ಚಂಡೀಗಢ: ಇದೇ ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ (Vinay Narwal) ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ (Nayab Singh Saini) ಘೋಷಣೆ ಮಾಡಿದ್ದಾರೆ.
ಚಂಡೀಗಢ: ಎರಡನೇ ಬಾರಿಗೆ ಹರಿಯಾಣ (Haryana) ಮುಖ್ಯಮಂತ್ರಿಯಾಗಿ ಬಿಜೆಪಿ (BJP) ನಾಯಕ ನಯಾಬ್ ಸಿಂಗ್ ಸೈನಿ (Nayab Singh Saini) ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪಂಚಕುಲದಲ್ಲಿ ನಯಾಬ್ ಸೈನಿ ಅವರಿಗೆ ಪ್ರಮಾಣವಚನ (Oath) ಬೋಧಿಸಿದರು. ಸೈನಿ ಅವರೊಂದಿಗೆ ಹನ್ನೊಂದು ಸಚಿವರು ಮತ್ತು ಇಬ್ಬರು ರಾಜ್ಯ ಸಚಿವರು (ಎಂಒಎಸ್) ಪ್ರಮಾಣ ವಚನ ಸ್ವೀಕರಿಸಿದರು. ಅನಿಲ್ ವಿಜ್, ಕ್ರಿಶನ್ ಲಾಲ್ ಪವಾರ್, ರಾವ್ ನರಬೀರ್ ಸಿಂಗ್, ಮಹಿಪಾಲ್ ಧಂಡಾ, ವಿಪುಲ್ ಗೋಯೆಲ್, ಅರವಿಂದ್ ಕುಮಾರ್ ಶರ್ಮಾ, ಶ್ಯಾಮ್ ಸಿಂಗ್ ರಾಣಾ, ರಣಬೀರ್ ಸಿಂಗ್ ಗಂಗ್ವಾ, ಕ್ರಿಶನ್ ಕುಮಾರ್ ಬೇಡಿ, ಶ್ರುತಿ ಚೌಧರಿ ಮತ್ತು ಆರತಿ ಸಿಂಗ್ ರಾವ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: ಗಮನಿಸಿ, ರೈಲ್ವೇ ಮುಂಗಡ ಟಿಕೆಟ್ ಬುಕ್ಕಿಂಗ್ ಅವಧಿ 120 ದಿನದಿಂದ 60 ದಿನಕ್ಕೆ ಕಡಿತ
ಚಂಡೀಗಢ: ಸತತ ಮೂರನೇ ಬಾರಿಗೆ ಹರಿಯಾಣದಲ್ಲಿ (Haryana) ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಪಂಚಕುಲದಲ್ಲಿ (Panchkula) ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವೀಕ್ಷಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಅನಿಲ್ ವಿಜ್ ಮತ್ತು ಕೃಷ್ಣಾ ಬೇಡಿ ಅವರು ನಯಾಬ್ ಸಿಂಗ್ ಸೈನಿ ಅವರ ಹೆಸರಿನ ಪ್ರಸ್ತಾವನೆ ಮುಂದಿಟ್ಟರು. ಪ್ರಸ್ತಾವನೆಗೆ ಅವಿರೋಧವಾಗಿ ಶಾಸಕರು ಬೆಂಬಲ ಸೂಚಿಸಿದ ಹಿನ್ನೆಲೆ ಸೈನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಯಿತು. ಇದನ್ನೂ ಓದಿ: ಚಿತ್ರದುರ್ಗ| ಬೀದಿನಾಯಿಗಳ ದಾಳಿಗೆ 11 ವರ್ಷದ ಬಾಲಕ ಬಲಿ
ಗುರುವಾರ ಬೆಳಗ್ಗೆ 11:30ಕ್ಕೆ ಪಂಚಕುಲದಲ್ಲಿ ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಪುದುಚೆರಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ
ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಾಲ್ ಬಡೋಲಿ ಮಾತನಾಡಿ, ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ 37 ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಇವರಲ್ಲಿ ಕೇಂದ್ರ ಸಚಿವರು, ಎನ್‌ಡಿಎ ಘಟಕಗಳ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸೇರಿದ್ದಾರೆ. ನಾವು ಎಲ್ಲರೊಂದಿಗೆ ಸಂಪರ್ಕದಲ್ಲಿದ್ದೇವೆ. ಬೆಳಗ್ಗೆ 11 ಗಂಟೆಯ ಸುಮಾರಿಗೆ ಕಾರ್ಯಕ್ರಮ ಆರಂಭವಾಗಿ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮುಕ್ತಾಯವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ – ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ
ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನಯಾಬ್ ಸಿಂಗ್ ಸೈನಿ, ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. 2047ರ ವೇಳೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸಲು ಜನರು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಮೂರನೇ ಬಾರಿಗೆ ಅಧಿಕಾರ ನೀಡಿದ್ದಾರೆ. 24,000 ಯುವಕರ ನೇಮಕಾತಿ ಪರೀಕ್ಷೆಯ ಫಲಿತಾಂಶವನ್ನು ಮೊದಲು ಪ್ರಕಟಿಸಿ ನಂತರ ಪ್ರಮಾಣ ವಚನ ಸ್ವೀಕರಿಸುವುದಾಗಿ ಘೋಷಿಸಿದ್ದೆ. ಆ ಭರವಸೆಯಂತೆ ನಾಳೆ (ಗುರುವಾರ) ಫಲಿತಾಂಶ ಪ್ರಕಟಿಸಲಾಗುವುದು. ಬಿಜೆಪಿ ಹೇಳಿದ್ದನ್ನೇ ಮಾಡುತ್ತದೆ ಎಂದರು. ಇದನ್ನೂ ಓದಿ: ಮಂತ್ರಾಲಯಕ್ಕೆ ಹೊರಟಿದ್ದ ಕ್ರೂಸರ್ ಪಲ್ಟಿ: ಚಾಲಕನ ಕೈ ಮುರಿತ, ಹಲವರಿಗೆ ಗಾಯ
ಚಂಡೀಗಢ: ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ (Haryana) ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದ ಅಜ್ಮೀರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 8 ರಂದು ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶದ ದಿನ ಆರೋಪಿ, ಸಿಎಂ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಗೆ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.
ಈ ವಿಚಾರ ಪೊಲೀಸರ ಗಮನಕ್ಕೆ ಬಂದ ತಕ್ಷಣ ಎಫ್‌ಐಆರ್ ದಾಖಲಿಸಿ ಅಜ್ಮೀರ್‌ನನ್ನು ಬಂಧಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಆರೋಪಿ ಈ ಹಿಂದೆ ಯಾವುದಾದರೂ ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದಾನಾ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಅಭ್ಯರ್ಥಿ ಮತ್ತು ಕುಸ್ತಿಪಟು ವಿನೇಶ್ ಫೋಗಟ್ ಜೂಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದರು. ರಾಜ್ಯದಲ್ಲಿ ಬಿಜೆಪಿ (BJP) 48 ಸ್ಥಾನಗಳನ್ನು ಗೆದ್ದಿದೆ.
ನವದೆಹಲಿ: ಹರಿಯಾಣದಲ್ಲಿ (Haryana) ಕಾಂಗ್ರೆಸ್ ಹಿಂದಿಕ್ಕಿ ಬಿಜೆಪಿ (BJP) ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯುವ ವಿಶ್ವಾಸದಲ್ಲಿದೆ.
ಈ ನಡುವೆ ಲಾಡ್ವಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿರುವ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರಿಂದು ಧರ್ಮಶಾಲಾ ಕುರುಕ್ಷೇತ್ರ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಮಾಧ್ಯಗಳೊಂದಿಗೆ ಮಾತನಾಡಿ, ಹರಿಯಾಣದಲ್ಲಿ ಹ್ಯಾಟ್ರಿಕ್ ಗೆಲುವಿನೊಂದಿಗೆ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಕ್ಫ್ ಆಸ್ತಿ ದೇವರ ಆಸ್ತಿ, ಕಬಳಿಕೆ ಆಗಬಾರದು ರಕ್ಷಣೆ ಮಾಡಬೇಕು; ಸಚಿವ ಜಮೀರ್ ಕರೆ
ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ಎರಡರಲ್ಲೂ ಕಾಂಗ್ರೆಸ್ ಗೆಲುವನ್ನು ಮುನ್ಸೂಚಿಸಿತ್ತು. ಆದ್ರೆ ಫಲಿತಾಂಶ ಎಕ್ಸಿಟ್ ಪೋಲ್ ಮೀರಿಸಿ ಬರುತ್ತದೆ ಎನ್ನುವ ನಮ್ಮ ನಿರೀಕ್ಷೆ ಸುಳ್ಳಾಗಿಲ್ಲ, ಬಿಜೆಪಿ 3ನೇ ಬಾರಿಗೆ ಅಧಿಕಾರ ಹಿಡಿಯುವುದು ಖಚಿತವಾಗಿದೆ. ನಾವು ಕಳೆದ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸ್ಥಾಪಿಸಿದ ರೀತಿಯ ವ್ಯವಸ್ಥೆಯು ಹರಿಯಾಣಕ್ಕೆ ದೀರ್ಘಕಾಲದವರೆಗೆ ಪ್ರಯೋಜನ ತರುತ್ತದೆ. ಈ ಒಳ್ಳೆಯ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಹರಿಯಾಣದಲ್ಲಿ ಬಿಜೆಪಿಗೆ ಮುನ್ನಡೆ:
ಹರ್ಯಾಣದಲ್ಲಿ (Haryana Election Results) ಹಾವು ಏಣಿ ಆಟ ಆರಂಭವಾಗಿದೆ. ಆರಂಭದಲ್ಲಿ ಕಾಂಗ್ರೆಸ್ (Congress) ಮುನ್ನಡೆಯಲ್ಲಿದ್ದರೆ ಈಗ ಬಿಜೆಪಿ (BJP) ಮುನ್ನಡೆ ಸಾಧಿಸಿದೆ. ಬೆಳಗ್ಗೆ 9 ಗಂಟೆ ಟ್ರೆಂಡ್‌ನಲ್ಲಿ ಕಾಂಗೆಸ್ ಮುನ್ನಡೆಯಲ್ಲಿತ್ತು. ಆದರೆ ಬೆಳಗ್ಗೆ 10 ಗಂಟೆಯಿಂದ 11 ಗಂಟೆ ವೇಳೆಗೆ ಬಿಜೆಪಿ ಮುನ್ನಡೆ ಸಾಧಿಸಿದೆ. ಇದನ್ನೂ ಓದಿ: Haryana Results| ಮಾಜಿ ಕುಸ್ತಿಪಟು ವಿನೇಶ್ ಫೋಗಟ್‌ಗೆ ಹಿನ್ನಡೆ
ಸದ್ಯ ಬಿಜೆಪಿ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ 36 ಇತರರು 03 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಐಎನ್ಎಲ್‌ಟಡಿ 2 ಹಾಗೂ ಇತರೇ ಅಭ್ಯರ್ಥಿಗಳು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹರ್ಯಾಣದಲ್ಲಿ ಒಟ್ಟು 90 ಕ್ಷೇತ್ರಗಳಿದ್ದು ಬಹುಮತಕ್ಕೆ 46 ಸ್ಥಾನಗಳ ಅಗತ್ಯವಿದೆ.
ಚಂಡೀಗಢ: ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ (Haryana Assembly Elections) ಕೆಲವೇ ದಿನಗಳು ಬಾಕಿಯಿರುವ ಹೊತ್ತಿನಲ್ಲೇ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿ 8 ಮಂಡಿಯನ್ನು ಬಿಜೆಪಿ ಪಕ್ಷದಿಂದಲೇ ಉಚ್ಛಾಟಿಸಿದೆ.
ಈ 8 ಮಂದಿ ನಾಯಕರು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಸೇರಿದಂತೆ ಬಿಜೆಪಿಯ ನಾಯಕರ ವಿರುದ್ಧ ಸ್ಪರ್ಧಿಸಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದರಿಂದಾಗಿ ತಕ್ಷಣವೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ನಾಯಕರನ್ನು ಉಚ್ಚಾಟಿಸಿರುವುದಾಗಿ ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ (Mohan Lal) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ
ಅಸ್ಸಾಂದ್ ಕ್ಷೇತ್ರದಿಂದ ಸ್ಪರ್ಧಿಸಿರುವ ಜಿಲೆ ರಾಮ್ ಶರ್ಮಾ, ಸಫಿಡೊದಿಂದ ಮಾಜಿ ಸಚಿವ ಬಚನ್ ಸಿಂಗ್ ಆರ್ಯ, ಮೆಹಮ್‌ನಿಂದ ರಾಧಾ ಅಹ್ಲಾವತ್, ಗುರ್ಗಾಂವ್‌ನಿಂದ ನವೀನ್ ಗೋಯಲ್ ಮತ್ತು ಹಥಿನ್‌ನಿಂದ ಕೆಹರ್ ಸಿಂಗ್ ರಾವತ್ ಮತ್ತು ಮಾಜಿ ಶಾಸಕ ದೇವೇಂದ್ರ ಕಡ್ಯಾನ್ ಉಚ್ಛಾಟಿತ ಆರು ನಾಯಕರು. ಇದನ್ನೂ ಓದಿ: ಮೊದಲ ಬಾರಿಗೆ ಜಮೈಕಾ ಪ್ರಧಾನಿ ಭಾರತ ಪ್ರವಾಸ – ಸೋಮವಾರದಿಂದ 4 ದಿನಗಳ ಭೇಟಿ
ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿ ತೊರೆಯಲು ನಿರ್ಧರಿಸಿದರು. ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸೇರುವ ಮುನ್ನ ಚೌಟಾಲಾ ವಿಧಾನಸಭೆಯ ಸದಸ್ಯತ್ವ ತೊರೆದಿದ್ದರು. ಅವರು ಹಿಸಾರ್‌ನಿಂದ ಸಂಸತ್ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.
ಕಾಂಗ್ರೆಸ್‌ನಲ್ಲೂ ಬಂಡಾಯ ಭೀತಿ:
ಸದ್ಯ ಹರಿಯಾಣದಲ್ಲಿ ಕಾಂಗ್ರೆಸ್ ಕೂಡ ಬಂಡಾಯ ಭೀತಿ ಎದುರಿಸುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿಯ ಮಾಜಿ ಸಚಿವ ಅನಿಲ್ ವಿಜ್ ವಿರುದ್ಧ ಅಂಬಾಲಾ ಕಂಟೋನ್ಮೆಂಟ್‌ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಡಾಯ ಅಭ್ಯರ್ಥಿ ಚಿತ್ರಾ ಸರ್ವರಾ ಅವರನ್ನು ಪಕ್ಷದಿಂದ ಹೊರಹಾಕಲಾಗಿತ್ತು. ಅಲ್ಲದೇ ಕಳೆದ ಶುಕ್ರವಾರವೂ ಪಕ್ಷ ವಿರೋಧಿ ಚಟುವಟಿಕೆಗಾಗಿ 13 ನಾಯಕರನ್ನು ಕಾಂಗ್ರೆಸ್ ಉಚ್ಛಾಟಿಸಿತ್ತು.
67 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಪಕ್ಷವು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಅವರನ್ನು ಕರ್ನಾಲ್‌ನಿಂದ ಲಾಡ್ವಾ ಸ್ಥಾನಕ್ಕೆ ಕಣಕ್ಕಿಳಿಸಿದೆ. ಸೈನಿ ಅವರು 2019ರಿಂದ 2024ರ ಅವಧಿಯಲ್ಲಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಓಂ ಪ್ರಕಾಶ್ ಧನಕರ್ ಅವರನ್ನು ಬದ್ಲಿ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಜೊತೆಗೆ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರು ತಮ್ಮ ಸಾಂಪ್ರದಾಯಿಕ ಭದ್ರಕೋಟೆಯಾದ ಅಂಬಾಲಾ ಕ್ಯಾಂಟ್‌ನಿಂದ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್
ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ)ಯಲ್ಲಿದ್ದ ದೇವೆಂದರ್ ಸಿಂಗ್ ಸದ್ಯ ಬಿಜೆಪಿಯಿಂದ ಬಬ್ಲಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸತತ ಹ್ಯಾಟ್ರಿಕ್ ಗೆಲುವಿನ ವಿಶ್ವಾಸದಲ್ಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್ – ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್
ಚಂಡೀಗಢ: ಅಗ್ನಿಪಥ್ ಯೋಜನೆಗೆ (Agnipath Scheme) ಸಂಬಂಧಿಸಿದಂತೆ ಹರಿಯಾಣ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಬಿಜೆಪಿ ನೇತೃತ್ವದ ಸರ್ಕಾರವು ಅಗ್ನಿಪಥ್ ಯೋಜನೆಯ ಮೂಲಕ ಸೇನೆಗೆ ನೇಮಕಗೊಂಡಿರುವ ಪೊಲೀಸ್, ಫಾರೆಸ್ಟ್ ಗಾರ್ಡ್, ಮೈನಿಂಗ್ ವಾರ್ಡ್, ಜೈಲ್ ವಾರ್ಡನ್ ಸೇರಿ ವಿವಿಧ ನೇಮಕಾತಿಗಳಲ್ಲಿ ಅಗ್ನಿವೀರರಿಗೆ ಶೇ.10 ರಷ್ಟು ಮೀಸಲಾತಿ (Reservation For Agniveers) ಘೋಷಿಸಿದೆ.
ಹರಿಯಾಣ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವ ಹೊತ್ತಿನಲ್ಲೇ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ನೇಮಕಾತಿ ವೇಳೆ ಅಗ್ನಿವೀರರಿಗೆ ವಯೋಮಿತಿ ಸಡಿಲಿಕೆ ಸೇರಿ ಹಲವು ರಿಯಾಯ್ತಿಗಳನ್ನು ನೀಡುವುದಾಗಿಯೂ ಸಿಎಂ ನಯಾಬ್ ಸಿಂಗ್ ಸೈನಿ (Nayab Singh Saini) ಪ್ರಕಟಿಸಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಮೀಸಲಾತಿ ವಿಚಾರ – ಸಾಧಕ ಬಾದಕ ನೋಡಿ ತೀರ್ಮಾನ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ
ಗ್ರೂಪ್ ಸಿ ಹುದ್ದೆಗಳ ನೇಮಕಾತಿಯಲ್ಲಿ ಶೇ.5ರ ಷ್ಟು ಮೀಸಲಾತಿ ನೀಡೋದಾಗಿ ಘೋಷಿಸಿದ್ದಾರೆ. ಜೊತೆಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. ಸ್ವಂತ ಉದ್ಯಮ ಆರಂಭಿಸಲು ಬಯಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ನೀಡಲಾಗುತ್ತದೆ ಸಿಎಂ ಸೈನಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಕನ್ನಡಿಗರಿಗೆ ಮೀಸಲಾತಿ ನೀಡುವ ಮೂಲಕ ಸರ್ಕಾರ ಕನ್ನಡಿಗರ ಸ್ವಾಭಿಮಾನ ಎತ್ತಿ ಹಿಡಿಯುತ್ತಿದೆ: ಡಿಕೆಶಿ
ಆಡಳಿತ ಎನ್‌ಡಿಎ ಪಕ್ಷದ ಭಾಗವಾಗಿರುವ ಜೆಡಿಯು ಸೇರಿದಂತೆ ಬಿಜೆಪಿಯ ಮಿತ್ರಪಕ್ಷಗಳು ಯೋಜನೆಯನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿವೆ. ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಸಹ ಕೇಂದ್ರೀಯ ಪಡೆಗಳ ನೇಮಕಾತಿಗಳಲ್ಲಿ ಶೇ.10ರಷ್ಟು ಮೀಸಲಾತಿ ಪ್ರಕಟಿಸಿತ್ತು.
ಚಂಡೀಗಢ: ಬಿಜೆಪಿ (BJP) ಮತ್ತು ಜೆಜೆಪಿ (JJP) ನಡುವೆ ಸೀಟು ಹಂಚಿಕೆ ಬಿಕ್ಕಟ್ಟು ತಾರಕಕ್ಕೇರಿದ ಹೊತ್ತಲ್ಲಿಯೇ ಹರಿಯಾಣ ಸರ್ಕಾರವೇ (Haryana Government) ಬದಲಾಗಿ ಹೋಗಿದೆ.
ದಿಢೀರ್ ಬೆಳವಣಿಗೆಯಲ್ಲಿ ಸಿಎಂ ಮನೋಹರ್‌ಲಾಲ್ ಖಟ್ಟರ್ (Manohar Lal Khattar) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಸಂಪುಟ ವಿಸರ್ಜನೆ ಆಗಿದೆ. ಈ ಬೆನ್ನಲ್ಲೇ ಹರಿಯಾಣದ ನೂತನ ಸಿಎಂ ಆಗಿ ಪಕ್ಷದ ರಾಜ್ಯಾಧ್ಯಕ್ಷ ನಯಾಬ್ ಸಿಂಗ್ ಸೈನಿ ಆಯ್ಕೆಯಾಗಿದ್ದಾರೆ.
हरियाणा के मुख्यमंत्री के रूप में अपना पदभार ग्रहण किया।
ಫಟಾಫಟ್ ಎಂಬಂತೆ ಮಂಗಳವಾರ ಸಂಜೆ ಐದು ಗಂಟೆಗೆ ನೂತನ ಸಿಎಂ ನಯಾಬ್ ಸಿಂಗ್ (Nayab Singh Saini) ಮತ್ತು ಐವರು ಶಾಸಕರು ಮಾಣವಚನ ಕಾರ್ಯಕ್ರಮವೂ ಮುಗಿದುಹೋಗಿದೆ. ಮೂಲಗಳ ಪ್ರಕಾರ ಮನೋಹರ್ ಲಾಲ್ ಖಟ್ಟರ್ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬಹುದು ಎನ್ನಲಾಗಿದೆ.
ನಯಾಬ್ ಸಿಂಗ್ ಸೈನಿ ಓಬಿಸಿ ಮುಖಂಡರಾಗಿದ್ದು (OBC Leader) ಲೋಕಸಭೆ ಚುನಾವಣೆ (Lok Sabha Election) ದೃಷ್ಟಿಯಿಂದಲೇ ಬಿಜೆಪಿ ಹೈಕಮಾಂಡ್ (BJP High Command) ಈ ಬದಲಾವಣೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: Citizenship Law: ಸಿಎಎ ಜಾರಿಗೆ ದಳಪತಿ ವಿಜಯ್ ವಿರೋಧ
I would like to thank Respected PM Modi Ji for giving me the opportunity to serve the people of Haryana.Under your able leadership and guidance we would strive to work hard in fulfilling all the aspirations of Haryana State. #ModiKiGuarantee#ViksitBharatViksitHaryanahttps://t.co/07OOy2K1U7
ಯಾರು ನಯಾಬ್ ಸಿಂಗ್ ಸೈನಿ?
ಕುರುಕ್ಷೇತ್ರದ ಲೋಕಸಭಾ ಸಂಸದರಾಗಿರುವ ಸೈನಿ ಒಬಿಸಿ ಸಮುದಾಯದ ಪ್ರಭಾವಿ ನಾಯಕರಾಗಿದ್ದು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರ್ಯಾಣ ಬಿಜೆಪಿ ಮುಖ್ಯಸ್ಥರಾಗಿ ನೇಮಕವಾಗಿದ್ದರು.
ನಿರ್ಗಮಿತ ಮುಖ್ಯಮಂತ್ರಿ ಎಂಎಲ್ ಖಟ್ಟರ್‌ಗೆ ಆಪ್ತರಾಗಿರುವ ಸೈನಿ 2002ರಲ್ಲಿ ಅಂಬಲದಲ್ಲಿ ಬಿಜೆಪಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, 2005ರಲ್ಲಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದರು. ನಂತರ ರೈತ ಘಟಕವಾದ ಕಿಸಾನ್ ಮೋರ್ಚಾದ ಕಾರ್ಯದರ್ಶಿ ಸೇರಿದಂತೆ ಪಕ್ಷದ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.
2014ರ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣಗಢದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಕುರುಕ್ಷೇತ್ರದಿಂದ ಸ್ಪರ್ಧಿಸಿ ಸುಮಾರು 4 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ನಿರ್ಮಲ್ ಸಿಂಗ್ ಅವರನ್ನು ಸೋಲಿಸಿದ್ದರು.
ಚಂಡೀಗಢ: ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ (Nayab Singh Saini) ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಇಂದು ಬೆಳಗ್ಗೆ ಮನೋಹರ್ ಲಾಲ್ ಖಟ್ಟರ್ ಮತ್ತು ಸಚಿವ ಸಂಪುಟವು ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿತ್ತು. ಈ ಬೆನ್ನಲ್ಲೇ ಖಟ್ಟರ್ ಮತ್ತು ಹರಿಯಾಣದ ಉಸ್ತುವಾರಿ ಬಿಪ್ಲಬ್ ದೇವ್ ಅವರ ಸಮ್ಮುಖದಲ್ಲಿ ನಯಾಬ್ ಸಿಂಗ್ ಸೈನಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದರು.
ನಯಾಬ್ ಸಿಂಗ್ ಸೈನಿ ಯಾರು?: ಕುರುಕ್ಷೇತ್ರವನ್ನು ಪ್ರತಿನಿಧಿಸುವ ಸಂಸದ ಮತ್ತು ಒಬಿಸಿ ಸಮುದಾಯದ ಸದಸ್ಯರಾಗಿರುವ 54 ವರ್ಷದ ನಯಾಬ್ ಸಿಂಗ್ ಸೈನಿಯವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಜೆಪಿಯ ಹರಿಯಾಣ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
1996 ರಲ್ಲಿ ಬಿಜೆಪಿಯೊಂದಿಗೆ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. 2002 ರಲ್ಲಿ ಅಂಬಾಲಾದಲ್ಲಿ ಬಿಜೆಪಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ನಂತರ 2005 ರಲ್ಲಿ ಅಂಬಾಲಾದಲ್ಲಿ ಜಿಲ್ಲಾ ಅಧ್ಯಕ್ಷರಾದರು. 2014 ರಲ್ಲಿ ನಾರಾಯಣಗಢ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. 2016 ರಲ್ಲಿ ಹರಿಯಾಣ ಸರ್ಕಾರದಲ್ಲಿ ಸಚಿವರಾಗಿ ನೇಮಕಗೊಂಡರು.
2019 ರ ಲೋಕಸಭಾ ಚುನಾವಣೆಯಲ್ಲಿ ಸೈನಿ ಕುರುಕ್ಷೇತ್ರ ಕ್ಷೇತ್ರದಿಂದ ಕಣಕ್ಕಿಳಿದು ಜಯಗಳಿಸಿದ್ದರು. ಮನೋಹರ್ ಲಾಲ್ ಖಟ್ಟರ್ ಅವರ ವಿಶ್ವಾಸಾರ್ಹ ಮಿತ್ರ ಎಂದು ಕರೆಯಲ್ಪಡುವ ಸೈನಿ ಅವರು 2014 ರಲ್ಲಿ ಶಾಸಕರಾದ ನಂತರ ಹರಿಯಾಣ ರಾಜಕೀಯದಲ್ಲಿ ಗಟ್ಟಿಯಾದ ಅಸ್ತಿತ್ವವನ್ನು ಹೊಂದಿದ್ದಾರೆ. ಸೈನಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರು ಕೂಡ ಆಗಿದ್ದರು.