Tag: navarasan

  • ಟ್ರೆಂಡಿಂಗ್ ಬಗ್ಗೆಯೇ ಹಾಡು ಮಾಡಿದ ‘ಸೂತ್ರಧಾರಿ’ ಚಂದನ್ ಶೆಟ್ಟಿ

    ಟ್ರೆಂಡಿಂಗ್ ಬಗ್ಗೆಯೇ ಹಾಡು ಮಾಡಿದ ‘ಸೂತ್ರಧಾರಿ’ ಚಂದನ್ ಶೆಟ್ಟಿ

    ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸುತ್ತಿರುವ ‘ಸೂತ್ರಧಾರಿ’ ಚಿತ್ರದ  ‘ಡ್ಯಾಶ್’ ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ ಸೂತ್ರಧಾರಿ (Sutradhari) ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ ‘ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ‌. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಬಗ್ಗೆ ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

    ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ ‘ಡ್ಯಾಶ್ ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇಂತಹ ಜನಪ್ರಿಯ ಹಾಡು ಬರೆದುಕೊಟ್ಟ ವಿಜಯ್ ಈಶ್ವರ್ (Vijay Eshwar) ಅವರಿಗೆ, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ ಚಂದನ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ ಎಂದು ನಿರ್ಮಾಪಕ ನವರಸನ್ (Navarasan) ತಿಳಿಸಿದರು‌.

    ಸೂತ್ರಧಾರಿ ಸಿನಿಮಾದ ಡ್ಯಾಶ್ ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೊಂದು ಹಾಡು ಕೊಡುವ ಜವಾಬ್ದಾರಿ ನನ್ನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ ‘ಏನ್ ಮಾಡ್ಬೇಕು’ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎನ್ನುತ್ತಾರೆ ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ.

    ಸೂತ್ರಧಾರಿ ಬಗ್ಗೆ ಸಂಪೂರ್ಣ ವಿವರವನ್ನು ನಿರ್ದೇಶಕ ಕಿರಣ್ ಕುಮಾರ್ ನೀಡಿದರು. ನಾಯಕಿ ಅಪೂರ್ವ, ನಟರಾದ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದಿತಾ ಚಂದನ್ ಶೆಟ್ಟಿ, ನಿರ್ಮಾಪಕರಾದ ಸಂಜಯ್ ಗೌಡ, ಚೇತನ್ ಗೌಡ, ರಾಜೇಶ್, ಗೋವಿಂದರಾಜು ಹಾಗೂ ನಿರ್ದೇಶಕ ಮಹೇಶ್ ಕುಮಾರ್ ಸೂತ್ರಧಾರಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸೂತ್ರಧಾರಿ’ಗೆ ಡಬ್ಬಿಂಗ್ ಶುರು ಮಾಡಿದ ಚಂದನ್ ಶೆಟ್ಟಿ

    ‘ಸೂತ್ರಧಾರಿ’ಗೆ ಡಬ್ಬಿಂಗ್ ಶುರು ಮಾಡಿದ ಚಂದನ್ ಶೆಟ್ಟಿ

    ಗಾಯಕನಾಗಿ, ಗೀತರಚನೆಕಾರನಾಗಿ,‌ ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ,  ಈಗ ನಾಯಕನಾಗಿಯೂ‌ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ (Chandan Shetty) ‘ಸೂತ್ರಧಾರಿ’ (Sutradhari) ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಈ ಸಿನಿಮಾಗೆ ಡಬ್ಬಿಂಗ್ (Dubbing) ಕೆಲಸ ಆರಂಭವಾಗಿದ್ದು, ಇಂದಿನಿಂದ ಚಂದನ್ ಮಾತಿನ ಮರುಲೇಪನ ಮಾಡುತ್ತಿದ್ದಾರೆ. ಇದು ಇವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರವಾಗಿದೆ. ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ (Kiran Kumar) ನಿರ್ದೇಶನ ಮಾಡುತ್ತಿದ್ದಾರೆ.

    ಇದು ನನ್ನ ನಿರ್ಮಾಣದ ಐದನೇ ಚಿತ್ರ. ಈವರೆಗೂ ನಮ್ಮ ಸಂಸ್ಥೆಯ ಮೂಲಕ 180ಕ್ಕೂ ಹೆಚ್ಚು ಚಿತ್ರಗಳ ಇವೆಂಟ್ ನಡೆಸಿಕೊಟ್ಟಿದ್ದೇನೆ. ನಿರ್ದೇಶನದೊಂದಿಗೆ ವಿತರಕನಾಗೂ ಕಾರ್ಯ ನಿರ್ವಹಿಸಿದ್ದೇನೆ. ಪ್ರಸ್ತುತ ಸೂತ್ರಧಾರಿ ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನಮ್ಮ‌ ತಂಡದವರೇ ಆದ ಕಿರಣ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಂದನ್ ಶೆಟ್ಟಿ ನಾಯಕನಾಗಿ, ಅಪೂರ್ವ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದಿದ್ದಾರೆ ನಿರ್ಮಾಪಕ ನವರಸನ್. ಇದನ್ನೂ ಓದಿ:ರಾಕಿ ಭಾಯ್ ಲೆಜೆಂಡ್ ಎಂದು ಹಾಡಿ ಹೊಗಳಿದ ಪೂಜಾ ಹೆಗ್ಡೆ

    ನಾಯಕನಾಗಿ ನಾನು ಅಭಿನಯಿಸುತ್ತಿರುವ ಮೊದಲ ಚಿತ್ರ ‘ಎಲ್ರ ಕಾಲೆಳಿಯುತ್ತೆ ಕಾಲ’. ಆ ಚಿತ್ರ ರೆಟ್ರೊ ಶೈಲಿಯಲ್ಲಿ ಇರುತ್ತದೆ.  ಸೂತ್ರಧಾರಿ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಕಿರಣ್ ಕುಮಾರ್ ಉತ್ತಮ ಕಥೆ ಬರೆದಿದ್ದಾರೆ. ಮರ್ಡರ್ ಮಿಸ್ಟರಿ ಕಥೆ‌ ಅಂತ ಹೇಳಬಹುದು. ಈ ಚಿತ್ರಕ್ಕಾಗಿ ನಾನು ಹನ್ನೆರಡು ಕೆಜಿ ತೂಕ ಇಳಿಸಿಕೊಂಡಿದ್ದೀನಿ. ಸಂಗೀತ ನಿರ್ದೇಶನವನ್ನೂ ನಾನೇ ಮಾಡುತ್ತಿದ್ದೇನೆ. ‌ಎಲ್ಲರೂ ಗುನಗುವಂತಹ ಹಾಡುಗಳನ್ನು ಕೊಟ್ಟಿದ್ದೇನೆ ಎಂದಿದ್ದಾರೆ ಚಂದನ್ ಶೆಟ್ಟಿ.

    ಸೂತ್ರಧಾರಿ ಎಲ್ಲರಿಗೂ ಮೆಚ್ಚುಗೆಯಾಗುವಂತಹ ಕಥಾಹಂದರ ಹೊಂದಿದೆ. ನಾನು ನವರಸನ್ (Navarasan) ಅವರ ಬಳಿ ಸಹ ನಿರ್ದೇಶಕನಾಗಿ  ಹಾಗೂ ಪಿ.ಕೆ.ಹೆಚ್ ದಾಸ್ ಅವರ ಹತ್ತಿರ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ‌ ಮಾಡಿದ್ದೇನೆ.‌ ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಹೇಳಿದ್ದ ನಿರ್ದೇಶಕ ಕಿರಣ್ ಕುಮಾರ್, ಅವಕಾಶ ಕೊಟ್ಟ ನವರಸನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ‌ನಾಯಕಿಯಾಗಿ ಅಪೂರ್ವ (Apoorva), ಹಿರಿಯ ನಟ ತಬಲ ನಾಣಿ ಹಾಗೂ ಗಣೇಶ್ ನಾರಾಯಣ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

  • ‘ಡ್ಯಾಶ್’ ಹಾಡಿನ ಮೂಲಕ ಕೋಟಿ ಹೃದಯ ಗೆದ್ದ ಚಂದನ್ ಶೆಟ್ಟಿ

    ‘ಡ್ಯಾಶ್’ ಹಾಡಿನ ಮೂಲಕ ಕೋಟಿ ಹೃದಯ ಗೆದ್ದ ಚಂದನ್ ಶೆಟ್ಟಿ

    ಹೊಸ ವರ್ಷದ ಸಂಭ್ರಮಕ್ಕಾಗಿ  ಡಿಸೆಂಬರ್ ಕೊನೆಯಲ್ಲಿ  ‘ಸೂತ್ರಧಾರಿ’ (Sutradhari) ಚಿತ್ರದ ಡ್ಯಾಶ್ (Dash) ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ.  ಕಡಿಮೆ ಸಮಯದಲ್ಲೇ   ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ.

    ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್ (Navarasan),  ‘ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ ಮಾಡಿರುವ ಸಿನಿಮಾಗಳ ಪೈಕಿ ಇಷ್ಟು ಒಳ್ಳೆಯ ರೆಸ್ಪಾನ್ಸ್ ಯಾವ ಹಾಡಿಗೂ ಸಿಕ್ಕಿಲ್ಲ. ನನ್ನ ಚಿತ್ರದಲ್ಲಿ ಹಿಟ್ ಗೀತೆಯೊಂದು ಬರಬೇಕೆಂದು ಆಸೆಯಿತ್ತು.   ಈಗ ಇಡೇರಿದೆ. ಹೊಸ ವರ್ಷಕ್ಕಾಗಿಯೇ ಈ‌‌ ಸಾಂಗ್ ಮಾಡಿದ್ದೆವು.  ಚಿತ್ರದಲ್ಲಿ ಇನ್ನೂ ಮೂರು ಹಾಡುಗಳಿದ್ದು, ಆ ಹಾಡುಗಳು ಅದ್ಭುತವಾಗಿದೆ.  ಫೆಬ್ರವರಿಯಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತೇವೆ.  ಏಪ್ರಿಲ್, ಮೇನಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದೇವೆ. ಈ ಒಂದು ಕೋಟಿ ವೀಕ್ಷಣೆಯ ಸಕ್ಸಸ್ ಚಿತ್ರತಂಡಕ್ಕೆ ಸಲ್ಲುತ್ತದೆ’ ಎಂದರು.

    ಈ ಹಾಡನ್ನು ಬರೆದು,   ಸಂಗೀತ ಸಂಯೋಜಿಸುವ ಜೊತೆಗೆ ನಾಯಕನಾಗೂ ನಟಿಸಿರುವ ಚಂದನ್ ಶೆಟ್ಟಿ (Chandan Shetty) ಮಾತನಾಡಿ,  ‘ಸಾಂಗ್ ರಿಲೀಸ್ ಆದ ಮೂರು ವಾರದಲ್ಲೇ ಒಂದು ಕೋಟಿ ವೀಕ್ಷಣೆ ಆಗಿರುವುದು ಮಾಧ್ಯಮಗಳ ಸಹಕಾರದಿಂದ. ಈ ಗೀತೆಗೆ ನಾನು ಹಾಗೂ  ಚೇತನ್ ಸೇರಿ ಸಾಹಿತ್ಯ ಬರೆದಿದ್ದೇವೆ’ ಎಂದರು. ‘ಪ್ರಾರಂಭದಲ್ಲಿ ನಿರ್ಮಾಪಕರಿಗೆ ಹಾಡು ಚೆನ್ನಾಗಿ ಬರಬೇಕು ಸರ್. ಇದೇ ಮೊದಲಬಾರಿ ನಾನು ಬೇರೆ ಸಿನಿಮಾವೊಂದರ ಹಾಡಿನಲ್ಲಿ ನಟಿಸುತ್ತಿದ್ದೆನೆ ಎಂದಿದ್ದೆ. ಇಂದು ಈ ಗೀತೆಯಲ್ಲಿ ನಾನಿರುವುದು ಖುಷಿಯಾಗಿದೆ ಎನ್ನುತ್ತಾರೆ ನಟಿ ಸಂಜನಾ ಆನಂದ್. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ‘ಈ ಗೀತೆ ನಮ್ಮ ಸಿನಿಮಾಗೆ ಆಮಂತ್ರಣ ಆಗಿದ್ದು, ಹಾಡು  ನೋಡಿ ಬಂದ ಜನರನ್ನು ಇಡೀ ಸಿನಿಮಾವನ್ನು ನೋಡುವ ಹಾಗೆ ಮಾಡುವ ಜವಾಬ್ದಾರಿ ನನ್ನದು  ಎಂದು ನಿರ್ದೇಶಕ ಕಿರಣ್ ಕುಮಾರ್   ತಿಳಿಸಿದರು. ಕೊರಿಯೋಗ್ರಾಫರ್ ಮೋಹನ್ ಮಾಸ್ಟರ್ ಮಾತನಾಡುತ್ತಾ, ಈ ಹಾಡು ಕೇವಲ ಎರಡು ದಿನಗಳಲ್ಲಿ ಆಗಿದೆ.   ನನ್ನ ಮತ್ತು ಚಂದನ್ ಶೆಟ್ಟಿ ಕಾಂಬಿನೇಷನ್ ನ ೨ನೇ ಹಿಟ್  ಗೀತೆ ಇದು ಎಂದರು. ಈ ಸಂತಸದ ಸಮಾರಂಭದಲ್ಲಿ ನಟ ತಬಲಾನಾಣಿ, ಸೆಟ್ ವರ್ಕ್ ಮಾಡಿರುವ ಕಿರಣ್, ನಟಿ ಪಲ್ಲವಿ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಾಹಿತಿ ಕಿನ್ನಾಲ್ ರಾಜ್ ತಮ್ಮ ಅನುಭವ ಹಂಚಿಕೊಂಡರು. ಸಸ್ಪೆನ್ಸ, ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಈ ಚಿತ್ರದಲ್ಲಿ ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಂದನ್ ಶೆಟ್ಟಿ ಹೊಸ ಸಿನಿಮಾಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ

    ಚಂದನ್ ಶೆಟ್ಟಿ ಹೊಸ ಸಿನಿಮಾಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ

    ನ್ನಡದ ಹೆಸರಾಂತ ಯುವ ಗಾಯಕ ಚಂದನ್ ಶೆಟ್ಟಿ (Chandan Shetty) ನಾಯಕನಾಗಿ ನಟಿಸುತ್ತಿರುವ ಸೂತ್ರಧಾರ (Sutradhara) ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ತಮ್ಮ ಹಾಡುಗಳ ಮೂಲಕ ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಸಿನಿಮಾವಿದು.

    ನವರಸನ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೆ ಶೇಕಡಾ 90ರಷ್ಟು ಸಿನೆಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ. ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ಆಗಿದ್ದು ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನನಗೆ, ನೇಹಾಗೆ ಕಾಂಪಿಟೇಶನ್ ಇತ್ತು: ಅನುಪಮಾ

    ಈ ಹಾಡಿನಲ್ಲಿ ಮೊದಲ ಬಾರಿಗೆ ಚಂದನ್ ಶೆಟ್ಟಿ ಜೋಡಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ (Sanjana Anand) ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಈ ಹಾಡನ್ನು ಇದೇ ಡಿಸೆಂಬರ್ 27ರಂದು ಬೆಳಗ್ಗೆ 10.35ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಹಾಡು ಹೊಸ ವರ್ಷದ ಸಂಭ್ರಮಾಚರಣೆಗೆ ಹೇಳಿ ಮಾಡಿಸಿದ ಹಾಗಿದೆ ಎಂದಿದ್ದಾರೆ ನಿರ್ಮಾಪಕ ನವರಸನ್.

    Live Tv
    [brid partner=56869869 player=32851 video=960834 autoplay=true]

  • ಚಂದನ್ ಶೆಟ್ಟಿ ನಟನೆಯ ‘ಸೂತ್ರಧಾರಿ’ ಸಿನಿಮಾಗೆ ಸಿಕ್ತು ಚಾಲನೆ

    ಚಂದನ್ ಶೆಟ್ಟಿ ನಟನೆಯ ‘ಸೂತ್ರಧಾರಿ’ ಸಿನಿಮಾಗೆ ಸಿಕ್ತು ಚಾಲನೆ

    ಗಾಯಕನಾಗಿ, ಗೀತರಚನೆಕಾರನಾಗಿ,‌ ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ,  ಈಗ ನಾಯಕನಾಗೂ‌ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ (Chandan Shetty) “ಸೂತ್ರಧಾರಿ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಅವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ. “ಸೂತ್ರಧಾರಿ” ಚಿತ್ರದ ಚಿತ್ರೀಕರಣ ಅಕ್ಟೋಬರ್ 10 ರಿಂದ ಆರಂಭವಾಗಲಿದೆ.‌ ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕರಾದ ಕೆ.ಸಿ.ಎನ್ ಕುಮಾರ್, ಗೋವಿಂದರಾಜು, ಸಂಜಯ್ ಗೌಡ,  ಗಿರೀಶ್ ಹಾಗೂ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮುಂತಾದವರು ಸಮಾರಂಭಕ್ಕೆ ಆಗಮಿಸಿ “ಸೂತ್ರಧಾರಿ”ಗೆ (Sutradhari) ಶುಭ ಕೋರಿದರು. ಇದು ನನ್ನ ನಿರ್ಮಾಣದ ಐದನೇ ಚಿತ್ರ. ಈವರೆಗೂ ನಮ್ಮ ಸಂಸ್ಥೆಯ ಮೂಲಕ 180ಕ್ಕೂ ಹೆಚ್ಚು ಚಿತ್ರಗಳ ಇವೆಂಟ್ ನಡೆಸಿಕೊಟ್ಟಿದ್ದೇನೆ. ನಿರ್ದೇಶನದೊಂದಿಗೆ ವಿತರಕನಾಗೂ ಕಾರ್ಯ ನಿರ್ವಹಿಸಿದ್ದೇನೆ. ಪ್ರಸ್ತುತ “ಸೂತ್ರಧಾರಿ” ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನಮ್ಮ‌ ತಂಡದವರೇ ಆದ ಕಿರಣ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಂದನ್ ಶೆಟ್ಟಿ ನಾಯಕನಾಗಿ, ಅಪೂರ್ವ ನಾಯಕಿಯಾಗಿ ನಟಿಸುತ್ತಿದ್ದಾರೆ. ‌ಇದೇ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ನವರಸನ್.

    ನಾಯಕನಾಗಿ ನಾನು ಅಭಿನಯಿಸುತ್ತಿರುವ ಮೊದಲ ಚಿತ್ರ “ಎಲ್ರ ಕಾಲೆಳಿಯುತ್ತೆ ಕಾಲ”. ಆ ಚಿತ್ರ ರೆಟ್ರೊ ಶೈಲಿಯಲ್ಲಿ ಇರುತ್ತದೆ.  “ಸೂತ್ರಧಾರಿ” ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಕಿರಣ್ ಕುಮಾರ್ ಉತ್ತಮ ಕಥೆ ಬರೆದಿದ್ದಾರೆ. ಮರ್ಡರ್ ಮಿಸ್ಟರಿ ಕಥೆ‌ ಅಂತ ಹೇಳಬಹುದು. ಈ ಚಿತ್ರಕ್ಕಾಗಿ ನಾನು ಹನ್ನೆರಡು ಕೆಜಿ ತೂಕ ಇಳಿಸಿಕೊಂಡಿದ್ದೀನಿ. ಸಂಗೀತ ನಿರ್ದೇಶನವನ್ನೂ ನಾನೇ ಮಾಡುತ್ತಿದ್ದೇನೆ. ‌ಎಲ್ಲರೂ ಗುನಗುವಂತಹ ಹಾಡುಗಳನ್ನು ಕೊಡುತ್ತೇನೆ ಎಂದು ಚಂದನ್ ಶೆಟ್ಟಿ ತಿಳಿಸಿದರು. ಇದನ್ನೂ ಓದಿ:ಹಾಲಿವುಡ್‌ಗೆ ಯಶ್‌ ಎಂಟ್ರಿ? ವಿಶ್ವದ ಟಾಪ್‌ ರೇಸರ್‌ ಲೇವಿಸ್‌ ಹ್ಯಾಮಿಲ್ಟನ್‌ ಭೇಟಿ

    “ಸೂತ್ರಧಾರಿ” ಎಲ್ಲರಿಗೂ ಮೆಚ್ಚುಗೆಯಾಗುವಂತಹ ಕಥಾಹಂದರ ಹೊಂದಿದೆ. ನಾನು ನವರಸನ್ (Navarasan) ಅವರ ಬಳಿ ಸಹ ನಿರ್ದೇಶಕನಾಗಿ  ಹಾಗೂ ಪಿ.ಕೆ.ಹೆಚ್ ದಾಸ್ ಅವರ ಹತ್ತಿರ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ‌ ಮಾಡಿದ್ದೇನೆ.‌ ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಹೇಳಿದ್ದ ನಿರ್ದೇಶಕ ಕಿರಣ್ ಕುಮಾರ್, ಅವಕಾಶ ಕೊಟ್ಟ ನವರಸನ್ ಅವರಿಗೆ ಧನ್ಯವಾದ ತಿಳಿಸಿದರು.

    ತಮ್ಮ ಪಾತ್ರದ ಬಗ್ಗೆ ‌ನಾಯಕಿ ಅಪೂರ್ವ (Apoorva), ಹಿರಿಯ ನಟ ತಬಲ ನಾಣಿ ಹಾಗೂ ಗಣೇಶ್ ನಾರಾಯಣ್ ಮಾತನಾಡಿದರು. ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಗೀತರಚನೆ ಮಾಡಿ, ಸಂಭಾಷಣೆ ಬರೆದಿರುವ ಕಿನಾಲ್ ರಾಜ್ ಹಾಗೂ ಸಂಕಲನಕಾರ ಸತೀಶ್ ಚಂದ್ರಯ್ಯ ತಮ್ಮ ಕಾರ್ಯದ ಬಗ್ಗೆ ಮಾಹಿತಿ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಮತ್ತೊಂದು ಸಿನಿಮಾಗೆ ಚಂದನ್ ಶೆಟ್ಟಿ ಹೀರೋ : ವಿಜಯ ದಶಮಿಗೆ ನೂತನ ಚಿತ್ರ

    ಮತ್ತೊಂದು ಸಿನಿಮಾಗೆ ಚಂದನ್ ಶೆಟ್ಟಿ ಹೀರೋ : ವಿಜಯ ದಶಮಿಗೆ ನೂತನ ಚಿತ್ರ

    ಗಾಗಲೇ ಒಂದು ಸಿನಿಮಾದಲ್ಲಿ ಖ್ಯಾತ ಗಾಯಕ, ಸಂಗೀತ ನಿರ್ದೇಶಕ  ಚಂದನ್ ಶೆಟ್ಟಿ (Chandan Shetty) ನಟಿಸಿದ್ದಾರೆ. ಈಗ ಮತ್ತೊಂದು ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ. ಇವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ.‌ ನವರಸನ್ (Navarasan) ನಿರ್ಮಾಣದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ಅಕ್ಟೋಬರ್ 10ರಿಂದ ಚಿತ್ರೀಕರಣ ಆರಂಭವಾಗಲಿದೆ.

    ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಅದ್ದೂರಿಯಾಗಿ ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾ ದ ಪ್ರಮುಖ ನವರಸನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ “ದಮಯಂತಿ” ಸೇರಿದಂತೆ ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದೊಂದಿಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ‌.

    ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ (Kiran Kumar) ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಬಲ ನಾಣಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ.ನಾಯಕಿಯ ಆಯ್ಕೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸೆ.18ರಂದು ‘ದಮಯಂತಿ’ ಚಿತ್ರದ ಟೀಸರ್ ಬಿಡುಗಡೆ

    ಸೆ.18ರಂದು ‘ದಮಯಂತಿ’ ಚಿತ್ರದ ಟೀಸರ್ ಬಿಡುಗಡೆ

    ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ’ ಚಿತ್ರದ ಟೀಸರ್ ಇದೇ ತಿಂಗಳ 18ರಂದು ಬಿದುಗಡೆಯಾಗಲಿದೆ.


    ನವರಸನ್ ರಚನೆ ಹಾಗೂ ನಿರ್ದೇಶನದ ಈ ಚಿತ್ರ ಕನ್ನಡ, ತಮಿಳು, ತೆಲುಗು, ಮಲೆಯಾಳಂ ಹಾಗೂ ಹಿಂದಿ ಭಾಷೆ ಸೇರಿ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಹಾರರ್, ಥ್ರಿಲ್ಲರ್ ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣವಾಗಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಮುಂತಾದ ಕಡೆ 67 ದಿನಗಳ ಚಿತ್ರೀಕರಣ ನಡೆದಿದೆ.


    ಆರ್.ಎಸ್.ಗಣೇಶ್ ನಾರಾಯಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ.ಕೆ.ಎಚ್ ದಾಸ್ ಅವರ ಛಾಯಾಗ್ರಹಣವಿದೆ. ಮಹೇಶ್ ರೆಡ್ಡಿ ಸಂಕಲನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಿಕಾ ಕುಮಾರಸ್ವಾಮಿ, ಭಜರಂಗಿ ಲೋಕಿ, ಸಾಧು ಕೋಕಿಲ, ತಬಲನಾಣಿ, ಮಿತ್ರ, ನವೀನ್ ಕೃಷ್ಣ, ಹೊನ್ನವಳ್ಳಿ ಕೃಷ್ನ, ರವಿಗೌಡ, ಬಲರಾಜವಾಡಿ, ವೀಣಾಸುಂದರ್, ಕೆಂಪೇಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ದಮಯಂತಿಯ ಟೀಸರ್ ಲಾಂಚ್‍ಗೆ ಭರ್ಜರಿ ತಯಾರಿ!

    ದಮಯಂತಿಯ ಟೀಸರ್ ಲಾಂಚ್‍ಗೆ ಭರ್ಜರಿ ತಯಾರಿ!

    ರಾಧಿಕಾ ಕುಮಾರಸ್ವಾಮಿ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬಾರದೆ ವರ್ಷಗಳೇ ಕಳೆದಿವೆ. ಆದರೆ ಈಗೊಂದು ವರ್ಷದಿಂದೀಚೆಗೆ ಅವರು ನಾಯಕಿಯಾಗಿ ನಟಿಸಿರುವ ದಮಯಂತಿ ಎಂಬ ಚಿತ್ರವೊಂದು ಆಗಾಗ ಸದ್ದು ಮಾಡುತ್ತಿತ್ತು.

    ಪೋಸ್ಟರ್‍ಗಳು ಆಗಾಗ ಬಿಡುಗಡೆಯಾಗುತ್ತಾ ರಾಧಿಕಾ ಅಲ್ಲಿ ಕಾಣಿಸಿಕೊಂಡ ಅವತಾರವೇ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದೂ ಇದೆ. ಈ ಚಿತ್ರವೀಗ ಬಿಡುಗಡೆಯ ಹೊಸ್ತಿಲಲ್ಲಿದೆ. ಸದ್ಯ ದಮಯಂತಿಯ ಟೀಸರ್ ಲಾಂಚ್ ಮಾಡಲು ಚಿತ್ರತಂಡ ತಯಾರಿ ಮಾಡಿಕೊಂಡಿದೆ.

    ನವರಸನ್ ನಿರ್ದೇಶನದಲ್ಲಿ ಮೂಡಿ ಬಂದಿರೋ ದಮಯಂತಿ ಚಿತ್ರದಲ್ಲಿ ರಾಧಿಕಾ ಡಿಫರೆಂಟಾದ ಪಾತ್ರದಲ್ಲಿ ನಟಿಸಿದ್ದಾರೆ. ಇದರ ಸ್ಪಷ್ಟ ಸುಳಿವುಗಳೇ ಪೋಸ್ಟರ್‍ಗಳ ಮೂಲಕ ಕಾಣಿಸಿವೆ. ಇದೀಗ ಚಿತ್ರೀಕರಣ ಮುಗಿಸಿಕೊಂಡಿರೋ ದಮಯಂತಿಯ ಟೀಸರ್ ಲಾಂಚ್ ಆಗೋ ಕಾಲ ಸಮೀಪಿಸಿದೆ. ಈ ತಿಂಗಳ ಅಂತ್ಯದೊಳಗೆ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಅಧಿಕೃತ ದಿನಾಂಕವೂ ದಿನದೊಪ್ಪತ್ತಿನಲ್ಲಿಯೇ ಹೊರ ಬರಲಿದೆ.

    ಈ ಚಿತ್ರ ದೇಶಾದ್ಯಂತ ಸದ್ದು ಮಾಡಲು ತಯಾರಾಗಿದೆ. ಯಾಕೆಂದರೆ ಈ ಚಿತ್ರ ಕೇವಲ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲೆಯಾಳಂ ಮತ್ತು ಹಿಂದಿಯಲ್ಲಿಯೂ ಬಿಡುಗಡೆಯಾಗಲಿದೆ. ಎಲ್ಲ ಭಾಷೆಗಳ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂಥಾ ಕಂಟೆಂಟು ಈ ಚಿತ್ರದಲ್ಲಿದೆ ಎಂಬ ಭರವಸೆಯೂ ಚಿತ್ರ ತಂಡದಲ್ಲಿದೆ.

    ಈ ಟೀಸರ್ ಕೂಡಾ ಅಷ್ಟೂ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆಯಂತೆ. ಹಿಂದಿ, ಮಲೆಯಾಳಂ, ತಮಿಳು ಮತ್ತು ತೆಲುಗಿನ ಸ್ಟಾರ್ ನಟರಿಂದ ಈ ಟೀಸರ್ ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಅಂತೂ ದಮಯಂತಿ ಮೂಲಕ ತುಂಬಾನೇ ಭಿನ್ನವಾದ ಪಾತ್ರವೊಂದರ ಮೂಲಕ ರಾಧಿಕಾ ಕುಮಾರಸ್ವಾಮಿ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ.