Tag: national herald

  • ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

    ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ (Rahul Gandhi, Sonia Gandhi )ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

    ಜುಲೈ 29ರಂದು ಆದೇಶ ಪ್ರಕಟಿಸುವುದಾಗಿ ರೋಸ್‌ ಅವೆನ್ಯೂ ಕೋರ್ಟ್‌ (Rouse Avenue Court) ಸಂಕೀರ್ಣದಲ್ಲಿನ ಭ್ರಷ್ಟಾಚಾರ ತಡೆ ಕಾಯ್ದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಗಾಂಧಿ ಕುಟುಂಬದವರಲ್ಲದೇ ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಸುನಿಲ್‌ ಭಂಡಾರಿ ಹಾಗೂ ಯಂಗ್ ಇಂಡಿಯನ್, ಡೋಟೆಕ್ಸ್ ಮರ್ಚಂಡೈಸ್ ಕೂಡ ಜಾರಿ ನಿರ್ದೇಶನಾಲಯ ಪ್ರಕರಣದ ಆರೋಪಿಗಳನ್ನಾಗಿ ಹೆಸರಿಸಿತ್ತು.

    ನ್ಯಾಷನಲ್‌ ಹೆರಾಲ್ಡ್‌ (National Herald) ಪತ್ರಿಕೆಯ ಒಡೆತನ ಹೊಂದಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ಗೆ ಕಾಂಗ್ರೆಸ್‌ 90 ಕೋಟಿ ರೂ.ನಷ್ಟು ಸಾಲ ನೀಡಿತ್ತು. ಯಂಗ್‌ ಇಂಡಿಯನ್‌ ಸಂಸ್ಥೆ ಕಾಂಗ್ರೆಸ್‌ಗೆ ಕೇವಲ 50 ಲಕ್ಷ ಹಣ ನೀಡಿ ಎಜೆಎಲ್‌ ಕಾಂಗ್ರೆಸ್‌ಗೆ ನೀಡಬೇಕಿದ್ದ 90 ಕೋಟಿ ರೂ.ನಷ್ಟು ಹಣ ಹಿಂಪಡೆಯಬೇಕಾದ ಹಕ್ಕನ್ನು ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ: ಲವ್ ಜಿಹಾದ್‌ಗೆ 1,000 ಮುಸ್ಲಿಂ ಯುವಕರನ್ನು ನೇಮಿಸಿದ್ದ ಛಂಗೂರ್ ಬಾಬಾ!

    ಆ ಮೂಲಕ ಸುಮಾರು 2,000 ಕೋಟಿ ರೂ.ಗಿಂತಗೂ ಅಧಿಕ ಮಾರುಕಟ್ಟೆ ಮೌಲ್ಯದ ಆಸ್ತಿಯನ್ನು ಯಂಗ್‌ ಇಂಡಿಯನ್‌ (Young Indian) ಸಂಸ್ಥೆಯು ತನ್ನ ವಶಕ್ಕೆ ಪಡೆಯಲು ಅವ್ಯವಹಾರ ನಡೆಸಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಷೇರುಗಳ ಮೌಲ್ಯ, ಎಜೆಎಲ್‌ನ ಸ್ಥಿರ ಆಸ್ತಿಗಳು ಮತ್ತು ಅವುಗಳಿಂದ ದೊರೆಯುವ ಬಾಡಿಗೆಯನ್ನು ಅಪರಾಧದ ಗಳಿಕೆ ಎಂದು ಇಡಿ ದೂರಿತ್ತು. ಆದ್ರೆ ಆಸ್ತಿಯನ್ನ ಬಳಸದಿದ್ದರೂ ಅಥವಾ ಅಂದಾಜಿಸದಿದ್ದರೂ ಹಣ ವರ್ಗಾವಣೆ ಆರೋಪ ಮಾಡಿರುವುದು ವಿಚಿತ್ರ ಮತ್ತು ಹಿಂದೆಂದೂ ಕೇಳರಿಯದ ಪ್ರಕರಣ ಎಂದು ಗಾಂಧಿ ಕುಟುಂಬ ವಾದಿಸಿತ್ತು.

    ಸಾಲಕ್ಕೆ ಬದಲಾಗಿ ಎಜೆಎಲ್‌ನ ಆಸ್ತಿಗಳನ್ನು ಕಬಳಿಸಲು ಯಂಗ್ ಇಂಡಿಯನ್‌ ಸಂಸ್ಥೆಯನ್ನು ಬಳಸಿಕೊಳ್ಳಲಾಗಿದೆ ಎಂಬ ಜಾರಿ ನಿರ್ದೇಶನಾಲಯದ ಆರೋಪಗಳನ್ನು ಕಾಂಗ್ರೆಸ್ ನಾಯಕರು ನಿರಾಕರಿಸಿದ್ದರು. ಎಜೆಎಲ್ ಕಂಪೆನಿಯನ್ನು ಸಾಲ ಮುಕ್ತಗೊಳಿಸಲು ಈ ಸಾಲ ನೀಡಲಾಗಿತ್ತು ಎಂದು ಅವರು ವಾದಿಸಿದ್ದರು. ಇದನ್ನೂ ಓದಿ: ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

    ಸೋನಿಯಾ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ – ಯಂಗ್ ಇಂಡಿಯನ್ ಲಿಮಿಟೆಡ್‌ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಖಾಸಗಿ ದೂರು ದಾಖಲಿಸಿ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ದ್ರೋಹ ಹಾಗೂ ಆಸ್ತಿ ದುರುಪಯೋಗದ ಆರೋಪ ಮಾಡುವ ಮೂಲಕ ಪ್ರಕರಣ ಬಹಿರಂಗಗೊಂಡಿತ್ತು.

