Tag: nawaz sharif

  • ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ದಾಳಿ

    ಪಾಕಿಸ್ತಾದ ಮಾಜಿ ಪ್ರಧಾನಿ ನವಾಜ್ ಶರೀಫ್ ಮೇಲೆ ದಾಳಿ

    ಲಂಡನ್: ಪಾಕಿಸ್ತಾನದ ಆಡಳಿತಾರೂಢ ತೆಹ್ರಿಕ್-ಇ- ಇನ್ಸಾಫ್ ಪಕ್ಷದ ಕಾರ್ಯಕರ್ತರು ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಶರೀಫ್ ಮೇಲೆ ಹಲ್ಲೆ ನಡೆಸಿದ್ದಾರೆ.

    ದಾಳಿ ವೇಳೆ ನವಾಜ್ ಶರೀಫ್ ಅವರ ಅಂಗರಕ್ಷಕ ಗಾಯಗೊಂಡಿರುವುದಾಗಿ ವರದಿಯಾಗಿದೆ. ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಮತದಾನ ನಡೆಯುತ್ತಿರುವಂತೆಯೇ, ನವಾಜ್ ಶರೀಫ್ ಮೇಲೆ ಈ ದಾಳಿಯಾಗಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?

    ಒಂದು ವೇಳೆ ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆದು ಯಶಸ್ವಿಯಾದರೆ, ಪಾಕಿಸ್ತಾನ ಮುಸ್ಲಿಂ ಲೀಗ್ ಪಕ್ಷದ ನವಾಜ್ ಶರೀಫ್ ಅವರ ಸಹೋದರ ಶೆಹಬಾಜ್ ಷರೀಫ್ ಪ್ರಧಾನಿ ಸ್ಥಾನಕ್ಕೆ ಪ್ರಬಲ ಸ್ಪರ್ಧಿಯಾಗಲಿದ್ದಾರೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ನವಾಜ್ ಷರೀಫ್ ಪುತ್ರಿ ಮರ್ಯಮ್, ಹಿಂಸಾಚಾರ ನಡೆಸುತ್ತಿರುವ ಆಡಳಿತ ಪಕ್ಷದವರನ್ನು ಜೈಲಿಗೆ ಹಾಕಬೇಕು.  ದೇಶದ್ರೋಹಕ್ಕಾಗಿ ಇಮ್ರಾನ್ ಖಾನ್ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.

  • ಪಾಕ್ ಪ್ರಧಾನಿ ಆತ್ಮಹತ್ಯೆ ಮಾಡಿಕೊಳ್ಳುವ ದಿನ ಎದುರು ನೋಡುತ್ತಿರುವೆ: ನವಾಜ್ ಷರೀಫ್

    ಪಾಕ್ ಪ್ರಧಾನಿ ಆತ್ಮಹತ್ಯೆ ಮಾಡಿಕೊಳ್ಳುವ ದಿನ ಎದುರು ನೋಡುತ್ತಿರುವೆ: ನವಾಜ್ ಷರೀಫ್

    ಲಂಡನ್: ಪಾಕ್ ಪ್ರಧಾನ ಮಂತ್ರಿ  ಇಮ್ರಾನ್ ಖಾನ್ ಆತ್ಮಹತ್ಯೆ ಮಾಡಿಕೊಳ್ಳುವ ದಿನ ಎದುರು ನೋಡುತ್ತಿದ್ದೇನೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಕಿಡಿಕಾರಿದ್ದಾರೆ.

    ಲಂಡನ್‍ನಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ಷರೀಫ್ ಲಾಹೋರ್‌ನಲ್ಲಿ ನಡೆದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ ಸಾಮಾನ್ಯ ಸಭೆಯಲ್ಲಿ ಆನ್‍ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದರು. ಭಾರತದಲ್ಲಿ ಇಮ್ರಾನ್ ಖಾನ್ ಕೀಲುಗೊಂಬೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ವಡಿವೇಲುಗೆ ಕೊರೊನಾ- ಓಮಿಕ್ರಾನ್ ಸೋಂಕು ಶಂಕೆ

    ದೇಶದಲ್ಲಿ ಇಮ್ರಾನ್ ಖಾನ್ ಹೇಗೆ ಅಧಿಕಾರಕ್ಕೆ ಬಂದಿದ್ದಾರೆ ಎಂಬುದು ಇಡೀ ಜಗತ್ತಿಗೇ ಗೊತ್ತಿದೆ. ಇಮ್ರಾನ್ ಜನರ ಮತಗಳ ಬದಲು ಸೇನಾ ನೆರವಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ನೆರವಿಗೆ ಹೋಗುವ ಬದಲು ಆತ್ಮಹತ್ಯೆ ಮಾಡಿಕೊಳ್ಳಲು ಇಷ್ಟಪಡುವುದುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ. ಆದರೆ ಇಮ್ರಾನ್ ಖಾನ್ ಯಾವಾಗ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬುದನ್ನು ಎದುರುನೋಡುತ್ತಿರುವೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 1.83 ಕೋಟಿ ಮೌಲ್ಯದ 3.6 ಕೆ.ಜಿ ಚಿನ್ನ ತಿರುಪತಿ ತಿಮ್ಮಪ್ಪನಿಗೆ ಅರ್ಪಣೆ

