Tag: national anthem

  • ರಾಷ್ಟ್ರಗೀತೆ ಗಾಯನದ ವೇಳೆ ನಿತೀಶ್ ಕುಮಾರ್ ಮಾತುಕತೆ – ಬಿಹಾರ ಅಸೆಂಬ್ಲಿಯಲ್ಲಿ ಗದ್ದಲ, ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯ

    ರಾಷ್ಟ್ರಗೀತೆ ಗಾಯನದ ವೇಳೆ ನಿತೀಶ್ ಕುಮಾರ್ ಮಾತುಕತೆ – ಬಿಹಾರ ಅಸೆಂಬ್ಲಿಯಲ್ಲಿ ಗದ್ದಲ, ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಒತ್ತಾಯ

    ರಾಷ್ಟ್ರಗೀತೆಗೆ ಅಗೌರವ ಆರೋಪ – ನ್ಯಾಯಾಲಯಕ್ಕೆ ಅರ್ಜಿ

    ಪಾಟ್ನಾ: ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ರಾಷ್ಟ್ರಗೀತೆ (National Anthem) ನುಡಿಸುವಾಗ ನಗುತ್ತಾ ಮಾತನಾಡಿದ್ದು, ವಿರೋಧ ಪಕ್ಷದ ಆಕ್ರೋಶಕ್ಕೆ ಕಾರಣವಾಗಿದೆ.

    ನಿತೀಶ್ ಕುಮಾರ್ ಅವರು ಗುರುವಾರ ಪಾಟ್ನಾದ ಪಾಟಲಿಪುತ್ರ ಕ್ರೀಡಾ ಸಂಕೀರ್ಣದಲ್ಲಿ ನಡೆದ ಸೆಪಕ್ತಕ್ರಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ರಾಷ್ಟ್ರಗೀತೆ ನುಡಿಸುವಾಗ ಐಎಎಸ್ ಅಧಿಕಾರಿ ಮತ್ತು ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಅವರೊಂದಿಗೆ ನಗುತ್ತಾ ಮಾತನಾಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿ ನಿತೀಶ್ ಕುಮಾರ್ ಅಧಿಕಾರಿಯ ಭುಜ ತಟ್ಟಿ ಅವರ ಗಮನ ಸೆಳೆಯಲು ಪ್ರಯತ್ನಿಸಿದ್ದು, ನಗಾಡಿದ್ದಾರೆ. ಈ ವೀಡಿಯೋ ವೈರಲ್‌ ಆಗುತ್ತಿದ್ದಂತೆ, ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ.

    ಇದೇ ವಿಚಾರವಾಗಿ ಬಿಹಾರದ ವಿರೋಧ ಪಕ್ಷಗಳು ಶುಕ್ರವಾರ ಉಭಯ ಸದನಗಳು, ಶಾಸಕಾಂಗ ಸಭೆ ಮತ್ತು ಪರಿಷತ್ತಿನಲ್ಲಿ ಎನ್‌ಡಿಎ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ನಿತೀಶ್ ಕುಮಾರ್ ಕ್ಷಮೆಯಾಚಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದವು.

    ನ್ಯಾಯಾಲಯಕ್ಕೆ ವಕೀಲನಿಂದ ಅರ್ಜಿ
    ನಿತೀಶ್ ಕುಮಾರ್ ಅವರು ರಾಷ್ಟ್ರಗೀತೆಗೆ ಅಗೌರವ ತೋರಿಸಿ, ರಾಜ್ಯಕ್ಕೆ ಅಪಖ್ಯಾತಿ ತಂದಿದ್ದಾರೆ ಎಂದು ಸ್ಥಳೀಯ ವಕೀಲ ಸೂರಜ್ ಕುಮಾರ್ ಎಂಬವರು ಮುಜಾಫರ್‌ಪುರದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯ ಅಡಿಯಲ್ಲಿ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ನ್ಯಾಯಾಲಯವು ಮಾರ್ಚ್ 25 ರಂದು ವಿಚಾರಣೆಯನ್ನು ನಿಗದಿಪಡಿಸಿದೆ.

  • ಜಮ್ಮು-ಕಾಶ್ಮೀರದ ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ!

    ಜಮ್ಮು-ಕಾಶ್ಮೀರದ ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu And Kashmir) ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಇಲ್ಲಿನ ಶಿಕ್ಷಣ ಇಲಾಖೆ (Education Department) ನಿರ್ದೇಶನ ನೀಡಿದೆ. ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆಗಳನ್ನೂ ಬೆಳಗ್ಗೆ ರಾಷ್ಟ್ರಗೀತೆಯೊಂದಿಗೆ (National Anthem) ಪ್ರಾರಂಭಿಸುವಂತೆ ನಿರ್ದೇಶನ ನೀಡಿ ಸುತ್ತೋಲೆ ಹೊರಡಿಸಿದೆ.

    ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಗದಿಪಡಿಸಬೇಕು. ಇದು ವಿದ್ಯಾರ್ಥಿಗಳಲ್ಲಿ ಏಕತೆ ಮತ್ತು ಶಿಸ್ತಿನ ಭಾವನೆ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಈ ಮೂಲಕ ಸಮಗ್ರತೆ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸಲು ಶಾಲೆಯ ಬೆಳಗ್ಗಿನ ವೇದಿಕೆ ಸಹಕಾರಿಯಾಗಲಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಗೆ ಇರುವ ಸಮಸ್ಯೆ ನಿವಾರಿಸಲು ಜಂಟಿ ಸರ್ವೇಗೆ ನಿರ್ಧಾರ: ಡಿಕೆಶಿ

    ಕೆಲವು ಶಾಲೆಗಳಲ್ಲಿ ಈಗಾಗಲೇ ಈ ನಿಯಮ ಪಾಲನೆಯಾಗುತ್ತಿದೆ. ಇನ್ನೂ ಕೆಲವು ಶಾಲೆಗಳಲ್ಲಿ ಅಂತಹ ಮಹತ್ವದ ಆಚರಣೆಯನ್ನು ಏಕರೂಪವಾಗಿ ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಇನ್ನುಮುಂದೆ ಎಲ್ಲಾ ಶಾಲೆಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

    ಇದರೊಂದಿಗೆ ಅತಿಥಿ ಉಪನ್ಯಾಸಕರು ಹಾಗೂ ತಜ್ಞರನ್ನು ಆಹ್ವಾನಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತುಗಳ ವಿರುದ್ಧ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತೆ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕುವೈತ್‌ ಅಗ್ನಿ ದುರಂತದಲ್ಲಿ ಕಲಬುರಗಿ ವ್ಯಕ್ತಿ ಸಾವು

  • ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ

    ರಾಷ್ಟ್ರಗೀತೆಗೆ ಸ್ಪೆಷಲ್ ಟ್ಯೂನ್ ಟಚ್ ಕೊಟ್ಟ ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ

    ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ಮತ್ತು ಪರಿಸರವಾದಿ ರಿಕ್ಕಿ ಕೇಜ್ (Ricky Kej) ಹೊಸ ಇತಿಹಾಸವೊಂದನ್ನು ಸೃಷ್ಟಿಸಿದ್ದಾರೆ. ರಾಷ್ಟ್ರಗೀತೆ (National Anthem) ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಟ್ಟಿದ್ದಾರೆ. ಸ್ವಾತಂತ್ರ್ಯ ದಿನಕ್ಕೂ (Independence Day) ಮುನ್ನ ದಿನ  ಅಂದ್ರೆ ಇದೇ 14ರಂದು 5 ಗಂಟೆ ರಿಕ್ಕಿ ಕೇಜ್ ಸಾರಥ್ಯದ ವಿಭಿನ್ನ ಬಗೆಯ ರಾಷ್ಟ್ರಗೀತೆ ಬಿಡುಗಡೆಯಾಗಲಿದೆ.

    ವಿಶೇಷ ಅಂದರೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ ಅಂದರೆ ಲಂಡನ್ ಅಬ್ಬೆ ರೋಡ್ ಸ್ಟುಡಿಯೋಸ್ ನಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಕೇವಲ 3 ಗಂಟೆ ಸಮಯದಲ್ಲಿಯೇ, 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಸಹಯೋಗದಲ್ಲಿ ಜನಗಣಮನ ಸಿದ್ಧವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ರಿಕ್ಕಿ ಕೇಜ್ ಮಾಹಿತಿ ಹಂಚಿಕೊಂಡಿದ್ದಾರೆ.

    ರಿಕ್ಕಿ ಕೇಜ್ ಮಾತನಾಡಿ, ರಾಷ್ಟ್ರಗೀತೆ ಜನಗಣಮನಕ್ಕೆ ಹೊಸ ಬಗೆಯ ಟ್ಯೂನ್ ಟಚ್ ಕೊಡಲಾಗಿದೆ. ಈ ರಾಷ್ಟ್ರಗೀತೆ ಪ್ರೆಸೆಂಟ್ ಮಾಡಲು ನಾನು ಕಾತುರನಾಗಿದ್ದೇನೆ. ಲಂಡನ್ ಮೂಲದ ರಾಯಲ್ ಫಿಲ್ಹಾರ್ಮೋನಿಕ್ ಆರ್ಕೆಸ್ಟ್ರಾದ ಸಹಯೋಗದಲ್ಲಿ ರಾಷ್ಟ್ರಗೀತೆಯನ್ನು ರೆಕಾರ್ಡ್ ಮಾಡಲಾಗಿದೆ. ಈ ಹಿಂದೆ ನಮ್ಮ ದೇಶವನ್ನಾಳಿದ ಬ್ರಿಟಿಷ್ ನೆಲದಲ್ಲಿಯೇ 100 ಮಂದಿ ಸಿಬೋನಿಕ್ ಮ್ಯೂಸಿಷಿಯನ್ಸ್ ಕೈಚಳಕದಿಂದ ಭಾರತದ ರಾಷ್ಟ್ರಗೀತೆ ಸಿದ್ಧವಾಗಿದೆ ಎಂದು ಸಂತಸ ಹಂಚಿಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಯುವತಿಯರು – ಕೇಸ್‌ ದಾಖಲು

    ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿದ ಯುವತಿಯರು – ಕೇಸ್‌ ದಾಖಲು

    ಕೋಲ್ಕತಾ: ʻರಾಷ್ಟ್ರಗೀತೆʼ (National Anthem) ಎಂದರೆ ದೇಶಭಕ್ತಿ. ದೂರದಲ್ಲಿ ನಿಂತಾಗ ʻಜನ ಗಣ ಮನʼ ಶಬ್ಧ ಸಣ್ಣ ದನಿಯಲ್ಲಿ ಕೇಳಿದರೂ ಸಾಕು ನಿಂತು ಗೌರವ ಸೂಚಿಸುತ್ತೇವೆ. ಇದು ದೇಶದ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವೂ ಹೌದು. ರಾಷ್ಟ್ರಗೀತೆಗೆ ಯಾರೇ ಅಪಮಾನ ಮಾಡಿದರೂ ಅದು ಶಿಕ್ಷಾರ್ಹ ಅಪರಾಧ.

    ಆದರೀಗ ಇಲ್ಲಿ ಇಬ್ಬರು ಯುವತಿಯರು ಸಿಗರೇಟ್‌ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ ಮಾಡಿ, ಹುಚ್ಚಾಟ ನಡೆಸಿದ್ದಾರೆ. ಅಲ್ಲದೇ ಈ ಸನ್ನಿವೇಶವನ್ನ ವೀಡಿಯೋ ಮಾಡಿ ಜಾಲತಾಣದಲ್ಲೂ (Social Media) ಹಂಚಿಕೊಂಡಿದ್ದಾರೆ. ಈ ವೀಡಿಯೋ ಆಧರಿಸಿ ವಕೀಲ ಅತ್ರಯೀ ಹಾಲ್ದರ್ ಅವರು ಲಾಲ್‌ಬಜಾರ್ ಸೈಬರ್ ಘಟಕ ಹಾಗೂ ಬಾರಕ್‌ಪುರದಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಠಾಣೆಗೆ ನುಗ್ಗಿದ 60 ಮಂದಿ ಗುಂಪು – ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಡಕಾಯಿತನ ರಿಲೀಸ್

    ಈ ಪೋಸ್ಟ್ ಮಾಡಲಾಗಿದ್ದ ಫೇಸ್‌ಬುಕ್ ಖಾತೆಯನ್ನು ಡಿಲೀಟ್ ಮಾಡಿರುವುದರಿಂದ ಈಗ ವಿಡಿಯೋ ಅದರಲ್ಲಿ ಲಭ್ಯವಿಲ್ಲ. ಆದರೆ ಕೆಲವರು ವೀಡಿಯೋವನ್ನ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಸಿಗರೇಟ್ ಸೇದುತ್ತಾ ಕುಳಿತಿರುವ ಯುವತಿಯರು ಉದ್ದೇಶಪೂರ್ವಕವಾಗಿ ರಾಷ್ಟ್ರಗೀತೆಯ ಸಾಲುಗಳನ್ನ ವ್ಯಂಗ್ಯವಾಗಿ ಹಾಡಿ, ಅಪಮಾನ ಮಾಡಿದ್ದಾರೆ ಎನ್ನಲಾಗಿದೆ.

    ಕೈಯಲ್ಲಿ ಸಿಗರೇಟ್ ಹಿಡಿದು ವಿಚಿತ್ರವಾಗಿ ನಗುವ ಯುವತಿಯೊಬ್ಬಳು ರಾಷ್ಟ್ರಗೀತೆಯನ್ನು ಮನಬಂದಂತೆ ಹಾಡಿದ್ದಾಳೆ. ಪಕ್ಕದಲ್ಲಿ ಕುಳಿತಿದ್ದ ಯುವತಿ ಸಹ ಆಕೆಯಂತೆಯೇ ವರ್ತಿಸಿದ್ದು, ಆ ಸಿಗರೇಟ್ ಅನ್ನು ಕಿತ್ತುಕೊಂಡು, ಇದು ಧ್ವಜ, ಧ್ವಜ ಎಂದು ಇಂಗ್ಲಿಷ್‌ನಲ್ಲಿ ಹೇಳಿದ್ದಾಳೆ. ಕೊನೆಯಲ್ಲಿ ರಾಷ್ಟ್ರಗೀತೆ ಹಾಡಿದ ಮೊದಲ ಯುವತಿ ಕ್ಷಮೆ ಕೇಳುತ್ತೇನೆ ಹಾಸ್ಯವಾಗಿ ಹೇಳಿದ್ದಾಳೆ. ಇದನ್ನೂ ಓದಿ: 2 ತಿಂಗಳಿಂದ ನನ್ನ ಮಕ್ಕಳು ಕಾಣ್ತಿಲ್ಲ: ಸಿಎಂ, ಗೃಹ ಸಚಿವರಿಗೆ ಪತ್ರ ಬರೆದ ಅವಳಿ ಸಹೋದರಿಯರ ತಂದೆ

    ಯುವತಿಯರ ಹುಚ್ಚಾಟಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿಯರು ವೀಡಿಯೋ ಹಂಚಿಕೊಂಡಿರುವ ಖಾತೆ ಬಗ್ಗೆ ಹೆಚ್ಚುವರಿ ಮಾಹಿತಿ ನೀಡುವಂತೆ ಲಾಲ್‌ಬಜಾರ್ ಪೊಲೀಸರು ಫೇಸ್‌ಬುಕ್‌ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಫೇಸ್‌ಬುಕ್ ಖಾತೆ ಡಿಲೀಟ್ ಮಾಡಿದ ನಂತರ ಇಬ್ಬರು ಹೆಣ್ಣುಮಕ್ಕಳು ಮತ್ತೊಂದು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಲೈವ್ ಬಂದಿದ್ದು, ತಮ್ಮ ಗೆಳೆಯರ ಬಳಗದಲ್ಲಿ ಪಂದ್ಯಕಟ್ಟಿ ತಮಾಷೆಗಾಗಿ ಈ ರೀತಿ ವಿಡಿಯೋ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.

    ಈ ಸಂಬಂಧ ಕೇಸ್‌ ದಾಖಲಿಸಿಕೊಂಡಿರುವ ಪಶ್ಚಿಮ ಬಂಗಾಳ ಪೊಲೀಸರು (Westbengal Police) ತನಿಖೆ ನಡೆಸುತ್ತಿದ್ದಾರೆ.

  • ಹಿಜಬ್ ವಿವಾದ – ಫಿಫಾ ವಿಶ್ವಕಪ್‍ನಲ್ಲಿ ತಮ್ಮ ದೇಶದ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್

    ಹಿಜಬ್ ವಿವಾದ – ಫಿಫಾ ವಿಶ್ವಕಪ್‍ನಲ್ಲಿ ತಮ್ಮ ದೇಶದ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಇರಾನ್

    ಕತಾರ್: ಅರಬ್ಬರ ನಾಡಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ (FIFA World Cup) ಫುಟ್‍ಬಾಲ್ (FootBall) ಟೂರ್ನಿ ವಿವಾದಗಳಿಂದ ಸದ್ದು ಮಾಡುತ್ತಿದೆ. ಇದೀಗ ಇರಾನ್ (Iran) ತಂಡ ತಮ್ಮ ದೇಶದ ರಾಷ್ಟ್ರಗೀತೆಯನ್ನು (National Anthem) ಹಾಡಲು ನಿರಾಕರಿಸಿ ಹೊಸ ವಿವಾದ ಹುಟ್ಟು ಹಾಕಿದೆ.

    ಫಿಫಾ ವಿಶ್ವಕಪ್ ಕತಾರ್‌ನಲ್ಲಿ (Qatar) ಬಹಳ ಅದ್ಧೂರಿಯಾಗಿ ಆರಂಭ ಕಂಡಿದೆ. ಫುಟ್‍ಬಾಲ್ ಪಂದ್ಯದ ನಡುವೆ ಆನ್‍ಫೀಲ್ಡ್‌ನಲ್ಲಿ ಕಿತ್ತಾಟ ಸಾಮಾನ್ಯ ಆದರೆ ಕತಾರ್‌ನಲ್ಲಿ ಆನ್‍ಫೀಲ್ಡ್ ಮತ್ತು ಆಫ್‍ದೀಫೀಲ್ಡ್‌ನಲ್ಲಿ ಕೆಲ ವಿವಾದ ಹೆಚ್ಚು ಪ್ರಚಾರ ಕಂಡಿದೆ. ಇದೀಗ ಈ ವಿವಾದಕ್ಕೆ ಹೊಸ ಸೇರ್ಪಡೆ ಎಂಬಂತೆ ಇಂಗ್ಲೆಂಡ್ (England) ಹಾಗೂ ಇರಾನ್ ನಡುವಿನ ಪಂದ್ಯಕ್ಕೂ ಮೊದಲು ರಾಷ್ಟ್ರಗೀತೆ ವಿವಾದ ಹುಟ್ಟಿಕೊಂಡಿದೆ. ಇರಾನ್ ಆಟಗಾರರು ತಮ್ಮ ದೇಶದ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ್ದಾರೆ. ಫುಟ್‍ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಎರಡೂ ತಂಡಗಳ ರಾಷ್ಟ್ರಗೀತೆ ಹಾಡಿಸುವುದು ನಿಯಮ. ಆದರೆ ಇರಾನ್ ಆಟಗಾರರು ತಮ್ಮ ದೇಶದ ರಾಷ್ಟ್ರಗೀತೆ ಹಾಡದೇ ಪ್ರತಿಭಟಿಸಿದ್ದಾರೆ. ಇದನ್ನೂ ಓದಿ: ಹಿಂದಿನ ಎಲ್ಲ ಆದಾಯದ ದಾಖಲೆಗಳನ್ನು ಮುರಿಯಲಿದೆ ಈ ಬಾರಿಯ ಫಿಫಾ ಫುಟ್ಬಾಲ್ ವಲ್ಡ್ ಕಪ್

    ಇರಾನ್‍ನಲ್ಲಿ ನಡೆಯುತ್ತಿರುವ ಹಿಜಬ್ (Hijab) ವಿರುದ್ಧ ಪ್ರತಿಭಟನೆ ಬೆಂಬಲಿಸಿ ಇರಾನ್ ಫುಟ್‍ಬಾಲ್ ತಂಡ ಈ ನಿರ್ಧಾರ ತೆಗೆದುಕೊಂಡಿದೆ. ತಮ್ಮ ದೇಶದ ರಾಷ್ಟ್ರಗೀತೆಯನ್ನು ಹಾಡದೇ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಇರಾನ್ ಫುಟ್‍ಬಾಲ್ ತಂಡದ ನಾಯಕ ಅಲಿರೆಜಾ ಜಹಾನ್‍ಬಕ್ಷ್, ನಾವು ರಾಷ್ಟ್ರಗೀತೆ ಹಾಡದಿರಲು ನಿರ್ಧರಿಸಿದ್ದೇವೆ. ಇರಾನ್‍ನಲ್ಲಿ ನಡೆಯತ್ತಿರುವ ಹಿಜಬ್ ವಿರುದ್ಧದ ಪ್ರತಿಭಟನೆ ಬೆಂಬಲಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 25 ಬೌಂಡರಿ, 15 ಸಿಕ್ಸರ್ – 277 ರನ್ ಸಿಡಿಸಿ ವಿಶ್ವದಾಖಲೆ ಬರೆದ ಜಗದೀಶನ್ – ಹಿಟ್‌ಮ್ಯಾನ್ ದಾಖಲೆಯೂ ಉಡೀಸ್

    ಹಿಜಬ್ ಧರಿಸಿಲ್ಲ ಎಂಬ ಕಾರಣಕ್ಕೆ ಸೆ.16 ರಂದು ಮಹ್ಸಾ ಅಮಿನಿ ಅವರನ್ನು ಬಂಧಿಸಲಾಗಿತ್ತು. ನಂತರ ಆಕೆ ಸಾವಿಗೀಡಾದಳು. ಇರಾನ್‍ನ ನೈತಿಕ ಪೊಲೀಸ್‍ಗಿರಿಗೆ ಯುವತಿ ಬಲಿಯಾಗಿದ್ದಾಳೆ ಎಂಬ ಆರೋಪ ಕೇಳಿಬಂತು. ಇದರ ಬೆನ್ನಲ್ಲೇ ಯುವತಿ ಸಾವು ಹಾಗೂ ಹಿಜಬ್ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ತೀವ್ರ ಸ್ವರೂಪ ಪಡೆದಿದ್ದು, ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಗೀತೆಗೆ ಅಪಮಾನ : ಬರಗೂರು ವಿರುದ್ಧ ಬಿಜೆಪಿಯಿಂದ ದೂರು

    ರಾಷ್ಟ್ರಗೀತೆಗೆ ಅಪಮಾನ : ಬರಗೂರು ವಿರುದ್ಧ ಬಿಜೆಪಿಯಿಂದ ದೂರು

    ಬೆಂಗಳೂರು: ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ತಮ್ಮ ಕಾದಂಬರಿ ʼಭರತನಗರಿʼಯಲ್ಲಿ ರಾಷ್ಟ್ರಗೀತೆ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ಬರೆದಿದ್ದಾರೆ. ವಿಡಂಬನೆ ಮಾಡಿದ್ದಲ್ಲದೆ ಭಾರತವನ್ನು ಜಡಭಾರತ ಎಂದು ಕರೆದಿದ್ದಾರೆ. ಗಂಗಾನದಿಯನ್ನು ಹಾದರ ಎಂದು ಕರೆದಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ಷೇಪಿಸಿದರು.

    ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರಿಗೆ ಇಂದು ದೂರು ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಭಾರತ ಮತ್ತು ರಾಷ್ಟ್ರಗೀತೆ ಬಗ್ಗೆ ಅಭಿಮಾನ ಇರುವವರು ಇದನ್ನು ಸಹಿಸಿಕೊಂಡು ಸುಮ್ಮನೆ ಕುಳಿತಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

    ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆಗಿದ್ದ ಬರಗೂರು ರಾಮಚಂದ್ರಪ್ಪ ಅವರು ದೊಡ್ಡ ಸಾಹಿತಿಯಾಗಿದ್ದು, ಅಂಥವರು ನಾಡಿಗೆ ಮತ್ತು ದೇಶಕ್ಕೆ ಅವಹೇಳನ ಮಾಡಿದ್ದಾರೆ. ಇದೊಂದು ತಲೆ ತಗ್ಗಿಸಬೇಕಾದ ವಿಚಾರ ಎಂದು ತಿಳಿಸಿದರು. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಇಂಥ ಅಪಮಾನ ಆಗಿದೆ. ಯಾಕೆ ಅವರು ಕ್ರಮ ಕೈಗೊಂಡಿಲ್ಲ? ಅಥವಾ ಸಿದ್ದರಾಮಯ್ಯನವರು ಹೋಗಲಿ ಬಿಡಿ ಎಂದು ಉದಾಸೀನ ಮಾಡಿದರೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ

    ಇವತ್ತು ಬರಗೂರು ರಾಮಚಂದ್ರಪ್ಪ ಅವರ ಈ ಬರಹದ ಬಗ್ಗೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಕೇಳಿದರಲ್ಲದೆ, ಪೊಲೀಸ್ ಇಲಾಖೆಯು ರಾಷ್ಟ್ರಧ್ವಜಕ್ಕೆ ಆದ ಅವಮಾನದ ಹಿನ್ನೆಲೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಕಾನೂನು ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾಗಿ ಹೇಳಿದರು. ಭರತನಗರಿ ಕಾದಂಬರಿಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

    ನಾಡಿನ ಕಲೆ, ಸಂಸ್ಕೃತಿ, ದೇಶ, ಅಂಬೇಡ್ಕರ್ ಮತ್ತು ಸಾಹಿತ್ಯದ ಬಗ್ಗೆ ಉದ್ದುದ್ದ ಭಾಷಣ ಮಾಡುವ ಬರಗೂರು ರಾಮಚಂದ್ರಪ್ಪ ಅವರು, ಹೀಗೆ ಬರೆದುದಾದರೂ ಹೇಗೆ ಎಂದು ಕೇಳಿದರು. 1983ರಲ್ಲಿ ಈ ಕಾದಂಬರಿ ಬರೆದುದಾಗಿ ಅವರು ಪ್ರಶ್ನೆಗೆ ಉತ್ತರ ನೀಡಿದರು. ಈಗ ಅದು ಗಮನಕ್ಕೆ ಬಂದಿದೆ ಎಂದರು.

    BaraguruRamachandrappa

    ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಬರಗೂರು ರಾಮಚಂದ್ರಪ್ಪ ಎಂಬ ಪುಸ್ತಕವನ್ನು ಎಸ್.ಮಾರುತಿ ಅವರು ಬರೆದಿದ್ದಾರೆ. ಆ ಪುಸ್ತಕ ಗಮನಿಸಿದಾಗ ರಾಷ್ಟ್ರಗೀತೆ, ರಾಷ್ಟ್ರಧ್ವಜದ ಬಗ್ಗೆ ವಿಕೃತಿ ಮೆರೆದಿರುವುದು ಗೊತ್ತಾಗಿದೆ. ಬರಗೂರರಿಗೆ ರಾಷ್ಟ್ರಗೀತೆ ಬಗ್ಗೆ ಇರುವ ವಿಕೃತ ಮನಸ್ಸು ಈಗ ಅರಿವಿಗೆ ಬಂದಿದೆ ಎಂದು ವಿವರಿಸಿದರು.

    ಭರತನಗರಿ ಓದಿದರೆ ಯಾರಿಗಾದರೂ ತಲೆ ಕೊಡಬಹುದು. ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಮಜಾಪೇಯಿ ಬಿಹಾರಿ ಎಂದು ಕರೆದು ಅವಮಾನ ಮಾಡಿದ್ದಾರೆ. ಚಂದ್ರಶೇಖರ, ಮೊರಾರ್ಜಿ, ಸಿಂಹಚರಣ್ (ಚರಣ್ ಸಿಂಗ್) ಎಂದು ವಿಕೃತಿಯ ಹೆಸರುಗಳನ್ನು ಬಳಸಿದ್ದಾರೆ. ಓದುವವರ ತಲೆ ಕೆಡಬೇಕೆಂದು ಹೀಗೆ ಮಾಡಿದ್ದಾರಾ? ಅಥವಾ ಅವರು ತಲೆಕೆಟ್ಟು ಬರೆದಿದ್ದಾರಾ ಗೊತ್ತಿಲ್ಲ ಎಂದು ಆಕ್ಷೇಪಿಸಿದರು.

    ಮಾರುತಿ ಅವರು 2016ರಲ್ಲಿ ತಮ್ಮ ಪುಸ್ತಕ ಬರೆದಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ಚಾಮರಾಜಪೇಟೆ ಕಾನೂನು ಪ್ರಕೋಷ್ಠದ ಮಂಡಲ ಸಹ ಸಂಚಾಲಕ ಹಾಗೂ ದೂರುದಾರ ವಿ.ಎಲ್. ಜಗದೀಶ್ ಈ ಸಂದರ್ಭದಲ್ಲಿ ಇದ್ದರು.

    Live Tv
    [brid partner=56869869 player=32851 video=960834 autoplay=true]

  • ಬೆಂಗ್ಳೂರಿನ ಖಾಸಗಿ ಶಾಲೆಗಳಲ್ಲಿ ರಾಷ್ಟ್ರಗೀತೆಗೆ ಅಪಮಾನ

    ಬೆಂಗ್ಳೂರಿನ ಖಾಸಗಿ ಶಾಲೆಗಳಲ್ಲಿ ರಾಷ್ಟ್ರಗೀತೆಗೆ ಅಪಮಾನ

    ಬೆಂಗಳೂರು: ದೇಶಾದ್ಯಂತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ ಮನೆಮಾಡಿದೆ. ಎಲ್ಲೆಲ್ಲೂ ಕೇಸರಿ, ಬಿಳಿ, ಹಸಿರಿನಿಂದ ಕಂಗೊಳಿಸುವ ತಿರಂಗಾ ರಾರಾಜಿಸುತ್ತಿದೆ. ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜಗಳನ್ನು ಹಾರಿಸುವ ಮೂಲಕ ಜನರು ದೇಶಪ್ರೇಮ ಮೆರೆಯುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಂದ ದೇಶದ್ರೋಹದ ಕೆಲಸ ನಡೆದಿದೆ.

    ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ನಿತ್ಯ ರಾಷ್ಟ್ರಧ್ವಜ ಹಾಡಿಸದೇ ಭಾರತಾಂಬೆಗೆ ಅಪಮಾನ ಮಾಡಲಾಗುತ್ತಿದೆ. ದೇಶದ್ರೋಹಿ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆಗೆ ದೂರು ನೀಡಲಾಗಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

    ಬೆಂಗಳೂರಿನಲ್ಲಿ ರಾಷ್ಟ್ರಗೀತೆ ಹಾಡಿಸದ ಮೂರು ಖಾಸಗಿ ಶಾಲೆಗಳಿಗೆ ಉತ್ತರ ಕೇಳಿ ಶಿಕ್ಷಣ ಇಲಾಖೆಯಿಂದ ನೋಟೀಸ್ ಕಳುಹಿಸಲಾಗಿದೆ. ಇದಕ್ಕೆ ಇಲ್ಲ ಸಲ್ಲದ ಕಾರಣ ನೀಡುತ್ತಿರುವ ಶಾಲಾ ಮುಖ್ಯಸ್ಥರು, ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಜಾಗದ ಕೊರತೆ ಇರುವುದರಿಂದ ಪ್ರತಿನಿತ್ಯ ರಾಷ್ಟ್ರಗೀತೆ ಹಾಡಿಸಿಲ್ಲ ಎಂದು ಹೇಳಿವೆ.

    ಇದಕ್ಕೆ ಖಡಕ್ ಸೂಚನೆ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇನ್ಮುಂದೆ ಎಲ್ಲ ಖಾಸಗಿ ಶಾಲೆಗಳಲ್ಲೂ ನಿತ್ಯ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಿಸುವಂತೆ ಸುತ್ತೋಲೆ ಹೊರಡಿಸಲು ಆದೇಶಿಸಿದ್ದಾರೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

    ವಂದೇ ಮಾತರಂಗೆ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದ ಅಶ್ವಿನಿ ಉಪಾಧ್ಯಾಯ ವಿರುದ್ಧ ‘ಹೈ’ ಗರಂ

