೋರಾಟ ಆರಂಭಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದ ಅಮಿತ್ ಶಾ ದಂಪತಿ – ಮೋದಿ ಬರುವ ನಿರೀಕ್ಷೆ

    ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸಿದ ಅಮಿತ್ ಶಾ ದಂಪತಿ – ಮೋದಿ ಬರುವ ನಿರೀಕ್ಷೆ

    ಅಹಮದಾಬಾದ್: 2022ರ ಐಪಿಎಲ್ ಫೈನಲ್ ಪಂದ್ಯವನ್ನು ಗೃಹ ಸಚಿವ ಅಮಿತ್ ಶಾ ದಂಪತಿ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿ ವೀಕ್ಷಿಸಿದ್ದಾರೆ.

    ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ಫೈನಲ್ ಪಂದ್ಯ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನರೇಂದ್ರ ಮೋದಿ ಸ್ಟೇಡಿಯಂ ಅಹಮದಾಬಾದ್‍ನಲ್ಲಿ ನಡೆಯುತ್ತಿದೆ. ಪಂದ್ಯ ನೋಡಲು ಅಮಿತ್ ಶಾ ದಂಪತಿ ಆಗಮಿಸಿದ್ದಾರೆ. ಸ್ಟೇಡಿಯಂನಲ್ಲಿ ಕೂತು ಆಟ ನೋಡುತ್ತಿರುವಂತೆ  ಕ್ಯಾಮೆರಾಮ್ಯಾನ್‌ ಅವರತ್ತ ಕ್ಯಾಮೆರಾ ತಿರುಗಿಸಿದ್ದಾನೆ. ಈ ವೇಳೆ ಸ್ಕ್ರೀನ್ ಮೇಲೆ ಅಮಿತ್ ಶಾ ದಂಪತಿ ಕಾಣಿಸಿಕೊಳ್ಳುತ್ತಿದ್ದಂತೆ ಓಹೋ ಎಂದು ಐಪಿಎಲ್ ಪ್ರೇಕ್ಷಕರು ಜೈಕಾರ ಹೊರಡಿಸಿದ್ದಾರೆ. ಇದನ್ನೂ ಓದಿ: IPL Final 2022 – ವಿಶ್ವದ ಅತಿ ದೊಡ್ಡ ಜೆರ್ಸಿ ಅನಾವರಣಗೊಳಿಸಿ ಗಿನ್ನಿಸ್ ದಾಖಲೆ

    ಪ್ರೇಕ್ಷಕರು ಜೋರಾಗಿ ಕಿರುಚಾಡುತ್ತಿದ್ದಂತೆ ಅಮಿತ್ ಶಾ ವಿಕ್ಟರಿ ಸಿಂಬಲ್ ತೋರಿಸಿದರು. ಇನ್ನೂ ಪಂದ್ಯ ನೋಡಲು ಪ್ರಧಾನಿ ನರೇಂದ್ರ ಮೋದಿ ಕೂಡ ಬರುವ ಸಾಧ್ಯತೆ ಇದೆ. ಇದನ್ನೂ ಓದಿ: 2014ರ ಬಳಿಕ ಧೋನಿ, ಕೊಹ್ಲಿ, ರೋಹಿತ್ ಇಲ್ಲದೇ ಐಪಿಎಲ್ ಫೈನಲ್

    ಈ ಮೊದಲು ನಡೆದ ಸಮಾರೋಪ ಸಮಾರಂಭದಲ್ಲಿ ನೆರೆದಿದ್ದ ಪ್ರೇಕ್ಷಕರನ್ನು ಬಾಲಿವುಡ್ ನಟ ರಣವೀರ್ ಸಿಂಗ್, ಅನೇಕ ಚಿತ್ರಗಳ ಹಾಡಿಗೆ ಹೆಜ್ಜೆ ಹಾಕುವ ಮೂಲಕ ರಂಜಿಸಿದರು. ಅಲ್ಲದೇ ಕೆಜಿಎಫ್ 2 ಚಿತ್ರದ ‘ಧೀರಾ ಧೀರಾ’ ಮತ್ತು ಥೀಮ್ ಸಾಂಗ್‍ಗೆ ರಣವೀರ್ ಸಿಂಗ್ ಕುಣಿದು ಕುಪ್ಪಳಿಸಿದರು. ಅಲ್ಲದೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಸೇರಿದಂತೆ ಅನೇಕ ಕಲಾವಿದರು ಕಾರ್ಯಕ್ರಮ ನಡೆಸಿಕೊಟ್ಟರು. ಪಂದ್ಯ ವೀಕ್ಷಿಸಲು ಅಕ್ಷಯ್ ಕುಮಾರ್ ಸೇರಿದಂತೆ ಹಲವಾರು ಸೆಲೆಬ್ರೆಟಿಗಳು ಆಗಮಿಸಿದ್ದಾರೆ.

  • ಹಿಟ್ ಮ್ಯಾನ್, ಕೊಹ್ಲಿ ಅಬ್ಬರ- ಸರಣಿ ಗೆದ್ದ ಭಾರತ

    ಹಿಟ್ ಮ್ಯಾನ್, ಕೊಹ್ಲಿ ಅಬ್ಬರ- ಸರಣಿ ಗೆದ್ದ ಭಾರತ

    ಅಹಮದಾಬಾದ್: ಒಟ್ಟು 5 ಪಂದ್ಯಗಳ ಪೈಕಿ ತಲಾ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಹಾಗೂ ಇಂಗ್ಲೆಂಡ್ ಇಂದು ನಿರ್ಣಾಯಕ ಪಂದ್ಯವನ್ನಾಡಿದ್ದು, ಹಿಟ್ ಮ್ಯಾನ್ ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಆಟದಿಂದಾಗಿ ಭಾರತ ಸರಣಿಯನ್ನು ತನ್ನದಾಗಿಸಿಕೊಂಡಿದೆ.

    ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ-20 ಸರಣಿಯ ಕೊನೇಯ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯನ್ನು ತನ್ನದಾಗಿಸಿಕೊಂಡಿದೆ. 36 ರನ್‍ಗಳಿಂದ ಭಾರತ ವಿಜಯಿಯಾಗಿದ್ದು, 3-2 ಅಂತರದಲ್ಲಿ ಸರಣಿಯನ್ನು ತನ್ನದಾಗಹಿಸಿಕೊಂಡಿದೆ.

    ಟಾಸ್ಕ್ ಗೆದ್ದ ಇಂಗ್ಲೆಂಡ್ ನಾಯಕ ಇಯಾನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಭಾರತದ ಆರಂಭಿಕ ಆಟಗಾರಾಗಿ ರೋಹಿತ್ ಶರ್ಮಾ ಹಾಗೂ ತಂಡದ ನಾಯಕ ವಿರಾಟ್ ಕೊಹ್ಲಿ ಕಣಕ್ಕಿಳಿದರು. ಇಬ್ಬರೂ ಉತ್ತಮ ಜೊತೆಯಾಟವಾಡುವ ಮೂಲಕ ಇಂಗ್ಲೆಂಡ್ ಬೌಲರ್‍ಗಳ ಬೆವರಿಳಿಸಿದರು. ಜೊತಯಾಟದಲ್ಲಿ ಬರೋಬ್ಬರಿ 94 ರನ್ ಗಳಿಸುವ ಮೂಲಕ ಸತತ ಮೂರನೇ ಬಾರಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದ ಇಂಗ್ಲೆಂಡ್ ನಾಯಕ ಐಯಾನ್ ಮಾರ್ಗನ್ ಅವರ ಯೋಜನೆಯನ್ನು ತಲೆ ಕೆಳಗೆ ಮಾಡಿದರು.

    ಹಿಟ್ ಮ್ಯಾನ್ ಸ್ಫೋಟಕ ಅರ್ಧ ಶತಕ
    ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‍ನಿಂದಾಗಿ ಭಾರತ ತಂಡ ಉತ್ತಮ ರನ್ ಕಲೆ ಹಾಕಲು ಸಹಕಾರಿಯಾಯಿತು. ಕೇವಲ 34 ಎಸೆತಗಳಿಗೆ 64 ರನ್(6 ಸಿಕ್ಸ್, 4 ಬೌಂಡರಿ) ಕಲೆ ಹಾಕುವ ಮೂಲಕ ತಂಡಕ್ಕೆ ಬೃಹತ್ ರನ್‍ಗಳ ಕೊಡುಗೆ ನೀಡಿದರು. ಆರಂಭದಿಂದಲೂ ಅಬ್ಬರದ ಆಟವಾಡಿದ್ದ ರೋಹಿತ್ ಶರ್ಮಾ 8ನೇ ಓವರ್ ನ ಕೊನೆಯಲ್ಲಿ ಬೆನ್ ಸ್ಟೋಕ್ ಬಾಲ್‍ಗೆ ಕ್ಲೀನ್ ಬೋಲ್ಡ್ ಆದರು.

    ಅಚ್ಚರಿ ಮೂಡಿಸಿದ ವಿರಾಟ್
    ನಾಯಕ ವಿರಾಟ್ ಕೊಹ್ಲಿ ಆರಂಭಿಕ ಆಟಗಾರಾರಾಗಿ ಕಣಕ್ಕಿಳಿದು ಔಟಾಗದೆ 52 ಬಾಲ್‍ಗೆ 80 ರನ್(2 ಸಿಕ್ಸ್ 7 ಬೌಂಡರಿ) ಚೆಚ್ಚಿ ತಂಡದ ಮೊತ್ತವನ್ನು 200 ದಾಟಿಸುವಲ್ಲಿ ಬೃಹತ್ ಕೊಡುಗೆ ನೀಡಿದರು. ಪಂದ್ಯವನ್ನು ಗೆಲುವಿನ ದಡಕ್ಕೆ ತಂದರು. ಇಬ್ಬರು ಆಟಗರರೊಂದಿಗೆ ಉತ್ತಮ ಜೊತೆಯಾಟವಾಡಿ ವಿರಾಟ್ ಕೊಹ್ಲಿ ಉತ್ತಮ ರನ್ ಕಲೆ ಹಾಕಿದರು. ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟವಾಡಿ 56 ಬಾಲ್‍ಗೆ 94 ರನ್ ಸಿಡಿಸಿದ್ದು, ಈ ಮೂಲಕ ತಂಡವನ್ನು ಗೆಲುವಿನ ಹಂತಕ್ಕೆ ತಂದು ನಿಲ್ಲಿಸಿದರು. ಬಳಿಕ ನಾಯಕ ವಿರಾಟ್ ಕೊಹ್ಲಿಗೆ ಸೂರ್ಯಕುಮಾರ್ ಯಾದವ್ ಉತ್ತಮ ಜೊತೆಯಾಟದಲ್ಲಿ 26 ಬಾಲ್‍ಗೆ 49 ರನ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ ಜೊತೆಯಾಟವಾಡಿ 3ನೇ ವಿಕೆಟ್‍ಗೆ 40 ಎಸೆತಗಳಿಗೆ 81 ರನ್ ಸಿಡಿ ತಂಡ ಉತ್ತಮ ಮೊತ್ತ ಕಲೆ ಹಾಕಲು ನೆರವಾದರು.

    ಕೊಹ್ಲಿ ದಾಖಲೆ
    ವಿರಾಟ್ ಕೊಹ್ಲಿ ಟಿ20ಯಲ್ಲಿ 12 ಅರ್ಧ ಶತಕ ದಾಖಲಿಸಿದ ಮೊದಲ ನಾಯಕ ಎಂಬ ದಾಖಲೆ ಬರೆದರು. ನ್ಯೂಜಿಲೆಂಡ್ ಕ್ಯಾಪ್ಟನ್ ಕೇನ್ ವಿಲಿಯಮ್ಸ್ 11 ಅರ್ಧ ಶತಕ ದಾಖಲಿಸಿದ್ದಾರೆ. ಆಸ್ಟ್ರೇಲಿಯಾದ ಕ್ಯಾಪ್ಟನ್ ಅರೋನ್ ಪಿಂಚ್ 10 ಅರ್ಧ ಶತಕ ದಾಖಲಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಸೂರ್ಯಕುಮಾರ್ ಯಾದವ್ 17 ಎಸೆತದಲ್ಲಿ 32 ಮತ್ತು ಹಾರ್ದಿಕ್ ಪಾಂಡ್ಯ 17 ಎಸೆತದಲ್ಲಿ 39 ರನ್ ಪೇರಿಸಿದರು.

    ಭುವನೇಶ್ವರ್ ಕುಮಾರ್ ಪ್ಲೇಯರ್ ಆಫ್ ದಿ ಮ್ಯಾಚ್
    ಕೇವಲ 15 ರನ್ ನೀಡಿ 2 ವಿಕೆಟ್ ಪಡೆದು ಅತ್ಯದ್ಭುತವಾಗಿ ಬಾಲಿಂಗ್ ಮಾಡಿದ ಭುವನೇಶ್ವರ್ ಕುಮಾರ್ ಗೆ ಪ್ಲೇಯರ್ ಆಫ್ ದಿ ಮ್ಯಾಚ್ ನೀಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ಅವರಿಗೆ ಪ್ಲೇಯರ್ ಆಫ್ ದಿ ಸಿರೀಸ್ ಸಹ ನೀಡಲಾಗಿದೆ.

    ಸೂರ್ಯಕುಮಾರ್ ಯಾದವ್ ಸಹ ಅದೇ ವೇಗದಲ್ಲಿ ಆಟವಡಲು ಯತ್ನಿಸಿದರು. 17 ಬಾಲ್‍ಗೆ 32ರನ್(2 ಸಿಕ್ಸ್, 3 ಬೌಂಡರಿ) ಸಿಡಿಸಿದರು. ಉತ್ತಮ ಆಡವಾಡುತ್ತಿದ್ದರೂ 13ನೇ ಓವರ್ ಆರಂಭದಲ್ಲಿ ಕ್ರಿಸ್ ಜೋರ್ಡನ್ ಬಾಲ್‍ಗೆ ಜೇಸನ್ ರಾಯ್‍ಗೆ ಕ್ಯಾಚ್ ನೀಡಿದರು. ನಂತರ ಬಂದ ಹಾರ್ದಿಕ್ ಪಾಂಡ್ಯ ಔಟಾಗದೆ 17 ಬಾಲ್‍ಗೆ 39 ರನ್(2 ಸಿಕ್ಸ್, 4 ಬೌಂಡರಿ) ಸಿಡಿಸಿದರು.

    ಈಗಾಗಲೇ ಆಡಿರುವ ನಾಲ್ಕು ಪಂದ್ಯಗಳಲ್ಲಿ ತಲಾ ಎರಡು ಪಂದ್ಯಗಳನ್ನು ಗೆದ್ದಿರುವ ಭಾರತ ಹಾಗೂ ಇಂಗ್ಲೆಂಡ್ ಟಿ-20 ಸರಣಿಯಲ್ಲಿ ಸಮ ಬಲ ಸಾಧಿಸಿದ್ದವು. ಇದು ನಿರ್ಣಾಯಕ ಪಂದ್ಯವಾಗಿದ್ದರಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇತ್ತು.

    ಗೆಲುವಿಗೆ 225 ರನ್‍ಗಳ ಗುರಿಯೊಂದಿಗೆ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್‍ಗೆ ಆರಂಭಿಕ ಆಘಾತ ನೀಡಿದ ಭೂವನೇಶ್ವರ್ ಕುಮಾರ್ ಎರಡನೇ ಬಾಲ್‍ಗೇ ಜೇಸನ್ ರಾಯ್‍ರನ್ನು ಕ್ಲೀನ್ ಬೋಲ್ಡ್ ಮಾಡಿದರು. ಈ ಮೂಲಕ ರಾಯ್ ಡಕೌಟ್ ಆದರು. ಅಬ್ಬರದ ಆಟವಾಡಿ 34 ಎಸೆತಗಳಿಗೆ 52 ರನ್(4 ಸಿಕ್ಸ್, 2 ಬೌಂಡರಿ) ಸಿಡಿಸಿ ಬಟ್ಲರ್ ಜೋಸ್ ಬಟ್ಲರ್ ಹಾರ್ದಿಕ್ ಪಾಂಡ್ಯಗೆ ಕ್ಯಾಚ್ ನೀಡಿದರು. ಬಳಿಕ ಜಾನಿ ಬೈರ್‍ಸ್ಟೋವ್ 7 ರನ್ (1 ಬೌಂಡರಿ) ಸಿಡಿಸಿ ಕ್ಯಾಚ್ ಸೂರ್ಯಕುಮಾರ್ ಯಾದವ್‍ಗೆ ಕ್ಯಾಚ್ ನೀಡಿದರು. ಬಳಿಕ ಡೇವಿಡ್ ಮಲನ್ ಮಿಂಚಿನಾಟವಾಡಿ 46 ಬಾಲ್‍ಗೆ 68 ರನ್ ಸಿಡಿಸಿ(2 ಸಿಕ್ಸ್, 9 ಬೌಂಡರಿ) ಶಾರ್ದೂಲ್ ಠಾಕೂರ್ ಅವರ ಬಾಲಿಗೆ ಕ್ಲೀನ್ ಬೌಲ್ಡ್ ಆದರು. ಬಳಿಕ ಐಯಾನ್ ಮಾರ್ಗನ್ ಸಹ 1 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಬೆನ್ ಸ್ಟೋಕ್ಸ್ 12 ಬಾಲ್‍ಗೆ 14ರನ್(2 ಬೌಂಡರಿ) ಬಾರಿಸಿ 18ನೇ ಓವರ್‍ನಲ್ಲಿ ಕ್ಯಾಚ್ ನೀಡಿದರು. ಇದೇ ಓವರ್ ಕೊನೇ ಬಾಲ್‍ಗೆ ಜೋಫ್ರಾ ಆರ್ಚರ್ 1 ರನ್ ಹೊಡೆದು ರನ್‍ಔಟ್ ಆದರು. ಕೊನೆಯದಾಗಿ ಕ್ರಿಸ್ ಜಾರ್ಡನ್ 10 ಬಾಲ್‍ಗೆ 11 ರನ್(1 ಸಿಕ್ಸ್) ಬಾರಿಸಿ ಸೂರ್ಯಕುಮಾರ್ ಯಾದವ್ ಅವರಿಗೆ ಕ್ಯಾಚ್ ನೀಡಿದರು.

  • ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ತುದಿಗೆ ಅದಾನಿ, ರಿಲಯನ್ಸ್ ಎಂಡ್ ಹೆಸರು ಬಂದಿದ್ದು ಹೇಗೆ?

    ನರೇಂದ್ರ ಮೋದಿ ಸ್ಟೇಡಿಯಂ ಪಿಚ್ ತುದಿಗೆ ಅದಾನಿ, ರಿಲಯನ್ಸ್ ಎಂಡ್ ಹೆಸರು ಬಂದಿದ್ದು ಹೇಗೆ?

    ಅಹ್ಮದಾಬಾದ್: ವಿಶ್ವದ ಅಂತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಸರು ನಾಮಕರಣ ಮಾಡಿದ ಬಳಿಕ ಭಾರೀ ಚರ್ಚೆ ನಡೆಯುತ್ತಿದ್ದು, ಸ್ಟೇಡಿಯಂನಲ್ಲಿನ ಅದಾನಿ, ರಿಲಯನ್ಸ್ ಎಂಡ್ ಬಗ್ಗೆ ಸಹ ಭಾರೀ ಟೀಕೆ ವ್ಯಕ್ತವಾಗಿದೆ.

    ಸ್ಟೇಡಿಯಂಗೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಇಡುವ ಮೂಲಕ ಹಾಗೂ ಪಿಚ್‍ನ ತುದಿಗಳಿಗೆ ಅದಾನಿ, ರಿಲಯನ್ಸ್ ಎಂಡ್ ಎಂದು ಗುರುತಿಸುವ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಗೆ ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ ಈಗ ಈ ಹೆಸರು ಹೇಗೆ ಬಂದಿದೆ ಎನ್ನುವುದಕ್ಕೆ ಮಾಧ್ಯಮಗಳು ವರದಿ ಪ್ರಕಟಿಸಿವೆ.

    ಮೂಲಗಳ ಪ್ರಕಾರ ನರೇಂದ್ರ ಮೋದಿ ಸ್ಟೇಡಿಯಂ ನಿರ್ಮಾಣಕ್ಕೆ ಅದಾನಿ ಹಾಗೂ ರಿಲಯನ್ಸ್ ಕಂಪನಿಗಳು ಹೆಚ್ಚು ದೇಣಿಗೆ ನೀಡಿವೆ. ದೇಣಿಗೆ ಜೊತೆಗೆ ಎರಡೂ ಕಂಪನಿಗಳು ತಲಾ ಒಂದು ಕಾರ್ಪೋರೇಟ್ ಬಾಕ್ಸ್‍ನ್ನು ಖರೀದಿಸಿವೆ. ಇದರ ವೆಚ್ಚ 25 ವರ್ಷಗಳ ಅವಧಿಗೆ ಜಿಎಸ್‍ಟಿ ಸೇರಿ 250 ಕೋಟಿ ರೂ. ಆಗಿದೆ ಎಂದು ಮಾಧ್ಯಮ ವರದಿ ಮಾಡಿದೆ. ದಾನಿಗಳ ಬೇಡಿಕೆಗೆ ಅನುಗುಣವಾಗಿ ಸ್ಟೇಡಿಯಂನಲ್ಲಿರುವ ಪಿಚ್‍ಗಳ ಎಂಡ್‍ಗಳಿಗೆ ಅದಾನಿ ಹಾಗೂ ರಿಲಯನ್ಸ್ ಹೆಸರನ್ನು ಇಡಲಾಗಿದೆ.

