Tag: navagraha film

  • BBK 11: ಕಿಚ್ಚನ ಶೋನಲ್ಲಿ ದರ್ಶನ್ ನಟನೆಯ ‘ನವಗ್ರಹ’ ರೀ ರಿಲೀಸ್ ವಿಚಾರ ಚರ್ಚೆ

    BBK 11: ಕಿಚ್ಚನ ಶೋನಲ್ಲಿ ದರ್ಶನ್ ನಟನೆಯ ‘ನವಗ್ರಹ’ ರೀ ರಿಲೀಸ್ ವಿಚಾರ ಚರ್ಚೆ

    ಬಿಗ್ ಬಾಸ್ ಮನೆಯಲ್ಲಿ (Bigg Boss Kannada 11) ಸಾಮಾನ್ಯವಾಗಿ ಹೊರಗಿನ ವಿಚಾರ ಸ್ಪರ್ಧಿಗಳಿಗೆ ಸಿಗುವುದಿಲ್ಲ. ಇದೀಗ ಸುದೀಪ್ (Sudeep) ತಾಯಿಯ ನಿಧನದ ಸುದ್ದಿ ಸಿಕ್ಕ ಬೆನ್ನಲ್ಲೇ ದರ್ಶನ್ (Darshan) ನಟನೆಯ ‘ನವಗ್ರಹ’ (Navagraha) ಮರುಬಿಡುಗಡೆಯ ಬಗ್ಗೆ ಶೋನಲ್ಲಿ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ನನ್ನ ವೃತ್ತಿ, ಸಂಭಾವನೆ ಎಲ್ಲ ಬಿಟ್ಟು ಬಂದಿದ್ದೇನೆ: ವಿಜಯ್ ಪವರ್‌ಫುಲ್ ಸ್ಪೀಚ್

    ಸುದೀಪ್ (Sudeep) ಅನುಪಸ್ಥಿತಿಯಲ್ಲಿ ಈ ವಾರಾಂತ್ಯ ಯೋಗರಾಜ್ ಭಟ್ ಮತ್ತು ಸೃಜನ್ ಲೋಕೇಶ್ (Srujan Lokesh) ಅತಿಥಿಗಳಾಗಿ ಬಿಗ್ ಬಾಸ್‌ಗೆ ಆಗಮಿಸಿದ್ದರು. ಸೃಜನ್ ಆಗಮಿಸಿದ್ದು, ಧರ್ಮಗೆ ಖುಷಿಯಾಗಿದೆ. ಈ ಹಿಂದೆ ಇಬ್ಬರೂ ಜೊತೆಯಾಗಿ ಸಿನಿಮಾ ಮಾಡಿದ್ದಾರೆ.

    ದೊಡ್ಮನೆಗೆ ಅತಿಥಿಯಾಗಿ ಬರುತ್ತಿದ್ದಂತೆ ಯಾರ ಪರಿಚಯ ತಮಗೆ ಮೊದಲೇ ಇದೆ ಎಂಬುದನ್ನು ಹೇಳಿದರು. ಆಗ ಧರ್ಮ (Dharma Keerthiraj) ಬಳಿ ನಿಮಗೆ ಒಂದು ಗುಡ್ ನ್ಯೂಸ್ ಇದೆ ಎಂದರು ಸೃಜನ್. ‘ನವಗ್ರಹ’ ಸಿನಿಮಾ ಮತ್ತೆ ರೀ-ರಿಲೀಸ್ ಆಗುತ್ತಿದೆ. ಇದನ್ನು ಕೇಳಿ ಯಾವಾಗ ಎಂದು ಪ್ರಶ್ನೆ ಮಾಡಿದರು. ನವೆಂಬರ್ 8ಕ್ಕೆ ಎಂದು ಸೃಜನ್ (Srujan Lokesh) ಉತ್ತರ ಕೊಟ್ಟರು. ಇದನ್ನು ಕೇಳಿ ಧರ್ಮ ಖುಷಿಪಟ್ಟರು. ಈ ಮೂಲಕ ಬಿಗ್ ಬಾಸ್ ಮನೆಯೊಳಗೂ ನವಗ್ರಹ ಚಿತ್ರದ್ದೇ ಚರ್ಚೆಯಾಗಿದೆ.

    ಅಂದಹಾಗೆ, ದರ್ಶನ್ ನಟನೆಯ ‘ನವಗ್ರಹ’ ಸಿನಿಮಾ 16 ವರ್ಷಗಳ ಹಿಂದೆ 2008ರ ನವೆಂಬರ್ 7ರಂದು ರಿಲೀಸ್ ಆಗಿತ್ತು. ದರ್ಶನ್ ಜೊತೆ ಸೃಜನ್ ಲೋಕೇಶ್, ಧರ್ಮ ಕೀರ್ತಿರಾಜ್, ಶರ್ಮಿಳಾ ಮಾಂಡ್ರೆ, ವರ್ಷಾ, ತರುಣ್ ಸುಧೀರ್, ವಿನೋದ್ ಪ್ರಭಾಕರ್ ನಟಿಸಿದರು. ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದರು. ಇದೀಗ ಇದೇ ನ.8ಕ್ಕೆ ಸಿನಿಮಾ ಮರುಬಿಡುಗಡೆ ಆಗುತ್ತಿದೆ.

  • ನ.8ರಂದು ದರ್ಶನ್ ನಟನೆಯ ‘ನವಗ್ರಹ’ ಚಿತ್ರ ರೀ ರಿಲೀಸ್

    ನ.8ರಂದು ದರ್ಶನ್ ನಟನೆಯ ‘ನವಗ್ರಹ’ ಚಿತ್ರ ರೀ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ನವಗ್ರಹ’ (Navagraha) ಸಿನಿಮಾ ಇದೀಗ ನವೆಂಬರ್ 8ರಂದು ರೀ ರಿಲೀಸ್ ಆಗುತ್ತಿದೆ. 16 ವರ್ಷಗಳ ಬಳಿಕ ಮತ್ತೆ ಈ ಸಿನಿಮಾ ತೆರೆ ಕಾಣುತ್ತಿದೆ. ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ- ಜಾನಿ ಮಾಸ್ಟರ್‌ಗೆ ಜಾಮೀನು ಮಂಜೂರು

    ದರ್ಶನ್, ತರುಣ್ ಸುಧೀರ್, ಮರಿ ಟೈಗರ್ ವಿನೋದ್ ಪ್ರಭಾಕರ್, ಧರ್ಮ ಕೀರ್ತಿರಾಜ್, ಸೃಜನ್ ಲೋಕೇಶ್, ನಾಗೇಂದ್ರ ಅರಸ್, ಗಿರಿ ದಿನೇಶ್, ವರ್ಷ, ಶರ್ಮಿಳಾ ಮಾಂಡ್ರೆ ನಟನೆಯ ‘ನವಗ್ರಹ’ ಚಿತ್ರ ನವೆಂಬರ್ 8ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 16 ವರ್ಷಗಳ ಹಿಂದೆ 2008ರ ನ.7ರಂದು ಚಿತ್ರ ತೆರೆಕಂಡಿತ್ತು.

    ಈ ಚಿತ್ರವನ್ನು ತೂಗುದೀಪ ಸಂಸ್ಥೆಯ ನಿರ್ಮಾಣದಲ್ಲಿ ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದರು. ಇನ್ನೂ ದರ್ಶನ್ ನಟನೆಯ ಸಿನಿಮಾಗಳು ಮರು ಬಿಡುಗಡೆಯಾಗುತ್ತಿವೆ. ಈಗಾಗಲೇ ಪೊರ್ಕಿ, ಕರಿಯ, ಶಾಸ್ತ್ರಿ ಚಿತ್ರಗಳು ರಿಲೀಸ್ ಆಗಿವೆ.

  • ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ, ಒಳ್ಳೆತನಕ್ಕೆ ಜಯವಾಗುತ್ತದೆ: ವಿಜಯಲಕ್ಷ್ಮಿ

    ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ, ಒಳ್ಳೆತನಕ್ಕೆ ಜಯವಾಗುತ್ತದೆ: ವಿಜಯಲಕ್ಷ್ಮಿ

    ನ್ನಡದ ಸ್ಟಾರ್ ನಟ ದರ್ಶನ್ (Darshan) ಅವರು ಕೊಲೆ ಪ್ರಕರಣದ ಸಂಬಂಧ ಆರೋಪಿಯಾಗಿ ಜೈಲು ಪಾಲಾಗಿದ್ದಾರೆ. ಅ.14ರಂದು ಜಾಮೀನು ದೊರಕುವ ನಿರೀಕ್ಷೆಯಲ್ಲಿದ್ದಾರೆ. ಇದರ ನಡುವೆ ದರ್ಶನ್ ಸಿನಿಮಾದ ಪೋಸ್ಟರ್‌ವೊಂದನ್ನು ವಿಜಯಲಕ್ಷ್ಮಿ ಹಂಚಿಕೊಂಡಿದ್ದಾರೆ. ‘ನವಗ್ರಹ’ (Navagraha) ಚಿತ್ರ ಮರು ಬಿಡುಗಡೆಯಾಗುತ್ತಿದೆ ಎಂದು ಮಾಹಿತಿ ಶೇರ್ ಮಾಡಿ, ಏನೇ ಆಗಲಿ ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ ಎಂದು ವಿಜಯಲಕ್ಷ್ಮಿ (Vijayalakshmi) ಬರೆದುಕೊಂಡಿದ್ದಾರೆ.

    ‘ನವಗ್ರಹ’ ಸಿನಿಮಾದ ಪೋಸ್ಟರ್ ಅನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಜಯಲಕ್ಷ್ಮಿ, ಪ್ರೀತಿಯ ಡಿಬಾಸ್ ಸೆಲೆಬ್ರಿಟಿಗಳೆ, ಎಲ್ಲರ ಹೃದಯದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ‘ನವಗ್ರಹ’ ಸಿನಿಮಾ ಆದಷ್ಟು ಬೇಗ ಮರು ಬಿಡುಗಡೆ ಆಗಲಿದೆ. ಈ ಬಾರಿ ಸಿನಿಮಾ ನೋಡುವ ಅನುಭವ ಇನ್ನಷ್ಟು ಭಿನ್ನವಾಗಿರಲಿದೆ. ಈ ಸಿನಿಮಾವನ್ನು ನಿಮ್ಮ ಹತ್ತಿರದ ಚಿತ್ರಮಂದಿರದಲ್ಲಿ ತಪ್ಪದೆ ನೋಡಿ ಎಂದಿದ್ದಾರೆ.

    ಏನೇ ಆಗಲಿ ಕೊನೆಯಲ್ಲಿ ಕೆಟ್ಟದ್ದು ಅಳಿದು ಹೋಗುತ್ತದೆ, ಒಳ್ಳೆತನಕ್ಕೆ ಜಯವಾಗುತ್ತದೆ ಎಂಬುದನ್ನು ತೋರಿಸಿಕೊಟ್ಟ ದಿನವಿದು. ಸದಾ ಇದನ್ನು ನೆನಪಿನಲ್ಲಿ ಇಟ್ಟುಕೊಳ್ಳೋಣ, ಆ ಚಾಮುಂಡೇಶ್ವರಿ ದೇವಿ ಎಲ್ಲರಿಗೂ ಆಶೀರ್ವಾದ ನೀಡಲಿ ಎಂದಿದ್ದಾರೆ. ಈ ಮೂಲಕ ದರ್ಶನ್ ಜೈಲಿನಿಂದ ಹೊರಗೆ ಬರಲಿದ್ದಾರೆ ಎಂಬುದನ್ನು ಹೀಗೆ ಸೂಚ್ಯವಾಗಿ ವಿಜಯಲಕ್ಷ್ಮಿ ಹೇಳಿದ್ದಾರೆಂದು ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸುತ್ತಿದ್ದಾರೆ.

    ಅಂದಹಾಗೆ, ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ದರ್ಶನ್ ಜೂನ್ 11ರಂದು ಅರೆಸ್ಟ್ ಆಗಿದ್ದರು. ಇಂದಿಗೆ ಜೈಲು ಪಾಲಾಗಿ 4 ತಿಂಗಳಾಗಿವೆ.