    ಪಾಕಿಸ್ತಾನದಲ್ಲಿ ಎರಡು ಭ್ರಷ್ಟಾಚಾರ ಪ್ರಕರಣಗಳಲ್ಲಿ ದೋಷಿಯಾಗಿರುವ 71 ವರ್ಷದ ನವಾಜ್ ಷರೀಫ್, ಲಾಹೋರ್ ಹೈಕೋರ್ಟ್ ಅನುಮತಿ ನೀಡಿದ ನಂತರ ವೈದ್ಯಕೀಯ ಚಿಕಿತ್ಸೆಗಾಗಿ ನಾಲ್ಕು ವಾರಗಳ ಕಾಲ ವಿದೇಶಕ್ಕೆ ಪ್ರಯಾಣಿಸಿದ್ದರು. ನವೆಂಬರ್ 2019 ರಿಂದ ಲಂಡನ್‍ನಲ್ಲಿ ವಾಸವಾಗಿದ್ದಾರೆ. 2018ರಲ್ಲಿ ಸೇನೆಯ ನೆರವಿನಿಂದ ಅಧಿಕಾರಕ್ಕೆ ಬಂದ ಇಮ್ರಾನ್ ಸರ್ಕಾರ ಮೊದಲ ಮೂರು ವರ್ಷಗಳಲ್ಲಿ ವಿದೇಶಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ 34 ಬಿಲಿಯನ್ ಡಾಲರ್‌ಗೂ ಹೆಚ್ಚು ಸಾಲ ಪಡೆದಿದೆ ಎಂದು ಪಾಕ್ ಆಡಳಿತ ಸರ್ಕಾರದ ವಿರುದ್ಧವಾಗಿ ಕಿಡಿಕಾರಿದ್ದಾರೆ.

  • ಪ್ರಧಾನಿಗಳನ್ನ ಭೇಟಿಯಾಗಿದ್ದು, ನವಾಜ್ ಶರೀಫ್‍ರನಲ್ಲ: ಸಿಎಂ ಠಾಕ್ರೆ

    ಪ್ರಧಾನಿಗಳನ್ನ ಭೇಟಿಯಾಗಿದ್ದು, ನವಾಜ್ ಶರೀಫ್‍ರನಲ್ಲ: ಸಿಎಂ ಠಾಕ್ರೆ

    ನವ ದೆಹಲಿ: ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದೇನೆ, ಹೊರತು ನವಾಜ್ ಶರೀಫ್ ರನಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

    ಕೊರೊನಾ ಸಂಕಷ್ಟದ ನಡುವೆ ಇಂದು ಪ್ರಧಾನಿಗಳನ್ನು ಸಿಎಂ ಉದ್ಧವ್ ಠಾಕ್ರೆ ಭೇಟಿಯಾದರು. ಭೇಟಿ ವೇಳೆ ಕರೊನಾ ನಿರ್ವಹಣೆ, ಲಸಿಕಾಕರಣ ಮತ್ತು ಮರಾಠ ಆರಕ್ಷಣ ಕುರಿತು ಚರ್ಚೆ ನಡೆದಿದೆ. ಭೇಟಿ ಬಳಿಕ ಮಾಧ್ಯಮಗಳ ಜೊತೆ ಸಿಎಂ ಉದ್ಧವ್ ಠಾಕ್ರೆ ಮಾತನಾಡಿದರು. ಈ ವೇಳೆ ದಿಢೀರ್ ಭೇಟಿಗೆ ಕಾರಣ ಏನು ಪ್ರಶ್ನೆಗೆ ಉತ್ತರಿಸಿದ ಸಿಎಂ ಠಾಕ್ರೆ, ನಾನು ನಮ್ಮ ಪ್ರಧಾನಿಗಳನ್ನ ಭೇಟಿಯಾಗಿದ್ದೇನೆಯೇ ಹೊರತು ಪಾಕಿಸ್ತಾನದ ಮಾಜಿ ಅಧ್ಯಕ್ಷ ನವಾಜ್ ಶರೀಫ್ ಅವರನಲ್ಲ ಎಂದು ಉತ್ತರಿಸಿದರು.

    ರಾಜಕೀಯ ಹೊರತಾಗಿಯೂ ಪ್ರಧಾನಿಗಳ ಜೊತೆ ನಮ್ಮ ಸಂಬಂಧ ಚೆನ್ನಾಗಿದೆ. ನಾನು ಖಾಸಗಿಯಾಗಿ ಪ್ರಧಾನಿಗಳನ್ನ ಭೇಟಿಯಾದ್ರೆ ಏನು ತಪ್ಪು? ನಮ್ಮಿಬ್ಬರ ಮಧ್ಯೆ ಪನ್ ಟ ಒನ್ ಮೀಟಿಂಗ್ ನಡೆದಿದೆ ಎಂದು ತಿಳಿಸಿದರು.

    ರಾಜ್ಯದ ಎಲ್ಲ ಜನತೆಗೆ ಲಸಿಕೆ ನೀಡುವ ಅಭಿಯಾನಕ್ಕೆ ವೇಗ ನೀಡಬೇಕಿದೆ. ಕೇಂದ್ರವೇ ಉಚಿತ ಲಸಿಕೆ ನೀಡಲು ಮುಂದಾಗಿರೋದನ್ನ ಸ್ವಾಗತಿಸುತ್ತೇವೆ. ಈ ಮೊದಲು ರಾಜ್ಯಗಳಿಗೆ ಈ ಜವಾಬ್ದಾರಿ ನೀಡಿದ್ದಾಗ, ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಮಹಾರಾಷ್ಟ್ರದಲ್ಲಿ 18 ರಿಂದ 44 ವರ್ಷದೊಳಗಿರುವ ಜನರ ಸಂಖ್ಯೆ 6 ಕೋಟಿಗೂ ಹೆಚ್ಚಿದೆ. ನಮಗೆ ಸದ್ಯ 12 ಕೋಟಿ ಡೋಸ್ ಬೇಕಿದ್ದು, ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಹೇಳಿದರು.

    ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮತ್ತು ಎನ್‍ಸಿಪಿಯ ಬೆಂಬಲದೊಂದಿಗೆ ಶಿವಸೇನೆ ಸರ್ಕಾರ ರಚನೆ ಮಾಡಿದಾಗ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ಜಗಜ್ಜಾಹೀರು ಆಗಿತ್ತು. ಕೇಂದ್ರದ ನಡೆ ಪ್ರಶ್ನಿಸಿ ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಅನೇಕ ಲೇಖನಗಳನ್ನು ಪ್ರಕಟಿಸಿತ್ತು.

  • ಸಾವು ಬದುಕಿನ ಮಧ್ಯೆ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಹೋರಾಟ

    ಸಾವು ಬದುಕಿನ ಮಧ್ಯೆ ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಹೋರಾಟ

    ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾರೆ.

    69 ವರ್ಷದ ನವಾಜ್ ಷರೀಫ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಅಡ್ನಾನ್ ಖಾನ್ ಸರಣಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಮಾಜಿ ಪ್ರಧಾನಿ ಗಂಭೀರವಾಗಿ ಅಸ್ವಸ್ಥರಾಗಿದ್ದು, ಆರೋಗ್ಯ ಮತ್ತು ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಮೂತ್ರಪಿಂಡದ ಕಾರ್ಯ ಕ್ಷೀಣಿಸುವ ಮೂಲಕ ಥ್ರಂಬೋಸೈಟೋಪೆನಿಯಾ ಮತ್ತು ಎನ್‍ಎಸ್‍ಟಿಇಎಂಐ ಮತ್ತಷ್ಟು ಜಟಿಲವಾಗಿದೆ. ಮಧುಮೇಹ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಸಿಗುತ್ತಿಲ್ಲ’ ಎಂದು ಡಾ.ಅಡ್ನಾನ್ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಪತ್ನಿಯೊಂದಿಗೆ ಕೊನೆಯದಾಗಿ ಮಾತನಾಡಿದ ನವಾಜ್ ಶರೀಫ್- ಭಾವನಾತ್ಮಕ ವಿಡಿಯೋ ವೈರಲ್

    ಸ್ಟೀಲ್ ಮಿಲ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಷರೀಫ್ ಅವರಿಗೆ 2018ರ ಡಿಸೆಂಬರ್ ನಲ್ಲಿ ನ್ಯಾಯಾಲಯವು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಚೌಧರಿ ಶುಗರ್ ಮಿಲ್ಸ್ ಪ್ರಕರಣದಲ್ಲಿ ನವಾಜ್ ಷರೀಫ್ ಹಾಗೂ ಅವರ ಕುಟುಂಬದವರನ್ನು ರಾಷ್ಟ್ರೀಯ ತನಿಖಾ ದಳವು ವಿಚಾರಣೆ ಮಾಡುತ್ತಿದೆ. ಆದರೆ ಮೂರು ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿಯ ಅನಾರೋಗ್ಯ ಕಾರಣದಿಂದ ಜಾಮೀನು ನೀಡಲಾಗಿತ್ತು.

    ನವಾಜ್ ಷರೀಫ್ ರಕ್ತದಲ್ಲಿನ ಬಿಳಿರಕ್ತಕಣಗಳ (ಪ್ಲೇಟ್‍ಲೇಟ್) ಸಂಖ್ಯೆಯು ನಿರಂತರವಾಗಿ ಕುಸಿಯುತ್ತಿದೆ. ಭಾನುವಾರ ಒಂದೇ ದಿನ ಅವರ ಪ್ಲೇಟ್‍ಲೇಟ್ ಸಂಖ್ಯೆಯು 45 ಸಾವಿರದಿಂದ 25 ಸಾವಿರಕ್ಕೆ ಇಳಿದಿತ್ತು. ಹೀಗಾಗಿ ಅವರಿಗೆ ನೀಡಲಾಗುತ್ತಿದ್ದ ಹೃದಯ ಸಂಬಂಧಿ ಚಿಕಿತ್ಸೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

  • ಪತ್ನಿಯೊಂದಿಗೆ ಕೊನೆಯದಾಗಿ ಮಾತನಾಡಿದ ನವಾಜ್ ಶರೀಫ್- ಭಾವನಾತ್ಮಕ ವಿಡಿಯೋ ವೈರಲ್

    ಪತ್ನಿಯೊಂದಿಗೆ ಕೊನೆಯದಾಗಿ ಮಾತನಾಡಿದ ನವಾಜ್ ಶರೀಫ್- ಭಾವನಾತ್ಮಕ ವಿಡಿಯೋ ವೈರಲ್

    ಲಾಹೋರ್: “ಕಣ್ಣು ತೆರೆದು ನೋಡಿ ಕುಲ್ಸೂಮ್” ಅಂತಾ ಪದೇ ಪದೇ ಭಾವನಾತ್ಮಕವಾಗಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್, ಪತ್ನಿ ಬೇಗಂ ಕುಲ್ಸೂಮ್ ಅವರಿಗೆ ಮನವಿ ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲದಲ್ಲಿ ವೈರಲ್ ಆಗಿದೆ.

    ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಶರೀಫ್ ಅವರ ಪತ್ನಿ ಬೇಗಂ ಕುಲ್ಸೂಮ್ (68) ಲಂಡನ್‍ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ನಿಧರಾಗಿದ್ದಾರೆ. ಕುಲ್ಸೂಮ್ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ದೀರ್ಘ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

    ಜೈಲು ಶಿಕ್ಷೆಗೆ ಗುರಿಯಾಗಿದ್ದ ನವಾಜ್ ಶರೀಫ್ ಅವರು, 2018ರ ಜುಲೈ 12ರಂದು ಪಾಕಿಸ್ತಾನಕ್ಕೆ ತೆರಳುವಾಗ ಪತ್ನಿಯ ಮುಖ ನೋಡಿ, ಮಾತನಾಡಿದ್ದರು. ಅದೇ ಕೊನೆ ಮತ್ತೆ ಬೇಗಂ ಅವರನ್ನು ನವಾಜ್ ಅವರು ನೋಡಲಿಲ್ಲ, ಮಾತನಾಡಿಸಲು ಆಗಿರಲಿಲ್ಲ.

    ನವಾಜ್ ಕೇಳಿದ್ದು ಏನು?
    ಕಣ್ಣು ತೆರೆದು ನೋಡಿ ಕುಲ್ಸೂಮ್, ಕಣ್ಣು ತೆರೆಯಿರಿ, ಬಾವೂಜಿ… ಬಾವೂಜಿ… ಎಂದು ನವಾಜ್ ಕೇಳಿಕೊಂಡರೂ ಕುಲ್ಸೂಮ್ ಪ್ರತಿಕ್ರಿಯೆ ನೀಡುವ ಸ್ಥಿತಿಯಲ್ಲಿ ಇರಲಿಲ್ಲ. ಮತ್ತೆ ಮುಂದುವರಿದು ನವಾಜ್ ಶರೀಫ್ ಅವರು, ಅಲ್ಲಾ ನಿಮಗೆ ಆರೋಗ್ಯ ನೀಡಲಿ, ಅಲ್ಲಾ ನಿಮಗೆ ಸಾಮರ್ಥ್ಯ ನೀಡಲಿ ಎಂದು ಹೇಳಿದ ದೃಶ್ಯವನ್ನು ಲಂಡನ್‍ನ ಹಾರ್ಲಿ ಸ್ಟ್ರೀಟ್ ಕ್ಲಿನಿಕ್‍ನಲ್ಲಿ ಚಿತ್ರಿಕರಿಸಲಾಗಿತ್ತು.

    ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕುಲ್ಸೂಮ್ ಅವರಿಗೆ ಪತಿಯ ಮನವಿ ಮುಟ್ಟಿತ್ತು ಅನಿಸುತ್ತದೆ. ಕೆಲವು ಸೆಕೆಂಡ್ ಮಾತ್ರ ಕಣ್ಣು ತೆರೆದು ಕುಲ್ಸೂಮ್ ಅವರು ನೋಡಿದ್ದರಂತೆ. ಆಗ ಎಲ್ಲವನ್ನು ಅಲ್ಲಾನ ಮೇಲೆ ಭಾರವನ್ನು ಹಾಕಿ ನವಾಜ್ ಪಾಕಿಸ್ತಾನಕ್ಕೆ ತೆರಳಿದ್ದರು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಭಾರತ ಒಂದು ಹೆಜ್ಜೆ ಮುಂದಿಟ್ಟರೆ, ನಾನು ಎರಡು ಹೆಜ್ಜೆ ಮುಂದಿಡುತ್ತೇನೆ: ಇಮ್ರಾನ್ ಖಾನ್

    ಭಾರತ ಒಂದು ಹೆಜ್ಜೆ ಮುಂದಿಟ್ಟರೆ, ನಾನು ಎರಡು ಹೆಜ್ಜೆ ಮುಂದಿಡುತ್ತೇನೆ: ಇಮ್ರಾನ್ ಖಾನ್

    ಕರಾಚಿ: ಭಾರತ ಹಾಗೂ ಪಾಕ್ ದ್ವಿಪಕ್ಷಿಯ ಸುಧಾರಣೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ, ನಾನು ಎರಡು ಹೆಜ್ಜೆ ಮುಂದಿಡುತ್ತೇನೆ ಎಂದು ಮಾಜಿ ಕ್ರಿಕೆಟಿಗ ಹಾಗೂ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಹೇಳಿದ್ದಾರೆ.

    ಪಾಕಿಸ್ತಾನ ನಡೆದ ಚುನಾವಣೆಯಲ್ಲಿ ಬಹು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ಬಳಿಕ ಮಾತನಾಡಿದ ಅವರು, ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷಿಯ ಸಂಬಂಧದಲ್ಲಿ ಅವರು ಒಂದು ಹೆಜ್ಜೆ ಮುಂದೆ ಬಂದರೆ ನಾವು ಎರಡು ಹೆಜ್ಜೆ ಮುಂದಿಡುತ್ತೇವೆ. ಎರಡು ದೇಶಗಳ ನಡುವಿನ ಸಂಬಂಧ ಉತ್ತಮಗೊಳ್ಳುವುದು ಮುಖ್ಯ ಎಂದರು.

    ಜಮ್ಮು ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಕುರಿತು ಉಲ್ಲಂಘನೆ ಪ್ರತಿಕ್ರಿಯೆ ನೀಡಿರುವ ಇಮ್ರಾನ್ ಖಾನ್, ಯಾವುದೇ ಒಂದು ಪ್ರದೇಶದಕ್ಕೆ ಸಶಸ್ತ್ರ ಪಡೆಗಳನ್ನು ಕಳುಹಿಸಿದರೆ ಇಂತಹ ಘಟನೆಗಳು ಬೆಳಕಿಗೆ ಬರುತ್ತದೆ. ಆದರೆ ಸಮಸ್ಯೆ ಪರಿಹಾರ ಆಗುವುದಿಲ್ಲ. ಭಾರತದ ಮಾಧ್ಯಮಗಳು ನನ್ನನ್ನು ಬಾಲಿವುಡ್ ವಿಲನ್ ರೀತಿ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದ್ದಾರೆ.

    ತಮ್ಮ ಮೊದಲ ಭಾಷಣದಲ್ಲೇ ವಿದೇಶಾಂಗ ನೀತಿಯನ್ನು ಪ್ರಸ್ತಾಪಿಸಿದ ಇಮ್ರಾನ್ ಖಾನ್ ಚೀನಾ, ಅಫ್ಘಾನಿಸ್ತಾನ, ಇರಾನ್ ಹಾಗೂ ಸೌದಿ ರಾಷ್ಟ್ರಗಳು ಸೇರಿದಂತೆ ಭಾರತದೊಂದಿಗೆ ಉತ್ತಮ ಸಂಬಂಧ ಬೆಳಸುವ ಕುರಿತು ಹೇಳಿದರು.

    ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದಿರುವ ಪಿಟಿಐ ಮುಖಂಡರು ಸಂತಸ ವ್ಯಕ್ತಪಡಿಸಿದ್ದು, ಮತ್ತೊಂದೆಡೆ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ಪಕ್ಷದ ಮುಖಂಡರು ಚುನಾವಣೆಯಲ್ಲಿ ಅಕ್ರಮ ನಡೆದಿದೆ. ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಆರೋಪಿಸಿದ್ದಾರೆ.

    342 ಸ್ಥಾನಗಳಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷ 76 ಸ್ಥಾನಗಳಲ್ಲಿ ಗೆಲುವು ಪಡೆದಿದ್ದು, 43 ರಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ನವಾಜ್ ಷರೀಫ್ ಅವರ ಪಾಕಿಸ್ತಾನ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) 43 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, 20 ರಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಟಿ) 18 ಸ್ಥಾನಗಳಲ್ಲಿ ಜಯಗಳಿಸಿದೆ.

    ಪಾಕಿಸ್ತಾನದಲ್ಲಿ ಸರ್ಕಾರ ರಚಿಸಲು ಚುನಾವಣೆಯಲ್ಲಿ ನೇರವಾಗಿ 137 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಅಗತ್ಯವಾಗಿದೆ. ಅಂದಹಾಗೇ 342 ಸ್ಥಾನಗಳ ಪೈಕಿ 272 ಸ್ಥಾನಗಳನ್ನು ನೇರವಾಗಿ ಆಯ್ಕೆ ಮಾಡಲಾಗುತ್ತದೆ. ಉಳಿದ 60 ಸ್ಥಾನಗಳಲ್ಲಿ ಮಹಿಳೆಯರು ಹಾಗೂ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತದೆ. ಒಟ್ಟಾರೆ 172 ಸ್ಥಾನಗಳು ಪಡೆದ ಸರ್ಕಾರ ರಚಿಸುವ ಅವಕಾಶ ಪಡೆಯುತ್ತದೆ.

     

     

  • ಪಾಕಿಸ್ತಾನ ಚುನಾವಣೆ ಫಲಿತಾಂಶ – ಯಾವುದೇ ಪಕ್ಷಕ್ಕಿಲ್ಲ ಗೆಲುವಿನ ರನ್ – ಪೊಲಿಟಿಕಲ್ ಸೆಂಚುರಿ ಬಾರಿಸಿದ ಇಮ್ರಾನ್ ಖಾನ್

    ಪಾಕಿಸ್ತಾನ ಚುನಾವಣೆ ಫಲಿತಾಂಶ – ಯಾವುದೇ ಪಕ್ಷಕ್ಕಿಲ್ಲ ಗೆಲುವಿನ ರನ್ – ಪೊಲಿಟಿಕಲ್ ಸೆಂಚುರಿ ಬಾರಿಸಿದ ಇಮ್ರಾನ್ ಖಾನ್

    ಇಸ್ಲಾಮಾಬಾದ್: ಬುಧವಾರ ನಡೆದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್-ಎ-ಇನ್ಸಾಫ್ ಪಕ್ಷ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚಿಸಲು ಅಗತ್ಯವಿರುವ ಸಂಖ್ಯಾಬಲ ಯಾವುದೇ ಪಕ್ಷಕ್ಕೆ ಸಿಕ್ಕಿಲ್ಲ. ಹೀಗಾಗಿ ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವ ಎಲ್ಲಾ ಸಾಧ್ಯತೆಗಳು ಇವೆ.

    272 ಸ್ಥಾನಗಳ ಪೈಕಿ ಮಾಹಿತಿ ಪ್ರಕಾರ ಪಿಟಿಐ 112 ಸ್ಥಾನ ಗೆದ್ದಿದ್ರೆ, ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ (Pakistan Muslim League) ಪಾರ್ಟಿ 63 ಸ್ಥಾನ, ಬಿಲಾವಲ್ ಭುಟ್ಟೋ ನೇತೃತ್ವದ ಪಿಪಿಪಿ (Pakistan Peoples Party) 38 ಸ್ಥಾನಗಳನ್ನು ಪಡೆದಿದೆ. ಇತರರು ಬರೋಬ್ಬರಿ 57 ಕಡೆ ಜಯಭೇರಿ ಬಾರಿಸಿದ್ದಾರೆ. ಇವತ್ತು ಮಧ್ಯಾಹ್ನ ಸ್ಪಷ್ಟ ಚಿತ್ರಣ ಸಿಗಲಿದೆ. ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪ್ರಧಾನಿಯಾಗುವ ಸಾಧ್ಯತೆ ಹೆಚ್ಚಿದೆ.

    ಈಗಾಗಲೇ ಪಾಕಿಸ್ತಾನ ರಾಜಕೀಯ ಅಂಗಳದಲ್ಲಿ ಮೈತ್ರಿ ಚರ್ಚೆಗಳು ಆರಂಭಗೊಂಡಿವೆ. ಈ ಚುನಾವಣೆಯಲ್ಲಿ ಬೃಹತ್ ಅಕ್ರಮಗಳು ನಡೆದಿವೆ ಎಂದು ಆಪಾದಿಸಿ ಪಿಎಂಎಲ್-ಎನ್‍ಪಕ್ಷದ ಪ್ರಧಾನಿ ಅಭ್ಯರ್ಥಿ ಶಾಹಬಾಜ್ ಷರೀಫ್ ಚುನಾವಣಾ ಫಲಿತಾಂಶವನ್ನು ತಿರಸ್ಕರಿಸಿದ್ದು ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಭಯಾನಕ ರಾಜಕೀಯ ದೃಶ್ಯ ನೋಡಿಲ್ಲ. ಪಾಕಿಸ್ತಾನದ ಇತಿಹಾಸದಲ್ಲಿ ಇದು ಕೆಟ್ಟ ಚುನಾವಣೆ ಎಂದಿದ್ದಾರೆ. ಇನ್ನು ಪಿಟಿಐ ಬೆಂಬಲಿಗರು ಲಾಹೋರ್, ಇಸ್ಲಾಮಾಬಾದ್, ಮುಲ್ತಾನ್ ಸೇರಿ ಹಲವೆಡೆ ನೃತ್ಯ, ಬಾಣ ಬಿರುಸುಗಳೊಂದಿಗೆ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

    ಇನ್ನು ಪಾಕಿಸ್ತಾನ ಚುನಾವಣೆಯಲ್ಲಿ ಮುಂಬೈ ದಾಳಿಯ ಸಂಚುಕೋರ, ಕುಖ್ಯಾತ ಭಯೋತ್ಪಾದಕ ಹಫೀಜ್ ಸಯೀದ್ ಬೆಂಬಲಿಸಿದ್ದ ಅಲ್ಲಾಹೋ ಅಕ್ಬರ್ ತೆಹ್ರಿಕ್ ಪಾರ್ಟಿ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಚುನಾವಣೆಯಲ್ಲಿ ಹಫೀಜ್ ಸಯೀದ್ ಬೆಂಬಲದೊಂದಿಗೆ ಎಎಟಿ ಪಕ್ಷದ ವತಿಯಿಂದ 200ಕ್ಕೂ ಅಧಿಕ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಯಾವುದೇ ಅಭ್ಯರ್ಥಿ ಕನಿಷ್ಠ ಠೇವಣಿಯನ್ನು ಪಡೆಯದೇ ಹೀನಾಯವಾಗಿ ಸೋತಿರುವುದು ಹಫೀಜ್‍ಗೆ ತೀವ್ರ ಮುಖಭಂಗವಾಗಿದೆ.

  • ನವಾಜ್ ಷರೀಫ್, ಪುತ್ರಿ ಬಂಧನಕ್ಕೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರೀ ಸಿದ್ಧತೆ!

    ನವಾಜ್ ಷರೀಫ್, ಪುತ್ರಿ ಬಂಧನಕ್ಕೆ ಲಾಹೋರ್ ವಿಮಾನ ನಿಲ್ದಾಣದಲ್ಲಿ ಭಾರೀ ಸಿದ್ಧತೆ!

    ಲಾಹೋರ್: ಪನಾಮಾ ಪೇಪರ್ಸ್ ಹಗರಣದಲ್ಲಿ 7 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಲಂಡನ್‍ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್ ಫೋರ್ಟ್‍ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

    ಲಂಡನ್ ನಿಂದ ಲಾಹೋರ್ ಗೆ ಶುಕ್ರವಾರ ಸಂಜೆ ವೇಳಗೆ ನವಾಜ್ ಷರೀಫ್ ಪುತ್ರಿ ಮಾರಿಯಾಮ್ ಜೊತೆ ಆಗಮಿಸುತ್ತಿದ್ದು, ಈ ವೇಳೆ ಸ್ವಾಗರ ಕೋರಿ ಬೆಂಬಲಿಗರು ಮೆರವಣಿಗೆ ನಡೆಸುವ ಸಾಧ್ಯತೆಯಿರುವುದರಿಂದ ಎಚ್ಚರಿಕೆ ವಹಿಸಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾಗಿ ಮಾಧ್ಯಮಗಳು ವರದಿ ಮಾಡಿದೆ. ಭದ್ರತೆಗೆ 10 ಸಾವಿರ ಪೊಲೀಸ್ ನಿಯೋಜನೆ ಮಾಡಲಾಗಿದ್ದು, ಬಂಧನದ ಬಳಿಕ ಹೆಲಿಕಾಪ್ಟರ್ ಮೂಲಕ ಇಸ್ಲಾಮಾಬಾದ್ ನ ಅದೀಲಾ ಜೈಲಿಗೆ ಕರೆದ್ಯೊಯುವ ಸಾಧ್ಯತೆ ಇದೆ.

    ಪಾಕಿಸ್ತಾನ ಸುಪ್ರೀಂಕೋರ್ಟ್ ನವಾಜ್ ಷರೀಫ್ ದೋಷಿ ಎಂದು 2017ರ ಜುಲೈ 28 ರಂದು ತೀರ್ಪು ನೀಡಿತ್ತು. ಅಲ್ಲದೇ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲು ನವಾಜ್ ಷರೀಫ್ ಅರ್ಹರಲ್ಲ ಎಂದು ತನ್ನ ತೀರ್ಪಿನಲ್ಲಿ ಉಲ್ಲೇಖಿಸಿತ್ತು. ಬಳಿಕ ಈ ವೇಳೆ ಶರೀಫ್ ತಮ್ಮ ಹುದ್ದೆ ತೋರೆದು ಅನಾರೋಗ್ಯದ ಕಾರಣ ಕೆಲ ದಿನಗಳ ಹಿಂದೆ ಲಂಡನ್ ಗೆ ತೆರಳಿದ್ದರು.

    2017ರ ಜುಲೈನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ನವಾಜ್ ಷರೀಫ್ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ನಂತರ ಕಳೆದ ವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಲಂಡನ್‍ನಲ್ಲಿ ಐಷಾರಾಮಿ ಬಂಗಲೆ ಸೇರಿದಂತೆ ಅಕ್ರಮ ಆಸ್ತಿ ಖರೀದಿಸಿದ್ದ ಆರೋಪದ ಮೇರೆಗೆ ನವಾಜ್ ಷರೀಫ್‍ಗೆ 10 ವರ್ಷ ಜೈಲು ಶಿಕ್ಷೆ ಮತ್ತು ಪನಾಮ ಹಗರಣದಲ್ಲಿ ಪುತ್ರಿ ಮರಿಯಮ್ ನವಾಜ್‍ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.

    ಏನಿದು ಪ್ರಕರಣ?
    ಪನಾಮ ಪೇಪರ್ ಹೊರ ಹಾಕಿರುವ ಮಾಹಿತಿ ಆಧಾರವನ್ನು ಇಟ್ಟುಕೊಂಡು ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಸುಪ್ರೀಂಕೋರ್ಟ್ ನಲ್ಲಿ ಷರೀಫ್ ವಿರುದ್ಧ ಕೇಸ್ ದಾಖಲಿಸಿದ್ದರು. ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟ್ ಪ್ರಧಾನಿ ಷರೀಫ್ ಹಾಗೂ ಭ್ರಷ್ಟಾಚಾರದ ಪ್ರಕರಣದ ಕುರಿತು ಜಂಟಿ ತನಿಖಾ ತಂಡ(ಜೆಐಟಿ) ತನಿಖೆ ನಡೆಸುವಂತೆ ಆದೇಶಿಸಿತ್ತು. ಷರೀಫ್ ಲಂಡನ್ ನಲ್ಲಿ 2 ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಜೆಐಟಿ ವರದಿ ನೀಡಿತ್ತು. ಆದರೆ ಷರೀಫ್ ಅವರು ನನ್ನ ಮೇಲಿರುವ ಆರೋಪಗಳು ಎಲ್ಲ ಸುಳ್ಳು, ಯಾವುದೇ ಸಾಕ್ಷ್ಯಧಾರಗಳು ಇಲ್ಲ ಎಂದು ವಾದಿಸಿದ್ದರು.

    ಏನಿದು ಪನಾಮ ಪೇಪರ್ ಕೇಸ್?
    ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಸರ್ಕಾರೇತರ ಸಂಘಟನೆಯೊಂದು `ಪನಾಮ ಪೇಪರ್’ ಹೆಸರಿನಲ್ಲಿ ದಾಖಲೆಗಳನ್ನು 2015ರ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿತ್ತು. ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್ ಫೋನ್ಸೆಕಾದಿಂದ ಗುಪ್ತವಾಗಿ ಪಡೆದಿದ್ದ ಮಾಹಿತಿಗಳನ್ನು ಐಸಿಐಜೆ ಬಿಡುಗಡೆ ಮಾಡಿತ್ತು. ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ವಿವಿಧ ಕಡೆ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಈ ವರದಿಯಲ್ಲಿತ್ತು. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿತ್ತು.

  • ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ 10 ವರ್ಷ ಜೈಲು

    ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ 10 ವರ್ಷ ಜೈಲು

    ಇಸ್ಲಾಮಾಬಾದ್: ಪನಾಮಾ ಪೇಪರ್ಸ್ ಹಗರಣದಲ್ಲಿ ದೋಷಿಯಾಗಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್‍ಗೆ ಇಸ್ಲಾಮಾಬಾದಿನ ಕೋರ್ಟ್  7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಷರೀಫ್ ಜೊತೆಗೆ ಮಗಳು ಮಾರಿಯಾಮ್‍ಗೆ 7 ವರ್ಷ, ಅಳಿಯ ಸಫ್ದಾರಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲದೇ ಬೇನಾಮಿ ಆಸ್ತಿಯನ್ನು ಸರ್ಕಾರ ವಶ ಪಡಿಸಿಕೊಳ್ಳುವಂತೆ ಆದೇಶ ನೀಡಿದೆ.

    ಪ್ರಧಾನಿ ನವಾಜ್ ಷರೀಫ್ ದೋಷಿ ಎಂದು ಪಾಕಿಸ್ತಾನ ಸುಪ್ರೀಂಕೋರ್ಟ್ ಪಂಚಸದಸ್ಯ ಪೀಠ 2017ರ ಜುಲೈ 28 ರಂದು ತೀರ್ಪು ನೀಡಿತ್ತು. ಪಾಕ್ ಪ್ರಧಾನಿಯಾಗಿ ಮುಂದುವರಿಯಲು ನವಾಜ್ ಷರೀಫ್ ಅರ್ಹರಲ್ಲ ಎಂದು ಅಲ್ಲ ಎಂದು ಕೋರ್ಟ್ ತೀರ್ಪು ಪ್ರಕಟಿಸಿತ್ತು. ತನ್ನ ವಿರುದ್ಧ ತೀರ್ಪು ಬಂದ ಹಿನ್ನೆಲೆಯಲ್ಲಿ ಷರೀಫ್ ಪ್ರಧಾನಿ ಪಟ್ಟದಿಂದ ಇಳಿದಿದ್ದರು. ಷರೀಫ್ ಅವರು ಸಂಸತ್ತಿನ ಪ್ರಾಮಾಣಿಕ ಸದಸ್ಯರಾಗುವ ಅರ್ಹತೆಯನ್ನು ಹೊಂದಿಲ್ಲ ಎಂದು ಪಂಚ ನ್ಯಾಯಾಧೀಶ ಪೀಠದಲ್ಲಿ ಒಬ್ಬರಾಗಿರುವ ಇಜಾಜ್ ಅಫ್ಜಲ್ ಖಾನ್ ಅವರು ತೀರ್ಪಿನಲ್ಲಿ ಉಲ್ಲೇಖಿಸಿದ್ದರು.

    ಏನಿದು ಪ್ರಕರಣ?
    ಪನಾಮ ಪೇಪರ್ ಹೊರ ಹಾಕಿರುವ ಮಾಹಿತಿ ಆಧಾರವನ್ನು ಇಟ್ಟುಕೊಂಡು ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಸುಪ್ರೀಂಕೋರ್ಟ್ ನಲ್ಲಿ ಷರೀಫ್ ವಿರುದ್ಧ ಕೇಸ್ ದಾಖಲಿಸಿದ್ದರು. ಏಪ್ರಿಲ್ ನಲ್ಲಿ ಸುಪ್ರೀಂ ಕೋರ್ಟ್ ಪ್ರಧಾನಿ ಷರೀಫ್ ಹಾಗೂ ಭ್ರಷ್ಟಾಚಾರದ ಪ್ರಕರಣದ ಕುರಿತು ಜಂಟಿ ತನಿಖಾ ತಂಡ(ಜೆಐಟಿ) ತನಿಖೆ ನಡೆಸುವಂತೆ ಆದೇಶಿಸಿತ್ತು. ಷರೀಫ್ ಲಂಡನ್ ನಲ್ಲಿ 2 ಬೇನಾಮಿ ಆಸ್ತಿ ಹೊಂದಿದ್ದಾರೆ ಎಂದು ಜೆಐಟಿ ವರದಿ ನೀಡಿತ್ತು. ಆದರೆ ಷರೀಫ್ ಅವರು ನನ್ನ ಮೇಲಿರುವ ಆರೋಪಗಳು ಎಲ್ಲ ಸುಳ್ಳು, ಯಾವುದೇ ಸಾಕ್ಷ್ಯಧಾರಗಳು ಇಲ್ಲ ಎಂದು ವಾದಿಸಿದ್ದರು.

