Tag: Narmada River

  • 100 ಅಡಿಯಿಂದ ನರ್ಮದಾ ನದಿಗೆ ಬಿತ್ತು ಬಸ್ – 12 ಸಾವು, ಹಲವರು ಗಂಭೀರ

    100 ಅಡಿಯಿಂದ ನರ್ಮದಾ ನದಿಗೆ ಬಿತ್ತು ಬಸ್ – 12 ಸಾವು, ಹಲವರು ಗಂಭೀರ

    ಭೋಪಾಲ್: ಇಂಧೋರ್‌ನಿಂದ ಮಹಾರಾಷ್ಟ್ರದ ಪುಣೆಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ಖಾಲ್‌ಘಾಟ್ ಸೇತುವೆ ತಡೆಗೋಡೆ ಮುರಿದು ಸುಮಾರು 100 ಅಡಿ ಎತ್ತರದಿಂದ ನರ್ಮದಾ ನದಿಗೆ ಉರುಳಿ ಬಿದ್ದಿದೆ.

    ಇದರಿಂದ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ ಎಂದು ಧಮ್ನೋಡ್ ಪೊಲೀಸ್ ಠಾಣೆಯ ಉಸ್ತುವಾರಿ ರಾಜ್‌ಕುಮಾರ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ನರ್ಮದಾ ನದಿಯಲ್ಲಿ ಸಂಪೂರ್ಣವಾಗಿ ಮುಳುಗಿರುವ ಬಸ್‌ನಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ನಮಗಿನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ಈಗಾಗಲೇ 12 ಮಂದಿ ಮೃತಪಟ್ಟಿದ್ದು, ಉಳಿದವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಬದುಕುಳಿಯುವ ಸಾಧ್ಯತೆಗಳೂ ಇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್

    ಇಂಧೋರ್‌ನಿಂದ ಪುಣೆಗೆ ತೆರಳುತ್ತಿದ್ದ ವೇಳೆ ಬಸ್ ತಡೆಗೋಡೆ ಮುರಿದು ನದಿಗೆ ಬಿದ್ದಿದೆ. ಬಸ್ ಅನ್ನು ನದಿಯಿಂದ ಮೇಲೆತ್ತಲು ಭಾರೀ ಯಂತ್ರೋಪಕರಣಗಳನ್ನು ನಿಯೋಜಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡವು (SDRF) ಸ್ಥಳದಲ್ಲಿದ್ದು, ಸ್ಥಳೀಯ ಮೀನುಗಾರರೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

    ಇಂಧೋರ್ ಮತ್ತು ಧಾರ್‌ನ ಹಿರಿಯ ಅಧಿಕಾರಿಗಳು ರಕ್ಷಣಾ ಕಾರ್ಯ ಪರಿಶೀಲಿಸಲು ಸ್ಥಳಕ್ಕೆ ಧಾವಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವದಲ್ಲೇ ಎತ್ತರದ ಆದಿಗುರು ಶಂಕರಚಾರ್ಯರ ಪ್ರತಿಮೆ ಸ್ಥಾಪನೆ!

    ವಿಶ್ವದಲ್ಲೇ ಎತ್ತರದ ಆದಿಗುರು ಶಂಕರಚಾರ್ಯರ ಪ್ರತಿಮೆ ಸ್ಥಾಪನೆ!

    ಭೋಪಾಲ್: ಜಗತ್ತಿಗೆ ವೇದಾಂತದ ಸಾರವನ್ನು ಸಾರಿದ ಆದಿಗುರು ಶಂಕರಚಾರ್ಯರ ಪ್ರತಿಮೆ ನಿರ್ಮಾಣ ಮಾಡಲು ಮಧ್ಯಪ್ರದೇಶದ ಸರ್ಕಾರ ನಿರ್ಧರಿಸಿದ್ದು, ಇದು ವಿಶ್ವದಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆಯಲಿದೆ.

    ಆದಿಗುರು ಶಂಕರ ಚಾರ್ಯರ ಪ್ರತಿಮೆಯು 108 ಅಡಿ ಎತ್ತರವಿದ್ದು, ಈ 108 ಅಡಿ ಎತ್ತರದ ಪ್ರತಿಮೆಯನ್ನು ಮಿಶ್ರ ಲೋಹ ಬಳಸಿ ನಿರ್ಮಿಸಲಾಗುತ್ತದೆ. ಇಡೀ ಯೋಜನೆಯನ್ನು 2000 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ.

    ಈ ಸಂಬಂಧ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಕಳೆದ ವಾರ ಆಚಾರ್ಯ ಶಂಕರ್ ಸಾಂಸ್ಕೃತಿಕ ಏಕತಾ ನ್ಯಾಸ್‍ನ ಟ್ರಸ್ಟಿಗಳ ಮಂಡಳಿಯ ಸಭೆಯಲ್ಲಿ ಯೋಜನೆಯ ಕುರಿತು ಚರ್ಚಿಸಿದ್ದರು. ಸ್ವಾಮಿ ಅವೇಧಶಾನಂದ ಗಿರಿ ಜಿ ಮಹಾರಾಜ್ ಸೇರಿದಂತೆ ಪ್ರಮುಖ ಸಂತರು ಮತ್ತು ಟ್ರಸ್ಟ್ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಿಎಂ ಮಾತನಾಡಿ ಓಂಕಾರೇಶ್ವರದಲ್ಲಿ ಆದಿ ಶಂಕರ ಮ್ಯೂಸಿಯಂ ಮತ್ತು ಅಂತರಾಷ್ಟ್ರೀಯ ವೇದಾಂತ ಸಂಸ್ಥಾನದ 108 ಅಡಿ ಬಹುಲೋಹದ ಪ್ರತಿಮೆ ಸ್ಥಾಪಿಸುವ ಯೋಜನೆಯು ರಾಜ್ಯವನ್ನು ಪ್ರಪಂಚಕ್ಕೆ ಪರಿಚಯಿಸುತ್ತದೆ ಎಂದು ಅಭಿಲಾಷೆ ವ್ಯಕ್ತಪಡಿಸಿದರು.

    ಯೋಜನೆಯಲ್ಲಿ ಏನಿದೆ?: ಮಧ್ಯಪ್ರದೇಶದ ಖಂಡ್ವಾ ಜಿಲ್ಲೆಯ ಓಂಕಾರೇಶ್ವರದಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು 18.5 ಎಕರೆ ಪ್ರದೇಶದಲ್ಲಿ ಶಂಕರಾಚಾರ್ಯರರಿಗೆ ಸಂಬಂಧಿಸಿದ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡುವುದರ ಜೊತೆಗೆ ನರ್ಮದಾ ನದಿಯ ಮತ್ತೊಂದು ತೀರದಲ್ಲಿ 12 ಎಕರೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಅದ್ವೈತ ವೇದಾಂತ ಸಂಸತ್ತು ನಿರ್ಮಾಣ ಮಾಡಲಾಗುತ್ತದೆ. ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೊನಾ ಪಾಸಿಟಿವ್

    ಈ ಸ್ಥಳದಲ್ಲೇ ಏಕೆ?: ಶಂಕರರು ದೇಶ ಸಂಚಾರ ಮಾಡಿರುವ ವೇದಾಂತಿಯಾಗಿದ್ದಾರೆ. ಆದರೆ ಅವರು ಗುರು ಗೋವಿಂದ ಭಗವತ್ಪಾದರನ್ನು ಓಂಕಾರೇಶ್ವರರಲ್ಲಿ ಭೇಟಿ ಮಾಡಿ ಇಲ್ಲಿಯೇ ದೀಕ್ಷೆ ಸ್ವೀಕರಿಸಿದರು ಎಂಬ ಪ್ರತೀತಿಯಿದೆ. ಹೀಗಾಗಿ ನರ್ಮದಾ ನದಿ ತಟದಲ್ಲಿ ಓಂಕಾರೇಶ್ವರದಲ್ಲೇ ಪ್ರತಿಮೆ ಸ್ಥಾಪನೆಗೆ ನಿರ್ಧರಿಸಲಾಗಿದೆ. ಇದನ್ನೂ ಓದಿ: ಕೊರೊನಾ ಸೋಂಕು ಏರಿಕೆ ಮಧ್ಯೆ ಸಿಹಿ ಸುದ್ದಿ – ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ

  • ನೋಡ ನೋಡುತ್ತಿದ್ದಂತೆ ಪತಿ, ಅತ್ತೆ ಮುಂದೆಯೇ ನದಿಗೆ ಜಿಗಿದ ಮಹಿಳೆ

    ನೋಡ ನೋಡುತ್ತಿದ್ದಂತೆ ಪತಿ, ಅತ್ತೆ ಮುಂದೆಯೇ ನದಿಗೆ ಜಿಗಿದ ಮಹಿಳೆ

    – 40 ಅಡಿ ಎತ್ತರದ ಸೇತುವೆ ಮೇಲಿಂದ ಜಂಪ್

    ಭೋಪಾಲ್: ಪತಿ, ಅತ್ತೆ ಮತ್ತು ಪುಟ್ಟ ಮಗಳ ಮುಂದೆಯೇ ಮಹಿಳೆ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯನ್ನ ಸ್ಥಳೀಯ ಯುವಕ ರಕ್ಷಿಸುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಖರ್ಗೋನ್ ಜಿಲ್ಲೆಯಿಂದ 45 ಕಿ.ಮೀ.ದೂರದಲ್ಲಿರುವ ಠಿಬಾಗಾಂವ್ ಗ್ರಾಮದ 26 ವರ್ಷದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಾನುವಾರ ಪತಿ, ಅತ್ತೆ ಹಾಗೂ 2 ವರ್ಷದ ಮಗಳ ಜೊತೆ ತವರಿಗೆ ತೆರಳುತ್ತಿದ್ದರು. ಈ ವೇಳೆ ಪತಿ-ಪತ್ನಿ ನಡುವೆ ಜಗಳ ನಡೆದಿದೆ. ನರ್ಮದಾ ನದಿಯ ಸೇತುವೆ ಬರುತ್ತಿದ್ದಂತೆ ಬೈಕ್ ನಿಲ್ಲಿಸುವಂತೆ ಮಹಿಳೆ ಹೇಳಿದ್ದಾಳೆ. ಬೈಕ್ ನಿಲ್ಲಿಸಿದ ಕೂಡಲೇ ಮಹಿಳೆ ನೋಡ ನೋಡುತ್ತಿದ್ದಂತೆ 40 ಅಡಿ ಎತ್ತರದ ಸೇತುವೆ ಮೇಲಿಂದ ನದಿಗೆ ಧುಮುಕಿದ್ದಾಳೆ.

    ಇತ್ತ ನದಿಯ ತೀರದಲ್ಲಿ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಯುವಕ ರಾಧೆಶ್ಯಾಮ್ ಕೂಡಲೇ ನೀರಿಗೆ ಧುಮುಕಿ ಮಹಿಳೆಯನ್ನ ರಕ್ಷಿಸಿದ್ದಾರೆ. ನುರಿತ ಈಜುಪಟು ಅಲ್ಲದಿದ್ರೂ ರಾಧೆಶ್ಯಾಮ್ ಮಹಿಳೆಯನ್ನ ರಕ್ಷಿಸಿ ದಡಕ್ಕೆ ತಂದಿದ್ದಾರೆ. ಮಹಿಳೆಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

  • ಐವರು ಧಾರ್ಮಿಕ ನಾಯಕರಿಗೆ  ಮಂತ್ರಿಸ್ಥಾನ ನೀಡಿದ ಮಧ್ಯಪ್ರದೇಶ ಸರ್ಕಾರ

    ಐವರು ಧಾರ್ಮಿಕ ನಾಯಕರಿಗೆ ಮಂತ್ರಿಸ್ಥಾನ ನೀಡಿದ ಮಧ್ಯಪ್ರದೇಶ ಸರ್ಕಾರ

    ಭೋಪಾಲ್: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಧ್ಯಪ್ರದೇಶ ಸರ್ಕಾರ ಐದು ಮಂದಿ ಹಿಂದೂ ಧಾರ್ಮಿಕ ಮುಖಂಡರಿಗೆ ರಾಜ್ಯ ದರ್ಜೆಯ ಮಂತ್ರಿ ಸ್ಥಾನವನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.

    ಕಂಪ್ಯೂಟರ್ ಬಾಬಾ, ನರ್ಮಾನಂದ ಮಹಾರಾಜ್, ಹರಿಹರನಂದ ಮಹಾರಾಜ್, ಭೈಯು ಮಹಾರಾಜ್‍ಜಂದ್ ಹಾಗೂ ಪಂಡಿತ್ ಯೋಗೇಂದ್ರ ಮಹಂತ್ ಅವರಿಗೆ ಮಧ್ಯಪ್ರದೇಶ ಸರ್ಕಾರ ಮಂತ್ರಿ ಸ್ಥಾನವನ್ನು ಕಲ್ಪಿಸಿದೆ.