    ವಿಶೇಷ ಏನೆಂದರೆ ಈಗ ಕಾಂಗ್ರೆಸ್ ನಾಯಕರು ಅದಾನಿ ಎಂಡ್ ಹೆಸರನ್ನು ಇಟ್ಟಿದ್ದಕ್ಕೆ ಬಿಜೆಪಿಯನ್ನು ಟೀಕಿಸುತ್ತಿವೆ. ಆದರೆ ಅದಾನಿ ಎಂಡ್ ಹೆಸರು ಗುಜರಾತ್‍ನಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಇರಿಸಲಾಗಿತ್ತು. ಚಿಮನ್‍ಭಾಯ್ ಪಟೇಲ್ ಅವರ ಅಧಿಕಾರಾವಧಿಯಲ್ಲಿ ಅದಾನಿ ಎಂಡ್ ಎಂದು ಹೆಸರಿಡಲಾಗಿದೆ. ರಿಲಯನ್ಸ್ ಎಂಡ್ ಹೆಸರು ಇರುವ ಜಾಗದಲ್ಲಿ ಈ ಹಿಂದೆ ಸರ್ಕಾರಿ ಸ್ವಾಮ್ಯದ ಜಿಡಿಎಂಸಿ ಹೆಸರು ಇತ್ತು. ಆದರೆ ಇದೀಗ ಹೊಸದಾಗಿ ರಿಲಯನ್ಸ್ ಕಂಪನಿ ಈ ಕ್ರೀಡಾಂಗಣ ನಿರ್ಮಿಸಲು ಆರ್ಥಿಕ ಸಹಾಯ ಮಾಡಿದ ಹಿನ್ನೆಲೆಯಲ್ಲಿ ಹೆಸರನ್ನು ಇಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಪೂರ್ವ ಮತ್ತು ಪಶ್ಚಿಮ ಸ್ಟ್ಯಾಂಡ್‍ಗಳನ್ನು ಮಾರಾಟ ಮಾಡಲು ಕಾರ್ಪೋರೇಟ್ ಕಂಪನಿಗಳು ಒಳಗೊಳ್ಳುವಂತೆ ಮಾತುಕತೆ ನಡೆಸಲಾಗುತ್ತಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಒಟ್ಟು 76 ಕಾರ್ಪೋರೇಟ್ ಬಾಕ್ಸ್‍ಗಳಿವೆ.

    ಸರ್ದಾರ್ ವಲ್ಲಭಭಾಯ್ ಪಟೇಲ್ ಕ್ರೀಡಾ ಸಂಕೀರ್ಣದಲ್ಲಿ ನರೇಂದ್ರ ಮೋದಿ ಸ್ಟೇಡಿಯಂ ಒಂದು ಭಾಗವಾಗಿದೆ. ಒಲಿಂಪಿಕ್ ಸ್ಪರ್ಧೆ ನಡೆಸಲು ಸ್ವಿಮ್ಮಿಂಗ್ ಪೂಲ್, ಸ್ಕ್ವಾಶ್ ಅರೆನಾ, ಬ್ಯಾಡ್ಮಿಂಟನ್ ಹಾಗೂ ಟೆನ್ನಿಸ್ ಕೋಟ್ರ್ಸ್ ಸೇರಿದಂತೆ ಹಲವು ಸೌಲಭ್ಯಗಳು ನಿರ್ಮಾಣವಾಗಲಿದೆ.

    ನರೇಂದ್ರ ಮೋದಿ ಕ್ರೀಡಾಂಗಣ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಡ್ರೆಸ್ಸಿಂಗ್ ರೂಮ್‍ಗಳಿಗೆ ಹೊಂದಿಕೊಂಡಂತೆ ಜಿಮ್‍ಗಳಿಂದ ಹಿಡಿದು ಆಟ ಮತ್ತು ಅಭ್ಯಾಸ ನಡೆಸಲು ನೇರ ಸಂಪರ್ಕ ಕಲ್ಪಿಸಲಾಗಿದೆ. ಮಾರ್ಚ್‍ನಲ್ಲಿ ಭಾರತ-ಇಂಗ್ಲೆಂಡ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯಾವಳಿ ಸಹ ನಡೆಯುತ್ತಿದೆ.

  • ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಸ್ಟೇಡಿಯಂಗೆ ನರೇಂದ್ರ ಮೋದಿ ಹೆಸರು ನಾಮಕರಣ

    ವಿಶ್ವದ ಅತಿ ದೊಡ್ಡ ಕ್ರಿಕೆಟ್‌ ಸ್ಟೇಡಿಯಂಗೆ ನರೇಂದ್ರ ಮೋದಿ ಹೆಸರು ನಾಮಕರಣ

    ಅಹಮದಾಬಾದ್‌: ವಿಶ್ವದ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂಗೆ ʼನರೇಂದ್ರ ಮೋದಿ ಸ್ಟೇಡಿಯಂʼ ಎಂದು ಹೆಸರಿಡಲಾಗಿದೆ.

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಈ ಕ್ರೀಡಾಂಗಣವನ್ನು ಇಂದು ಅಧಿಕೃತವಾಗಿ ಉದ್ಘಾಟಿಸಿದರು. ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್‌ ಪಂದ್ಯ ಇಂದಿನಿಂದ ಈ ಕ್ರೀಡಾಂಗಣದಲ್ಲಿ ಆರಂಭವಾಗಿದೆ.

    ಟೆಸ್ಟ್‌ ಪಂದ್ಯ ಆರಂಭಕ್ಕೂ ಮೊದಲು ಉದ್ಘಾಟನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್‌ ಶಾ, ಗುಜರಾತ್‌ ರಾಜ್ಯಪಾಲರು, ಕೇಂದ್ರ ಕ್ರೀಡಾ ಮಂತ್ರಿ ಕಿರಣ್‌ ರಿಜಿಜು, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಅಮಿತ್‌ ಶಾ, ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಗುಜರಾತಿಗಳು ಕ್ರೀಡೆ ಮತ್ತು ಸಶಸ್ತ್ರ ಪಡೆ ಕ್ಷೇತ್ರಗಳಲ್ಲಿ ಪ್ರಗತಿ ಹೊಂದಬೇಕು ಎಂದು ಅವರು ಹೇಳುತ್ತಿದ್ದರು. ಅವರು ನನ್ನ ಕೋರಿಕೆಯ ಮೇರೆಗೆ ಗುಜರಾತ್‌ ಕ್ರಿಕೆಟ್‌ ಅಸೋಸಿಯೇಸನ್‌(ಜಿಸಿಎ) ಉಸ್ತುವಾರಿ ವಹಿಸಿಕೊಂಡರು ಮತ್ತು ಇಲ್ಲಿ ಕ್ರೀಡೆಗಳನ್ನು ಆಯೋಜಿಸಲು ಪ್ರೋತ್ಸಾಹಿಸಿದರು. ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವನ್ನು ಇಲ್ಲಿ ನಿರ್ಮಿಸಬೇಕು ಎಂದು ಅವರು ಕನಸು ಕಂಡಿದ್ದರು. ಈ ಕನಸು ನನಸಾಗಿದ್ದು 1,32,000 ಆಸನಗಳಿರುವ ಈ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ಕರೆಯಲಾಗುತ್ತದೆ ಎಂದು ಹೇಳಿದರು.

    ಮೊಟೆರಾದ ಸರ್ದಾರ್ ವಲ್ಲಭಭಾಯ್ ಪಟೇಲ್ ಸ್ಪೋರ್ಟ್ಸ್‌ ಎನ್‍ಕ್ಲೇವ್ ಹಾಗೂ ನರೇಂದ್ರ ಮೋದಿ ಕ್ರೀಡಾಂಗಣದೊಂದಿಗೆ ನಾರನ್‍ಪುರದಲ್ಲಿಯೂ ಕ್ರೀಡಾ ಸಂಕೀರ್ಣವನ್ನು ನಿರ್ಮಿಸಲಾಗುವುದು. ಈ ಮೂರರಲ್ಲಿ ಯಾವುದೇ ಅಂತರಾಷ್ಟ್ರೀಯ ಕ್ರೀಡಾಕೂಟವನ್ನು ನಡೆಸಬಹುದಾಗಿದೆ. ಈ ಮೂಲಕ ಅಹಮದಾಬಾದ್‌ ನಗರವನ್ನು ಭಾರತದ ಕ್ರೀಡಾ ನಗರವನ್ನಾಗಿ ರೂಪಿಸಲಾಗುತ್ತದೆ ಎಂದು ತಿಳಿಸಿದರು.

