Tag: nda

  • Bihar Elections 2025 | ಶುಭ ಶುಕ್ರವಾರ NDA ಪ್ರಣಾಳಿಕೆ ಬಿಡುಗಡೆ – ಭಾರೀ ಕೊಡುಗೆ ನಿರೀಕ್ಷೆ!

    Bihar Elections 2025 | ಶುಭ ಶುಕ್ರವಾರ NDA ಪ್ರಣಾಳಿಕೆ ಬಿಡುಗಡೆ – ಭಾರೀ ಕೊಡುಗೆ ನಿರೀಕ್ಷೆ!

    ಪಾಟ್ನಾ: ಬಿಹಾರ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ಉಭಯ ಮೈತ್ರಿಕೂಟಗಳ ಪ್ರಚಾರದ ಬಿರುಸು ಜೋರಾಗುತ್ತಿದೆ. ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ಕೈಗೊಂಡಿರುವ ಎನ್‌ಡಿಎ ಮೈತ್ರಿಕೂಟ ಅ.31 ರಂದು ಪ್ರಣಾಳಿಕೆ ಬಿಡುಗಡೆ ಮಾಡಲಿದೆ.

    ಬೆಳಗ್ಗೆ 9:30ರ ಸುಮಾರಿಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮೈತ್ರಿಕೂಟದ ಎಲ್ಲಾ ನಾಯಕರ ಸಮ್ಮುಖದಲ್ಲಿ ಬಿಜೆಪಿ, ಜೆಡಿಯು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾ ಸೇರಿದಂತೆ ಎನ್‌ಡಿಎ ಮಿತ್ರಪಕ್ಷಗಳ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಗುತ್ತದೆ.

    ಏನಿದೆ ನಿರೀಕ್ಷೆ?
    ವರದಿಗಳ ಪ್ರಕಾರ, ಎನ್‌ಡಿಎ ಮೈತ್ರಿಕೂಟದ ಪ್ರಣಾಳಿಕೆಯು ಶಿಕ್ಷಣ, ಆರೋಗ್ಯ ರಕ್ಷಣೆ, ಕೃಷಿ, ಉದ್ಯೋಗ, ಮಹಿಳಾ ಸಬಲೀಕರಣ ಮೇಲೆ ಕೇಂದ್ರೀಕೃತವಾಗಿದೆ. ಅಲ್ಲದೇ ಮೂಲ ಸೌಕರ್ಯ, ಗ್ರಾಮೀಣ ಅಭಿವೃದ್ಧಿಗಳಿಗೂ ವಿಶೇಷ ಒತ್ತು ನೀಡಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

    ಮಹಾಘಟಬಂಧನ್‌ ಭರವಸೆ ಏನಿದೆ?
    ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಮೈತ್ರಿಕೂಟ ‘ಬಿಹಾರ ಕಾ ತೇಜಸ್ವಿ ಪ್ರಾಣ್’ ಎಂಬ ಶೀರ್ಷಿಕೆಯಡಿ ಈಗಾಗಲೇ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

    * ಸರ್ಕಾರ ರಚಿಸಿದ 20 ದಿನಗಳಲ್ಲಿ ರಾಜ್ಯದ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಉದ್ಯೋಗ.
    * ‘ಮೈ-ಬೆಹಿಂ ಮಾನ್ ಯೋಜನೆ’ ಅಡಿಯಲ್ಲಿ, ಡಿಸೆಂಬರ್ 1 ರಿಂದಲೇ ಮಹಿಳೆಯರಿಗೆ ತಿಂಗಳಿಗೆ 2,500 ರೂ. ಆರ್ಥಿಕ ನೆರವು.
    * ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರುವ ಭರವಸೆ
    * ವಕ್ಫ್ (ತಿದ್ದುಪಡಿ) ಕಾಯ್ದೆ ಕಸದ ಬುಟ್ಟಿಗೆ
    * ಪಂಚಾಯಿತಿ ಪ್ರತಿನಿಧಿಗಳ ವಿಮೆ ಭತ್ಯೆ ಡಬಲ್‌ ಸೇರಿದಂತೆ ಹಲವು ಭರವಸೆಗಳನ್ನ ನೀಡಿದೆ.

    ಇದೇ ನವೆಂಬರ್‌ 6 ಮತ್ತು 11 ರಂದು 2 ಹಂತಗಳಲ್ಲಿ ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ.

  • ನಿತೀಶ್ ಸಿಎಂ, ಮೋದಿನೇ ಪಿಎಂ – ಯಾವ್ದೇ ಹುದ್ದೆ ಖಾಲಿ ಇಲ್ಲ; ಗೊಂದಲಕ್ಕೆ ತೆರೆ ಎಳೆದ ಅಮಿತ್ ಶಾ

    ನಿತೀಶ್ ಸಿಎಂ, ಮೋದಿನೇ ಪಿಎಂ – ಯಾವ್ದೇ ಹುದ್ದೆ ಖಾಲಿ ಇಲ್ಲ; ಗೊಂದಲಕ್ಕೆ ತೆರೆ ಎಳೆದ ಅಮಿತ್ ಶಾ

    – ಬಿಹಾರಕ್ಕೆ ಮೋದಿಯ ಆಶೀರ್ವಾದ ಇದೆ ಎಂದ ಗೃಹಸಚಿವ

    ಪಾಟ್ನಾ: ಇಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಅಲ್ಲಿ ಪ್ರಧಾನಮಂತ್ರಿ ಹುದ್ದೆಯೂ ಖಾಲಿ ಇಲ್ಲ. ಇಲ್ಲಿ ನಿತೀಶ್ ಕುಮಾರ್ ಇದ್ದಾರೆ, ಅಲ್ಲಿ ಮೋದಿ ಇದ್ದಾರೆ. ರಾಜ್ಯದಲ್ಲಿ ಸದ್ಯ ಯಾವುದೇ ಹುದ್ದೆ ಖಾಲಿ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಬಿಹಾರದಲ್ಲಿ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

    ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿಯಾಗಿ ನರೇಂದ್ರ ಮೋದಿ, ಸಿಎಂ ಆಗಿ ನಿತೀಶ್‌ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವ ಮೂಲಕ ಬಿಹಾರದ ವರ್ಚಸ್ಸನ್ನು ಹೆಚ್ಚಿಸಿದ್ದಕ್ಕಾಗಿ ಮತ್ತು ರಾಜ್ಯದ ಪರಂಪರೆಯನ್ನು ಗೌರವಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ ಅಮಿತ್ ಶಾ, ಈ ನಿರ್ಧಾರ ಭಾರತದ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಿಹಾರದ ಕೊಡುಗೆಗೆ ಕೇಂದ್ರದ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

    ಪಹಲ್ಗಾಮ್ ದಾಳಿಯ ನಂತರ, ಪ್ರಧಾನಿ ಮೋದಿ ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿದರು, ಕೇಂದ್ರ ಸರ್ಕಾರವು ಪಿಎಫ್‌ಐ ನಿಷೇಧಿಸಿ ಅದರ ಸದಸ್ಯರನ್ನ ವಶಕ್ಕೆ ತೆಗೆದುಕೊಂಡಿತು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ನಿರ್ಣಾಯಕ ಗೆಲುವು ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ರಾಮ ಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ ಶಾ, ವರ್ಷಗಳ ಕಾಲ ಶ್ರೀರಾಮನು ಒಂದು ಗುಡಾರದಲ್ಲಿ ವಾಸಿಸುತ್ತಿದ್ದನು. ಕಾಂಗ್ರೆಸ್, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳು ದೇವಾಲಯವನ್ನ ನಿರ್ಮಿಸಲು ಎಂದಿಗೂ ಅವಕಾಶ ನೀಡಲಿಲ್ಲ. ಆದರೆ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗ ಆ ಭರವಸೆಯನ್ನ ಈಡೇರಿಸಿದರು. ಈಗ, ನಾವು ಮಿಥಿಲಾದಲ್ಲಿ ಸೀತಾ ದೇವಿಗೆ ದೇವಾಲಯವನ್ನ ನಿರ್ಮಿಸುತ್ತೇವೆ ಅಂತ ತಿಳಿಸಿದ್ರು.

    ಶಾಂತಿಪುರದಲ್ಲಿ ಮತ್ತೊಂದು ರ‍್ಯಾಲಿ ಉದ್ದೇಶಿಸಿ ಮಾತನಾಡಿ ಅಮಿತ್ ಶಾ, ಬಿಹಾರವು ನಿತೀಶ್ ಕುಮಾರ್ ಮತ್ತು ಚಿರಾಗ್ ಪಾಸ್ವಾನ್ ಅವರ ನಾಯಕತ್ವವನ್ನು ಹೊಂದಿದೆ. ಮೋದಿಯವರ ಆಶೀರ್ವಾದ ಇದೆ. ಇದು ರಾಜ್ಯದಲ್ಲಿ ಎನ್‌ಡಿಎ ಸ್ಥಾನವನ್ನ ಬಲಪಡಿಸಲು ಸಹಾಯ ಮಾಡುತ್ತದೆ ಅಂತ ಶ್ಲಾಘಿಸಿದ್ರು. ಇದನ್ನೂ ಓದಿ: ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

  • ಬಿಹಾರ ಚುನಾವಣೆ ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ: ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

    ಬಿಹಾರ ಚುನಾವಣೆ ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ: ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

    ಪಾಟ್ನಾ: ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ರಾಜ್ಯವನ್ನು ಸಮೃದ್ಧಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Modi) ಹೇಳಿದ್ದಾರೆ.

    ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಇಂದು ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಸಮಷ್ಟಿಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಲಾಲು ಪ್ರಸಾದ್ ಯಾದವ್ ಅವರ ಕುಟುಂಬವು ಹಲವು ವರ್ಷಗಳಿಂದ ಬಿಹಾರವನ್ನು ಲೂಟಿ ಮಾಡಿದೆ. ಆದರೆ ಜಾಮೀನಿನ ಮೇಲೆ ಹೊರಗಿದ್ದಾರೆ. ರಾಜ್ಯದಲ್ಲಿ ತಮ್ಮ ‘ಮತದಾರ ಅಧಿಕಾರ ಯಾತ್ರೆ’ಯನ್ನು ಮಾಡುವ ಮೂಲಕ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಜನ ನಾಯಕ ಆಗಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪ್ರತಿ ಮನೆಗೆ ಸರ್ಕಾರಿ ಉದ್ಯೋಗ, 125 ಯೂನಿಟ್‌ ಉಚಿತ ವಿದ್ಯುತ್: ಬಿಹಾರಿಗಳಿಗೆ ಭರಪೂರ ಕೊಡುಗೆ

    ಬಿಹಾರದಲ್ಲಿ ಅಭಿವೃದ್ಧಿಯನ್ನು ತಡೆಯಲು ಆರ್‌ಜೆಡಿ ಮತ್ತು ಕಾಂಗ್ರೆಸ್ ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ. 2004 ರಿಂದ 2014 ರವರೆಗೆ ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸರ್ಕಾರಕ್ಕೆ ಸಹಾಯ ಮಾಡದಂತೆ ಕೇಳುವ ಮೂಲಕ ಆರ್‌ಜೆಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬೆದರಿಕೆ ಹಾಕುತ್ತಿತ್ತು ಎಂದು ಆರೋಪಿಸಿದರು.

    ಈ ಜನರು ಸಾವಿರಾರು ಕೋಟಿ ರೂಪಾಯಿಗಳ ಹಗರಣಗಳಲ್ಲಿ ಭಾಗಿಯಾದವರು. ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಈಗ ಅವರ ಕಳ್ಳತನದ ಅಭ್ಯಾಸ ಎಷ್ಟಿದೆಯೆಂದರೆ ಅವರು ಕರ್ಪೂರಿ ಠಾಕೂರ್ ಎಂಬ ಬಿರುದನ್ನು ಕದಿಯುವಲ್ಲಿ ನಿರತರಾಗಿದ್ದಾರೆ. ಕರ್ಪೂರಿ ಠಾಕೂರ್‌ಗೆ ಈ ಅವಮಾನವನ್ನು ಬಿಹಾರದ ಜನರು ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದರು.

    ಜನತಾದಳ ಯುನೈಟೆಡ್ ನಾಯಕ ನಿತೀಶ್ ಕುಮಾರ್ ಅವರನ್ನು ಶ್ಲಾಘಿಸಿದ ಪ್ರಧಾನಿ, ಎನ್‌ಡಿಎ ರಾಜ್ಯದಲ್ಲಿ ತನ್ನ ಹಿಂದಿನ ಎಲ್ಲಾ ಗೆಲುವಿನ ದಾಖಲೆಗಳನ್ನು ಮುರಿಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಹಾರ ಎನ್‌ಡಿಎಗೆ ಇದುವರೆಗಿನ ಅತಿದೊಡ್ಡ ಜನಾದೇಶವನ್ನು ನೀಡಲಿದೆ. ಅವರು ಮುಖ್ಯಮಂತ್ರಿಯಾಗಿರಲಿದ್ದಾರೆ ಎನ್ನುವ ಮೂಲಕ ನಿತೀಶ್ ಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪರೋಕ್ಷವಾಗಿ ಹೇಳಿದರು. ಇದನ್ನೂ ಓದಿ: Bihar Election| ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ

    ರಾಜ್ಯದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬಂದ ನಂತರ ಬೆಳವಣಿಗೆಯ ದರವು ಹೊಸ ಮಟ್ಟಕ್ಕೆ ಏರಲಿದೆ. ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮಂಚ್ (ಆರ್‌ಎಲ್‌ಎಂ) ಸೇರಿದಂತೆ ಆಡಳಿತಾರೂಢ ಮೈತ್ರಿಕೂಟಕ್ಕೆ ಮತ ಹಾಕುವಂತೆ ಜನರಿಗೆ ಮನವಿ ಮಾಡಿದರು. ಬಿಹಾರವು ‘ಜಂಗಲ್ ರಾಜ್’ ಅನ್ನು ದೂರವಿಟ್ಟು ಉತ್ತಮ ಆಡಳಿತಕ್ಕಾಗಿ ಮತ ಚಲಾಯಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

    ಕಡೆಯಲ್ಲಿ ಮಾತನಾಡಿದ ಅವರು, ಜನರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ದೀಪಗಳನ್ನು ಆನ್ ಮಾಡಲು ಕೇಳಿಕೊಂಡರು ಬಳಿಕ ಇಷ್ಟು ಬೆಳಕು ಇರುವಾಗ ನಮಗೆ ಲಾಟಿನ್ ಬೇಕೇ? ಬಿಹಾರಕ್ಕೆ ಲಾಟಿನ್ ಮತ್ತು ಅದರ ಸ್ನೇಹಿತರು ಬೇಡ ಎಂದ ಪ್ರಧಾನಿ ಮೋದಿ ಆರ್‌ಜೆಡಿ ಗುರುತು ಉಲ್ಲೇಖಿಸಿ ತಿರುಗೇಟು ನೀಡಿದರು. ಈ ಬಾರಿಯ ಚುನಾವಣೆ ಎನ್‌ಡಿಎ ಮತ್ತು ಲಠ್‌ಬಂಧನ್ ನಡುವಿನ ಹೋರಾಟ ಎಂದು ಬಣ್ಣಿಸಿದರು. ಬಳಿಕ ಅವರು ಬೇಗುಸರಾಯ್‌ಯಲ್ಲೂ ಭಾಷಣ ಮಾಡಿದರು.

  • Bihar Elections 2025 | ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿಂಗರ್‌ ಮೈಥಿಲಿ ಠಾಕೂರ್‌ಗೂ ಟಿಕೆಟ್‌

    Bihar Elections 2025 | ಬಿಜೆಪಿಯ 101 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಸಿಂಗರ್‌ ಮೈಥಿಲಿ ಠಾಕೂರ್‌ಗೂ ಟಿಕೆಟ್‌

    ಪಾಟ್ನಾ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ 18 ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಬುಧವಾರ ತಡ ರಾತ್ರಿ ಬಿಡುಗಡೆ ಮಾಡಿದೆ. ಒಟ್ಟಾರೆ 3 ಹಂತಗಳಲ್ಲಿ 101 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಹಲವು ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ.