    ಕಳೆದ ಏಪ್ರಿಲ್ 15 ರಂದು ಗಾಂಧಿ ಕುಟುಂಬ, ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹಾಗೂ ಇತರರ ವಿರುದ್ಧ ಇಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿತ್ತು. ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಎಸ್‌.ವಿ ರಾಜು, ವಿಶೇಷ ವಕೀಲ ಜೊಹೆಬ್ ಹೊಸೈನ್ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್‌.ಕೆ ಮಟ್ಟಾ ಮತ್ತವರ ತಂಡ ಇಡಿ ಪರವಾಗಿ ವಾದ ಮಂಡಿಸಿತ್ತು. ಸೋನಿಯಾ ಗಾಂಧಿ ಅವರನ್ನ ಡಾ. ಅಭಿಷೇಕ್‌ ಮನು ಸಿಂಘ್ವಿ ಹಾಗೂ ಅವರ ಕಾನೂನು ತಂಡ ಪ್ರತಿನಿಧಿಸಿತ್ತು. ಹಿರಿಯ ವಕೀಲ ಆರ್.ಎಸ್ ಮಾ ಅವರ ತಂಡ ರಾಹುಲ್‌ ಪರವಾಗಿ ವಾದ ಮಂಡಿಸಿತ್ತು. ಇದನ್ನೂ ಓದಿ: ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ

    ಸುಮನ್ ದುಬೆ ಪರ ವಕೀಲರಾದ ಸುಶೀಲ್ ಬಜಾಜ್, ಅಲ್ಕಾ ಚೋಹರ್, ಆಶಿಶ್ ಚೋಹರ್ ಮತ್ತು ಅಕ್ಷ್ಯ ನಾಗರಾಜನ್, ಸ್ಯಾಮ್‌ ಪಿತ್ರೋಡಾ ಪರವಾಗಿ ವಕೀಲರಾದ ಕುಬೇರ್ ಬೋಧ್, ಮನಿಕಾ ಸಿಂಗ್ ಅವಿಜಿತ್ ಮತ್ತು ಸೋಮ್ಯಾ ಧವನ್, ಯಂಗ್‌ ಇಂಡಿಯನ್‌ ಪರ ವಕೀಲರಾದ ನಕುಲ್ ಗಾಂಧಿ, ಆಕಾಶ್ ಸಿಂಗ್, ಅಮಿತ್ ಮತ್ತು ಸಂಜೀವನಿ ಅವರೊಂದಿಗೆ ಹಿರಿಯ ವಕೀಲ ಮಾಧವ್ ಖುರಾನಾ, ಡೋಟೆಕ್ಸ್ ಮರ್ಚಂಡೈಸ್ ಪರವಾಗಿ ಹಿರಿಯ ವಕೀಲ ಪ್ರಮೋದ್ ಕುಮಾರ್ ದುಬೆ ಮತ್ತವರ ತಂಡ, ಸುನಿಲ್ ಭಂಡಾರಿ ಪರ ವಕೀಲರಾದ ಸೌಜನ್ಯಾ ಶಂಕರನ್, ಸಿದ್ಧಾರ್ಥ್ ಸತಿಜಾ, ಆಕಾಶ್ ಸಚನ್ ಮತ್ತು ಅನುಕಾ ಭಚಾವತ್ ವಾದ ಮಂಡಿಸಿದ್ದರು.

  • ಅಪರಾಧದ ಆದಾಯದಿಂದ ಸೋನಿಯಾ, ರಾಹುಲ್‌ 142 ಕೋಟಿ ಲಾಭ ಪಡೆದಿದ್ದಾರೆ: ಇಡಿ

    ಅಪರಾಧದ ಆದಾಯದಿಂದ ಸೋನಿಯಾ, ರಾಹುಲ್‌ 142 ಕೋಟಿ ಲಾಭ ಪಡೆದಿದ್ದಾರೆ: ಇಡಿ

    ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದ ಆರೋಪಿಗಳಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ 142 ಕೋಟಿ ರೂ. ಅಪರಾಧದ ಆದಾಯವನ್ನು ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ಗಂಭೀರ ಆರೋಪ ಮಾಡಿದೆ.

    ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದೆಹಲಿ ಹೈಕೋರ್ಟ್‌ಗೆ ಇಡಿ ಚಾರ್ಜ್‌ಶೀಟ್‌ ಸಲ್ಲಿಸಿದ್ದು ಇಂದು ವಿಚಾರಣೆ ನಡೆಯಿತು.

    ಇಡಿಯನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು, 2023 ರ ನವೆಂಬರ್‌ನಲ್ಲಿ ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ 751.9 ಕೋಟಿ ರೂ. ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿಕೊಳ್ಳುವವರೆಗೆ ಆರೋಪಿಗಳು ಅಪರಾಧದ ಆದಾಯದಿಂದ ಲಾಭ ಪಡೆಯುತ್ತಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ಬಂದು ನಿಂತ ಟಿಟಿ!

    ಅಪರಾಧದ ಆದಾಯವನ್ನು ಪಡೆದಾಗ ಗಾಂಧಿ ಕುಟುಂಬ ಹಣ ವರ್ಗಾವಣೆ ಮಾಡಿದ್ದು ಮಾತ್ರವಲ್ಲದೆ, ಆದಾಯವನ್ನು ಹಿಡಿದಿಟ್ಟುಕೊಳ್ಳುವ ಮೂಲಕವೂ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಇಡಿ ಹೇಳಿದೆ. ಇದನ್ನೂ ಓದಿ: ದರ್ಶನ್‌ & ಗ್ಯಾಂಗ್‌ ಸದಸ್ಯರಿಗೆ 2 ತಿಂಗಳು ರಿಲೀಫ್‌

    ವಿಚಾರಣೆ ವೇಳೆ ಪ್ರಕರಣದಲ್ಲಿ ಸಲ್ಲಿಸಿದ್ದ ಆರೋಪಪಟ್ಟಿಯ ಪ್ರತಿಯನ್ನು ಸುಬ್ರಮಣಿಯನ್ ಸ್ವಾಮಿಗೆ ನೀಡಬೇಕೆಂದು ನ್ಯಾಯಾಧೀಶರು ಇಡಿಗೆ ತಿಳಿಸಿದರು. ಸುಬ್ರಮಣಿಯನ್‌ ಸ್ವಾಮಿ ಅವರು 2014 ರ ಜೂನ್‌ 26 ರಂದು ದೂರು ನೀಡಿದ್ದರು. ಇಡಿ 2021 ರಿಂದ ತನಿಖೆ ನಡೆಸಿ ಈ ವರ್ಷ ಆರೋಪ ಪಟ್ಟಿ ಸಲ್ಲಿಸಿತ್ತು.

    ಏನಿದು ಪ್ರಕರಣ?
    ಕ್ರಿಮಿನಲ್ ಪಿತೂರಿ ನಡೆಸಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ (ಎಜೆಎಲ್) ಸಾವಿರಾರು ಕೋಟಿ ಮೌಲ್ಯದ ಆಸ್ತಿಯನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್‌ ಪಿತ್ರೊಡಾ, ಸುಮನ್‌ ದುಬೆ ಮತ್ತು ಇತರ ಕಾಂಗ್ರೆಸ್ ನಾಯಕರು ಪಡೆದಿದ್ದಾರೆ.

    ಯಂಗ್ ಇಂಡಿಯನ್‌ ಲಿಮಿಟೆಡ್‌ ಮೂಲಕ 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸೋನಿಯಾ ಮತ್ತು ರಾಹುಲ್‌ ಅವರು ಕೇವಲ 50 ಲಕ್ಷ ರೂ.ಗೆ ಖರೀದಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಎಜೆಎಲ್‌ಗೆ ನೀಡಿದ್ದ 90.2 ಕೋಟಿ ರೂ. ಸಾಲವನ್ನು 9.02 ಕೋಟಿಯ ಈಕ್ವಿಟಿ ಷೇರುಗಳನ್ನಾಗಿ ಪರಿವರ್ತಿಸಿ ಯಂಗ್‌ ಇಂಡಿಯನ್‌ಗೆ ವರ್ಗಾಯಿಸಲಾಗಿದೆ ಎಂದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.

  • National Herald Case| ಫಸ್ಟ್‌ ಟೈಂ ರಾಹುಲ್‌, ಸೋನಿಯಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    National Herald Case| ಫಸ್ಟ್‌ ಟೈಂ ರಾಹುಲ್‌, ಸೋನಿಯಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪಕ್ಷದ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ (Sam Pitroda) ವಿರುದ್ಧ ಜಾರಿ ನಿರ್ದೇಶನಾಲಯ (ED) ಆರೋಪಪಟ್ಟಿ ಸಲ್ಲಿಸಿದೆ.

    ಈ ಚಾರ್ಜ್‌ಶೀಟ್‌ನಲ್ಲಿ ಸೋನಿಯಾಗಾಂಧಿ ಎ-1 ಹಾಗೂ ರಾಹುಲ್ ಗಾಂಧಿ ಎ-2 ಆಗಿದ್ದು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಈ ಮೂಲಕ ಮೊದಲ ಬಾರಿಗೆ ಸೋನಿಯಾ ಗಾಂಧಿ (Sonia Gandhi) ಮತ್ತು ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾದಂತಾಗಿದೆ. ಇದನ್ನೂ ಓದಿ: ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ಸಾಧ್ಯತೆ – ಮುಂಗಾರು ಮಳೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ

     

    ಕೋರ್ಟ್‌ ಏ.25ಕ್ಕೆ ಮುಂದಿನ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಒಟ್ಟು 700 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಇಡಿ ಮುಂದಾಗಿದ್ದು ದೆಹಲಿ, ಮುಂಬೈನ ಬಾಂದ್ರಾ ಪ್ರದೇಶ ಮತ್ತು ಲಕ್ನೋದ ಬಿಶೇಶ್ವರ್ ನಾಥ್ ರಸ್ತೆಯಲ್ಲಿರುವ ಎಜೆಎಲ್ ಕಟ್ಟಡದಲ್ಲಿರುವ ಆಸ್ತಿಗಳ ಮೇಲೆ ನೋಟಿಸ್‌ಗಳನ್ನು ಅಂಟಿಸಲಾಗಿದೆ. ಇವುಗಳಲ್ಲಿ ದೆಹಲಿಯ ಬಹದ್ದೂರ್ ಶಾ ಜಾಫರ್ ಮಾರ್ಗದಲ್ಲಿರುವ ಪ್ರತಿಷ್ಠಿತ ನ್ಯಾಷನಲ್ ಹೆರಾಲ್ಡ್ ಹೌಸ್ ಕೂಡ ಸೇರಿದೆ. ಇದನ್ನೂ ಓದಿ: ನವಜಾತ ಶಿಶುಗಳ ಕಳ್ಳಸಾಗಣೆ ಮಾಡಿದರೆ ಆಸ್ಪತ್ರೆಗಳ ಪರವಾನಿಗೆ ಕೂಡಲೇ ಅಮಾನತುಗೊಳಿಸಿ: ಸುಪ್ರೀಂ

    ಇಡಿ 2021 ರಲ್ಲಿ ತನಿಖೆ ಆರಂಭಿಸಿತ್ತು. ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಜೂನ್ 2014 ರಲ್ಲಿ ನೀಡಿದ ಆದೇಶದ ಆಧಾರದ ಮೇಲೆ ತನಿಖೆ ನಡೆಸಿತ್ತು.

  • ನನ್ನ ಜೊತೆ ಬಿಸಿನೆಸ್ ಮಾಡಲು ಯಾರೂ ಮುಂದೆ ಬರುತ್ತಿಲ್ಲ: ಡಿಕೆ ಶಿವಕುಮಾರ್‌ ಬೇಸರ

    ನನ್ನ ಜೊತೆ ಬಿಸಿನೆಸ್ ಮಾಡಲು ಯಾರೂ ಮುಂದೆ ಬರುತ್ತಿಲ್ಲ: ಡಿಕೆ ಶಿವಕುಮಾರ್‌ ಬೇಸರ

    ನವದೆಹಲಿ: ನ್ಯಾಷನಲ್ ಹೆರಾಲ್ಡ್(National Herald) ಕೇಸ್ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್(DK Shivakumar) ಇಂದು ಜಾರಿ ನಿರ್ದೇಶನಾಲಯ(Enforcement Directorate) ವಿಚಾರಣೆ ಎದುರಿಸಿದ್ದಾರೆ.

    ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಡಿಕೆ ಶಿವಕುಮಾರ್‌ ಕೆಲವೊಂದು ದಾಖಲೆ ಸಲ್ಲಿಸಲು ಮೂರು ದಿನ ಕಾಲಾವಕಾಶ ಪಡೆದಿದ್ದಾರೆ. ಇದನ್ನೂ ಓದಿ: ಬಲವಂತದ ಮತಾಂತರ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರಬಹುದು : ಸುಪ್ರೀಂ ಕೋರ್ಟ್

    ವಿಚಾರಣೆಗೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನನ್ನ ಜೊತೆ ವ್ಯವಹರಿಸುತ್ತಿದ್ದವರನ್ನು ಇಡಿ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ಇದರಿಂದ ನನ್ನ ಜೊತೆ ಬಿಸಿನೆಸ್ ಮಾಡಲು ಯಾರೂ ಕೂಡ ಮುಂದೆ ಬರುತ್ತಿಲ್ಲ. ನನ್ನ ಪೋನ್ ರಿಸೀವ್ ಮಾಡಲು ಸಹ ಭಯಪಡುತ್ತಿದ್ದಾರೆ. ನನಗೆ ಸಾಲು ಸಾಲು ವಿಚಾರಣೆಗಳಿದ್ದು, ನಮ್ಮ ಗೋಳು ಮತ್ತು ಕಷ್ಟ ನಿಮ್ಮ ಬಳಿ ಹೇಳಿಕೊಂಡರೆ ಏನು ಪ್ರಯೋಜನವಿಲ್ಲ ಎಂದಿದ್ದಾರೆ.

    ಬಿಜೆಪಿ ಸೇರಲು ಒತ್ತಡ ಇದ್ಯೆ ಎಂಬ ಪ್ರಶ್ನೆಗೆ ಈಗ ಆ ವಿಚಾರ ಬಹಿರಂಗ ಮಾಡುವುದು ಸರಿಯಲ್ಲ. ಇದನ್ನೆಲ್ಲಾ ಫೇಸ್ ಮಾಡುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನ್ಯಾಷನಲ್ ಹೆರಾಲ್ಡ್ ಕಚೇರಿ ಸೇರಿ 12 ಕಡೆ ಇಡಿ ದಾಳಿ – ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

    ನ್ಯಾಷನಲ್ ಹೆರಾಲ್ಡ್ ಕಚೇರಿ ಸೇರಿ 12 ಕಡೆ ಇಡಿ ದಾಳಿ – ಕಾಂಗ್ರೆಸ್‌ ಕಾರ್ಯಕರ್ತರಿಂದ ಪ್ರತಿಭಟನೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಸೇರಿದಂತೆ 12 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ.

    ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಈಗಾಗಲೇ ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು. ಇದಾದ ಬಳಿಕ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಸೇರಿ ಹಲವೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ – ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

    ಹೆರಾಲ್ಡ್ ಹೌಸ್‌ನ 4ನೇ ಮಹಡಿಯಲ್ಲಿ ಇಡಿ ದಾಳಿ ನಡೆಸಿತ್ತು. ಇಲ್ಲಿಯೇ ನ್ಯಾಷನಲ್ ಹೆರಾಲ್ಡ್‌ನ ಪ್ರಕಾಶನ ಕಚೇರಿ ಇದೆ. ಇಡಿ ಅಧಿಕಾರಿಗಳು ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದಾಳಿ ನಡೆಸಿದ್ದರು.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯಲ್ಲಿರುವ ಕಾಂಗ್ರೆಸ್ ಒಡೆತನದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಚೇರಿ ಸೇರಿದಂತೆ 12 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿದೆ. ಕೋಲ್ಕತ್ತಾದ ಕೆಲವು ಸ್ಥಳಗಳ ಮೇಲೆ ತನಿಖಾ ಸಂಸ್ಥೆ ದಾಳಿ ನಡೆಸಬಹುದು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮನೆಯಲ್ಲಿ ಸಿಕ್ಕಿದ ಹಣ ನನಗೆ ಸೇರಿದ್ದಲ್ಲ, ಯಾರೋ ಅಲ್ಲಿ ಇಟ್ಟಿದ್ದಾರೆ: ಅರ್ಪಿತಾ ಮುಖರ್ಜಿ

    ಹೆರಾಲ್ಡ್‌ ಕಚೇರಿ ಮೇಲೆ ಇಡಿ ದಾಳಿ ಮಾಡುತ್ತಿದ್ದಂತೆ ಅದನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಚೇರಿ ಹೊರಗೆ ಅಪಾರ ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್‌ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    Live Tv
    [brid partner=56869869 player=32851 video=960834 autoplay=true]

  • ಇಡಿ ವಿರುದ್ಧ ಆಕ್ರೋಶ – ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು

    ಇಡಿ ವಿರುದ್ಧ ಆಕ್ರೋಶ – ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು

    ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ಸಮನ್ಸ್‌ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಎರಡು ಕಾರಿಗೆ ಬೆಂಕಿ ಹಚ್ಚಿದ್ದಾರೆ.

    ಶಾಂತಿ ನಗರ ವಿಲ್ಸನ್ ಗಾರ್ಡನ್ ಹಾಗೂ ಶೇಷಾದ್ರಿಪುರಂ ಬಳಿ ಕಾರುಗಳಿಗೆ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆರಂಭದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವುದು ತಿಳಿದು ಬಂದಿರಲಿಲ್ಲ. ನಂತರ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಕಾರ್ಯಕರ್ತರೇ ತಮ್ಮ ಕಾರುಗಳಿಗೆ ಬೆಂಕಿ ಹಚ್ಚು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಇಡಿ ವಿಚಾರಣೆಗೆ ಸೋನಿಯಾ ಹಾಜರ್ – ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ

    ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಎರಡು ಕಾರುಗಳಿಗೆ ಬೆಂಕಿ ಹಾಕಿದ್ದಾರೆ. ಅವರ ಕಾರಿಗೆ ಅವರೇ ತಂದು ಬೆಂಕಿ ಹಾಕಿದ್ದಾರೆ. ಇದನ್ನ ನಾನು ಸಮರ್ಥನೆ ಮಾಡಿಕೊಳ್ಳುವುದಿಲ್ಲ. ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿದ ವ್ಯಕ್ತಿ ಈ ರೀತಿ ಮಾಡಿದ್ದಕ್ಕೆ ಕೋಪಗೊಂಡು ಬೆಂಕಿ ಹಚ್ಚಿದ್ದಾರೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

    ನ್ಯಾಷನಲ್‌ ಹೆರಾಲ್ಡ್‌ ಕೇಸ್‌- ಇಂದು ಇಡಿ ಮುಂದೆ ಹಾಜರಾಗಲಿದ್ದಾರೆ ಸೋನಿಯಾ

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

    ಬೆಳಗ್ಗೆ 11 ಗಂಟೆಗೆ ದೆಹಲಿ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ನ್ಯಾಷನಲ್ ಹೆರಾಲ್ಡ್ ಆರ್ಥಿಕ ವ್ಯವಹಾಗಳಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ವಿಚಾರಣೆಗೆ ಇಡಿ ಸಮನ್ಸ್ ನೀಡಿತ್ತು.

    ರಾಹುಲ್ ಗಾಂಧಿ 5 ದಿನಗಳ ವಿಚಾರಣೆ ಎದುರಿಸಿದ್ದರು. ಸೋನಿಯಾಗಾಂಧಿ ಅವರಿಗೂ ವಿಚಾರಣೆ ಬರುವಂತೆ 2 ಬಾರಿ ಸಮನ್ಸ್ ನೀಡಲಾಗಿತ್ತು. ಆದರೆ ಕೋವಿಡ್ ಸೇರಿದಂತೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹಿನ್ನೆಲೆ ವಿಚಾರಣೆ ಮುಂದೂಡಲು ಸೋನಿಯಾಗಾಂಧಿ ಮನವಿ ಮಾಡಿದ್ದರು. ಇದಕ್ಕೆ ಸಹಕರಿಸಿದ್ದ ಅಧಿಕಾರಿಗಳು ಇಂದಿಗೆ ದಿನಾಂಕ ನಿಗದಿ ಮಾಡಿದ್ದರು.  ಇದನ್ನೂ ಓದಿ: ಏನಿದು ನ್ಯಾಷನಲ್‌ ಹೆರಾಲ್ಡ್‌ ಕೇಸ್‌? ಸೋನಿಯಾ ಪಾತ್ರವೇನು?

    ಸೋನಿಯಾ ನಿರ್ದೇಶನದಂತೆ ಅಸೋಸಿಯೇಟೆಡ್ ಜರ್ನಲ್ಸ್ ಲಿ. ಯಂಗ್ ಇಂಡಿಯಾ ಖರೀದಿ ನಡೆದಿದೆ. ವ್ಯವಹಾರಗಳ ಪ್ರತಿ ಹಂತದಲ್ಲೂ ಸೋನಿಯಾಗಾಂಧಿ ಉಪಸ್ಥಿತಿ ಇದ್ದು. ರಾಹುಲ್ ಗಾಂಧಿಗೆ ಹಳೆ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಸೋನಿಯಾಗಾಂಧಿ ಹೇಳಿಕೆಯಿಂದ ಪ್ರಕರಣಕ್ಕೆ ಹೊಸ ತಿರುವು ಸಿಗುವ ಸಾಧ್ಯತೆಯಿದೆ.

    ಕಾಂಗ್ರೆಸ್‌ ಪ್ರತಿಭಟನೆ:
    ಸೋನಿಯಾಗಾಂಧಿ ವಿಚಾರಣೆ ಖಂಡಿಸಿ ದೆಹಲಿ, ಬೆಂಗಳೂರು ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ರಾಹುಲ್ ವಿಚಾರಣೆ ವೇಳೆ ನಡೆಸಿದ ಪ್ರತಿಭಟನೆ ಮಾದರಿಯಲ್ಲಿ ಇವತ್ತೂ ಬೀದಿಗಿಳಿಯಲು ಪಕ್ಷ ತೀರ್ಮಾನಿಸಿದೆ. ದೆಹಲಿಯಲ್ಲಿ ಭಾರೀ ಹೈಡ್ರಾಮಾ ನಡೆಯುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ರಾಜ್ಯ ನಾಯಕರು ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಫ್ರೀಡಂಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಬಳಿಕ ರಾಜಭವನ ಮುತ್ತಿಗೆ ಹಾಕಲಿದ್ದಾರೆ. ಇಂದಿನ ಪ್ರತಿಭಟನೆಯಲ್ಲಿ ಎಲ್ಲಾ ಶಾಸಕರು, ಮುಖಂಡರು ಕಡ್ಡಾಯವಾಗಿ ಭಾಗವಹಿಸಬೇಕು ಅಂತ ಕೆಪಿಸಿಸಿ ಸೂಚಿಸಿದೆ. ಹೀಗಾಗಿ ಪ್ರತಿಭಟನೆಯಲ್ಲಿ 3 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಸಾಧ್ಯತೆ ಇದೆ. ಫ್ರೀಡಂಪಾರ್ಕ್ ಸುತ್ತ ಭಾರೀ ಭದ್ರತೆ ನಿಯೋಜಿಸಲಾಗಿದೆ. ಟ್ರಾಫಿಕ್ ಜಾಮ್‍ ನಿಯಂತ್ರಿಸಲು ಕೂಡ ಸಂಚಾರಿ ಪೊಲೀಸರು ಕೂಡ ಸಜ್ಜಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ಬಂದಾಗಿನಿಂದಲೂ ED, CBI ದುರುಪಯೋಗ ಆಗ್ತಿದೆ – ಸಿದ್ದರಾಮಯ್ಯ ವಾಗ್ದಾಳಿ

    ಮೋದಿ ಬಂದಾಗಿನಿಂದಲೂ ED, CBI ದುರುಪಯೋಗ ಆಗ್ತಿದೆ – ಸಿದ್ದರಾಮಯ್ಯ ವಾಗ್ದಾಳಿ

    ಮೈಸೂರು: ಮೋದಿ ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಇ.ಡಿ., ಸಿಬಿಐ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಸೋನಿಯಾ ಗಾಂಧಿ ಅವರಿಗೆ ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸಮನ್ಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯವಾಗಿ ಕಿರುಕುಳ ನೀಡುತ್ತಿದೆ. ರಾಜಕೀಯ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಮಾಯಕರಲ್ಲ: ಸಿ.ಟಿ. ರವಿ

    Siddaramaiah and soniya

    ರಾಹುಲ್ ಗಾಂಧಿಗೆ 5 ದಿನಗಳ ಕಾಲ ಇ.ಡಿ. ಅಧಿಕಾರಿಗಳು ಕಿರುಕುಳ ನೀಡಿದ್ರು. ಇದು ಚುನಾವಣೆ ಹತ್ತಿರ ಬರುತ್ತಿದೆ ಅಂತಾ ಏನೂ ಇಲ್ಲ. ಮೋದಿ ಅವರು ಪ್ರಧಾನಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಇಡಿ, ಸಿಬಿಐ ಎಲ್ಲಾ ಸ್ವಾಯತ್ತ ಸಂಸ್ಥೆಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಗೆ ಮನೆ ಮಗನಂತೆ ಕೆಲಸ ಮಾಡ್ತೀನಿ: ಮುನಿರತ್ನ

    ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಮನಿ ಲಾಂಡರಿಂಗ್ (ಹಣ ಅಕ್ರಮ ವರ್ಗಾವಣೆ) ಆಗಿಲ್ಲ. ಕಪ್ಪು ಹಣವನ್ನ ಬೇರೆ ಕಡೆ ಹಾಕಿದ್ರೆ ಅದು ಮನಿ ಲಾಂಡರಿಂಗ್ ಆಗುತ್ತೆ. ಕಾಂಗ್ರೆಸ್ ಪಕ್ಷ 90 ಕೋಟಿ ಸಾಲ ಕೊಟ್ಟಿದೆ. ಹಾಗಾಗಿ ಇದು ರಾಜಕೀಯ ಪ್ರೇರಿತವಾದ ಸಮನ್ಸ್. ಸುಳ್ಳು ಕೇಸ್‌ಗಳನ್ನ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜುಲೈ 21ಕ್ಕೆ ಹಾಜರಾಗಿ – ಸೋನಿಯಾ ಗಾಂಧಿಗೆ ಮತ್ತೆ ED ಸಮನ್ಸ್

    ಜುಲೈ 21ಕ್ಕೆ ಹಾಜರಾಗಿ – ಸೋನಿಯಾ ಗಾಂಧಿಗೆ ಮತ್ತೆ ED ಸಮನ್ಸ್

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮತ್ತೆ ಜಾರಿ ನಿರ್ದೇಶನಾಲಯದ ಟೆನ್ಷನ್ ಶುರುವಾಗಿದೆ. ಜಾರಿ ನಿರ್ದೇಶನಾಲಯವು (ED) ಜುಲೈ 21ರಂದು ತನಿಖೆಗೆ ಹಾಜರಾಗುವಂತೆ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ವಿಚಾರಣೆಗೆ ಒಳಪಡಿಸಿದೆ.

    ಕಳೆದ ತಿಂಗಳಿನಲ್ಲಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ಇ.ಡಿ ವಿಚಾರಣೆಗೆ ಕರೆದಿತ್ತು. ಇದೇ ವೇಳೆ ಸೋನಿಯಾರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. 75 ವರ್ಷ ವಯಸ್ಸಿನ ಸೋನಿಯಾರಿಗೆ ಕೋವಿಡ್‌ನಿಂದಾಗಿ ವೈದ್ಯರು ಮನೆಯಲ್ಲಿ ಕಡ್ಡಾಯ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದರು. ಶ್ವಾಸಕೋಶ ಸೋಂಕಿಗೆ ತುತ್ತಾಗಿದ್ದ ಸೋನಿಯಾ ಗಾಂಧಿ ಅವರು ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ 9,500 ಕೆಜಿ ಕಂಚಿನ ರಾಷ್ಟ್ರೀಯ ಲಾಂಛನ ಅನಾವರಣ – ಏನಿದರ ವಿಶೇಷ?

    ಇದೇ ಕಾರಣದಿಂದಾಗಿ ಜೂನ್ 23 ರಂದು ಸೋನಿಯಾ ಗಾಂಧಿ ಅವರು ಇಡಿ ಎದುರು ವಿಚಾರಣೆಗೆ ಹಾಜರಾಗಲು ಸಾಧ್ಯ ಆಗಿರಲಿಲ್ಲ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಸೀರೆಯಲ್ಲಿ ಮಿಂಚಿದ ಉರ್ಫಿ ಜಾವೇದ್: ಹೀಗೂ ಸೀರೆ ಉಡಬಹುದಾ ಎಂದ ಫ್ಯಾನ್ಸ್

    ಏನಿದು ಪ್ರಕರಣ? 
    ಜವಹರಲಾಲ್ ನೆಹರೂ ಅವರು ಆರಂಭಿಸಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಅಸೋಸಿಯೇಟ್ ಜರ್ನಲ್ಸ್ ಲಿಮಿಟೆಡ್ ಎಂಬ ಸಂಸ್ಥೆ ಪ್ರಕಟಿಸುತ್ತಿತ್ತು. ಈ ಸಾರ್ವಜನಿಕ ಸಂಸ್ಥೆಯನ್ನು ರಾಹುಲ್ ಗಾಂಧಿ ನಿರ್ದೇಶಕರಾಗಿರುವ ಯಂಗ್ ಇಂಡಿಯಾ ಲಿಮಿಟೆಡ್ ಖಾಸಗಿ ಸಂಸ್ಥೆಯು ಖರೀದಿ ಮಾಡಿತ್ತು. ಈ ವೇಳೆ ಅಕ್ರಮವಾಗಿ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಇಡಿ ಪ್ರಶ್ನೆಗೆ ನಾನು ದಣಿದಿದ್ದೇನೆ ಎಂದ ರಾಹುಲ್- ಕೇವಲ 20% ಪ್ರಶ್ನೆಗಷ್ಟೇ ಉತ್ತರ

    ಇಡಿ ಪ್ರಶ್ನೆಗೆ ನಾನು ದಣಿದಿದ್ದೇನೆ ಎಂದ ರಾಹುಲ್- ಕೇವಲ 20% ಪ್ರಶ್ನೆಗಷ್ಟೇ ಉತ್ತರ

    ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಪ್ರಶ್ನಿಸುವಾಗ ನನ್ನ ತಾಳ್ಮೆ ಕಂಡು ಅವರೇ ದಂಗಾಗಿ ಹೋಗಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದ ಹೇಳಿಕೆಯನ್ನು ಇ.ಡಿ. ಮೂಲಗಳು ತಿರಸ್ಕರಿಸಿದೆ.

    ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ ಇಡಿ ಅನೇಕ ಪ್ರಶ್ನೆಗಳನ್ನು ಕೇಳಿತ್ತು. ಆ ಸಂದರ್ಭದಲ್ಲಿ ಇಡಿ ನನ್ನ ತಾಳ್ಮೆಯನ್ನು ನೋಡಿ ದಂಗಾಗಿ ಹೋಗಿತ್ತು ಎಂದು ರಾಹುಲ್ ಗಾಂಧಿ ಅವರು ತಿಳಿಸಿದ್ದರು. ಇದೀಗ ಇಡಿ ಮೂಲಗಳು ಇದಕ್ಕೆ ಪ್ರತಿಕ್ರಿಯಿಸಿದ್ದು, ಇದನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ.

    ಈ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೇಳಿದ್ದ ಶೇ.20ರಷ್ಟು ಪ್ರಶ್ನೆಗೂ ರಾಹುಲ್ ಗಾಂಧಿ ಉತ್ತರಿಸಿರಲಿಲ್ಲ. ನಾನು ದಣಿದಿದ್ದೇನೆ ಎಂದು ನೆಪವೊಡ್ಡಿ ಉತ್ತರ ನೀಡುವುದರಿಂದ ತಪ್ಪಿಸಿಕೊಂಡರು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಭ್ರೂಣಪತ್ತೆ ಪ್ರಕರಣ – ಭ್ರೂಣಗಳನ್ನು ಡೆಮೋನ್‍ಸ್ಟ್ರೇಷನ್‍ಗೆ ಇಟ್ಟಿದ್ವಿ ಎಂದ ವೈದ್ಯೆ

    ಬುಧವಾರ ರಾಹುಲ್‍ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ, ಇಡಿ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿದ್ದೇನೆ. ದಣಿಯದೇ ತಾಳ್ಮೆಯಿಂದ ಉತ್ತರಿಸಿದ್ದಕ್ಕೆ ಅಧಿಕಾರಿಗಳು ದಂಗಾಗಿ ಹೋಗಿದ್ದರು. ಅಷ್ಟೇ ಅಲ್ಲದೇ ನಿಮ್ಮ ಶಕ್ತಿಯ ಗುಟ್ಟೇನು ಎಂದು ಪ್ರಶ್ನಿಸಿದ್ದಾರೆ ಹೇಳಿಕೆ ನೀಡಿದ್ದರು. ಆಗ ತಾವು ಕಾಂಗ್ರೆಸ್ ಕಾರ್ಯಕರ್ತನಾಗಿ ತರಬೇತಿ ಪಡೆದಿದ್ದು ಹಾಗೂ ಪ್ರತಿನಿತ್ಯ ಧ್ಯಾನ ಮಾಡುವುದು ಸಮಾಧಾನದಿಂದ ಉತ್ತರ ನೀಡಲು ಸಹಾಯ ಮಾಡಿತು ಎಂದು ಹೇಳಿಕೊಂಡಿದ್ದರು. ಇದನ್ನೂ ಓದಿ: ಶಿವರಾತ್ರಿಯಂದು ಗಲಭೆ – 1 ವರ್ಷ ಬೆಳಗಾವಿ ಜೈಲಿನಲ್ಲೇ ಇರಲಿದ್ದಾನೆ ಮಾಸ್ಟರ್ ಮೈಂಡ್ ಅನ್ಸಾರಿ

    Live Tv