    ರಾಷ್ಟ್ರಪತಿ ಕೋವಿಂದ್‌ ಅವರು ಮಾತನಾಡಿ, 2018ರ ನವೆಂಬರ್‌ನಲ್ಲಿ ನಾನು ಆಸ್ಟ್ರೇಲಿಯಾಗೆ ತೆರಳಿದಾಗ 90 ಸಾವಿರ ಆಸನಗಳು ಇರುವ ಮೆಲ್ಬರ್ನ್‌ ಕ್ರಿಕೆಟ್‌ ಅಂಗಳ ವಿಶ್ವದ ಅತಿ ದೊಡ್ಡ ಸ್ಟೇಡಿಯಂ ಆಗಿದೆ ಎಂಬುದನ್ನು ನಾನು ಕೇಳಲ್ಪಟ್ಟೆ. ಆದರೆ ಈಗ ಇಲ್ಲಿ 1.32 ಲಕ್ಷ ಆಸನಗಳು ಇರುವ ವಿಶ್ವದ ದೊಡ್ಡ ಕ್ರಿಕೆಟ್‌ ಸ್ಟೇಡಿಯಂ ಆಗಿ ಹೊರಹೊಮ್ಮಿದ್ದು ಭಾರತಕ್ಕೆ ಹೆಮ್ಮೆ ತರುವ ವಿಚಾರ ಎಂದು ಹೇಳಿದರು.

    ಕ್ರೀಡಾಂಗಣದ ವಿಶೇಷತೆ ಏನು?
    ಒಟ್ಟು 63 ಎಕರೆ ಜಾಗದಲ್ಲಿ ವಿಸ್ತಾರವಾಗಿ ಹರಡಿಕೊಂಡಿರುವ ಕ್ರೀಡಾಂಗಣದ ಒಳಭಾಗದಲ್ಲಿ 76 ಕಾರ್ಪೊರೇಟ್ ಬಾಕ್ಸ್ ಗಳು, ಮೂರು ಅಭ್ಯಾಸ ಮೈದಾನಗಳು ಮತ್ತು ಸುಸಜ್ಜಿತ ನಾಲ್ಕು ಡ್ರೆಸ್ಸಿಂಗ್ ರೂಂ ಇದೆ. ಹೊನಲು ಬೆಳಕಿನಲ್ಲಿ ಪಂದ್ಯ ನಡೆಯುವ ಕಾರಣ ನೆರಳಿನ ಬಿಂಬಗಳನ್ನು ಮರೆಮಾಚಲು ಎಲ್‍ಇಡಿ ಬಲ್ಬ್ ಗಳನ್ನು ಹಾಕಲಾಗಿದೆ.

    ಮಳೆ ಬಂದರೆ ಪರಿಹಾರವಾಗಿ ಮೈದಾನವನ್ನು ಒಣಗಿಸಲು ಸಬ್ ಏರ್ ಸಿಸ್ಟಂ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಮಳೆ ನಿಂತು ಅರ್ಧ ಗಂಟೆಗೆ ಮೈದಾನ ಒಣಗುತ್ತದೆ.

    ಮೂರನೇ ಟೆಸ್ಟ್ ಪಂದ್ಯ ಹಲವು ವಿಶೇಷಗಳಿಂದ ಕೂಡಿದ್ದು, ಈಗಾಗಲೇ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯುವ ಟೆಸ್ಟ್ ಪಂದ್ಯದ ಶೇ.50 ರಷ್ಟು ಟೆಕೆಟ್ ಕೂಡ ಸೇಲ್ ಆಗಿದೆ. ಒಟ್ಟು 1.10 ಲಕ್ಷ ಪ್ರೇಕ್ಷಕ ಗ್ಯಾಲರಿ ಸಾಮರ್ಥ್ಯ ಹೊಂದಿರುವ ಕ್ರೀಡಾಂಗಣದಲ್ಲಿ ಕೊರೊನಾ ಕಾರಣದಿಂದಾಗಿ ಶೇ.50 ಮಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.