    ಈ ಐದು ಮಂದಿಗೆ ನರ್ಮದಾ ನದಿಯ ಸಂರಕ್ಷಣಾ ಸಮಿತಿ ಸದಸ್ಯ ಸ್ಥಾನಮಾನವನ್ನು ನೀಡಲು ಮಾರ್ಚ್ ತಿಂಗಳಿನಲ್ಲಿ ಕ್ಯಾಬಿನೆಟ್ ಒಪ್ಪಿಗೆ ನೀಡಿತ್ತು. ಹೀಗಾಗಿ ಕೆಲಸ ನಿರ್ವಹಿಸಲು ಸಹಾಯವಾಗುವಂತೆ ಇವರಿಗೆ ಮಂತ್ರಿ ಸ್ಥಾನವನ್ನು ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕಾಂಗ್ರೆಸ್, ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸಿಎಂ ಶಿವರಾಜ್ ಚೌಹಾಣ್ ಸರ್ಕಾರ ಕೆಲವರನ್ನು ಸಂತೃಪ್ತಿಗೊಳಿಸುವ ಉದ್ದೇಶದಿಂದ ಈ ಕ್ರಮಕೈಗೊಂಡಿದೆ. ಉತ್ತರ ಪ್ರದೇಶದಲ್ಲಿ ಇಂತಹ ಕ್ರಮಕೈಗೊಂಡ ಕಾರಣ ಏನಾಗಿತ್ತು ಎಂಬುದನ್ನು ಇವರು ತಿಳಿಯಬೇಕಿದೆ ಎಂದು ಆರೋಪಿಸಿದೆ.

    ವಿರೋಧಿ ಪಕ್ಷಗಳ ಆರೋಪಗಳನ್ನು ನಿರಕಾರಿಸಿರುವ ಮಧ್ಯಪ್ರದೇಶ ಬಿಜೆಪಿ ಪಕ್ಷದ ವಕ್ತಾರ ರಜನೀಶ್, ಸರ್ಕಾರವು ನಿಯಮಾವಳಿ ಪ್ರಕಾರವೇ ಕಾರ್ಯನಿರ್ವಹಿಸುತ್ತಿದೆ. ಧಾರ್ಮಿಕ ನಾಯಕರಿಗೆ ನೀಡಿರುವ ಮಂತ್ರಿಸ್ಥಾನಮಾನ ನರ್ಮದಾ ನದಿಯ ಅಭಿವೃದ್ಧಿ ಕಾರ್ಯ ನಡೆಸಲು ನೆರವಾಗುತ್ತದೆ. ಅಲ್ಲದೇ ಜನರನ್ನು ಈ ಕಾರ್ಯದಲ್ಲಿ ಭಾಗವಹಿಸುವಂತೆ ಮಾಡಲು ಧಾರ್ಮಿಕ ಮುಖಂಡರು ಕಾರ್ಯನಿರ್ವಹಿಸುತ್ತಾರೆ ಎಂದು ಹೇಳಿದ್ದಾರೆ.

    ರಾಜ್ಯ ಸರ್ಕಾರ ಕ್ರಮವನ್ನು ಸಮರ್ಥಿಸಿಕೊಂಡಿರುವ ಕಂಪ್ಯೂಟರ್ ಬಾಬಾ ನಮ್ಮ ಕಾರ್ಯಕ್ಕೆ ತಕ್ಕ ಸ್ಥಾನ ನೀಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಕೆಲ ದಿನಗಳ ಹಿಂದೆ ಕಂಪ್ಯೂಟರ್ ಬಾಬಾ ನರ್ಮದಾ ಯೋಜನೆ ನಿರ್ಮಾಣ ಕಾರ್ಯದಲ್ಲಿ ಉಂಟಾಗಿರುವ ವ್ಯಾಪಕ ಭ್ರಷ್ಟಚಾರದ ಕುರಿತು ಯಾತ್ರೆ ನಡೆಸಿ ಜಾಗೃತಿ ಕಾರ್ಯ ನಡೆಸುವುದಾಗಿ ಹೇಳಿಕೆ ನೀಡಿದ್ದರು.