Tag: National Conference

  • ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಹೈಡ್ರಾಮಾ – ವಕ್ಫ್ ಪ್ರತಿ, ಜಾಕೆಟ್‌ ಹರಿದು ಪ್ರತಿಭಟಿಸಿದ ಎನ್‌ಸಿ ಶಾಸಕರು

    ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಹೈಡ್ರಾಮಾ – ವಕ್ಫ್ ಪ್ರತಿ, ಜಾಕೆಟ್‌ ಹರಿದು ಪ್ರತಿಭಟಿಸಿದ ಎನ್‌ಸಿ ಶಾಸಕರು

    ಶ್ರೀನಗರ : ನೂತನ ವಕ್ಫ್‌ ಕಾಯ್ದೆಗೆ ಬಗ್ಗೆ ಚರ್ಚೆಗೆ ಅವಕಾಶ ನೀಡದ ಹಿನ್ನಲೆ ಜಮ್ಮು ಕಾಶ್ಮೀರ (Jammu Kashmir) ವಿಧಾನಸಭೆಯಲ್ಲಿ ಆಡಳಿತರೂಢ ನ್ಯಾಷನಲ್‌ ಕಾನ್ಫರೆನ್ಸ್‌ (National Conference) ಪಕ್ಷದ ಶಾಸಕರು ಮೋದಿ ಸರ್ಕಾರದ (Modi Government) ವಿರುದ್ಧ ಘೋಷಣೆಗಳನ್ನು ಕೂಗಿದರು.

    ಸದನ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಶಾಸಕರು ಚರ್ಚೆಗೆ ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಿದರು. ಆದರೆ ಚರ್ಚೆಗೆ ಅನುಮತಿ ನೀಡದ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ನಿಯಮ 56 ಮತ್ತು 58 (7) ಅನ್ನು ಉಲ್ಲೇಖಿಸಿ ನಿಲುವಳಿ ಸೂಚನೆಯನ್ನು ವಜಾಗೊಳಿಸಿದರು. ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಇರುವುದರಿಂದ ಮತ್ತು ಅದರ ಪ್ರತಿಯನ್ನು ನಾನು ಹೊಂದಿರುವುದರಿಂದ, ನಾವು ಆ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ ಎಂದು ನಿಯಮವು ಸ್ಪಷ್ಟವಾಗಿ ಹೇಳುತ್ತದೆ ಎಂದು ಹೇಳಿದರು.

    ಇದರಿಂದ ವಿಧಾನಸಭೆಯಲ್ಲಿ ಪ್ರತಿಭಟನೆ ಭುಗಿಲೆದ್ದಿತು. ಎನ್‌ಸಿ ಶಾಸಕರಾದ ಹಿಲಾಲ್ ಲೋನ್ ಮತ್ತು ಸಲ್ಮಾನ್ ಸಾಗರ್ ವಕ್ಫ್ ಕಾಯ್ದೆಯ ಪ್ರತಿಗಳನ್ನು ಹರಿದು ಹಾಕಿದರು. ಎನ್‌ಸಿ ಶಾಸಕ ಅಬ್ದುಲ್ ಮಜೀದ್ ಲಾರ್ಮಿ ಪ್ರತಿಭಟನೆಯಲ್ಲಿ ಸದನದಲ್ಲಿ ತಮ್ಮ ಜಾಕೆಟ್ ಹರಿದು ಸಿಟ್ಟು ಪ್ರದರ್ಶಿಸಿದರು. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆಗೆ ಮುಸ್ಲಿಂ ಮಹಿಳೆಯರ ಬೆಂಬಲ – ‘ಥ್ಯಾಂಕ್ಯು ಮೋದಿ ಜೀ’ ಎಂದು ಕೃತಜ್ಞತೆ

     

    ಕೃಷಿ ಕಾನೂನುಗಳನ್ನು ಹಿಂದಕ್ಕೆ ಪಡೆದಂತೆ ಮೋದಿ ಸರ್ಕಾರ ವಕ್ಫ್ ಕಾನೂನನ್ನು ಹಿಂಪಡೆಯಬೇಕು. ಈ ಕಾನೂನನ್ನು ಹಿಂತೆಗೆದುಕೊಳ್ಳುವವರೆಗೆ ನಾವು ವಿಧಾನಸಭೆಯ ಕಲಾಪಗಳನ್ನು ನಡೆಸಲು ಬಿಡುವುದಿಲ್ಲ. ನಮ್ಮ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಲಾಗಿದೆ. ಅದಕ್ಕಾಗಿಯೇ ನಾನು ನನ್ನ ಜಾಕೆಟ್ ಹರಿದುಕೊಂಡೆ ಎಂದು ಶಾಸಕ ಅಬ್ದುಲ್ ಮಜೀದ್ ಲಾರ್ಮಿ ಹೇಳಿದರು‌.  ಇದನ್ನೂ ಓದಿ: ಕಚ್ಚಾ ತೈಲ ದರ ಭಾರೀ ಇಳಿಕೆ- ಭಾರತದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಯಾಗುತ್ತಾ?

