Tag: Naveen Dwarkanath

  • ಹೊಸ ಸಿನಿಮಾ ಕೈಗೆತ್ತಿಕೊಂಡ ‘ಫಾರ್ ರಿಜಿಸ್ಟ್ರೇಷನ್’ ಡೈರೆಕ್ಟರ್

    ಹೊಸ ಸಿನಿಮಾ ಕೈಗೆತ್ತಿಕೊಂಡ ‘ಫಾರ್ ರಿಜಿಸ್ಟ್ರೇಷನ್’ ಡೈರೆಕ್ಟರ್

    ‘ಫಾರ್​ ರಿಜಿಸ್ಟ್ರೇಷನ್’ (For Regn) ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾದವರು ನವೀನ್ ದ್ವಾರಕನಾಥ್. ಮೊದಲ ಚಿತ್ರದಲ್ಲಿಯೇ ಸ್ವೀಟ್ ಲವ್ ಸ್ಟೋರಿ ಫ್ಯಾಮಿಲಿ ಡ್ರಾಮಾ ಕಥೆ ಹೇಳಿದ್ದ ಅವರೀಗ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ನವೀನ್ ತಮ್ಮ ಗುರುಗಳು ಕೆ ಚಂದ್ರಶೇಖರ್ ಅವರು ಬರೆದ ಕಥೆಗೆ ದೃಶ್ಯರೂಪ ಕೊಡುತ್ತಿದ್ದಾರೆ‌. ಇದೊಂದು ಆಕ್ಷನ್ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದ್ದು, ಸದ್ಯ ಚಿತ್ರದ ಕಥೆ, ಬರವಣಿಗೆಯ ಕೊನೆ ಹಂತದಲ್ಲಿದೆ.

    ಅಂದಹಾಗೆ, ಕೆ ಚಂದ್ರಶೇಖರ್ ಅವರಿಗೆ ಚಿತ್ರರಂಗವೇನು ಹೊಸತಲ್ಲ. ಈ ಹಿಂದೆ ಕನ್ನಡದ ಸುರಸುಂದರ ರಮೇಶ್ ಅರವಿಂದ್ ನಟನೆಯ ಓ‌ ಮಲ್ಲಿಗೆ ಸಿನಿಮಾದ ಸುರ ಸುಂದರ ಹಾಡಿಗೆ ಕೋರಿಯೋಗ್ರಫಿ ಮಾಡಿದ್ದವರು ಇದೇ ಚಂದ್ರಶೇಖರ್. ವಿ ಮನೋಹರ್ ನಿರ್ದೇಶನ ಹಾಗೂ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಹಾಡು ಅಂದು ದೊಡ್ಡಮಟ್ಟದ ಹಿಟ್ ಕಂಡಿತ್ತು. ರಮೇಶ್ ಅರವಿಂದ್ ಸ್ಟೈಲ್, ಸಂಗೀತ ಹಾಗೂ ಕೋರಿಯೋಗ್ರಫಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಅದೇ ಚಂದ್ರಶೇಖರ್ ಈಗ ಕಥೆ ಜೊತೆಗೆ ನಿರ್ಮಾಪಕರಾಗಿಯೂ ಮತ್ತೆ ಚಿತ್ರರಂಗಕ್ಕೆ ಮತ್ತೆ ಆಗಮಿಸಿದ್ದಾರೆ. ನವೀನ್ ದ್ವಾರಕನಾಥ್ (Naveen Dwarkanath) ಎರಡನೇ ಸಿನಿಮಾಗೆ ಅವರೇ ಬಂಡವಾಳ ಹೂಡುತ್ತಿದ್ದಾರೆ. ಶಿಷ್ಯನ ಸಿನಿಮಾಗೆ ಗುರುಗಳೇ ಸಾಥ್ ನೀಡುತ್ತಿರುವುದು ವಿಶೇಷ.

    ಕಥೆ ಬರವಣೆ ಮುಗಿದ ಬಳಿಕ ಕಲಾವಿದರು ಹಾಗೂ ತಂತ್ರಜ್ಞಾರನ್ನು ಆಯ್ಕೆ‌ ಮಾಡಲಾಗುವುದು. ಅಪಾರ ಸ್ಟುಡಿಯೋಸ್ ಬ್ಯಾನರ್ ನಡಿ ಬಹಳ ಸಿನಿಮಾ ಪ್ರೀತಿಯಿಂದ ಕೆ ಚಂದ್ರಶೇಖರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ಕನ್ನಡ ಚಿತ್ರರಂಗಕ್ಕೆ‌‌ ಒಳ್ಳೊಳ್ಳೆ ಚಿತ್ರಗಳನ್ನು ಕಾಣಿಕೆಯಾಗಿ ನೀಡುವ ತವಕ ಅವರಲ್ಲಿದೆ.

  • ಮೈಸೂರು ದಸರಾದಲ್ಲಿ ‘F0R REGN’ ಚಿತ್ರದ ಪೋಸ್ಟರ್ ರಿಲೀಸ್

    ಮೈಸೂರು ದಸರಾದಲ್ಲಿ ‘F0R REGN’ ಚಿತ್ರದ ಪೋಸ್ಟರ್ ರಿಲೀಸ್

    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ದಸರಾ ಸಡಗರ. ಇದೇ ಸಂದರ್ಭದಲ್ಲಿ ಪೃಥ್ವಿ ಅಂಬರ್ (Prithvi Amber) ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  ‘F0R REGN’ (ಫಾರ್ ರಿಜಿಸ್ಟರೇಷನ್) ಚಿತ್ರದ  ‘ಲವ್ ಗಳ್  ಸುಮಧುರ ಹಾರ್ಟ್ ಗಳ್ ಗಿರಗಿರ’ ಎಂಬ ಟ್ರಾವೆಲ್ ವಿಡಿಯೋ ಸಾಂಗ್ ಹಾಗೂ ನೂತನ ಪೋಸ್ಟರ್ ಬಿಡುಗಡೆಯಾಯಿತು. ‘ಮಾಲ್ ಆಫ್ ಮೈಸೂರು’ ಮಲ್ಟಿಪ್ಲೆಕ್ಸ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಾಯಿಂಟ್ ಕಮೀಷನರ್ ಕೆ.ಎಂ.ಸವಿತಾ ಅವರು ಹಾಡು ಹಾಗು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

    ಚಿತ್ರದ ನಾಯಕಿ ಮಿಲನಾ ನಾಗರಾಜ್ (Milana Nagaraj), ನಿರ್ದೇಶಕ ನವೀನ್ ದ್ವಾರಕನಾಥ್ (Naveen Dwarkanath) ಹಾಗೂ ನಿರ್ಮಾಪಕ ನವೀನ್ ರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾಲ್ ನಲ್ಲಿ ಮೊಳಗಿದ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆದರು.  ಇದನ್ನೂ ಓದಿ:ನವೆಂಬರ್ ನಲ್ಲಿ ಅಜಯ್ ರಾವ್ ನಟನೆಯ ‘ಮನ್ ರೇ’ ಶೂಟಿಂಗ್

    ನಾಗಾರ್ಜುನ ಶರ್ಮ ಈ ಹಾಡನ್ನು ಬರೆದಿದ್ದು, ಆರ್ ಕೆ ಹರೀಶ್ ಸಂಗೀತ ನೀಡಿದ್ದಾರೆ. ಐರಾ ಉಡುಪಿ ಹಾಗೂ ದೀಪಕ್ ದೊಡ್ಡೇರ ಈ ಹಾಡನ್ನು ಹಾಡಿದ್ದಾರೆ. ಸದ್ಯದಲ್ಲೇ ನಮ್ಮ ಚಿತ್ರವನ್ನು ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಲಿದೆ. ಚಿತ್ರದ ನಾಯಕ ಪೃಥ್ವಿ ಅಂಬರ್ ವಿದೇಶ ಪ್ರವಾಸದಲ್ಲಿದ್ದು, ನವೆಂಬರ್ ನಲ್ಲಿ ಬರಲಿದ್ದಾರೆ. ಅವರು ಬಂದ ಕೂಡಲೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

    ನಿಶ್ಚಲ್ ಫಿಲಂಸ್ ಮೂಲಕ  ಎನ್ .ನವೀನ್ ರಾವ್ ನಿರ್ಮಿಸಿರುವ ಈ ಚಿತ್ರವನ್ನು  ನವೀನ್ ದ್ವಾರಕನಾಥ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಹರೀಶ್ ಸಂಗೀತ ನಿರ್ದೇಶನ,  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ. ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು  ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ಸಿನಿಮಾ ಫೆ.10ಕ್ಕೆ ರಿಲೀಸ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ಸಿನಿಮಾ ಫೆ.10ಕ್ಕೆ ರಿಲೀಸ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರ 2023 ರ ಫೆಬ್ರವರಿ 10ರಂದು ಬಿಡುಗಡೆಯಾಗಲಿದೆ. ಕರ್ನಾಟಕ ರಾಜ್ಯೋತ್ಸವದ ಶುಭದಿನದಂದು ಚಿತ್ರದ ಬಿಡುಗಡೆ ದಿನಾಂಕ ಹಾಗೂ ಫಸ್ಟ್ ಲುಕ್ ಅನಾವರಣಗೊಂಡಿದೆ. ನಿರ್ಮಾಪಕ ನವೀನ್ ರಾವ್  ಹಾಗೂ  ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಪೋಷಕರು ಫಸ್ಟ್ ಲುಕ್ ಹಾಗೂ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಿದರು‌.

    ನಾನು ಹಾಗೂ ನಿರ್ಮಾಪಕ ನವೀನ್ ರಾವ್ ಸಹಪಾಠಿಗಳು. ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನನಗೆ ಒಂದು ದಿನ ನನ್ನ ಸ್ನೇಹಿತ ನವೀನ್ ರಾವ್ ಈ ಚಿತ್ರವನ್ನು ನಿರ್ದೇಶಿಸಲು ಪ್ರೇರೇಪಿಸಿದರು. ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿ ಅಂತ ನಿರ್ಧರಿಸಲಾಯಿತು. ಆಗ ಅವರಿಬ್ಬರ ” ದಿಯಾ” ಹಾಗೂ “ಲವ್ ಮಾಕ್ಟೇಲ್” ಸಿನಿಮಾಗಳು ಯಶಸ್ವಿಯಾಗಿದ್ದವು. ಹೀಗೆ ಚಿತ್ರ ಆರಂಭವಾಗಿ ಈಗ ಬಿಡುಗಡೆ ಹಂತಕ್ಕೆ ತಲುಪಿದೆ. ಫೆಬ್ರವರಿ ಹತ್ತರಂದು ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ನವೀನ್ ದ್ವಾರಕನಾಥ್. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

    ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದಾಗ ನನಗೆ ಅನಿಸಿದ್ದು, ನಿರ್ಮಾಪಕ ಹಣ ಒದಗಿಸಿಕೊಡತ್ತಾನೆ.‌ ಆದರೆ ಇಡೀ ತಂಡ ಚಿತ್ರಕ್ಕಾಗಿ ಎಷ್ಟು ಕಷ್ಟ ಪಡುತ್ತದೆ ಎಂದು.  ಅವರೆಲ್ಲರ ಶ್ರಮದಿಂದ ಉತ್ತಮ ಚಿತ್ರವೊಂದು ನಿರ್ಮಾಣವಾಗಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ನವೀನ್ ರಾವ್. ನಾನು ತುಳು ಸಿ‌ನಿಮಾ ಒಂದನ್ನು ಆಗಷ್ಟೇ ಮುಗಿಸಿದೆ. ಮಂಗಳೂರಿನಲ್ಲಿ ನಿರ್ದೇಶಕರು ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ಎಲ್ಲದ್ದಕ್ಕೂ ರಿಜಿಸ್ಟ್ರೇಷನ್ ಕಡ್ಡಾಯ. ನಾವು ಪ್ರೀತಿಗೂ ರಿಜಿಸ್ಟ್ರೇಷನ್ ಕಡ್ಡಾಯವಾದರೆ ಹೇಗೆ ಎಂಬುದನ್ನು ತೋರಿಸಿದ್ದೇವೆ ಎನ್ನುತ್ತಾರೆ ನಾಯಕ ಪೃಥ್ವಿ ಅಂಬರ್.

    ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ಮಾಡಿದ್ದು ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಫೆಬ್ರವರಿ ತಿಂಗಳು ನನಗೆ ಲಕ್ಕಿ. ಈ ಚಿತ್ರ ಕೂಡ ಅದೇ ತಿಂಗಳಲ್ಲಿ ತೆರೆಗೆ ಬರುತ್ತಿರುವುದು ಮತ್ತಷ್ಟು ಖುಷಿಯಾಗಿದೆ ಎಂದರು ನಾಯಕಿ ಮಿಲನ ನಾಗರಾಜ್. ಸಂಗೀತ ನಿರ್ದೇಶಕ ಹರೀಶ್ ಹಾಗೂ ಕಾರ್ಯಕಾರಿ ನಿರ್ಮಾಪಕ ನಿರಂಜನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರೀ ಮೊತ್ತಕ್ಕೆ ‘F0R REGN’  ಚಿತ್ರದ ಆಡಿಯೋ ಹಕ್ಕು ಸೇಲ್

    ಭಾರೀ ಮೊತ್ತಕ್ಕೆ ‘F0R REGN’ ಚಿತ್ರದ ಆಡಿಯೋ ಹಕ್ಕು ಸೇಲ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ‌ ನೀಡಿ ಖರೀದಿಸಿದೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು,   ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿದ್ದಾರೆ. ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಹಾಡಿದ್ದಾರೆ. ಆರ್.ಕೆ.ಹರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು. ಇದನ್ನೂ ಓದಿ:ರಚಿತಾ ರಾಮ್ @30: ಹ್ಯಾಪಿ ಬರ್ತ್‌ಡೇ ರಚ್ಚು ಅಂದ್ರು ಫ್ಯಾನ್ಸ್

    ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರಬಾಕಿಯಿದ್ದು, ಉಳಿದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. ” ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಜೋಡಿಯ ಈ ಚಿತ್ರದ  ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.  ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ನಿಶ್ಚಲ್ ಫಿಲಂಸ್ ಮೂಲಕ  ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.  ನವೀನ್ ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ.  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.

    Live Tv
    [brid partner=56869869 player=32851 video=960834 autoplay=true]