Tag: Nayantara

  • ಬೆಂಗಳೂರಿಗೆ ಬಂದು ‘ಟಾಕ್ಸಿಕ್’ ಟೀಮ್ ಸೇರಿಕೊಂಡ ನಯನತಾರಾ

    ಬೆಂಗಳೂರಿಗೆ ಬಂದು ‘ಟಾಕ್ಸಿಕ್’ ಟೀಮ್ ಸೇರಿಕೊಂಡ ನಯನತಾರಾ

    ಶ್ (Yash) ನಟಿಸಿ ನಿರ್ಮಿಸುತ್ತಿರುವ `ಟಾಕ್ಸಿಕ್’ (Toxic) ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ. ಇದೀಗ ಚಿತ್ರೀಕರಣಕ್ಕೆ ನಯನತಾರಾ ಎಂಟ್ರಿಯಾಗಿರುವ ಸುಳಿವು ಸಿಕ್ಕಿದೆ. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ `ಆಲ್ ಯು ನೀಡ್ ಕಾನ್ಫಿಡೆನ್ಸ್ ಆ್ಯಂಡ್ ಬೂಟ್ಸ್’ ಎಂಬ ಸಂದೇಶ ಬರೆದು ಶೂಟಿಂಗ್‌ನಲ್ಲಿ ಕುಳಿತಿರುವಂತೆ ಕಾಲಿನ ಫೋಟೋ ಪೋಸ್ಟ್ ಮಾಡಿದ್ದಾರೆ. `ಟಾಕ್ಸಿಕ್’ ಚಿತ್ರತಂಡ ನಯನತಾರಾ ಇರುವಿಕೆಯನ್ನ ಇದುವರೆಗೂ ಚಿತ್ರತಂಡ ಅಧಿಕೃತವಾಗಿ ಘೊಷಿಸಿಲ್ಲವಾದರೂ ನಯನತಾರ (Nayantara) ನಟಿಸುತ್ತಿರುವ ಸಂಗತಿಯಂತೂ ನಿಜ.

    ಬೆಂಗಳೂರಿನ ಹೆಚ್‌ಎಂಟಿ ಗ್ರೌಂಡ್‌ನಲ್ಲಿ ಹಾಕಲಾದ ಬೃಹತ್ ಸೆಟ್‌ನಲ್ಲಿ ಟಾಕ್ಸಿಕ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಸದ್ಯ ಪ್ಯಾಲೇಸ್ ಗ್ರೌಂಡ್‌ನಲ್ಲಿ ಸಾಹಸ ಸನ್ನಿವೇಶ ಚಿತ್ರೀಕರಣ ಮಾಡಲಾಗುತ್ತಿದೆ. ಮೊದಲ ಹಂತವಾಗಿ ಒಂದು ಬಿಗ್ ಶೆಡ್ಯೂಲ್‌ನಲ್ಲಿ ಚಿತ್ರೀಕರಣ ಸಾಗುತ್ತಿದೆ. ಇದು ಬೆಂಗಳೂರಲ್ಲೇ ಬಹುತೇಕ ನಡೆಯುವ ಶೂಟಿಂಗ್ ಆಗಿರೋದ್ರಿಂದ ಚಿತ್ರದಲ್ಲಿರುವ ನಟ ನಟಿಯರನ್ನ ಯಶ್ ಇಲ್ಲಿಗೇ ಕರೆಸಿಕೊಳ್ಳುತ್ತಿದ್ದಾರೆ. ಇದೀಗ ನಯನತಾರಾ ಟಾಕ್ಸಿಕ್ ಟೀಮ್ ಸೇರಿರುವ ಸುಳಿವು ಸಿಕ್ಕಿದೆ.

    ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿರುವ `ಟಾಕ್ಸಿಕ್’ ಚಿತ್ರವನ್ನ ಯಶ್ ತಮ್ಮದೇ ಸ್ವಂತ ಬ್ಯಾನರ್ ಜೊತೆ ಕೆವಿಎನ್ ಫಿಲಂಸ್ ಜೊತೆ ನಿರ್ಮಿಸುತ್ತಿದ್ದಾರೆ. ಬಿಗ್ ಬಜೆಟ್ ಪ್ಯಾನ್ ವರ್ಲ್ಡ್ ಚಿತ್ರವಾಗಿದ್ದು 2025 ಏಪ್ರಿಲ್ 10ಕ್ಕೆ ಬಿಡುಗಡೆ ಘೋಷಣೆಯಾಗಿದೆ. ಬೆಂಗಳೂರಿನಲ್ಲಿ ಕೋಟಿ ಕೋಟಿ ಹಣ ಸುರಿದು ವಿಭಿನ್ನ ನಾಲ್ಕೈದು ಸೆಟ್ ಹಾಕಲಾಗಿದ್ದು ಆಗಸ್ಟ್ 8ಕ್ಕೆ ಮುಹೂರ್ತ ಮಾಡಿ ಅಂದಿನಿಂದ ಚಿತ್ರೀಕರಣ ಪ್ರಾರಂಭಿಸಿತ್ತು ಚಿತ್ರತಂಡ.

     

    ಇದೀಗ ಮೊದಲ ಶೆಡ್ಯೂಲ್ ಚಿತ್ರೀಕರಣ ನಡೆಯುತ್ತಿದೆ. ನಯನತಾರಾ ಜೊತೆ ಜೊತೆಗೆ ಬಾಲಿವುಡ್ ನಟಿ ಕಿಯಾರಾ ಅಡ್ವಾನಿ ಕೂಡ ಈ ಚಿತ್ರದಲ್ಲಿ ನಟಿಸುವ ಸುದ್ದಿ ಇದೆ. ಎಲ್ಲಾ ಕುತೂಹಲಕ್ಕೆ ಚಿತ್ರ ಆಫಿಷಿಯಲ್ ಆಗಿ ಉತ್ತರ ಕೊಡೋವರೆಗೂ ಕಾಯಬೇಕು.

  • ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ರಿಟೀಷ್ ನಟ: ಬೆಂಗಳೂರಿಗೆ ಬಂದಿಳಿದ ತಾರಾ ದಂಡು

    ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ರಿಟೀಷ್ ನಟ: ಬೆಂಗಳೂರಿಗೆ ಬಂದಿಳಿದ ತಾರಾ ದಂಡು

    ಶ್ (Yash) ನಟನೆಯ ‘ಟಾಕ್ಸಿಕ್’ (Toxic Film) ಸಿನಿಮಾ ಮುಹೂರ್ತ ಮುಗಿಸಿಕೊಂಡು ಹದಿನೈದು ದಿನಗಳ ಚಿತ್ರೀಕರಣವನ್ನೂ ಮುಗಿಸಿದೆ. ತಾರಾಗಣದಲ್ಲಿ ಅಚ್ಚರಿಯ ಹೆಸರುಗಳು ಕೇಳಿ ಬಂದಿದ್ದವು. ಈಗ ಒಂದೊಂದೆ ನಿಜವಾಗ್ತಿವೆ. ಮೊದಲ ಹಂತದ ಶೂಟಿಂಗ್ ನಲ್ಲಿ ನಯನತಾರಾ (NayanaTaara) ನಟಿಸಿ ಹೋಗಿದ್ದಾರೆ. ಈಗ ಇಂಗ್ಲೆಂಡ್ ಮೂಲದ ಬ್ರಿಟೀಷ್ ನಟ ಡ್ಯಾರೆಲ್ ಡಿಸಿಲ್ವಾ (Darrell D’Silva) ಕೂಡ ಎಂಟ್ರಿ ಕೊಟ್ಟಿದ್ದಾರೆ. ಚಿತ್ರೀಕರಣದಲ್ಲಿ ಭಾಗಿ ಆಗೋಕೆ ಬೆಂಗಳೂರಿಗೆ ಬಂದಿದ್ದಾರೆ.

    ನಯನತಾರಾ, ಡ್ಯಾರೆಲ್ ಮಾತ್ರವಲ್ಲ ಬಾಲಿವುಡ್ ನಟ ಅಕ್ಷಯ್ ಒಬೆರಾಯ್ (Akshay Oberoi) ‘ಟಾಕ್ಸಿಕ್’ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ‘ಫೈಟರ್’, ‘ಪೀಕು’ ಖ್ಯಾತಿಯ ಅಕ್ಷಯ್ ಒಬೆರಾಯ್ ಅವರು ಟಾಕ್ಸಿಕ್ ಚಿತ್ರದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಈ ವಿಚಾರವನ್ನು ಸ್ವತಃ ನಟ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಚಿತ್ರತಂಡ ಒಂದು ವೆಲ್‌ಕಮ್ ನೋಟ್ ಅನ್ನು ಅಕ್ಷಯ್‌ಗೆ ನೀಡಿರುವ ಜೊತೆಗೆ ಒಂದು ವೆಲ್‌ಕಮ್ ಕಿಟ್ ಒಂದನ್ನು ಸಹ ನೀಡಿದೆ. ಆ ವೆಲ್‌ಕಮ್ ನೋಟ್‌ನಲ್ಲಿ, ನಿಮ್ಮನ್ನು ತಂಡಕ್ಕೆ ಸ್ವಾಗತಿಸುತ್ತಿದ್ದೇವೆ. ನಿಮ್ಮ ಪ್ರತಿಭೆ ಹಾಗೂ ಎನರ್ಜಿ ನಮ್ಮೊಂದಿಗೆ ಸೇರುತ್ತಿರುವುದು ನಮಗೆ ಖುಷಿ ತಂದಿದೆ. ನಿಮ್ಮೊಂದಿಗೆ ಸೇರಿ ಅದ್ಭುತವನ್ನು ಸೃಷ್ಟಿಸುವ ತವಕದಲ್ಲಿದ್ದೇವೆ ಎಂದು ಬರೆದಿದ್ದರು.

    ಟಾಕ್ಸಿಕ್ ಚಿತ್ರದಲ್ಲಿ ಯಶ್ ಜೊತೆ ಅಕ್ಷಯ್ ಒಬೆರಾಯ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅಕ್ಷಯ್ ಮೂಲತಃ ಅಮೆರಿಕದ ನ್ಯೂ ಜೆರ್ಸಿಯಲ್ಲಿ ಜನಿಸಿದವರು. ನಟನಾಗಬೇಕು ಎಂಬ ಕನಸಿನಿಂದ ಮುಂಬೈ ಮಹಾನಗರಕ್ಕೆ ಕಾಲಿಟ್ಟರು. ಕಳೆದ 14 ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟಿವ್ ಆಗಿದ್ದಾರೆ.

     

    ಅಂದಹಾಗೆ, ‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್‌ದಾಸ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಯಶ್ ಜೊತೆ ಕೆವಿಎನ್ ಸಂಸ್ಥೆ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

  • ‘ಜವಾನ್’ ಸಿನಿಮಾ ಒಪ್ಪಿಕೊಳ್ಳಲು ಶಾರುಖ್ ಕಾರಣ: ನಟಿ ನಯನತಾರಾ

    ‘ಜವಾನ್’ ಸಿನಿಮಾ ಒಪ್ಪಿಕೊಳ್ಳಲು ಶಾರುಖ್ ಕಾರಣ: ನಟಿ ನಯನತಾರಾ

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ಅಭಿನಯದ ಜವಾನ್ (Jawaan) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಇತಿಹಾಸ ಬರೆದಿದೆ. ನೂರಾರು ಕೋಟಿಗಳ ಲಾಭ ಕಂಡಿದೆ. ಈ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ನಯನತಾರಾ (Nayantara) ಹಾಗೂ ಪ್ರಿಯಾಮಣಿ ಕೂಡ ನಟಿಸಿದ್ದರು. ಆದರೂ, ದೀಪಿಕಾಗೆ ಹೆಚ್ಚು ಮಹತ್ವ ನೀಡಲಾಗಿತ್ತು.

    ಈ ಕಾರಣದಿಂದಾಗಿಯೇ ನಯನತಾರಾ ಅವರು ನಿರ್ದೇಶಕ ಅಟ್ಲಿ ವಿರುದ್ಧ ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ನಯನತಾರಾ ಉತ್ತರವನ್ನೂ ಕೊಟ್ಟಿದ್ದರು. ಯಾವುದೇ ಅಸಮಾಧಾನವಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ಇದೀಗ ಆ ಚಿತ್ರವನ್ನು ಒಪ್ಪಿಕೊಳ್ಳಲು ಕಾರಣವನ್ನೂ ನೀಡಿದ್ದಾರೆ.

     

    ದೊಡ್ಡ ತಾರಾಗಣ ಹೊಂದಿರುವ ಸಿನಿಮಾದಲ್ಲಿ ನಟಿಸಬೇಕು ಎನ್ನುವುದು ನಯನತಾರಾ ಅವರ ಕನಸಾಗಿತ್ತಂತೆ. ಅಲ್ಲದೇ, ಅವರು ಶಾರುಖ್ ಅಭಿಮಾನಿ ಆಗಿರೋದ್ರಿಂದ ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಲಿಲ್ಲ. ಅವರು ಅದ್ಭುತ ನಟ ಹಾಗೂ ಮಹಿಳೆಯರಿಗೆ ತುಂಬಾ ಗೌರವ ಕೊಡುತ್ತಾರೆ. ಈ ಕಾರಣ ಕೂಡ ಸಿನಿಮಾ ಒಪ್ಪಿಕೊಳ್ಳುವುದಕ್ಕೆ ನೆರವಾಗಿದೆ ಎಂದಿದ್ದಾರೆ.

  • ನಯನತಾರಾ ಡಿವೋರ್ಸ್: ಕೊನೆಗೂ ಮೌನ ಮುರಿದ ನಟಿ

    ನಯನತಾರಾ ಡಿವೋರ್ಸ್: ಕೊನೆಗೂ ಮೌನ ಮುರಿದ ನಟಿ

    ಕ್ಷಿಣದ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayantara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಡಿವೋರ್ಸ್ ವಿಚಾರ ಭಾರೀ ಸದ್ದು ಮಾಡಿತ್ತು. ಸೋಷಿಯಲ್ ಮೀಡಿಯಾದಲ್ಲಂತೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೂ, ಈ ಕುರಿತಂತೆ ಇಬ್ಬರೂ ಪ್ರತಿಕ್ರಿಯೆ ನೀಡಿರಲಿಲ್ಲ. ಸತ್ಯ ಅಥವಾ ಸುಳ್ಳು ಅಂತಾನೂ ಸ್ಪಷ್ಟ ಪಡಿಸಲಿಲ್ಲ. ಆದರೆ, ಇದೀಗ ನಯನತಾರಾ ಈ ಕುರಿತಂತೆ ರಿಯ್ಯಾಕ್ಟ್ ಮಾಡಿದ್ದಾರೆ. ಹಾರ್ಟ್ ಸಿಂಬಲ್ ಹಾಕಿ, ಅಭಿಮಾನಿಗಳ ಹಾರ್ಟ್ ಬಿಟ್ ಹೆಚ್ಚಿಸಿದ್ದಾರೆ.

    ಕೊಳಲು ವಾದಕ ನವೀನ್ ಎನ್ನುವವರು ತಾವು ಕೊಳಲು ನುಡಿಸುತ್ತಿರುವ ಮತ್ತು ಅದನ್ನು ತನ್ಮತೆಯಿಂದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಕೇಳುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋವನ್ನು ನಯನತಾರಾ ಶೇರ್ ಮಾಡುವ ಮೂಲಕ ಹಾರ್ಟ್ ಸಿಂಬಲ್ ಹಾಕಿದ್ದಾರೆ. ಅಲ್ಲಿಗೆ ತಮ್ಮ ಜೀವನದಲ್ಲಿ ಯಾವುದೇ ಡಿವೋರ್ಸ್ ಬಿರುಗಾಳಿ ಎದ್ದಿಲ್ಲ ಎನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ.

    ತಮಿಳಿನ ಬೆಸ್ಟ್ ಕಪಲ್ ಆಗಿ ಹೈಲೆಟ್ ಆಗಿದ್ದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಬಾಳಲ್ಲಿ ಬಿರುಗಾಳಿ ಬೀಸಿದ್ಯಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಕಾಡುತ್ತಿತ್ತು. ನಟಿ ನಯನತಾರಾ ಅವರು ಪತಿ ವಿಘ್ನೇಶ್‌ರನ್ನು ಇನ್ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ದರಿಂದ ಇಂಥದ್ದೊಂದು ಪ್ರಶ್ನೆ ಮೂಡಿತ್ತು.

    ಪತ್ನಿಯನ್ನು ವಿಘ್ನೇಶ್ ಫಾಲೋ ಮಾಡ್ತಿದ್ದಾರೆ. ಆದರೆ ನಯನತಾರಾ ಅನ್‌ಫಾಲೋ ಮಾಡಿ ಫುಲ್ ಸೈಲೆಂಟ್ ಆಗಿದ್ದರು. ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಟಿ ಅಳಲು ತೋಡಿಕೊಂಡಿದ್ದರು. ‘ಕಣ್ಣಲ್ಲಿ ನೀರು ಬರುತ್ತಿದ್ದರೂ ಇದು ನನಗೆ ಸಿಕ್ಕಿತು’ ಎಂದು ಬರೆದುಕೊಂಡಿದ್ದರು. ಇಬ್ಬರ ನಡುವೆ ಇದೀಗ ಬಿರುಕು ಮೂಡಿದೆ ಎನ್ನಲಾಗುತ್ತಿತ್ತು. ಡಿವೋರ್ಸ್‌ಗೆ (Divorce) ಈ ಜೋಡಿ ಮುಂದಾಗಿದೆ ಎಂದೇ ಹೇಳಲಾಗುತ್ತಿತ್ತು.

     

    ಹಲವು ವರ್ಷಗಳು ಪ್ರೀತಿಸಿ, ಕಳೆದ ವರ್ಷ ಜೂನ್‌ನಲ್ಲಿ ನಯನತಾರಾ- ವಿಘ್ನೇಶ್ ಶಿವನ್ ಅದ್ಧೂರಿಯಾಗಿ ಮದುವೆಯಾದರು. ಬಳಿಕ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದರು. ಖುಷಿ ಖುಷಿಯಿಂದ ಬದುಕುತ್ತಿದ್ದ ಈ ಜೋಡಿ ಈಗ ಬೇರೇ ಆಗ್ತಾರೆ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗ್ತಿದ್ದಂತೆ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ದರು. ಇದೀಗ ಎಲ್ಲದಕ್ಕೂ ಸುಖಾಂತ್ಯವಾಗಿದೆ.

  • ಡಿವೋರ್ಸ್‌ಗೆ ಮುಂದಾದ್ರಾ ನಯನತಾರಾ, ವಿಘ್ನೇಶ್ ಶಿವನ್?

    ಡಿವೋರ್ಸ್‌ಗೆ ಮುಂದಾದ್ರಾ ನಯನತಾರಾ, ವಿಘ್ನೇಶ್ ಶಿವನ್?

    ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanatara) ಅಭಿಮಾನಿಗಳಿಗೆ (Fans) ಶಾಕಿಂಗ್ ನ್ಯೂಸ್‌ವೊಂದು ಸದ್ದು ಮಾಡುತ್ತಿದೆ. ನಯನತಾರಾ- ವಿಘ್ನೇಶ್ ಶಿವನ್ (Vignesh Shivan) ಡಿವೋರ್ಸ್ ಆಗಲಿದ್ದಾರೆ ಎಂಬ ಸುದ್ದಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ತಮಿಳಿನ ಬೆಸ್ಟ್ ಕಪಲ್ ಆಗಿ ಹೈಲೆಟ್ ಆಗಿದ್ದ ನಯನತಾರಾ ಮತ್ತು ವಿಘ್ನೇಶ್ ಶಿವನ್ ಬಾಳಲ್ಲಿ ಬಿರುಗಾಳಿ ಬೀಸಿದ್ಯಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಕಾಡುತ್ತಿದೆ. ಅದಕ್ಕೆಲ್ಲಾ ಕಾರಣ ನಟಿ ನಯನತಾರಾ ಅವರು ಪತಿ ವಿಘ್ನೇಶ್‌ರನ್ನು ಅನ್‌ಫಾಲೋ ಮಾಡಿರೋದು. ಇದನ್ನೂ ಓದಿ:‘ರಂಗನಾಯಕ’ ಟ್ರೈಲರ್ ನಲ್ಲಿ ಯಶ್, ದರ್ಶನ್, ಸುದೀಪ್ ರನ್ನು ಎಳೆತಂದ ಗುರುಪ್ರಸಾದ್

    ಪತ್ನಿಯನ್ನು ವಿಘ್ನೇಶ್ ಫಾಲೋ ಮಾಡ್ತಿದ್ದಾರೆ. ಆದರೆ ನಯನತಾರಾ ಅನ್‌ಫಾಲೋ ಮಾಡಿ ಫುಲ್ ಸೈಲೆಂಟ್ ಆಗಿದ್ದಾರೆ. ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಟಿ ಅಳಲು ತೋಡಿಕೊಂಡಿದ್ದಾರೆ. ‘ಕಣ್ಣಲ್ಲಿ ನೀರು ಬರುತ್ತಿದ್ದರೂ ಇದು ನನಗೆ ಸಿಕ್ಕಿತು’ ಎಂದು ಬರೆದುಕೊಂಡಿದ್ದಾರೆ. ಇಬ್ಬರ ನಡುವೆ ಇದೀಗ ಬಿರುಕು ಮೂಡಿದೆ ಎನ್ನಲಾಗುತ್ತಿದೆ. ಡಿವೋರ್ಸ್‌ಗೆ (Divorce) ಈ ಜೋಡಿ ಮುಂದಾಗಿದೆ ಎಂದೇ ಹೇಳಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜನಾ? ಕಾದುನೋಡಬೇಕಿದೆ.

    ಹಲವು ವರ್ಷಗಳು ಪ್ರೀತಿಸಿ, ಕಳೆದ ವರ್ಷ ಜೂನ್‌ನಲ್ಲಿ ನಯನತಾರಾ- ವಿಘ್ನೇಶ್ ಶಿವನ್ ಅದ್ಧೂರಿಯಾಗಿ ಮದುವೆಯಾದರು. ಬಳಿಕ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದರು. ಖುಷಿ ಖುಷಿಯಿಂದ ಬದುಕುತ್ತಿದ್ದ ಈ ಜೋಡಿ ಈಗ ಬೇರೇ ಆಗ್ತಾರೆ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗ್ತಿದ್ದಂತೆ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ದಾರೆ. ಈ ಸುದ್ದಿ ಸುಳ್ಳಾಗಲಿ ಎಂದು ಫ್ಯಾನ್ಸ್ ಆಶಿಸುತ್ತಿದ್ದಾರೆ.

  • ‘ಅನ್ನಪೂರ್ಣಿ’ ಡಿಲೀಟ್ ಮಾಡಿದ್ದಕ್ಕೆ ನಿರ್ದೇಶಕ ವೆಟ್ರಿಮಾರನ್ ಬೇಸರ

    ‘ಅನ್ನಪೂರ್ಣಿ’ ಡಿಲೀಟ್ ಮಾಡಿದ್ದಕ್ಕೆ ನಿರ್ದೇಶಕ ವೆಟ್ರಿಮಾರನ್ ಬೇಸರ

    ಕ್ಷಿಣದ ಹೆಸರಾಂತ ನಿರ್ದೇಶಕ ವೆಟ್ರಿಮಾರನ್ (Vetrimaran) ಅನ್ನಪೂರ್ಣಿ ಸಿನಿಮಾದ ಪರವಾಗಿ ಮಾತನಾಡಿದ್ದಾರೆ. ನಯನತಾರಾ (Nayantara) ನಟನೆಯ ಅನ್ನಪೂರ್ಣಿ ಸಿನಿಮಾದ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಓಟಿಟಿಯಿಂದ ತೆಗೆದು ಹಾಕಲಾಗಿತ್ತು. ಈ ಕ್ರಮವನ್ನು ಅವರು ವಿರೋಧಿಸಿದ್ದಾರೆ. ಸೆನ್ಸಾರ್ ಆದ ಮೇಲೂ ಈ ರೀತಿ ಒತ್ತಡ ಹಾಕುವುದು ಸರಿಯಾದದ್ದು ಅಲ್ಲವೆಂದು ಅವರು ಹೇಳಿದ್ದಾರೆ.

    ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ಹಲವಾರು ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು. ಒಟಿಟಿಯಿಂದ ಚಿತ್ರವನ್ನು ಡಿಲಿಟ್ ಮಾಡಲಾಗಿತ್ತು. ನಂತರ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ನಯನತಾರಾ ಅವರ ಮೇಲೂ ಪ್ರಕರಣ ದಾಖಲಾಗಿತ್ತು. ಮಧ್ಯ ಪ್ರದೇಶದ ಜಬಲ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ವಿವಾದ (Controversy) ಭುಗಿಲೇಳುತ್ತಿದ್ದಂತೆಯೇಅನ್ನಪೂರ್ಣಿ‘ (Annapoorani)  ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಿದೆ. ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು.

    ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.

     

    ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಇದು 75ನೇ ಸಿನಿಮಾ. ಸಿನಿಮಾದಲ್ಲಿ ನಯನತಾರಾ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಅವರ ಗೆಟಪ್ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದರು. ಪಕ್ಕಾ ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಯನತಾರಾ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

  • ಒಟಿಟಿಯಿಂದ ನಯನತಾರಾ ನಟನೆಯ ಸಿನಿಮಾ ಡಿಲಿಟ್

    ಒಟಿಟಿಯಿಂದ ನಯನತಾರಾ ನಟನೆಯ ಸಿನಿಮಾ ಡಿಲಿಟ್

    ಕ್ಷಿಣದ ಖ್ಯಾತ ನಟಿ ನಯನತಾರಾ (Nayantara) ನಟನೆಯ ‘ಅನ್ನಪೂರ್ಣಿ’ (Annapurni)  ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು.

    ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.

    ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಇದು 75ನೇ ಸಿನಿಮಾ. ಈ ಸಿನಿಮಾದಲ್ಲಿ ನಯನತಾರಾ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಅವರ ಗೆಟಪ್ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದರು. ಪಕ್ಕಾ ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಯನತಾರಾ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

     

    ಡಿಸೆಂಬರ್‌ನಲ್ಲಿ ‘ಅನ್ನಪೂರ್ಣಿ’ ಎಂಬ ಸಿನಿಮಾ ರಿಲೀಸ್ ಆಗಿತ್ತು. ಒಟಿಟಿಯಲ್ಲಿ ರಿಲೀಸ್ ಆಗಿ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಚಿತ್ರದಲ್ಲಿ ನಯನತಾರಾ ತಂದೆ ಪಾತ್ರದಲ್ಲಿ ಕನ್ನಡದ ನಟ ಅಚ್ಯುತ್ ಕುಮಾರ್ ನಟಿಸಿದ್ದರು. ಅವರ ಮನೋಜ್ಞ ನಟನೆಗೆ ನಯನತಾರಾ ಮೆಚ್ಚುಗೆ ಸೂಚಿಸಿದ್ದರು.

  • ಪತಿಯಿಂದ ನಯನತಾರಾಗೆ ಭರ್ಜರಿ ಗಿಫ್ಟ್

    ಪತಿಯಿಂದ ನಯನತಾರಾಗೆ ಭರ್ಜರಿ ಗಿಫ್ಟ್

    ಕ್ಷಿಣದ ಹೆಸರಾಂತ ನಟಿ ನಯನತಾರಾ ತಮ್ಮ ಹುಟ್ಟು ಹಬ್ಬಕ್ಕೆ ಪತಿಯಿಂದ ಭರ್ಜರಿ ಉಡುಗೊರೆ ಪಡೆದಿದ್ದಾರೆ. ಪತಿ, ನಿರ್ದೇಶಕ ವಿಘ್ನೇಶ್ ಶಿವನ್ (Vignesh Shivan) ಪತ್ನಿಗೆ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಪತಿ ನೀಡಿರುವ ಮೂರು ಕೋಟಿ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಕಾರಿನ (Car) ಫೋಟೋವನ್ನು ನಯನತಾರಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಪತಿಗೆ ಧನ್ಯವಾದ ಹೇಳಿದ್ದಾರೆ.

    ಮತ್ತೊಂದು ಗುಡ್ ನ್ಯೂಸ್

    ಖ್ಯಾತ ನಟ ಕಮಲ್ ಹಾಸನ್ ಅವರ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಇದೇ ಸಿನಿಮಾಗೆ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ತ್ರಿಷಾ ಬದಲಾಗಿ ಇದೀಗ ನಯನತಾರಾ ಹೆಸರು ಕೇಳಿ ಬಂದಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಈ ಜೋಡಿಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುವಂತಾಗಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

     

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ನಯನತಾರಾ ಹೆಸರು ಸೇರ್ಪಡೆ ಆಗಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

  • ನಿರ್ದೇಶನಕ್ಕೆ ಮುಂದಾದ ಲೇಡಿ ಸೂಪರ್ ಸ್ಟಾರ್

    ನಿರ್ದೇಶನಕ್ಕೆ ಮುಂದಾದ ಲೇಡಿ ಸೂಪರ್ ಸ್ಟಾರ್

    ಕ್ಷಿಣದ ಲೇಡಿ ಸೂಪರ್ ಸ್ಟಾರ್ ನಯನತಾರಾ ನಟನೆಗೆ ಕೊಂಚ ವಿರಾಮ ತೆಗೆದುಕೊಂಡು ನಿರ್ದೇಶನಕ್ಕೆ (Directio) ಹಾರಲಿದ್ದಾರೆ. ನಿರ್ದೇಶನ ಅವರ ಕನಸಂತೆ. ಹಾಗಾಗಿ ಶೀಘ್ರದಲ್ಲೇ ಆ ಕನಸನ್ನು ನನಸು ಮಾಡಿಕೊಳ್ಳಲಿದ್ದಾರೆ ಸ್ಟಾರ್ ನಟಿ. ಸಿನಿಮಾ ಯಾವುದು? ಕಥೆ ಏನು? ಯಾವುದನ್ನೂ ಇನ್ನೂ ಬಿಟ್ಟುಕೊಡದ ನಯನತಾರಾ, ಮುಂದಿನ ದಿನಗಳಲ್ಲಿ ಹಲವು ವಿಷಯಗಳು ಬಹಿರಂಗಗೊಳ್ಳಲಿವೆ.

    ಈ ನಡುವೆ ನಯನತಾರಾ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಖ್ಯಾತ ನಟ ಕಮಲ್ ಹಾಸನ್ ಅವರ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಇದೇ ಸಿನಿಮಾಗೆ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ತ್ರಿಷಾ ಬದಲಾಗಿ ಇದೀಗ ನಯನತಾರಾ ಹೆಸರು ಕೇಳಿ ಬಂದಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಈ ಜೋಡಿಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುವಂತಾಗಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

     

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು, ಇದೀಗ ನಯನತಾರಾ ಹೆಸರು ಸೇರ್ಪಡೆ ಆಗಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

  • ‘ಜವಾನ್’ ವಿರುದ್ಧ ನಯನತಾರಾ ಮುನಿಸು: ಪರೋಕ್ಷವಾಗಿ ಒಪ್ಪಿಕೊಂಡ ಶಾರುಖ್

    ‘ಜವಾನ್’ ವಿರುದ್ಧ ನಯನತಾರಾ ಮುನಿಸು: ಪರೋಕ್ಷವಾಗಿ ಒಪ್ಪಿಕೊಂಡ ಶಾರುಖ್

    ವಾನ್ ಸಿನಿಮಾದ ನಿರ್ದೇಶಕರ ವಿರುದ್ಧ ನಯನತಾರಾ (Nayantara) ಮುನಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಜವಾನ್ ಸಿನಿಮಾದಲ್ಲಿ ತಮ್ಮದು ಮಹತ್ವದ ಪಾತ್ರವಿದ್ದರೂ, ಅದಕ್ಕೆ ಸಿಗಬೇಕಾದ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ ಎಂದು ನಯನತಾರಾ ಅವರು ಚಿತ್ರದ ನಿರ್ದೇಶಕ ಅಟ್ಲಿ ಮೇಲೆ ಕೋಪಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆನಂತರ ಅಂಥದ್ದೇನೂ ಮುನಿಸಿಲ್ಲವೆಂದು ಹೇಳಲಾಯಿತು.

    ಆದರೆ, ನಯನತಾರಾ ಅವರಿಗೆ ತೆರೆಯ ಮೇಲೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲವೆಂದು ಬಹಿರಂಗವಾಗಿಯೇ ಚಿತ್ರದ ನಾಯಕ ಮತ್ತು ನಿರ್ಮಾಪಕ ಶಾರುಖ್ ಖಾನ್ ಒಪ್ಪಿಕೊಂಡಿದ್ದಾರೆ. ನಯನತಾರಾ ನಿರ್ವಹಿಸಿರುವ ಪಾತ್ರವನ್ನು ಬಹುವಾಗಿ ಮೆಚ್ಚಿಕೊಂಡಿರುವ ಶಾರುಖ್, ಸೋಷಿಯಲ್ ಮೀಡಿಯಾದಲ್ಲಿ ‘ನರ್ಮದಾ ಪಾತ್ರಕ್ಕೆ ಸಿಗಬೇಕಾದ ಮನ್ನಣೆ ತೆರೆಯಲ್ಲಿ ಸಿಕ್ಕಿಲ್ಲ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಜವಾನ್’ ಚಿತ್ರದ ನಿರ್ದೇಶಕನ ಜೊತೆ ನಯನತಾರಾ ಮುನಿಸು

    ಜವಾನ್ ಸಿನಿಮಾದ ಕಲೆಕ್ಷನ್ (Collection) ಕುರಿತಾಗಿ ಸಾಕಷ್ಟು ಕುತೂಹಲವಿತ್ತು. ಒಂದೊಂದು ದಿನ ಒಂದೊಂದು ಕಲೆಕ್ಷನ್ ವರದಿ ಹೊರ ಬೀಳುತ್ತಿದ್ದವು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಇದು ಗೊಂದಲಕ್ಕೆ ಕಾರಣವಾಗಿತ್ತು. ಇದೀಗ ಅಧಿಕೃತವಾಗಿಯೇ ನಿರ್ಮಾಣ ಸಂಸ್ಥೆಯೇ ಕಲೆಕ್ಷನ್ ವಿವರವನ್ನು ಹಂಚಿಕೊಂಡಿದ್ದು, 15 ದಿನಕ್ಕೆ ವಿಶ್ವದಾದ್ಯಂತ ಬರೋಬ್ಬರಿ 937.61 ಕೋಟಿ ರೂಪಾಯಿ ಬಾಚಿಕೊಂಡಿದೆ. ಶೀಘ್ರದಲ್ಲೇ ಸಾವಿರ ಕೋಟಿ ರೂಪಾಯಿ ಕೂಡ ತಲುಪಲಿದೆ.

    ಒಂದು ಕಡೆ ‘ಜವಾನ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಜವಾನ್ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳು ಕೂಡ ಕೇಳಿ ಬರುತ್ತಿವೆ. ಸಮಾರಂಭವೊಂದರಲ್ಲಿ ಸಿನಿಮಾದ ಕುರಿತು ಮಾತನಾಡಿರುವ ನಿರ್ದೇಶಕ ಅಟ್ಲಿ ತಮ್ಮ ಚಿತ್ರಕ್ಕೆ ಆಸ್ಕರ್ (Oscar) ಪ್ರಶಸ್ತಿ ಬರಬೇಕು. ಆ ಪ್ರಶಸ್ತಿ ಪಡೆಯಲು ಚಿತ್ರಕ್ಕೆ ಎಲ್ಲ ಅರ್ಹತೆಯೂ ಇದೆ ಎಂದು ಹೇಳಿಕೊಂಡಿದ್ದಾರೆ.

     

    ಈ ನಡುವೆ ನಿರ್ದೇಶಕ ಅಟ್ಲಿ (Atlee) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]