Tag: National Congress

  • ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್ – ನಾನು ಸಿಎಂ ಆಗ್ಬೋದು ಅಂದ ಪ್ರತಿಭಾ ಸಿಂಗ್

    ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ (Himachal Pradesh) ಒಟ್ಟು 68 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಈ ಬಾರಿ ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್‌ ಸಿದ್ಧವಾಗಿದೆ.

    ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನ ನಿರ್ಧರಿಸಲು ಇಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ವರಿಷ್ಠರ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ನಾಯಕಿ ಪ್ರತಿಭಾ ಸಿಂಗ್ ಮುಖ್ಯಮಂತ್ರಿಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆದ್ದಿದ್ಹೇಗೆ?

    ಸಭೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ (Sonia Gandhi) ಹಾಗೂ ಹೈಕಮಾಂಡ್ ಚುನಾವಣೆಗೂ (Election) ಮುನ್ನ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನನಗೆ ನೀಡಿದ್ದರು. ಆದ್ದರಿಂದ ನಾನು ಸಿಎಂ ಆಗಿ ಮುಂದುವರಿಯಬಹುದೆಂದು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ನಮೋ’ಗೆ ಜೈ ಎಂದ ಗುಜರಾತ್ ಜನ – ನೋಟಾ ಮತ ಶೇ.9ರಷ್ಟು ಇಳಿಕೆ

    ಜನರು ದಿ. ವೀರಭದ್ರ ಸಿಂಗ್ ಅವರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರಿಂದಲೇ ಕಾಂಗ್ರೆಸ್ 40 ಸ್ಥಾನಗಳನ್ನು ಗೆದ್ದಿದೆ. ಅಂತಹವರ ಕುಟುಂಬವನ್ನು ಕಡೆಗಣಿಸುವುದಿಲ್ಲ ಎಂದು ಹೇಳಿದ್ದಾರೆ.

    ಮಾಜಿ ಸಚಿವರೂ ಆದ ದಿ. ವೀರಭದ್ರ ಸಿಂಗ್ ಅವರು ದೀರ್ಘಕಾಲದ ವರೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರಾಗಿ ಉತ್ತಮ ಆಡಳಿತ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ಮಾಜಿ ನಾಯಕ ಜೈವೀರ್ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ನೇಮಕ

    ಕಾಂಗ್ರೆಸ್ ಮಾಜಿ ನಾಯಕ ಜೈವೀರ್ ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ನೇಮಕ

    ನವದೆಹಲಿ: ಕಾಂಗ್ರೆಸ್ (Congress) ನಿಂದ ಬಿಜೆಪಿಗೆ (BJP) ಪಕ್ಷಾಂತರ ಮಾಡಿರುವ ನಾಯಕರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆಗಳನ್ನ ನೀಡಲಾಗಿದೆ.

    3 ತಿಂಗಳ ಹಿಂದೆಯಷ್ಟೇ ರಾಷ್ಟ್ರೀಯ ಕಾಂಗ್ರೆಸ್‌ಗೆ (National Congress) ಗುಡ್‌ಬೈ ಹೇಳಿದ್ದ ಜೈವೀರ್ ಶೆರ್ಗಿಲ್ (Jaiveer Shergill) ಅವರನ್ನ ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದೆ. ಇದರೊಂದಿಗೆ ಪಂಜಾಬ್ (Punjab) ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ (Captain Amarinder Singh) ಹಾಗೂ ಮಾಜಿ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಅವರಿಗೆ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯತ್ವ ನೀಡಲಾಗಿದೆ.

    ಜೊತೆಗೆ ಪಕ್ಷವು ಸ್ವತಂತ್ರ ದೇವ್ ಸಿಂಗ್, ಮದನ್ ಕೌಶಿಕ್, ರಾಣಾ ಗುರ್ಮಿತ್ ಸಿಂಗ್ ಸೋಧಿ, ಮನೋರಂಜನ್ ಕಾಲಿಯಾ ಅವರನ್ನ ಗುಂಪಿನಲ್ಲಿ ಸೇರಿಸಿದೆ. ಇದನ್ನೂ ಓದಿ: ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ಜೈವೀರ್ ಶೆರ್ಗಿಲ್ ರಾಜೀನಾಮೆ

    ಕಳೆದ ಆಗಸ್ಟ್ 24 ರಂದು ಜೈವೀರ್ ಶೆರ್ಗಿಲ್ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಕುರಿತು ಸೋನಿಯಾಗಾಂಧಿ ಅವರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: ಕಾಂಗ್ರೆಸ್ ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ – ಆರ್.ಅಶೋಕ್

    ಪತ್ರದಲ್ಲಿ, ಉನ್ನತ ನಾಯಕರು ತಮ್ಮ ಸಿದ್ಧಾಂತಕ್ಕಾಗಿ ಹೋರಾಡುವುದಕ್ಕಿಂತ ವಿದೇಶ ಪ್ರವಾಸದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಪಕ್ಷಕ್ಕಾಗಿ ನಾವು ಕೆಲಸ ಮಾಡಲು ಸಾಧ್ಯವಿಲ್ಲ. ಅಲ್ಲದೆ ಪಕ್ಷದ ನಿರ್ಧಾರವು ಸ್ವಯಂ ಸೇವಾ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ಇದು ನನಗೆ ತುಂಬಾ ನೋವುಂಟು ಮಾಡಿದೆ ಎಂದು ಹೇಳಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ – ಡಿಕೆಶಿ

    ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ – ಡಿಕೆಶಿ

    ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್‌ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೋ (Bharath Jodo Yatra) ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮಹಾ ನಾಯಕಿಯರಾದ ಸೋನಿಯಾ ಗಾಂಧಿ (Sonia Gandhi) ಹಾಗೂ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

    ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ (DK Shivakumar), ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆಯಲ್ಲಿ ಎಐಸಿಸಿ (AICC) ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ. ಅವರು ಭಾಗವಹಿಸಲಿರುವ ದಿನಾಂಕ ಶೀಘ್ರದಲ್ಲೇ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ನೆಪ ಹೇಳೋ ಬದಲು PFIಯನ್ನು ನಿಷೇಧಿಸಲಿ: ದಿನೇಶ್ ಗುಂಡೂರಾವ್

    ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ (KC Venugopal) ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರು ಭಾರತ ಜೋಡೋ ಯಾತ್ರೆಯ ಸಿದ್ಧತೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಈ ಯಾತ್ರೆ ಪ್ರಮುಖ 5 ವಿಚಾರಗಳನ್ನು ಒಳಗೊಂಡಿದೆ. ಈ ಯಾತ್ರೆಯಲ್ಲಿ ಎಲ್ಲಾ ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಹೇಗಿರಲಿದೆ ರೂಪುರೇಷೆ?
    ರಾಜ್ಯದಲ್ಲಿ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಭಾರತ ಐಕ್ಯತಾ ಯಾತ್ರೆ ಆರಂಭವಾಗಲಿದೆ. ಅ.2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಂತರ ದಸರಾ (Mysuru Dasara) ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು. ಆಮೇಲೆ ಬಳ್ಳಾರಿಯಲ್ಲಿ (Bellary) ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಫಿಸಿಕಲ್ ಟ್ರೈನರ್‌ಗೆ ಉಂಗುರ ತೊಡಿಸಿ ಎಂಗೇಜ್ಡ್ ಆದ ಆಮೀರ್ ಖಾನ್ ಪುತ್ರಿ

    ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದ ದಿನ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    ನಾಗರಿಕ ಸಮಾಜದ ಗಣ್ಯರು, ಕಲಾವಿದರು, ಕೈಗಾರಿಕೋದ್ಯಮಿಗಳು, ಚಿಂತಕರು ಸೇರಿದಂತೆ ಪ್ರಮುಖರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಯಾತ್ರೆ ಮಾರ್ಗದಲ್ಲಿ ಬರುವ ಅತಿ ದೊಡ್ಡ ನಗರ ಮೈಸೂರು ಆಗಿದ್ದು, ಮೈಸೂರು ಜನರು ಬೆಳಗ್ಗೆ 7 ಗಂಟೆಗೆ ರಾಹುಲ್ ಗಾಂಧಿ ಜತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

    ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ (Congress Presidential Election) ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ರಾಹುಲ್ ಗಾಂಧಿಯವರು ಪಕ್ಷದ ಮುಂದಾಳತ್ವ ವಹಿಸಬೇಕು ಎಂದು ನಮ್ಮ ರಾಜ್ಯದ ಎಲ್ಲಾ ನಾಯಕರ ಒತ್ತಾಸೆಯಾಗಿದೆ. ಆದರೆ ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

    ಗಾಂಧಿ ಕುಟುಂಬದ ಯಾರೊಬ್ಬರೂ AICC ಅಧ್ಯಕ್ಷರಾಗಬಾರದೆಂದು ರಾಹುಲ್ ನಿರ್ಧರಿಸಿದ್ದಾರೆ – ಅಶೋಕ್ ಗೆಹ್ಲೋಟ್

    ನವದೆಹಲಿ/ತಿರುವನಂತಪುರಂ: ಗಾಂಧಿ ಕುಟುಂಬದ (Gandhi Family) ಯಾರೊಬ್ಬರೋ ಕಾಂಗ್ರೆಸ್ (Congress) ಮುಖ್ಯಸ್ಥರಾಗಬಾರದೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪಷ್ಟಪಡಿರುವುದಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ತಿಳಿಸಿದ್ದಾರೆ.

    ಭಾರತ್ ಜೋಡೋ ಯಾತ್ರೆ (Bharat Jodo Yatra) ಯಲ್ಲಿ ಪಾಲ್ಗೊಂಡಿರುವ ಸಿಎಂ (Rajasthan Chief Minister), ಕೇರಳದಲ್ಲಿ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಎಲ್ಲರ ಆಶಯದಂತೆ ಕಾಂಗ್ರೆಸ್ (Congress) ಅಧ್ಯಕ್ಷರಾಗಿ ಮರಳಲು ಸಾಕಷ್ಟು ಬಾರಿ ಅವರಲ್ಲಿ ವಿನಂತಿಸಿದೆ. ಆದರೆ ರಾಹುಲ್ ಜೀ ಅವರು, ನಾನು ಎಲ್ಲರ ಆಶಯವನ್ನು ಗೌರವಿಸುತ್ತೇನೆ. ಆದರೆ ಒಂದೇ ಒಂದು ಕಾರಣಕ್ಕಾಗಿ ಗಾಂಧಿ ಕುಟುಂಬೇತರರು ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂದು ನಿರ್ಧರಿಸಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

    ಬಿಜೆಪಿಯ (BJP) ಸ್ವಜನ ಪಕ್ಷಪಾತದ ಆರೋಪವೇ ರಾಹುಲ್ ಗಾಂಧಿ ಈ ನಿರ್ಧಾರಕ್ಕೆ ಕಾರಣ ಎಂದು ಪ್ರಶ್ನಿಸಿದ ಮಾಧ್ಯಮಗಳಿಗೆ ಉತ್ತರಿಸಿದ ಅವರು, 2019 ರಲ್ಲಿ ಯಾವುದೇ ಹುದ್ದೆಗಳಿಲ್ಲದೇ ಕೆಲಸ ಮಾಡುವುದಾಗಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ತಿಳಿಸಿದ್ದರು. ಅದರಂತೆ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ

    ಈ ಹಿಂದೆ ಉದಯಪುರದಲ್ಲಿ ನಡೆದಿದ್ದ ಕಾಂಗ್ರೆಸ್‌ನ ಚಿಂತನಾ ಶಿಬಿರದಲ್ಲಿ `ಒಬ್ಬ ವ್ಯಕ್ತಿ – ಒಂದು ಹುದ್ದೆ’ ನಿಯಮವನ್ನೂ ಅಳವಡಿಸಿಕೊಂಡಿದೆ. ಇದನ್ನೂ ಓದಿ: ಬೆಂಗಳೂರು ಬಳಿಕ ಈಗ ಜಿಲ್ಲೆಗಳಿಗೂ ನುಗ್ಗಿದ ಬುಲ್ಡೋಜರ್‌ – ವಿಜಯನಗರದಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ನೋಟಿಸ್‌

    ಅಶೋಕ್ ಗೆಹ್ಲೋಟ್ ಸಹ ನಿನ್ನೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸೋಮವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

    ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ (Congress Presidential Election) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಸೆಪ್ಟೆಂಬರ್ 24 ರಿಂದ 30 ರವರೆಗೆ ನಡೆಯಲಿದೆ. ಅಕ್ಟೋಬರ್ 1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನಾಂಕವಾಗಿದೆ. ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಲ್ಲಿ, ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ. ಅಕ್ಟೋಬರ್ 19 ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ರಾಹುಲ್ ಗಾಂಧಿಯೇ ಮುಂದಿನ ಕಾಂಗ್ರೆಸ್ ಅಧ್ಯಕ್ಷ – TNCC ಸಭೆ ನಿರ್ಣಯ

    ರಾಹುಲ್ ಗಾಂಧಿಯೇ ಮುಂದಿನ ಕಾಂಗ್ರೆಸ್ ಅಧ್ಯಕ್ಷ – TNCC ಸಭೆ ನಿರ್ಣಯ

    ಚೆನ್ನೈ: ರಾಜಸ್ಥಾನ, (Rajasthana) ಛತ್ತಿಸ್‌ಗಢದ ನಂತರ ತಮಿಳುನಾಡು (Tamilnadu) ಮತ್ತು ಬಿಹಾರದ ಕಾಂಗ್ರೆಸ್ ಘಟಕಗಳು ರಾಹುಲ್ ಗಾಂಧಿ (Rahul Gandhi) ಅವರೇ ರಾಷ್ಟ್ರೀಯ ಕಾಂಗ್ರೆಸ್ (National Congress) ಅಧ್ಯಕ್ಷರಾಗಬೇಕು ಎಂದು ನಿರ್ಣಯ ತೆಗೆದುಕೊಂಡಿವೆ.

    ಸೆಪ್ಟೆಂಬರ್ 22ರಂದು ಕಾಂಗ್ರೆಸ್ ಅಧ್ಯಕ್ಷರ (Congress President) ಚುನಾವಣೆಗೆ (Election) ಅಧಿಸೂಚನೆ ಹೊರಬೀಳಲಿದ್ದು, ಇಂದು ನಡೆದ ಟಿಎನ್‌ಸಿಸಿ (ತಮಿಳುನಾಡು ರಾಜ್ಯ ಕಾಂಗ್ರೆಸ್ ಸಮಿತಿ) ನಡೆದ ಸಾಮಾನ್ಯ ಕೌನ್ಸಿಲ್ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಆರ್ಥಿಕ ಇಲಾಖೆಯೇ ಎಲ್ಲಾ ಮಾಡಬೇಕಾದ್ರೆ ಸಚಿವರು ಯಾಕೆ ಬೇಕು? ಆಯನೂರು ಮಂಜುನಾಥ್ ಆಕ್ರೋಶ

    ಕಾಂಗ್ರೆಸ್ ಅಧ್ಯಕ್ಷ (AICC President) ಸ್ಥಾನಕ್ಕೆ ಸೆಪ್ಟೆಂಬರ್ 24 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಸೆ.30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 8ರ ವರೆಗೂ ನಾಮಪತ್ರ ಹಿಂಪಡೆಯಲು ಅವಕಾಶವಿರಲಿದೆ. ಅ.17 ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದ್ದು ಅ.19 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್ – ವಾಶ್ ರೂಂ ಅಂದ್ರೆನೇ ಬೆಚ್ಚಿ ಬೀಳ್ತಿದ್ದಾರೆ ವಿದ್ಯಾರ್ಥಿನಿಯರು

    ಇಂದು ನಡೆದ ರಾಜ್ಯ ಕಾಂಗ್ರೆಸ್ ಪ್ರತಿನಿಧಿಗಳ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಹಾಗೂ ಎಐಸಿಸಿ ಅಧ್ಯಕ್ಷರು ಎಐಸಿಸಿ ಪ್ರತಿನಿಧಿ, ಪಿಸಿಸಿ ಅಧ್ಯಕ್ಷರು, ಖಜಾಂಚಿ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ರಚಿಸಲು ಅಧಿಕಾರ ಹೊಂದಿರುತ್ತಾರೆ ಎಂದು ಛತ್ತಿಸ್‌ಗಢ ಘಟಕ ನಿರ್ಣಯ ತೆಗೆದುಕೊಂಡ ಬಳಿಕ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ನಾನು ಕಾಂಗ್ರೆಸ್ ಅಧ್ಯಕ್ಷನಾಗಬೇಕೇ – ಇಲ್ಲವೇ ಎಂಬುದು ಅಧ್ಯಕ್ಷ ಸ್ಥಾನದ ಚುನಾವಣೆ ನಡೆದಾಗ ಸ್ಪಷ್ಟವಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಾನು ಸುಸ್ತಾಗಿದ್ದೇನೆ, ಜ್ವರ 100 ಡಿಗ್ರಿಗೆ ಬಂದಿದೆ – 11 ದಿನದಿಂದ ಮನೆಗೇ ಹೋಗಿಲ್ಲ ಅಂದ ಡಿಕೆಶಿ

    ನಾನು ಸುಸ್ತಾಗಿದ್ದೇನೆ, ಜ್ವರ 100 ಡಿಗ್ರಿಗೆ ಬಂದಿದೆ – 11 ದಿನದಿಂದ ಮನೆಗೇ ಹೋಗಿಲ್ಲ ಅಂದ ಡಿಕೆಶಿ

    ಮೈಸೂರು: ನಾನು ಮನೆ ಬಿಟ್ಟು 11 ದಿನ ಆಯ್ತು. ಈಗ ಸ್ವಲ್ಪ ಸುಸ್ತಾಗಿದ್ದೇನೆ. ಜ್ವರ (Fever) 100 ಡಿಗ್ರಿಗೆ ಬಂದಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ಮೈಸೂರಿನಲ್ಲಿಂದು (Mysuru) ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಸ್ವಲ್ಪ ಸುಸ್ತಾಗಿದ್ದೇನೆ. ಡಾಕ್ಟರ್ (Doctor) ಬಂದು ಚೆಕ್ ಮಾಡಿದ್ರು. ಜ್ವರ 100 ಡಿಗ್ರಿಗೆ ಬಂದಿದೆ. 11 ದಿನವಾಯ್ತು ನಾನು ಮನೆ ಬಿಟ್ಟು. ಸಿದ್ದರಾಮಯ್ಯ (Siddaramaiah) ಅವರು ಸದನದಲ್ಲಿ ಇದ್ದ ಕಾರಣ ನಾನೇ ಎಲ್ಲಾ ಕಡೆ ಓಡಾಡುತ್ತಿದ್ದೆನೆ ಎಂದು ತಿಳಿಸಿದ್ದಾರೆ.

    ಕರ್ನಾಟಕ (Karnataka) ಭ್ರಷ್ಟಾಚಾರ ರಾಜಧಾನಿಯಾಗಿದೆ. ಗಾಂಧಿ (Gandhi Family) ಕುಟುಂಬಕ್ಕೆ ಕೇಂದ್ರ ಸರ್ಕಾರ (Central Government) ಬಹಳ ಕಿರುಕುಳ ನೀಡುತ್ತಿದೆ. ಕಿರುಕುಳ ಕೊಟ್ಟರೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ (Rahul Gandhi) ಅದಕ್ಕೆ ಹೆದರಲ್ಲ. `ಡಿಕೆ ನಾನು ಜೈಲಿಗೆ ಹೋಗಲು ರೆಡಿಯಾಗಿದ್ದೇನೆ? ಹೇಗಿತ್ತು ನಿನಗೆ ಜೈಲಿನ ಅನುಭವ ಹೇಳು? ನನ್ನ ಇಡೀ ಕುಟುಂಬ ತ್ಯಾಗದ ಕುಟುಂಬ ನನ್ನದೇನಿದೆ? ಇವರಿಗೆ ಹೆದರಲ್ಲ ನಾನು ಅಂತಾ ರಾಹುಲ್ ಗಾಂಧಿ ನನಗೆ ಹೇಳಿದರು. ಎಂದು ರಾಹುಲ್‌ಗಾಂಧಿ ಅವರೊಂದಿಗಿನ ಸಂಭಾಷಣೆಯನ್ನು ಬಿಚ್ಚಿಟ್ಟಿದ್ದಾರೆ.

    ಮೈಸೂರಿಗೆ ಬರ್ತಾರೆ ಮಹಾ ನಾಯಕಿ: ಮೈಸೂರು ಭಾಗಕ್ಕೆ ಯಾವತ್ತೂ ಬಾರದ ದೊಡ್ಡ ಮಹಿಳಾ ನಾಯಕಿ ಬರುತ್ತಾರೆ. ಆವತ್ತು ಕಾಂಗ್ರೆಸ್ ಮಹಿಳೆಯರ ಶಕ್ತಿ ಪ್ರದರ್ಶನ ಮಾಡಬೇಕು. ಈ ಭಾಗಕ್ಕೆ ಬರ್ತಿರೋ ನಾಯಕಿ ಯಾರು ಅಂತಾ ನಾನು ಈಗ ಹೇಳಲ್ಲ. ಆ ನಾಯಕಿ ಬಂದ ದಿನ ದೊಡ್ಡ ಶಕ್ತಿ ಪ್ರದರ್ಶನ ಮಾಡಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಟಿಕೆಟ್ ಫೈನಲ್ ಮಾಡುತ್ತೆ- ಡಿಕೆ ವಿರುದ್ಧ ಮುಗಿಬಿದ್ದ ಸಿದ್ದು ಬಣ

    ಎಲ್ಲದಕ್ಕೂ ಲೆಕ್ಕ ಇಡುತ್ತೇನೆ: ಮೈಸೂರು ಜಿಲ್ಲೆಯ ಶಾಸಕರು, ಮಾಜಿ ಶಾಸಕರು ತಲಾ 15 ಸಾವಿರ ಜನರನ್ನ ಕರೆದುಕೊಂಡು ಬರಬೇಕು. ಸಿದ್ದರಾಮಯ್ಯ ಅವರು 5 ಸಾವಿರ ಜನ ಹೇಳಿದ್ದು ದೂರದ ಪ್ರದೇಶದ ಶಾಸಕರಿಗೆ ಮಾತ್ರ. ಮೈಸೂರು ಭಾಗದ ಶಾಸಕರು, ಮಾಜಿ ಶಾಸಕರು 15 ಸಾವಿರ ಜನ ಕರೆದುಕೊಂಡು ಬರಲೇಬೇಕು. ನೀವೇ ಟೀ ಶರ್ಟ್ ಮಾಡಿಸಿ. ಅದರಲ್ಲಿ ನನ್ನ ಫೋಟೋ, ಸಿದ್ದರಾಮಯ್ಯ ಅವರ ಫೋಟೋ ಬೇಡ. ನಿಮ್ಮ ಫೋಟೋ, ರಾಹುಲ್ ಗಾಂಧಿ ಫೋಟೋ ಹಾಕಿಸಿಕೊಳ್ಳಿ ಸಾಕು. ಕೆಲಸ ಮಾಡದೇ ಇದ್ದರೆ ಅಂಥವರ ಜಾಗಕ್ಕೆ ಬೇರೆಯವರನ್ನ ಸಿದ್ದ ಮಾಡಿ. ಯಾರು ಎಷ್ಟು ಜನ ಕರೆದು ಕೊಂಡು ಬಂದರು ಅನ್ನೋ ಲೆಕ್ಕವನ್ನು ಸರಿಯಾಗಿ ಮಾಡಿಸುತ್ತೇನೆ, ಎಲ್ಲದಕ್ಕೂ ಲೆಕ್ಕ ಇಡುತ್ತೇನೆ ಎಂದು ಡಿಕೆಶಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 8 ಚೀತಾಗಳು ಬಂದವು , ಆದ್ರೆ 16 ಕೋಟಿ ಉದ್ಯೋಗ ಬರಲಿಲ್ಲ – ರಾಹುಲ್‌ ಗಾಂಧಿ ಟೀಕೆ

    8 ಚೀತಾಗಳು ಬಂದವು , ಆದ್ರೆ 16 ಕೋಟಿ ಉದ್ಯೋಗ ಬರಲಿಲ್ಲ – ರಾಹುಲ್‌ ಗಾಂಧಿ ಟೀಕೆ

    ನವದೆಹಲಿ: ಚೀತಾ ಮರು ಪರಿಚಯ ಯೋಜನೆಯಡಿ ನಮೀಬಿಯಯಾದಿಂದ ಭಾರತಕ್ಕೆ 8 ಚೀತಾಗಳನ್ನು ತರಿಸಿಕೊಳ್ಳಲಾಗಿದೆ.

    ಇವುಗಳನ್ನು ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಕುನೋ-ಪಾಲ್ಪುರ್ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ- 25ಕ್ಕೂ ಹೆಚ್ಚು ಮಕ್ಕಳಿಗೆ ಚಿನ್ನದ ಉಂಗುರ ಉಡುಗೊರೆ ನೀಡಿದ ಮುಸ್ಲಿಂ ಮುಖಂಡ

    ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘8 ಚೀತಾಗಳು ಬಂದವು. ಈಗ ಹೇಳಿ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ಏಕೆ ಬಂದಿಲ್ಲ?’ ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ‘ರಾಷ್ಟ್ರೀಯ ಬೆರೋಜ್‌ಗರ್ ದಿವಾಸ್’ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಹೋಗಿಬರುತ್ತಿದ್ದ ಬಸ್ ಅಪಘಾತ – 20 ಮಹಿಳೆಯರಿಗೆ ಗಾಯ

    ಕೇಂದ್ರ ಸರ್ಕಾರದ ಚೀತಾ ಯೋಜನೆಯು ರಾಷ್ಟ್ರೀಯ ಸಮಸ್ಯೆಗಳು ಮತ್ತು ಕಾಂಗ್ರೆಸ್‌ ನಡೆಸುತ್ತಿರುವ ‘ಭಾರತ್ ಜೋಡೊ ಯಾತ್ರೆ’ ಕಡೆಗಿನ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂವಹನಗಳ ಉಸ್ತುವಾರಿ ಜೈರಾಮ್ ರಮೇಶ್ ಟೀಕಿಸಿದ್ದರು.

