Tag: Nathan Ellis

  • IPL 2023: ಕೊನೆಯವರೆಗೂ ಹೋರಾಡಿ ಸೋತ ರಾಜಸ್ಥಾನ್‌ – ಪಂಜಾಬ್‌ಗೆ 5 ರನ್‌ಗಳ ರೋಚಕ ಜಯ

    IPL 2023: ಕೊನೆಯವರೆಗೂ ಹೋರಾಡಿ ಸೋತ ರಾಜಸ್ಥಾನ್‌ – ಪಂಜಾಬ್‌ಗೆ 5 ರನ್‌ಗಳ ರೋಚಕ ಜಯ

    ಗುವಾಹಟಿ: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಸಿಕ್ಸರ್‌, ಬೌಂಡರಿ ಬ್ಯಾಟಿಂಗ್‌ ಹಾಗೂ ನಾಥನ್ ಎಲ್ಲಿಸ್ ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ತಂಡವು ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿದ್ದು, 16ನೇ ಐಪಿಎಲ್‌ ಆವೃತ್ತಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ.

    ಗುವಾಹಟಿಯ ಬರ್ಸಾಪರಾ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ (Rajasthan Royals) ವಿರುದ್ಧ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ (Punjab Kings) ತಂಡವು 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. 198 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡವು 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 192 ರನ್‌ ಹೋರಾಡಿ ಸೂತಿತು. ಇದನ್ನೂ ಓದಿ: ಸುದರ್ಶನ್‌ ಫಿಫ್ಟಿ, ಮಿಲ್ಲರ್‌ ಸ್ಫೋಟಕ ಆಟ – ಗುಜರಾತ್‌ಗೆ ಸತತ ಎರಡನೇ ಜಯ

    15 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 124 ರನ್‌ ಗಳಿಸಿದ್ದ ರಾಜಸ್ಥಾನ್‌ ತಂಡ ಸಂಕಷ್ಟಕ್ಕೆ ಗುರಿಯಾಗಿತ್ತು. ಆದರೆ 7ನೇ ವಿಕೆಟ್‌ಗೆ ಜೊತೆಯಾದ ಶಿಮ್ರಾನ್‌ ಹೆಟ್ಮೆಯರ್‌ ಹಾಗೂ ಧ್ರುವ್‌ ಜುರೆಲ್‌ ಭರ್ಜರಿ ಸಿಕ್ಸರ್‌, ಬೌಂಡರಿ ಸಿಡಿಸಿ ಪಂಜಾಬ್‌ ಬೌಲರ್‌ಗಳನ್ನ ಬೆಂಡೆತ್ತಿದರು. 26 ಎಸೆತಗಳಲ್ಲಿ ಬರೋಬ್ಬರಿ 61 ರನ್‌ ಚಚ್ಚಿದರು.

    18ನೇ ಓವರ್‌ನಲ್ಲಿ 19 ರನ್‌, 19ನೇ ಓವರ್‌ನಲ್ಲಿ 18 ರನ್‌ ಬಂದ ಹಿನ್ನೆಲೆಯಲ್ಲಿ ಕೊನೆಯ ಓವರ್‌ ಅತ್ಯಂತ ರೋಚಕತೆಯಿಂದ ಕೂಡಿತ್ತು. ಕೊನೆಯ 6 ಎಸೆತಗಳಲ್ಲಿ ರಾಜಸ್ಥಾನ್‌ಗೆ 15 ರನ್‌ಗಳ ಅಗತ್ಯವಿತ್ತು. ಈ ವೇಳೆ ಜುರೆಲ್‌ ಮೊದಲ ಎಸೆತದಲ್ಲಿ 1 ರನ್‌ ಕದ್ದರೆ, 2ನೇ ಎಸೆತದಲ್ಲಿ ಹೆಟ್ಮೆಯರ್‌ 2 ರನ್‌ ಕದ್ದರು. 3ನೇ ಎಸೆತದಲ್ಲಿ 2ರನ್‌ ಕದಿಯಲು ಯತ್ನಿಸಿ ಹೆಟ್ಮೆಯರ್‌ ರನೌಟ್‌ಗೆ ತುತ್ತಾದರು. ಕೊನೆಯ 3 ಎಸೆತಗಳಲ್ಲಿ 13 ರನ್‌ಗಳ ಅಗತ್ಯವಿದ್ದಾಗ 2 ಎಸೆತಗಳಲ್ಲಿ ಒಂದೊಂದು ರನ್‌ಗಳಷ್ಟೇ ಸೇರ್ಪಡೆಯಾಯಿತು. ಕೊನೆಯ ಎಸೆತವನ್ನು ಧ್ರುವ್‌ ಜುರೆಲ್‌ ಬೌಂಡರಿಗಟ್ಟಿದರು. ಅಂತಿಮವಾಗಿ ರಾಜಸ್ಥಾನ್‌ 5 ರನ್‌ಗಳ ವಿರೋಚಿತ ಸೋಲು ಅನುಭವಿಸಿತು.

    ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌, ರವಿಚಂದ್ರನ್‌ ಅಶ್ವಿನ್‌ ಹಾಗೂ ಜೋಸ್‌ ಬಟ್ಲರ್‌ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. ಜೈಸ್ವಾಲ್‌ 11 ರನ್‌ ಗಳಿಸಿದರೆ, ಬಟ್ಲರ್‌ 11 ಎಸೆತಗಳಲ್ಲಿ 19 ರನ್‌ ಹೊಡೆದರು. ಆದರೆ ಅಶ್ವಿನ್‌ ಶೂನ್ಯಕ್ಕೆ ಔಟಾಗಿ ಪೆವಿಲಿಯನ್‌ ಸೇರಿಕೊಂಡರು. ಒಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಿದ್ದರೂ ರನ್‌ ಕಲೆಹಾಕುತ್ತಾ ತಂಡ ಮುನ್ನಡೆದಿತ್ತು. 4ನೇ ವಿಕೆಟ್‌ಗೆ ಜೊತೆಯಾದ ನಾಯಕ ಸಂಜು ಸ್ಯಾಮ್ಸನ್‌ ಹಾಗೂ ದೇವದತ್‌ ಪಡಿಕಲ್‌ ಉತ್ತಮ ಜೊತೆಯಾಟವಾಡಿದರು. 32 ಎಸೆತಗಳಲ್ಲಿ 34 ರನ್‌ ಕಲೆಹಾಕಿ ತಂಡಕ್ಕೆ ಸ್ವಲ್ಪ ಚೇತರಿಕೆ ನೀಡಿತ್ತು. ಇದನ್ನೂ ಓದಿ:  ICC ರ‍್ಯಾಂಕಿಂಗ್‌ನಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ಗಿಲ್

    ಅಷ್ಟರಲ್ಲೇ 42 ರನ್‌ (25 ಎಸೆತ, 5 ಬೌಂಡರಿ, 1 ಸಿಕ್ಸರ್‌) ಗಳಿಸಿ ಆಟವಾಡುತ್ತಿದ್ದ ಸಂಜು ಸ್ಯಾಮ್ಸನ್‌ ಸಿಕ್ಸರ್‌ ಚಚ್ಚಲು ಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಈ ಬೆನ್ನಲ್ಲೇ ರಿಯಾನ್‌ ಪರಾಗ್‌ 20 ರನ್‌ (12 ಎಸೆತ, 2 ಸಿಕ್ಸರ್‌, 1 ಬೌಂಡರಿ), ದೇವದತ್‌ ಪಡಿಕಲ್‌ 21 ರನ್‌ (26 ಎಸೆತ, 1 ಬೌಂಡರಿ) ಗಳಿಸಿ ವಿಕೆಟ್‌ ಒಪ್ಪಿಸಿದರು. ಇದರಿಂದ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ಗೆಲುವಿನ ಭರವಸೆ ಕೈತಪ್ಪಿತು. ಕೊನೆಯಲ್ಲಿ ಶಿಮ್ರಾನ್ ಹೆಟ್ಮೆಯರ್ ಸ್ಫೋಟಕ 36 ರನ್‌ (18 ಎಸೆತ, 3 ಸಿಕ್ಸರ್‌, 1 ಬೌಂಡರಿ) ಚಚ್ಚಿದರೆ, ಧ್ರುವ್‌ 15 ಎಸೆತಗಳಲ್ಲೇ 32 ರನ್‌ ಬಾರಿಸಿದರು. ಜೇಸನ್‌ ಹೋಲ್ಡರ್‌ 1 ರನ್‌ ಗಳಿಸಿ ಅಜೇಯರಾಗುಳಿದರು.