    ಏನಿದು ಪನಾಮ ಪೇಪರ್ ಕೇಸ್?
    ಅಂತಾರಾಷ್ಟ್ರೀಯ ತನಿಖಾ ಪತ್ರಕರ್ತರ ಒಕ್ಕೂಟ (ಐಸಿಐಜೆ) ಎಂಬ ಅಮೆರಿಕ ಮೂಲದ ಸರ್ಕಾರೇತರ ಸಂಘಟನೆಯೊಂದು `ಪನಾಮ ಪೇಪರ್’ ಹೆಸರಿನಲ್ಲಿ ದಾಖಲೆಗಳನ್ನು 2015ರ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಿತ್ತು. ಪನಾಮ ಮೂಲದ ಕಾನೂನು ಸೇವಾ ಕಂಪನಿ ಮೊಸ್ಸಾಕ್ ಫೋನ್ಸೆಕಾದಿಂದ ಗುಪ್ತವಾಗಿ ಪಡೆದಿದ್ದ ಮಾಹಿತಿಗಳನ್ನು ಐಸಿಐಜೆ ಬಿಡುಗಡೆ ಮಾಡಿತ್ತು. ವಿಶ್ವದ ಸುಮಾರು 12 ವಿವಿಧ ಈಗಿನ ಮತ್ತು ಮಾಜಿ ನಾಯಕರು, 128 ವಿವಿಧ ರಾಜಕಾರಣಿಗಳು ಮತ್ತು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು, ಸಿನಿಮಾ ಸೆಲೆಬ್ರಿಟಿಗಳು ವಿವಿಧ ಕಡೆ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಈ ವರದಿಯಲ್ಲಿತ್ತು. 1977 ರಿಂದ 2015 ರವರೆಗೆ 40 ವರ್ಷದ ಅವಧಿಯ ಮಾಹಿತಿಗಳು, 2.14 ಲಕ್ಷ ವಿದೇಶಿ ಸಂಸ್ಥೆಗಳ ಮಾಹಿತಿಗಳು ಇದರಲ್ಲಿತ್ತು.

  • ಮುಂಬೈ ದಾಳಿಗೆ ಪಾಕಿಸ್ತಾನದ ಉಗ್ರ ಸಂಘಟನೆಗಳೆ ಕಾರಣ: ನವಾಜ್ ಷರೀಫ್

    ಮುಂಬೈ ದಾಳಿಗೆ ಪಾಕಿಸ್ತಾನದ ಉಗ್ರ ಸಂಘಟನೆಗಳೆ ಕಾರಣ: ನವಾಜ್ ಷರೀಫ್

    ಲಾಹೋರ್: ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು 2008ರ ಮುಂಬೈ ಉಗ್ರ ದಾಳಿಯಲ್ಲಿ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಗಳ ಪಾತ್ರ ಇದೆ ಎಂದು ಬಹಿರಂಗವಾಗಿ ಹೇಳಿದ್ದಾರೆ.

    ಪಾಕಿಸ್ತಾನದ ಡಾನ್ ಪತ್ರಿಕೆ ಜತೆ ಮಾತನಾಡಿರುವ ಅವರು, ಪಾಕಿಸ್ತಾನದಲ್ಲಿ ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿವೆ. ಅವುಗಳು ಸರ್ಕಾರೇತರ ಶಕ್ತಿಗಳಾಗಿವೆ. ಗಡಿಯನ್ನು ದಾಟಿ ಮುಂಬೈಯಲ್ಲಿ 150ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಲು ಅವಕಾಶ ಮಾಡಿಕೊಡಬೇಕೆ ಎಂದು ಪ್ರಶ್ನಿಸಿದ್ದಾರೆ.

    10 ಜನ ಲಷ್ಕರ್-ಇ-ತೊಯ್ಬಾ ಉಗ್ರರು ನವೆಂಬರ್ 26, 2008 ರಿಂದ ನವೆಂಬರ್ 29 ರವರೆಗೆ ಮುಂಬೈಯಲ್ಲಿ ಸಂಘಟಿತ ಶೂಟಿಂಗ್ ಮತ್ತು ಬಾಂಬ್ ದಾಳಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

    2008 ನವೆಂಬರ್ 26 ರಂದು ಆಗಿದ್ದೇನು?
    ನವೆಂಬರ್ 23 ರಂದು 10 ಜನ ಉಗ್ರರು ಕರಾಚಿಯಿಂದ ಅರೇಬಿಯನ್ ಸಮುದ್ರದ ಮೂಲಕ ದೋಣಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ಮಾರ್ಗದ ಮಧ್ಯೆ ಭಾರತದ ಮೀನುಗಾರರ ದೋಣಿಯನ್ನು ಅಪಹರಿಸಿ, 4 ಜನರನ್ನು ಕೊಂದು ದೋಣಿಯ ಕ್ಯಾಪ್ಟನ್ ಅನ್ನು ಭಾರತಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಮುಂಬೈಗೆ 7 ಕಿಮೀ ಇರುವಂತೆ ಕ್ಯಾಪ್ಟನ್ ಅನ್ನು ಕೊಂದುಹಾಕಿ ಮುಂಬೈ ತಲಪುತ್ತಿದ್ದಂತೆ ತಂಡಗಳಾಗಿ ಬೇರೆ ಬೇರೆ ಹಾದಿಯಲ್ಲಿ ನಡೆದಿದ್ದಾರೆ.

    ನವೆಂಬರ್ 26 ರಂದು ಮೊಹಮ್ಮದ್ ಅಜ್ಮಲ್ ಕಸಬ್, ಇಸ್ಮಾಯಿಲ್ ಖಾನ್ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮೇಲೆ ದಾಳಿ ಮಾಡಿ 58 ಜನರನ್ನು ಸಾಯಿಸಿದ್ದರು. ನಂತರ ನಾರಿಮನ್ ಹೌಸ್, ತಾಜ್, ಒಬೆರಾಯ್-ಟ್ರೈಡೆಂಟ್ ಹೋಟೆಲ್ ಮೇಲೆ ದಾಳಿ ಮಾಡಿ 100ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದ್ದರು.

    ಈ ಕೃತ್ಯವನ್ನು ಮಾಡಿರುವವರು ಉಗ್ರರೇ ಅವರಿಗೆ ಪಾಕಿಸ್ತಾನ ಬೆಂಬಲಿಸಿ ನೆಲೆಕೊಟ್ಟಿದೆ ಎಂದು ಭಾರತ ಪದೇ ಪದೇ ದಾಖಲೆ ಸಹಿತ ಆರೋಪ ಮಾಡುತ್ತಲೇ ಬಂದಿತ್ತು.