Tag: Nasir Hussain

  • ಪಾಕಿಸ್ತಾನ ಜಿಂದಾಬಾದ್ ಕೂಗೋ ಮನಸ್ಥಿತಿ ಇರೋರನ್ನ ಸಂಸತ್ ನಿಯೋಗದಲ್ಲಿ ಸೇರಿಸಬೇಕಾ: ಕರಂದ್ಲಾಜೆ

    ಪಾಕಿಸ್ತಾನ ಜಿಂದಾಬಾದ್ ಕೂಗೋ ಮನಸ್ಥಿತಿ ಇರೋರನ್ನ ಸಂಸತ್ ನಿಯೋಗದಲ್ಲಿ ಸೇರಿಸಬೇಕಾ: ಕರಂದ್ಲಾಜೆ

    ಬೆಂಗಳೂರು: ಪಾಕಿಸ್ತಾನದ ಬಂಡವಾಳವನ್ನು ವಿದೇಶದಲ್ಲಿ ಬೆತ್ತಲೆ ಮಾಡಲು, ಕೇಸ್ ಇರೋ ನಾಸೀರ್ ಹುಸೇನ್‌ರನ್ನ ಸಂಸತ್ ನಿಯೋಗದಲ್ಲಿ ಸೇರಿಸೋಕೆ ಆಗುತ್ತಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje) ಕಾಂಗ್ರೆಸ್ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.

    ಸಂಸತ್ ನಿಯೋಗದಿಂದ ನಾಸೀರ್ ಹುಸೇನ್(Nasir Hussain) ಹೆಸರು ಕೇಂದ್ರ ಕೈ ಬಿಟ್ಟಿರೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ನಾಸೀರ್ ಹುಸೇನ್? ರಾಜ್ಯಸಭೆ ಸದಸ್ಯರಾಗೋವಾಗ ನಾಸೀರ್ ಹುಸೇನ್ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದ್ರು. ಅಂತಹ ಮಾನಸಿಕತೆ ಇರೋರನ್ನ ವಿದೇಶಕ್ಕೆ ಕಳಿಸಬೇಕಾ? ಅವರ ನಾಯಕ ರಾಹುಲ್ ಗಾಂಧಿ(Rahul Gandhi) ವಿದೇಶದಲ್ಲಿ ಭಾರತದ ವಿರುದ್ಧ ಮಾತಾಡೋ ಹಾಗೆ ನಾಸೀರ್ ಹುಸೇನ್ ಮಾತಾಡಬಹುದು. ಅಲ್ಲಿ ಹೋಗಿ ದೇಶದ ವಿರೋಧ ಮಾತನಾಡಲ್ಲ ಎಂದು ಏನು ಗ್ಯಾರಂಟಿ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ

    ನಾಸೀರ್ ಹುಸೇನ್ ಮೇಲೆ ಕೇಸ್ ಇದೆ. ನಾನೇ ಗೃಹ ಸಚಿವರಿಗೆ ಪಾಕಿಸ್ತಾನ ಜಿಂದಾಬಾದ್ ಕೂಗಿರೋ ಪ್ರಕರಣದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಇದ್ದಾರೆ ಅಂತ ಹೇಳಿದ್ದೇನೆ. ಅಂತಹವರನ್ನು ವಿದೇಶದ ಪ್ರವಾಸಕ್ಕೆ ಕಳಿಸಬೇಕಾ? ಕಾಂಗ್ರೆಸ್(Congress) ದಿವಾಳಿ ಆಗಿದ್ಯಾ? ನಾಸೀರ್ ಹುಸೇನ್ ಬಿಟ್ಟು ಬೇರೆ ಹೆಸರು ಇಲ್ವಾ? ಇದು ಕಾಂಗ್ರೆಸ್‌ನ ದಿವಾಳಿತನ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

  • ವಿಧಾನಸೌಧದಲ್ಲೇ ಪಾಕ್‌ ಜಿಂದಾಬಾದ್‌ ಘೋಷಣೆ – 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ

    ವಿಧಾನಸೌಧದಲ್ಲೇ ಪಾಕ್‌ ಜಿಂದಾಬಾದ್‌ ಘೋಷಣೆ – 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ

    ಬೆಂಗಳೂರು: ರಾಜ್ಯಸಭೆ ಚುನಾವಣಾ (Rajya Sabha Election) ವೇಳೆ ವಿಧಾನಸೌಧದಲ್ಲೇ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣ ನಡೆದು 9 ತಿಂಗಳು ಕಳೆದರೂ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ ಯಾಕೆ ಎಂಬ ಪ್ರಶ್ನೆ ಎದ್ದಿದೆ.

    ಕಾಂಗ್ರೆಸ್‌ ಸದಸ್ಯ ನಾಸಿರ್ ಹುಸೇನ್ (Nasir Hussain) ಅವರು ಗೆದ್ದ ಖುಷಿಯಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಎಂದು ಘೋಷಣೆ ಕೂಗಿದ್ದರು.ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧನ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ನಂತರದ ದಿನಗಳಲ್ಲಿ ಮೂವರು ಆರೋಪಿಗಳು ಜಾಮೀನು ಪಡೆದು ಹೊರಗೆ ಬಂದಿದ್ದರು.  ಇದನ್ನೂ ಓದಿ: ಮಣಿಪುರದ ನೂತನ ರಾಜ್ಯಪಾಲರಾಗಿ ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ನೇಮಕ

    ಪೊಲೀಸರು ದೋಷಾರೋಪ ಪಟ್ಟಿಯನ್ನು (Chargesheet) ಸಲ್ಲಿಸಿಲ್ಲ ಅಷ್ಟೇ ಅಲ್ಲದೇ ಇಲ್ಲಿಯವರೆಗೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ.

    ನವ ಮಾಸಗಳೇ ಕಳೆದರೂ ಅವರು ಪೊಲೀಸರ ಮುಂದೆ ಹಾಜರಾಗುವ ಸಾಹಸ ಮಾಡಿಲ್ಲ. ಸದ್ಯ ಪೊಲೀಸರು (Police) ಏನು ಮಾಡಲು ಆಗದೇ ಒದ್ದಾಡುತ್ತಿದ್ದಾರೆ. ಪೊಲೀಸರ ಈ ನಡೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

     

  • ಆರೋಪಿಗಳ ಪತ್ತೆಗೆ ಭಾರೀ ಕಸರತ್ತು – 15 ಜನರ ಧ್ವನಿ ಪರೀಕ್ಷೆ ನಡೆಸಿದ್ದ ಎಫ್‌ಎಸ್‌ಎಲ್

    ಆರೋಪಿಗಳ ಪತ್ತೆಗೆ ಭಾರೀ ಕಸರತ್ತು – 15 ಜನರ ಧ್ವನಿ ಪರೀಕ್ಷೆ ನಡೆಸಿದ್ದ ಎಫ್‌ಎಸ್‌ಎಲ್

    – ವಿಧಾನಸೌಧದಲ್ಲಿ ಆಗಿದ್ದೇನು? ವಿವಾದ ಹುಟ್ಟಿಕೊಂಡದ್ದು ಹೇಗೆ? ಇಲ್ಲಿದೆ ವಿವರ

    ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪ ಮೇಲೆ ಮೂವರನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಆಧರಿಸಿ ದೆಹಲಿ ಮೂಲದ ಇಲ್ತಾಜ್, ಆರ್.ಟಿ ನಗರದ ಮುನಾವರ್ ಹಾಗೂ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಎಂಬ ಆರೋಪಿಗಳನ್ನು ಆರೋಪಿಗಳನ್ನು ಬಂಧಿಸಿದ್ದಾರೆ.

    ಈಗಾಗಲೇ ಆರೋಪಿಗಳಿಗೆ ವೈದ್ಯಕೀಯ ತಪಾಸಣೆ ಮಾಡಿಸಿದ್ದು, ಕೋರಮಂಗಲದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಖಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸರನ್ನೂ ಸಸ್ಪೆಂಡ್‌ ಮಾಡಿ: ಅಶೋಕ್‌ ಆಗ್ರಹ

    ಪ್ರಕರಣದ ಹಾದಿ ಹೀಗಿದೆ:
    ಫೆಬ್ರವರಿ 27ರಂದು ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಬೆನ್ನಲ್ಲೇ ನಾಸೀರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಕಂಡುಬಂದಿತ್ತು. ಈ ಬಗ್ಗೆ `ಪಬ್ಲಿಕ್ ಟಿವಿ’ ವರದಿ ಮಾಡಿತ್ತು. ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಅವರನ್ನು `ಪಬ್ಲಿಕ್ ಟಿವಿ’ ವರದಿಗಾರರು ಮಾತನಾಡಿಸಲು ಮುಂದಾಗಿದ್ದರು. ಈ ವೇಳೆ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದರು. ಈ ಬಗ್ಗೆ ಪ್ರಶ್ನೆ ನಾಸೀರ್‌ ಅವರನ್ನು ಪ್ರಶ್ನೆ ಮಾಡಿದ್ದಕ್ಕೆ, ಪಾಕಿಸ್ತಾನ ಜಿಂದಾಬಾದ್ ಅಂದಿದ್ದು ನನಗೆ ಗೊತ್ತಿಲ್ಲ ಎಂದು ನಾಸೀರ್ ಹುಸೇನ್ ಉತ್ತರಿಸಿದ್ದರು. ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ – ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. 153ಬಿ(ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ನೀಡಿದ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ವಿಧಾನಸೌಧ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಾಗಿತ್ತು. ನಂತರ ಮಾಧ್ಯಮಗಳಿಂದ ಖಚಿತ Raw footage ಪಡೆದು ಪರಿಶೀಲನೆ ನಡೆಸಿದ್ದ ಪೊಲೀಸರು ಎಫ್‌ಎಸ್‌ಎಲ್‌ಗೆ ಕಳಿಸಿಕೊಟ್ಟಿದ್ದರು.

    ಆರೋಪಿಗಳ ಪತ್ತೆಗೆ ಭಾರೀ ಕಸರತ್ತು:
    ಪೊಲೀಸರಿಂದ ವೀಡಿಯೋ ಆಧಾರಗಳನ್ನು ಪಡೆದಿದ್ದ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಆರೋಪಿಗಳ ಪತ್ತೆಗೆ ಭಾರೀ ಕಸರತ್ತು ನಡೆಸಿತ್ತು. 15 ಧ್ವನಿ ಮಾದರಿಗಳನ್ನ ಸಂಗ್ರಹಿಸಿತ್ತು. ಪ್ರತಿಯೊಂದು ಧ್ವನಿಗಳನ್ನು ಆಲಿಸುವ ಮೂಲಕ ಸೂಕ್ಷ್ಮವಾಗಿ ಪರಿಶೀಲನೆ ನಡೆಸಿತ್ತು. ಕೊನೆಗೆ 15 ಜನರಲ್ಲಿ ಮೂವರು ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬುದನ್ನು ವರದಿಯಲ್ಲಿ ದೃಢಪಡಿಸಿತು. ಈ ಬೆನ್ನಲ್ಲೇ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ- ಮೂವರ ಬಂಧನ

  • ಪಾಕ್‌ ಪರ ಘೋಷಣೆ ಆರೋಪ; ಎಫ್‌ಎಸ್‌ಎಲ್‌ಗೆ ವೀಡಿಯೋ ಕಳುಹಿಸಲು ಪೊಲೀಸರ ತಯಾರಿ

    ಪಾಕ್‌ ಪರ ಘೋಷಣೆ ಆರೋಪ; ಎಫ್‌ಎಸ್‌ಎಲ್‌ಗೆ ವೀಡಿಯೋ ಕಳುಹಿಸಲು ಪೊಲೀಸರ ತಯಾರಿ

    ಬೆಂಗಳೂರು: ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ, ವೀಡಿಯೋ ಪಡೆದು ಎಫ್‌ಎಸ್‌ಎಲ್‌ಗೆ ಕಳುಹಿಸಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ.

    ವೀಡಿಯೋ ಬಗ್ಗೆ ಪೊಲೀಸರಿಗೆ ಈವರೆಗೂ ಸ್ಪಷ್ಟನೆ ಸಿಕ್ಕಿಲ್ಲ. ಮಾಧ್ಯಮಗಳಿಂದ Raw footage ಪಡೆದು ಪರಿಶೀಲನೆ ಮಾಡಲು ಪೊಲೀಸರು ಮುಂದಾಗಿದ್ದಾರೆ. ಸುದ್ದಿ ಭಿತ್ತರಿಸಿದ ಪ್ರತಿ ಮಾಧ್ಯಮಗಳಿಂದ ವೀಡಿಯೋಗಳನ್ನು ಪಡೆದು ಎಫ್‌ಎಸ್‌ಎಲ್‌ಗೆ ಕಳಿಸಿಕೊಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಪಾಕ್‌ ಜಿಂದಾಬಾದ್‌ ಘೋಷಣೆ – ಸುಮೊಟೋ ಕೇಸ್‌ ದಾಖಲಿಸಿದ ಪೊಲೀಸರು

    ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ನ ಮೂವರು ಮತ್ತು ಬಿಜೆಪಿ ಒಬ್ಬ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಗೆಲುವು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೇಳಿಬಂದಿದೆ ಎಂದು ಆರೋಪಿಸಲಾಗಿದೆ.

    ಈ ಆರೋಪವನ್ನು ಕಾಂಗ್ರೆಸ್‌ ನಾಯಕರು ಅಲ್ಲಗಳೆದಿದ್ದಾರೆ. ಆದರೆ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: 2026 ರ ಅಸೆಂಬ್ಲಿ ಚುನಾವಣೆ ಹೊತ್ತಿಗೆ ಕೆಲವೇ ಮುಸ್ಲಿಮರು ಕಾಂಗ್ರೆಸ್‌ನಲ್ಲಿ ಉಳಿಯುತ್ತಾರೆ: ಅಸ್ಸಾಂ ಸಿಎಂ

  • ಅಜಾನ್ ತೀರ್ಪು ಎಲ್ಲ ಧರ್ಮದ ದೇವಸ್ಥಾನಗಳಿಗೆ ಅನ್ವಯ: ನಾಸಿರ್ ಹುಸೇನ್

    ಅಜಾನ್ ತೀರ್ಪು ಎಲ್ಲ ಧರ್ಮದ ದೇವಸ್ಥಾನಗಳಿಗೆ ಅನ್ವಯ: ನಾಸಿರ್ ಹುಸೇನ್

    ಕಲಬುರಗಿ: ಹಿಂದೂ ಸಂಘಟನೆಗಳು ಮತ್ತು ರಾಜ್ಯ ಸರ್ಕಾರ ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕೆಡಿಸುವಲ್ಲಿ ಮುಂದಾಗಿವೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ರಾಜ್ಯ ಘಟಕದ ಅಧ್ಯಕ್ಷ ನಾಸಿರ್ ಹುಸೇನ್ ಹೇಳಿದರು.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದೂ ಸಂಘಟನೆಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಒಂದು ಶಾಲೆಯಲ್ಲಿ ನಡೆದ ವಿಷಯವನ್ನು ಬಿಜೆಪಿ ದುಬ9ಳಕೆ ಮಾಡಿದ್ದಾರೆ. ಹಿಜಬ್, ಹಲಾಲ್ ಕಟ್, ಜಟ್ಕಾ ಕಟ್, ಅಜಾನ್ ಇಂತಹ ವಿಷಯಗಳನ್ನು ಮುನ್ನೆಲೆಗೆ ತಂದು ಶಾಂತಿ ಸೌಹಾರ್ದತೆ ಕೆಡಿಸುತ್ತಿವೆ ಎಂದರು. ಇದನ್ನೂ ಓದಿ: ಈಶ್ವರಪ್ಪನನ್ನು ಸಂಪುಟದಿಂದ ವಜಾಗೊಳಿಸಿ, ಕೂಡಲೇ ಬಂಧಿಸಬೇಕು: ಸಿದ್ದರಾಮಯ್ಯ

    ಹಿಂದೂ ಸಂಘಟನೆಗಳು ದೇವಸ್ಥಾನಗಳ ಬಳಿ ಮುಸ್ಲಿಮರಿಗೆ ವ್ಯಾಪಾರ ನಿಷೇಧ ಮಾಡಿದರು. ಮಾವಿನ ಹಣ್ಣು ಕೊಡದಂತೆ ಕರಪತ್ರಗಳನ್ನು ಹಂಚಿದರು. ಹೀಗಾಗಿ ಅಜಾನ್ ಎಲ್ಲ ಧಮ9ದ ದೇವಸ್ಥಾನಗಳಿಗೆ ಅನ್ವಯವಾಗುತ್ತದೆ. ಆದರೆ ರಾಜ್ಯ ಸರ್ಕಾರ ಜನರ ಮುಂದೆ ಕೇವಲ ಅಜಾನ್ ಬಗ್ಗೆ ಮಾತ್ರ ಬಿಂಬಿಸಿತು ಎಂದರು.

    ಈ ಘಟನೆಗಳು ಎಲ್ಲವನ್ನೂ ನಮ್ಮ ನಾಯಕರಾದ ಕುಮಾರಸ್ವಾಮಿ ಅವರು ತಡೆಯುತ್ತಿದ್ದಾರೆ. ಈ ವಿಷಯಗಳಲ್ಲಿ ಕಾಂಗ್ರೆಸ್ ಮೌನ ವಹಿಸಿದ್ದು, ಹಿಂದೂ-ಮುಸ್ಲಿಂ ವಿಷಯದಲ್ಲಿ ನಮಗೆ ನಷ್ಟ ಆಗುತ್ತದೆ ಎಂಬ ಕಾರಣಕ್ಕೆ ಕಾಂಗ್ರೆಸ್ ಮೌನ ತಾಳಿತು ಎಂದರು. ಇದನ್ನೂ ಓದಿ: ಈಶ್ವರಪ್ಪ ವಜಾಗೊಳಿಸಿ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲಿ: ಪ್ರಿಯಾಂಕ್ ಖರ್ಗೆ

    KUMARASWAMY

    ರಾಜ್ಯ ಸರ್ಕಾರ ಸಣ್ಣ ಪುಟ್ಟ ಸಂಘಟನೆಗಳನ್ನು ಕಡಿವಾಣ ಹಾಕಲು ವಿಫಲವಾಗಿವೆ. ಇದರಿಂದ ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕೆಡಿಸಿವೆ. ಇಂತಹ ಘಟನೆಗಳನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದರು.

    ರಾಜ್ಯ ಸಕಾ9ರದ ಅಜೆಂಡಾಗಳನ್ನು ನಾವು ಯಶಸ್ವಿಯಾಗಲು ಬಿಡುವುದಿಲ್ಲ. ಆದರೆ ಇವೆಲ್ಲವೂ ಅಜೆಂಡಾಗಳು ಬಿಜೆಪಿ ಅವರಿಗೆ ಬಹುಮುಖ್ಯ ಆಗಿವೆ. ಮುಂದಿನ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಯಡಿಯೂರಪ್ಪ ಇಲ್ಲದ ಬಿಜೆಪಿ ಅಧಿಕಾರಕ್ಕೆ ಬರುವುದು ಸಾಧ್ಯವಿಲ್ಲ ಎಂದರು.

    ಧ್ರುವೀಕರಣವು ಉತ್ತರ ಪ್ರದೇಶದ ಮತ್ತು ಇತರೆ ಕಡೆಗಳಲ್ಲಿ ನಡೆಯಬಹುದು. ಆದರೆ ಕನಾ9ಟಕದಲ್ಲಿ ನಡೆಯುವುದಿಲ್ಲ. ಯಡಿಯೂರಪ್ಪ ಇಲ್ಲದ ಬಿಜೆಪಿ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋದರೆ, ಗೆಲ್ಲುವುದು ಸಾಧ್ಯವಿಲ್ಲ ಎಂದರು.

  • ಕಲಬುರಗಿ ಪಾಲಿಕೆ ಚುನಾವಣೆ ಜೆಡಿಎಸ್‍ಗೆ ಮೇಯರ್ ಸ್ಥಾನ ಕೊಡುವವರಿಗೆ ನಮ್ಮ ಬೆಂಬಲ: ನಾಸಿರ್ ಹುಸೇನ್

    ಕಲಬುರಗಿ ಪಾಲಿಕೆ ಚುನಾವಣೆ ಜೆಡಿಎಸ್‍ಗೆ ಮೇಯರ್ ಸ್ಥಾನ ಕೊಡುವವರಿಗೆ ನಮ್ಮ ಬೆಂಬಲ: ನಾಸಿರ್ ಹುಸೇನ್

    ಕಲಬುರಗಿ: ಅಚ್ಚರಿಯ ಫಲಿತಾಂಶದೊಂದಿಗೆ ಅತಂತ್ರ ಸ್ಥಿತಿಯಲ್ಲಿರುವ ಕಲಬುರಗಿ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಕಗ್ಗಂಟು ಹಾಗೇಯೇ ಮುಂದುವರೆದಿದೆ. ತಮ್ಮ ಪಕ್ಷಕ್ಕೆ ಯಾರು ಮೇಯರ್ ಸ್ಥಾನ ಕೊಡುತ್ತಾರೋ ಆ ಪಕ್ಷಕ್ಕೆ ನಮ್ಮ ಬೆಂಬಲ ನೀಡುವುದಾಗಿ ಜನತಾ ದಳದ ಅಲ್ಪಸಂಖ್ಯಾತರ ರಾಜ್ಯ ಉಪಾಧ್ಯಕ್ಷರಾದ ಉಸ್ತಾದ್ ನಾಸೀರ್ ಹುಸೇನ್ ಅವರು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ಈ ಯಾವುದೇ ಪಕ್ಷಗಳು ಆಹ್ವಾನಕ್ಕೆ ಬಂದರು ಸ್ವಾಗತ, ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಬಿಟ್ರೆ ಕಾಂಗ್ರೆಸ್‍ನ ಯಾವ ನಾಯಕರು ಜೆಡಿಎಸ್‍ಗೆ ಸಂಪರ್ಕ ಮಾಡಿಲ್ಲ, ಆದರೆ ಬಿಜೆಪಿಯಿಂದ ಸಾಕಷ್ಟು ನಾಯಕರು ನಮ್ಮ ಸಂಪರ್ಕ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಸಹ ಮೇಯರ್ ಪಟ್ಟ ನಮ್ಮ ಪಕ್ಷಕ್ಕೆ ಯಾವ ಪಕ್ಷ ನೀಡುತ್ತದೆಯೋ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳೋಣ ಎಂದಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕಲಬುರಗಿ ಮೇಯರ್ ಚುನಾವಣೆ- ಜೆಡಿಎಸ್ ಮುಂದೆ ಮಂಡಿಯೂರಲು ಕಾಂಗ್ರೆಸ್ ಸಜ್ಜಾಗಿದ್ಯಾ?

    ಚುನಾವಣೆಯ ಫಲಿತಾಂಶದ ಬಳಿಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಜೆಡಿಎಸ್ ಪಕ್ಷದ ನಾಲ್ವರು ಸದಸ್ಯರು ಕಲಬುರಗಿ ನಗರಕ್ಕೆ ಬಂದಿದ್ದಾರೆ. ನಿನ್ನೆ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ನಮ್ಮ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುವುದು ನಿಶ್ಚಿತ ಹಾಗೂ ಜೆಡಿಎಸ್ ಪಕ್ಷ ನಮಗೆ ಬೆಂಬಲಿಸುವ ಆತ್ಮವಿಶ್ವಾಸನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್‍ನ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕೂಡ ನಮ್ಮ ಪಕ್ಷವೇ ಪಾಲಿಕೆಯಲ್ಲಿ ಅಧಿಕಾರ ನಡೆಸಲಿದೆ ಎಂದು ಹೇಳಿದ್ದು, ಎರಡು ಪಕ್ಷಗಳು ತಮ್ಮ ತಮ್ಮ ಪಕ್ಷದವರೇ ಮೇಯರ್ ಆಗುವುದಾಗಿ ಹೇಳಿಕೆ ನೀಡುತ್ತಿದ್ದಾರೆ.

    ನಾಸೀರ್ ಹುಸೇನ್ ಅವರು ನೀಡಿದ ಹೇಳಿಕೆ ನೋಡಿದರೆ ಪಾಲಿಕೆಯಲ್ಲಿ ಮೂರು ಪಕ್ಷಗಳ ಪೈಕಿ ಯಾರು ಮೇಯರ್ ಆಗುವರು ಎಂಬುದು ಕಲಬುರಗಿ ನಗರದ ಜನತೆಯಲ್ಲಿ ಮೂಡಿದ ಪ್ರಶ್ನೆಯಾಗಿದೆ. ಒಟ್ಟಿನಲ್ಲಿ ಮುಂದಿನ ವಾರವೇ ಮೇಯರ್ ಯಾರು ಎಂಬುದು ಸ್ಪಷ್ಟವಾಗಲಿದೆ. ಇದನ್ನೂ ಓದಿ: ಅತಂತ್ರವಾದರೂ ಬಿಜೆಪಿಗೆ ಅಧಿಕಾರ – ಕಲಬುರಗಿಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು?

  • ಬ್ರಾಹ್ಮಣ ಮಹಿಳೆಯ ಅಂತಿಮ ವಿಧಿ ವಿಧಾನ ನೆರವೇರಿಸಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್

    ಬ್ರಾಹ್ಮಣ ಮಹಿಳೆಯ ಅಂತಿಮ ವಿಧಿ ವಿಧಾನ ನೆರವೇರಿಸಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್

    ಬೆಂಗಳೂರು: ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರು ಬ್ರಾಹ್ಮಣ ಮಹಿಳೆಯ ಅಂತಿಮ ವಿಧಿವಿಧಾನ ನೆರವೇರಿಸಿ ಮಾನವೀಯತೆ ಮೆರೆದಿದ್ದು, ಈ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಅಂತಿಮ ವಿಧಿ ವಿಧಾನ ನಡೆಸಲು ಕುಟುಂಬಸ್ಥರು ಯಾರೂ ಇಲ್ಲದ ಕಾರಣ ಖುದ್ದು ನಾಸೀರ್ ಹುಸೇನ್ ಅವರೇ ನೆರವೇರಿಸಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ಅಸ್ಥಿ ವಿಸರ್ಜನೆ ಪ್ರಕ್ರಿಯೆ ಪೂರ್ಣ ಮಾಡಿದ್ದಾರೆ. ದೆಹಲಿ ವಿಶ್ವವಿದ್ಯಾಲಯದ ಜಪಾನಿ ಅಧ್ಯಯನ ಪೀಠದ ನಿವೃತ್ತ ಪ್ರಾಧ್ಯಾಪಕಿಯಾಗಿದ್ದ ಪ್ರೋ.ಸಾವಿತ್ರಿ ವಿಶ್ವನಾಥನ್ ಅವರ ಅಂತಿಮ ವಿಧಿ ವಿಧಾನವನ್ನು ನೆರವೇರಿಸುವ ಮೂಲಕ ನಾಸೀರ್ ಹುಸೇನ್ ಮಾನವೀಯತೆ ಮೆರೆದಿದ್ದಾರೆ.

    ಮೂಲತಃ ತಮಿಳುನಾಡಿನ ಬ್ರಾಹ್ಮಣ ಸಮುದಾಯದರಾಗಿದ್ದ ಸಾವಿತ್ರಿ ವಿಶ್ವನಾಥನ್, ನಿವೃತ್ತಿಯ ಬಳಿಕ ತಂಗಿ ಮಹಾಲಕ್ಷ್ಮೀ ಅತ್ರಿಯಾ ಜೊತೆಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಕೊರೊನಾ ಸೋಂಕು ತಗುಲಿದ್ದರಿಂದ ಅಕ್ಕ, ತಂಗಿ ಇಬ್ಬರೂ ಇತ್ತೀಚೆಗೆ ಆಸ್ಪತ್ರೆ ಸೇರಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವಿತ್ರಿ ವಿಶ್ವನಾಥನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇವರ ತಂಗಿ ಮಹಾಲಕ್ಷ್ಮೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾರಣಕ್ಕೆ ಅಂತಿಮ ಕಾರ್ಯ ನೇರವೇರಿಸಲು ಸಾಧ್ಯವಾಗಿಲ್ಲ.

    ದೂರದ ಊರುಗಳಲ್ಲಿರುವ ಸಂಬಂಧಿಕರು ಸಹ ಬೆಂಗಳೂರಿಗೆ ಬರಲು ಆಗದಿರುವ ಹಿನ್ನೆಲೆ ಖುದ್ಧು ರಾಜ್ಯಸಭಾ ಸದಸ್ಯ ಡಾ.ನಾಸೀರ್ ಹುಸೇನ್ ದಂಪತಿ ಅಂತಿಮ ಕಾರ್ಯ ನೆರವೇರಿಸಿದ್ದಾರೆ. ಅಲ್ಲದೆ ಮೇ 18ರಂದು ಮೈಸೂರಿನಲ್ಲಿ ಕಾವೇರಿ ನದಿಯಲ್ಲಿ ನಾಸೀರ್ ಹುಸೇನ್ ಅವರು ಅಸ್ಥಿಯನ್ನು ವಿಸರ್ಜನೆ ಮಾಡಿದ್ದಾರೆ.

  • ಅನುಚಿತ ವರ್ತನೆ ಆರೋಪ- ನಾಸೀರ್ ಹುಸೇನ್ ಸೇರಿ 8 ಸಂಸದರು ಅಮಾನತು

    ಅನುಚಿತ ವರ್ತನೆ ಆರೋಪ- ನಾಸೀರ್ ಹುಸೇನ್ ಸೇರಿ 8 ಸಂಸದರು ಅಮಾನತು

    ನವದೆಹಲಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಚರ್ಚೆ ವೇಳೆ ಗದ್ದಲ ಮಾಡಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆ ವಿಪಕ್ಷದ ಎಂಟು ಮಂದಿ ಸಂಸದರನ್ನು ಒಂದು ವಾರಗಳ ಕಲಾಪದಿಂದ ಅಮಾನತು ಮಾಡಲಾಗಿದೆ.

    ಇಂದು ಕಲಾಪ ಆರಂಭವಾಗುತ್ತಿದ್ದಂತೆ ನಿನ್ನೆ ಘಟನೆಯ ಬಗ್ಗೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಆಕ್ರೋಶ ವ್ಯಕ್ತಪಡಿಸಿದರು. ಉಪಾಧ್ಯಕ್ಷರ ಕರ್ತವ್ಯ ನಿಭಾಯಿಸಲು ಅಡ್ಡಿ ಪಡಿಸಿದ ಆರೋಪದ ಮೇಲೆ ಡೆರೆಕ್ ಒ’ಬ್ರಿಯೆನ್ ಸೇರಿ ಎಂಟು ಮಂದಿ ಸಂಸದರು ಅಮಾನತು ಮಾಡಲಾಯಿತು.

    ನಿನ್ನೆ ಚರ್ಚೆ ವೇಳೆ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ಸದನದ ಬಾವಿಗಿಳಿದು ಬಿಲ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಡೆರೆಕ್ ಒ’ಬ್ರಿಯೆನ್ ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸಂಸದರ ಸೈಯದ್ ನಾಸೀರ್ ಹುಸೇನ್, ಸಂಜಯ್ ಸಿಂಗ್, ರಾಜು ಸತವ್, ಕೆ.ಕೆ ರಾಗೇಶ್, ರಿಪುನ್ ಬೋರಾ, ಡೋಲಾ ಸೇನ್ ಮತ್ತು ಎಲಮರನ್ ಕರೀಮ್ ಮಸೂದೆ ವಿರೋಧಿಸಿ ಸದನದ ಬಾವಿಗಿಳಿದಿದ್ದರು. ಇದನ್ನೂ ಓದಿ: ವಿರೋಧದ ನಡುವೆ 2 ಕೃಷಿ ಮಸೂದೆ ರಾಜ್ಯಸಭೆಯಲ್ಲಿ ಪಾಸ್‌

    ಸಂಸದರ ಅಮಾನತು ನಿರ್ಧಾರ ಪ್ರಕಟಿಸುವ ಮುನ್ನ ಮಾತನಾಡಿದ ಸಭಾಧ್ಯಕ್ಷ ವೆಂಕಯ್ಯನಾಯ್ಡು ನಿನ್ನೆ ಬೆಳವಣಿಗೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಗೆ ನಿನ್ನೆ ಕೆಟ್ಟ ದಿನ, ಉಪ ಸಭಾಧ್ಯಕ್ಷರಿಗೆ ಸದಸ್ಯರು ದೈಹಿಕ ಬೆದರಿಕೆ ಹಾಕಿದ್ದಾರೆ. ಕರ್ತವ್ಯ ನಿಭಾಯಿಸಲು ಅಡ್ಡಿಪಡಿಸಿದ್ದಾರೆ ಇದೊಂದು ದುರಾದೃಷ್ಟವಕರ ಬೆಳವಣಿಗೆ ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೇಂದ್ರದ ಕೃಷಿ ಮಸೂದೆಯಲ್ಲಿ ರೈತರ ಶೋಷಣೆಯೇ ಹೆಚ್ಚು – ರಾಜ್ಯಸಭೆಯಲ್ಲಿ ಹೆಚ್‍ಡಿಡಿ ವಿರೋಧ