    ಬಿಜೆಪಿ ಮೊದಲ ಪಟ್ಟಿಯಲ್ಲಿ 71 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. 2ನೇ ಪಟ್ಟಿಯಲ್ಲಿ 12 ಹಾಗೂ 3ನೇ ಪಟ್ಟಿಯಲ್ಲಿ 18 ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದೆ. ಅಂತಿಮ ಪಟ್ಟಿಯಲ್ಲಿ ಖ್ಯಾತ ಗಾಯಕಿ ಮೈಥಿಲಿ ಠಾಕೂ‌ರ್ (Maithili Thakur)ರಿಗೆ ಆಲಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

    pm modi road show bihar

    ಬಿಜೆಪಿ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದು, 17 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ. ಇನ್ನೂ ಜೆಡಿಯು ಕೂಡ 101 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಉಳಿದಂತೆ ಚಿರಾಗ್‌ ಪಾಸ್ವಾನ್‌ ನೇತೃತ್ವದ ಎಲ್‌ಜೆಪಿ 29, ಎಚ್‌ಎಎಂ 6 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಇದನ್ನೂ ಓದಿ: Bihar Elections | 57 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಜೆಡಿಯು

    ಇಂಡಿಯಾ ಮೈತ್ರಿಕೂಟದ ಕಾಂಗ್ರೆಸ್, ಆರ್‌ಜೆಡಿ ಪಕ್ಷಗಳು ಅಧಿಕೃತವಾಗಿ ಯಾವುದೇ ಅಭ್ಯರ್ಥಿಗಳನ್ನ ಘೋಷಣೆ ಮಾಡಿಲ್ಲ. ಇನ್ನೂ ಸೀಟು ಹಂಚಿಕೆ ಕಸರತ್ತು ನಡೆಯುತ್ತಿದೆ. ಆದ್ರೆ ಕಾಂಗ್ರೆಸ್‌ ಸೀಟು ಹಂಚಿಕೆಗೆ ಮುನ್ನವೇ 16 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ ಎಂದು ತಿಳಿದುಬಂದಿದೆ.

    ಈ ಬಾರಿ ಬಿಹಾರದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್‌ 6ರಂದು ಮೊದಲ ಹಾಗೂ ನವೆಂಬರ್‌ 11 ರಂದು 2ನೇ ಹಂತದ ಮತದಾನ ನಡೆಯಲಿದ್ದು, ನ.14ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ಪವರ್‌ ಕಟ್‌ ಸಮಸ್ಯೆಯಿದೆ: ಆಂಧ್ರ ಐಟಿ ಸಚಿವ

    ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

  • ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

    ಬಿಹಾರದಲ್ಲಿ ಸೀಟು ಹಂಚಿಕೆ ಇತ್ಯರ್ಥ – ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ

    – ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷಕ್ಕೆ 29 ಸ್ಥಾನ ಹಂಚಿಕೆ

    ಪಾಟ್ನಾ: ಬಿಹಾರ ಚುನಾವಣೆ ಘೋಷಣೆಯಾದ ದಿನದಿಂದಲೂ ಕಾಡುತ್ತಿದ್ದ ಸಮಸ್ಯೆ ಈಗ ಬಗೆಹರಿದಿದೆ. ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರದ ಮಿತ್ರ ಪಕ್ಷಗಳಲ್ಲಿ ತಲೆದೋರಿದ್ದ ಸೀಟು ಹಂಚಿಕೆ (Bihar Seat Share) ಕಗ್ಗಂಟು ಕಡೆಗೂ ಇತ್ಯರ್ಥವಾಗಿದೆ. ಅದರಂತೆ ಬಿಜೆಪಿ, ಎನ್‌ಡಿಎ ಪಕ್ಷಗಳು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ (Chirag Paswan) ಅವರ ಲೋಕಜನಶಕ್ತಿ ಪಾರ್ಟಿ (ರಾಮ್ ವಿಲಾಸ್ ಪಾಸ್ವಾನ್ ಬಣ) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

    ಸೀಟು ಹಂಚಿಕೆ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಬಿಡುಗಡೆ ಮಾಡಿದ್ದಾರೆ. 243 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬಿಹಾರದಲ್ಲಿ ಎನ್‌ಡಿಎ ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಯು ತಲಾ 101 ಸೀಟುಗಳಲ್ಲಿ ಸ್ಪರ್ಧಿಸಲಿದ್ದು, ಚಿರಾಗ್ ಪಾಸ್ವಾನ್ ಅವರ ಲೋಕಜನಶಕ್ತಿ ಪಾರ್ಟಿ (ರಾಮ್ ವಿಲಾಸ್ ಪಾಸ್ವಾನ್ ಬಣ) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ರಾಷ್ಟ್ರೀಯ ಲೋಕ ಮೋರ್ಚಾ ಹಾಗೂ ಜಿತನ್ ರಾಮ್ ಮಾಂಝಿಯವರ ಹಿಂದೂಸ್ತಾನ್ ಆವಮ್ ಮೋರ್ಚಾ ಪಕ್ಷಗಳು ತಲಾ 6 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

    ಬಗೆಹರಿದ ದುಗುಡ
    ಲೋಕಜನಶಕ್ತಿ ಪಾರ್ಟಿಯ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ 40-45 ಸ್ಥಾನಗಳಿಗೆ ಬೇಡಿಕೆಯಿಡುತ್ತಾ ಬಂದಿದ್ದರು. ಆದ್ರೆ ಬಿಜೆಪಿ 25 ಸ್ಥಾನಗಳನ್ನು ನೀಡಲು ಮಾತ್ರವೇ ಒಪ್ಪಿಕೊಂಡಿತ್ತು. ಈ ನಡುವೆ ಚುನಾವಣಾ ಚಾಣಕ್ಯ ಪ್ರಶಾಂತ್‌ ಕಿಶೋರ್‌ ಅವರ ಜನ್‌ ಸೂರಜ್‌ ಪಕ್ಷ ಪಾಸ್ವಾನ್‌ ಅವರನ್ನ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿತ್ತು. ಸೀಟು ಹಂಚಿಕೆ ಕುರಿತು ಎಲ್‌ಜೆಪಿ ತನ್ನ ನಿರ್ಧಾರ ಬದಲಾಯಿಸುವಂತೆ ಮನವೊಲಿಸಲು ಧರ್ಮೇಂದ್ರ ಪ್ರಧಾನ್‌ ಹಲವಾರು ಸುತ್ತಿನ ಸಭೆ ನಡೆಸಿದರು. ಕೊನೆಗೆ ಜೆಡಿಯು, ಬಿಜೆಪಿ ಒಮ್ಮತದ ಮೇರೆಗೆ 29 ಸ್ಥಾನಗಳನ್ನ ಹಂಚಿಕೆ ಮಾಡಲಾಯಿತು.

    ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

    ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆದಿತ್ತು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022 ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ ಜೊತೆ ಸೇರಿ ಸರ್ಕಾರ ರಚಿಸಿದ್ದರು. 2024ರಲ್ಲಿ ಮತ್ತೆ ನಿತೀಶ್‌ ಕುಮಾರ್‌ ಮಹಾಘಟಬಂಧನ್ ಜೊತೆಗಿನ ಸಂಬಂಧ ಕಡಿದುಕೊಂಡು ಎನ್‌ಡಿಎ ಜೊತೆಗೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

  • ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ಬಿಹಾರ ವಿಧಾನಸಭೆ ಚುನಾವಣೆ; ಎನ್‌ಡಿಎ-ಇಂಡಿಯಾ ಒಕ್ಕೂಟದ ನಡುವೆ ಸೀಟು ಹಂಚಿಕೆ ಲೆಕ್ಕಾಚಾರ

    ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಗೆ (Bihar Elections) ಮುಹೂರ್ತ ಫಿಕ್ಸ್ ಆಗಿದೆ. ಈ ಬೆನ್ನಲ್ಲೇ ಎನ್‌ಡಿಎ (NDA) ಮತ್ತು ಇಂಡಿಯಾ ಒಕ್ಕೂಟದಲ್ಲಿ (INDIA Bloc) ಸೀಟು ಹಂಚಿಕೆ ಲೆಕ್ಕಚಾರ ಶುರುವಾಗಿದೆ. ಎಲ್ಲ ಪಕ್ಷಗಳು ಹೆಚ್ಚು ಸ್ಥಾನಗಳನ್ನು ಗಿಟ್ಟಿಸಿಕೊಳ್ಳಲು ತೆರೆಮರೆಯಲ್ಲಿ ಕಸರತ್ತು ಆರಂಭಿಸಿವೆ.

    ಮೂಲಗಳ ಪ್ರಕಾರ ಎನ್‌ಡಿಎಯಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ‌. 243 ಕ್ಷೇತ್ರಗಳ ಪೈಕಿ, 205 ಸ್ಥಾನಗಳು ಜೆಡಿಯು ಮತ್ತು ಬಿಜೆಪಿ ನಡುವೆ ಹಂಚಿಕೆಯಾಗಿದೆ. ಕೆಲವು ಸನ್ನಿವೇಶಗಳಲ್ಲಿ ಒಂದು ಪಕ್ಷವು ಇನ್ನೊಂದಕ್ಕಿಂತ ಸ್ವಲ್ಪ ಹೆಚ್ಚು ಸ್ಥಾನಗಳಲ್ಲಿ ಸ್ಪರ್ಧಿಸಬಹುದು ಎನ್ನಲಾಗಿದೆ. ಇದನ್ನೂ ಓದಿ: Bihar Election Dates 2025 | ಬೂತ್ ಅಧಿಕಾರಿಗಳಿಗೆ ನೇರವಾಗಿ ಕರೆ ಮಾಡಲು ಸಹಾಯವಾಣಿ

    ಉಳಿದ 38 ಸ್ಥಾನಗಳನ್ನು ಎನ್‌ಡಿಎಯ ಸಣ್ಣ ಮಿತ್ರಪಕ್ಷಗಳಾದ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ), ಹಿಂದೂಸ್ತಾನಿ ಅವಾಮ್ ಮೋರ್ಚಾ (ಹೆಚ್‌ಎಎಂ) ಮತ್ತು ರಾಷ್ಟ್ರೀಯ ಲೋಕ ಸಮತಾ ಪಕ್ಷ (ಆರ್‌ಎಲ್‌ಎಂ) ನಡುವೆ ಹಂಚುವ ಸಾಧ್ಯತೆಯಿದೆ. ವರದಿಗಳ ಪ್ರಕಾರ, ಬಿಜೆಪಿ ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್‌ಗೆ 25 ಸ್ಥಾನಗಳು, ಹೆಚ್‌ಎಎಂ ನಾಯಕ ಜಿತನ್ ರಾಮ್ ಮಾಂಝಿಗೆ ಏಳು ಸ್ಥಾನಗಳು ಮತ್ತು ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂಗೆ ಆರು ಸ್ಥಾನಗಳನ್ನು ಪಡೆಯಬಹುದು.

    ಚಿರಾಗ್ ಪಾಸ್ವಾನ್ ಅವರೊಂದಿಗೆ ಮಾತುಕತೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದ್ದು, ಎಲ್‌ಜೆಪಿ ನಾಯಕ ತಮ್ಮ ಪಕ್ಷದ ನಾಯಕರಿಗೆ ಆದ್ಯತೆಯ ಕ್ಷೇತ್ರಗಳನ್ನು ಹುಡುಕುತ್ತಿದ್ದಾರೆ. ಪಾಸ್ವಾನ್ ಅವರ ಸ್ಥಾನಗಳ ಪಾಲು ಹೆಚ್ಚಾದರೆ, ಅದು ಮಾಂಝಿ ಮತ್ತು ಕುಶ್ವಾಹ ಅವರಿಗೆ ಹಂಚಿಕೆಯಲ್ಲಿ ಕಡಿತಕ್ಕೆ ಕಾರಣವಾಗಬಹುದು. ಇದನ್ನೂ ಓದಿ: ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ಇಂಡಿಯಾ ಒಕ್ಕೂಟದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಆರ್‌ಜೆಡಿಗೆ 125, ಕಾಂಗ್ರೆಸ್‌ಗೆ 55 ರಿಂದ 57 ಸ್ಥಾನಗಳಲ್ಲಿ ಸ್ಪರ್ಧೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಎಡ ಪಕ್ಷಗಳು 35, ಮುಖೇಶ್ ಸಾಹ್ನಿ ಅವರ ವಿಐಪಿ ಪಕ್ಷಕ್ಕೆ 20 ಸ್ಥಾನಗಳಲ್ಲಿ, ಪಶುಪತಿ ಪರಾಸ್‌ಗೆ ಮೂರು ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ)ಗೆ ಎರಡು ಸ್ಥಾನಗಳಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆ. ಈಗಾಗಲೇ ನಾಯಕರ ನಡುವೆ ಮಾತುಕತೆ ನಡೆದಿದ್ದು, ಬಹುತೇಕ ನಾಯಕರ ಸಮ್ಮತಿ ಸಿಕ್ಕಿದ್ದರೂ, ಕಾಂಗ್ರೆಸ್ ಸೀಟುಗಳ‌ ಸಂಖ್ಯೆ ಹೆಚ್ಚಿಸುವ ಪ್ರಯತ್ನ ಮಾಡುತ್ತಿದೆ. ನಾಳೆ ಕಾಂಗ್ರೆಸ್ ಮೊದಲ ಸಿಇಸಿ ಸಭೆ ನಡೆಸುತ್ತಿದ್ದು, ಸುಮಾರು 30 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ.

    ಬಿಹಾರ ವಿಧಾನಸಭೆಗೆ ಸೋಮವಾರ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಿಸಿದೆ. ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 6 ರಂದು ಮೊದಲ‌ ಹಂತ, ನವೆಂಬರ್ 11 ರಂದು ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ನವೆಂಬರ್ 14 ರಂದು ಮತ ಎಣಿಕೆಯಾಗಲಿದೆ. ಇದನ್ನೂ ಓದಿ: Bihar Election Dates 2025 | 69 ಲಕ್ಷ ಹೆಸರುಗಳು ಡಿಲೀಟ್‌, 21 ಲಕ್ಷ ಹೊಸ ಮತದಾರರ ಸೇರ್ಪಡೆ

  • ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ

    ನವದೆಹಲಿ: ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ (Bihar Assembly Elections) ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.

    ನವೆಂಬರ್‌ 6ರ ಗುರುವಾರ ಮೊದಲ ಹಂತ, ನವೆಂಬರ್‌ 11ರ ಮಂಗಳವಾರ 2ನೇ ಹಂತದಲ್ಲಿ ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್‌ 14 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ತಿಳಿಸಿದ್ದಾರೆ.

    ಮೊದಲ ಹಂತದಲ್ಲಿ 121 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್‌ 10 ರಂದು ಗೆಜೆಟ್‌ ಅಧಿಸೂಚನೆ ಪ್ರಕಟವಾಗಲಿದೆ. ಅದೇ ರೀತಿ 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್‌ 13ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ.

    ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದ್ದು, 2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್‌ 18‌ ಮತ್ತು ಅಕ್ಟೋಬರ್‌ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಲಿದೆ. ಅಕ್ಟೋಬರ್‌ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯದಿನವಾಗಿದೆ. ನವೆಂಬರ್‌ 6ರಂದು ಚುನಾವಣೆ ನಡೆಯಲಿದೆ. ನವೆಂಬರ್‌ 14ರಂದು ಫಲಿತಾಂಶ ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ತಿಳಿಯಲಿದೆ.

    ಬಿಹಾರದಲ್ಲಿರುವ 243 ವಿಧಾನಸಭಾ ಕ್ಷೇತ್ರಗಳ ಪೈಕಿ 203 ಸಾಮಾನ್ಯ ಕ್ಷೇತ್ರಗಳಾಗಿದ್ದು, 2 ಎಸ್ಟಿ ಹಾಗೂ 38 ಎಸ್ಸಿ ಮೀಸಲು ಕ್ಷೇತ್ರಗಳಾಗಿವೆ. ಬಿಹಾರದಲ್ಲಿ ಒಟ್ಟು 7.43 ಕೋಟಿ ಮತದಾರರು ಇದ್ದಾರೆ. ಈ ಪೈಕಿ 3.92 ಕೋಟಿ ಪುರುಷ ಮತದಾರರು, 3.50 ಕೋಟಿ ಮಹಿಳಾ ಮತದಾರರು, 1,725 ತೃತೀಯಲಿಂಗಿ ಮತದಾರರಿದ್ದಾರೆ, 14.01 ಲಕ್ಷ ಫಸ್ಟ್‌ ಟೈಮ್‌ ವೋಟರ್ಸ್‌ ಇದ್ದಾರೆ. ಒಟ್ಟು 90,712 ಬೂತ್‌ಗಳನ್ನ ನಿರ್ಮಾಣ ಮಾಡಲಾಗಿದ್ದು, ನಗರದಲ್ಲಿ 13,911 ಹಾಗೂ ಗ್ರಾಮೀಣ ಭಾಗದಲ್ಲಿ 76,801 ಬೂತ್‌ಗಳಿರಲಿವೆ. ಎಲ್ಲಾ ಬೂತ್‌ಗಳಲ್ಲೂ ವೆಬ್‌ಕ್ಯಾಸ್ಟಿಂಗ್‌ ವ್ಯವಸ್ಥೆ ಮಾಡಲಾಗಿದೆ.

    ಒಟ್ಟಾರೆ 90,712 ಬೂತ್‌ ಮಟ್ಟದ ಅಧಿಕಾರಿಗಳು, 243 ಇಆರ್‌ಓ (ಮತದಾರರ ನೋಂದಣಾಧಿಕಾರಿ), 38 ಡಿಇಒ (ಜಿಲ್ಲಾ ಚುನಾವಣಾ ಅಧಿಕಾರಿ) ಬಳಿಕ ಮುಖ್ಯ ಚುನಾವಣಾ ಆಯುಕ್ತರು ಕರ್ತವ್ಯದಲ್ಲಿ ಇರಲಿದ್ದದಾರೆ. ಮತದಾರರಿಗೆ ಯಾವುದೇ ಗೊಂದಲಗಳಿದ್ದರೂ 1950 ಸಹಾಯವಾಣಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

    ಈ ಬಾರಿ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ (NDA) ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇನ್ನುಳಿದಂತೆ ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

    ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆ ಮೂರು ಹಂತಗಳಲ್ಲಿ ನಡೆದಿತ್ತು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022 ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ ಜೊತೆ ಸೇರಿ ಸರ್ಕಾರ ರಚಿಸಿದ್ದರು. 2024ರಲ್ಲಿ ಮತ್ತೆ ನಿತೀಶ್‌ ಕುಮಾರ್‌ ಮಹಾಘಟಬಂಧನ್ ಜೊತೆಗಿನ ಸಂಬಂಧ ಕಡಿದುಕೊಂಡು ಎನ್‌ಡಿಎ ಜೊತೆಗೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

  • ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

    ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ

    ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ (Election Commission of India) ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ (Bihar Election) ದಿನಾಂಕವನ್ನು ಪ್ರಕಟಿಸಲಿದೆ.

    ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್ 22ರ ಮೊದಲು ಮತ್ತು ಪ್ರಸ್ತುತ ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.

    ರಾಜಕೀಯ ಪಕ್ಷಗಳು ಅಕ್ಟೋಬರ್ ಅಂತ್ಯದಲ್ಲಿ ಆಚರಿಸಲಾಗುವ ‘ಛಠ್ ಪೂಜೆ’ ಹಬ್ಬದ ನಂತರ ತಕ್ಷಣವೇ ಚುನಾವಣೆಯನ್ನು ನಡೆಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದವು. ಇತರ ರಾಜ್ಯಗಳಲ್ಲಿ ಉದ್ಯೋಗದಲ್ಲಿರುವ ಹೆಚ್ಚಿನ ಸಂಖ್ಯೆಯ ಜನರು ಹಬ್ಬಕ್ಕಾಗಿ ಊರಿಗೆ ಮರಳುತ್ತಾರೆ.  ಹೆಚ್ಚಿನ ಪ್ರಮಾಣದಲ್ಲಿ ಮತದಾನ ನಡೆಯವ ಸಾಧ್ಯತೆ ಇರುವುದರಿಂದ ಈ ಅವಧಿಯಲ್ಲೇ ಚುನಾವಣೆ ನಡೆಸಬೇಕೆಂದು ಮನವಿ ಮಾಡಿವೆ. ಇದನ್ನೂ ಓದಿ:  ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬಿತ್ತು ಮರ – ಯುವತಿಯ ಮೃತದೇಹ ವಿಕ್ಟೋರಿಯಾಗೆ ರವಾನೆ

    ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್‌ (Nitish Kumar) ನೇತೃತ್ವದ ಎನ್‌ಡಿಎ (NDA) ಮತ್ತು ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆಯಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ. ಇದನ್ನೂ ಓದಿ:  ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ UP ಮುಸ್ಲಿಮರು!

    ಬಿಜೆಪಿ 80, ಜೆಡಿ(ಯು) 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಎಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂಎಲ್) 11, ಸಿಪಿಐ(ಎಂ) 2 ಮತ್ತು ಸಿಪಿಐ 2 ಸ್ಥಾನ ಹೊಂದಿದೆ.

    ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020 ರ ವಿಧಾನಸಭಾ ಚುನಾವಣೆಗಳು ಮೂರು ಹಂತಗಳಲ್ಲಿ ನಡೆದಿದ್ದವು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್‌ ಕುಮಾರ್‌ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022 ರಲ್ಲಿ ನಿತೀಶ್‌ ಕುಮಾರ್‌ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ‘ಮಹಾಘಟಬಂಧನ್’ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಿತೀಶ್‌ ಕುಮಾರ್‌ 2024 ರಲ್ಲಿ ಮಹಾಘಟಬಂಧನ್ ಜೊತೆಗಿನ ಸಂಬಂಧವನ್ನು ಮುರಿದು ಎನ್‌ಡಿಎ ಜೊತೆ ಮತ್ತೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.

  • ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ – ಕೊಲಂಬಿಯಾದಲ್ಲಿ ರಾಹುಲ್‌ ವಾಗ್ದಾಳಿ

    ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ದಾಳಿ – ಕೊಲಂಬಿಯಾದಲ್ಲಿ ರಾಹುಲ್‌ ವಾಗ್ದಾಳಿ

    ಬೊಗೋಟಾ [ಕೊಲಂಬಿಯಾ]: ಮೋದಿ ನೇತೃತ್ವದ ಎನ್‌ಡಿಎ ಆಡಳಿತದಲ್ಲಿ ಭಾರತದ (India) ಪ್ರಜಾಪ್ರಭುತ್ವ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ. ಇದು ಭಾರತಕ್ಕೆ(India) ಅತಿದೊಡ್ಡ ಬೆದರಿಕೆಯಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಹೇಳಿದ್ದಾರೆ.

    ದಕ್ಷಿಣ ಅಮೆರಿಕದ ಕೊಲಂಬಿಯಾ (Colambia) ದೇಶದ ಇಐಎ ವಿಶ್ವವಿದ್ಯಾಲಯದಲ್ಲಿ ವಿದ್ಯಾಥಿಗಳ ಜೊತೆಗಿನ ಸಂವಾದದಲ್ಲಿ ಮಾತನಾಡಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲರಿಗೂ ಒಂದು ಸ್ಥಾನವನ್ನು ಒದಗಿಸುತ್ತದೆ. ಆದರೆ ಸದ್ಯಕ್ಕೆ, ಪ್ರಜಾಪ್ರಭುತ್ವ ವ್ಯವಸ್ಥೆಯು ಎಲ್ಲ ಕಡೆಯಿಂದಲೂ ದಾಳಿಗೆ ಒಳಗಾಗಿದೆ. ಆರ್‌ಎಸ್‌ಎಸ್-ಬಿಜೆಪಿ ಸೈದ್ದಾಂತಿಕತೆಯ ಹೃದಯದಲ್ಲಿ ಹೇಡಿತನ ಇದೆ ಎಂದು ದೂರಿದರು.  ಇದನ್ನೂ ಓದಿಹಿಂದೂ ಧರ್ಮಕ್ಕೆ ಅವಹೇಳನ – ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹತ್ಯೆಗೆ ಯತ್ನಿಸಿದ್ದ ಹಂತಕರು

    ಭಾರತವು ತನ್ನ 1.4 ಶತಕೋಟಿ ಜನರೊಂದಿಗೆ ಅಗಾಧ ಸಾಮರ್ಥ್ಯವನ್ನು ಹೊಂದಿದೆ. ಆದರೆ ಭಾರತವು ಚೀನಾಕ್ಕಿಂತ ಸಂಪೂರ್ಣವಾಗಿ ವಿಭಿನ್ನವಾದ ವ್ಯವಸ್ಥೆಯನ್ನು ಹೊಂದಿದೆ. ಚೀನಾ ಬಹಳ ಕೇಂದ್ರೀಕೃತ ಮತ್ತು ಏಕರೂಪದ್ದಾಗಿದೆ. ಭಾರತವು ವಿಕೇಂದ್ರೀಕೃತವಾಗಿದ್ದು ಬಹು ಭಾಷೆಗಳು, ಸಂಸ್ಕೃತಿಗಳು, ಸಂಪ್ರದಾಯಗಳು ಮತ್ತು ಧರ್ಮಗಳನ್ನು ಹೊಂದುವ ಮೂಲಕ ಹೆಚ್ಚು ಸಂಕೀರ್ಣವಾದ ವ್ಯವಸ್ಥೆಯನ್ನು ಹೊಂದಿದೆ ಎಂದರು.

    ನೋಟು ನಿಷೇಧ ಮತ್ತು ಜಿಎಸ್‌ಟಿ ಬಗ್ಗೆ ಮಾತನಾಡಿ, ಭಾರತ ಸರ್ಕಾರ ಎರಡು ನೀತಿಗಳನ್ನು ತಂದಿತು. ನೋಟು ನಿಷೇಧ ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ನಾಶಮಾಡಿತು ಮತ್ತು ದೊಡ್ಡ ಏಕಸ್ವಾಮ್ಯಗಳು ನಮ್ಮ ಆರ್ಥಿಕತೆಯ ದೊಡ್ಡ ಭಾಗವನ್ನು ನಿಯಂತ್ರಿಸಲು ಅವಕಾಶ ಮಾಡಿಕೊಟ್ಟಿತು. ಜಿಎಸ್‌ಟಿಯಿಂದ ಮತ್ತೆ ಮಧ್ಯಮ ಮತ್ತು ಸಣ್ಣ ವ್ಯವಹಾರಗಳಿಗೆ ಹಾನಿಯಾಗಿದೆ. ಭಾರತದಲ್ಲಿ ಕೇಂದ್ರೀಕೃತ ಮಟ್ಟದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಮೂರು ಅಥವಾ ನಾಲ್ಕು ವ್ಯವಹಾರಗಳು ಇಡೀ ಆರ್ಥಿಕತೆಯನ್ನು ಆಕ್ರಮಿಸಿಕೊಳ್ಳುತ್ತಿವೆ. ಇವು ಪ್ರಧಾನ ಮಂತ್ರಿಯೊಂದಿಗೆ ನೇರ ಸಂಬಂಧವನ್ನು ಹೊಂದಿವೆ ಎಂದು ಆರೋಪಿಸಿದರು.

  • ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

    ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ

    – ರಾಜೀನಾಮೆ ಬಳಿಕ ಫಸ್ಟ್‌ ಟೈಮ್‌ ಕಾಣಿಸಿಕೊಂಡ ಜಗದೀಪ್ ಧನಕರ್

    ನವದೆಹಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ (CP Radhakrishan) ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

    ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನ್ಕರ್‌ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ  ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.ಇದನ್ನೂ ಓದಿ:ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

    ರಾಜೀನಾಮೆ ಬಳಿಕ ಕಾಣಿಸಿಕೊಂಡ ಧನಕರ್
    ಇನ್ನೂ ಪ್ರಮಾಣವಚನ ಕಾರ‍್ಯಕ್ರಮದಲ್ಲಿ ಮಾಜಿ ಉಪರಾಷ್ಟ್ರಪತಿ, ರಾಜೀನಾಮೆ ನೀಡಿದ ಉಪರಾಷ್ಟ್ರಪತಿ ಹಾಗೂ ಪ್ರಸ್ತುತ ಉಪರಾಷ್ಟ್ರಪತಿಗಳು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಜಗದೀಪ್‌ ಧನಕರ್‌ ರಾಜೀನಾಮೆ ಬಳಿಕ ಮೊದಲ ಬಾರಿ ಕಾರ‍್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಹಲವರ ಅಚ್ಚರಿಗೆ ಕಾರಣವಾಗಿದೆ.

    ಇದರೊಂದಿಗೆ ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್‌ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದರು. ರಾಧಾಕೃಷ್ಣನ್ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನ ಪಡೆದು ಗೆಲುವು ಸಾಧಿಸಿದ್ರೆ, ಪ್ರತಿಸ್ಪರ್ಧಿ ಸುರ್ದಶನ್‌ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡಿದ್ದರು.ಇದನ್ನೂ ಓದಿ: ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