Tag: Nayaki

  • ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಸಿನಿಮಾಗೆ ಸಂಜನಾ ಆನಂದ್ ನಾಯಕಿ?

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನ ಸಿನಿಮಾಗೆ ಸಂಜನಾ ಆನಂದ್ ನಾಯಕಿ?

    ಮೊನ್ನೆಯಷ್ಟೇ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ಮುಧೋಳ್’ (Mudhol) ಸಿನಿಮಾಗೆ ಮುಹೂರ್ತ ನಡೆದಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್ ಕೂಡ ಶುರುವಾಗಿದೆ. ರವಿಚಂದ್ರನ್ ಪುತ್ರ ವಿಕ್ರಮ್ (Vikram Ravichandran) ಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿತ್ತು. ಬಲ್ಲ ಮೂಲಗಳ ಪ್ರಕಾರ ಸಂಜನಾ ಆನಂದ್ (Sanjana Anand) ಈ ಸಿನಿಮಾಗೆ ನಾಯಕಿ ಎಂದು ಹೇಳಲಾಗುತ್ತಿದೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಸಂಜನಾ ಅಂತಿಮ ಎನ್ನುವ ಮಾತು ಕೇಳಿ ಬರುತ್ತಿದೆ.

    ದುನಿಯಾ ವಿಜಯ್ ನಟನೆಯ ಸಲಗ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಸಂಜನಾ ಆನಂದ್, ಕೆಮಿಸ್ಟ್ರಿ ಅಫ್ ಕರಿಯಪ್ಪ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದವರು. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. ಇದೀಗ ಮುಧೋಳ್ ಚಿತ್ರಕ್ಕೂ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಇದೆ. ಸದ್ಯದಲ್ಲೇ ಈ ಕುರಿತು ಮಾಹಿತಿ ಹೊರಬೀಳಬಹುದು.

    ಶೂಟಿಂಗ್ ವೇಳೆ ಅವಘಡ

    ಕನ್ನಡದ ಹೆಸರಾಂತ ಸಾಹಸ ನಿರ್ದೇಶಕ ರವಿವರ್ಮ ಪೆಟ್ಟು ಮಾಡಿಕೊಂಡಿದ್ದಾರೆ. ವಿಕ್ರಮ್ ರವಿಚಂದ್ರನ್ ನಟನೆಯ ಮುಧೋಳ್ ಸಿನಿಮಾದ ಶೂಟಿಂಗ್ ವೇಳೆ ಈ ಘಟನೆ ನಡೆದಿದ್ದು, ಸಾಹಸ ದೃಶ್ಯಕ್ಕಾಗಿ ಕಟ್ಟಿದ ರೋಪ್ ಹರಿದು ಪೆಟ್ಟು ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ:ಮಗಳ ಭವಿಷ್ಯಕ್ಕಾಗಿ ದೇಶ ಬಿಡಲು ಸಿದ್ಧ ಎಂದ ಪ್ರಿಯಾಂಕಾ ಚೋಪ್ರಾ

    ವಿಕ್ರಮ್ ರವಿಚಂದ್ರನ್ ಮುಖ್ಯಭೂಮಿಕೆಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಸಾಕಷ್ಟು ಸಾಹಸ ಸನ್ನಿವೇಶಗಳನ್ನು ಚಿತ್ರಕ್ಕಾಗಿ ಕಂಪೋಸ್ ಮಾಡಲಾಗಿದೆಯಂತೆ. ಸಾಮಾನ್ಯವಾಗಿ ಕಷ್ಟದ ಸ್ಟಂಟ್ ಗಳನ್ನೇ ಕಂಪೋಸ್ ಮಾಡುವ ರವಿವರ್ಮ, ಈ ಸಿನಿಮಾದಲ್ಲೂ ಅಂಥದ್ದೊಂದು ದೃಶ್ಯವನ್ನು ಕಂಪೋಸ್ ಮಾಡಿದ್ದರಂತೆ. ಈ ದೃಶ್ಯವನ್ನು ಚಿತ್ರೀಕರಿಸುವಾಗ ಅವರಿಗೆ ಗಾಯವಾಗಿದೆ.

    ಆತಂಕ ಪಡುವಂತಹ ಘಟನೆ ಅದಲ್ಲವಾದರೂ, ರವಿವರ್ಮ ಪದೇ ಪದೇ ಇಂತಹ ಘಟನೆಗಳಿಗೆ ಸಾಕ್ಷಿ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮಾಸ್ತಿಗುಡಿ ಸಿನಿಮಾದಲ್ಲೂ ದುರ್ಘಟನೆ ನಡೆದಿತ್ತು. ಮೊನ್ನೆಯಷ್ಟೇ ಜೋಗಿ ಪ್ರೇಮ್ ನಿರ್ದೇಶನ ಕೇಡಿ ಸಿನಿಮಾದಲ್ಲೂ ನಟರೊಬ್ಬರು ಗಾಯ ಮಾಡಿಕೊಂಡಿದ್ದರು. ಈ ಎರಡು ಚಿತ್ರಗಳಿಗೂ ಇವರೇ ಸಾಹಸ ನಿರ್ದೇಶಕರು.

    ಮುಧೋಳ್ ಸಿನಿಮಾ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಶೂಟಿಂಗ್ ನಡೆಯುತ್ತಿದ್ದು, ಪ್ರಧಾನ ಸಾಹಸಮಯ ಸನ್ನಿವೇಶಗಳನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದಾರೆ. ಇದೊಂದು ಆಕ್ಷನ್ ಸಿನಿಮಾವಾಗಿದ್ದು, ಕಳೆದ ಒಂದು ವಾರದಿಂದ ಚಿತ್ರೀಕರಣ ನಡೆಯುತ್ತಿದೆ.

  • ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಕಾಂತಾರ ಸಪ್ತಮಿ ನಾಯಕಿ

    ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಕಾಂತಾರ ಸಪ್ತಮಿ ನಾಯಕಿ

    ಮುಂಗಾರು ಮಳೆ ಕೃಷ್ಣ ಮತ್ತು ಅಭಿಷೇಕ್ ಅಂಬರೀಶ್ ಕಾಂಬಿನೇಷನ್ ನ ಕಾಳಿ ಸಿನಿಮಾಗೆ ಕಾಂತಾರ ಚಿತ್ರದ ನಾಯಕಿ ಸಪ್ತಮಿ ಗೌಡ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಈ ಕುರಿತು ಸುದ್ದಿ ನೀಡಿತ್ತು. ಇದೀಗ ಅಧಿಕೃತವಾಗಿಯೇ ಸಪ್ತಮಿ ಗೌಡ ಅವರ ಮಾಹಿತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

    ಕಾಂತಾರ (Kantara) ಸಿನಿಮಾದ ನಂತರ ಸಪ್ತಮಿ ಗೌಡಗೆ (Sapthami Gowda) ಸಖತ್ ಡಿಮಾಂಡ್ ಕ್ರಿಯೇಟ್ ಆಗಿದೆ. ಕನ್ನಡದಲ್ಲಿ ಮಾತ್ರವಲ್ಲ, ಪರಭಾಷೆಯಿಂದಲೂ ಅವರಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಪರಭಾಷೆಯಿಂದ ಆಫರ್ಸ್ ಬರುತ್ತಿವೆ ಎಂದು ಅವರು ಈಗಾಗಲೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅದಕ್ಕೂ ಕನ್ನಡದಲ್ಲೇ ಎರಡ್ಮೂರು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಅದರಲ್ಲಿ ಕೃಷ್ಣ ನಿರ್ದೇಶನದ ಕಾಳಿ ಸಿನಿಮಾ ಕೂಡ ಒಂದಾಗಿದೆ. ಇದನ್ನೂ ಓದಿ: ಮತ್ತೆ ಕನ್ನಡಕ್ಕೆ ಬರಲಿದ್ದಾರೆ ಶಿಲ್ಪಾ ಶೆಟ್ಟಿ: ʻಕೆಡಿ’ಯಲ್ಲಿ ಲೇಡಿ ಪವರ್

    ಪೈಲ್ವಾನ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿರುವ ಕೃಷ್ಣ ಇದೀಗ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರಿಗೆ ಸಿನಿಮಾವೊಂದು ಮಾಡುತ್ತಿದ್ದು, ಈಗಾಗಲೇ ಚಿತ್ರಕ್ಕೆ ಕಾಳಿ ಎಂದು ಹೆಸರಿಡಲಾಗಿದೆ. ಸಿನಿಮಾ ಟೈಟಲ್ ಸೇರಿದಂತೆ ಹಲವು ವಿಚಾರಗಳನ್ನೂ ಕೃಷ್ಣ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ನಾಯಕಿಯ ಹೆಸರನ್ನು ಮಾತ್ರ ಗೌಪ್ಯವಾಗಿ ಇಟ್ಟಿದ್ದರು. ಇದೀಗ ನಾಯಕಿಯ ಹೆಸರು ಕೂಡ ಬಹಿರಂಗವಾಗಿದೆ.

    ಕಾಳಿ ಸಿನಿಮಾದ ಕಥೆಯೂ ರೋಚಕವಾಗಿದೆ. ಕಾವೇರಿ ನದಿ ಗಲಾಟೆಯಲ್ಲಿ ನಡೆದಂತಹ ನೈಜ ಪ್ರೇಮಕಥೆಯನ್ನು ಈ ಸಿನಿಮಾಗಾಗಿ ನಿರ್ದೇಶಕರು ಅಳವಡಿಸಿಕೊಂಡಿದ್ದಾರೆ. ಅಲ್ಲದೇ, ರೆಬಲ್ ಈ ಸಿನಿಮಾದಲ್ಲಿ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದು, ಈಗಾಗಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಸದ್ಯ ಅಭಿಷೇಕ್ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಸದ್ಯದಲ್ಲೇ ಕಾಳಿ ಸಿನಿಮಾದ ಶೂಟಿಂಗ್ ನಲ್ಲೂ ಅವರು ಪಾಲ್ಗೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • MeeToo : ಆ ಅಸಹ್ಯ ನಿರ್ದೇಶಕನ ಕರಾಳ ಮುಖ ಬಿಚ್ಚಿಟ್ಟ ನಟಿ ರತನ್ ರಾಜಪೂತ್

    MeeToo : ಆ ಅಸಹ್ಯ ನಿರ್ದೇಶಕನ ಕರಾಳ ಮುಖ ಬಿಚ್ಚಿಟ್ಟ ನಟಿ ರತನ್ ರಾಜಪೂತ್

    ಹಿಂದಿ ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿಯೂ ಆಗಿರುವ ರತನ್ ರಾಜಪೂತ್ (Ratan Rajput) ತಮಗಾದ ಕಾಸ್ಟಿಂಗ್ ಕಾಚ್ (Casting Couch) ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಒಂದು ವೇಳೆ ನಾನು ಅವನು ಹೇಳಿದಂತೆ ಕೇಳಿದ್ದರೆ, ಸ್ಟಾರ್ ನಟಿಯಾಗಿರುತ್ತಿದ್ದೆ. ಆದರೆ, ಅದು ನನಗಿಷ್ಟವಾಗದ ದಾರಿ. ಹಾಗಾಗಿ ಅವನ ಮುಖಕ್ಕೆ ಉಗಿದು ಬಂದೆ ಎಂದು ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಹದಿನಾಲ್ಕು ವರ್ಷಗಳ ಹಿಂದೆ ನಡೆದ ಘಟನೆಯನ್ನು ಅವರು ಹಂಚಿಕೊಂಡಿದ್ದಾರೆ.

    ಆ ನಿರ್ದೇಶಕನಿಗೆ ಅರವತ್ತರ ವಯಸ್ಸು. ನನ್ನನ್ನು ನಾಯಕಿಯನ್ನಾಗಿ ಮಾಡುತ್ತೇನೆ ಅಂದ. ನನಗೆ ಗಾಡ್ ಫಾದರ್ ಆಗುತ್ತೇನೆ ಅಂತಾನೂ ಹೇಳಿದ. ನನ್ನ ಚರ್ಮ, ಮುಖ ಸರಿ ಇಲ್ಲ. ತಲೆಗೂದಲು ಚೆನ್ನಾಗಿಲ್ಲ ಹೀಗೆ ಅನೇಕ ಸಂಗತಿಗಳನ್ನು ಪಟ್ಟಿಮಾಡಿ, ಇದೆಲ್ಲವನ್ನೂ ಸರಿ ಮಾಡಿ ನಿನ್ನನ್ನು ಹೀರೋಯಿನ್ ಆಗಿ ಆಯ್ಕೆ ಮಾಡಿಕೊಳ್ಳಬೇಕು ಅಂದರೆ ಒಂದಷ್ಟು ಲಕ್ಷ ರೂಪಾಯಿ ಖರ್ಚಾಗುತ್ತದೆ. ನಿನಗಾಗಿ ನಾನು ಆ ಖರ್ಚು ಮಾಡಬೇಕು ಅಂದರೆ, ನೀನು ನನ್ನವಳಾಗಬೇಕು ಎಂದಿದ್ದರಂತೆ ನಿರ್ದೇಶಕರು. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    ಆ ವ್ಯಕ್ತಿಯು ನನ್ನೊಂದಿಗೆ ಫ್ರೆಂಡ್ ರೀತಿ ಇರಬೇಕು, ನಾನು ಕೇಳಿದ್ದನ್ನು ಕೊಡಬೇಕು ಅಂದಾಗ ನನಗೆ ಅರಿವಾಯಿತು. ನೀವು ನನ್ನ ತಂದೆ ಸಮಾನರು, ಗುರು ಕೂಡ. ದೊಡ್ಡವರಾಗಿ ಹೀಗೆ ಮಾತನಾಡಬಾರದು. ನಿಮ್ಮನ್ನು ನಾನು ಗೌರವದಿಂದ ಕಾಣುತ್ತಿದ್ದೇನೆ ಅಂದೆ. ನನ್ನ ಮಗಳು ನಟಿಯಾಗಿದ್ದರೂ, ನಾನು ಅವಳ ಜೊತೆ ಮಲಗುತ್ತಿದ್ದೆ ಎಂದು ಅಸಹ್ಯವಾಗಿ ಹೇಳಿದ. ಅಂತಹ ಅಸಹ್ಯ ವ್ಯಕ್ತಿಯಿಂದ ದೂರ ಬಂದು ಬಿಟ್ಟೆ. ಹೀಗೆ ಬಾಲಿವುಡ್ ನಲ್ಲಿ ಅನೇಕರಿಗೆ ಇಂತಹ ಅನುಭವ ಆಗಿರುತ್ತದೆ ಎಂದಿದ್ದಾರೆ ರತನ್.

    ರತನ್ ಬಿಹಾರ(Bihar) ಮೂಲದವರು. ಹಿಂದಿ ಕಿರುತೆರೆಯಲ್ಲಿ ಫೇಮಸ್ ಹೆಸರು. ಸಾಕಷ್ಟು ಹಿಂದಿ ಧಾರಾವಾಹಿಗಳಲ್ಲಿ ಇವರು ನಟಿಸಿದ್ದಾರೆ. ಬಿಗ್ ಬಾಸ್ ಸೀಸನ್ 9 ಹಿಂದಿಯಲ್ಲಿ ಭಾಗಿಯಾಗಿದ್ದರು. ಅಲ್ಲದೇ, ತಮ್ಮದೇ ಆದ ಯೂಟ್ಯೂಬ್ ಚಾನೆಲ್ ವೊಂದನ್ನು ಅವರು ನಡೆಸುತ್ತಿದ್ದು, ಮುಂಬೈಗೆ ಬಂದಾಗಿನ ಕೆಲ ಸಂಗತಿಗಳನ್ನು ಅವರು ಹಂಚಿಕೊಳ್ಳುತ್ತಲೇ ಇರುತ್ತಾರೆ.

    Live Tv
    [brid partner=56869869 player=32851 video=960834 autoplay=true]