Tag: Navjot Singh Siddu

  • ನವಜೋತ್ ಸಿಂಗ್ ಸಿಧು ಪದಗ್ರಹಣ ಕಾರ್ಯಕ್ರಮ- ಬಸ್ ಅಪಘಾತ, ಮೂವರು ದುರ್ಮರಣ

    ನವಜೋತ್ ಸಿಂಗ್ ಸಿಧು ಪದಗ್ರಹಣ ಕಾರ್ಯಕ್ರಮ- ಬಸ್ ಅಪಘಾತ, ಮೂವರು ದುರ್ಮರಣ

    ಚಂಡೀಗಢ: ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಕಾರ್ಯಕರ್ತರು ಬರುತ್ತಿದ್ದ, ಬಸ್‍ಗೆ ಅಪಘಾತವಾಗಿರುವ ಘಟನೆ ನಡೆದಿದೆ.

    ಇಂದು ಬೆಳಿಗ್ಗೆ ಜಲಂಧರ್-ಬರ್ನಾಲಾ ರಸ್ತೆಯ ಮೊಗಾದ ಲೋಹರಾ ಚೌಕ್ ನಲ್ಲಿ ಎರಡು ಬಸ್ಸುಗಳು ಡಿಕ್ಕಿ ಹೊಡೆದ ಪರಿಣಾಮ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೂವರು ಕಾಂಗ್ರೆಸ್ ಕಾರ್ಯಕರ್ತರು ಸಾವಿಗೀಡಾಗಿದ್ದಾರೆ.

    ಬೆಳಿಗ್ಗೆ 7.30 ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಮೊಗಾದ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈವರೆಗೆ ಮೂರು ಜನರು ಸಾವನ್ನಪ್ಪಿದ್ದಾರೆ. ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಕೆಲವು ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ವೈದ್ಯಕೀಯ ಅಧಿಕಾರಿ  (ಎಸ್‍ಎಂಒ) ಡಾ. ಸುಖ್‍ಪ್ರೀತ್ ಬ್ರಾರ್ ಹೇಳಿದ್ದಾರೆ. ಇದನ್ನೂ ಓದಿ:  ನೆಲಮಂಗಲದಲ್ಲಿ ರೌಡಿಶೀಟರ್‌ಗಳಿಗೆ ಖಡಕ್ ವಾರ್ನಿಂಗ್

    ಅಪಘಾತದಲ್ಲಿ ಮೃತಪಟ್ಟವರು ಕಾಂಗ್ರೆಸ್ ಶಾಸಕ ಕುಲ್ಬೀರ್ ಸಿಂಗ್ ಜಿರಾ ಅವರ ಬೆಂಬಲಿಗರಾಗಿದ್ದಾರೆ. ಇವರು ಮೊಗಾದಿಂದ 15 ಕಿ.ಮೀ ದೂರದಲ್ಲಿರುವ ಜೀರಾದಿಂದ ಚಂಡೀಗಢದಲ್ಲಿರುವ ಪಂಜಾಬ್ ಕಾಂಗ್ರೆಸ್ ಭವನಕ್ಕೆ ರಾಜ್ಯ ಕಾಂಗ್ರೆಸ್ ಸಮಿತಿಯ ಸ್ಥಾಪನಾ ಸಮಾರಂಭಕ್ಕೆ ಬರುತ್ತಿದ್ದರು. ಅವರ ವಾಹನ ಡಿಕ್ಕಿ ಹೊಡೆದ ಪಂಜಾಬ್ ರೋಡ್ ವೇಸ್ ಬಸ್ ಜಲಂಧರ್ ಕಡೆಗೆ ಹೋಗುತ್ತಿತ್ತು.

    ಮೊಗಾ ಜಿಲ್ಲೆಯಲ್ಲಿ ಬಸ್ ಅಪಘಾತದ ಬಗ್ಗೆ ತಿಳಿದು ದುಃಖವಾಯಿತು. ಇದರಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಕ್ಷಣವೇ ಸಂಪೂರ್ಣ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಸರ್ಕಾರಕ್ಕೆ ವರದಿ ಕಳುಹಿಸುವಂತೆ ಮೊಗಾ ಡಿಸಿಗೆ ನಿರ್ದೇಶನ ನೀಡಿದ್ದೇನೆ. ಮೃತರನ್ನು ನೆನೆದು ಸಂತಾಪ ವ್ಯಕ್ತಪಡಿಸಿದ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.

  • ಇಮ್ರಾನ್ ಖಾನ್ ಆಮಂತ್ರಣವನ್ನು ಒಪ್ಪಿಕೊಂಡ ನವಜೋತ್ ಸಿಂಗ್ ಸಿದ್ದು

    ಇಮ್ರಾನ್ ಖಾನ್ ಆಮಂತ್ರಣವನ್ನು ಒಪ್ಪಿಕೊಂಡ ನವಜೋತ್ ಸಿಂಗ್ ಸಿದ್ದು

    ಚಂಡೀಗಡ: ಮಾಜಿ ಕ್ರಿಕೆಟ್ ಆಟಗಾರ ಹಾಗೂ ನೂತನ ಪ್ರಧಾನಿ ಇಮ್ರಾನ್ ಖಾನ್ ರವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ರಾಜಕಾರಣಿಯಾದ ನವಜೋತ್ ಸಿಂಗ್ ಸಿದ್ದು ಆಮಂತ್ರಣ ಸ್ವೀಕರಿಸಿದ್ದಾರೆ.

    ಇದೇ ಆಗಸ್ಟ್ 18 ರಂದು ಪಾಕಿಸ್ತಾನದ ಇಸ್ಲಾಮಬಾದ್ ನಲ್ಲಿ ನಡೆಯಲಿರುವ ನೂತನ ಪ್ರಧಾನಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಇಮ್ರಾನ್ ಖಾನ್ ರವರು ನವಜೋತ್ ಸಿಂಗ್ ಸಿದ್ದುರವರಿಗೆ ಆಮಂತ್ರಣವನ್ನು ನೀಡಿದ್ದರು. ಇವರ ಈ ಆಮಂತ್ರಣವನ್ನು ಒಪ್ಪಿಕೊಂಡಿರುವ ಅವರು ಕೇಂದ್ರ ಗೃಹ ಮಂಡಳಿ ಹಾಗೂ ಪಂಜಾಬ್ ಮುಖ್ಯಮಂತ್ರಿಗಳ ಕಾರ್ಯಲಯದ ಅನುಮತಿಗಾಗಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.

    ಇಮ್ರಾನ್ ಖಾನ್ ರವರು ಪಾಕಿಸ್ತಾನದ ತೆಹ್ರಿಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಮುಖಂಡರಾಗಿದ್ದು, ಖುದ್ದು ದೂರವಾಣಿ ಮೂಲಕ ಸಿದ್ದುರವರನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

    ಆಹ್ವಾನಕ್ಕೂ ಮುನ್ನ ಸಿದ್ದು ಪಾಕಿಸ್ತಾನ ಮತ್ತು ಭಾರತದ ನಡುವಿನ ಸಂಬಂಧವು ಕ್ರಿಕೆಟ್ ಮೂಲಕವಾದರೂ ಬದಲಾವಣೆಯಾಗುತ್ತದೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews