Tag: National Human Rights Commission

  • ವಿದ್ಯುತ್ ತಗುಲಿ ತಾಯಿ, ಮಗು ಸಾವು- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್

    ವಿದ್ಯುತ್ ತಗುಲಿ ತಾಯಿ, ಮಗು ಸಾವು- ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ನೋಟಿಸ್

    ನವದೆಹಲಿ: ಬೆಂಗಳೂರಿನಲ್ಲಿ (Bengaluru) ವಿದ್ಯುತ್ ತಗುಲಿ ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (National Human Rights Commission) ನೋಟಿಸ್ (Notice) ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಸ್ತೃತ ವರದಿಯನ್ನು ಆರು ವಾರಗಳಲ್ಲಿ ಸಲ್ಲಿಸುವಂತೆ ನೋಟಿಸ್‌ನಲ್ಲಿ ತಿಳಿಸಿದೆ.

    ಬೆಂಗಳೂರಿನಲ್ಲಿ ನಡೆದ ಘಟನೆ ಮಾನವ ಹಕ್ಕುಗಳ ಉಲ್ಲಂಘನೆಯ ಗಂಭೀರ ಸಮಸ್ಯೆಯನ್ನು ತೋರಿಸುತ್ತದೆ ಎಂದು ಆಯೋಗವು ಗಮನಿಸಿದೆ. ಇದು ಕಳವಳಕಾರಿ ವಿಷಯವಾಗಿದೆ. ವರದಿಯಾಗಿರುವ ಘಟನೆಯು ಬೆಂಗಳೂರಿನ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವನ್ನು ಸೂಚಿಸುತ್ತದೆ. ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ನೀಡಬೇಕು ಎಂದು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ಸಮಯಕ್ಕೆ ಸರಿಯಾಗಿ ಊಟ ಮಾಡಿ – ಸುರಂಗದಲ್ಲಿ ಸಿಲುಕಿದ ಕಾರ್ಮಿಕನ ಭಾವುಕ ಸಂದೇಶ

    ವರದಿಯು ಎಫ್‌ಐಆರ್‌ನ ಸ್ಥಿತಿ, ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮ ಮತ್ತು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾದ ಪರಿಹಾರವನ್ನು ಒಳಗೊಂಡ ಮಾಹಿತಿಯೂ ಸೇರಿ ವಿಸ್ತೃತ ವರದಿಯನ್ನು ನೀಡಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ. ಇದನ್ನೂ ಓದಿ: ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ: ICMR ಸ್ಪಷ್ಟನೆ

  • ರೋಹಿಣಿ ಸಿಂಧೂರಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

    ರೋಹಿಣಿ ಸಿಂಧೂರಿ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

    ನವದೆಹಲಿ: ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ 35 ಮಂದಿ ಸಾವನ್ನಪ್ಪಿರುವ ಪ್ರಕರಣ ತನಿಖೆ ನಡೆಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಲಾಗಿದೆ. ವಿಧಾನಮಂಡಲ ನಿವೃತ್ತ ಭದ್ರತಾ ಅಧಿಕ್ಷಕ ಎಂ.ಎನ್ ಪಿಳ್ಳಪ್ಪ ದೂರು ದಾಖಲಿಸಿದ್ದಾರೆ.

    ಚಾಮರಾಜನಗರ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಸ್ಪಷ್ಟವಾಗಿದೆ. ವರ್ಗಾವಣೆ ಹೊರತುಪಡಿಸಿ ಇನ್ಯಾವುದೇ ಕ್ರಮಗಳನ್ನು ಅಧಿಕಾರಿಗಳ ವಿರುದ್ಧ ತೆಗೆದುಕೊಂಡಿಲ್ಲ. ಈ ಪ್ರಕರಣದಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ತಪ್ಪಿಸ್ಥರಾಗಿದ್ದು, ಇತರೆ ಅಧಿಕಾರಿಗಳೊಂದಿಗಿನ ಮನಸ್ಥಾಪದ ಕಾರಣ ಈ ಘಟನೆ ನಡೆದಿದೆ. ಈ ಹಿನ್ನೆಲೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ರೋಹಿಣಿ ಸಿಂಧೂರಿಗೆ ಕ್ಲೀನ್‍ಚಿಟ್

    ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಈಜುಕೊಳ ನಿರ್ಮಾಣ, ತಿರುಪತಿಯಲ್ಲಿದ್ದ ಮೈಸೂರು ಮಹಾರಾಜರ ಭೂಮಿ ಆಂಧ್ರಪ್ರದೇಶ ಸರ್ಕಾರಕ್ಕೆ ಹಸ್ತಾಂತರ ಸೇರಿ ಹಲವು ಆರೋಪಗಳಿವೆ. ಅವುಗಳ ಬಗ್ಗೆಯೂ ತನಿಖೆಯಾಗಬೇಕಿದ್ದು, ಕೂಡಲೇ ಅವರನ್ನು ಅಮಾನತು ಮಾಡಿ ತನಿಖೆ ಮಾಡಬೇಕು ಎಂದು ಎಂ.ಎನ್ ಪಿಳ್ಳಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ – ತಾಳಿ ಉಳಿಸಿಕೊಡಿ ಅಂತ ಅಂಗಲಾಚಿದ ನವ ವಧು

  • ಸಿನಿಮಾದಲ್ಲಿ ಎನ್‍ಕೌಂಟರ್ ಮಾಡಿದ್ರೆ ಚಪ್ಪಾಳೆ, ರಿಯಲ್ ಆಗಿ ಮಾಡಿದ್ರೆ ವಿರೋಧ: ಜಗನ್ ಮೋಹನ್ ರೆಡ್ಡಿ

    ಸಿನಿಮಾದಲ್ಲಿ ಎನ್‍ಕೌಂಟರ್ ಮಾಡಿದ್ರೆ ಚಪ್ಪಾಳೆ, ರಿಯಲ್ ಆಗಿ ಮಾಡಿದ್ರೆ ವಿರೋಧ: ಜಗನ್ ಮೋಹನ್ ರೆಡ್ಡಿ

    ಅಮರಾವತಿ: ದಿಶಾ ಪ್ರಕರಣದ ನಾಲ್ವರು ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸರು ಎನ್‍ಕೌಂಟರ್ ಮಾಡಿದನ್ನು ಪ್ರಶ್ನಿಸಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ನಡೆಯನ್ನು ಆಂಧ್ರಪ್ರದೇಶ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಖಂಡಿಸಿದ್ದು, ಸಿನಿಮಾದಲ್ಲಿ ಎನ್‍ಕೌಂಟರ್ ಮಾಡಿದರೆ ಚಪ್ಪಾಳೆ ಹೊಡಿಯುತ್ತೇವೆ. ಆದರೆ ನಿಜವಾಗಿಯೂ ಎನ್‍ಕೌಂಟರ್ ಮಾಡಿದರೆ ವಿರೋಧಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

    ಅಲ್ಲದೆ ಆರೋಪಿಗಳ ಹುಟ್ಟಡಗಿಸಿದ ತೆಲಂಗಾಣ ಪೊಲೀಸರ ಕಾರ್ಯವನ್ನು ಆಂಧ್ರ ಸಿಎಂ ಶ್ಲಾಘಿಸಿದ್ದಾರೆ. ರಾಜ್ಯ ವಿಧಾನಸಭೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡಿದ ಜಗನ್ ಮೋಹನ್ ರೆಡ್ಡಿ, ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿ ಈ ಘಟನೆ ನನ್ನನ್ನು ಆಳವಾಗಿ ಸಂಕಟಕ್ಕೆ ದೂಡಿತ್ತು. ಒಬ್ಬ ತಂದೆಯಾಗಿ ಇಂತಹ ಘಟನೆಗಳಿಗೆ ನಾನು ಹೇಗೆ ಪ್ರತಿಕ್ರಿಯಿಸಲಿ? ಕ್ರೂರಿಗಳಿಗೆ ಯಾವ ಶಿಕ್ಷೆ ಕೊಟ್ಟರೆ ಪೋಷಕರಿಗೆ ಪರಿಹಾರ ನೀಡಿದಂತಾಗುತ್ತದೆ ಎಂದು ನಾವು ಚಿಂತಿಸಬೇಕಾಗಿದೆ ಎಂದು ಹೇಳಿದರು.

    ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅವರಿಗೆ ಹಾಗೂ ತೆಲಂಗಾಣ ಪೊಲೀಸರಿಗೆ ಹ್ಯಾಟ್ಸ್ ಆಫ್. ಕೆಸಿಎರ್ ಅವರು ನಿಜಕ್ಕೂ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಆಂಧ್ರ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

    ದಿಶಾ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ನಡೆಯನ್ನು ಜಗನ್ ಅವರು ವಿರೋಧಿಸಿದರು. ಸಿನಿಮಾಗಳಲ್ಲಿ ನಾಯಕ ಎನ್‍ಕೌಂಟರ್ ಮಾಡಿದರೆ ನಾವೆಲ್ಲಾ ಚಪ್ಪಾಳೆ ಹೊಡೆಯುತ್ತೇವೆ. ಆದರೆ ಅದೇ ಕೆಲಸವನ್ನು ಒಬ್ಬ ವ್ಯಕ್ತಿ ರಿಯಲ್ ಆಗಿ ಮಾಡಿದರೆ, ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಹೆಸರಿನಲ್ಲಿ ಕೆಲವರು ದೆಹಲಿಯಿಂದ ಬಂದು ಇದು ತಪ್ಪು ಎನ್ನುತ್ತಾರೆ. ಏಕೆ ಮಾಡಿದೆ ಎಂದು ಪ್ರಶ್ನೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ಶಿಕ್ಷೆ ಸಂಬಂಧ ಬಲವಾದ ಕಾನೂನು ಜಾರಿಗೆ ತರಲು ನಿರ್ಧರಿಸಿದ್ದೇವೆ. ಇದೇ ಅಧಿವೇಶನದಲ್ಲಿ ಆ ಮಸೂದೆಯನ್ನು ನಮ್ಮ ಸರ್ಕಾರ ಮಂಡಿಸಲಿದೆ ಎಂದು ಘೋಷಿಸಿದರು. ಜೊತೆಗೆ ಅದರಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗುವ ಕಾಮುಕರಿಗೆ 21 ದಿನಗಳಲ್ಲಿ ಮರಣದಂಡನೆ ವಿಧಿಸುವ ಬಗ್ಗೆ ಕೂಡ ಪ್ರಸ್ತಾಪವಿದೆ ಎಂದು ತಿಳಿಸಿದರು.

  • ಹಣ ನೀಡಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡ್ರೆ ಅಪರಾಧ!

    ಹಣ ನೀಡಿಲ್ಲವೆಂದು ರೋಗಿಯನ್ನು ಆಸ್ಪತ್ರೆಯಲ್ಲಿ ಇಟ್ಟುಕೊಂಡ್ರೆ ಅಪರಾಧ!

    ನವದೆಹಲಿ: ಇನ್ನು ಮುಂದೆ ಹಣ ಪಾವತಿಸಿದ ಬಳಿಕವೇ ಮೃತ ದೇಹವನ್ನು ನೀಡುತ್ತೇವೆ ಅಥವಾ ರೋಗಿಯನ್ನು ಡಿಸ್ಚಾರ್ಜ್ ಮಾಡುತ್ತೇವೆ ಎಂದು ಆಸ್ಪತ್ರೆಯವರು ಪಟ್ಟು ಹಿಡಿದರೆ ಅದು ಅಪರಾಧವಾಗುತ್ತದೆ.

    ಹೌದು. ಆಸ್ಪತ್ರೆಗಳು ಹಣಕ್ಕಾಗಿ ರೋಗಿಯ ಕುಟುಂಬದ ಸದಸ್ಯರಿಗೆ ಪೀಡಿಸುತ್ತಿವೆ ಎನ್ನುವ ದೂರುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೋಗಿಗಳ ಹಕ್ಕುಗಳಿಗೆ ಸಂಬಂಧಿಸಿದಂತೆ ಕರಡು ನೀತಿಯನ್ನು ಬಿಡುಗಡೆ ಮಾಡಿದೆ.

    ಕರಡು ನೀತಿಯ ಅನ್ವಯ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ ಅಥವಾ ಮೃತ ಕುಟುಂಬದವರು ಹಣ ಪಾವತಿ ಮಾಡಲಿಲ್ಲವೆಂದು ಅವರನ್ನು ಆಸ್ಪತ್ರೆಯಲ್ಲಿ ಒತ್ತೆಯಾಳುಗಳಂತೆ ಅಲ್ಲಿಯೇ ಇಟ್ಟುಕೊಳ್ಳುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ 28 ಪುಟಗಳಿರುವ ಕರಡು ನೀತಿಯನ್ನು ತಯಾರಿಸಿದ್ದು, ಆರೋಗ್ಯ ಸಚಿವಾಲಯ ವೆಬ್‍ಸೈಟ್‍ನಲ್ಲಿ ಕರಡು ನೀತಿಯನ್ನು ಪ್ರಕಟಿಸಿದೆ. ಸಾರ್ವಜನಿಕರು ಈ ಕರಡನ್ನು ಓದಿ ತಮ್ಮ ಅಭಿಪ್ರಾಯ, ಸಲಹೆಗಳನ್ನು ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

    ಸಾರ್ವಜನಿಕರಿಂದ ಅಭಿಪ್ರಾಯ, ಸಲಹೆಗಳನ್ನು ಪಡೆದ ಬಳಿಕ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ನೀತಿಯನ್ನು ಅಳವಡಿಸಿಕೊಳ್ಳುವಂತೆ ನಿರ್ದೇಶನ ನೀಡಲಿದೆ.

    ಕರಡಿನಲ್ಲಿ ಏನಿದೆ?
    ರೋಗಿಗೆ ಯಾವುದೇ ರೀತಿಯ ಕುಂದು-ಕೊರತೆಯಾಗಿದ್ದರೆ ಅಥವಾ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ 15 ದಿನಗಳ ಒಳಗಾಗಿ ಲಿಖಿತ ದೂರು ನೀಡಬಹುದು. ಚಿಕಿತ್ಸೆಗೆ ಸಂಬಂಧಿಸಿದ ಎಲ್ಲ ಮಾಹಿತಿ ಇರುವ ಪ್ರತಿಯನ್ನು (ಕೇಸ್ ಪೆಪರ್ ಗಳನ್ನು) ರೋಗಿಯ ಸಂಬಂಧಿಕರಿಗೆ 24 ಗಂಟೆಯ ಒಳಗಾಗಿ ನೀಡಬೇಕು. ಜೊತೆಗೆ ಆಸ್ಪತ್ರೆಯಿಂದ ಮನೆಗೆ ಮರಳಿದ 72 ಗಂಟೆಯ ಒಳಗಾಗಿ ಮಾಹಿತಿ ಪತ್ರ ನೀಡಬೇಕು.

    ರೋಗಿಗಳ ವೈಯಕ್ತಿಕ ಜೀವನಕ್ಕೆ ದಕ್ಕೆ ತರುವಂತಹ ಯಾವುದೇ ಮಾಹಿತಿಯನ್ನು ವೈದ್ಯರು ನೀಡಬಾರದು. ಹಣ ಪಾವತಿಸುವಾಗ ರೋಗಿಯ ಕುಟುಂಬದವರು ವಿವರವಾದ ಬಿಲ್ ಕೇಳಿದರೆ ನೀಡಬೇಕು. ಚಿಕಿತ್ಸೆಗೆ ಸಂಬಂಧಿಸಿದಂತೆ ಪಾವತಿ ಮಾಡಿದ ಹಣದ ಮಾಹಿತಿಯನ್ನ ಕೇಳಿದಾಗ ಯಾವುದೇ ರೀತಿಯ ಶುಲ್ಕ ಪಡೆಯದೆ ಮಾಹಿತಿ ನೀಡಬೇಕು.

    ಆಸ್ಪತ್ರೆಯ ಒಂದು ಭಾಗದಲ್ಲಿ ಸೌಲಭ್ಯಗಳಿಗೆ ನಿಗದಿಯಾದ ಬೆಲೆಯ ಪಟ್ಟಿಯನ್ನು ಹಾಕಬೇಕು. ಅಷ್ಟೇ ಅಲ್ಲದೇ ಯಾವ ಚಿಕಿತ್ಸೆಗೆ ಎಷ್ಟು ಶುಲ್ಕ ಎನ್ನುವ ವಿವರ ಇರುವ ಕರಪತ್ರ ಗಳನ್ನು ನೀಡಬೇಕು. ಈ ಮಾಹಿತಿಗಳು ಇಂಗ್ಲಿಷ್ ಅಥವಾ ಆಯಾ ಪ್ರಾದೇಶಿಕ ಭಾಷೆಯಲ್ಲಿ ರೋಗಿಗಳಿಗೆ ಅರ್ಥವಾಗುವಂತೆ ಇರಬೇಕು. ಲಿಂಗ, ಜಾತಿ, ಭಾಷೆ ಸೇರಿದಂತೆ ಯಾವುದೇ ತಾರತಮ್ಯವಿಲ್ಲದೆ ಚಿಕಿತ್ಸೆ ನೀಡಬೇಕು. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿರುವ ಒಬ್ಬ ಎಚ್‍ಐವಿ ರೋಗಿಯನ್ನು ಕಡೆಗಣಿಸುವಂತಿಲ್ಲ.

    ಹೊಸ ಆರೋಗ್ಯ ನೀತಿಯನ್ನು ಡೌನ್‍ಲೋಡ್ ಮಾಡಲು ಕ್ಲಿಕ್ ಮಾಡಿ: PatientCharterforcomments

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv