Tag: Nawazuddin Siddiqui

  • ಮಾಜಿ ಪತ್ನಿ, ಸಹೋದರನ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ನವಾಜುದ್ದೀನ್ ಸಿದ್ದಿಕಿ

    ಮಾಜಿ ಪತ್ನಿ, ಸಹೋದರನ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ನವಾಜುದ್ದೀನ್ ಸಿದ್ದಿಕಿ

    ಬಾಲಿವುಡ್ (Bollywood)  ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಅವರು ಇತ್ತೀಚಿಗೆ ನೆಗೆಟಿವ್ ವಿಚಾರಗಳಿಂದಲೇ ಹೆಚ್ಚು ಸುದ್ದಿಯಾಗುತ್ತಿದ್ದಾರೆ. ಅವರ ಮಾಜಿ ಪತ್ನಿ ಆಲಿಯಾ ಸಿದ್ಧಿಕಿ (Aaliya Siddiqui) ಮತ್ತು ಸಹೋದರ ಶಾಮಸ್ ನವಾಬ್ ಸಿದ್ದಿಕಿ ಅವರ ವಿರುದ್ಧ ಹಲವು ಆರೋಪಗಳನ್ನ ಮಾಡಿದ್ದಾರೆ. ಕೊನೆಗೆ ನವಾಜುದ್ದೀನ್ ಈ ಬಗ್ಗೆ ಬಹಿರಂಗ ಪತ್ರಿಕಾ ಹೇಳಿಕೆಯನ್ನು ಕೂಡ ರಿಲೀಸ್ ಮಾಡಿದ್ದಾರೆ. ಮಾಜಿ ಪತ್ನಿ ಆಲಿಯಾ ಮತ್ತು ಸಹೋದರ (Brother) ಶಾಮಸ್ ನವಾಬ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಇದನ್ನೂ ಓದಿ: ದುಬಾರಿ ಸೀರೆಯುಟ್ಟು `ಶಾಕುಂತಲಂ’ ಪ್ರಚಾರದಲ್ಲಿ ಭಾಗಿಯಾದ ಸಮಂತಾ

    ದಿನದಿಂದ ದಿನಕ್ಕೆ ನವಾಜುದ್ದೀನ್ ಮನೆಗೆ ರಂಪಾಟ ಹಲವು ತಿರುವುಗಳನ್ನ ಪಡೆಯುತ್ತಿದೆ. ಇದೀಗ ಮಾಜಿ ಪತ್ನಿ ಆಲಿಯಾ ಮತ್ತು ಸೋದರ ಶಮಸ್ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆಯನ್ನು ನಟ ನವಾಜುದ್ದೀನ್ ಸಿದ್ದಿಕಿ ಹೂಡಿದ್ದು, ಮಾರ್ಚ್ 30ರಂದು ಬಾಂಬೆ ಹೈಕೋರ್ಟ್‌ನಲ್ಲಿ ಈ ಕೇಸ್‌ನ ವಿಚಾರಣೆ ನಡೆಯಲಿದೆ. ತನ್ನ ಸಹೋದರ ನವಾಜುದ್ದೀನ್ ಸಿದ್ದಿಕಿ ಅವರಿಗೆ 2018ರಿಂದಲೂ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಸಹೋದರನಿಗೆ ನವಾಜುದ್ದೀನ್ ಕ್ರೆಡಿಟ್ ಕಾರ್ಡ್ಸ್, ಎಟಿಎಂ ಕಾರ್ಡ್ಸ್, ಬ್ಯಾಂಕ್ ಪಾಸ್‌ವರ್ಡ್ಸ್ ನೀಡಿದ್ದರು. ಇದನ್ನೆಲ್ಲಾ ಆತ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ನವಾಜುದ್ದೀನ್ ಆರೋಪಿಸಿದ್ದಾರೆ.

    ನನ್ನ ಪತ್ನಿ ಆಲಿಯಾ ನನ್ನ ವಿರುದ್ಧ ನಿಲ್ಲುವಂತೆ ಶಮಸ್‌ ಎತ್ತಿ ಕಟ್ಟಿದ್ದಾನೆ ಎಂದಿದ್ದಾರೆ. ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಆಲಿಯಾಗೆ ಪ್ರತಿ ತಿಂಗಳು 10 ಲಕ್ಷ ರೂ. ನೀಡಲಾಗುತ್ತಿತ್ತು ಹಾಗೂ ಪ್ರೊಡಕ್ಷನ್ ಹೌಸ್ ಆರಂಭಿಸಲು 2.50 ಕೋಟಿ ರೂ. ನೀಡಲಾಗಿತ್ತು. ಆದರೆ ಈ ಹಣವನ್ನೆಲ್ಲ ಅವರು ತಮ್ಮ ಸ್ವಂತಕ್ಕೆ ಬಳಸಿದ್ದಾರೆ ಎಂದು ನಟ ಆರೋಪಿಸಿದ್ದಾರೆ.

    ಇದಲ್ಲದೆ, 2020ರಲ್ಲಿ ಮ್ಯಾನೇಜರ್ ಹುದ್ದೆಯಿಂದ ಶಮಾಸ್‌ರನ್ನು ತೆಗೆದ ನಂತರ ನವಾಜುದ್ದೀನ್ ಅವರು ಆದಾಯ ತೆರಿಗೆ, ಜಿಎಸ್‌ಟಿ ಮತ್ತು ಇತರ ಸರ್ಕಾರಿ ಇಲಾಖೆಗಳಿಂದ 37 ಕೋಟಿ ರೂಪಾಯಿ ತೆರಿಗೆ ಪಾವತಿಸದ ಕಾರಣಕ್ಕಾಗಿ ಕಾನೂನು ನೋಟಿಸ್‌ಗಳನ್ನು ಸ್ವೀಕರಿಸಿದ್ದಾರೆ ಎಂದು ನವಾಜುದ್ದೀನ್ ಅವರು ಅರ್ಜಿಯಲ್ಲಿ ಹೇಳಿದ್ದು, 100 ಕೋಟಿ ರೂಪಾಯಿ ಪರಿಹಾರ ನೀಡಲು ಆದೇಶಿಸುವಂತೆ ನವಾಜುದ್ದೀನ್ ಸಿದ್ದಿಕಿ ಕೋರಿದ್ದಾರೆ.

  • ಬಹಿರಂಗ ಪತ್ರ ಬರೆದು ಮತ್ತೆ ಗಂಭೀರ ಆರೋಪ ಮಾಡಿದ ನಟ ನವಾಜುದ್ದೀನ್ ಪತ್ನಿ

    ಬಹಿರಂಗ ಪತ್ರ ಬರೆದು ಮತ್ತೆ ಗಂಭೀರ ಆರೋಪ ಮಾಡಿದ ನಟ ನವಾಜುದ್ದೀನ್ ಪತ್ನಿ

    ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮತ್ತು ಅವರ ಪತ್ನಿ ಆಲಿಯಾ (Alia)  ಜಗಳ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದವರು, ಇದೀಗ ಆ ಜಗಳದಲ್ಲಿ ತಮ್ಮ ಅಪ್ರಾಪ್ತ ಮಗಳನ್ನೂ ಎಳೆದು ತಂದಿದ್ದಾರೆ. ನವಾಜುದ್ದೀನ್ ಪತ್ನಿ ಆಲಿಯಾ ಬರೆದ ಬಹಿರಂಗ ಪತ್ರದಲ್ಲಿ ಸಿದ್ದಿಕಿ ಮ್ಯಾನೇಜರ್ ತಮ್ಮ ಪುಟ್ಟ ಮಗಳ ಜೊತೆ ಕೆಟ್ಟದಾಗಿ ನಡೆದುಕೊಂಡ ಎಂದು ಹೇಳಿಕೊಂಡಿದ್ದಾರೆ.

    ನವಾಜುದ್ದೀನ್ ಸಿದ್ದಿಕಿ ಮತ್ತು ಪತ್ನಿ ಆಲಿಯಾ ಸದ್ಯ ದೂರ ದೂರವಿದ್ದಾರೆ. ಡಿವೋರ್ಸ್ (Divorced) ಕೂಡ ಆಗಿದೆ ಎಂದು ಹೇಳಲಾಗುತ್ತಿದೆ. ಮಕ್ಕಳು ಯಾರ ಜೊತೆ ಇರಬೇಕು ಎನ್ನುವುದರ ಬಗ್ಗೆ ಕೋರ್ಟಿನಲ್ಲಿ ನ್ಯಾಯ ತೀರ್ಮಾನ ಆಗಬೇಕಿದೆಯಂತೆ. ಹಾಗಾಗಿ ಮಕ್ಕಳು ತನ್ನೊಂದಿಗೆ ಇರಬೇಕು ಎನ್ನುವುದು ಆಲಿಯಾ ವಾದ. ಆದರೆ, ಅದಕ್ಕೆ ನವಾಜುದ್ದೀನ್ ಒಪ್ಪುತ್ತಿಲ್ಲ. ಈ ವಿಚಾರವಾಗಿ ಆಲಿಯಾ ಗಂಭೀರ ಆರೋಪ ಮಾಡಿದ್ದು, ನವಾಜುದ್ದೀನ್ ಅಪಾಯಕಾರಿ ತಂದೆ, ಬೇಜವಾಬ್ದಾರಿ ಮನುಷ್ಯ. ಅವರ ಮ್ಯಾನೇಜರ್ ಕೂಡ ಸರಿಯಿಲ್ಲ’ ಎಂದು ಆರೋಪ ಮಾಡಿದ್ದಾರೆ.

    ಪತ್ನಿಯ ಯಾವ ಮಾತಿಗೂ ಈವರೆಗೂ ಪ್ರತಿಕ್ರಿಯಿಸದ ನವಾಜುದ್ದೀನ್, ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅಸಲಿಯಾಗಿ ಆಲಿಯಾ ನನ್ನ ಪತ್ನಿಯಲ್ಲ, ಆಕೆ ಡಿವೋರ್ಸ್ ತಗೆದುಕೊಂಡಿದ್ದಾಳೆ. ಆದರೆ, ಆಕೆ ಈಗ ಕೇವಲ ನನ್ನ ಮಕ್ಕಳ ತಾಯಿಯಷ್ಟೇ ಎಂದು ಬರೆದುಕೊಂಡಿದ್ದಾರೆ. ತಿಂಗಳಿಗೆ ಸರಾಸರಿ ಹತ್ತು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ದುಡ್ಡಿನ ದಾಹಕ್ಕೆ ಆಲಿಯಾ ಆರೋಪಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬರ್ತ್‌ಡೇ ಸಂಭ್ರಮದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಇನ್ಸ್ಟಾಗ್ರಾಮ್ ಮೂಲಕ ಸಂಸಾರದ ಅನೇಕ ವಿಷಯಗಳನ್ನೂ ಹಂಚಿಕೊಂಡಿರುವ ನವಾಜುದ್ದೀನ್, ‘ಆಲಿಯಾ ಸಿನಿಮಾ ಮಾಡಲು ಕೋಟಿ ಕೋಟಿ ಕಳೆದುಕೊಂಡದ್ದೇನೆ. ಮಕ್ಕಳೊಂದಿಗೆ ಆಕೆ ಚೆನ್ನಾಗಿರಲಿ ಎನ್ನುವ ಕಾರಣಕ್ಕಾಗಿ ದುಬಾರಿ ಫ್ಲ್ಯಾಟ್ ಕೊಡಿಸಿದ್ದೇನೆ. ಅಲ್ಲದೇ, ಮಕ್ಕಳಿಗಾಗಿ ದುಬೈನಲ್ಲೂ ಅಪಾರ್ಟ್ಮೆಂಟ್ ನೀಡಿದ್ದೇನೆ. ಅಲ್ಲಿ ಅವಳೂ ಇದ್ದಳು. ಇಷ್ಟೆಲ್ಲ ಮಾಡಿದರೂ, ನನ್ನ ಮೇಲೆ ಆರೋಪ ಮಾಡಿದ್ದಾಳೆ’ ಎಂದು ಬರೆದುಕೊಂಡಿದ್ದಾರೆ.

    ಆಲಿಯಾ ಮಾಧ್ಯಮಗಳ ಮುಂದೆ ತಮ್ಮ ಮಾನ ಹರಾಜು ಮಾಡುತ್ತಿರುವ ಕುರಿತಾಗಿಯೂ ಅವರು ಹೇಳಿಕೊಂಡಿದ್ದು, ತಮ್ಮ ಭಾವನೆಗಳ ಜೊತೆ ಅವರು ಆಟವಾಡುತ್ತಿದ್ದಾರೆ ಎಂದು ದೂರಿದ್ದಾರೆ. ಏಕಪಕ್ಷೀಯ ರೀತಿಯ ವಿಡಿಯೋಗಳನ್ನು ಹಾಕುತ್ತಿರುವವರ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಮಕ್ಕಳಿಗಾಗಿ ಇವೆಲ್ಲವನ್ನೂ ಸಹಿಸಿಕೊಳ್ಳುತ್ತಿರುವುದಾಗಿ ನವಾಜುದ್ದೀನ್ ಹೇಳಿಕೊಂಡಿದ್ದಾರೆ.

  • ನವಾಜುದ್ದೀನ್ ಸಿದ್ದಿಕಿ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಣಾವತ್

    ನವಾಜುದ್ದೀನ್ ಸಿದ್ದಿಕಿ ಪರ ಬ್ಯಾಟಿಂಗ್ ಮಾಡಿದ ಕಂಗನಾ ರಣಾವತ್

    ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮತ್ತು ಇವರ ಹೆಂಡತಿಯ ಜಗಳ ನಾನಾ ರೂಪ ಪಡೆದುಕೊಳ್ಳುತ್ತಿದೆ. ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಹೆಂಡತಿಯ ವಿರುದ್ಧ ಹಲವು ಪೋಸ್ಟ್ ಗಳನ್ನು ಸಿದ್ದಿಕಿ ಹಾಕಿದ್ದರು. ಹಲವು ದಿನಗಳ ನಂತರ ಮೌನ ಮುರಿದಿದ್ದರು. ನವಾಜುದ್ದೀನ್ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಂತೆಯೇ ನಟಿ ಕಂಗನಾ ರಣಾವತ್ (Kangana Ranaut) ಪ್ರಕರಣದಲ್ಲಿ ಪ್ರವೇಶ ಮಾಡಿದ್ದಾರೆ. ಮೌನ ಯಾವತ್ತು ನೋವನ್ನುಂಟು ಮಾಡುತ್ತಿದೆ. ಎಲ್ಲವನ್ನೂ ಹಂಚಿಕೊಂಡಿದ್ದೀರಿ. ನಿಮ್ಮೊಂದಿಗೆ ನಾನಿದ್ದೇನೆ ಎಂದು ಹೇಳಿದ್ದಾರೆ.

    ನವಾಜುದ್ದೀನ್ ಸಿದ್ದಿಕಿ ಹಾಗೂ ಪತ್ನಿ ಆಲಿಯಾ (Alia) ನಡುವಿನ ಜಗಳ ಅಕ್ಷರಶಃ ಆಡಿಕೊಳ್ಳುವಂತಾಗಿದೆ. ನವಾಜುದ್ದೀ ನ್ ಮೇಲೆ ಪತ್ನಿ ಆಲಿಯಾ ಅನೇಕ ರೋಪಗಳನ್ನು ಮಾಡಿದ್ದರು. ಅತ್ತೆಯ ಕಿರುಕುಳ ಸೇರಿದಂತೆ, ತನಗೆ ಅನ್ನ ನೀರು ಕೊಡದೇ ಕೂಡಿ ಹಾಕಲಾಗಿತ್ತು ಎಂದೆಲ್ಲ ಹೇಳಿದ್ದರು. ತಮ್ಮಿಂದ ಮಕ್ಕಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಅವರು ಆರೋಪಿಸಿದ್ದರು. ಇದನ್ನೂ ಓದಿ:ಬರ್ತ್‌ಡೇ ಬಗ್ಗೆ ಅಪ್‌ಡೇಟ್ ನೀಡಿದ ರಾಧಿಕಾ ಪಂಡಿತ್

    ಪತ್ನಿಯ ಯಾವ ಮಾತಿಗೂ ಈವರೆಗೂ ಪ್ರತಿಕ್ರಿಯಿಸದ ನವಾಜುದ್ದೀನ್, ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅಸಲಿಯಾಗಿ ಆಲಿಯಾ ನನ್ನ ಪತ್ನಿಯಲ್ಲ, ಆಕೆ ಡಿವೋರ್ಸ್ ತಗೆದುಕೊಂಡಿದ್ದಾಳೆ. ಆದರೆ, ಆಕೆ ಈಗ ಕೇವಲ ನನ್ನ ಮಕ್ಕಳ ತಾಯಿಯಷ್ಟೇ ಎಂದು ಬರೆದುಕೊಂಡಿದ್ದಾರೆ. ತಿಂಗಳಿಗೆ ಸರಾಸರಿ ಹತ್ತು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ದುಡ್ಡಿನ ದಾಹಕ್ಕೆ ಆಲಿಯಾ ಆರೋಪಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ.

    ಇನ್ಸ್ಟಾಗ್ರಾಮ್ ಮೂಲಕ ಸಂಸಾರದ ಅನೇಕ ವಿಷಯಗಳನ್ನೂ ಹಂಚಿಕೊಂಡಿರುವ ನವಾಜುದ್ದೀನ್, ‘ಆಲಿಯಾ ಸಿನಿಮಾ ಮಾಡಲು ಕೋಟಿ ಕೋಟಿ ಕಳೆದುಕೊಂಡದ್ದೇನೆ. ಮಕ್ಕಳೊಂದಿಗೆ ಆಕೆ ಚೆನ್ನಾಗಿರಲಿ ಎನ್ನುವ ಕಾರಣಕ್ಕಾಗಿ ದುಬಾರಿ ಫ್ಲ್ಯಾಟ್ ಕೊಡಿಸಿದ್ದೇನೆ. ಅಲ್ಲದೇ, ಮಕ್ಕಳಿಗಾಗಿ ದುಬೈನಲ್ಲೂ ಅಪಾರ್ಟ್ಮೆಂಟ್ ನೀಡಿದ್ದೇನೆ. ಅಲ್ಲಿ ಅವಳೂ ಇದ್ದಳು. ಇಷ್ಟೆಲ್ಲ ಮಾಡಿದರೂ, ನನ್ನ ಮೇಲೆ ಆರೋಪ ಮಾಡಿದ್ದಾಳೆ’ ಎಂದು ಬರೆದುಕೊಂಡಿದ್ದಾರೆ.

    ಆಲಿಯಾ ಮಾಧ್ಯಮಗಳ ಮುಂದೆ ತಮ್ಮ ಮಾನ ಹರಾಜು ಮಾಡುತ್ತಿರುವ ಕುರಿತಾಗಿಯೂ ಅವರು ಹೇಳಿಕೊಂಡಿದ್ದು, ತಮ್ಮ ಭಾವನೆಗಳ ಜೊತೆ ಅವರು ಆಟವಾಡುತ್ತಿದ್ದಾರೆ ಎಂದು ದೂರಿದ್ದಾರೆ. ಏಕಪಕ್ಷೀಯ ರೀತಿಯ ವಿಡಿಯೋಗಳನ್ನು ಹಾಕುತ್ತಿರುವವರ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಮಕ್ಕಳಿಗಾಗಿ ಇವೆಲ್ಲವನ್ನೂ ಸಹಿಸಿಕೊಳ್ಳುತ್ತಿರುವುದಾಗಿ ನವಾಜುದ್ದೀನ್ ಹೇಳಿಕೊಂಡಿದ್ದಾರೆ.

  • ಆಲಿಯಾ ನನ್ನ ಪತ್ನಿಯಲ್ಲ, ನನ್ನ ಮಕ್ಕಳ ತಾಯಿ ಅಷ್ಟೆ: ನಟ ನವಾಜುದ್ದೀನ್ ಸಿದ್ದಿಕಿ

    ಆಲಿಯಾ ನನ್ನ ಪತ್ನಿಯಲ್ಲ, ನನ್ನ ಮಕ್ಕಳ ತಾಯಿ ಅಷ್ಟೆ: ನಟ ನವಾಜುದ್ದೀನ್ ಸಿದ್ದಿಕಿ

    ಬಾಲಿವುಡ್ ನ ಪ್ರತಿಭಾವಂತ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಹಾಗೂ ಪತ್ನಿ ಆಲಿಯಾ (Alia) ನಡುವಿನ ಜಗಳ ಅಕ್ಷರಶಃ ಆಡಿಕೊಳ್ಳುವಂತಾಗಿದೆ. ನವಾಜುದ್ದೀ ನ್ ಮೇಲೆ ಪತ್ನಿ ಆಲಿಯಾ ಅನೇಕ ರೋಪಗಳನ್ನು ಮಾಡಿದ್ದರು. ಅತ್ತೆಯ ಕಿರುಕುಳ ಸೇರಿದಂತೆ, ತನಗೆ ಅನ್ನ ನೀರು ಕೊಡದೇ ಕೂಡಿ ಹಾಕಲಾಗಿತ್ತು ಎಂದೆಲ್ಲ ಹೇಳಿದ್ದರು. ತಮ್ಮಿಂದ ಮಕ್ಕಳನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಅವರು ಆರೋಪಿಸಿದ್ದರು.

    ಪತ್ನಿಯ ಯಾವ ಮಾತಿಗೂ ಈವರೆಗೂ ಪ್ರತಿಕ್ರಿಯಿಸದ ನವಾಜುದ್ದೀನ್, ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಅಸಲಿಯಾಗಿ ಆಲಿಯಾ ನನ್ನ ಪತ್ನಿಯಲ್ಲ, ಆಕೆ ಡಿವೋರ್ಸ್ (Divorced) ತಗೆದುಕೊಂಡಿದ್ದಾಳೆ. ಆದರೆ, ಆಕೆ ಈಗ ಕೇವಲ ನನ್ನ ಮಕ್ಕಳ ತಾಯಿಯಷ್ಟೇ ಎಂದು ಬರೆದುಕೊಂಡಿದ್ದಾರೆ. ತಿಂಗಳಿಗೆ ಸರಾಸರಿ ಹತ್ತು ಲಕ್ಷ ರೂಪಾಯಿ ಕೊಟ್ಟಿದ್ದೇನೆ. ದುಡ್ಡಿನ ದಾಹಕ್ಕೆ ಆಲಿಯಾ ಆರೋಪಿಸುತ್ತಿದ್ದಾಳೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬ್ಯಾಕ್‌ಲೆಸ್ ಫೋಟೋ ಶೇರ್‌, ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ `ಸಲಾರ್’ ನಟಿ

    ಇನ್ಸ್ಟಾಗ್ರಾಮ್ ಮೂಲಕ ಸಂಸಾರದ ಅನೇಕ ವಿಷಯಗಳನ್ನೂ ಹಂಚಿಕೊಂಡಿರುವ ನವಾಜುದ್ದೀನ್, ‘ಆಲಿಯಾ ಸಿನಿಮಾ ಮಾಡಲು ಕೋಟಿ ಕೋಟಿ ಕಳೆದುಕೊಂಡದ್ದೇನೆ. ಮಕ್ಕಳೊಂದಿಗೆ ಆಕೆ ಚೆನ್ನಾಗಿರಲಿ ಎನ್ನುವ ಕಾರಣಕ್ಕಾಗಿ ದುಬಾರಿ ಫ್ಲ್ಯಾಟ್ ಕೊಡಿಸಿದ್ದೇನೆ. ಅಲ್ಲದೇ, ಮಕ್ಕಳಿಗಾಗಿ ದುಬೈನಲ್ಲೂ (Dubai) ಅಪಾರ್ಟ್ಮೆಂಟ್ ನೀಡಿದ್ದೇನೆ. ಅಲ್ಲಿ ಅವಳೂ ಇದ್ದಳು. ಇಷ್ಟೆಲ್ಲ ಮಾಡಿದರೂ, ನನ್ನ ಮೇಲೆ ಆರೋಪ ಮಾಡಿದ್ದಾಳೆ’ ಎಂದು ಬರೆದುಕೊಂಡಿದ್ದಾರೆ.

    ಆಲಿಯಾ ಮಾಧ್ಯಮಗಳ ಮುಂದೆ ತಮ್ಮ ಮಾನ ಹರಾಜು ಮಾಡುತ್ತಿರುವ ಕುರಿತಾಗಿಯೂ ಅವರು ಹೇಳಿಕೊಂಡಿದ್ದು, ತಮ್ಮ ಭಾವನೆಗಳ ಜೊತೆ ಅವರು ಆಟವಾಡುತ್ತಿದ್ದಾರೆ ಎಂದು ದೂರಿದ್ದಾರೆ. ಏಕಪಕ್ಷೀಯ ರೀತಿಯ ವಿಡಿಯೋಗಳನ್ನು ಹಾಕುತ್ತಿರುವವರ ಕುರಿತಾಗಿಯೂ ಅವರು ಮಾತನಾಡಿದ್ದಾರೆ. ಮಕ್ಕಳಿಗಾಗಿ ಇವೆಲ್ಲವನ್ನೂ ಸಹಿಸಿಕೊಳ್ಳುತ್ತಿರುವುದಾಗಿ ನವಾಜುದ್ದೀನ್ ಹೇಳಿಕೊಂಡಿದ್ದಾರೆ.

  • ನನ್ನ ಮತ್ತು ಮಕ್ಕಳನ್ನು ಬೀದಿಗೆ ತಳ್ಳಿದ: ನವಾಜುದ್ದೀನ್ ವಿರುದ್ಧ ಪತ್ನಿ ಕಣ್ಣೀರು

    ನನ್ನ ಮತ್ತು ಮಕ್ಕಳನ್ನು ಬೀದಿಗೆ ತಳ್ಳಿದ: ನವಾಜುದ್ದೀನ್ ವಿರುದ್ಧ ಪತ್ನಿ ಕಣ್ಣೀರು

    ಬಾಲಿವುಡ್ (Bollywood)  ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಸಂಸಾರದ ಸಮಸ್ಯೆ ಬೀದಿಯಲ್ಲಿ ರಂಪಾಟವಾಗುತ್ತಿದೆ. ನಟನ ವಿರುದ್ಧ ಪತ್ನಿ ಆಲಿಯಾ (Wife Aaliya) ಸಾಲು ಸಾಲು ಆರೋಪ ಮಾಡಿದ್ದಾರೆ. ನವಾಜುದ್ದೀನ್‌ನಿಂದ ಬೀದಿಗೆ ಬಂದಿರೋದಾಗಿ ಪತ್ನಿ ವೀಡಿಯೋ ಮೂಲಕ ಅಳಲು ತೋಡಿಕೊಂಡಿದ್ದಾರೆ.

    ನಟ-ನಟಿಯರ ಬದುಕು ಅಭಿಮಾನಿಗಳಿಗೆ ನಿದರ್ಶನವಾಗಬೇಕು. ಆದರೆ ಅವರೇ ಬದುಕೇ ಇದೀಗ ಮೂರಾಬಟ್ಟೆ ಆಗಿದೆ. ನಟ ನವಾಜುದ್ದೀನ್ ಸಿದ್ದಿಕಿ ದಾಂಪತ್ಯ ಕಲಹ ಅಕ್ಷರಶಃ ಬೀದಿಗೆ ಬಂದಿದೆ. ನವಾಜುದ್ದೀನ್ ಪತ್ನಿ ಆಲಿಯಾ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಇದೀಗ ಬೀದಿಯಲ್ಲಿ ನಿಂತು ವಿಡಿಯೋ ಮಾಡಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

    ಕಳೆದ ಕೆಲವು ತಿಂಗಳಿಂದ ಅಲಿಯಾ ಪತಿ ಮತ್ತು ಅವರ ಕುಟುಂಬದ ವಿಚಾರ ಬೀದಿ ರಂಪಾಟವಾಗಿದೆ. ಇದೀಗ ತನ್ನನ್ನು ಮತ್ತು ಮಕ್ಕಳನ್ನು ಬೀದಿಗೆ ಹಾಕಿದ್ದಾನೆ ಎಂದು ವಿಡಿಯೋ ಮೂಲಕ ನಟನ ಪತ್ನಿ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಆಲಿಯಾ ಮತ್ತು ಇಬ್ಬರು ಮಕ್ಕಳಾದ ಶೋರಾ ಮತ್ತು ಯಾನಿ ಅವರೊಂದಿಗೆ ನವಾಜುದ್ದೀನ್ ಅವರ ಅಂಧೇರಿ ಬಂಗಲೆಯಲ್ಲಿ ಉಳಿದುಕೊಂಡಿರುವುದಾಗಿ ಹೇಳಿದ್ದರು. ಅಲ್ಲಿ ಯಾವುದೇ ಸೌಲಭ್ಯವಿಲ್ಲ, ಸ್ನಾನ ಮಾಡಲು ಬಿಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ಇದೀಗ ಮಕ್ಕಳನ್ನು ಮನೆಯಿಂದ ಹೊರಹಾಕಲಾಗಿದೆ ಎಂದು ಆರೋಪಿಸಿ ವಿಡಿಯೋ ಮಾಡಿದ್ದಾರೆ.

     

    View this post on Instagram

     

    A post shared by Aaliya Siddiqui (@aaliyanawazuddin)

    ತನ್ನ ಬಂಗಲೆ ಪ್ರವೇಶಿಸದಂತೆ ನವಾಜುದ್ದೀನ್ ಬಾಡಿಗಾರ್ಡ್ ನಿಯೋಜಿಸಿದ್ದಾರೆ ಎಂದು ಹೇಳಿದ್ದಾರೆ. ಇಬ್ಬರು ಮಕ್ಕಳೊಂದಿಗೆ ನವಾಜುದ್ದೀನ್ ಮನೆ ಮುಂದೆ ರಸ್ತೆಯಲ್ಲಿ ನಿಂತಿದ್ದಾರೆ. ಮಗ ಯಾನಿಯನ್ನು ಹತ್ತಿರದಲ್ಲೇ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದಾರೆ ಮಗಳು ಶೋರಾ ಜೋರಾಗಿ ಅಳುತ್ತಿದ್ದಾಳೆ. ಇಬ್ಬರೂ ಮಕ್ಕಳನ್ನು ಸಹ ಬಂಗಲೆಯಿಂದ ಹೊರಹಾಕಿದ್ದಾರೆ. ಮನೆಯೊಳಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ನನ್ನ ಬಳಿ ಕೇವಲ 81 ರೂಪಾಯಿ ಇದೆ. ನಾವು ಎಲ್ಲಿಯೂ ಹೋಗಿಲ್ಲ ಎಂದಿದ್ದಾರೆ. ಎಲ್ಲಿಗೆ ಹೋಗಬೇಕು, ಮುಂದೆ ಎನು ಎಂಬುದು ಗೊತ್ತಿಲ್ಲ. ನವಾಜ್ ಅವರು ಯಾಕೆ ಹೀಗೆ ವರ್ತಿಸುತ್ತಿದ್ದಾರೆ ಎಂಬುದು ತಿಳಿದಿಲ್ಲ. ಆದರೆ ಅವರು ತೀರಾ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಆಲಿಯಾ ಹೇಳಿದ್ದಾರೆ.

  • ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ರೇಪ್ ಕೇಸ್ ದಾಖಲಿಸಿದ ಪತ್ನಿ

    ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ರೇಪ್ ಕೇಸ್ ದಾಖಲಿಸಿದ ಪತ್ನಿ

    ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮತ್ತು ಪತ್ನಿ ಆಲಿಯಾ (Alia) ನಡುವಿನ ಗಲಾಟೆ ಹೊಸದೇನೂ ಅಲ್ಲ. ಆ ಜಗಳಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸ್ವತಃ ಗಂಡನ ವಿರುದ್ಧವೇ ನಟನ ಪತ್ನಿ ಆಲಿಯಾ ರೇಪ್ (Rape) ಕೇಸ್ ದಾಖಲಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ. ತಮ್ಮ ಹಿಂದಿನ ದಿನಗಳನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ.

    ನವಾಜುದ್ದೀನ್ ಸಿದ್ದಿಕಿ ಕುಟುಂಬ ತಮ್ಮ ಮೇಲೆ ಸತತವಾಗಿ ಹಲ್ಲೆ ಮಾಡಿದೆ. ಊಟ, ನೀರು ಕೊಡದೇ ಹಿಂಸಿಸಿದೆ ಎಂದು ಈ ಹಿಂದೆ ಮಾಧ್ಯಮಗಳ ಜೊತೆ ತಮ್ಮ ನೋವುಗಳನ್ನು ಹೇಳಿಕೊಂಡಿದ್ದರು ಆಲಿಯಾ. ಇದೀಗ ತಮ್ಮ ಮೇಲೆ ನವಾಜ್ ಅತ್ಯಾಚಾರ ಮಾಡಿದ್ದಾರೆ ಎಂದು ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ತಮ್ಮನ್ನು ಮನೆಯಿಂದ ಆಚೆ ಹಾಕಲು ಏನೆಲ್ಲ ತಂತ್ರಗಳನ್ನು ಅವರು ಹೂಡಿದ್ದರು ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಾನೇನು ಖಾಸಗಿ ಭಾಗಗಳನ್ನ ತೋರಿಸುತ್ತಿಲ್ಲ; ನೀವೇಕೆ ವರಿ ಮಾಡ್ತೀರಿ – ನೆಟ್ಟಿಗರ ವಿರುದ್ಧ ಸಿಡಿದ ಉರ್ಫಿ

    ತಮ್ಮ ಮಕ್ಕಳನ್ನು ನವಾಜುದ್ದೀನ್ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ಸಮಾಜದ ಮುಂದೆ ತಾವು ಮಹಾನ್ ವ್ಯಕ್ತಿ ಎಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅತಿ ಹಿಂಸೆಯನ್ನೂ ನನಗೆ ನೀಡಿದ್ದಾರೆ. ಹಾಗಾಗಿ ನಾನು ವರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ಮಕ್ಕಳನ್ನು ಅವನಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

    ಈಗಾಗಲೇ ತಮ್ಮ ಮಕ್ಕಳನ್ನು ತಮಗೆ ಕೊಡಬೇಕು ಎಂದು ನವಾಜುದ್ದೀನ್ ಕೋರ್ಟ್ ಮೊರೆ ಹೋಗಿದ್ದಾರೆ. ಈ ಕುರಿತು ಆಲಿಯಾ ಮಾತನಾಡಿದ್ದು, ಹುಟ್ಟಿದಾಗಿಂದ ಈವರೆಗೂ ಮಕ್ಕಳ ಬಗ್ಗೆ ಕಾಳಜಿ ತೋರಿಸದೇ ಇರುವವನು, ಈಗೇಕೆ ಇಷ್ಟೊಂದು ಪ್ರೀತಿ ಬಂದಿದೆ ಎಂದು ಅರ್ಥವಾಗುತ್ತಿಲ್ಲ. ನನ್ನಿಂದ ಯಾವುದೇ ಕಾರಣಕ್ಕೂ ಮಕ್ಕಳನ್ನು ದೂರ ಮಾಡುವುದಕ್ಕೆ ಆಗುವುದಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

  • `ಕಾಂತಾರ’ ಹೀರೋ ಮೇಲೆ ಹೊಟ್ಟೆ ಕಿಚ್ಚು ಎಂದ ನವಾಝುದ್ದೀನ್ ಸಿದ್ದಿಕಿ

    `ಕಾಂತಾರ’ ಹೀರೋ ಮೇಲೆ ಹೊಟ್ಟೆ ಕಿಚ್ಚು ಎಂದ ನವಾಝುದ್ದೀನ್ ಸಿದ್ದಿಕಿ

    ಚಿತ್ರರಂಗದಲ್ಲಿ `ಕಾಂತಾರ’ (Kantara) ದೊಡ್ಡ ಮಟ್ಟದಲ್ಲಿ ಕಮಾಲ್ ಮಾಡಿದೆ. ಸಿನಿಮಾ ರಿಲೀಸ್ ಆಗಿ ಅನೇಕ ದಿನಗಳಾದರೂ ಇನ್ನೂ ಕಾಂತಾರ ಬಗ್ಗೆ ಚರ್ಚೆ ನಡೆಯುತ್ತಿದೆ. ಭಾರತೀಯ ಸಿನಿಮಾರಂಗದ ಅನೇಕ ಸ್ಟಾರ್ ಕಲಾವಿದರು ಸಿನಿಮಾ ನೋಡಿ ಹಾಡಿ ಹೊಗಳಿದ್ದಾರೆ. ಆದರೆ ಇತ್ತೀಚೆಗೆ ಬಾಲಿವುಡ್ (Bollywood) ನಟ ನವಾಝುದ್ದೀನ್ ಸಿದ್ದಿಕಿ ಮಾತ್ರ ರಿಷಬ್ ಶೆಟ್ಟಿ (Rishab Shetty) ಮೇಲೆ ಹೊಟ್ಟೆ ಕಿಚ್ಚು ಆಗುತ್ತಿದೆ ಎಂದು ಹೇಳಿದ್ದಾರೆ.

    ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ರಿಷಬ್ ಮತ್ತು ನವಾಝುದ್ದೀನ್ ಭೇಟಿಯಾಗಿದ್ದರು. ಈ ವೇಳೆ ರಿಷಬ್ ಮೇಲೆ ಹೊಟ್ಟೆ ಕಿಚ್ಚು ಆಗುತ್ತಿದೆ ಎಂದು ಹೇಳಿಕೆ ನೀಡಿದ್ದರು. ಅಂದಹಾಗೆ ಇದು ‘ನಕಾರಾತ್ಮಕ’ ರೀತಿಯಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಾಂತಾರ ಹೀರೋ ಬಗ್ಗೆ ನವಾಝುದ್ದೀನ್ ಸಿದ್ದಿಕಿ (Nawazuddin Siddiqui) ಮಾತನಾಡಿದ್ದಾರೆ. ಇದನ್ನೂ ಓದಿ: ಪರಪುರುಷನ ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಇಡೀ ದೇಶ ಇಂದು ರಿಷಬ್ ಶೆಟ್ಟಿ ನೋಡಿ ಶಾಕ್ ಆಗಿದೆ. ಅವರು ಯಾವುದನ್ನೂ ಪ್ರಚಾರ ಮಾಡಿಲ್ಲ. ಸದ್ದಿಲ್ಲದ್ದೇ ಸಿನಿಮಾ ಬಿಡುಗಡೆ ಮಾಡಿದರು ಮತ್ತು ಎಲ್ಲಾ ದಾಖಲೆ ಬ್ರೇಕ್ ಮಾಡಿದರು. ಯಾರಾದರೂ ಒಳ್ಳೆಯ ಕೆಲಸ ಮಾಡಿದರೆ ಅಸೂಯೆಯ ಭಾವನೆ ಬೆಳೆಯುತ್ತದೆ ಮತ್ತು ನಮ್ಮನ್ನು ಸ್ಪರ್ಧೆಗೆ ಪ್ರೇರೇಪಿಸುತ್ತದೆ’ ಎಂದು ಹೇಳಿದರು. ಬಳಿಕ ನಟನಿಗೆ ಅವರಿಗೆ ನಿರೂಪಕರು ಅಸೂಯೆ ಪದ ಬಳಸಿದ್ದರ ಬಗ್ಗೆ ಕೇಳಿದರು. ಪ್ರತಿಕ್ರಿಯೆ ನೀಡಿದ ನವಾಜುದ್ದೀನ್, ಖಂಡಿತವಾಗಿಯೂ ಹೊಟ್ಟೆ ಕಿಚ್ಚು ಆಗುತ್ತದೆ. ಯಾಕೆಂದರೆ ಅವರು ಅಷ್ಟು ಒಳ್ಳೆಯ ಸಿನಿಮಾ ಮಾಡಿದ್ದಾರೆ. ಇದು ನಕಾರಾತ್ಮಕ ರೀತಿಯಲ್ಲಿ ಅಸೂಯೆ ಅಲ್ಲ ಎಂದು ಹೇಳಿದರು.

    ನವಾಝುದ್ದೀನ್ ಅವರ ಮಾತುಗಳಿಗೆ ನಟ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿ, ನಾನು ನವಾಝದ್ದೀನ್ ಅವರ ಹಲವಾರು ಸಿನಿಮಾಗಳನ್ನು ನೋಡಿದ್ದೇನೆ ಮತ್ತು ಅವರ ಪರಿಶ್ರಮ ಮತ್ತು ಕಷ್ಟದ ಪಯಣವನ್ನು ನೋಡಿದ್ದೇನೆ. ಅವರೂ ಕೂಡ ನಮ್ಮ ಹಾಗೆ. ನಾವು ಮಧ್ಯಮ ವರ್ಗದ ಕುಟುಂಬದಿಂದ ಬಂದವರು. ಹಾಗಾಗಿ ನಾವು ಚಿತ್ರರಂಗದಲ್ಲಿ ಏನಾದರೂ ದೊಡ್ಡ ಸಾಧನೆಯನ್ನ ಮಾಡಲು ಬಯಸುತ್ತೇವೆ. ಅವರು ದೊಡ್ಡ ಸ್ಫೂರ್ತಿ. ಅವರು ರಂಗಭೂಮಿಯಿಂದ ಬಂದು ಹಲವು ಸಣ್ಣ ಪಾತ್ರಗಳನ್ನು ಮಾಡಿದ್ದಾರೆ. ನಾವು ಕೂಡ ಕನ್ನಡ ಚಿತ್ರರಂಗದಲ್ಲಿ ಸಣ್ಣ ಪಾತ್ರಗಳನ್ನು ಮಾಡಿದ್ದೇವೆ. ಅವರು ನಮ್ಮ ಸೀನಿಯರ್. ನಮ್ಮಿಬ್ಬರದ್ದು ಒಂದೇ ರೀತಿಯ ಪಯಣ ಎಂದು ರಿಷಬ್ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳಮುಖಿಯಾಗಿ ಬದಲಾದ ನಟ ನವಾಜುದ್ದೀನ್ ಸಿದ್ದಿಕಿ

    ಮಂಗಳಮುಖಿಯಾಗಿ ಬದಲಾದ ನಟ ನವಾಜುದ್ದೀನ್ ಸಿದ್ದಿಕಿ

    ನಾನಾ ಪಾತ್ರಗಳ ಮೂಲಕ ಅಪಾರ ಅಭಿಮಾನಿಗಳನ್ನು ರಂಜಿಸಿರುವ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ, ಇದೀಗ ಮಂಗಳಮುಖಿಯಾಗಿ ಬದಲಾಗಿದ್ದಾರೆ. ಮಂಗಳಮುಖಿಯಾದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡ ಆಗಿವೆ. ಇದ್ದಕ್ಕಿದ್ದಂತೆಯೇ ಈ ನಟ ಯಾಕೆ ಹೀಗೆ ಬದಲಾದರು ಎಂದು ಹಲವರು ಪ್ರಶ್ನಿಸಿದ್ದಾರೆ. ನವಾಜುದ್ದೀನ್ ಗೆ ಏನಾಯಿತು ಎಂದು ಕೇಳಿದವರೂ ಇದ್ದಾರೆ. ಹುಡುಕಾಟದ ಮಧ್ಯ ನಂತರ ಗೊತ್ತಾಗಿದ್ದು, ಅವರು ಸಿನಿಮಾಗಾಗಿ ಅಂಥದ್ದೊಂದು ಪಾತ್ರ ಮಾಡಿದ್ದಾರೆ.

    ಹೌದು, ನವಾಜುದ್ದೀನ್ ಸಿದ್ದಕಿ ಇದೀಗ ಹಡ್ಡಿ ಹೆಸರಿನಲ್ಲಿ ಸಿನಿಮಾವೊಂದನ್ನು ಮಾಡುತ್ತಿದ್ದು, ಈ ಸಿನಿಮಾದಲ್ಲಿ ಅವರು ಮಂಗಳಮುಖಿಯ ಪಾತ್ರ ಮಾಡಿದ್ದಾರೆ. ಅದಕ್ಕಾಗಿ ಥೇಟ್ ಮಂಗಳಮುಖಿಯಂತೆಯೇ ಅವರ ಗೆಟಪ್ ಕೂಡ ಬದಲಾಗಿದೆ. ಅವರ ಮೊದಲು ನೋಟದ ಫೋಟೋವನ್ನು ರಿಲೀಸ್ ಮಾಡಿದ್ದು, ಅಭಿಮಾನಿಗಳು ಅದನ್ನು ಕಂಡು ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ, ನಟನ ಈ ಗಂಭೀರತೆಗೆ ಫಿದಾ ಕೂಡ ಆಗಿದ್ದಾರೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ಗೆ ಜ್ಯೂ.ಎನ್‌ಟಿಆರ್ ಎಂಟ್ರಿ: ಇಲ್ಲಿದೆ ಮಾಹಿತಿ

    ಈ ಕುರಿತು ಸ್ವತಃ ಸಿದ್ದಕಿ ತಮ್ಮ  ಅನುಭವಗಳನ್ನು ಹಂಚಿಕೊಂಡಿದ್ದು, ಎಂಬತ್ತಕ್ಕೂ ಹೆಚ್ಚು ನಿಜ ಮಂಗಳಮುಖಿಯೊಂದಿಗೆ ಕೆಲಸ ಮಾಡಿದ್ದಾಗಿ ಬರೆದುಕೊಂಡಿದ್ದಾರೆ. ಟ್ರಾನ್ಸ್ ಮಹಿಳೆಯರ ಜೊತೆ ಕೆಲಸ ಮಾಡಿದ್ದು, ಯಾವತ್ತಿಗೂ ಮರೆಯಲಾರದ ಅನುಭವ ನೀಡಿದೆ ಎಂದಿರುವ ಸಿದ್ದಿಕಿ, ಈ ಸಿನಿಮಾದ ಪಾತ್ರ ನೋಡಿ ಸ್ವತಃ ತಮ್ಮ ಮಗಳು ಅಪ್ ಸೆಟ್ ಆಗಿದ್ದ ಸಂಗತಿಯನ್ನೂ ಅವರು ಬಿಚ್ಚಿಟ್ಟಿದ್ದಾರೆ.

    ಈ ಪಾತ್ರವನ್ನು ಮಾಡುವಾಗ ಮಂಗಳಮುಖಿಯರ ಬಗ್ಗೆ ಗೌರವವು ಹೆಚ್ಚಾಯಿತು ಅಂದಿರುವ ಅವರು, ತಾನು ಪಾತ್ರ ಮಾಡುತ್ತಿದ್ದೇನೆ ಎಂದು ಮಗಳನ್ನು ನಂಬಿಸಲು ಸಾಕು ಸಾಕಾಯಿತು ಎಂದೂ ಅವರು ಹೇಳಿದ್ದಾರೆ. ಮಂಗಳಮುಖಿಯರ ಮನೆಯ ತಲ್ಲಣಗಳು ನನಗೆ ಈ ಮೂಲಕ ಅರ್ಥವಾಗುತ್ತಾ ಹೋದವು ಎಂದು ಭಾವನಾತ್ಮಕವಾಗಿ ಅವರು ಪೋಸ್ಟ್ ಮಾಡಿದ್ದಾರೆ. ಇದೊಂದು ಮರೆಯಲಾರದ ಅನುಭವ ಎಂದು ಅವರು ಅಭಿಮಾನಿಗಳ ಜೊತೆ ಹಲವು ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ ಕಾನ್ ಚಿತ್ರೋತ್ಸವ : ರಂಗಾಗಿದೆ ರೆಟ್ ಕಾರ್ಪೆಟ್

    ಇಂದಿನಿಂದ ಕಾನ್ ಚಿತ್ರೋತ್ಸವ : ರಂಗಾಗಿದೆ ರೆಟ್ ಕಾರ್ಪೆಟ್

    ಇಂದಿನಿಂದ ವಿಶ್ವದ ಪ್ರತಿಷ್ಠಿತ ಸಿನಿಮೋತ್ಸವಗಳಲ್ಲಿ ಒಂದಾದ ಕಾನ್ ಫಿಲ್ಮ್ ಫೆಸ್ಟಿವೆಲ್ ಶುರುವಾಗಲಿದೆ. ಇಂದು ಸಂಜೆ 7 ಗಂಟೆಯಿಂದ ಶುರುವಾಗುವ ಕ್ಯಾನ್ ಚಿತ್ರೋತ್ಸವದಲ್ಲಿ ರೆಡ್ ಕಾರ್ಪೆಟ್ ಮೇಲೆ ಭಾರತೀಯ ಸಿನಿಮಾ ರಂಗದ ಖ್ಯಾತ ತಾರೆಯರು ಹೆಜ್ಜೆ ಹಾಕಲಿದ್ದು, ಈಗಾಗಲೇ ಫ್ರಾನ್ಸ್ ನ ಕಾನ್ ನಗರದ ಫ್ರೆಂಚ್ ರಿವೇರಿಯಾಗೆ ಈ ತಾರೆಯರು ಬಂದಿಳಿದಿದ್ದಾರೆ.

    ಮೇ 17 ರಿಂದ ಮೇ 28ರವರೆಗೆ ನಡೆಯಲಿರುವ ಕಾನ್ ಸಿನಿಮೋತ್ಸವವು ವಿಶ್ವದ ನಾನಾ ಸಿನಿಮಾ ರಂಗವನ್ನು ಒಟ್ಟಾಗಿಸುವುದು ಫೆಸ್ಟಿವೆಲ್ ನ ವಿಶೇಷ. ಒಟ್ಟು 12 ದಿನಗಳ ಕಾಲ ನಡೆಯುವ ಚಿತ್ರೋತ್ಸವದಲ್ಲಿ ಸಿನಿ ಜಗತ್ತಿನ ಅನೇ ಗಣ್ಯರು ಭಾಗಿಯಾಗಲಿದ್ದು, ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರು ಉಪಸ್ಥಿತರಿರಲಿದ್ದಾರೆ. ಇದನ್ನೂ ಓದಿ:  ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

    ಕಳೆದ ಎರಡು ವರ್ಷಗಳಿಂದ ಕೊರೋನಾ ಕರಿನೆರಳಿನಿಂದಾಗಿ ಚಿತ್ರೋತ್ಸವ ಅಷ್ಟೇನೂ ಅದ್ಧೂರಿಯಾಗಿ ನಡೆದಿರಲಿಲ್ಲ. 2020ರಲ್ಲಿ ಚಿತ್ರೋತ್ಸವವನ್ನೇ ರದ್ದುಗೊಳಿಸಿದ್ದರೆ, 2021ರಲ್ಲಿ ಸೀಮಿತ ಮಾದರಿಯಲ್ಲಿ ಮಾತ್ರ ಚಿತ್ರೋತ್ಸವ ನಡೆಸಿದ್ದರು. ಈ ವರ್ಷ ಪ್ರತಿ ಸಲದಂತೆ ರಂಗುರಂಗಾಗಿ ಆಯೋಜಿಸಲಾಗಿದೆ. ರೆಡ್ ಕಾರ್ಪೆಟ್ ಸೇರಿದಂತೆ ಸಿನಿಮಾ ಪ್ರದರ್ಶನ, ಸೆಮಿನಾರ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಸಾಕಷ್ಟು ಸಲ ಕೇವಲ ಬಾಲಿವುಡ್ ಸಿಲೆಬ್ರಿಟಿಗಳಿಗೆ ಮಾತ್ರ ಕಾನ್ ನಲ್ಲಿ ಅವಕಾಶ ಸಿಗುತ್ತಿತ್ತು. ಈ ಬಾರಿ ದಕ್ಷಿಣದ ಅನೇಕ ತಾರೆಯರು ಈ ಚಿತ್ರೋತ್ಸವದಲ್ಲಿ ಭಾಗಿ ಆಗುತ್ತಿರುವುದು ವಿಶೇಷ. ಪೂಜಾ ಹೆಗ್ಡೆ, ನಯನತಾರಾ, ತಮನ್ನಾ ಭಾಟಿಯಾ, ಮಾಧವನ್, ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್, ನವಾಜುದ್ದೀನ್ ಸಿದ್ಧಿಖಿ, ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಹೀಗೆ ಅನೇಕ ಕಲಾವಿದರು ಭಾಗಿಯಾಗಲು ಈಗಾಗಲೇ ಫ್ರಾನ್ಸ್ ಗೆ ಹೋಗಿದ್ದಾರೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

    ಅದರಲ್ಲೂ ಈ ಬಾರಿಯ ಕಾನ್ಸ್ ಫೆಸ್ಟಿವೆಲ್ ನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಾನ್ ಚಿತ್ರೋತ್ಸವದ ಜ್ಯೂರಿಯಾಗಿ ಆಯ್ಕೆಯಾಗಿದ್ದಾರೆ. ತಮಿಳು, ಹಿಂದಿ ಸೇರಿದಂತೆ ಹಲವು ಭಾಷೆಯ ಚಿತ್ರಗಳು ಈ ಬಾರಿ ಫೆಸ್ಟಿವೆಲ್ ನಲ್ಲಿ ಪ್ರದರ್ಶನಗೊಳ್ಳಲಿವೆ.

  • ಖಾನ್ ಸಿನಿಮಾಗಳನ್ನು ತಿರಸ್ಕರಿಸಿದ್ದೇನೆ: ಬಾಂಬ್ ಸಿಡಿಸಿದ ಕಂಗನಾ ರಣಾವತ್

    ಖಾನ್ ಸಿನಿಮಾಗಳನ್ನು ತಿರಸ್ಕರಿಸಿದ್ದೇನೆ: ಬಾಂಬ್ ಸಿಡಿಸಿದ ಕಂಗನಾ ರಣಾವತ್

    ಒಂದಿಲ್ಲೊಂದು ವಿವಾದಿತ ಹೇಳಿಕೆಗಳನ್ನು ನೀಡುತ್ತಾ ಸದಾ ಸುದ್ದಿಯಲ್ಲಿರುವ ಕಂಗನಾ ರಣಾವತ್, ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ‘ಪುರುಷ ಪ್ರಧಾನ ಸಿನಿಮಾ ರಂಗದಲ್ಲಿ ನಾನು ಯಾವತ್ತೂ ಕಡಿಮೆ ಸಂಭಾವನೆ ಪಡೆದಿಲ್ಲ. ನನಗೆ ಮಹತ್ವ ಇಲ್ಲದ ಪಾತ್ರಗಳನ್ನೇ ಕಠೋರವಾಗಿಯೇ ತಿರಸ್ಕರಿಸಿದ್ದೇನೆ’ ಎಂದು ಹೇಳುವ ಮೂಲಕ ಚರ್ಚೆ ಹುಟ್ಟು ಹಾಕಿದ್ದಾರೆ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ನಾನು ಸಿನಿಮಾ ರಂಗಕ್ಕೆ ಬಂದಾಗ ಅನೇಕ ಪುರುಷರು ನನಗೆ ಸಹಾಯ ಮಾಡಿದ್ದಾರೆ. ಅವರಿಗೆಲ್ಲ ನಾನು ಋಣಿಯಾಗಿದ್ದೇನೆ. ಮಹಿಳೆಯರಿಗೆ ಕಡಿಮೆ ಸಂಭಾವನೆ ಕೊಡುತ್ತಿರುವುದು ನಿಜ. ಅದು ಅವರವರ ಆಯ್ಕೆ. ಆದರೆ, ನಾನಂತೂ ಕಡಿಮೆ ಸಂಭಾವನೆಗೆ ಚಿತ್ರಗಳನ್ನು ಒಪ್ಪಿಕೊಂಡಿಲ್ಲ ಎಂದಿರುವ ಕಂಗನಾ ರಣಾವತ್, ಖಾನ್ ಮತ್ತು ಕುಮಾರ್ ಪ್ರಧಾನ ಚಿತ್ರಗಳನ್ನು ತಿರಸ್ಕರಿಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಮೊದ ಮೊದಲು ಸಂಭಾವನೆ ವಿಚಾರದಲ್ಲಿ ಅವರಿಗೂ ಅನ್ಯಾಯವಾಗಿದೆಯಂತೆ. ಹಾಗಂತ ಅದನ್ನೇ ಅವರು ಮುಂದುವರೆಸಿಕೊಂಡು ಹೋಗಲಿಲ್ಲವಂತೆ. ನನ್ನ ಪ್ರತಿಭೆಯ ಮೇಲೆ ನಂಬಿಕೆ ಇರುವಾಗ, ನಾವೂ ಕೂಡ ಸಂಭಾವನೆಯನ್ನು ಡಿಮಾಂಡ್ ಮಾಡಬೇಕು. ಪುರುಷರಷ್ಟೇ ಮಹಿಳೆಗೂ ಸಂಭಾವನೆ ಸಿಗಬೇಕು ಎಂದು ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ಕಂಗನಾ ಕೇವಲ ನಟಿಯಾಗಿ ಸದ್ಯ ಉಳಿದಕೊಂಡಿಲ್ಲ. ಸಿನಿಮಾವೊಂದನ್ನು ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಟಿಕು ವೆಡ್ಸ್ ಶೇರು ಹೆಸರಿನ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನವಾಜುದ್ದೀನ್ ಸಿದ್ದಕಿ, ಅವನೀತ್ ಕೌರ್ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಲ್ಲದೇ, ಹಲವು ಚಿತ್ರಗಳಿಗೂ ಇವರು ನಿರ್ಮಾಪಕಿಯೂ ಆಗಿದ್ದಾರೆ.