Tag: Nationalist Congress Party

  • ಅಜಿತ್‌ ಪವಾರ್‌ ನೇತೃತ್ವದ NCP ನಿಜವಾದ ಪಕ್ಷ: ಚುನಾವಣಾ ಆಯೋಗ

    ಅಜಿತ್‌ ಪವಾರ್‌ ನೇತೃತ್ವದ NCP ನಿಜವಾದ ಪಕ್ಷ: ಚುನಾವಣಾ ಆಯೋಗ

    – ಶರದ್‌ ಪವಾರ್‌ಗೆ ಬಿಗ್‌ ಶಾಕ್‌!

    ನವದೆಹಲಿ: ಅಜಿತ್‌ ಪವಾರ್‌ (Ajit Pawar) ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್‌ ಪಕ್ಷ (NCP)ದ ಬಣವನ್ನು ನಿಜವಾದ ಪಕ್ಷ ಎಂದು ಚುನಾವಣಾ ಆಯೋಗ ತಿಳಿಸಿದೆ.

    ಚುನಾವಣಾ ಆಯೋಗದ (Election Commission) ನಿರ್ಧಾರದಿಂದ ಎನ್‌ಸಿಪಿ ನಾಯಕ ಶರದ್‌ ಪವಾರ್‌ಗೆ ಹಿನ್ನಡೆಯಾಗಿದೆ. ಅಜಿತ್ ಪವಾರ್ ಬಣವು ವಿಧಾನಸಭೆಯಲ್ಲಿ ಹೆಚ್ಚಿನ ಶಾಸಕರನ್ನು ಹೊಂದಿದೆ. ಅವರಿಗೆ ಪಕ್ಷ ಮತ್ತು ಅದರ ಚಿಹ್ನೆಯನ್ನು ನೀಡಲು ನಿರ್ಧರಿಸಿದೆ ಆಯೋಗ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಮಸ್ಯೆ ಏನು ಅಂತ ಅರ್ಥವಾಗ್ತಿಲ್ಲ: ‘ನಾಯಿ ಬಿಸ್ಕೆಟ್‌’ ಟೀಕೆಗೆ ರಾಹುಲ್‌ ಗಾಂಧಿ ಕಿಡಿ

    ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಬಣಕ್ಕೆ ಹೆಸರನ್ನು ಆಯ್ಕೆ ಮಾಡಲು ಶರದ್ ಪವಾರ್ (Sharad Pawar) ಅವರನ್ನು ಕೇಳಲಾಗಿದೆ. ಫೆಬ್ರವರಿ 7 ರಂದು ಮಧ್ಯಾಹ್ನ 3 ಗಂಟೆಯೊಳಗೆ ತಮ್ಮ ಬಣದ ಹೆಸರು ಮತ್ತು ಚಿಹ್ನೆಯನ್ನು ಚುನಾವಣಾ ಆಯೋಗಕ್ಕೆ ತಿಳಿಸಲು ಸೂಚಿಸಲಾಗಿದೆ.

    ಎನ್‌ಸಿಪಿಯ 53 ಶಾಸಕರ ಪೈಕಿ ಶರದ್‌ ಪವಾರ್‌ ಬಣದಲ್ಲಿ ಈಗ ಉಳಿದಿರುವುದು ಕೇವಲ 12 ಶಾಸಕರು ಮಾತ್ರ. 41 ಶಾಸಕರು ಅಜಿತ್ ಪವಾರ್ ಅವರೊಂದಿಗೆ ಇದ್ದಾರೆ. ಅಜಿತ್‌ ಪವಾರ್‌, ಬಿಜೆಪಿ-ಏಕನಾಥ್ ಶಿಂಧೆ ಮೈತ್ರಿಯೊಂದಿಗೆ ಕೈಜೋಡಿಸಿ ತನ್ನ ಚಿಕ್ಕಪ್ಪನಿಂದ (ಶರದ್‌ ಪವಾರ್) ರಾಜಕೀಯವಾಗಿ ದೂರವಾಗಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

    ಎನ್‌ಸಿಪಿ ಸ್ಥಾಪಿಸಿದವರು ಯಾರು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಚುನಾವಣಾ ಆಯೋಗದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಶರದ್ ಪವಾರ್ ಬಣದ ಹಿರಿಯ ನಾಯಕ ಅನಿಲ್ ದೇಶಮುಖ್ ಅಸಮಾಧಾನ ಹೊರಹಾಕಿದ್ದಾರೆ.

  • ರಾಮ ಮಾಂಸಹಾರಿಯಲ್ಲ, ವನವಾಸದಲ್ಲಿ ಹಣ್ಣುಗಳನ್ನು ಸ್ವೀಕರಿಸುತ್ತಿದ್ದ: ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

    ರಾಮ ಮಾಂಸಹಾರಿಯಲ್ಲ, ವನವಾಸದಲ್ಲಿ ಹಣ್ಣುಗಳನ್ನು ಸ್ವೀಕರಿಸುತ್ತಿದ್ದ: ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

    ಅಯೋಧ್ಯೆ: ವನವಾಸದಲ್ಲಿ ಶ್ರೀರಾಮ ಮಾಂಸಹಾರ ಸೇವಿಸುತ್ತಿದ್ದ ಎಂಬ ವಿಚಾರ ಸಂಪೂರ್ಣ ಸತ್ಯಕ್ಕೆ ದೂರವಾದದ್ದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಹೇಳಿದ್ದಾರೆ.

    ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (Nationalist Congress Party) ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ಅವರು ಭಗವಾನ್ ರಾಮನ ಕುರಿತು ನೀಡಿದ್ದ ಹೇಳಿಕೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಜಿತೇಂದ್ರ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಚಾರ್ಯರು, ಅವರ ಮಾತನಾಡುತ್ತಿರುವುದು ಸಂಪೂರ್ಣ ಸುಳ್ಳು, ಭಗವಾನ್ ರಾಮನು ವನವಾಸದ ಸಮಯದಲ್ಲಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಾನೆ ಎಂದು ನಮ್ಮ ಧರ್ಮಗ್ರಂಥಗಳಲ್ಲಿ ಎಲ್ಲಿಯೂ ಬರೆದಿಲ್ಲ. ಅವರು ಹಣ್ಣುಗಳನ್ನು ಸ್ವೀಕರಿಸುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

    ನಮ್ಮ ದೇವರು ಯಾವಾಗಲೂ ಸಸ್ಯಾಹಾರಿ. ಅವರು ನಮ್ಮ ಭಗವಾನ್ ರಾಮನನ್ನು ಅವಮಾನಿಸಲು ಕೀಳುಮಟ್ಟದ ಮಾತನಾಡುತ್ತಿದ್ದಾರೆ ಎಂದು ಆಚಾರ್ಯರು ಹೇಳಿದ್ದಾರೆ.

    ಜಿತೇಂದ್ರ ಅವ್ಹಾದ್ ಅವರು, ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ಕಾರ್ಯಕ್ರಮ ಒಂದರಲ್ಲಿ ಹೇಳಿದ್ದರು.

    ಜಿತೇಂದ್ರ ಅವದ್ ನೀಡಿರುವ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವಹೇಳನಕಾರಿ ಮತ್ತು ರಾಮ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ರಾಮನ ಬಗ್ಗೆ ಕೆಟ್ಟದಾಗಿ ಮಾತನಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ಸರ್ಕಾರಕ್ಕೆ ಅನೇಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯಂದು ಪಿಂಕ್‌ ಸಿಟಿ ಜೈಪುರದಲ್ಲಿ ಮಾಂಸ, ಮದ್ಯದಂಗಡಿ ಬಂದ್‌

  • ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ಮೋದಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ: ರಾಮದಾಸ್ ಅಠವಳೆ

    ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ಮೋದಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ: ರಾಮದಾಸ್ ಅಠವಳೆ

    ನವದೆಹಲಿ: ಶಿವಸೇನೆ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಮತ್ತು ಇತರ ಪಕ್ಷಗಳು ಸೇರಿ ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಸರ್ಕಾರದಿಂದ ಜನರು ಸಂತೋಷವಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ತೃತೀಯ ರಂಗ ರಚಿಸಿದರೂ ಯಾವುದೇ ಅಪಾಯವಿಲ್ಲ ಎಂದ ಅವರು, 2024ರ ರಾಷ್ಟ್ರೀಯ ಚುನಾವಣೆ ಮತ್ತು ಐದು ರಾಜ್ಯಗಳಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಟಿಆರ್‌ಎಸ್ ಮುಖ್ಯಸ್ಥರಾಗಿರುವ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾನುವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು.

    ಶಿವಸೇನಾ ಸಂಸದ ಮತ್ತು ಪಕ್ಷದ ಮುಖ್ಯ ವಕ್ತಾರ ಸಂಜಯ್ ರಾವತ್ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದು, ನಂತರದ ದಿನದಲ್ಲಿ ಚಂದ್ರಶೇಖರ್ ರಾವ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ನೊಂದಿಗೆ ಅಧಿಕಾರವನ್ನು ಹಂಚಿಕೊಂಡಿರುವ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ. ಇದನ್ನೂ ಓದಿ: ಉದ್ಧವ್ ಠಾಕ್ರೆಯನ್ನು ಭೇಟಿಯಾದ ತೆಲಂಗಾಣ CM ಕೆಸಿಆರ್

    ಬಿಜೆಪಿ ನೀತಿಗಳ ವಿರುದ್ಧ ಹೋರಾಟ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಎತ್ತಿಹಿಡಿಯುವ ರಾವ್ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಠಾಕ್ರೆ ಇತ್ತೀಚಿಗೆ ಘೋಷಿಸಿದ್ದರು. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ: ಚರಣ್‍ಜಿತ್ ಸಿಂಗ್ ಚನ್ನಿ

    ಹಲವು ವಿಷಯಗಳಿಂದ ಬಿಜೆಪಿ ಮತ್ತು ಕೇಂದ್ರವನ್ನು ಟೀಕಿಸುತ್ತಾ ಬಂದಿರುವ ತೆಲಂಗಾಣ ಸಿಎಂ, ಬಿಜೆಪಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ಧ ವಿವಿಧ ರಾಜಕೀಯ ಪಕ್ಷಗಳನ್ನು ಒಗ್ಗೂಡಿಲು ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ಸಹವರ್ತಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದ್ದರು.