Tag: Naveen Patnaik

  • ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು

    ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು

    ಭುವನೇಶ್ವರ: ಒಡಿಶಾ ಮಾಜಿ ಸಿಎಂ, ಒಡಿಶಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ನವೀನ್ ಪಟ್ನಾಯಕ್ (Naveen Patnaik)  ಆರೋಗ್ಯದಲ್ಲಿ (Health) ಏರುಪೇರು ಉಂಟಾಗಿದ್ದು, ಒಡಿಶಾದ (Odisha) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    78 ವರ್ಷದ ಪಟ್ನಾಯಕ್ ಶನಿವಾರ ರಾತ್ರಿ ಅಸ್ವಸ್ಥಗೊಂಡಿದ್ದರು. ಕೂಡಲೇ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಕುರಿತು ಆಸ್ಪತ್ರೆ ಶೀಘ್ರದಲ್ಲೇ ಬುಲೆಟಿನ್ ಬಿಡುಗಡೆ ಮಾಡಲಿದೆ ಎಂದು ಬಿಜೆಡಿ ಹಿರಿಯ ನಾಯಕ ನವೀನ್ ನಿವಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ NDA ಉಪರಾಷ್ಟ್ರಪತಿ ಅಭ್ಯರ್ಥಿ

    ನವೀನ್ ಪಟ್ನಾಯಕ್ ಜೂನ್ 22ರಂದು ಮುಂಬೈನ ಆಸ್ಪತ್ರೆಯೊಂದರಲ್ಲಿ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಜುಲೈ 7ರಂದು ಅವರನ್ನು ಮುಂಬೈ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಬಳಿಕ ಜುಲೈ 12ರಂದು ಒಡಿಶಾಗೆ ಮರಳಿದ್ದರು. ಇದನ್ನೂ ಓದಿ: ಸಾಲು ಸಾಲು ರಜೆ ಬಳಿಕ ಬೆಂಗಳೂರಿನತ್ತ ಜನ – ನೆಲಮಂಗಲ ಬೈಪಾಸ್ ಬಳಿ ಟ್ರಾಫಿಕ್ ಜಾಮ್

  • ಏನಿದು ಪೋಲಾವರಂ ಯೋಜನೆ? ಒಡಿಶಾದಲ್ಲಿ ವಿರೋಧ ಯಾಕೆ?

    ಏನಿದು ಪೋಲಾವರಂ ಯೋಜನೆ? ಒಡಿಶಾದಲ್ಲಿ ವಿರೋಧ ಯಾಕೆ?

    ಪೋಲಾವರಂ ಯೋಜನೆಯು (Polavaram Dam Project) ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಗೋದಾವರಿ ನದಿಗೆ ನಿರ್ಮಿಸಲಾಗುತ್ತಿರುವ ಬಹುಪಯೋಗಿ ನೀರಾವರಿ ಯೋಜನೆಯಾಗಿದೆ. ಈ ಯೋಜನೆಯು ಗೋದಾವರಿ ನದಿಯ ಮೇಲಿನ ಅಂತರರಾಜ್ಯ ಯೋಜನೆಯಾಗಿದ್ದು, ಇದನ್ನು 1980 ರಲ್ಲಿ ಗೋದಾವರಿ ಜಲ ವಿವಾದಗಳ ನ್ಯಾಯಮಂಡಳಿಯ (GWDT) ಶಿಫಾರಸುಗಳ ಭಾಗವಾಗಿ ನಿರ್ಮಿಸಲಾಗುತ್ತಿದೆ. 

    1980ರ ಏ.2 ರಂದು, ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಒಡಿಶಾ ರಾಜ್ಯಗಳು 36 ಲಕ್ಷ ಕ್ಯುಸೆಕ್‌ ಸಾಮರ್ಥ್ಯದ 150 ಅಡಿ ಜಲಾಶಯ ನಿರ್ಮಾಣದ ಈ ಯೋಜನೆಗೆ ಒಪ್ಪಂದ ಮಾಡಿಕೊಂಡಿವೆ. ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ (ಈಗ ಛತ್ತೀಸ್‌ಗಢವೂ ಸೇರಿಕೊಂಡಿದೆ) ರಾಜ್ಯಗಳ ನಡುವೆ ಗೋದಾವರಿ ನದಿ ನೀರಿಗೆ ಸಂಬಂಧಿಸಿದ ನೀರು ಹಂಚಿಕೆ ವಿವಾದಗಳನ್ನು ಪರಿಹರಿಸಲು ಗೋದಾವರಿ ಜಲ ವಿವಾದಗಳ ನ್ಯಾಯಮಂಡಳಿ (GWDT) ಸ್ಥಾಪಿಸಲಾಯಿತು. ಗೋದಾವರಿ ನದಿ ನೀರಿನ ಬಳಕೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣವು ಆಂಧ್ರಪ್ರದೇಶಕ್ಕೆ 80 ಟಿಎಂಸಿ ಗೋದಾವರಿ ನೀರನ್ನು ನೀರಾವರಿ ಮತ್ತು ಇತರ ಬಳಕೆಗೆ 75% ತಿರುಗಿಸಲು ಅವಕಾಶ ಮಾಡಿಕೊಟ್ಟಿದೆ. ಅಲ್ಲದೇ ಒಪ್ಪಂದ ಅಡಿಯಲ್ಲಿ ಎಲ್ಲಾ ರಾಜ್ಯಗಳ ನಡುವೆ ಸಮಾನ ನೀರಿನ ಹಂಚಿಕೆಯನ್ನು ಖಚಿತಪಡಿಸುತ್ತದೆ.

    ಈಗ ಏಕೆ ಇದು ಸುದ್ದಿಯಲ್ಲಿದೆ? 

    2027ರ ಒಳಗೆ ಪೋಲಾವರಂ ಯೋಜನೆ ಪೂರ್ಣಗೊಳಿಸುವುದಾಗಿ ಆಂದ್ರಪ್ರದೇಶದ ಸರ್ಕಾರ ಘೋಷಿಸಿದೆ. ಇದರ ಬೆನ್ನಲ್ಲೇ, ಒಡಿಶಾದ (Odisha) ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ (ಬಿಜೆಡಿ) ಆಂಧ್ರಪ್ರದೇಶದ ಪೋಲಾವರಂ ವಿವಿಧೋದ್ದೇಶ ಯೋಜನೆಯನ್ನು ವಿರೋಧಿಸಿದೆ. ಈ ಯೋಜನೆಯು ಒಡಿಶಾದ ಮಲ್ಕನ್‌ಗಿರಿಯಲ್ಲಿ ಬುಡಕಟ್ಟು ಜನಾಂಗದವರು ವಾಸಿಸುವ ಹೆಚ್ಚಿನ ಭೂಮಿ ಮುಳುಗಡೆಗೆ ಕಾರಣವಾಗುತ್ತದೆ ಎಂದು ಬಿಜೆಡೆ ಆರೋಪಿಸಿದೆ.

    ಪೋಲಾವರಂ ಯೋಜನೆಯ ಪರಿಣಾಮಗಳೇನು? 

    ಸಾಮಾಜಿಕ ಪರಿಣಾಮ: ಈ ಯೋಜನೆಯು ಸರಿಸುಮಾರು 276 ಹಳ್ಳಿಗಳಾದ್ಯಂತ 150,000 ಜನರನ್ನು ಸ್ಥಳಾಂತರಿಸುವ ನಿರೀಕ್ಷೆಯಿದೆ. ಇವುಗಳಲ್ಲಿ ಹೆಚ್ಚಿನವು ಬುಡಕಟ್ಟು ಸಮುದಾಯಗಳಾಗಿವೆ. ಪ್ರತಿ ಐದು ಎಕರೆ ನೀರಾವರಿಗೆ, ಒಂದು ಬುಡಕಟ್ಟು ಕುಟುಂಬವು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

    ಮೂಲಸೌಕರ್ಯದ ಒತ್ತಡ: ಯೋಜನೆಯು ಪುನರ್ವಸತಿ ಪ್ರಯತ್ನಗಳಿಗೆ ಹಣಕಾಸಿನ ಸವಾಲುಗಳನ್ನು ಎದುರಿಸಲಿದೆ. ಇದು ಸ್ಥಳಾಂತರಗೊಂಡ ಜನರ ಮೇಲೆ ತೀವ್ರ ಪರಿಣಾಮ ಬೀರಬಹುದು. ಇದು ಕಾಲುವೆಗಳಂತಹ ಅಗತ್ಯ ಮೂಲಸೌಕರ್ಯಗಳ ಕೆಲಸವನ್ನು ಸ್ಥಗಿತಗೊಳಿಸುವುದಕ್ಕೆ ಕಾರಣವಾಗುತ್ತದೆ. 

    ಪರಿಸರದ ಮೇಲಿನ ಪ್ರಭಾವ: ಅಣೆಕಟ್ಟಿನ ಹಿನ್ನೀರು ಅಂದಾಜು 3,731 ಹೆಕ್ಟೇರ್ ಅರಣ್ಯ ಭೂಮಿಯನ್ನು ಮುಳುಗಿಸುತ್ತದೆ. ಇದರಿಂದ ಭೂಕುಸಿತ ಸಂಭವಿಸುವ ಆತಂಕವಿದೆ. 

    ಪೋಲವರಂ ಯೋಜನೆಯ ಮುಖ್ಯಂಶಗಳು 

    ಈ ಯೋಜನೆಗೆ ಭಾರತದ ಕೇಂದ್ರ ಸರ್ಕಾರವು ರಾಷ್ಟ್ರೀಯ ಯೋಜನಾ ಸ್ಥಾನಮಾನವನ್ನು ನೀಡಿದೆ. ಇದು 55,000 ಕೋಟಿ ರೂ. ಯೋಜನೆಯಾಗಿದೆ. ಕೇಂದ್ರ ಸರ್ಕಾರದಿಂದ ಈ ಯೋಜನೆಗೆ 12,157 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಈಗಾಗಲೇ, 2,900 ಕೋಟಿ ರೂ. ಬಿಡುಗಡೆಯಾಗಿದೆ. ಪೋಲವರಂ ಯೋಜನೆಯಿಂದ 4.3 ಲಕ್ಷ ಹೆಕ್ಷರ್‌ಗೆ ನೀರಾವರಿ ಸೌಲಭ್ಯ ಸಿಗಲಿದೆ. 611 ಹಳ್ಳಿಗಳಿಗೆ ಕುಡಿಯುವ ನೀರು, 960 ಮೆ.ವ್ಯಾ ವಿದ್ಯುತ್‌ ಉತ್ಪಾದನೆ ಮಾಡುವ ಗುರಿ ಈ ಯೋಜನೆಯದ್ದಾಗಿದೆ. 

    BJD ಎತ್ತಿರುವ ಕಳವಳಗಳೇನು?

    ಡ್ಯಾಮ್ ಸಾಮರ್ಥ್ಯವನ್ನು 36 ಲಕ್ಷ ಕ್ಯುಸೆಕ್‌ನಿಂದ 50 ಲಕ್ಷ ಕ್ಯುಸೆಕ್‌ಗೆ ಹೆಚ್ಚಿಸಲಾಗಿದೆ ಎಂದು ಬಿಜೆಡಿ ಆರೋಪಿಸಿದೆ. ಒಡಿಶಾ ಮತ್ತು ಛತ್ತೀಸ್‌ಗಢದ (ಹಿಂದಿನ ಮಧ್ಯಪ್ರದೇಶದ ಭಾಗ) ಮೇಲಿನ ಹಿನ್ನೀರಿನ ಪ್ರಭಾವವನ್ನು ಸಾಕಷ್ಟು ಪರಿಗಣಿಸದೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಡೆ ಆರೋಪಿಸಿದೆ. 

    ಮುಳುಗಡೆ ಮಟ್ಟವನ್ನು ಮಿತಿಗೊಳಿಸಲು ಮೊದಲೇ ಹೇಳಿದಂತೆ ಡ್ಯಾಮ್‌ನ ಎತ್ತರ 150 ಅಡಿ ಇರಬೇಕು. ಯೋಜನೆಯ ವಿನ್ಯಾಸದಲ್ಲಿನ ಬದಲಾವಣೆಯು ಒಡಿಶಾದಲ್ಲಿ ಗರಿಷ್ಠ ಹಿನ್ನೀರಿನ ಮಟ್ಟವನ್ನು 174.22 ಅಡಿಗಳಿಗೆ ಹೆಚ್ಚಿಸುತ್ತದೆ ಎಂದು BJD ಹೇಳಿಕೊಂಡಿದೆ. 

    ಇದು ತಮ್ಮ ಭೂಮಿ ಮತ್ತು ಮನೆಗಳನ್ನು ಕಳೆದುಕೊಳ್ಳುವ ಅಪಾಯದಲ್ಲಿರುವ ಮಲ್ಕಾನ್‌ಗಿರಿಯ ಜನಸಂಖ್ಯೆಯ ಮೇಲೆ ಪರಿಣಾಮ ಬೀರಬಹುದು. ಯೋಜನೆಯಿಂದಾಗಿ ಮಲ್ಕನಗಿರಿಯ ಸುಮಾರು 162 ಗ್ರಾಮಗಳು ಮುಳುಗಡೆಯಾಗುವ ಸಾಧ್ಯತೆಯಿದೆ ಎಂದು ಬಿಜೆಡೆ ಕಳವಳ ವ್ಯಕ್ತಪಡಿಸಿದೆ.

  • ನವೀನ್‌ ಪಟ್ನಾಯಕ್‌ ಆಪ್ತ ವಿ.ಕೆ.ಪಾಂಡಿಯನ್‌ ಸಕ್ರಿಯ ರಾಜಕಾರಣಕ್ಕೆ ವಿದಾಯ

    ನವೀನ್‌ ಪಟ್ನಾಯಕ್‌ ಆಪ್ತ ವಿ.ಕೆ.ಪಾಂಡಿಯನ್‌ ಸಕ್ರಿಯ ರಾಜಕಾರಣಕ್ಕೆ ವಿದಾಯ

    ನವದೆಹಲಿ: ಮಾಜಿ ಅಧಿಕಾರಿ ಮತ್ತು ಬಿಜೆಡಿ ನಾಯಕ ವಿ.ಕೆ.ಪಾಂಡಿಯನ್ (VK Pandian) ಸಕ್ರಿಯ ರಾಜಕೀಯದಿಂದ (Politics) ಹಿಂದೆ ಸರಿದಿದ್ದಾರೆ.

    ಈಗ ನಾನು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ. ಇಷ್ಟು ವರ್ಷಗಳ ರಾಜಕೀಯ ಪ್ರಯಾಣದಲ್ಲಿ ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ. ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಸೇರಿದಂತೆ ಇಡೀ ಬಿಜು ಪರಿವಾರದ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

    ರಾಜಕೀಯಕ್ಕೆ ಸೇರುವ ನನ್ನ ಉದ್ದೇಶವು ನವೀನ್ ಬಾಬುಗೆ ಸಹಾಯ ಮಾಡುವುದಾಗಿತ್ತು. ಈಗ ನಾನು ಪ್ರಜ್ಞಾಪೂರ್ವಕವಾಗಿ ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ ಎಂದು ಮಾಜಿ ಅಧಿಕಾರಿ ಪಾಂಡಿಯನ್ ವೀಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

    ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಬಿಜು ಜನತಾ ದಳ (ಬಿಜೆಡಿ) ಮುಖಭಂಗ ಅನುಭವಿಸಿದ ನಂತರ ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಅವರ ಆಪ್ತ ವಿಕೆ ಪಾಂಡಿಯನ್ ಅವರು ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

    ನವೀನ್ ಪಟ್ನಾಯಕ್ ಅವರ ಸಂಭಾವ್ಯ ಉತ್ತರಾಧಿಕಾರಿ ಎಂದೇ ಪಾಂಡಿಯನ್‌ ಅವರನ್ನು ಬಿಂಬಿಸಲಾಗಿತ್ತು. ಇದೀಗ ಚುನಾವಣೆಯಲ್ಲಿ ಬಿಜೆಡಿಯ ಹೀನಾಯ ಸೋಲಿನ ನಂತರ ಪಾಂಡಿಯನ್‌ ತೀವ್ರ ಟೀಕೆಗೆ ಗುರಿಯಾಗಿದ್ದರು.

  • 24 ವರ್ಷಗಳ ನಂತ್ರ ಅಧಿಕಾರ ಕಳೆದುಕೊಂಡ ಬಿಜೆಡಿ- ನವೀನ್ ಪಟ್ನಾಯಕ್ ರಾಜೀನಾಮೆ

    24 ವರ್ಷಗಳ ನಂತ್ರ ಅಧಿಕಾರ ಕಳೆದುಕೊಂಡ ಬಿಜೆಡಿ- ನವೀನ್ ಪಟ್ನಾಯಕ್ ರಾಜೀನಾಮೆ

    ಭುವನೇಶ್ವರ: ಬಿಜೆಪಿ ವಿರುದ್ಧ ಸೋಲಿನ ಬಳಿಕ ಇದೀಗ ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ರಾಜೀನಾಮೆ ಸಲ್ಲಿಸಿದ್ದಾರೆ.

    ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ (Governor Raghubar Das) ಅವರನ್ನು ಭೇಟಿ ಮಾಡಿದರು. ಬಳಿಕ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ನೀಡಿದರು. ಇದನ್ನೂ ಓದಿ: ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ ನಿತೀಶ್‌ ಕುಮಾರ್‌, ತೇಜಸ್ವಿ ಯಾದವ್‌

    ಜೂನ್ 4 (ನಿನ್ನೆ) ಒಡಿಶಾ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಘೋಷಿಸಿತು. ನವೀನ್ ಪಟ್ನಾಯಕ್ ಅವರ ಬಿಜೆಡಿ 51 ಸ್ಥಾನಗಳನ್ನು ಗೆದ್ದು 24 ವರ್ಷಗಳ ನಂತರ ಅಧಿಕಾರವನ್ನು ಕಳೆದುಕೊಂಡಿತು. ಪ್ರಮುಖ ಪ್ರತಿಸ್ಪರ್ಧಿ ಬಿಜೆಪಿ 71 ಸ್ಥಾನಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದೆ. ಒಡಿಶಾದಲ್ಲಿ 147 ವಿಧಾನಸಭಾ ಸ್ಥಾನಗಳಿದ್ದು, ಸರ್ಕಾರ ರಚನೆಗೆ ಬಹುಮತಕ್ಕೆ 74 ಸ್ಥಾನಗಳ ಅಗತ್ಯವಿದೆ. ಕಾಂಗ್ರೆಸ್ 14 ಸ್ಥಾನಗಳನ್ನು ಗೆದ್ದಿದೆ.

    2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 9, ಸಿಪಿಐ (ಎಂ) ಒಂದು ಸ್ಥಾನದಲ್ಲಿ ಗೆಲುವು ಕಂಡಿತ್ತು.

  • ಒಡಿಶಾದಲ್ಲಿ ಬಿಜೆಡಿ ಕೋಟೆ ಛಿದ್ರ – ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ

    ಒಡಿಶಾದಲ್ಲಿ ಬಿಜೆಡಿ ಕೋಟೆ ಛಿದ್ರ – ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ

    ಭುವನೇಶ್ವರ: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ (Odisha Assembly Election Results) ಇದೇ ಮೊದಲ ಬಾರಿಗೆ ಬಿಜೆಪಿ (BJP) ಐತಿಹಾಸಿಕ ಜಯ ಸಾಧಿಸಿ ಬಿಜೆಡಿ ಕೋಟೆಯನ್ನು ಛಿದ್ರಗೊಳಿಸಿದೆ.

    ಎರಡೂವರೆ ದಶಕಗಳ ನಂತರ ಒಡಿಶಾದಲ್ಲಿ ಬಿಜೆಡಿ (BJD) ಪ್ರಾಬಲ್ಯ ಅಂತ್ಯಗೊಂಡಿದೆ. 2000 ರಿಂದ 2024ರವರೆಗೆ ಸತತ 24 ವರ್ಷಗಳ ಕಾಲ ಬಿಜು ಜನತಾದಳದ ನವೀನ್ ಪಟ್ನಾಯಕ್ ಅಧಿಕಾರದಲ್ಲಿದ್ದರು.  ಇದೀಗ ಐದು ಬಾರಿಯ ಸಿಎಂ ನವೀನ್ ಪಟ್ನಾಯಕ್ ಅಧಿಕಾರ ಪರ್ವಕ್ಕೆ ತೆರೆ ಬಿದ್ದಿದೆ.

    ಕಂಟಾಬಂಜ್‌ನಲ್ಲಿ ನವೀನ್ ಪಟ್ನಾಯಕ್ (Naveen Patnaik) ಸೋಲು ಅನುಭವಿಸಿದ್ದಾರೆ. ಬಿಜೆಪಿ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಡಿ 112 ಸ್ಥಾನಗಳನ್ನು ಪಡೆದಿತ್ತು. ಬಿಜೆಪಿ 23 ಸ್ಥಾನಗಳನ್ನು ಪಡೆದರೆ, ಕಾಂಗ್ರೆಸ್ 9, ಸಿಪಿಐ (ಎಂ) ಒಂದು ಸ್ಥಾನದಲ್ಲಿ ಗೆಲುವು ಕಂಡಿತ್ತು. ಇದನ್ನೂ ಓದಿ: ಕೇರಳದಲ್ಲಿ ಮೊದಲ ಬಾರಿಗೆ ಅರಳಿದ ಕಮಲ – ಸುರೇಶ್‌ ಗೋಪಿಗೆ ಗೆಲುವು

    ಒಡಿಶಾ ಅಸೆಂಬ್ಲಿ ಫಲಿತಾಂಶ (ಒಟ್ಟು 147 ಸ್ಥಾನಗಳು)
    * ಬಿಜೆಪಿ- 80
    * ಬಿಜೆಡಿ- 49
    * ಕಾಂಗ್ರೆಸ್- 14
    * ಪಕ್ಷೇತರ- 03 ಇದನ್ನೂ ಓದಿ: ವಾರಣಾಸಿಯಲ್ಲಿ ಮೋದಿಗೆ ಹ್ಯಾಟ್ರಿಕ್‌ ಜಯ – ಕಡಿಮೆಯಾಯ್ತು ಗೆಲುವಿನ ಅಂತರ

    ಲೋಕಸಭಾದಲ್ಲೂ ಕಮಾಲ್‌:
    21 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 19, ಬಿಜೆಡಿ 1, ಕಾಂಗ್ರೆಸ್‌ 1 ಸ್ಥಾನವನ್ನು ಗೆದ್ದುಕೊಂಡಿದೆ. 2019 ರ ಚುನಾವಣೆಯಲ್ಲಿ ಬಿಜೆಡಿ 12, ಬಿಜೆಪಿ 7, ಕಾಂಗ್ರೆಸ್‌ 1 ಸ್ಥಾನವನ್ನು ಗೆದ್ದುಕೊಂಡಿತ್ತು.