    ನವದೆಹಲಿ: ವಂದೇ ಮಾತರಂ ಗೀತೆಗೆ ಜನ ಗಣ ಮನ ರಾಷ್ಟ್ರಗೀತೆಯಷ್ಟೇ ಸ್ಥಾನ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ವಕೀಲ, ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ವಿರುದ್ಧ ದೆಹಲಿ ಹೈಕೋರ್ಟ್ ಗರಂ ಆಗಿದೆ. ಅರ್ಜಿ ಸಲ್ಲಿಕೆ ಬೆನ್ನಲ್ಲೇ ಮಾಧ್ಯಮಗಳಿಗೆ ದಾಖಲೆ ಬಿಡುಗಡೆ ಹಿನ್ನೆಲೆ ಕೋರ್ಟ್ ನಿಮ್ಮದು ಪ್ರಚಾರದ ತಂತ್ರವಲ್ಲದೇ ಇನ್ನೇನು ಎಂದು ಕೋರ್ಟ್‍ನಲ್ಲಿ ಛೀಮಾರಿ ಹಾಕಿತು.

    ಅಶ್ವಿನಿ ಉಪಾಧ್ಯಾಯ ನಿನ್ನೆ ದೆಹಲಿ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ಹಂಗಾಮಿ ಮುಖ್ಯ ನ್ಯಾ. ವಿಪಿನ್ ಸಂಘಿ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿ ಸಲ್ಲಿಕೆ ಬೆನ್ನಲ್ಲೇ ಮಾಧ್ಯಮಗಳಿಗೆ ದಾಖಲೆ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿತು. ಪ್ರಚಾರದ ಕಾರಣಕ್ಕೆ ಇಂತಹ ಪಿಐಎಲ್‍ಗಳನ್ನು ಮಾಡುತ್ತೀರಾ ಎಂದು ಪ್ರಶ್ನೆ ಮಾಡಿತು. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    court order law

    ಅಶ್ವಿನಿ ಉಪಾಧ್ಯಾಯ ಮನವಿ ಬಳಿಕ ಕೋರ್ಟ್ ವಿಚಾರಣೆ ಆರಂಭಿಸಿತು. ಈ ವೇಳೆ ವಾದ ಮಂಡಿಸಿದ ಅವರು, ವಂದೇ ಮಾತರಂ ಗೀತೆಯನ್ನು ನಿಯಂತ್ರಿಸುವ ಯಾವುದೇ ಕಾನೂನುಗಳಿಲ್ಲ, ರಾಷ್ಟ್ರೀಯ ಗೌರವ ಕಾಯಿದೆಯಲ್ಲಿ ಉಲ್ಲೇಖಿಸಲ್ಪಟ್ಟಿಲ್ಲ. ಇದರಿಂದಾಗಿ ಸಿನಿಮಾ, ಧಾರವಾಹಿ ಹಾಗೂ ರಾಕ್ ಬ್ಯಾಂಡ್‍ಗಳಲ್ಲೂ ಈ ಗೀತೆಯನ್ನು ಮನಸ್ಸಿಗೆ ತೋಚಿದಂತೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.

    ಶ್ಯಾಮ್ ನಾರಾಯಣ್ ಚೌಕ್ಸೆ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚನೆ ಮಾಡಿ ವರದಿ ಸಲ್ಲಿಕೆಗೆ ಸೂಚಸಿದೆ. ಆದರೆ ಅದು ಯಾವುದೇ ಪ್ರಗತಿಯನ್ನು ಕಂಡಿಲ್ಲ. 2017 ರಲ್ಲಿ ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆ ಎಂದು ಗುರುತಿಸಿ ವಾರಕ್ಕೊಮ್ಮೆ ಶಾಲೆ ಕಾಲೇಜುಗಳಲ್ಲಿ ಹಾಡಲು ಸೂಚಿಸಿದೆ. ಆ ಆದೇಶ ಪಾಲನೆಯಾಗಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

    ಹೀಗಾಗಿ ವಂದೇ ಮಾತರಂ ಗೀತೆಯನ್ನು ನಾಟಕೀಯವಾಗಿ ಬಳಕೆ ಮಾಡಬಾರದು. ಅದಕ್ಕೆ ರಾಷ್ಟ್ರಗೀತೆಯಷ್ಟೇ ಗೌರವ ನೀಡಬೇಕು ಮತ್ತು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಬಾರದು ಅಲ್ಲದೇ ಶಾಲೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಾಡಲು ಸೂಚಿಸಬೇಕು ಎಂದು ಮನವಿ ಮಾಡಿದರು.

    ವಾದ ಆಲಿಸಿದ ಪೀಠ, ಅರ್ಜಿ ವಿಚಾರಣೆ ನಡೆಸಲು ಅನುಮತಿ ನೀಡಿತು. ಅಲ್ಲದೇ ಎಲ್ಲ ಪ್ರತಿವಾದಿಗಳಿಗೆ ಪ್ರಕರಣ ಸಂಬಂಧ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿ ಆರು ವಾರಗಳಲ್ಲಿ ಸಮಯವನ್ನು ನೀಡಿದೆ. ನವೆಂಬರ್ 9 ರಂದು ಮತ್ತೆ ಈ ಬಗ್ಗೆ ವಿಚಾರಣೆ ನಡೆಯಲಿದ್ದು ಪ್ರಕರಣದ ವಿಸ್ತೃತ ವಿಚಾರಣೆ ನಡೆಯಲಿದೆ.

  • ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    ನವದೆಹಲಿ: ವಂದೇ ಮಾತರಂಗೂ ಜನ ಗಣ ಮನ ರಾಷ್ಟ್ರಗೀತೆಯಷ್ಟೇ ಗೌರವ ಸಿಗಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಿಜೆಪಿ ನಾಯಕ ಹಾಗೂ ಹಿರಿಯ ವಕೀಲ ಅಶ್ವಿನಿ ಉಪಾಧ್ಯಾಯ ದೆಹಲಿಯ ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಎಲ್ಲ ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆಯ ಜೊತೆಗೆ ವಂದೇ ಮಾತರಂ ಹಾಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸುವಂತೆ ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ‘ವಂದೇ ಮಾತರಂ’ ನಮ್ಮ ಇತಿಹಾಸ, ಸಾರ್ವಭೌಮತೆ, ಏಕತೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ಯಾವುದೇ ನಾಗರಿಕರು ಯಾವುದೇ ಬಹಿರಂಗ ಅಥವಾ ರಹಸ್ಯ ಕೃತ್ಯದಿಂದ ಅಗೌರವ ತೋರಿದರೆ ಅದು ಸಮಾಜ ವಿರೋಧಿ ಚಟುವಟಿಕೆ ಮಾತ್ರವಲ್ಲದೇ ನಮ್ಮ ಹಕ್ಕುಗಳ ವಿನಾಶವಾಗುತ್ತದೆ. ದೇಶದ ಸಾರ್ವಭೌಮ ಪ್ರಜೆಯಾಗಿರಲು ವಂದೇ ಮಾತರಂ ಗೀತೆಗೆ ಗೌರವ ನೀಡಬೇಕು. ಇದಕ್ಕೆ ಅಗೌರವ ಕಂಡು ಬಂದಲ್ಲಿ ತಡೆಯಬೇಕು ಎಂದು ಕೋರಿದ್ದಾರೆ.

    ದೇಶದಲ್ಲಿ ಎಲ್ಲೆಡೆ ವಂದೇ ಮಾತರಂ ನುಡಿಸಿದಾಗ ಎಲ್ಲರೂ ಎದ್ದುನಿಂತು ರಾಷ್ಟ್ರಗೀತೆಗೆ ನೀಡುವಂತೆ ಗೌರವ ನೀಡಬೇಕು, ಇದನ್ನು ನಾಟಕೀಯಗೊಳಿಸಬಾರದು. ಅಲ್ಲದೇ ವಾಣಿಜ್ಯ ಉಪಯೋಗಕ್ಕೆ ಗೀತೆಯನ್ನು ಬಳಸಿಕೊಳ್ಳಬಾರದು ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಹಸ್ಯ ಬಯಲಾಗುತ್ತೆಂಬ ಭಯಕ್ಕೆ ಮಾಜಿ ಚಾಲಕನ ಹತ್ಯೆಗೈದ YSRCP ಮುಖಂಡ

  • ರಾಷ್ಟ್ರಗೀತೆ ಕಡ್ಡಾಯ ಮಾಡಿದ್ರೆ ನಮಗೂ ಖುಷಿಯೇ: ಜಮೀರ್

    ರಾಷ್ಟ್ರಗೀತೆ ಕಡ್ಡಾಯ ಮಾಡಿದ್ರೆ ನಮಗೂ ಖುಷಿಯೇ: ಜಮೀರ್

    ಬೆಂಗಳೂರು: ರಾಷ್ಟ್ರಗೀತೆ ಕಡ್ಡಾಯ ಮಾಡಿದ್ರೆ ನಮಗೂ ಖುಷಿಯೇ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

    ರಾಷ್ಟ್ರಗೀತೆ ಕಡ್ಡಾಯ ಮಾಡಬೇಕೆಂಬುದರ ಕುರಿತು ಮಾತನಾಡುತ್ತಾ ಮುತಾಲಿಕ್ ವಿರುದ್ಧ ಜಮೀರ್ ವಾಗ್ದಾಳಿ ನಡೆಸಿದರು. ರಾಷ್ಟ್ರಗೀತೆ ಕಡ್ಡಾಯ ಮಾಡ್ಬೇಕು ಅಂತಾ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ನಾವು ರಾಷ್ಟ್ರಗೀತೆ ಹಾಡಿಕೊಂಡೇ ಬರ್ತಾ ಇದ್ದೀವಿ. ಇದು ಬೇಕು ಅಂತಾ ಮಾಡ್ತಿರೋದು, ಇದೊಂದು ಹುನ್ನಾರ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೊದಲು ಕ್ಷಮೆ ಕೇಳಿ ನಂತರ ನಿಮ್ಮ ಸಮಜಾಯಿಷಿ ನೀಡಿ: ಡಿಸಿಎಫ್ ವಿರುದ್ಧ ರೈತರ ಆಕ್ರೋಶ

    ಇದೊಂದು ಪೊಲಿಟಿಕಲ್ ಗಿಮಿಕ್. ರಾಷ್ಟ್ರಗೀತೆ ಕಡ್ಡಾಯ ಮಾಡಿದ್ರೆ ನಮಗೂ ಖುಷಿ. ರಾಷ್ಟ್ರಗೀತೆ ಕಡ್ಡಾಯ ಇಲ್ಲದ ಕಡೆ ನಾವು ರಾಷ್ಟ್ರಗೀತೆ ಹಾಡಿಲ್ಲವಾ..?, ನಾವು ಮುತಾಲಿಕ್ ಯಿಂದ ರಾಷ್ಟ್ರಗೀತೆ ಹೇಳಿಸ್ಕೋಬೇಕಾ ಎಂದು ಪ್ರಶ್ನಿಸಿದ ಜಮೀರ್, 2023ರ ಚುನಾವಣೆಗೆ ಇದೊಂದು ಗಿಮಿಕ್ ಎಂದು ಹರಿಹಾಯ್ದರು.