ಅಮೆರಿಕಾದಲ್ಲಿ ನಡೆದ ಅಪಘಾತದಲ್ಲಿ ಆಸ್ಪತ್ರೆ ಪಾಲಾಗಿದ್ದ ತೆಲುಗಿನ ಖ್ಯಾತ ಯುವ ನಟ ನವೀನ್ ಪೊಲಿಶೆಟ್ಟಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನುಷ್ಕಾ ಶೆಟ್ಟಿ (Anushka Shetty) ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನವೀನ್ ಪೊಲಿಶೆಟ್ಟಿ (Naveen Shetty) ಅಮೆರಿಕಾದಲ್ಲಿ (America) ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು.
ಅಮೆರಿಕಾದ ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಅವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಬೈಕ್ ನಿಯಂತ್ರಣ ಕಳೆದುಕೊಂಡ ಪರಿಣಾಮ ಸ್ಕಿಡ್ ಆಗಿದೆ. ಹಾಗಾಗಿ ಅಪಘಾತದಲ್ಲಿ (Accident) ಕೈ, ಭುಜ ಹಾಗೂ ದೇಹದ ನಾನಾ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಕಲ್ಯಾಣ್ ಶಂಕರ್ ನಿರ್ದೇಶನದ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನವೀನ್ ಶೆಟ್ಟಿ, ಕಾಮಿಡಿ ಸಿನಿಮಾಗಳ ಮೂಲಕವೇ ಗುರುತಿಸಿಕೊಂಡವರು. ಜೊತೆಗೆ ಅನುಷ್ಕಾ ನಂತಹ ಸ್ಟಾರ್ ನಟಿಯ ಜೊತೆಯೂ ಅಭಿನಯಿಸಿದ್ದಾರೆ
ಅನುಷ್ಕಾ ಶೆಟ್ಟಿ (Anushka Shetty) ನಟನೆಯ ‘ಮಿಸ್ ಶೆಟ್ಟಿ ಮಿಸ್ಟರ್ ಪೊಲಿಶೆಟ್ಟಿ’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನವೀನ್ ಪೊಲಿಶೆಟ್ಟಿ (Naveen Shetty) ಅಮೆರಿಕಾದಲ್ಲಿ (America) ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅಮೆರಿಕಾದ ಟೆಕ್ಸಾಸ್ ನ ಡಲ್ಲಾಸ್ ನಲ್ಲಿ ಅವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಬೈಕ್ ನಿಯಂತ್ರಣ ಕಳೆದುಕೊಂಡ ಪರಿಣಾಮ ಸ್ಕಿಡ್ ಆಗಿದೆ. ಹಾಗಾಗಿ ಅಪಘಾತದಲ್ಲಿ (Accident) ಕೈ, ಭುಜ ಹಾಗೂ ದೇಹದ ನಾನಾ ಭಾಗಗಳಿಗೆ ಗಾಯಗಳಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಶೆಟ್ಟಿ ಸ್ಪಂದಿಸಿದ್ದಾರೆ.
ಕಲ್ಯಾಣ್ ಶಂಕರ್ ನಿರ್ದೇಶನದ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ನವೀನ್ ಶೆಟ್ಟಿ, ಕಾಮಿಡಿ ಸಿನಿಮಾಗಳ ಮೂಲಕವೇ ಗುರುತಿಸಿಕೊಂಡವರು. ಜೊತೆಗೆ ಅನುಷ್ಕಾ ನಂತಹ ಸ್ಟಾರ್ ನಟಿಯ ಜೊತೆಯೂ ಅಭಿನಯಿಸಿದ್ದಾರೆ.
ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಅವರ ಹುಟ್ಟುಹಬ್ಬ. ಈ ದಿನ ಶಿವಣ್ಣ ಅಭಿನಯಿಸಲಿರುವ ಅನೇಕ ಚಲನಚಿತ್ರಗಳ, ಸಿನಿಮಾ ಶೀರ್ಷಿಕೆಗಳ ಅನೌನ್ಸ್ ಆಗಿದೆ. ಆ ಚಿತ್ರಗಳಲ್ಲಿ ‘ಧೀರ’ (Dheera) ಚಿತ್ರವೂ ಒಂದು. ಹೆಚ್.ಸಿ. ಶ್ರೀನಿವಾಸ್ (Srinivas) (ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ (Naveen Shetty) ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು ಎಸ್. ನಾರಾಯಣ್, ಓಂ ಪ್ರಕಾಶ್ ರಾವ್, ಗಡ್ಡ ವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. ನಂತರ ಓಟಿಟಿ ವೇದಿಕೆಗೆಂದೇ ‘ನಿಧಾನವಾಗಿ ಚಲಿಸಿ’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು ವೀಕ್ಷಿಸಿದ ಶಿವಣ್ಣ ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ ಮಾಡಿಕೊಂಡಿದ್ದ ‘ಧೀರ’ ಕಥೆಯನ್ನು ಹೇಳಿ ಅವರನ್ನು ಒಪ್ಪಿಸಿದ್ದಾರೆ.
ತೆರೆಮೇಲೆ ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸ ಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳ ಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.