    ಎನ್‌ಸಿಯ ನಡೆಯನ್ನು ಖಂಡಿಸಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುನಿಲ್ ಶರ್ಮಾ, ಆಡಳಿತ ಪಕ್ಷದ ಬೇಡಿಕೆಯು “ಅತ್ಯಂತ ಅಸಾಂವಿಧಾನಿಕ” ಎಂದು ಕರೆದರು. ಸಂಸತ್ತು ಮಸೂದೆಯನ್ನು ಅಂಗೀಕರಿಸಿದೆ, ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ ಅದು ಈಗ ಕಾನೂನಾಗಿದೆ. ಸದ್ಯ ವಿಷಯವು ನ್ಯಾಯಾಂಗದಲ್ಲಿದ್ದಾಗ, ಈ ವಿಧಾನಸಭೆಗೆ ಅದರ ಬಗ್ಗೆ ಚರ್ಚಿಸಲು ಯಾವುದೇ ಅಧಿಕಾರವಿಲ್ಲ ಎಂದರು.

    ಸ್ಪೀಕರ್ ಅವರ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ ನಿರ್ಧಾರವನ್ನು ತೀವ್ರ ನಿರಾಶಾದಾಯಕ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, ಬಹುಮತವಿದ್ದರೂ, ಎನ್‌ಸಿ-ಕಾಂಗ್ರೆಸ್ ಮೈತ್ರಿಕೂಟವು ಬಿಜೆಪಿಯ ಮುಸ್ಲಿಂ ವಿರೋಧಿ ಕಾರ್ಯಸೂಚಿಗೆ ಸಂಪೂರ್ಣವಾಗಿ ಮಣಿದಿದೆ, ಎರಡೂ ಕಡೆಯವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದರು.

     

  • ಜಮ್ಮು-ಕಾಶ್ಮೀರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

    ಜಮ್ಮು-ಕಾಶ್ಮೀರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ (Jammu – Kashmir) ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಒಮರ್ ಅಬ್ದುಲ್ಲಾ (Omar Abdullah) ಪ್ರಮಾಣವಚನ ಸ್ವೀಕರಿಸಿದ್ದಾರೆ. ಹತ್ತು ವರ್ಷಗಳ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದ್ದು, ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಾಡದ ಬಳಿಕ ಆಯ್ಕೆಯಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

    ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ)ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣವಚನ ಬೋಧಿಸಿದರು. ಒಮರ್ ಅಬ್ದುಲ್ಲಾ ಜೊತೆಗೆ ಶಾಸಕರಾದ ಸತೀಶ್ ಶರ್ಮಾ (ಸ್ವತಂತ್ರ), ಸಕಿನಾ ಇಟೂ, ಜಾವಿದ್ ದಾರ್, ಸುನ್ರಿಂದರ್ ಚೌಧರಿ ಮತ್ತು ಜಾವಿದ್ ರಾಣಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇದನ್ನೂ ಓದಿ: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವು

    ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರು ಭಾಗಿಯಾಗಿದ್ದರು. ಇದನ್ನೂ ಓದಿ: ಎಷ್ಟೇ ಮಳೆ ಬಂದರೂ ಅರ್ಧಗಂಟೆಯಲ್ಲಿ ಸರಿ ಮಾಡ್ತೀವಿ – ಡಿಕೆಶಿ

    ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ (Congress), ಎನ್‌ಸಿ ಸರ್ಕಾರವನ್ನು ಸೇರದೇ ಬಾಹ್ಯ ಬೆಂಬಲವನ್ನು ನೀಡಿದೆ. ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ, ಜಮ್ಮು ಕಾಶ್ಮೀರಕ್ಕೆ ರಾಜ್ಯತ್ವ ಮರುಸ್ಥಾಪನೆವರೆಗೂ ನಾವು ಸರ್ಕಾರದ ಭಾಗವಾಗುತ್ತಿಲ್ಲ, ನಾವು ಅತೃಪ್ತಗೊಂಡಿದ್ದೇವೆ. ನಾವು ಯಾವುದೇ ಸಚಿವ ಸ್ಥಾನ ಪಡೆಯುತ್ತಿಲ್ಲ, ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯವನ್ನು ತಾರಿಕ್ ಹಮೀದ್ ಕರ್ರಾ ಇದೇ ವೇಳೆ ತಳ್ಳಿಹಾಕಿದರು. ಇದನ್ನೂ ಓದಿ: ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಕೆಶಿ

    ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು 90 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಮತ್ತು ಕಾಂಗ್ರೆಸ್ 6 ಸ್ಥಾನಗಳನ್ನು ಪಡೆದುಕೊಂಡಿದೆ. ಇದನ್ನೂ ಓದಿ: 14 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ- ಮೂವರು ಸಾವು

  • Jammu Kashmir | ಕಾಂಗ್ರೆಸ್‌ ಬೆಂಬಲ ಇಲ್ಲದೇ ಬಹುಮತ ಸಾಧಿಸಿದ NC

    Jammu Kashmir | ಕಾಂಗ್ರೆಸ್‌ ಬೆಂಬಲ ಇಲ್ಲದೇ ಬಹುಮತ ಸಾಧಿಸಿದ NC

    ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಕಾಂಗ್ರೆಸ್‌ (Congress) ಬೆಂಬಲ ಇಲ್ಲದೇ ನ್ಯಾಷನಲ್‌ ಕಾನ್ಫರೆನ್ಸ್‌ (NC) ಈಗ ಬಹುಮತ ಪಡೆದಿದೆ. 4 ಮಂದಿ ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ.

