Tag: National Law School

  • ನ್ಯಾಷನಲ್ ಲಾ ಸ್ಕೂಲ್‌ನಲ್ಲೂ ನಾನು ಪಾಸಾಗಿದ್ದೇನೆ – ಪ್ರಿಯಾಂಕ್ ಖರ್ಗೆ ತಿರುಗೇಟು

    ನ್ಯಾಷನಲ್ ಲಾ ಸ್ಕೂಲ್‌ನಲ್ಲೂ ನಾನು ಪಾಸಾಗಿದ್ದೇನೆ – ಪ್ರಿಯಾಂಕ್ ಖರ್ಗೆ ತಿರುಗೇಟು

    ಕಲಬುರಗಿ: ನನ್ನ ವಿದ್ಯಾರ್ಹತೆ ನನ್ನ ಅಫಿಡವಿಟ್‌ನಲ್ಲೇ ಇದೆ, ಅದನ್ನ ನೋಡಿಕೊಳ್ಳಲಿ. ನ್ಯಾಷನಲ್ ಲಾ ಸ್ಕೂಲ್‌ನಲ್ಲೂ (National Law School) ನಾನು ಪಾಸಾಗಿದ್ದೇನೆ. ಬೇಕಿದ್ರೆ ಹೋಗಿ ನೋಡಿಕೊಳ್ಳಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿರುಗೇಟು ನೀಡಿದ್ದಾರೆ.

    ʻʻಪಿಯುಸಿ ಫೇಲ್ ಆದ ಪ್ರಿಯಾಂಕ್ ಖರ್ಗೆ ಎಂಜಿನಿಯರ್ ಸೂಲಿಬೆಲೆ ಪದವಿ ಬಗ್ಗೆ ಕೇಳ್ತಾರೆʼʼ ಎಂಬ ಶಾಸಕ ಭರತ್ ಶೆಟ್ಟಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನನ್ನ ವಿದ್ಯಾರ್ಹತೆ ನನ್ನ ಅಫಿಡವಿಟ್‌ನಲ್ಲೇ ಇದೆ, ಅದನ್ನ ನೋಡಿಕೊಳ್ಳೋಕೆ ಹೇಳಿ. ನಾನು ಮಾಡಿದ ವಿದ್ಯಾಭ್ಯಾಸ ಇವ್ರಿಗೆ ತಿಳಿಯದೇ ಇರಬಹುದು. ಅದಕ್ಕೆಲ್ಲ ಉತ್ತರ ಕೊಡೋದಕ್ಕೆ ಆಗಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ವಿದ್ಯುತ್ ಬಿಲ್ ನಾವೇ ಕಟ್ಟುತ್ತೇವೆ: ಬೈರತಿ ಸುರೇಶ್

    ಅವರಿಗೆಲ್ಲಾ ನನ್ನ ಬಗ್ಗೆ ತುಂಬಾ ಕಾಳಜಿಯಿದೆ. ಮೊದಲು ತಮ್ಮ ಪಕ್ಷದ ಸುಪ್ರೀಂ ಲೀಡರ್ ಇದ್ದಾರಲ್ಲ ಅವರ ಅರ್ಹತೆ ಏನಿದೆ? ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಹೇಳಿ. ಯಾರಾದ್ರೂ ಪ್ರಧಾನ ಮಂತ್ರಿಗಳ ಡಿಗ್ರಿ ತಿಳಿದುಕೊಳ್ಳೋಕೆ ಹೋದ್ರೆ, ಆರ್‌ಟಿಐ ನಲ್ಲಿ ಮಾಹಿತಿ ಕೊಡಬೇಡಿ ಅಂತಾ ಹೇಳಿಬಿಟ್ಟಿದ್ದಾರೆ ಎಂದು ಹೆಸರು ಹೇಳದೆ ಪ್ರಧಾನಿ ಮೋದಿ (Narendra Modi) ಅವರನ್ನು ಟೀಕಿಸಿದ ಪ್ರಿಯಾಂಕ್ ಖರ್ಗೆ, ಅದಕ್ಕಾಗಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಕೇಸ್ ಹಾಕಿದ್ದಾರೆ. ಫಸ್ಟ್ ಅದಕ್ಕೆಲ್ಲಾ ಉತ್ತರ ಕೊಡಲಿ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಉಚಿತ ಬಸ್‌ ಪ್ರಯಾಣದ ಮೊದಲ ಟಿಕೆಟ್‌ ಪಡೆದ ಅದೃಷ್ಟಶಾಲಿ ಮಹಿಳೆ ಇವರೇ..! 

  • ನಿಷೇಧಿತ ತಂಬಾಕುಗಳ ಜಾಹಿರಾತಿಗೆ ಸಾಮಾಜಿಕ ಜಾಲತಾಣವೇ ವೇದಿಕೆ

    ನಿಷೇಧಿತ ತಂಬಾಕುಗಳ ಜಾಹಿರಾತಿಗೆ ಸಾಮಾಜಿಕ ಜಾಲತಾಣವೇ ವೇದಿಕೆ

    ಬೆಂಗಳೂರು: ತಂಬಾಕು ಸೇವನೆ ಹಾಗೂ ಜಾಹೀರಾತಿಗೆ ಕಡಿವಾಣವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ತಂಬಾಕು ಸೇವನೆ ಹಾಗೂ ಮಾರಾಟದ ಬಗ್ಗೆ ರಾಜರೋಷವಾಗಿ ಜಾಹೀರಾತು ನೀಡಲಾಗುತ್ತಿದೆ ಎಂದು ನ್ಯಾಷನಲ್ ಲಾ ಸ್ಕೂಲ್ ಹಾಗೂ ಕನ್ಸೂಮರ್ ಲಾ ಆಂಡ್ ಪ್ರಾಕ್ಟೀಸಸ್ ಸಹಯೋಹದಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

    2019ರಲ್ಲಿ ಎಲೆಕ್ಟ್ರಾನಿಕ್ ನಿಕೋಟಿನ್ ಡೆಲಿವೆರಿ ಸಿಸ್ಟಮ್ಸ್ (ಇಎನ್‍ಡಿಎಸ್) ಮತ್ತು ಹೀಟೆಡ್ ತಂಬಾಕು ಪದಾರ್ಥ ಇವುಗಳ ಮೇಲೆ ಕೇಂದ್ರ ಸರ್ಕಾರ ಕಾನೂನಾತ್ಮಕವಾಗಿ ನಿಷೇಧ ಹೇರಿದೆ. ಈ ಬಗ್ಗೆ ಎಲ್ಲಿಯೂ ಜಾಹೀರಾತು ನೀಡುವಂತಿಲ್ಲ. ಆದರೆ ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್, ಟ್ವಿಟ್ಟರ್, ಇನ್‍ಸ್ಟಾಗ್ರಾಮ್, ಟೆಲಿಗ್ರಾಮ್‍ಗಳಲ್ಲಿ ಜಾಹಿರಾತು ನೀಡಲಾಗುತ್ತಿದೆ ಎನ್ನುವುದು ಸಮೀಕ್ಷೆ ಮೂಲಕ ತಿಳಿದು ಬಂದಿದೆ. ಇದನ್ನೂ ಓದಿ : ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಅಪ್ಡೇಟ್ : ಯಾವಾಗ, ಏನು ಅಂತ ನೋಡ್ಕೊಂಡ್ ಬಿಡಿ

    ನ್ಯಾಷನಲ್ ಲಾ ಸ್ಕೂಲ್ ಇಂಡಿಯಾ ಆನ್‍ಲೈನ್ ಮೂಲಕ ಈ ಸಮೀಕ್ಷೆ ನಡೆಸಲಾಗಿದೆ. ಒಟ್ಟು 23 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು, ವಿದ್ಯಾರ್ಥಿಗಳ ಬಾರ್ ಅಸೋಸಿಯೇಷನ್‍ನ ಒಟ್ಟು 4,049 ವಿದ್ಯಾರ್ಥಿಗಳನ್ನು ಈ ಸಮೀಕ್ಷೆಯಲ್ಲಿ ಒಳಪಡಿಸಲಾಗಿತ್ತು.

    ಶೇ.46 ರಷ್ಟು ಪುರುಷರು ಹಾಗೂ ಶೇ.51 ರಷ್ಟು ಮಹಿಳೆಯರು ಈ ಅಧ್ಯಯನದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಮೀಕ್ಷೆ ಪ್ರಕಾರ ಶೇ. 38.1 ರಷ್ಟು ಕರ್ನಾಟಕದಲ್ಲಿ ನಿಷೇಧಿತ ತಂಬಾಕು ಸೇವನೆ ಮಾರಾಟದಲ್ಲಿದ್ದು, ಕರ್ನಾಟಕವೇ ಮುಂಚೂಣಿ ರಾಜ್ಯವಾಗಿದೆ. ಮಹಾರಾಷ್ಟ್ರ ಶೇ.12.4, ತಮಿಳುನಾಡು ಶೇ.9.3, ಉತ್ತರ ಪ್ರದೇಶ ಶೇ.6.7 ಹಾಗೂ ಕೇರಳ ಶೇ.6.5 ರಷ್ಟು ಪ್ರಮಾಣದಲ್ಲಿ ಚಾಲ್ತಿಯಲ್ಲಿವೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಿಲ್ಲಲ್ಲ: ಮೋದಿ

    ಅಧ್ಯಯನದ ಕುರಿತು ಮಾತನಾಡಿದ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಪ್ರೋಫೆಸರ್. ಅಶೋಕ್ ಪಾಟೀಲ್, ಭಾರತದಲ್ಲಿ ಇ-ಸಿಗರೇಟುಗಳನ್ನು ಎಲೆಕ್ಟ್ರಾನಿಕ್ ಪ್ಲಾಟ್‍ಫಾರಂಗಳ ಮೂಲಕ ಹೆಚ್ಚಿನ ಜಾಹಿರಾತಿಗೆ ಅವಕಾಶ ಸಿಕ್ಕಿದೆ. ನಿಷೇಧಿತ ಇ-ಸಿಗರೇಟು ಹೆಚ್ಚಾಗಿ ಟೆಲಿಗ್ರಾಂನಲ್ಲಿ ಜಾಹಿರಾತು ನೀಡಲಾಗುತ್ತಿದೆ ಎಂದು ಶೇ.60ರಷ್ಟು ಮಂದಿ ಹೇಳಿದ್ದಾರೆ ಎಂದು ತಿಳಿಸಿದರು.

    ಉಳಿದಂತೆ ವಾಟ್ಸಪ್‍ನಲ್ಲಿ ಶೇ.22.6, ಫೇಸ್‍ಬುಕ್‍ನಲ್ಲಿ ಶೇ.17.3, ಟಿಕ್‍ಟಾಕ್‍ನಲ್ಲಿ ಶೇ.14.3 ಹಾಗೂ ಟ್ವಿಟ್ಟರ್‍ನಲ್ಲಿ ಶೇ.6.8 ರಷ್ಟು ಜಾಹಿರಾತು ಕಂಡಿರುವುದಾಗಿ ಸಮೀಕ್ಷೆಗೆ ಒಳಪಟ್ಟವರು ಅಭಿಪ್ರಾಯ ಪಟ್ಟಿದ್ದಾರೆ ಎಂದರು. ಸರ್ಕಾರವೂ ನಿಷೇಧದ ಬಳಿಕ ಯುವ ಜನತೆಯನ್ನು ದಾರಿ ತಪ್ಪಿಸಲು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡುವವರ ವಿರುದ್ಧ ಹದ್ದಿನ ಕಣ್ಣಿಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.