    ನಾಥನ್ ಎಲ್ಲಿಸ್ ಬೌಲಿಂಗ್‌ ಮಿಂಚು:
    ಪಂಜಾಬ್‌ ಕಿಂಗ್ಸ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ನಾಥನ್‌ ಎಲ್ಲಿಸ್‌ ರಾಜಸ್ಥಾನ ತಂಡದ ಪ್ರಮುಖ‌ ಬ್ಯಾಟ್ಸ್‌ಮ್ಯಾನ್‌ಗಳನ್ನ ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾದರು. 4 ಓವರ್‌ಗಳಲ್ಲಿ 30 ರನ್‌ ನೀಡಿ ಪ್ರಮುಖ ನಾಲ್ಕು ವಿಕೆಟ್‌ ಕಿತ್ತರೆ, ಅರ್ಶ್‌ ದೀಪ್‌ ಸಿಂಗ್‌ 2 ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ತಂಡದ ಪರ ಬ್ಯಾಟಿಂಗ್ ಆರಂಭಿಸಿದ ನಾಯಕ ಶಿಖರ್ ಧವನ್ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ ಈ ಜೋಡಿ 9.1 ಓವರ್‌ಗಳಲ್ಲಿ ಭರ್ಜರಿ 90 ರನ್‌ ಕಲೆಹಾಕಿತು. ಪ್ರಭ್‌ಸಿಮ್ರಾನ್ ಸಿಂಗ್ ಸ್ಫೋಟಕ 60 ರನ್ (34 ಎಸೆತ, 7 ಬೌಂಡರಿ, 3 ಸಿಕ್ಸರ್‌) ಬಾರಿಸಿ ಔಟಾದರು. ನಂತರ ಕಣಕ್ಕಿಳಿದ ಭಾನುಕ ರಾಜಪಕ್ಸ 1 ರನ್ ಗಳಿಸಿ ಆಡುತ್ತಿದ್ದಾಗಲೇ ಗಾಯಗೊಂಡು ಹೊರನಡೆದರು. ಬಳಿಕ ಕ್ರೀಸ್‌ಗಿಳಿದ ಜಿತೇಶ್ ಶರ್ಮಾ 16 ಎಸೆತಗಳಲ್ಲಿ 27 ರನ್ (2 ಬೌಂಡರಿ, 1 ಸಿಕ್ಸರ್) ಗಳಿಸಿದರೆ, ಶಾರೂಖ್ ಖಾನ್ 10 ಎಸೆತಗಳಲ್ಲಿ 11 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು.

    ಧವನ್‌ಗೆ ಕೈತಪ್ಪಿದ ಶತಕ:
    ಆರಂಭದಿಂದ ಕೊನೆಯವರೆಗೂ ಹೋರಾಡಿದ ನಾಯಕ ಶಿಖರ್ ಧವನ್ 56 ಎಸೆತಗಳಲ್ಲಿ 86 ರನ್ ಬಾರಿಸಿ (9 ಬೌಂಡರಿ, 3 ಸಿಕ್ಸರ್) ತಂಡದ ಮೊತ್ತ 190 ರನ್‌ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಸಿಕ್ಸರ್‌, ಬೌಂಡರಿ ಅಬ್ಬರಿಸುತ್ತಾ ರಾಜಸ್ಥಾನ್‌ ಬೌಲರ್‌ಗಳನ್ನ ಬೆಂಡೆತ್ತಿದರು.

    ರನ್‌ ನೀಡಿದ ಹೊರತಾಗಿಯೂ ಉತ್ತಮ ಬೌಲಿಂಗ್‌ ದಾಳಿ ನಡೆಸಿದ ರಾಜಸ್ಥಾನ್‌ ರಾಯಲ್ಸ್‌ ತಂಡದ ಪರ ಜೇಸನ್ ಹೋಲ್ಡರ್ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಕಿತ್ತರೆ, ಆರ್‌. ಅಶ್ವಿನ್ 4 ಓವರ್‌ಗಳಲ್ಲಿ 25 ರನ್ ನೀಡಿ 1 ವಿಕೆಟ್ ಪಡೆದರು, ಯಜುವೇಂದ್ರ ಚಾಹಲ್ 4 ಓವರ್‌ಗಳಲ್ಲಿ 50 ರನ್ ನೀಡಿ 1 ವಿಕೆಟ್ ಉರುಳಿಸಿದರು.

  • ಗ್ರೀನ್‍ಗೆ ಸಿಕ್ತು ಟಿ20 ವಿಶ್ವಕಪ್ ಗ್ರೀನ್ ಸಿಗ್ನಲ್

    ಗ್ರೀನ್‍ಗೆ ಸಿಕ್ತು ಟಿ20 ವಿಶ್ವಕಪ್ ಗ್ರೀನ್ ಸಿಗ್ನಲ್

    ಸಿಡ್ನಿ: ಟಿ20 ವಿಶ್ವಕಪ್ (T20 World Cup) ಸೂಪರ್-12 ಪಂದ್ಯಗಳು ಆರಂಭವಾಗುವ ಮುನ್ನ ಅತಿಥೇಯ ತಂಡಕ್ಕೆ ಗಾಯದ ಬರೆ ಬಿದ್ದಿದೆ. ಮೀಸಲು ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಆಗಿ ಟಿ20 ವಿಶ್ವಕಪ್‍ಗೆ ಆಯ್ಕೆ ಆಗಿದ್ದ ಜೋಸ್ ಇಂಗ್ಲಿಸ್ (Josh Inglis) ಇದೀಗ ಗಾಯದಿಂದಾಗಿ ಹೊರ ನಡೆದಿದ್ದಾರೆ.

    ಇತ್ತ ಜೋಸ್ ಇಂಗ್ಲಿಸ್‍ಗೆ ಬದಲಾಗಿ ಆಸ್ಟ್ರೇಲಿಯಾ (Australia) ತಂಡ ಇತ್ತಿಚೇಗೆ ಭರ್ಜರಿ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಕೆಮರೋನ್‌ ಗ್ರೀನ್‌ರನ್ನು (Cameron Green) ತಂಡಕ್ಕೆ ಸೇರಿಸಿಕೊಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡ ಮತ್ತಷ್ಟು ಬಲಗೊಂಡಿದೆ. ಜೋಸ್ ಇಂಗ್ಲಿಸ್ ಗಾಲ್ಫ್ ಆಡುವಾಗ ಕೈ ಮುರಿತಕ್ಕೊಳಗಾಗಿದ್ದಾರೆ. ಹಾಗಾಗಿ ಟೂರ್ನಿಯಿಂದ ಹೊರ ಬಿದ್ದಿದ್ದು, ಅವರ ಬದಲಿಗೆ ಗ್ರೀನ್ ಮತ್ತು ನತನ್ ಎಲ್ಲಿಸ್‍ರನ್ನು (Nathan Ellis) ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ತಿಳಿಸಿದೆ. ಇದನ್ನೂ ಓದಿ: ಬಿನ್ನಿ ಬಿಸಿಸಿಐ ಅಧ್ಯಕ್ಷರಾದ ಬಳಿಕ ತೆರವಾದ KSCA ಅಧ್ಯಕ್ಷ ಹುದ್ದೆ – ಮುಂದಿನ ಬಾಸ್ ಯಾರು?

    ಗ್ರೀನ್ ಮತ್ತು ಎಲ್ಲಿಸ್ ಆಸ್ಟ್ರೇಲಿಯಾ ಪರ ಈ ಹಿಂದಿನ ಸರಣಿಗಳಲ್ಲಿ ಮಿಂಚಿದ ಪರಿಣಾಮ ಇದೀಗ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಗ್ರೀನ್ ಇತ್ತಿಚೇಗೆ ಆಸ್ಟ್ರೇಲಿಯಾ ತಂಡ ಭಾರತ (India) ಪ್ರವಾಸ ಕೈಗೊಂಡಿದ್ದಾಗ ತಮ್ಮ ಆಲ್‍ರೌಂಡರ್ ಆಟದ ಮೂಲಕ ತಮ್ಮ ತಾಖತ್ ಪ್ರದರ್ಶಿಸಿದ್ದರು. ಹೀಗಾಗಿ ಗ್ರೀನ್‍ರನ್ನು ತಂಡಕ್ಕೆ ಕರೆ ತಂದಿರುವ ಆಸ್ಟ್ರೇಲಿಯಾ ತಂಡ ಭರ್ಜರಿ ತಯಾರಿ ನಡೆಸುತ್ತಿದೆ. ಇದನ್ನೂ ಓದಿ: ಸೂರ್ಯ ಜಸ್ಟ್ ಮಿಸ್ – ತಪ್ಪಿದ ಭಾರೀ ಅನಾಹುತ!

    ಹಾಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಈ ಬಾರಿ ತವರಿನಲ್ಲಿ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ತನ್ನ ಮೊದಲ ಪಂದ್ಯವನ್ನು ಶನಿವಾರ ನ್ಯೂಜಿಲೆಂಡ್ ವಿರುದ್ಧ ಆಡಲಿದೆ.

    Live Tv
    [brid partner=56869869 player=32851 video=960834 autoplay=true]