    ಒಟ್ಟು 90 ಸ್ಥಾನಗಳಿಗೆ ಚುನಾವಣೆ (Election) ನಡೆದಿದ್ದು ಸರ್ಕಾರ ರಚನೆಗೆ 46 ಶಾಸಕರ ಬೆಂಬಲ ಬೇಕು. ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ 42, ಕಾಂಗ್ರೆಸ್‌ 6 ಸ್ಥಾನ ಗೆದ್ದರೆ 7 ಮಂದಿ ಪಕ್ಷೇತರರಯ ಗೆದ್ದಿದ್ದರು. 7 ಮಂದಿಯ ಪೈಕಿ 4 ಮಂದಿ ಎನ್‌ಸಿಗೆ ಬೆಂಬಲ ನೀಡಿದ್ದಾರೆ. ಇದನ್ನೂ ಓದಿ: ರತನ್ ಟಾಟಾಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಮಹಾರಾಷ್ಟ್ರ ಸರ್ಕಾರದ ಶಿಫಾರಸು

    ಕಾಂಗ್ರೆಸ್‌ ಮತ್ತು ಪಕ್ಷೇತರರ ಬೆಂಬಲದಿಂದಾಗಿ ಎನ್‌ಸಿ ಬಲ ಮತ್ತಷ್ಟು ಗಟ್ಟಿಯಾಗಲಿದೆ. ಪಕ್ಷೇತರರ ಬಲ ಇರುವ ಕಾರಣ ಮಂತ್ರಿ ಸ್ಥಾನ ಹಂಚುವ ವೇಳೆ ಕಾಂಗ್ರೆಸ್‌ ಶಾಸಕರಿಗೆ ಮಂತ್ರಿಗಿರಿ ಸಾಧ್ಯತೆ ಕಡಿಮೆಯಿದೆ.

    ಯಾರು ಎಷ್ಟು ಸ್ಥಾನ?
    ನ್ಯಾಷನಲ್‌ ಕಾನ್ಫರೆನ್ಸ್‌ – 42
    ಬಿಜೆಪಿ – 29
    ಕಾಂಗ್ರೆಸ್‌ – 06
    ಪಿಡಿಪಿ – 03
    ಜೆಪಿಸಿ – 1
    ಸಿಪಿಐ(ಎಂ)- 01
    ಆಪ್‌ – 01
    ಇತರರು – 07

  • ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ

    ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ

    ಶ್ರೀನಗರ: ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ (Omar Abdullah) ಆಯ್ಕೆ ಆಗಿದ್ದಾರೆ.

    ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ (Farooq Abdullah) ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.

    ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ. ಎನ್‌ಸಿ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರು 1977 ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಅವರ ಮಗ ಫಾರೂಕ್ ಅಬ್ದುಲ್ಲಾ ಅವರು 1983, 1987 ಮತ್ತು 1996 ರಲ್ಲಿ ವಿಜಯಗಳಿಸಿದರು. ನಂತರ ಒಮರ್ ಅಬ್ದುಲ್ಲಾ ಅವರು 2008 ರಲ್ಲಿ ಕ್ಷೇತ್ರದಿಂದ ಆಯ್ಕೆಯಾದರು.

    ಬುದ್ಗಾಮ್‌ನಲ್ಲಿ ಅಬ್ದುಲ್ಲಾ ಅವರು ಪಿಡಿಪಿಯ ಅಗಾ ಸೈಯದ್ ಮುಂತಜೀರ್ ಮೆಹದಿ ಮತ್ತು ಅವಾಮಿ ನ್ಯಾಷನಲ್ ಕಾನ್ಫರೆನ್ಸ್‌ನ ಅಗಾ ಸೈಯದ್ ಅಹ್ಮದ್ ಮೂಸ್ವಿ ಸೇರಿದಂತೆ 7 ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದರು.

    ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್‌ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 2 ಟ್ರೆಂಡ್‌ ಪ್ರಕಾರ ಎನ್‌ಸಿ ಮತ್ತು ಕಾಂಗ್ರೆಸ್‌ ಮೈತ್ರಿಕೂಟ 51ಕ್ಷೇತ್ರ, ಬಿಜೆಪಿ (BJP) 27 ಪಿಡಿಪಿ (PDP) 02 ಇತರರು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    ಒಟ್ಟು 90 ಕ್ಷೇತ್ರಗಳ ಪೈಕಿ ಎನ್‌ಸಿ 56, ಕಾಂಗ್ರೆಸ್‌ 38, ಸಿಪಿಎಂ 1 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇಳಿಸಿದ್ದವು. ಬಿಜೆಪಿ 62 ಕ್ಷೇತ್ರಗಳಲ್ಲಿ ಪಿಡಿಪಿ 81 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.

    90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆದಿತ್ತು

    2014 ರಲ್ಲಿ ನಡೆದ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಷನಲ್‌ ಕಾನ್ಫರೆನ್ಸ್‌ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.

  • Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

    Jammu Kashmir Results | ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

    ನವದೆಹಲಿ: ಜಮ್ಮು ಕಾಶ್ಮೀರದಲ್ಲಿ (Jammu Kashmir) 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (National Conference) ಮತ್ತು ಕಾಂಗ್ರೆಸ್ (Congress) ಮೈತ್ರಿಕೂಟವು 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ.

    ಆರಂಭದಿಂದಲೂ ಎನ್‌ಸಿ ಮತ್ತು ಕಾಂಗ್ರೆಸ್‌ ಮುನ್ನಡೆ ಸಿಕ್ಕಿತ್ತು. ಮಧ್ಯಾಹ್ನ 12 ಗಂಟೆಯ ಟ್ರೆಂಡ್‌ ಪ್ರಕಾರ ಎನ್‌ಸಿ ಮತ್ತು ಕಾಂಗ್ರೆಸ್‌ ಮೈತ್ರಿಕೂಟ 50 ಕ್ಷೇತ್ರ, ಬಿಜೆಪಿ (BJP) 26, ಪಿಡಿಪಿ (PDP) 05, ಇತರರು 09 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    ವಿಶೇಷ ಸ್ಥಾನಮಾನವನ್ನು ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆದ ಚುನಾವಣೆ ಇದಾಗಿರುವ ಕಾರಣ ಈ ಚುನಾವಣೆ ಮಹತ್ವ ಪಡೆದಿತ್ತು.

    ಈ ಚುನಾವಣೆಯಲ್ಲಿ ಗೆದ್ದರೆ ಜಮ್ಮು ಕಾಶ್ಮೀರಕ್ಕೆ ರಾಜ್ಯಸ್ಥಾನಮಾನವನ್ನು ನೀಡುತ್ತೇವೆ ಎಂದು ಕಾಂಗ್ರೆಸ್‌ ಮತ್ತು ಎನ್‌ಸಿ ಘೋಷಿಸಿತ್ತು. ಅಷ್ಟೇ ಅಲ್ಲದೇ ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿತ್ತು. ಈ ಘೋಷಣೆಗಳ ಪರಿಣಾಮ ಎನ್‌ಸಿ ಮೈತ್ರಿಕೂಟ ಚುನಾವಣೆಯಲ್ಲಿ ಭರ್ಜರಿ ಮುನ್ನಡೆ ಸಾಧಿಸಿದೆ.

    ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ಎನ್‌ಸಿ ಮೈತ್ರಿಕೂಟ ಜಮ್ಮು ಕಾಶ್ಮೀರದಲ್ಲಿ ಜಯಗಳಿಸಲಿದೆ ಎಂದು ಭವಿಷ್ಯ ನುಡಿದಿದ್ದವು.

     

    ಒಟ್ಟು 90 ಕ್ಷೇತ್ರಗಳ ಪೈಕಿ ಎನ್‌ಸಿ 56, ಕಾಂಗ್ರೆಸ್‌ 38, ಸಿಪಿಎಂ 1 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಇಳಿಸಿದ್ದವು. ಬಿಜೆಪಿ 62 ಕ್ಷೇತ್ರಗಳಲ್ಲಿ ಪಿಡಿಪಿ 81 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.

    90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆದಿತ್ತು  2014 ರಲ್ಲಿ ನಡೆದ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಷನಲ್‌ ಕಾನ್ಫರೆನ್ಸ್‌ 15 ಸ್ಥಾನಗಳನ್ನು ಗೆದ್ದುಕೊಂಡಿತ್ತು.

  • J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

    J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

    – ಆರ್ಟಿಕಲ್‌ 370 ಮರುಸ್ಥಾಪಿಸುವ ಬಗ್ಗೆ ಕಾಂಗ್ರೆಸ್‌ – ಪಾಕ್‌ ಸರ್ಕಾರ ಒಂದೇ ಮನಸ್ಥಿತಿ ಹೊಂದಿದೆ ಎಂದ ಪಾಕ್‌ ಸಚಿವ

    ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌ (Khawaja Asif) ಹೇಳಿದ್ದಾರೆ.

    ಆರ್ಟಿಕಲ್‌ 370 ರದ್ದಾದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಜೆ&ಕೆ ನಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡಿದ್ದು, 61.3% ಮತದಾನವಾಗಿದೆ. ಈ ನಡುವೆ ಪಾಕ್‌ ರಕ್ಷಣಾ ಸಚಿವ ಮಾತನಾಡಿ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ (Congress And National Conference) ಮೈತ್ರಿ ಕೂಟ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಭವಿಷ್ಯ ನುಡಿದಿದ್ದಾರೆ.

    ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ 370 ಮತ್ತು 35ಎ ವಿಧಿ ಮರುಸ್ಥಾಪಿಸುವ ವಿಚಾರದಲ್ಲಿ ಶೆಹಬಾಜ್‌ ಷರೀಫ್‌ ಸರ್ಕಾರ ಮತ್ತು ಕಾಂಗ್ರೆಸ್‌ – ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ ಒಂದೇ ಅಭಿಪ್ರಾಯ ಹೊಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಜಿ ನೀಟ್ ಸೀಟು ರದ್ದತಿಗೆ ಅವಕಾಶ – ಸೆ.20ಕ್ಕೆ ಕೆಇಎಗೆ ಬರಲು ಅಭ್ಯರ್ಥಿಗಳಿಗೆ ಸೂಚನೆ

    ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ:
    ಇನ್ನೂ ಪಾಕ್‌ ಸಚಿವರ ಹೇಳಿಕೆ ಕುರಿತು ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ, ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ, ಕಾಶ್ಮೀರದ ಬಗ್ಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ನ ನಿಲುವನ್ನು ಅನುಮೋದಿಸುತ್ತದೆ. ಇಂತಹ ಹೇಳಿಕೆಗಳಿಂದ ರಾಹುಲ್ ಗಾಂಧಿ ಮತ್ತು ಅವರ ಕಾಂಗ್ರೆಸ್ ಪಕ್ಷ ಯಾವಾಗಲೂ ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾದವರ ಪರವಾಗಿಯೇ ಇರುತ್ತದೆ ಎಂಬಹುದನ್ನು ಸೂಚಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನುದ್ದೇಶಿಸಿ ಭಾಷಣ

    ಜಮ್ಮು-ಕಾಶ್ಮೀರದಲ್ಲಿ ಶೇ.61 ಮತದಾನ:
    ಜಮ್ಮು ಮತ್ತು ಕಾಶ್ಮೀರದ 7 ಜಿಲ್ಲೆಗಳ 24 ಕ್ಷೇತ್ರಗಳಲ್ಲಿ ಬುಧವಾರ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.61 ಕ್ಕಿಂತ ಹೆಚ್ಚು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ವರದಿ ಬರುವ ಹೊತ್ತಿಗೆ ಕೆಲವು ಕೇಂದ್ರಗಳ ಮತದಾನ ದತ್ತಾಂಶ ಸಂಗ್ರಹವಾಗಬೇಕಿರುವುದರಿಂದ ಅಂತಿಮ ಮತದಾನದ ಶೇಕಡಾವಾರು ಹೆಚ್ಚಾಗಬಹುದು ಮತ್ತು ಇದು ಅಂಚೆ ಮತಪತ್ರಗಳನ್ನು ಒಳಗೊಂಡಿಲ್ಲ ಎಂದು ಆಯೋಗ ಹೇಳಿದೆ. ಇದನ್ನೂ ಓದಿ: ನಕಲಿ ಇ-ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ 2.11 ಕೋಟಿ ಪಂಗನಾಮ – ಸಿಕ್ಕಿಬಿದ್ದ ಸೈಬರ್‌ ವಂಚಕ

    ಜಮ್ಮುವಿನ ಚೆನಾಬ್ ಕಣಿವೆ ಪ್ರದೇಶದಲ್ಲಿ ಕಿಶ್ತ್ವಾರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡಾ 80.14 ರಷ್ಟು ಮತದಾನವಾಗಿದೆ, ನಂತರ ದೋಡಾ (71.34 ಶೇಕಡಾ) ಮತ್ತು ರಂಬಾನ್ (70.55 ಶೇಕಡಾ) ಮತದಾನವಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ದಕ್ಷಿಣ ಕಾಶ್ಮೀರದಲ್ಲಿ, ಕುಲ್ಗಾಮ್ ಜಿಲ್ಲೆ 62.46 ಪ್ರತಿಶತದೊಂದಿಗೆ ಮತದಾನದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ನಂತರ ಅನಂತನಾಗ್ ಜಿಲ್ಲೆ (57.84 ಪ್ರತಿಶತ), ಶೋಪಿಯಾನ್ ಜಿಲ್ಲೆ (55.96 ಪ್ರತಿಶತ) ಮತ್ತು ಪುಲ್ವಾಮಾ ಜಿಲ್ಲೆ (ಶೇ 46.65) ಎಂದು ಇಸಿ ತಿಳಿಸಿದೆ. ಇದನ್ನೂ ಓದಿ: 2040ಕ್ಕೆ ಮಾನವ ಸಹಿತ ಚಂದ್ರಯಾನ – 2,104 ಕೋಟಿ ಅನುದಾನಕ್ಕೆ ಕೇಂದ್ರ ಅಸ್ತು

  • J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

    J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

    ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ (Jammu And Kashmir Assembly Poll) ಕಾಂಗ್ರೆಸ್‌ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಸೀಟು ಹಂಚಿಕೆಯ ಹಗ್ಗಜಗ್ಗಾಟ ಅಂತ್ಯಕಂಡಿದೆ. 90 ಸ್ಥಾನಗಳ ಪೈಕಿ 51 ಕ್ಷೇತ್ರಗಳಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ (National Conference) ಸ್ಪರ್ಧಿಸಲಿದ್ದು, ಕಾಂಗ್ರೆಸ್‌ 32 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಪಕ್ಷಗಳ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅಧಿಕೃತವಾಗಿ ಹೇಳಿದ್ದಾರೆ.

    ಸೀಟು ಹಂಚಿಕೆ ಒಪ್ಪಂದ ಪ್ರಕಟಿಸುವಾಗ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ (Congress) ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ, ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 5 ಸ್ಥಾನಗಳಲ್ಲಿ ಸೌಹಾರ್ದಯುತ ಮತ್ತು ಶಿಸ್ತಿನ ಸ್ಪರ್ಧೆ ಹೊಂದಿರುತ್ತದೆ ಎಂದು ಹೇಳಿದ್ದಾರೆ.

    ನ್ಯಾಶನಲ್ ಕಾನ್ಫರೆನ್ಸ್ 51 ಸ್ಥಾನಗಳಲ್ಲಿ, ಕಾಂಗ್ರೆಸ್ 32 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಪ್ಯಾಂಥರ್ಸ್ ಪಾರ್ಟಿಗೆ ತಲಾ 1 ಸ್ಥಾನ ನಿಯೋಜಿಸಿದೆ.

    ವಿಪಕ್ಷಗಳ ವಿರುದ್ಧ ವಾಗ್ದಾಳಿ:
    ಇನ್ನೂ ಸೀಟು ಹಂಚಿಕೆ ಘೋಷಣೆ ಬಳಿಕ ಕಾಂಗ್ರೆಸ್‌ & ಎನ್‌ಸಿ ನಾಯಕರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಒಟ್ಟಾಗಿ ಹೋರಾಡಲಿವೆ. ಅದಕ್ಕಾಗಿ ಈ ಅಭಿಯಾನವನ್ನು ಆರಂಭಿಸಿದ್ದೇವೆ. ಕೋಮುವಾದ ಬಯಸುವ ಶಕ್ತಿಗಳನ್ನು ಬಗ್ಗು ಬಡಿಯಲು ಈ ಒಕ್ಕೂಟ ರಚಿಸಿದ್ದೇವೆ ಎಂದು ಗುಡುಗಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಾಲ್, ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದ ಆತ್ಮವನ್ನೇ ನಾಶಮಾಡಲು ಪ್ರಯತ್ನಿಸುತ್ತಿದೆ. ಆದ್ರೆ ನಮ್ಮ ಸರ್ಕಾರ ಜನಸ್ನೇಹಿಯಾಗಿರಲಿದೆ. ಒಗ್ಗಟ್ಟಿನಿಂದ ಹೋರಾಡಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

    ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಇದಾಗಿದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸೆ.18, 25, ಹಾಗೂ ಅ.1 ರಂದು ಮೂರು ಹಂತಗಳಲ್ಲಿ ನಡೆಯಲಿದೆ ಮತ್ತು ಅ.4 ರಂದು ಮತ ಎಣಿಕೆ ನಡೆಯಲಿದೆ.

  • J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

    J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ (Jammu Kashmir Assembly Polls) ಹಿನ್ನೆಲೆ ನ್ಯಾಷನಲ್ ಕಾನ್ಫರೆನ್ಸ್ (NC) ಮತ್ತು ಕಾಂಗ್ರೆಸ್ (Congress) ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸಲು ತಾತ್ವಿಕವಾಗಿ ಒಪ್ಪಿಕೊಂಡಿವೆ. ಪ್ರಸ್ತುತ ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

    ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನಾಯಕರು ಶ್ರೀನಗರದಲ್ಲಿ ತಡರಾತ್ರಿ ಸಭೆ ನಡೆಸಿ ಮೈತ್ರಿಯ ವಿವರಗಳನ್ನು ಚರ್ಚಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲಿ 12 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ತನ್ನ ಇಚ್ಛೆಯನ್ನು ವ್ಯಕ್ತಪಡಿಸಿದೆ ಮತ್ತು ಜಮ್ಮು ವಿಭಾಗದಲ್ಲಿ ಎನ್‌ಸಿಗೆ 12 ಸ್ಥಾನಗಳನ್ನು ಬಿಟ್ಟುಕೊಡಲು ಪ್ರಸ್ತಾಪಿಸಿದೆ.  ಇದನ್ನೂ ಓದಿ: Valmiki Scam | ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್‌ ಆತ್ಮಹತ್ಯೆ

    ಆದರೆ ಸೀಟು ಹಂಚಿಕೆ ಕುರಿತು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಮೂಲಗಳ ಪ್ರಕಾರ, ಈ ಒಪ್ಪಂದವನ್ನು ಅಂತಿಮಗೊಳಿಸಲು ಇನ್ನೂ ಒಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆಗಳಿದೆ. ಮುಂದಿನ ಅಥವಾ ಎರಡು ದಿನಗಳಲ್ಲಿ ಎರಡೂ ಪಕ್ಷಗಳು ಒಮ್ಮತಕ್ಕೆ ಬರುವ ನಿರೀಕ್ಷೆಯಿದೆ. ಇದನ್ನೂ ಓದಿ: ಐವನ್ ಒಬ್ಬ ಮೆಂಟಲ್ ಗಿರಾಕಿ, ಅವನ ಹುಡುಗರೇ ಕಲ್ಲು ತೂರಿರಬಹುದು: ಭರತ್ ಶೆಟ್ಟಿ ಆಕ್ರೋಶ

    ಈ ಮೈತ್ರಿಯು ಅಂತಿಮಗೊಂಡರೆ ಮುಂಬರುವ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಾಜಕೀಯದಲ್ಲಿ ಗಮನಾರ್ಹವಾಗಿ ಪರಿಣಾಮ ಬೀರಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊನೆಯ ಬಾರಿಗೆ 2014ರಲ್ಲಿ ವಿಧಾನಸಭೆ ಚುನಾವಣೆ ನಡೆದಿದ್ದು, ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಮುಡಾ ಕೇಸ್‌ ಚುರುಕು ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ

  • ಸುದೀಪ್ Vs ದೇವಗನ್ – ಈಗ ಭಾರತದ ತುತ್ತ ತುದಿಯಿಂದ ಬಂತು ಪ್ರತಿಕ್ರಿಯೆ

    ಸುದೀಪ್ Vs ದೇವಗನ್ – ಈಗ ಭಾರತದ ತುತ್ತ ತುದಿಯಿಂದ ಬಂತು ಪ್ರತಿಕ್ರಿಯೆ

    ಶ್ರೀನಗರ: ಹಿಂದಿ ರಾಷ್ಟ್ರಭಾಷೆಯನ್ನಾಗಿ ಬಳಸುವುದರ ಕುರಿತು ಬಾಲಿವುಡ್ ನಟ ಅಜಯ್ ದೇವಗನ್ ಹಾಗೂ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ನಡುವೆ ಟ್ವೀಟ್ ವಾರ್ ನಡೆಯುತ್ತಿರುವ ಬೆನ್ನಲ್ಲೇ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಹಾಗೂ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ಪ್ರತಿಕ್ರಿಯಿಸಿದ್ದು, ಸುದೀಪ್ ಹೇಳಿಕೆಯನ್ನು ಬೆಂಬಲಿಸಿದ್ದಾರೆ.

    FotoJet

    ಈ ಕುರಿತು ಮಾತನಾಡಿರುವ ಅವರು, ಭಾಷೆಗಳಿಂದಲೇ ನಮ್ಮ ರಾಜ್ಯಗಳು ರೂಪುಗೊಂಡಿದ್ದು ಹಾಗಾಗಿ ಪ್ರಾದೇಶಿಕ ಭಾಷೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಸುದೀಪ್ ಹೇಳಿಕೆ ಸರಿಯಾಗಿದೆ, ಅದನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಐದೈದು ಸರಣಿಯಲ್ಲಿ ಅವತಾರ್ : 13 ವರ್ಷಗಳ ಬಳಿಕ ತೆರೆಗೆ ಬಂದ ಬಾಕ್ಸ್ ಆಫೀಸ್ ಕಿಂಗ್

    ರಾಷ್ಟ್ರಭಾಷೆಯನ್ನು ಹೊಂದಲು ಭಾರತ ವೈವಿಧ್ಯಮಯ ದೇಶವಾಗಿದೆ. ಭಾರತದ ಪರಿಕಲ್ಪನೆಯು ಪ್ರತಿಯೊಬ್ಬರಿಗೂ ಸ್ಥಳಾವಕಾಶ ನೀಡುತ್ತದೆ. ಭಾರತೀಯ ಕರೆನ್ಸಿ ನೋಟು ಎಲ್ಲ ಭಾಷೆಗಳಿಗೆ ಜಾಗ ನೀಡಿರುವುದು ನಾವು ಕೇವಲ ಒಂದು ಭಾಷೆ, ಸಂಸ್ಕೃತಿ ಮತ್ತು ಧರ್ಮಕ್ಕೆ ಸೀಮಿತವಲ್ಲ ಎಂಬುದು ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

    FotoJet

    ಇದೇ ವೇಳೆ ಮಸೀದಿಗಳಲ್ಲಿ ಲೌಡ್‌ಸ್ಪೀಕರ್ ನಿಷೇಧ ಕುರಿತು ಮಾತನಾಡಿರುವ ಅವರು, ರಾಜಕೀಯ ಲಾಭಕ್ಕಾಗಿ ಮತ್ತು ಧರ್ಮದ ವಿರುದ್ಧ ದ್ವೇಷ ಹರಡುವ ಉದ್ದೇಶದಿಂದ ಈ ದೇಶದಲ್ಲಿ ಮುಸ್ಲಿಮರನ್ನು ಮಾತ್ರ ಗುರಿ ಮಾಡಲಾಗುತ್ತಿದೆ. ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸಬೇಡಿ, ಹಲಾಲ್ ಮಾಂಸ ಮಾರಾಟ ಮಾಡಬೇಡಿ, ಹಿಜಬ್ ಧರಿಸಬೇಡಿ ಎಂದು ವಿವಾದ ಎಬ್ಬಿಸಲಾಗುತ್ತಿದೆ. ಭಾರತದಲ್ಲಿ ಕೇವಲ ಮುಸ್ಲಿಮರನ್ನೇ ಏಕೆ ಟಾರ್ಗೆಟ್ ಮಾಡಲಾಗುತ್ತಿದೆ? ಎಂದು ಪ್ರಶ್ನಿಸಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಇದನ್ನೂ ಓದಿ: ಅಜಯ್ ದೇವಗನ್ ವಿರುದ್ಧವೇ ನಿಂತ ಬಾಲಿವುಡ್ ಇಬ್ಬರೂ ಸ್ಟಾರ್ ನಟರು

    ಬಾರಾಮುಲ್ಲಾದ ಶಾಲೆಯೊಂದರಲ್ಲಿ ಹಿಜಾಬ್ ವಿವಾದ ತಲೆಎತ್ತಿದೆ. ಈಗ ಈ ಜನರು (ಬಿಜೆಪಿ) ಕರ್ನಾಟಕದಂತೆ ಜಮ್ಮು-ಕಾಶ್ಮೀರದಲ್ಲಿಯೂ ರಾಜಕೀಯ ಲಾಭಕ್ಕಾಗಿ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವುದಾಗಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.

    ಹಿಜಬ್ ಇಸ್ಲಾಂನ ಮೂಲಭೂತ ಹಕ್ಕು. ಇನ್ನೊಬ್ಬರ ಧಾರ್ಮಿಕ ವಿಚಾರದಲ್ಲಿ ಯಾರೂ ಕೂಡಾ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಒಂದು ವೇಳೆ ಇದು ದೇಶದಲ್ಲಿ ಕಾರ್ಯಗತಗೊಂಡಲ್ಲಿ, ಆಗ ನಮ್ಮ ನಿರ್ಧಾರವೂ ಕೂಡ ವಿಭಿನ್ನವಾಗಿರಲಿದೆ. ರಂಜಾನ್ ತಿಂಗಳಲ್ಲಿ ಅನಾವಶ್ಯಕವಾಗಿ ಪವರ್ ಕಟ್ ಮಾಡುವ ಮೂಲಕ ಉದ್ದೇಶಪೂರ್ವಕವಾಗಿ ಕಾಶ್ಮೀರದ ಜನರನ್ನು ಕೆರಳಿಸುತ್ತಿರುವುದಾಗಿ ಒಮರ್ ದೂರಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ

    ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಸ್ಲಿಮರ ಮನೆಗಳನ್ನು ಬುಲ್ಡೋಜರ್ ನಿಂದ ತೆರವುಗೊಳಿಸುತ್ತಿರುವ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಭಾರತವು ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಆದರೆ ಪ್ರಜಾಪ್ರಭುತ್ವವು ಕೇವಲ ಪದಗಳಲ್ಲಿ ಇರಬಾರದು ಅದು ಕಾರ್ಯದಲ್ಲಿಯೂ ಇರಬೇಕು. ಅಸಹಿಷ್ಣುತೆಯ ವಾತಾವರಣವನ್ನು ನಿಯಂತ್ರಿಸುವ ಈ ಕ್ರಮವು ಈ ದೇಶಕ್ಕೆ ಒಳ್ಳೆಯದಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ಗಾಂಧಿ ಹತ್ಯೆಗೈದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

    ಗಾಂಧಿ ಹತ್ಯೆಗೈದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಮಹಾತ್ಮ ಗಾಂಧೀಜಿ ಅವರನ್ನು ಕೊಲೆ ಮಾಡಿದವರು ದೆಹಲಿಯಲ್ಲಿ ಕುಳಿತು ಸರ್ಕಾರ ನಡೆಸುತ್ತಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ (ಎನ್‍ಸಿಪಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ನಡೆದಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿ ಅವರನ್ನು ಆರ್‌ಎಸ್‌ಎಸ್ ಬೆಂಬಲಿಗರು ಹತ್ಯೆ ಮಾಡಿದ್ದಾರೆ. ಆಗ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಾಭ್‍ಭಾಯಿ ಅವರು, ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡಿದ್ದರು. ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿದ್ದ ಆರ್‌ಎಸ್‌ಎಸ್ ಅನ್ನು ಅನೇಕ ನಾಯಕರು ಒಪ್ಪಿಕೊಳ್ಳಲಿಲ್ಲ ಎಂದು ಹೇಳಿದರು. ಇದನ್ನು ಓದಿ: ಗಾಂಧೀಜಿಯನ್ನು ಕೊಂದವರಿಂದ ನಮ್ಗೆ ಪಾಠ ಬೇಕಿಲ್ಲ: ಕೈ ಅಭ್ಯರ್ಥಿ ಬಿ.ವಿ.ನಾಯಕ್

    ಪ್ರಧಾನಿ ನರೇಂದ್ರ ಮೋದಿ ಅವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದು ಹೇಳಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು-ಕಾಶ್ಮೀರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅವರು ನಮಗೆ ಶಾಂತಿ, ನೆಮ್ಮದಿ ಕೊಟ್ಟಿದ್ದಾರಾ ಎಂದು ಸಮಾವೇಶದಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

    ಶ್ರೀನಗರ-ಜಮ್ಮು ಹೆದ್ದಾರಿ ಬಂದ್ ಮಾಡಿದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಫಾರುಕ್ ಅಬ್ದುಲ್ಲಾ ಅವರು, ಬಿಜೆಪಿ ಸರ್ಕಾರ ರಸ್ತೆಯನ್ನು ಬಂದ್ ಮಾಡಿತು. ಕಾರ್ಗಿಲ್ ಯುದ್ಧ ಯಾವಾಗ ನಡೆಯಿತು ಸಮಾವೇಶದಲ್ಲಿ ಸೇರಿದ್ದ ಜನರನ್ನು ಪ್ರಶ್ನಿಸಿದ ಅವರು, ಯುದ್ಧದ ಬಳಿಕ ರಸ್ತೆ ಸಂಚಾರ ಬಂದ್ ಆಗಲಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ರಸ್ತೆ ತಡೆಯಲಿಲ್ಲ. ಈಗ ಯಾವ ಯುದ್ಧ ನಡೆಯುತ್ತದೆ? ಯಾವುದೇ ಯುದ್ಧ ನಡೆಯದಿದ್ದರೂ ರಸ್ತೆ ಸಂಚಾರ ಯಾಕೆ ಕಡಿತಗೊಳಿಸಲಾಗಿದೆ? ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ದೂರಿದರು.