    ಪ್ರಧಾನಿಯವರ ಜನ್ಮದಿನವನ್ನು ಯುವಜನರು ʻರಾಷ್ಟ್ರೀಯ ನಿರುದ್ಯೋಗ ದಿನʼವನ್ನಾಗಿ ಆಚರಿಸುತ್ತಿದ್ದಾರೆ. ವಾರ್ಷಿಕವಾಗಿ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ನರೇಂದ್ರ ಮೋದಿ 8 ವರ್ಷಗಳಾದರೂ ಕೇವಲ 7 ಲಕ್ಷ ಉದ್ಯೋಗ ಮಾತ್ರ ಸೃಷ್ಟಿ ಮಾಡಿದ್ದಾರೆ. 22 ಕೋಟಿ ಜನರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಉದ್ಯೋಗ ಸೃಷ್ಟಿಗೆ ಏನು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ

    8 ವರ್ಷದಲ್ಲಿ ಭಾರತ ದುರ್ಬಲವಾಗಿದೆ, ವಸ್ತುಗಳ ಬೆಲೆ ಭಾರೀ ಏರಿಕೆಯಾಗಿದೆ: ರಾಹುಲ್ ಕಿಡಿ

    ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ದ್ವೇಷ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದ್ವೇಷವನ್ನು ಹರಡುತ್ತಾ ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದೆ. 8 ವರ್ಷಗಳಲ್ಲಿ ಭಾರತವನ್ನು ದುರ್ಬಲಗೊಳಿಸಿದ್ದು, ಪಾಕಿಸ್ತಾನ ಮತ್ತು ಚೀನಾ ಇದರ ಲಾಭ ಪಡೆದುಕೊಳ್ಳುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ರಾಹುಲ್ ಗಾಂಧಿ ಅವರು ಬೆಲೆ ಏರಿಕೆ ವಿರೋಧಿಸಿ ದೇಶದಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಮಾತನಾಡಿದರು. ಇದನ್ನೂ ಓದಿ: ಸುಳಿವು ಕೊಟ್ಟು ಆ ಪದ ನಾನು ಹೇಳಲ್ಲ – ನಾಚಿ ನೀರಾದ ದ್ರಾವಿಡ್, ಬಿದ್ದುಬಿದ್ದು ನಕ್ಕ ಪತ್ರಕರ್ತರು

    ದೇಶದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದ್ವೇಷ ಬೆಳೆಯುತ್ತಿದೆ. ಹಣದುಬ್ಬರ, ನಿರುದ್ಯೋಗ ಸಮಸ್ಯೆ ಬೆಲೆ ಏರಿಕೆ ಮೊದಲಾದ ಸಮಸ್ಯೆಗಳು ಜನರನ್ನು ದ್ವೇಷದ ಕಡೆ ತಿರುಗುವಂತೆ ಮಾಡುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಎರಡೂ ಸೇರಿ ದೇಶವನ್ನು ವಿಭಜನೆ ಮಾಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

    ದೇಶದಲ್ಲಿ ಭಯ ಮತ್ತು ದ್ವೇಷದಿಂದ ಇಬ್ಬರು ಕೈಗಾರಿಕೋದ್ಯಮಿಗಳಿಗೆ ಲಾಭವಾಗುತ್ತಿದೆ. ವಿಮಾನ ನಿಲ್ದಾಣ, ಬಂದರು ಇದೆಲ್ಲದರ ಪ್ರಯೋಜನವನ್ನೂ ಅವರೇ ಪಡೆಯುತ್ತಿದ್ದಾರೆ. ಅವರಿಗೆ ಅನುಕೂಲ ಮಾಡಿಕೊಡಲು ಬಿಜೆಪಿ ಕೆಲಸ ಮಾಡುತ್ತಿದೆ. ನಮ್ಮ ಸಿದ್ಧಾಂತ ದೇಶದ ಪ್ರಗತಿಯಿಂದ ಪ್ರತಿಯೊಬ್ಬರು ಪ್ರಯೋಜನ ಪಡೆಯಬೇಕು ಎಂದು ಹೇಳಿದರೆ, ಪ್ರಧಾನಿ ಅವರ ವಿಚಾರ ಧಾರೆ ಉದ್ಯಮಿಗಳು ಮಾತ್ರ ಪ್ರಯೋಜನ ಪಡೆಯಬೇಕು ಎಂದು ಹೇಳುತ್ತದೆ. ಇದರಿಂದಾಗಿಯೇ ಮೋದಿ ಸರ್ಕಾರ ಜನರಿಗೆ ಉದ್ಯೋಗ ನೀಡಲು ಸಾಧ್ಯವಾಗುತ್ತಿಲ್ಲ. ದಿನದ 24 ಗಂಟೆಯು ಉದ್ಯಮಿಗಳಿಗಾಗಿಯೇ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಮಾಧ್ಯಮ, ನ್ಯಾಯಾಂಗ, ಚುನಾವಣಾ ಆಯೋಗದಂತಹ ಸಂಸ್ಥೆಗಳ ಮೇಲೆ ಈಗಲೂ ಒತ್ತಡವಿದೆ. ಅಲ್ಲದೇ ದೇಶದಲ್ಲಿ ಈಗ ಕಾಣುತ್ತಿರುವ ಬೆಲೆ ಏರಿಕೆ ಹಿಂದೆಂದೂ ನೋಡಿರಲಿಲ್ಲ. ಜನರು ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಧ್ವನಿ ಎತ್ತಲು ಮುಂದಾದರೆ, ಮೋದಿ ಸರ್ಕಾರ ಅದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: BPL ಕಾರ್ಡ್‌ ಹೊಂದಿರುವ ಎಸ್‌ಸಿ, ಎಸ್‌ಟಿಗಳಿಗೆ ಗೃಹ ಬಳಕೆಗೆ 75 ಯುನಿಟ್‌ ಉಚಿತ ವಿದ್ಯುತ್ – ಆದೇಶ ಹಿಂಪಡೆದ ಸರ್ಕಾರ

    ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಕೇಂದ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ಶೋಧ ಕಾರ್ಯಾಚರಣೆಗಳ ಬಗ್ಗೆಯೂ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾರು ಮಾತನಾಡುತ್ತಾರೋ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಇತ್ತೀಚೆಗೆ ನನ್ನನ್ನು 55 ಗಂಟೆ ಕಾಲ ಇ.ಡಿ ಕಚೇರಿಯಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗಿತ್ತು. ಆದರೆ ನಾನು ನಿಮ್ಮ ಇಡಿಗೆ ಹೆದರುವುದಿಲ್ಲ ಎಂದು ಪ್ರಧಾನಿ ಅವರಿಗೆ ಹೇಳಲು ಬಯಸುತ್ತೇನೆ. ಬೇಕಿದ್ದರೆ ನೂರು ವರ್ಷಗಳವರೆಗೂ ಪ್ರಶ್ನೆಗಳನ್ನು ಕೇಳಲಿ ನಾನು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು- ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ

    ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು- ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ

    ನವದೆಹಲಿ: ಇಂದು ದೆಹಲಿಯ ಕೆಂಪುಕೋಟೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಬಳಿಕ ಪ್ರಧಾನಿ ನರೇಂದ್ರ ಮೋದಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸ್ವಾತಂತ್ರ್ಯೋತ್ಸವವನ್ನುದ್ದೇಶಿಸಿ ಮಾತನಾಡಿದರು.

    ಇದೇ ವೇಳೆ ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು, ಕೇಂದ್ರ ಸರ್ಕಾರ ತನ್ನ ರಾಜಕೀಯ ಪ್ರಚಾರವನ್ನು ಹೆಚ್ಚಿಸಲು ಕಾಂಗ್ರೆಸ್ ನಾಯಕರನ್ನ ಗುರಿಯಾಗಿಸಿದೆ. ನೆಹರು ಅವರನ್ನ ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಪೊಲೀಸರ ವಶಕ್ಕೆ

    ಇಲ್ಲಿ ಸತ್ಯವೆಂದರೆ ಸಾವರ್ಕರ್ ಎರಡು ರಾಷ್ಟ್ರದ ಸಿದ್ಧಾಂತಗಳನ್ನು ಹುಟ್ಟುಹಾಕಿದರು. ಮೊಹಮದ್ ಅಲಿ ಜಿನ್ನಾ ಅದನ್ನು ಪೂರ್ಣಗೊಳಿಸಿದರು. ಅಂದು ನಾವು ದೇಶ ವಿಭಜನೆಯನ್ನು ಒಪ್ಪಿಕೊಳ್ಳದೇ ಇದ್ದಿದ್ದರೆ ಭಾರತವು ಹಲವಾರು ಭಾಗಗಳಾಗಿ ಛಿದ್ರವಾಗುತ್ತಿತ್ತು ಎಂದು ಸರ್ದಾರ್ ಪಟೇಲ್ ಅವರ ಹೇಳಿಕೆಯನ್ನು ಸೋನಿಯಾ ಗಾಂಧಿ ಪುನರುಚ್ಚರಿಸಿದ್ದಾರೆ.

    ಸ್ವಾತಂತ್ರ‍್ಯ ಹೋರಾಟದ ಸಂದರ್ಭದಲ್ಲಿ ಭಾರತೀಯ ಸೇನೆಗಳು ಮಾಡಿದ ತ್ಯಾಗವನ್ನು ಸಂಕುಚಿತಗೊಳಿಸಲಾಗಿದೆ. ಐತಿಹಾಸಿಕ ಸತ್ಯಗಳನ್ನು ಸುಳ್ಳು ಮಾಡಲು ಗಾಂಧಿ, ನೆಹರು, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಬಾಯ್ ಪಟೇಲ್ ಅವರಂತಹ ದಕ್ಷ ನಾಯಕರನ್ನು ಕಡೆಗಣಿಸಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: Bigg Boss-ಕಿಚ್ಚ ಸುದೀಪ್ ಅವರನ್ನು ಕ್ಷಮೆ ಕೇಳಿದ ಸೋನು ಶ್ರೀನಿವಾಸ್ ಗೌಡ

    Sonia and Modi

    76ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕೆ ಶುಭ ಹಾರೈಸಿದ ಸೋನಿಯಾ ಗಾಂಧಿ, ಕಳೆದ 75 ವರ್ಷಗಳಲ್ಲಿ, ಹೆಚ್ಚು ಪ್ರತಿಭಾವಂತ ಭಾರತೀಯರು ವಿಜ್ಞಾನ, ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶವನ್ನು ಪ್ರಗತಿಯ ಹಾದಿಯತ್ತ ಮುನ್ನಡೆಸಿದ್ದಾರೆ. ಭಾರತವೂ ಸಹ ತನ್ನ ವೈವಿಧ್ಯತೆ, ಸಂಸ್ಕೃತಿ ಹಾಗೂ ಭಾಷೆಯ ಗತವೈಭವದ ರಾಷ್ಟ್ರವಾಗಿ ತನ್ನ ತನವನ್ನು ಉಳಿಸಿಕೊಂಡಿದೆ ಎಂದು ಶ್ಲಾಘಿಸಿದರು.

    ಇಂದು ದೆಹಲಿಯ ಕೆಂಪುಕೋಟೆಯಲ್ಲಿ ಭ್ರಷ್ಟಾಚಾರ ಸ್ವಜನಪಕ್ಷಪಾತ, ಕುಟುಂಬ ರಾಜಕಾರಣದ ವಿರುದ್ಧ ಸಮರ ಸಾರಿದ ಪ್ರಧಾನಿ ಮೋದಿ ಭಾರತದ ಪ್ರತಿಭೆಗಳನ್ನು ಮರೆಮಾಚಿದ್ದಾರೆ ಎಂದು ಟೀಕಿಸಿದ್ದಾರೆ.

    Live Tv

  • ಕಾಂಗ್ರೆಸ್ ಶಾಸಕನ ಮೇಲೆ ಮಾರಣಾಂತಿಕ ಹಲ್ಲೆ – ಬಿಜೆಪಿ ಕಾರ್ಯಕರ್ತರ ಮೇಲೆ ಆರೋಪ

    ಕಾಂಗ್ರೆಸ್ ಶಾಸಕನ ಮೇಲೆ ಮಾರಣಾಂತಿಕ ಹಲ್ಲೆ – ಬಿಜೆಪಿ ಕಾರ್ಯಕರ್ತರ ಮೇಲೆ ಆರೋಪ

    ಅಗರ್ತಲಾ: ಅಗರ್ತಲಾದ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮಮ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕೈ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹಲ್ಲೆ ನಡೆದಿರುವ ಚಿತ್ರಗಳನ್ನು ಭಾರತೀಯ ಯುವ ಕಾಂಗ್ರೆಸ್ ಟ್ವೀಟ್ ಮೂಲಕ ಹಂಚಿಕೊಂಡಿದೆ. ಅಲ್ಲದೇ ದೇಶದಲ್ಲಿ ಜನಪ್ರತಿನಿಧಿಗಳ ಸುರಕ್ಷತೆಯನ್ನು ಪ್ರಶ್ನಿಸಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆಯ ಆರೋಪ ಮಾಡಿದೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ- ಎಲ್ಲರ ಮನೆ ಮೇಲೆ ತಿರಂಗಾ ಹಾರಿಸುವಂತೆ ಸಿಎಂ ಮನವಿ

    ಅಗರ್ತಲಾದ ಶಾಸಕ ಸುದೀಪ್ ರಾಯ್ ಬರ್ಮನ್ ಅವರ ಮೇಲೆ ಬಿಜೆಪಿ ಗೂಂಡಾಗಳಿಂದ ನಡೆದಿರುವ ಹಿಂಸಾತ್ಮಕ ದಾಳಿ ಖಂಡನೀಯ. ಬಿಜೆಪಿ ಕಾರ್ಯಕರ್ತರು ಹಿಂಸಾಚಾರದ ಮೊರೆ ಹೋಗುತ್ತಿರುವುದು ಇದೇ ಮೊದಲೇನಲ್ಲಾ. ಇದು ಕೊಳಕು ರಾಜಕೀಯ ಹಾಗೂ ಈ ರೀತಿ ದೇಶವನ್ನು ಮುನ್ನಡೆಸಲು ಬಯಸುತ್ತಿರುವುದು ನಾಚಿಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಳಿನಿ

    ಅಲ್ಲದೇ ಇದು ನಮ್ಮ ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ ಕಾನೂನು ಮತ್ತು ಸುವ್ಯವಸ್ಥೆಯನ್ನು ತಿರಸ್ಕರಿಸಿ ಪ್ರತಿಪಕ್ಷ ನಾಯಕರ ಮೇಲೆ ಹಲ್ಲೆ ನಡೆಸುತ್ತಿದೆ. ಸದ್ಯ ಶಾಸಕ ಸುದೀಪ್ ರಾಯ್ ಬರ್ಮನ್ ಸುಶಾಂತ ಚಕ್ರವರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]