  • ಕೈ ನಡುಗುತ್ತಿದೆ ಅಂತಾ ಟೀಕಿಸಿದ ಬಿಜೆಪಿ ವಿರುದ್ಧ ನವೀನ್ ಪಟ್ನಾಯಕ್ ಕಿಡಿ

    ಕೈ ನಡುಗುತ್ತಿದೆ ಅಂತಾ ಟೀಕಿಸಿದ ಬಿಜೆಪಿ ವಿರುದ್ಧ ನವೀನ್ ಪಟ್ನಾಯಕ್ ಕಿಡಿ

    ಭುವನೇಶ್ವರ: ಮಾತನಾಡುತ್ತಿದ್ದ ಸಂದರ್ಭದಲ್ಲಿ ಕೈ ನಡುಗುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯವರ ಟೀಕೆಗೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ (Naveen Patnaik) ಕಿಡಿಕಾರಿದ್ದಾರೆ.

    ಬೇಡದ ವಿಚಾರಗಳನ್ನು ಸಮಸ್ಯೆಗಳನ್ನಾಗಿ ಮಾಡಲು ಹೆಸರುವಾಸಿಯಾಗಿರುವ ಬಿಜೆಪಿ (BJP) ಇದೀಗ ನನ್ನ ಕೈಗಳ ಬಗ್ಗೆ ಚರ್ಚಿಸುತ್ತಿದೆ. ಇದು ಖಂಡಿತವಾಗಿಯೂ ಕೆಲಸ ಮಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಏನಿದು ವಿಚಾರ..?: ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಇದನ್ನು ಬಿಜೆಪಿ ರಾಜಕೀಯ ಅಸ್ತ್ರ ಮಾಡಿಕೊಂಡಿದೆ. ನಡುಗುವ ಕೈಗಳಲ್ಲಿ ಮೈಕ್ ಹಿಡಿದು ನವೀನ್ ಪಟ್ನಾಯಕ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ಅವರ ಸಹಾಯಕ್ಕೆ ಬಿಜೆಡಿ ನಾಯಕ ವಿಕೆ ಪಾಂಡಿಯನ್ ಬಂದಿದ್ದಾರೆ.

    ಈ ವಿಡಿಯೋ ಶೇರ್ ಮಾಡುತ್ತಿರುವ ಬಿಜೆಪಿ, 77ರ ಹರೆಯದ ನವೀನ್ ಪಟ್ನಾಯಕ್ ಅವರ ಕೈಗಳು 5 ವರ್ಷಗಳಾದರೂ ನಡುಗುತ್ತಿವೆ ಎಂಬುದು ಗುಟ್ಟಾಗಿ ಉಳಿದಿಲ್ಲ. ಪಾಂಡಿಯನ್ ಅವರು ಪಟ್ನಾಯಕ್ ಅವರ ನಡುಗುವ ಕೈಯನ್ನು ಹಿಡಿದು ಅದನ್ನು ಮರೆಮಾಚಲು ಪ್ರಯತ್ನಿಸುವ ರೀತಿ ಗಮನ ಸೆಳೆದಿದೆ ಎಂದು ಕುಟುಕಿದೆ. ಇದನ್ನೂ ಓದಿ: ಭಾಷಣದ ನಡುವೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ!- ವೀಡಿಯೋ ವೈರಲ್‌

    ಇತ್ತ ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವಾ ಶರ್ಮಾ ತಮ್ಮ ಎಕ್ಸ್‌ ಖಾತೆಯಲ್ಲಿ, ಇದೊಂದು ಅತೀವ ಸಂಕಟದ ವೀಡಿಯೋ ವಿ.ಕೆ. ಪಾಂಡಿಯನ್ ಅವರು ನವೀನ್ ಪಟ್ನಾಯಕ್ ಅವರ ಕೈ ಚಲನೆಯನ್ನು ಸಹ ನಿಯಂತ್ರಿಸಿದ್ದಾರೆ‌ ಎಂದಿದ್ದಾರೆ. ಇತ್ತ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು, ನವೀನ್ ಪಟ್ನಾಯಕ್ ಅಸ್ವಸ್ಥತೆ ಕಾರಣದಿಂದ ತಮ್ಮ ಅಧಿಕಾರಾವಧಿಯನ್ನು ಕೊನೆಗೊಳಿಸಬೇಕು ಎಂದು ತಮ್ಮ ಎಕ್ಸ್‌ ಖಾತೆಯ ಮೂಲಕ ಸಲಹೆ ನೀಡಿದ್ದಾರೆ.

  • 15 ವರ್ಷದ ಬಳಿಕ ಘರ್‌ ವಾಪ್ಸಿ – ಮರಳಿ ಬಿಜೆಪಿ ಜೊತೆ ಬಿಜೆಡಿ ಮೈತ್ರಿ?

    15 ವರ್ಷದ ಬಳಿಕ ಘರ್‌ ವಾಪ್ಸಿ – ಮರಳಿ ಬಿಜೆಪಿ ಜೊತೆ ಬಿಜೆಡಿ ಮೈತ್ರಿ?

    ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಈಗಾಗಲೇ ಹಲವು ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ (BJP) ಈಗ ಒಡಿಶಾದಲ್ಲೂ (Odisha) ಬಿಜೆಡಿ (BJD) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿದೆ.

    ಎರಡು ಪಕ್ಷದಲ್ಲೂ ಬಿರುಸಿನ ಮಾತುಕತೆ ನಡೆಯುತ್ತಿದ್ದು ಒಂದು ವೇಳೆ ಮೈತ್ರಿ ಮಾಡಿಕೊಂಡರೆ 15 ವರ್ಷದ ಬಳಿಕ ಬಿಜೆಡಿ ಮರಳಿ ಎನ್‌ಡಿಎ (NDA) ಮೈತ್ರಿಕೂಟವನ್ನು ಸೇರಿದಂತಾಗುತ್ತದೆ. ಮೈತ್ರಿಯ ಬಗ್ಗೆ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಆದರೆ ಎರಡು ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಮೈತ್ರಿ ಬಗ್ಗೆ ಸುಳಿವು ನೀಡುತ್ತಿದೆ.

     

    ಬಿಜೆಡಿ ನಾಯಕರು ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ (Naveen Patnaik) ನಿವಾಸದಲ್ಲಿ ಸುದೀರ್ಘ ಸಭೆ ನಡೆಸಿದ್ದರೆ ದೆಹಲಿಯಲ್ಲಿ ಬಿಜೆಪಿ ನಾಯಕರು ಕೂಡ ಚುನಾವಣೆ ಕುರಿತು ಬಿರುಸಿನ ಚರ್ಚಿಸಿದ್ದಾರೆ.

    ಎರಡು ಪಕ್ಷಗಳು 1998 ರಿಂದ 2009 ರವರೆಗೆ ಮಿತ್ರಪಕ್ಷಗಳಾಗಿದ್ದವು. ಮುಖ್ಯಮಂತ್ರಿಯಾಗುವ ಮೊದಲು ನವೀನ್ ಪಟ್ನಾಯಕ್ ಅವರು 1990ರ ದಶಕದಲ್ಲಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee Govt) ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿದ್ದರು. 2008ರಲ್ಲಿ ನಡೆದ ಕಂಧಮಾಲ್ ಗಲಭೆಯ ನಂತರ ಬಿಜೆಪಿ ಜೊತೆಗಿನ ಮೈತ್ರಿಗೆ ಬಿಜೆಡಿ ಗುಡ್‌ಬೈ ಹೇಳಿತ್ತು. ಇದನ್ನೂ ಓದಿ: ವಿಶ್ವಪ್ರಸಿದ್ಧ ಯಾಣದಲ್ಲಿ ದೇಶದ ಮೊದಲ WiFi-7 ಸೇವೆ

     

    ರಾಜ್ಯಸಭಾ ಚುನಾವಣೆಯಲ್ಲಿ ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಬಿಜೆಡಿ ಬೆಂಬಲ ನೀಡಿತ್ತು. ರಾಜ್ಯಸಭೆಯಲ್ಲಿ ಬಿಜೆಪಿಗೆ ಬಹುಮತ ಇಲ್ಲದೆ ಇದ್ದರೂ ಮಹತ್ವದ ಮಸೂದೆಗಳು ಮಂಡನೆಯಾದ ಸಂದರ್ಭದಲ್ಲಿ ಬಿಜೆಡಿ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿತ್ತು.  ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್‌ – ಬಾಂಬರ್‌ ಬಳ್ಳಾರಿಯಿಂದ ಭಟ್ಕಳಕ್ಕೆ ತೆರಳಿರುವ ಶಂಕೆ

    ಮೂಲಗಳ ಪ್ರಕಾರ ಮೈತ್ರಿ ಮಾತುಕತೆ ನಡೆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಕ್ಷೇತ್ರ ಕೇಳಿದರೆ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಡಿ ಹೆಚ್ಚಿನ ಕ್ಷೇತ್ರದಲ್ಲಿ ಸ್ಪರ್ಧೆ ನಡೆಸಲಿದೆ. ಒಡಿಶಾದ 21 ಲೋಕಸಭಾ ಕ್ಷೇತ್ರಗಳಲ್ಲಿ 14 ಕ್ಷೇತ್ರಗಳನ್ನು ಬಿಜೆಪಿ ಕೇಳುತ್ತಿದೆ. ಅಂತಿಮವಾಗಿ ಬಿಜೆಪಿಗೆ 11, ಬಿಜೆಡಿಗೆ 9 ಕ್ಷೇತ್ರ ಸಿಗಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಬಿಜೆಪಿ 8, ಬಿಜೆಡಿ 12, ಕಾಂಗ್ರೆಸ್‌ 1 ಸ್ಥಾವನ್ನು ಹೊಂದಿದೆ.

    2019ರ ವಿಧಾನಸಭಾ ಚುನಾವಣೆಯ ಒಟ್ಟು 147 ಸ್ಥಾನಗಳ ಪೈಕಿ ಬಿಜೆಡಿ 112, ಬಿಜೆಪಿ 23 ಸ್ಥಾನಗಳನ್ನು ಹೊಂದಿದ್ದರೆ ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಜಯಗಳಿಸಿದೆ. ಈ ಚುನಾವಣೆಯಲ್ಲಿ ಬಿಜೆಡಿ 100ಕ್ಕೂ ಅಧಿಕ ಕ್ಷೇತ್ರಗಳನ್ನು ಕೇಳಿದರೆ ಬಿಜೆಪಿ 40 ಕ್ಷೇತ್ರಗಳನ್ನು ಕೇಳಬಹುದು ಎಂದು ಅಂದಾಜಿಸಲಾಗಿದೆ.

     

  • ಖ್ಯಾತ ಲೇಖಕಿ, ನವೀನ್ ಪಟ್ನಾಯಕ್ ಸಹೋದರಿ ವಿಧಿವಶ

    ಖ್ಯಾತ ಲೇಖಕಿ, ನವೀನ್ ಪಟ್ನಾಯಕ್ ಸಹೋದರಿ ವಿಧಿವಶ

    ಭುವನೇಶ್ವರಿ: ಖ್ಯಾತ ಲೇಖಕಿ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಅವರ ಸಹೋದರಿ ಗೀತಾ ಮೆಹ್ತಾ (80) (Gita Mehta) ವಿಧಿವಶರಾಗಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶನಿವಾರ ದೆಹಲಿಯಲ್ಲಿರುವ ನಿವಾಸದಲ್ಲಿ ನಿಧನರಾದರು. ಗೀತಾ ಅವರು ಮಗ ಹಾಗೂ ಪತಿ ಸೋನಿ ಮೆಹ್ತಾ ಅವರನ್ನು ಅಗಲಿದ್ದಾರೆ.

    ತಂದೆ ಬಿಜು ಪಟ್ನಾಯಕ್ ಮತ್ತು ತಾಯಿ ಜ್ಞಾನ್ ಪಟ್ನಾಯಕ್ ದಂಪತಿಯ ಮಗಳಾಗಿರುವ ಗೀತಾ ಅವರು 1943 ರಲ್ಲಿ ಹುಟ್ಟಿದರು. ಇವರು ಭಾರತದಲ್ಲಿ ಮತ್ತು ಯುನೈಟೆಡ್ ಕಿಂಗ್‍ಡಮ್‍ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದರು.

    ಸದ್ಯ ಗೀತಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಮೆಹ್ತಾ ಅವರ ವ್ಯಕ್ತಿತ್ವ ಬಹುಮುಖವಾಗಿದ್ದು, ಬರವಣಿಗೆ ಮತ್ತು ಸಾಕ್ಷ್ಯ ಚಿತ್ರ ನಿರ್ಮಾಣದಲ್ಲಿ ಖ್ಯಾತಿ ಗಳಿಸಿದ್ದರು. ಪ್ರಕೃತಿ ಮತ್ತು ನೀರಿನ ಸಂರಕ್ಷಣೆಯ ಬಗ್ಗೆ ಸಾಕಷ್ಟು ಒಲವು ತೋರಿದ್ದರು ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಡಿಶಾ ರೈಲು ದುರಂತದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ದೇಣಿಗೆ ನೀಡಿದ ಭಾರತೀಯ ಫುಟ್ಬಾಲ್‌ ತಂಡ

    ಒಡಿಶಾ ರೈಲು ದುರಂತದಲ್ಲಿ ಮೃತರ ಕುಟುಂಬಕ್ಕೆ 20 ಲಕ್ಷ ದೇಣಿಗೆ ನೀಡಿದ ಭಾರತೀಯ ಫುಟ್ಬಾಲ್‌ ತಂಡ

    ಭುವನೇಶ್ವರ: ಭಾರತೀಯ ಫುಟ್ಬಾಲ್‌ ತಂಡವು (Indian Football Team) ಇಂಟರ್‌ಕಾಂಟಿನೆಂಟಲ್ ಕಪ್ ನಗದು ಬಹುಮಾನವಾಗಿ ಪಡೆದ ಹಣದಲ್ಲಿ 20 ಲಕ್ಷ ರೂ.ಗಳನ್ನ ಬಾಲಸೋರ್ ರೈಲು ದುರಂತದಲ್ಲಿ (Odisha Train Accident) ಮೃತಪಟ್ಟವರ ಕುಟುಂಬಗಳಿಗೆ ದೇಣಿಯಾಗಿ ನೀಡಿದೆ. ಈ ಮೂಲಕ ಕಪ್‌ ಗೆಲ್ಲುವ ಜೊತೆಗೆ ಭಾರತೀಯರ ಮನವನ್ನೂ ಗೆದ್ದಿದೆ.

    ಚಾಂಪಿಯನ್‌ ಪಟ್ಟ ಗೆದ್ದ ನಂತರ ಸಿಕ್ಕ ನಗದು ಪ್ರಶಸ್ತಿಯ ಒಂದು ಭಾಗವನ್ನ ಒಡಿಶಾ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳ ʻಪರಿಹಾರ ಮತ್ತು ಪುನರ್ವಸತಿʼ ಕಾರ್ಯಕ್ಕಾಗಿ ದಾನ ಮಾಡಲು ಭಾರತೀಯ ಫುಟ್ಬಾಲ್‌ ತಂಡ ನಿರ್ಧರಿಸಿದೆ. ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳಿಂದಲೂ ಇದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತ; ಸಂಚಾರ ರದ್ದಾಗಿ ಬೆಂಗ್ಳೂರಲ್ಲೇ ನಿಂತ ಬೆಂಗಳೂರು-ಗುವಾಹಟಿ ರೈಲು 

    ಭಾನುವಾರ ಒಡಿಶಾದಲ್ಲಿ ನಡೆದ ಇಂಟರ್‌ಕಾಂಟಿನೆಂಟಲ್ ಕಪ್ ಫೈನಲ್‌ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು 2-0 ಗೋಲುಗಳಿಂದ ಎದುರಾಳಿ ಲೆಬನಾನ್ ತಂಡವನ್ನ ಮಣಿಸಿತು. ಈ ಮೂಲಕ 2ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು. ಫೈನಲ್‌ ಪಂದ್ಯದಲ್ಲಿ ಗೆದ್ದ ಭಾರತ ತಂಡಕ್ಕೆ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ (Naveen Patnaik) 1 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದರು. ಈ ಮೊತ್ತದಲ್ಲಿ 20 ಲಕ್ಷ ರೂ.ಗಳನ್ನ ದೇಣಿಗೆ ನೀಡಲು ಫುಟ್ಬಾಲ್‌ ತಂಡ ಸಾಮೂಹಿಕ ನಿರ್ಧಾರ ಮಾಡಿತು.  

    ಗೆಲುವಿಗೆ ಬಹುಮಾನವಾಗಿ ನಗದು ಬೋನಸ್ ನೀಡುತ್ತಿರುವುದಕ್ಕೆ ಒಡಿಶಾ ಸರ್ಕಾರಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ನಾವೆಲ್ಲರೂ ತ್ವರಿತ ಮತ್ತು ಸಾಮೂಹಿಕ ನಿರ್ಧಾರವೊಂದಕ್ಕೆ ಬಂದಿದ್ದೇವೆ. ಈ ಮೊತ್ತದಲ್ಲಿ 20 ಲಕ್ಷ ರೂ.ಗಳನ್ನ ದೇಣಿಗೆ ನೀಡಲು ನಿರ್ಧರಿಸಿದ್ದೇವೆ. ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗೆ ಈ ಹಣವನ್ನು ನೀಡಲಾಗುತ್ತದೆ ಎಂದು ಭಾರತೀಯ ಫುಟ್ಬಾಲ್ ತಂಡ ಟ್ವೀಟ್ ಟ್ವೀಟ್‌ ಮೂಲಕ ತಿಳಿಸಿದೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದ ಬಳಿಕ ಎಚ್ಚೆತ್ತ ರೈಲ್ವೆ ಇಲಾಖೆ- ಟ್ರ್ಯಾಕ್‌ಗಳ ಡೀಪ್ ಸ್ಕ್ರೀನಿಂಗ್‌ಗೆ ನಿರ್ಧಾರ

    ಅದೇ ರೀತಿ ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಕೂಡಾ, ರೈಲು ದುರಂತದಿಂದ ಸಾವನ್ನಪ್ಪಿದವರ ಕುಟುಂಬಸ್ಥರ ನೆರವಿಗೆ ಬಂದಿದ್ದಾರೆ. ದುರಂತ ಅಪಘಾತದಲ್ಲಿ ಜೀವ ಕಳೆದುಕೊಂಡವರ ಮಕ್ಕಳ ಶಿಕ್ಷಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

    ಇದೇ ತಿಂಗಳ ಜೂನ್‌ 2ರ ರಾತ್ರಿ ಓಡಿಶಾದ ಬಾಲಸೋರ್‌ನಲ್ಲಿ ಭೀಕರ ರೈಲು ದುರಂತ ನಡೆದಿತ್ತು.

  • ಒಡಿಶಾ ರೈಲು ಅಪಘಾತ ಬೆನ್ನಲ್ಲೇ ಮತ್ತೊಂದು ದುರಂತ – ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವು

    ಒಡಿಶಾ ರೈಲು ಅಪಘಾತ ಬೆನ್ನಲ್ಲೇ ಮತ್ತೊಂದು ದುರಂತ – ಗೂಡ್ಸ್ ರೈಲಿಗೆ ಸಿಲುಕಿ 6 ಕಾರ್ಮಿಕರು ಸಾವು

    ಭುವನೇಶ್ವರ: ಒಡಿಶಾದಲ್ಲಿ (Odisha) ನಡೆದ ತ್ರಿವಳಿ ರೈಲು ಅಪಘಾತದ ಬೆನ್ನಲ್ಲೇ, ಗೂಡ್ಸ್ ರೈಲಿಗೆ (Goods Train) ಸಿಲುಕಿ 6 ಕಾರ್ಮಿಕರು (Workers) ಸಾವನ್ನಪ್ಪಿದ ಘಟನೆ ಒಡಿಶಾದ ಜಾಜ್‌ಪುರ (Jajpur) ಜಿಲ್ಲೆಯಲ್ಲಿ ನಡೆದಿದೆ.

    ಮೃತ ಕಾರ್ಮಿಕರು ಜಾಜ್‌ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ರೈಲ್ವೆ ಸೈಡಿಂಗ್ (Railway Siding) ಕೆಲಸ ಮಾಡುತ್ತಿದ್ದರು. ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಗುಡುಗು ಸಹಿತ ಮಳೆಯಾಗಿದ್ದರಿಂದ (Thunder Storm) ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದಾರೆ. ದುರಾದೃಷ್ಟವಶಾತ್ ರೈಲಿಗೆ ಎಂಜಿನ್ ಜೋಡಿಸಿರಲಿಲ್ಲ. ಜೋರು ಮಳೆಯಿಂದಾಗಿ ರೈಲು ಚಲಿಸಲು ಪ್ರಾಂಭಿಸಿದ್ದು, ಅದರ ಅಡಿಯಲ್ಲಿ ಆಶ್ರಯ ಪಡೆದಿದ್ದ ಕಾರ್ಮಿಕರು ರೈಲಿನಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪ್ರಜ್ಞಾ ಠಾಕೂರ್‌ನೊಂದಿಗೆ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಿದ ಯುವತಿ ನಾಪತ್ತೆ- ಮುಸ್ಲಿಂ ಯುವಕನೊಂದಿಗೆ ಪರಾರಿ?

    ಘಟನೆಯಿಂದ ಇಬ್ಬರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಟಕ್‌ನಲ್ಲಿರುವ (Cuttack) ಎಸ್‌ಸಿಬಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ (Naveen Patnaik) ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ಗಾಯಗೊಂಡಿರುವ ಕಾರ್ಮಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸಂಬಧಂಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ

    ಒಡಿಶಾದ ಬಾಲಸೋರ್‌ನಲ್ಲಿ ನಡೆದ ತ್ರಿವಳಿ ರೈಲು ಅಪಘಾತದ 5 ದಿನಗಳ ಬಳಿಕ ಈ ಘಟನೆ ನಡೆದಿದೆ. ಒಡಿಶಾ ರೈಲು ಅಪಾಘಾತದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದು, ತನಿಖಾಧಿಕಾರಿಗಳು ಮಾನವ ದೋಷ, ಸಿಗ್ನಲ್ ವೈಫಲ್ಯ ಮತ್ತು ಮೂರು ರೈಲುಗಳ ಅಪಘಾತದ ಹಿಂದಿನ ಸಂಭವನೀಯ ಕಾರಣಗಳನ್ನು ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಪರಿಹಾರದ ಹಣಕ್ಕಾಗಿ ಮೃತ ವ್ಯಕ್ತಿಯನ್ನು ಪತಿ ಎಂದ ಮಹಿಳೆ