Tag: National Unity Day

  • ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

    ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿ: ಮೋದಿ

    – ಏಕತಾ ದಿನದಂದು ಪ್ರಧಾನಿ ಭಾಷಣ

    ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ, ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

    ಗುಜರಾತ್‌ನ (Gujarat) ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು. ರಾಷ್ಟ್ರೀಯ ಏಕತೆಗೆ ಕರೆ ನೀಡಿದ ಪ್ರಧಾನಿ ಮೋದಿ, ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ಅದರ ಮೌಲ್ಯವನ್ನು ಒತ್ತಿ ಹೇಳಿದರು.ಇದನ್ನೂ ಓದಿ: ಮಗನನ್ನು ನೋಡಲು ವಿಜಯಲಕ್ಷ್ಮಿ ಮನೆಗೆ ಆಗಮಿಸಿದ ಮೀನಾ ತೂಗುದೀಪ

    ಬಳಿಕ ಮಾತನಾಡುತ್ತಾ, ರಾಷ್ಟ್ರೀಯ ಏಕತಾ ದಿವಸ್ ಹಾಗೂ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಪ್ರಪಂಚದ ಹಲವಾರು ದೇಶಗಳಲ್ಲಿ ದೀಪಾವಳಿ ಆಚರಿಸಲಾಗುತ್ತಿದೆ. ಈ ಹಬ್ಬವು ಭಾರತವನ್ನು ಇಡೀ ವಿಶ್ವದೊಂದಿಗೆ ಜೋಡಿಸಿದೆ. ದೇಶಗಳಲ್ಲಿ ಇದನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಏಕತಾ ದಿವಸ್ ಆಚರಣೆ ಮಾಡುತ್ತಿರುವುದು ವಿಶಿಷ್ಟ ಸಂಗತಿ ಎಂದು ಶ್ಲಾಘಿಸಿದರು.

    ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಯನ್ನು ಈಗಾಗಲೇ ಈ ವರ್ಷದ ಆರಂಭದಲ್ಲಿ ಕ್ಯಾಬಿನೆಟ್‌ನಲ್ಲಿ ಅಂಗೀಕರಿಸಲಾಗಿದ್ದು, ಮುಂದಿನ ವರ್ಷದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಸದ್ಯ ನಾವು ಇದಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಇದು ದೇಶದ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಜೊತೆಗೆ ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ಸಾಧಿಸುವಲ್ಲಿ ಸಹಕಾರಿಯಗುತ್ತದೆ ಎಂದರು.

    2019ರಲ್ಲಿ ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ್ದ ಪ್ರಧಾನಿ, ಇದೀಗ ಅದನ್ನು ಶಾಶ್ವತವಾಗಿ ಸಮಾಧಿ ಮಾಡಲಾಗಿದೆ. ಭಾರತಕ್ಕೆ ಸ್ವಾತಂತ್ರ‍್ಯ ಬಂದು 70 ವರ್ಷಗಳ ನಂತರ ದೇಶದಲ್ಲಿ ಒಂದೇ ಸಂವಿಧಾನ ಎಂಬ ಸಂಕಲ್ಪ ಈಡೇರಿದೆ ಎಂದರು.ಇದನ್ನೂ ಓದಿ: ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ – ಡಿಕೆಶಿ ಸ್ಪಷ್ಟನೆ

  • ಮೊದಲು ನಗರ ನಕ್ಸಲರ ವಿರುದ್ಧ ಹೋರಾಡಬೇಕು – ವಿಪಕ್ಷಗಳ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ

    ಮೊದಲು ನಗರ ನಕ್ಸಲರ ವಿರುದ್ಧ ಹೋರಾಡಬೇಕು – ವಿಪಕ್ಷಗಳ ವಿರುದ್ಧ ಮೋದಿ ಪರೋಕ್ಷ ವಾಗ್ದಾಳಿ

    – ಜಾತಿ, ಸಮುದಾಯಗಳ ಹೆಸರಿನಲ್ಲಿ ದೇಶ ಒಡೆಯುತ್ತಿದ್ದಾರೆ ಎಂದ ಪ್ರಧಾನಿ

    ನವದೆಹಲಿ: ಭಾರತದ ಒಳಗೆ ಮತ್ತು ಹೊರಗೆ, ಕೆಲವು ಶಕ್ತಿಗಳು ತಮ್ಮ ರಾಜಕೀಯ ಉದ್ದೇಶಕ್ಕಾಗಿ ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿವೆ. ಆದ್ದರಿಂದ ನಾವು ನಗರ ನಕ್ಸಲರನ್ನು (Urban Naxals) ಗುರುತಿಸಿ, ಅವರ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆ ನೀಡಿದರು.

    ಗುಜರಾತ್‌ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್‌ (National Unity Day) ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು. ರಾಷ್ಟ್ರೀಯ ಏಕತೆಗೆ ಕರೆ ನೀಡಿದ ಪ್ರಧಾನಿ ಮೋದಿ, ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವಲ್ಲಿ ಅದರ ಮೌಲ್ಯವನ್ನು ಒತ್ತಿ ಹೇಳಿದರು. ಇದನ್ನೂ ಓದಿ: 2 ದಿನಗಳಿಂದ ನಾಪತ್ತೆಯಾಗಿದ್ದ 50ರ ಮಹಿಳೆಯ ಮೃತದೇಹ 6 ತುಂಡುಗಳಾಗಿ ಪತ್ತೆ

    ಬಳಿಕ ಮಾತನಾಡುತ್ತಾ, ʻರಾಷ್ಟ್ರೀಯ ಏಕತಾ ದಿವಸ್’ ಹಾಗೂ ದೀಪಾವಳಿ ಹಬ್ಬದ (Deepavali Festival) ಶುಭಾಶಯ ಕೋರಿದರು. ಪ್ರಪಂಚದ ಹಲವಾರು ದೇಶಗಳಲ್ಲಿ ದೀಪಾವಳಿ ಆಚರಿಸಲಾಗುತ್ತಿದೆ. ಈ ಹಬ್ಬವು ಭಾರತವನ್ನು ಇಡೀ ವಿಶ್ವದೊಂದಿಗೆ ಜೋಡಿಸಿದೆ. ದೇಶಗಳಲ್ಲಿ ಇದನ್ನು ರಾಷ್ಟ್ರೀಯ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಹೊತ್ತಿನಲ್ಲೇ ಏಕತಾ ದಿವಸ್‌ ಆಚರಣೆ ಮಾಡುತ್ತಿರುವುದು ವಿಶಿಷ್ಟ ಸಂಗತಿ ಎಂದು ಶ್ಲಾಘಿಸಿದರು.

    ವಿಕ್ಷಗಳ ವಿರುದ್ಧ ಕೆಂಡಾಮಂಡಲ:
    ಇದೇ ವೇಳೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಮಾತನಾಡಿದ ಮೋದಿ, ಕೆಲವು ಶಕ್ತಿಗಳಿಂದ ಭಾರತದ ಒಳಗೆ ಮತ್ತು ಹೊರಗೆ ತೊಂದರೆಯಾಗಿದೆ. ಜಾಗತಿಕ ವೇದಿಕೆಯಲ್ಲಿ ಭಾರತದ ಘನತೆಗೆ ಹಾನಿ ಮಾಡುವುದು ಸೇರಿದಂತೆ ದೇಶದಲ್ಲಿ ಅವ್ಯವಸ್ಥೆ ಮತ್ತು ಅಸ್ಥಿರತೆ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ತಿವಿದರು.

    ಭಾರತದ ಆರ್ಥಿಕ ಹಿತಾಸಕ್ತಿಗಳಿಗೆ ಹಾನಿ ಮಾಡುವತ್ತ ಕೆಲ ಶಕ್ತಿಗಳು ಗಮನಹರಿಸಿವೆ. ಅಲ್ಲದೇ ವಿಶ್ವದಾದ್ಯಂತ ಭಾರತದ ಬಗ್ಗೆ ತಪ್ಪು ಸಂದೇಶ ಹರಡಲು ಬಯಸುತ್ತಿದ್ದಾರೆ. ಸಶಸ್ತ್ರ ಪಡೆಗಳಲ್ಲಿ ಪ್ರತ್ಯೇಕತಾವಾದವನ್ನು ಪ್ರಚೋದಿಸುವ ಗುರಿ ಹೊಂದಿದ್ದಾರೆ. ಜೊತೆಗೆ ಜಾತಿ, ಸಮುದಾಯಗಳ ಹೆಸರಿನಲ್ಲಿ ದೇಶವನ್ನು ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ. ಭಾರತೀಯ ಸಮಾಜ ಮತ್ತು ಅದರ ಏಕತೆಯನ್ನು ದುರ್ಬಲಗೊಳಿಸುವುದು ಅವರ ಏಕೈಕ ಉದ್ದೇಶವಾಗಿದೆ ಎಂದು ಕಿಡಿಕಾರಿದರು.

    ಮುಂದುವರಿದು, ಭಾರತ ಅಭಿವೃದ್ಧಿ ಹೊಂದುವುದನ್ನು ಅವರು ಎಂದಿಗೂ ಬಯಸುವುದಿಲ್ಲ. ಏಕೆಂದರೆ ʻಬಡ ಭಾರತ, ದುರ್ಬಲ ಭಾರತʼದ ರಾಜಕೀಯ ಅವರಿಗೆ ಸರಿಹೊಂದುತ್ತದೆ. ಹಾಗಾಗಿ ಅವರು ಸಂವಿಧಾನದ ಹೆಸರಿನಲ್ಲಿ ಭಾರತ ದೇಶವನ್ನ ಒಡೆಯುತ್ತಿದ್ದಾರೆ. ನಾವು ಈ ನಗರ ನಕ್ಸಲರ ಮೈತ್ರಿಯನ್ನು ಗುರುತಿಸಿ ಅವರ ವಿರುದ್ಧ ಹೋರಾಡಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಆರ್‌.ಆರ್‌ ನಗರ ದರ್ಶನ್ ನಿವಾಸದ ಬಳಿ ಪೊಲೀಸರ ಬಿಗಿ ಭದ್ರತೆ – ನಾಳೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ

    ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ:
    ಹಿಂದಿನ ಕಾಂಗ್ರೆಸ್‌ ಸರ್ಕಾರದ ನೀತಿಗಳು ದೇಶದಲ್ಲಿ ಏಕೆತೆಯ ಭಾವನೆಯನ್ನು ದುರ್ಬಲಗೊಳಿಸಿದೆ. ಆದ್ರೆ ನಮ್ಮ ಸರ್ಕಾರ ಕಳೆದ 10 ವರ್ಷಗಳಲ್ಲಿ, ಉತ್ತಮ ಆಡಳಿತದ ಹೊಸ ಮಾದರಿಯು ದೇಶದಲ್ಲಿ ತಾರತಮ್ಯದ ಸಾಧ್ಯತೆಯನ್ನು ಕೊನೆಗೊಳಿಸಿದೆ. ಏಕೆಂದರೆ ನಾವು ʻಸಬ್ಕಾ ಸಾಥ್ ಸಬ್ಕಾ ವಿಕಾಸ್ʼ ತತ್ವದಲ್ಲಿ ನಂಬಿಕೆ ಹೊಂದಿದ್ದೇವೆ ಎಂದು ಪ್ರಧಾನಿ ಹೇಳಿದರು. ಇದನ್ನೂ ಓದಿ: ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ – 2 ಕೋಟಿಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಮುಂಬೈನಲ್ಲಿ ಅರೆಸ್ಟ್‌

  • ವಿಧಾನಸೌಧದಲ್ಲಿ ‘ರಾಷ್ಟ್ರೀಯ ಏಕತಾ ದಿವಸ’ ಆಚರಣೆ

    ವಿಧಾನಸೌಧದಲ್ಲಿ ‘ರಾಷ್ಟ್ರೀಯ ಏಕತಾ ದಿವಸ’ ಆಚರಣೆ

    ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ‘ರಾಷ್ಟ್ರೀಯ ಏಕತಾ ದಿವಸ’ ಆಚರಣೆಯು ಇಂದು ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334 ರಲ್ಲಿ ನಡೆಯಿತು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು “ಸರ್ದಾರ್ ವಲ್ಲಭಭಾಯಿ ಪಟೇಲ್” ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ “ರಾಷ್ಟ್ರೀಯ ಏಕತಾ ದಿವಸ”ದ ಪ್ರತಿಜ್ಞಾ ವಿಧಿ ಬೋಧಿಸಿದರು. ದನ್ನೂ ಓದಿ: ನನಗೆ ಇಂಡಸ್ಟ್ರಿಯಲ್ಲಿ ಮೊದಲು ಕರೆ ಮಾಡಿದ ಸ್ಟಾರ್ ನಟ ಪುನೀತ್: ವಸಿಷ್ಠ ಸಿಂಹ

    ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾಶರ್ಮ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು. ದನ್ನೂ ಓದಿ: ಪುನೀತ್ ಅಂತ್ಯಕ್ರಿಯೆಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸಿಎಂ ಧನ್ಯವಾದ

  • ರಾಷ್ಟ್ರೀಯ ಏಕತಾ ದಿನ- ಮಂಗಳೂರಿಗೆ ಆಗಮಿಸಿದ ಸೈಕಲ್ ರ್‍ಯಾಲಿ

    ರಾಷ್ಟ್ರೀಯ ಏಕತಾ ದಿನ- ಮಂಗಳೂರಿಗೆ ಆಗಮಿಸಿದ ಸೈಕಲ್ ರ್‍ಯಾಲಿ

    ಮಂಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ಅಂಗವಾಗಿ ಅಕ್ಟೋಬರ್ 31ರಂದು ಆಚರಿಸಲಾಗುತ್ತಿರುವ ರಾಷ್ಟ್ರೀಯ ಏಕತಾ ದಿನದ ಹಿನ್ನಲೆಯಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಸೈಕಲ್ ರ್‍ಯಾಲಿ ನಡೆಸಲಾಗುತ್ತಿದೆ.

    ಕೇರಳದ ತಿರುವನಂತಪುರಂದಿಂದ ಆರಂಭಗೊಂಡ ಈ ಸೈಕಲ್ ಯಾತ್ರೆ ಗುಜರಾತ್ ಗೆ ತಲುಪಲಿದೆ. ಈ ಯಾತ್ರೆ ಸಾಗುವ ಹಾದಿಯಾದ ಮಂಗಳೂರಿನ ನವಬಂದರಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯ ಹಾಗೂ ಸಿಐಎಸ್‍ಎಫ್ ನ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿದರು. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಶ್ರೀ ರಾಮಾಯಣ ದರ್ಶನಂ, ಪರ್ವ ಕಾದಂಬರಿ ನೀಡಿದ ಸುನಿಲ್ ಕುಮಾರ್

    ಸಿಐಎಸ್‍ಎಫ್ ನ ಡೆಪ್ಯೂಟಿ ಕಮಾಂಡೆಂಟ್ ಅಶುತೋಷ್ ಗೌರ್, ಎನ್.ಎಮ್.ಪಿ.ಟಿಯ ಡೆಪ್ಯೂಟಿ ಕಮಾಂಡೆಂಟ್ ಬಿಕ್ರಮ್ ಸೇರಿದಂತೆ ಸಿಐಎಸ್‍ಎಫ್ ನ ಮತ್ತು ಎನ್.ಎಮ್.ಪಿ.ಟಿ ಯ ಸಿಬ್ಬಂದಿ ಈ ವೇಳೆ ಉಪಸ್ಥಿತರಿದ್ದರು.