Tag: Naryana Gowda

  • ಕಾಂತಾರ ನಮ್ಮ ಗ್ರಹಿಕೆಯನ್ನು ಮೀರಿದ್ದು-  ಹೊಗಳಿ ವೀಕ್ಷಿಸುವಂತೆ ಕನ್ನಡಿಗರಲ್ಲಿ ನಾರಾಯಣ ಗೌಡ ಮನವಿ

    ಕಾಂತಾರ ನಮ್ಮ ಗ್ರಹಿಕೆಯನ್ನು ಮೀರಿದ್ದು- ಹೊಗಳಿ ವೀಕ್ಷಿಸುವಂತೆ ಕನ್ನಡಿಗರಲ್ಲಿ ನಾರಾಯಣ ಗೌಡ ಮನವಿ

    – ರಿಷಭ್‌ರನ್ನು ಎಷ್ಟು ಅಭಿನಂದಿಸಿದರೂ ಕಡಿಮೆಯೇ
    – ವಿಜಯ್ ಕಿರಗಂದೂರು ಕನ್ನಡ ಚಿತ್ರರಂಗಕ್ಕೆ ಒದಗಿ ಬಂದ ಆಪತ್ಪಾಂಧವ

    ಬೆಂಗಳೂರು: ನಿನ್ನೆ ನನ್ನ ಕುಟುಂಬದವರು, ಕರವೇ ಮುಖಂಡರೊಂದಿಗೆ ಕಾಂತಾರ ಚಾಪ್ಟರ್-1 (Kantara: Chapter 1) ಸಿನಿಮಾ ನೋಡಿದೆ. ಸಿನಿಮಾ ನೋಡಿದೆ ಅನ್ನುವುದಕ್ಕಿಂತ ಅನುಭವಿಸಿದೆ ಎಂದು ಹೇಳಿದರೆ ಸರಿಯಾಗುತ್ತದೆ. ಕಾಂತಾರ ಒಂದು ಅನುಭವ, ಸಿನಿಮಾವನ್ನು ಮೀರಿದ ಅದ್ಭುತ ಕಾಣ್ಕೆ. ಇದನ್ನು ಪದಗಳಲ್ಲಿ ವಿವರಿಸಿ ಹೇಳಲಾಗದು. ಕಾಂತಾರ ನಮ್ಮ ಎಣಿಕೆಯನ್ನು, ಗ್ರಹಿಕೆಯನ್ನು ಮೀರಿದ್ದು. ಒಂದು ಸಿನಿಮಾ ನೋಡುಗರಲ್ಲಿ ಇಷ್ಟು ಭಾವತೀವ್ರತೆಯನ್ನು ಉಂಟುಮಾಡಬಹುದು ಎಂಬುದೇ ವಿಸ್ಮಯ ಎಂದು ಕರ್ನಾಟಕ ರಕ್ಷಣಾ ವೇದಿಕೆ (KaRave) ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ಹಾಡಿ ಹೊಗಳಿದ್ದಾರೆ.

    ರಿಷಬ್ ಶೆಟ್ಟಿ (Rishab Shetty) ತಮ್ಮ ನಿರ್ದೇಶನ, ನಟನೆಯಲ್ಲಿ ಭಾರತ ಚಿತ್ರರಂಗದಲ್ಲಿ ಒಂದು ಹೊಸ ಮಾರ್ಗವನ್ನೇ ಸೃಷ್ಟಿಸಿದ್ದಾರೆ. ಕಣ್ಣು, ಕಿವಿ ಮಾತ್ರವಲ್ಲ, ನಮ್ಮ ಇಡೀ ಅಂತರಾತ್ಮವೇ ಸಿನಿಮಾವನ್ನು ಅನುಭವಿಸುತ್ತ, ಒಂದು ಅಲೌಕಿಕ, ಮಾಂತ್ರಿಕ ಜಗತ್ತಿಗೆ ಕೊಂಡೊಯ್ಯುವಂಥ ಮಾಯಾಜಾಲವನ್ನು ಸೃಷ್ಟಿಸಿದ್ದಾರೆ. ಒಂದು ಸಿನಿಮಾವನ್ನು ಹೀಗೂ ಮಾಡಬಹುದಾ ಎಂಬ ಬೆರಗನ್ನು ಮೂಡಿಸುತ್ತಲೇ ಸಿನಿಮಾ ನಿರ್ದೇಶಕರಿಗೆ ಒಂದು ಹೊಸ ದಾರಿಯನ್ನು ತೋರಿದ್ದಾರೆ. ಇಂಥ ಪವಾಡಗಳು ಪದೇಪದೇ ನಡೆಯುವುದಿಲ್ಲ. ಇದಕ್ಕಾಗಿ ರಿಷಬ್ ಶೆಟ್ಟಿ ಅವರನ್ನು ಎಷ್ಟು ಅಭಿನಂದಿಸಿದರೂ ಕಡಿಮೆಯೇ. ಇಂಥ ಅನುಭವವನ್ನು ಕೊಟ್ಟಿದ್ದಕ್ಕಾಗಿ ಅವರಿಗೆ ಕನ್ನಡ ಜನತೆಯ ಪರವಾಗಿ ಪ್ರೀತಿಯ ಹಾರೈಕೆಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿನಂದಿಸಿದ್ದಾರೆ. ಇದನ್ನೂ ಓದಿ:  ಭಾನುವಾರವೂ ಹೌಸ್‌ಫುಲ್‌ – ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ

     

    ಪೋಸ್ಟ್‌ನಲ್ಲಿ ಏನಿದೆ?
    ಕರ್ನಾಟಕದ (Karnataka) ನೆಲಮೂಲದ ಕಥೆಗಳನ್ನು ಒಂದಕ್ಕೊಂದು ಪೋಣಿಸಿ, ಅದನ್ನು ಒಂದು ಸಿನಿಮಾ ರೂಪಕ್ಕೆ ತರುವಾಗಿನ ಶ್ರದ್ಧೆ, ಕುಶಲತೆ ಕಾಂತಾರದ ಮೂಲಬಂಡವಾಳ. ಹೇಳಬೇಕಾಗಿದ್ದನ್ನು ಅಚ್ಚುಕಟ್ಟಾಗಿ ಹೇಳುವ ಪ್ರಾಮಾಣಿಕತೆಯೇ ಇಲ್ಲಿ ಗೆದ್ದಿದೆ. ಸಿನಿಮಾಗಾಗಿ ಸುರಿದಿರುವ ಹಣ, ತಾಂತ್ರಿಕ ಕೌಶಲ್ಯ ಇತ್ಯಾದಿಗಳು ಈ ಪ್ರಾಮಾಣಿಕತೆಯ ಅಡಿಪಾಯದ ಮೇಲೆಯೇ ಅರಳಿಕೊಡಿವೆ. ಅದ್ದೂರಿ ದೃಶ್ಯವೈಭವಗಳ ನಡುವೆಯೂ ಕಾಂತಾರದ ಅಂತರಾತ್ಮ ಎಲ್ಲೂ ಮುಕ್ಕಾಗದಂತೆ ನೋಡಿಕೊಂಡಿರುವುದು ನಿಜವಾದ ಯಶಸ್ಸು.

    ರಿಷಬ್ ಶೆಟ್ಟಿ ನಾನು ಗಮನಿಸಿದಂತೆ ಅಪಾರವಾದ ಕನ್ನಡ ಪ್ರೀತಿಯನ್ನು ಹೊಂದಿರುವ ಕಲಾವಿದ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಸಿನಿಮಾದ ಮೂಲಕವೇ ಅವರು ತಮ್ಮ ಕನ್ನಡಪ್ರೇಮವನ್ನು ಅವರು ತೋರಿದ್ದರು. ಕಾಂತಾರದ ಮೂಲಕ ಅವರು ಕನ್ನಡ ಚಿತ್ರರಂಗವನ್ನು ಭಾರತೀಯ ಚಿತ್ರರಂಗದ ಮುಂಚೂಣಿಗೆ ತಂದುನಿಲ್ಲಿಸಿದ್ದಾರೆ. ಬೇರೆ ಬೇರೆ ಚಿತ್ರರಂಗದ ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಕಾಂತಾರವನ್ನು ಕಣ್ತುಂಬಿಕೊಂಡು ಶ್ಲಾಘಿಸುತ್ತಿದ್ದಾರೆ. ಇದಲ್ಲವೇ ನಿಜವಾದ ಕನ್ನಡಸೇವೆ? ಇದಲ್ಲವೇ ನಮ್ಮತನವನ್ನು ಜಗತ್ತಿಗೆ ಹರಡುವ ಸಾಧನೆ? ಇದನ್ನೂ ಓದಿ:  ಕೇರಳದಲ್ಲಿ ‌ಕಾಂತಾರ ಭರ್ಜರಿ ಪ್ರದರ್ಶನ – ಅತಿ ಹೆಚ್ಚು ಗಳಿಕೆ ಮಾಡಿದ 2ನೇ ಕನ್ನಡ ಸಿನಿಮಾ ದಾಖಲೆ

     

    ಗೆಳೆಯ ವಿಜಯ್ ಕಿರಗಂದೂರು ಕನ್ನಡ ಚಿತ್ರರಂಗಕ್ಕೆ ಒದಗಿ ಬಂದ ಆಪತ್ಪಾಂಧವ. ಕನ್ನಡ ಸಿನಿಮಾದ ಹಿರಿಮೆಯನ್ನು ಗಡಿಗಳಾಚೆಗೆ ದಾಟಿಸಿದ ಮಹಾಸಾಹಸಿ. ಎಷ್ಟೇ ಪ್ರತಿಭಾವಂತ ಕಲಾವಿದರು/ತಂತ್ರಜ್ಞರು ಇದ್ದರೂ ಅವರ ಬೆನ್ನಿಗೆ ನಿಂತು, ಅವರನ್ನು ನಂಬಿ ಕೋಟಿಗಟ್ಟಲೆ ಹಣ ಹೂಡಿ ಸಿನಿಮಾ ಮಾಡುವವರು ಇಲ್ಲದೇ ಇದ್ದರೆ ಕೆಜಿಎಫ್, ಕಾಂತಾರದಂಥ ಇತಿಹಾಸ ನಿರ್ಮಾಣವಾಗುವುದಿಲ್ಲ. ವಿಜಯ್ ಕಿರಗಂದೂರು ಸವಾಲುಗಳನ್ನು ಸ್ವೀಕರಿಸಲು ಯಾವತ್ತೂ ಹಿಂಜರಿಯಲಿಲ್ಲ. ಕನ್ನಡದ ಪ್ರತಿಭೆಗಳ ಬೆನ್ನಿಗೆ ನಿಂತರು. ಅವರ ಕನಸುಗಳಿಗೆ ನೀರೆರೆದು ಪೋಷಿಸಿದರು.

    ವಿಜಯ್ ಕಿರಗಂದೂರು ಕೂಡ ಅಪ್ಪಟ ಕನ್ನಡಾಭಿಮಾನಿ. ಸಿನಿಮಾ ಒಂದು ಉದ್ಯಮ ಎಂಬುದು ಎಷ್ಟು ನಿಜವೋ ಲಾಭ ನಷ್ಟಗಳಿಂದಾಚೆ ಬಂಡವಾಳ ಹೂಡುವವರ ಮನೋಧರ್ಮವನ್ನೂ ಕೂಡ ಅದು ಹೇಳುತ್ತದೆ. ಕನ್ನಡ ಸಿನಿಮಾ ಕುರಿತು ಜಗತ್ತು ಮಾತಾಡುವಂತೆ ಮಾಡಿದ ವಿಜಯ್ ಕಿರಗಂದೂರ್‌ ನಿಜಕ್ಕೂ ಅಭಿನಂದನೆಗೆ ಅರ್ಹರು. ಅವರ ಯಶೋಗಾಥೆ ಇದೇ ರೀತಿ ಮುಂದುವರೆಯುತ್ತಲೇ ಹೋಗಲಿ ಎಂದು ಹಾರೈಸುತ್ತೇನೆ.

    ವಿಜಯ್, ರಿಷಬ್ ಅವರು ಮುಂಬರುವ ದಿನಗಳಲ್ಲಿ ಕಾಂತಾರದಂಥ ಹತ್ತಾರು ಸಿನಿಮಾಗಳನ್ನು ಕೊಟ್ಟು ಕನ್ನಡ ಚಿತ್ರರಂಗವನ್ನು ಬೆಳೆಸಲಿ, ಕನ್ನಡದ ಕೀರ್ತಿಯನ್ನು ಜಗತ್ತಿನಾದ್ಯಂತ ಹರಡಲಿ ಎಂದು ಮನದುಂಬಿ ಹಾರೈಸುವೆ.

    ಕಾಂತಾರ ಚಾಪ್ಟರ್ -1 ರಲ್ಲಿ ಕೆಲಸ ಮಾಡಿದ ಎಲ್ಲ ತಂತ್ರಜ್ಞರು, ಕಲಾವಿದರು, ಕಾರ್ಮಿಕರಿಗೆ ಈ ಮಹಾಯಶಸ್ಸಿನ ಪಾಲು ಸಲ್ಲಲೇಬೇಕು. ಅವರೆಲ್ಲರ ಸಮರ್ಪಣಾಭಾವದಿಂದಲೇ ಇದು ಇಷ್ಟು ದೊಡ್ಡದಾಗಿ ಬೆಳೆದಿದೆ. ಇಡೀ ಚಿತ್ರತಂಡವನ್ನು ನಾವು ಪ್ರೀತಿಯಿಂದ ಅಭಿನಂದಿಸುತ್ತೇನೆ.

    ನಿಸ್ಸಂಶಯವಾಗಿ ಕಾಂತಾರ ಚಾಪ್ಟರ್ -1 ಕನ್ನಡದ ಶ್ರೇಷ್ಠ ಚಿತ್ರಗಳಲ್ಲಿ ಒಂದು. ಇದನ್ನು ಚಿತ್ರಮಂದಿರಗಳಲ್ಲೇ ನೋಡಿ ಅನುಭವಿಸಬೇಕು. ಹೀಗಾಗಿ ನನ್ನೆಲ್ಲ ಕಾರ್ಯಕರ್ತರೂ ತಪ್ಪದೇ ಚಿತ್ರವನ್ನು ವೀಕ್ಷಿಸಿ ಬೆಂಬಲಿಸಬೇಕು ಎಂದು ಕೋರುವೆ. ಅಷ್ಟು ಮಾತ್ರವಲ್ಲ ಪೈರೆಸಿಯಂಥದ್ದು ಎಲ್ಲಾದರೂ ಕಂಡುಬಂದರೆ ಕೂಡಲೇ ಅದನ್ನು ಚಿತ್ರತಂಡದ, ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ವಿನಂತಿಸುವೆ. ಕಾಂತಾರ ಕನ್ನಡವನ್ನು ಗೆಲ್ಲಿಸಿದೆ, ಕಾಂತಾರಕ್ಕೆ ಅಭೂತಪೂರ್ವ ಗೆಲುವು ಕೊಡುವುದು ನಮ್ಮ ಕರ್ತವ್ಯ.

  • ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ನಾರಾಯಣ ಗೌಡ ಕಾಂಗ್ರೆಸ್‌ ಸೇರ್ಪಡೆ?

    ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದ ನಾರಾಯಣ ಗೌಡ ಕಾಂಗ್ರೆಸ್‌ ಸೇರ್ಪಡೆ?

    ಮಂಡ್ಯ: ಜೆಡಿಎಸ್‌(JDS) ತೊರೆದು ಬಿಜೆಪಿ(BJP) ಸೇರಿದ್ದ ಮಾಜಿ ಶಾಸಕ ನಾರಾಯಣ ಗೌಡ (Naryana Gowda) ಕಾಂಗ್ರೆಸ್‌ ಸೇರ್ಪಡೆ ಆಗುತ್ತಾರಾ ಹೀಗೊಂದು ಪ್ರಶ್ನೆ ಎದ್ದಿದೆ.

    ಬಿಜೆಪಿ-ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಅಸಮಾಧಾನಗೊಂಡಿರುವ ನಾರಾಯಣ ಗೌಡ ಈಗ ಕಾಂಗ್ರೆಸ್‌ (Congress) ಸೇರ್ಪಡೆ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದೆ. ಈ ಮಾತಿಗೆ ಪೂರಕ ಎಂಬಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ನಾರಾಯಣ ಗೌಡ ಭೇಟಿಯಾಗಿದ್ದಾರೆ.  ಇದನ್ನೂ ಓದಿ: Loksabha Election: ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ?

     

    ಮಂಡ್ಯ (Mandya) ಕ್ಷೇತ್ರವನ್ನು ಬಿಜೆಪಿಗೆಯೇ ಬಿಟ್ಟುಕೊಡಬೇಕು, ಇಲ್ಲವಾದಲ್ಲಿ ನಾನು ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ನಾರಾಯಣಗೌಡ ಹಿಂದೆ ಬಹಿರಂಗವಾಗಿ ಹೇಳಿದ್ದರು. ಸದ್ಯ ಮಂಡ್ಯ ಕ್ಷೇತ್ರವನ್ನು ಬಹುತೇಕ ಬಿಜೆಪಿ ಜೆಡಿಎಸ್‌ಗೆ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ನಿರ್ಧಾರದಿಂದ ನಾರಾಯಣಗೌಡ ಬೇಸರಗೊಂಡಿದ್ದು, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.

    ಸಿದ್ದರಾಮಯ್ಯ ಅವರ ಭೇಟಿ ವೇಳೆ ನಾನು ಕಾಂಗ್ರೆಸ್ ಸೇರಿಕೊಳ್ಳುತ್ತೇನೆ, ನನಗೆ ಮಂಡ್ಯ ಎಂಪಿ‌ ಟಿಕೆಟ್ ನೀಡಿ ಎಂದು ನಾರಾಯಣಗೌಡ ಕೇಳಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಈಗ ಟಿಕೆಟ್ ನೀಡಲು ಸಾಧ್ಯವಿಲ್ಲ. ಮೊದಲು ಪಕ್ಷ ಸೇರ್ಪಡೆಯಾಗಬೇಕು. ಮುಂದೆ ಒಳ್ಳೆಯ ಸ್ಥಾನಮಾನ ನೀಡೋಣ ಎಂದು ನಾರಾಯಣಗೌಡಗೆ ಭರವಸೆ ನೀಡಿದ್ದಾರೆ. ಇದಕ್ಕೆ ಪೂರಕ ಎಂಬಂತೆ ನಾರಾಯಣಗೌಡ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿರುವ ಫೋಟೋವೊಂದು ವೈರಲ್ ಆಗಿದೆ. ಇದನ್ನೂ ಓದಿ: ಟೈಮ್ಸ್‌ ನೌ ಸಮೀಕ್ಷೆ – NDA 366, INDIA 104 ಸೀಟ್‌: ಕರ್ನಾಟಕದಲ್ಲಿ ಬಿಜೆಪಿ ದಳ ಮೈತ್ರಿಗೆ 23 ಸ್ಥಾನ

     

  • ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ – ನಾರಾಯಣಗೌಡ

    ಅನುದಾನ ಸದ್ಬಳಕೆಯಲ್ಲಿ ತುಮಕೂರು ರಾಜ್ಯದಲ್ಲಿಯೇ ಪ್ರಥಮ – ನಾರಾಯಣಗೌಡ

    ತುಮಕೂರು: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ.ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಅನುದಾನ ಬಳಕೆ ವಿಚಾರದಲ್ಲಿ ತುಮಕೂರು ಜಿಲ್ಲೆ ರಾಜ್ಯಕ್ಕೆ ಪ್ರಥಮ. ಕೋವಿಡ್ ನಿಂದ ಲಾಕ್ ಡೌನ್ ಆಗಿದ್ದರೂ ಕೆಲಸ ವೇಗವಾಗಿ ನಡೆದಿದೆ. ಬಹುತೇಕ ಜಿಲ್ಲೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು ಆಸಕ್ತಿಯಿಂದ ಕೆಲಸ ಮಾಡಿದ್ದಾರೆ ಎಂದು ಪ್ರಶಂಸಿಸಿದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಹತ್ವ ಏನು ಎನ್ನುವುದನ್ನು ರಾಜ್ಯಕ್ಕೆ ತೋರಿಸಿಕೊಡುತ್ತೇನೆ. ಹಿಂದೆಂದೂ ಆಗಿರದಂತಹ ಅಭಿವೃದ್ಧಿ ಕಾರ್ಯ ಮಾಡುತ್ತೇನೆ. ಪ್ರತಿ ತಾಲೂಕು, ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡುತ್ತೇನೆ. ಅದಕ್ಕಾಗಿಯೆ ಎಲ್ಲ ಜಿಲ್ಲೆಗಳಿಗೆ ತೆರಳಿ ಪರಿಶೀಲನೆ ಮಾಡುತ್ತಿದ್ದೇನೆ. ತುಮಕೂರಿನಲ್ಲಿ ಭವ್ಯವಾದ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹೈಟೆಕ್ ಆಗಲಿದೆ. ಅಲ್ಲಿ ಕಾಮಗಾರಿ ಆರಂಭವಾದಾಗ ತುಮಕೂರಿನ ಕ್ರೀಡಾಂಗಣವನ್ನು ರಾಜ್ಯಮಟ್ಟದ ಕ್ರೀಡಾ ಚಟುವಟಿಕೆಗೆ ಬಳಸಬೇಕು. ಅಷ್ಟು ವ್ಯವಸ್ಥಿತ ಕ್ರೀಡಾಂಗಣ ನಿರ್ಮಾಣವಾಗುತ್ತಿದೆ ಎಂದು ಹೇಳಿದರು. ಕ್ರೀಡಾ ಇಲಾಖೆ ಅಡಿ ಬಾಕಿ ಇರುವ ಕಾಮಗಾರಿಗಳು ಶೀಘ್ರ ಮುಗಿಯಬೇಕು ಎಂದರು.

    ಜಿಲ್ಲೆಯಲ್ಲಿ ಹೊಸ ಬೆಳೆ ಬೆಳೆಯುತ್ತಿರುವ ಮೂಸಂಬಿ, ಡ್ರಾಗನ್ ಫ್ರೂಟ್ ಬಗ್ಗೆ ಮಾಹಿತಿ ಪಡೆದ ಸಚಿವರು, ಬೆಳೆ ವಿಮೆಗೆ ಒತ್ತು ಕೊಡುವಂತೆಯೂ ತಿಳಿಸಿದರು. ಅಡಿಕೆ ಬೆಳೆಯ ಹನಿ ನೀರಾವರಿಗೆ ಸಬ್ಸಿಡಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮನವಿ ಮಾಡಿದಾಗ, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹಾಲ್‍ನಲ್ಲಿ ಫುಲ್ ಗ್ಯಾಂಗ್‍ಸ್ಟರ್ಸ್ ಇದ್ದಾಗ ಮಾತ್ರ ಮಾನ್‍ಸ್ಟರ್ ಎಂಟ್ರಿ

    ತುಮಕೂರು ಜಿಲ್ಲೆ ಒಂದು ಕಾಲದಲ್ಲಿ ಕಬಡ್ಡಿ, ಕೊಕ್ಕೋ ಕ್ರೀಡೆಗೆ ಬಹಳ ಹೆಸರುವಾಸಿಯಾಗಿತ್ತು. ಅದರೆ ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಯೇ ಇಲ್ಲದಂತಾಗಿದೆ. ಹಾಗಾಗಿ ಕ್ರೀಡಾ ಚಟುವಟಿಕೆಗೆ ಒತ್ತು ಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅಧಿಕಾರಿಗಳಿಗೆ ನಿರ್ದೇಶಿಸಿದರು. ಅಲ್ಲದೆ ರೈತರು ಮತ್ತು ವರ್ತಕರ ನಡುವೆ ನೇರ ಮಾರುಕಟ್ಟೆ ಒದಗಿಸಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಆನ್ ಲೈನ್ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಇದರಿಂದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ವೀರಭದ್ರಯ್ಯ, ಚಿದಾನಂದ ಗೌಡ, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಸೇರಿದಂತೆ ಇತರರಿದ್ದರು.