Tag: National Highway 50

  • ಟಯರ್ ಸ್ಪೋಟಗೊಂಡು ಪಲ್ಟಿಯಾದ ಕಾರು – ಅಪಘಾತದಲ್ಲಿ ಮಹಿಳೆ ಸಾವು

    ಟಯರ್ ಸ್ಪೋಟಗೊಂಡು ಪಲ್ಟಿಯಾದ ಕಾರು – ಅಪಘಾತದಲ್ಲಿ ಮಹಿಳೆ ಸಾವು

    ವಿಜಯನಗರ: ವೇಗವಾಗಿ ಚಲಿಸುತ್ತಿದ್ದಾಗ ಟಯರ್ ಸ್ಪೋಟಗೊಂಡಿದ್ದರಿಂದ ಕಾರು ಪಲ್ಟಿಯಾಗಿ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

    ಕೂಡ್ಲಿಗಿ ತಾಲೂಕಿನ ಬಣಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ, ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಹೊಸಪೇಟೆಯಿಂದ ಬೆಂಗಳೂರಿನ ಕಡೆ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಕಾರಿನ ಮುಂದಿನ ಟಯರ್ ಸ್ಫೋಟವಾಗಿ ಕಾರು ಪಲ್ಟಿಯಾಗಿದೆ. ಏಕಾಏಕಿ ಕಾರು ಪಲ್ಟಿಯಾದ ಹಿನ್ನೆಲೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದ ಮಹಿಳೆ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.

    ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೃತ ಮಹಿಳೆಯನ್ನು ಪದ್ಮಾವತಿ(43) ಎಂದು ಗುರುತಿಸಲಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಜವಳಿ ಇಲಾಖೆಯಲ್ಲಿ 12 ಲಕ್ಷ ಉದ್ಯೋಗ ಸೃಷ್ಟಿ: ಶಂಕರ್ ಪಾಟೀಲ್ ಮುನೇನಕೊಪ್ಪ

    ಈ ಸಂಬಂಧ ಕೂಡ್ಲಿಗಿ ತಾಲೂಕಿನ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೊಳಗಾದ ಈ ಶಿಫ್ಟ್ ಕಾರು ಬೆಂಗಳೂರು ಮೂಲದ್ದು ಎಂದು ತಿಳಿದುಬಂದಿದೆ.