Tag: National Investigation Agency

  • ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ ಎನ್‍ಐಎ ಹೆಗಲಿಗೆ

    ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರ ದಾಳಿ ಪ್ರಕರಣ – ತನಿಖೆ ಎನ್‍ಐಎ ಹೆಗಲಿಗೆ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಇತ್ತೀಚೆಗೆ ಬಸ್ ಮೇಲೆ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ( Union Home Ministry) ರಾಷ್ಟ್ರೀಯ ತನಿಖಾ ಸಂಸ್ಥೆಗೆ (National Investigation Agency) ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಮತ್ತು ಅಮರನಾಥ ಯಾತ್ರೆಯ ಸಿದ್ಧತೆಗಳ ಬಗ್ಗೆ ಭಾನುವಾರ ಸಭೆ ನಡೆಸಿದ್ದರು. ಅಲ್ಲದೇ ರಿಯಾಸಿ ಜಿಲ್ಲೆಯಲ್ಲಿ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿ ಮತ್ತು ಇತರ ಕೆಲವು ಭಯೋತ್ಪಾದಕ ಘಟನೆಗಳ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿತ್ತು. ಸಭೆಯ ಬಳಿಕ ಈ ಬೆಳವಣಿಗೆ ನಡೆದಿದೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಸತತ 2 ಗಂಟೆ ಸಿಐಡಿ ವಿಚಾರಣೆ ಎದುರಿಸಿದ ಬಿಎಸ್‌ವೈ

    ಜೂನ್ 9 ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಉಗ್ರರು ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಬಸ್ ಆಳವಾದ ಕಂದಕಕ್ಕೆ ಉರುಳಿ ಮೂವರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದರು. ಘಟನೆಯಲ್ಲಿ 41 ಜನ ಗಾಯಗೊಂಡಿದ್ದರು. ಬಸ್‍ನಲ್ಲಿದ್ದ ಯಾತ್ರಾರ್ಥಿಗಳು ಶಿವ ಖೋರಿ ದೇವಸ್ಥಾನದಿಂದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿತ್ತು.

    ಜೂನ್ 11 ರಂದು ಭದೇರ್ವಾಹ್‍ನ ಚಟರ್‍ಗಲ್ಲದಲ್ಲಿ ರಾಷ್ಟ್ರೀಯ ರೈಫಲ್ಸ್ ಮತ್ತು ಪೊಲೀಸರ ಚೆಕ್‍ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಜೂನ್ 12 ರಂದು ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿಯಿಂದ ಓರ್ವ ಪೊಲೀಸ್ ಸೇರಿದಂತೆ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.

    ಈ ಘಟನೆಗಳ ಬಳಿಕ, ಪ್ರಧಾನಿ ನರೇಂದ್ರ ಮೋದಿಯವರು ಜೂನ್ 13 ರಂದು ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಭಯೋತ್ಪಾದಕರ ನಿಗ್ರಹಕ್ಕೆ ಭದ್ರತಾ ಪಡೆಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸುವಂತೆ ಅವರು ಸೂಚಿಸಿದ್ದರು. ಇದನ್ನೂ ಓದಿ: ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಮೊಬೈಲ್‌ ಹುಡುಕಾಟ

  • ಬೆಂಗಳೂರು ಕೆಫೆ ಬ್ಲಾಸ್ಟ್‌ ಕೇಸ್‌; ಶಂಕಿತ ಉಗ್ರನ ಹೊಸ ಫೋಟೊ ಹಂಚಿಕೊಂಡ NIA

    ಬೆಂಗಳೂರು ಕೆಫೆ ಬ್ಲಾಸ್ಟ್‌ ಕೇಸ್‌; ಶಂಕಿತ ಉಗ್ರನ ಹೊಸ ಫೋಟೊ ಹಂಚಿಕೊಂಡ NIA

    ಬೆಂಗಳೂರು: ಇಲ್ಲಿನ ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್‌ ಬ್ಲಾಸ್ಟ್‌ ಪ್ರಕರಣದ ಶಂಕಿತ ಆರೋಪಿಯ ಹೊಸ ಛಾಯಾಚಿತ್ರಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಿಡುಗಡೆ ಮಾಡಿದೆ.

    ಮಾರ್ಚ್ 3 ರಂದು ಪ್ರಕರಣವನ್ನು ಭಯೋತ್ಪಾದನಾ ನಿಗ್ರಹ ಸಂಸ್ಥೆ ಕೈಗೆತ್ತಿಕೊಂಡಿತು. ಮಾರ್ಚ್ 1 ರಂದು ಬೆಂಗಳೂರಿನ ಜನಪ್ರಿಯ ಹೋಟೆಲ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನ (IED) ಇರಿಸಿದ್ದ ಶಂಕಿತನನ್ನು ಗುರುತಿಸಲು ಸಾರ್ವಜನಿಕರ ಸಹಾಯವನ್ನು ಕೋರಿದೆ. ಇದನ್ನೂ ಓದಿ: ಬಳ್ಳಾರಿ ಬಸ್‌ ನಿಲ್ದಾಣದಲ್ಲಿ ಬಾಂಬರ್ ಓಡಾಟ- NIAಯಿಂದ ಮತ್ತೆರಡು CCTV ದೃಶ್ಯ ಬಿಡುಗಡೆ

    ಕೆಫೆಯಲ್ಲಿ (Bengaluru Cafe Blast) ಸ್ಫೋಟ ಸಂಭವಿಸಿದ ಸುಮಾರು ಒಂದು ಗಂಟೆಯ ನಂತರ ಪ್ರಮುಖ ಶಂಕಿತ ವ್ಯಕ್ತಿ ಬಸ್‌ ಏರುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದಿವೆ. ವೀಡಿಯೊದಲ್ಲಿನ ಟೈಮ್‌ಸ್ಟ್ಯಾಂಪ್ ಮಾರ್ಚ್ 1 ರಂದು ಮಧ್ಯಾಹ್ನ 2:03 ಎಂದು ತೋರಿಸಿದೆ. ಸ್ಫೋಟವು ಅಂದು ಮಧ್ಯಾಹ್ನ 12:56 ಕ್ಕೆ ಸಂಭವಿಸಿದೆ. ಶಂಕಿತ ಉಗ್ರ ಟಿ-ಶರ್ಟ್, ಕ್ಯಾಪ್ ಮತ್ತು ಫೇಸ್ ಮಾಸ್ಕ್ ಧರಿಸಿ ಕೆಫೆಯಲ್ಲಿ ಐಇಡಿ ಹೊಂದಿರುವ ಬ್ಯಾಗ್‌ನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ.

    ಅದೇ ದಿನ ರಾತ್ರಿ 9 ಗಂಟೆ ಸುಮಾರಿಗೆ ಮತ್ತೊಂದು ದೃಶ್ಯಾವಳಿಯಲ್ಲಿ ಶಂಕಿತ ಉಗ್ರ ಬಸ್ ನಿಲ್ದಾಣದೊಳಗೆ ತಿರುಗಾಡುತ್ತಿರುವುದನ್ನು ಗಮನಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಯನ್ನು ಗುರುತಿಸಲು ಮತ್ತು ಬಂಧಿಸಲು ನೆರವಾಗುವ ಯಾವುದೇ ಮಾಹಿತಿಯೊಂದಿಗೆ ಮುಂದೆ ಬರಲು ನಾಗರಿಕರಿಗೆ NIA ಮನವಿ ಮಾಡಿದೆ. ಉಗ್ರನ ಗುರುತು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ತಿಳಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸಾರ್ವಜನಿಕ ಸೇವೆಗೆ ಮುಕ್ತ – ಮಾಲೀಕರು ಹೇಳಿದ್ದೇನು?

    ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಎನ್‌ಐಎ ತನಿಖೆಯಲ್ಲಿ ಸಹಕರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್‌ನ ಬಟ್ಟೆ ವ್ಯಾಪಾರಿ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ದೊಂದಿಗೆ ನಂಟಿರುವ ಕಾರ್ಯಕರ್ತರನ್ನು ಬಂಧಿಸಲಾಗಿದೆ.

    ತನಿಖಾ ತಂಡದ ಪ್ರಕಾರ, ಶಂಕಿತ ಉಗ್ರ ಘಟನೆಯ ನಂತರ ಬಟ್ಟೆ ಬದಲಾಯಿಸಿಕೊಂಡು ತುಮಕೂರು, ಬಳ್ಳಾರಿ, ಬೀದರ್, ಭಟ್ಕಳ ಸೇರಿದಂತೆ ವಿವಿಧ ಸ್ಥಳಗಳಿಗೆ ಬಸ್‌ನಲ್ಲಿ ಪ್ರಯಾಣಿಸಿದ್ದಾನೆ.

  • ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    ನವದೆಹಲಿ: ನಿಷೇಧಿತ ಭಯೋತ್ಪಾದಕ ಐಎಸ್‍ಐಎಸ್‍ನೊಂದಿಗೆ (ISIS) ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ (Uttar Pradesh) ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (Aligarh Muslim University) ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.

    ಬಂಧಿತನನ್ನು ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ (19) ಎಂದು ಗುರುತಿಸಲಾಗಿದೆ. ಈತನ ಮನೆಯನ್ನು ಶೋಧಿಸಿ ಸರಿಯಾದ ಪುರಾವೆಗಳು ಸಿಕ್ಕಿದ ನಂತರ ಬಂಧಿಸಲಾಗಿದೆ. ಫೈಜ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

    ಎರಡು ದಿನಗಳಿಂದ ಜಾಖರ್ಂಡ್‍ನ (Jharkhand) ಲೋಹರ್ಡಗಾ ಜಿಲ್ಲೆಯ ಫೈಜ್ ಮನೆ ಮತ್ತು ಉತ್ತರ ಪ್ರದೇಶದ ಅಲಿಗಢದಲ್ಲಿ ಬಾಡಿಗೆ ಕೊಠಡಿಯಲ್ಲಿ ಶೋಧ ನಡೆಸಲಾಗಿತ್ತು. ಈ ವೇಳೆ ಹಲವಾರು ಎಲೆಕ್ಟ್ರಾನಿಕ್ ಉಪಕರಣಗಳು, ಅನುಮಾನಾಸ್ಪದ ವಸ್ತುಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಬೆಂಬಲಿಸಲು ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ರಚಿಸಿ ಮಾಹಿತಿ ಹಂಚುತ್ತಿದ್ದ. ಅಲ್ಲದೇ ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಯೋಜಿಸಿದ್ದ. ತನಿಖೆ ವೇಳೆ ಆತನ ಜೊತೆ ಹಲವು ಸಹಚರರು ಐಸಿಸ್ ಜೊತೆ ಕೈ ಜೊಡಿಸಿರುವುದು ಬೆಳಕಿಗೆ ಬಂದಿದೆ.

    ಫೈಜ್ ವಿದೇಶಿ ಮೂಲದ ಐಸಿಸ್ ಉಗ್ರರ ಸಂಪರ್ಕದಲ್ಲಿದ್ದಾನೆ. ಉಗ್ರರ ಸೂಚನೆಯಂತೆ ಸಂಘಟನೆಗೆ ಯುವಕರನ್ನು ಸೆಳೆಯವ ಕಾರ್ಯದಲ್ಲಿ ಆರೋಪಿಯ ಪಾತ್ರವಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇದನ್ನೂ ಓದಿ: ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ

    ಪಂಜಾಬ್ ಸ್ಫೋಟ ಪ್ರಕರಣ – ಐವರು ಆರೋಪಿಗಳ ಬಂಧನ

    ಚಂಡೀಗಢ: ಗೋಲ್ಡನ್ ಟೆಂಪಲ್ (Golden Temple) ಬಳಿ ಬುಧವಾರ ತಡರಾತ್ರಿ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ (Punjab) ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಅಮೃತಸರದ (Amritsar) ಹೆರಿಟೇಜ್ ಸ್ಟ್ರೀಟ್ ಬಳಿ ಈ ಸ್ಫೋಟ ಸಂಭವಿಸಿತ್ತು. ಗೋಲ್ಡನ್ ಟೆಂಪಲ್ ಬಳಿ ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿತ್ತು. ಆರೋಪಿಗಳು ಈ ಮೂರು ಪ್ರಕರಣದಲ್ಲೂ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ಲಿ ಪರಿಚಯ – ಮಹಿಳೆಯ ಚಿನ್ನಾಭರಣದೊಂದಿಗೆ ಯುವಕ ಪರಾರಿ

    ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ಮತ್ತು ಪಂಜಾಬ್ ಪೊಲೀಸರು ಘಟನೆ ನಡೆದ ಸ್ಥಳದಿಂದ ಸ್ಫೋಟಕ್ಕೆ ಬಳಸಲಾದ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಮೇಲ್ನೋಟಕ್ಕೆ ತೀವ್ರ ಸ್ಫೋಟಕ ಬಳಸಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೊದಲ ಸ್ಫೋಟ ಮೇ 6 ರಂದು ಮತ್ತು ಎರಡನೆಯ ಸ್ಫೋಟ ಮೇ 8 ರಂದು ಸಂಭವಿಸಿತ್ತು. ಮೇ 6 ರಂದು ನಡೆದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು. ಘಟನೆಯಲ್ಲಿ ಅಕ್ಕಪಕ್ಕದ ಕೆಲವು ಕಟ್ಟಡಗಳ ಕಿಟಕಿ ಗಾಜುಗಳು ಒಡೆದಿದ್ದವು. ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ

  • ಪಿಎಫ್‍ಐ ವಿರುದ್ಧದ ಪ್ರಕರಣ – ತಮಿಳುನಾಡಿನ ಹಲವೆಡೆ ಎನ್‍ಐಎ ದಾಳಿ

    ಪಿಎಫ್‍ಐ ವಿರುದ್ಧದ ಪ್ರಕರಣ – ತಮಿಳುನಾಡಿನ ಹಲವೆಡೆ ಎನ್‍ಐಎ ದಾಳಿ

    ಚೆನೈ: ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‍ಐ (PFI) ವಿರುದ್ಧದ ತನಿಖೆಗೆ ಸಂಬಂಧಿಸಿದಂತೆ ಎನ್‍ಐಎ (NIA) ಮಂಗಳವಾರ ತಮಿಳುನಾಡಿನ (Tamil Nadu) ನಾಲ್ಕು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ, ಚೆನ್ನೈ, ದಿಂಡಿಗಲ್ ಮತ್ತು ಥೇಣಿ ಜಿಲ್ಲೆಗಳ ಆರು ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕಳೆದ ಸೆ. 19 ರಂದು ಪ್ರಕರಣ ದಾಖಲಾದಾಗಿನಿಂದ ಇದುವರೆಗೂ ಪ್ರಕರಣದಲ್ಲಿ 10 ಜನರನ್ನು ಬಂಧಿಸಲಾಗಿದೆ. ಬಂಧಿತರಾಗಿದ್ದ ಆರೋಪಿಗಳು ನೆಲೆಸಿದ್ದ ಸ್ಥಳಗಳಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ವಿಚಾರ- ಸುಪ್ರೀಂನಲ್ಲಿ ಇಂದು ವಿಚಾರಣೆ

    ಬಂಧಿತರಿಂದ ಹಲವಾರು ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅಲ್ಲದೆ ಆರೋಪಿಗಳು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿದ್ದರು. ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದರು. ಅಲ್ಲದೆ ಮಾರಕಾಸ್ತ್ರಗಳ ಬಳಕೆಗೆ ಯುವಕರ ಗುಂಪಿಗೆ ತರಬೇತಿ ನೀಡಿತ್ತಿದ್ದರು ಎಂದು ಎನ್‍ಐಎ ಆರೋಪಿಸಿತ್ತು.

    ವಿವಿಧ ರಾಜ್ಯಗಳ ಪೊಲೀಸರು ಹಾಗೂ ಎನ್‍ಐಎ ನಡೆಸಿದ ತನಿಖೆಗಳಲ್ಲಿ ಪಿಎಫ್‍ಐ ಸಂಘಟನೆ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿತ್ತು. ಇದಾದ ನಂತರ ಕಳೆದ ಸೆಪ್ಟೆಂಬರ್‌ನಲ್ಲಿ ಪಿಎಫ್‍ಐ ಹಾಗೂ ಅದರ ಅನೇಕ ಅಂಗಸಂಸ್ಥೆಗಳನ್ನು ಗೃಹ ಸಚಿವಾಲಯ (Ministry of Home Affairs), ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿತ್ತು. ಇದನ್ನೂ ಓದಿ: ಕರಿ ಜೊತೆಗೆ ಅನ್ನ ಮಾಡಿಲ್ಲ ಅಂತಾ ಪತ್ನಿಯನ್ನ ಹೊಡೆದು ಕೊಂದ ಪಾಪಿ ಗಂಡ

  • ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ವಿಷಕಾರಿದ್ದ ಅಫ್ರಿದಿ ವಿರುದ್ಧ ಅಮಿತ್ ಮಿಶ್ರಾ ಕಿಡಿ

    ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‍ನನ್ನು ಬೆಂಬಲಿಸಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಟ್ವೀಟ್ ಮಾಡಿದ್ದಕ್ಕೆ ಭಾರತೀಯ ಕ್ರಿಕೆಟಿಗ ಅಮಿತ್ ಮಿಶ್ರಾ ಕಿಡಿಕಾರಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರವನ್ನು ಬೆಂಬಲಿಸಿದ್ದಕ್ಕಾಗಿ ಮಲಿಕ್‍ಗೆ ಮರಣದಂಡನೆ ವಿಧಿಸಬೇಕೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬುಧವಾರ ನ್ಯಾಯಾಲಯವನ್ನು ಒತ್ತಾಯಿಸಿತ್ತು. ಇದನ್ನೂ ಓದಿ: ಪುಟಿನ್‌ನೊಂದಿಗೆ ನೇರ ಮಾತುಕತೆಗೆ ನಾನು ಸಿದ್ಧ: ಝೆಲೆನ್ಸ್ಕಿ

    ಈ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿ, ಮಾನವ ಹಕ್ಕುಗಳ ದುರುಪಯೋಗದ ವಿರುದ್ಧ ವಿಮರ್ಶಾತ್ಮಕ ಧ್ವನಿಗಳನ್ನು ಮೌನಗೊಳಿಸಲು ಭಾರತದ ನಿರಂತರ ಪ್ರಯತ್ನಗಳು ನಿಷ್ಪ್ರಯೋಜಕವಾಗಿದೆ. ಯಾಸಿನ್ ಮಲಿಕ್ ವಿರುದ್ಧದ ಆರೋಪಗಳು ಕಾಶ್ಮೀರದ ಸ್ವಾತಂತ್ರ್ಯ ಹೋರಾಟಕ್ಕೆ ಅಡ್ಡಿಯಾಗದಿರಲಿ. ಕಾಶ್ಮೀರಿ ನಾಯಕರ ವಿರುದ್ಧ ಅನ್ಯಾಯ ಮತ್ತು ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ನಿಗಾ ಇಡುವಂತೆ ವಿಶ್ವಸಂಸ್ಥೆಗೆ ಒತ್ತಾಯಿಸುತ್ತೇವೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

    ಇದಕ್ಕೆ ಪ್ರತ್ಯುತ್ತರವಾಗಿ, ಅಮಿತ್ ಮಿಶ್ರಾ ಅವರು ಟ್ವೀಟ್ ಮಾಡಿ, ಆತ್ಮೀಯ ಶಾಹಿದ್ ಅಫ್ರಿದಿ ಅವರೇ ಯಾಸಿನ್ ಮಲಿಕ್ ಸ್ವತಃ ನ್ಯಾಯಾಲಯದ ದಾಖಲೆಯಲ್ಲಿ ತಪ್ಪೋಪ್ಪಿಕೊಂಡಿದ್ದಾನೆ. ನಿಮ್ಮ ಜನ್ಮದಿನಾಂಕದಂತೆ ಎಲ್ಲವೂ ದಾರಿತಪ್ಪಿಸುವುದಿಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ವಿವಿಧ ಪ್ರಕರಣಗಳ ಮೇಲೆ 2017ರಲ್ಲಿ ಮಲಿಕ್ ವಿರುದ್ಧ ದೂರು ದಾಖಲಿಸಿ ಬಂಧಿಸಲಾಗಿತ್ತು. ದೆಹಲಿಯ ತಿಹಾರ್ ಜೈಲಿನಲ್ಲಿ ಭಾರಿ ಭದ್ರತೆಯಲ್ಲಿದ್ದ ಯಾಸಿನ್ ಮಲಿಕ್ ವಿರುದ್ಧ ಯುಎಪಿಎ ಕಾಯ್ದೆಯ ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ), 17 (ಭಯೋತ್ಪಾದನಾ ಚಟುವಟಿಕೆಗೆ ಹಣಕಾಸು ಸಂಗ್ರಹ), 18 (ಭಯೋತ್ಪಾದನಾ ಕೃತ್ಯ ಎಸಗಲು ಸಂಚು) ಮತ್ತು 20 (ಭಯೋತ್ಪಾದನಾ ಸಂಘಟನೆಯ ಸದಸ್ಯನಾಗಿರುವುದು), ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಅಪರಾಧ ಸಂಚು) ಮತ್ತು 124 (ದೇಶದ್ರೋಹ) ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕೋರ್ಟ್ ವಿಚಾರಣೆಯಲ್ಲಿ ಕೃತ್ಯದ ಬಗ್ಗೆ ಯಸಿನ್ ಮಲಿಕ್ ತಪ್ಪೊಪ್ಪಿಕೊಂಡಿದ್ದ. ಎನ್‍ಐಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

  • ಬೆಂಗ್ಳೂರಲ್ಲಿ 7 ಲಕ್ಷ ರೂ. ಅಧಿಕ ಮೌಲ್ಯದ ಮೌಲ್ಯದ ಖೋಟಾನೋಟುಗಳು ಪತ್ತೆ!

    ಬೆಂಗ್ಳೂರಲ್ಲಿ 7 ಲಕ್ಷ ರೂ. ಅಧಿಕ ಮೌಲ್ಯದ ಮೌಲ್ಯದ ಖೋಟಾನೋಟುಗಳು ಪತ್ತೆ!

    ಸಾಂದರ್ಭಿಕ ಚಿತ್ರ

    ಬೆಂಗಳೂರು: ಖಚಿತ ಮಾಹಿತಿ ಮೇರೆಗೆ ಮುಂಬೈನ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ)ಯ ಅಧಿಕಾರಿಗಳು ನಗರದ ಎರಡು ಕಡೆ ದಾಳಿ ನಡೆಸಿ ಸುಮಾರು 7 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಖೋಟಾನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

    ಶ್ರೀರಾಮಪುರ ಹಾಗೂ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಆಲೂರಿನಲ್ಲಿ ಖಚಿತ ಮಾಹಿತಿ ಮೇರೆಗೆ ಮುಂಬೈನ ಎನ್‍ಐಎ ಹಾಗೂ ಸ್ಥಳೀಯ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ದಾಳಿ ಮಾಡಿ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ 2,000 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ಸಾಜಿದ್ ಅಲಿ, ಎಂ.ಜಿ. ರಾಜು ಹಾಗೂ ಗಂಗಾಧರ್ ಕೋಲ್ಕರ್ ಬಂಧಿತ ಆರೋಪಿಗಳಾಗಿದ್ದು, ಇವರು ಬಾಂಗ್ಲಾದೇಶದಿಂದ ಕಳ್ಳಸಾಗಣೆ ಮೂಲಕ ನಕಲಿ ನೋಟುಗಳನ್ನು ತಮ್ಮ ನಿವಾಸಗಳಲ್ಲಿ ಶೇಖರಿಸಿಟ್ಟುಕೊಂಡಿದ್ದರು ಎಂದು ಎನ್‍ಐಎ ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಸಂಬಂಧ ಶ್ರೀರಾಮಪುರ ಹಾಗೂ ಮಾನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews